ಹುಬ್ಬಳ್ಳಿ: ರಾಜ್ಯ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರುವಲ್ಲಿ ಪಂಚಮಸಾಲಿ ಸಮುದಾಯದ ಕೊಡುಗೆ ಸಾಕಷ್ಟಿದೆ. ಈ ಸಮುದಾಯವನ್ನು ನಿರ್ಲಕ್ಷ್ಯ ಮಾಡಿದರೇ ನಿಜಕ್ಕೂ ಬಹುದೊಡ್ಡ ತೊಂದರೆಯನ್ನು ರಾಜ್ಯ ಬಿಜೆಪಿ ಸರ್ಕಾರ ಅನುಭವಿಸುವುದು ಖಂಡಿತ ಎಂದು ಜಯ ಮೃತ್ಯುಂಜಯ ಸ್ವಾಮೀಜಿ ಸರ್ಕಾರಕ್ಕೆ ಎಚ್ಚರಿಕೆ ನೀಡಿದರು. ನಗರದಲ್ಲಿಂದು ಪಂಚಮಸಾಲಿ ಸಮಾಜದ ಹೋರಾಟದಲ್ಲಿ ಮಾತನಾಡಿದ ಅವರು, ಈಗಾಗಲೇ ಸಾಕಷ್ಟು ಬಾರಿ ಮನವಿ ಸಲ್ಲಿಸಿ ಗಡುವು ನೀಡಿದ್ದೇವೆ ಹೀಗಿದ್ದರೂ ಸರ್ಕಾರ ಮಾತ್ರ ಸೂಕ್ತ ನಿರ್ಧಾರವನ್ನು ಕೈಗೊಂಡಿಲ್ಲ. ಈ ನಿಟ್ಟಿನಲ್ಲಿ …
Read More »ಪ್ರವೀಣ್ ಹತ್ಯೆ ಪ್ರಕರಣವನ್ನ NIAಗೆ ಹಸ್ತಾಂತರ ಮಾಡಲಾಗುವುದು : ಸಿಎಂ
ಬೆಂಗಳೂರು : ಪ್ರವೀಣ್ ಹತ್ಯೆ ಪ್ರಕರಣವನ್ನ NIAಗೆ ಹಸ್ತಾಂತರ ಮಾಡಲಾಗುವುದು ಎಂದು ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಪ್ರವೀಣ್ ಹತ್ಯೆ ಪ್ರಕರಣ ಸಂಬಂಧ ಡಿಜಿ ಐಜಿಪಿ ಪ್ರವೀಣ್ ಸೂದ್ ಜೊತೆ ಚರ್ಚೆ ನಿರ್ಧಾರ ಕೈಗೊಂಡಿರೋದಾಗಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಪ್ರವೀಣ್ ಹತ್ಯೆ ಕೇಸ್ ಒಂದು ವ್ಯವಸ್ಥಿತವಾಗಿ ನಡೆದಿರೋ ಹತ್ಯೆ. ಪ್ರಕರಣದ ಸಂಪೂರ್ಣ ಮಾಹಿತಿ ಪಡೆದುಕೊಂಡಿದ್ದೇನೆ. ಪ್ರಕರಣದ ತನಿಖೆ ತ್ವರಿತಗತಿಯಾಗಿ ನಡೆಯುತ್ತಿದೆ. ಪ್ರಕರಣ 2 ರಾಜ್ಯಕ್ಕೆ ಸಂಬಂಧಿಸಿದ್ದಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ NIAಗೆ …
Read More »ಇರಾನ್ ನಲ್ಲಿ ಭೂ ಕುಸಿತ: 53 ಜನರು ಸಾವು
ಇರಾನ್ : ಭಾರಿ ಮಳೆಯಾಗುತ್ತಿದ್ದು, ಭೂಕುಸಿತ ಮತ್ತು ಪ್ರವಾಹ ಸಂಭವಿಸಿದೆ. ಇದರಲ್ಲಿ 53 ಜನರು ಸಾವನ್ನಪ್ಪಿದ್ದು, ಕಾಣೆಯಾದವರಿಗಾಗಿ ರಕ್ಷಾಣ ಕಾರ್ಯಾಚರಣೆ ಮುಂದುವರೆದಿದೆ ಎನ್ನಲಾಗುತ್ತಿದೆ. ಎರಡು ದಿನಗಳ ಪ್ರವಾಹದಲ್ಲಿ 16 ಜನರು ಇನ್ನೂ ಕಾಣೆಯಾಗಿದ್ದಾರೆ. ಇರಾನ್ನ 31 ಪ್ರಾಂತ್ಯಗಳ ಪೈಕಿ 18 ನಗರದಲ್ಲಿ ಸುಮಾರು 400 ಪಟ್ಟಣಗಳು ಮತ್ತು ಹಳ್ಳಿಗಳ ಮೇಲೆ ಪ್ರತಿಕೂಲ ಪರಿಣಾಮ ಬೀರಿವೆ ಎಂದು ರೆಡ್ ಕ್ರೆಸೆಂಟ್ ಸೊಸೈಟಿಯ ತುರ್ತು ಕಾರ್ಯಾಚರಣೆಯ ಮುಖ್ಯಸ್ಥ ಮೆಹದಿ ವಲಿಪೋರ್ ತಿಳಿಸಿದ್ದಾರೆ. ರಾಜಧಾನಿ …
Read More »ಪೊಲೀಸ್ ಕಾಲರ್ ಹಿಡಿದು ರಂಪಾಟ ಮಾಡಿದ ಮಾಜಿ ಸಿಎಂ
ಭೋಪಾಲ್ : ಮಧ್ಯಪ್ರದೇಶದ ಮಾಜಿ ಮುಖ್ಯಮಂತ್ರಿ ದಿಗ್ವಿಜಯ್ ಸಿಂಗ್ ಅವರು ಪೊಲೀಸ್ ಕಾಲರ್ ಹಿಡಿದು ರಂಪಾಟ ಮಾಡಿರುವ ವೀಡಿಯೋ ಸೊಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ. ದಿಗ್ವಿಜಯ್ ಸಿಂಗ್ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ವಿಶ್ವಾಸ್ ಸಾರಂಗ್ ನಡುವೆ ಜಿಲ್ಲಾ ಪಂಚಾಯಿತಿ ಅಧ್ಯಕ್ಷರ ಸ್ಥಾನಕ್ಕೆ ಸಂಬಂಧಿಸಿದಂತೆ ತೀವ್ರ ಪೈಪೋಟಿ ನಡೆಯುತ್ತಿದೆ. ಈ ನಡುವೆ ದಿಗ್ವಿಜಯ ಸಿಂಗ್ ಮತ್ತು ಶಾಸಕರಾದ ಆರಿಫ್ ಮಸೂದ್ ಮತ್ತು ಪಿಸಿ ಶರ್ಮಾ ಸೇರಿದಂತೆ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು …
Read More »8 ಯುವ ರೂಪದರ್ಶಿಗಳ ಮೇಲೆ ಅತ್ಯಾಚಾರ
ಮ್ಯೂಸಿಕ್ ಶೂಟಿಂಗ್ ವೇಳೆ ನುಗ್ಗಿದ ಗನ್ ಹಿಡಿದಿದ್ದ ಗ್ಯಾಂಗ್ 8 ಯುವ ರೂಪದರ್ಶಿಗಳ ಮೇಲೆ ಅತ್ಯಾಚಾರ ಎಸಗಿದ ಆಘಾತಕಾರಿ ಘಟನೆ ದಕ್ಷಿಣ ಆಫ್ರಿಕಾದ ಜೊಹಾನ್ಸ್ ಬರ್ಗ್ ಬಳಿ ನಡೆದಿದೆ. ಜೊಹಾನ್ಸ್ ಬರ್ಗ್ ಹೊರವಲಯದಲ್ಲಿ ಕ್ರುಗೆಡ್ರೊಪ್ ಎಂಬ ಸಣ್ಣ ಪಟ್ಟಣದಲ್ಲಿ ಸುಮಾರು 20 ಜನರಿದ್ದ ಗ್ಯಾಂಗ್ ಮ್ಯೂಸಿಕ್ ಆಲ್ಬಂ ಶೂಟಿಂಗ್ ವೇಳೆ ದಾಳಿ ಮಾಡಿದೆ. ಚಿತ್ರೀಕರಣಕ್ಕೆ ಸಿದ್ಧತೆ ನಡೆಸುವ ವೇಳೆ ದಾಳಿ ಮಾಡಿದ ಗ್ಯಾಂಗ್ 8 ಯುವ ರೂಪದರ್ಶಿಗಳ ಮೇಲೆ ಅತ್ಯಾಚಾರ …
Read More »ವಿಶ್ವ ವಿಖ್ಯಾತ ಮೈಸೂರು ದಸರಾಕ್ಕೆ ಸಕಲ ಸಿದ್ಧತೆ
ಮೈಸೂರು: ಅರಮನೆಯಲ್ಲಿ ನಡೆಯುವ ವಿಶ್ವ ವಿಖ್ಯಾತ ಮೈಸೂರು ದಸರಾಕ್ಕೆ ಸಿದ್ಧತೆಗಳು ನಡೆಯುತ್ತಿವೆ. ದಸರಾ ಗಜಪಯಣಕ್ಕೂ ತಯಾರಿಗಳು ನಡೆಯುತ್ತಿದ್ದು, ಆಗಸ್ಟ್ 7ರಂದು ಗಜಪಡೆ ಮೈಸೂರಿಗೆ ಆಗಮಿಸಲಿದೆ. ಮೊದಲ ಹಂತದಲ್ಲಿ ಅಭಿಮನ್ಯು ನೇತೃತ್ವದಲ್ಲಿ 9 ಆನೆಗಳು ಆಗಮಿಸುತ್ತವೆ. ಬಳಿಕ ಎರಡನೇ ಹಂತದಲ್ಲಿ 5 ಅಥವಾ 6 ಆನೆಗಳು ಆಗಮಿಸುತ್ತವೆ. ಸದ್ಯ ಅರಣ್ಯ ಇಲಾಖೆ ಹಾಗೂ ಜಿಲ್ಲಾಡಳಿತ ಸಕಲ ಸಿದ್ಧತೆ ನಡೆಸುತ್ತಿದ್ದು, ಈ ಬಾರಿ ಹೊಸ ಆನೆಗಳಾದ ಗಣೇಶ, ಭೀಮ, ಸುಗ್ರೀವಾ, ಅಜಯ, ಮಹೇಂದ್ರ …
Read More »ಇಂದು ಸಿಇಟಿ ಫಲಿತಾಂಶ ಪ್ರಕಟ
ಬೆಂಗಳೂರು: ವಿವಿಧ ವೃತ್ತಿಪರ ಕೋರ್ಸ್ ಗಳ ಪ್ರವೇಶಕ್ಕೆ ನಡೆಸಲಾದ ಸಾಮಾನ್ಯ ಪ್ರವೇಶ ಪರೀಕ್ಷೆ ಸಿಇಟಿ ಫಲಿತಾಂಶ ಇಂದು ಬೆಳಗ್ಗೆ 9.45ಕ್ಕೆ ಪ್ರಕಟವಾಗಲಿದೆ. ಬೆಳಗ್ಗೆ 11 ಗಂಟೆಗೆ www.karresults.nic.in/ ವೆಬ್ಸೈಟ್ನಲ್ಲಿ ಫಲಿತಾಂಶ ಲಭ್ಯವಾಗಲಿದೆ. ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಅವರು ಫಲಿತಾಂಶವನ್ನು ಪ್ರಕಟಿಸಲಿದ್ದು, ನಂತರ ವೆಬ್ಸೈಟ್ ನಲ್ಲಿ ಫಲಿತಾಂಶ ವೀಕ್ಷಿಸಬಹುದಾಗಿದೆ. ಇಂಜಿನಿಯರಿಂಗ್, ಪಶು ಸಂಗೋಪನೆ, ಕೃಷಿ, ಆಯುಷ್, ಯುನಾನಿ, ಫಾರ್ಮಸಿ ಸೇರಿದಂತೆ ವಿವಿಧ ವೃತ್ತಿಪರ ಕೋರ್ಸ್ ಗಳ ಪ್ರವೇಶಕ್ಕೆ ಜೂನ್ …
Read More »ಕೇರಳದ ಜನಪ್ರಿಯ ಯುವನಟ ನಿಧನ
ಕೇರಳ: ಕಳೆದ 2 ವರ್ಷಗಳಿಂದ ಘಟಾನುಘಟಿ ಕಲಾವಿದರು, ಪ್ರತಿಭಾನ್ವಿತ ನಿರ್ದೇಶಕ, ನಿರ್ಮಾಪಕ, ತಂತ್ರಜ್ಞರು, ನಟಿಯರು, ಕಲಾವಿದೆಯರನ್ನು ಕಳೆದುಕೊಂಡಿರುವ ಭಾರತೀಯ ಚಿತ್ರರಂಗಕ್ಕೆ ಮತ್ತೊಂದು ಆಘಾತ ಎದುರಾಗಿದೆ. ಕೇರಳದ ಜನಪ್ರಿಯ ಯುವನಟ ಶರತ್ ಚಂದ್ರನ್ ಸಾವನ್ನಪ್ಪಿದ್ದಾರೆ. ಮಲಯಾಳಂ ಚಿತ್ರರಂಗದ ಪ್ರತಿಭಾನ್ವಿತ ನಟ ಶರತ್ ಚಂದ್ರನ್ ಕೇವಲ 37ನೇ ವಯಸ್ಸಿಗೆ ಇಹಲೋಕ ತ್ಯಜಿಸಿದ್ದಾರೆ. ನಿನ್ನೆ ರಾತ್ರಿ ಶರತ್ ಚಂದ್ರನ್ ನಿಗೂಢವಾಗಿ ಮೃತಪಟ್ಟಿದ್ದಾರೆ ಅಂತ ಕೇರಳ ಚಿತ್ರರಂಗದ ಮೂಲಗಳು ತಿಳಿಸಿವೆ.
Read More »ದೇಶದಲ್ಲಿ ಹೆಚ್ಚಿದ ಕೊರೋನಾ
ನವದೆಹಲಿ: ದೇಶದಲ್ಲಿ ಕೊರೊನಾ ಸೊಂಕಿತರ ಸಂಖ್ಯೆ ಮತ್ತೆ ಏರಿಕೆಯಾಗಿದ್ದು, ಕಳೆದ 24 ಗಂಟೆಯಲ್ಲಿ ಮತ್ತೆ 20,408 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ಸೋಂಕಿತರ ಸಾವಿನ ಸಂಖ್ಯೆಯಲ್ಲಿಯೂ ಹೆಚ್ಚಳವಾಗಿದ್ದು, 24 ಗಂಟೆಯಲ್ಲಿ 54 ಜನರು ಮಹಾಮಾರಿಗೆ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಈವರೆಗೆ ಕೋವಿಡ್ ಗೆ ಸಾವನ್ನಪ್ಪಿದವರ ಸಂಖ್ಯೆ 5,26,312ಕ್ಕೆ ಏರಿಕೆಯಾಗಿದೆ. ಇನ್ನು ದೇಶದಲ್ಲಿ 1,43,384 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, ಶೇ.98.48ರಷ್ಟು ಜನಕೋವಿಡ್ ನಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ದೇಶದಲ್ಲಿ ಈವರೆಗೆ …
Read More »ರಾಜ್ಯದಲ್ಲಿ ಮುಂದಿನ 5 ದಿನ ಭಾರೀ ಮಳೆ ಸಾಧ್ಯತೆ
ಬೆಂಗಳೂರು : ಕರಾವಳಿ, ಮಲೆನಾಡು ಸೇರಿದಂತೆ ರಾಜ್ಯದಲ್ಲಿ ಮುಂದಿನ 5 ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇಂದು ದಾವಣಗೆರೆ, ಚಿತ್ರದುರ್ಗ,ತುಮಕೂರು, ಚಿಕ್ಕಬಳ್ಳಾಪುರ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಹಾಗೂ ಹಾಸನ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಮುಂದಿನ 24 ಗಂಟೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಮುಂದಿನ 5 ದಿನ ಮಲೆನಾಡು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





