ಬೆಂಗಳೂರು: ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿಯವರು ಆಗಾಗ ವಿವಾದಕ್ಕೆ ಸಿಲುಕಿ ಸುದ್ದಿಯಾಗುತ್ತಿರುತ್ತಾರೆ. ಅವರು ಮೈಸೂರು ಜಿಲ್ಲಾಧಿಕಾರಿಯಾಗಿದ್ದ ವೇಳೆ ಹಲವು ಆರೋಪಗಳು ಕೇಳಿಬಂದು ನಂತರ ಬೆಂಗಳೂರಿಗೆ ಧಾರ್ಮಿಕ ದತ್ತಿ ಇಲಾಖೆಗೆ ವರ್ಗಾವಣೆಗೊಂಡರು. ಇದೀಗ ಅವರು ಮೈಸೂರು ಜಿಲ್ಲಾಧಿಕಾರಿಯಾಗಿದ್ದ ವೇಳೆ ಕೇಳಿಬಂದ ಆರೋಪಗಳಿಗೆ ಸಂಬಂಧಪಟ್ಟಂತೆ ಅವರಿಗೆ ನೊಟೀಸ್ ನೀಡಲಾಗಿದ್ದು, ಸರ್ಕಾರದ ಕಾರ್ಯದರ್ಶಿ ಡಾ.ಜೆ.ರವಿಶಂಕರ್ ಅವರು ನೊಟೀಸ್ ಕಳುಹಿಸಿದ್ದಾರೆ. ಇಂದು ಬೆಳಗ್ಗೆ 11 ಗಂಟೆಗೆ ಖುದ್ದು ಕಚೇರಿಗೆ ಹಾಜರಾಗಿ ಆರೋಪಗಳಿಗೆ ಉತ್ತರಿಸಲು ಅವರಿಗೆ ಸೂಚಿಸಲಾಗಿದೆ.
Read More »ಅಡುಗೆ ಮನೆಯಲ್ಲಿ ಹಾವು : ಕುಟುಂಬಸ್ಥರು ಕಂಗಾಲು
ನವಲಗುಂದ : ತಾಲೂಕಿನ ತಿರ್ಲಾಪುರ ಗ್ರಾಮದ ಮನೆಯೊಂದರಲ್ಲಿ ಬೃಹದಾಕಾರದ ನಾಗರ ಹಾವೊಂದು ಕಾಣಿಸಿಕೊಂಡ ಪರಿಣಾಮ ಮನೆಯವರು ಆತಂಕಕ್ಕೀಡಾದ ಘಟನೆ ಗುರುವಾರ ಮಧ್ಯ ರಾತ್ರಿ ನಡೆದಿದೆ . ರಜಾಕ್ ಎಂಬುವರ ಮನೆಯಲ್ಲಿನ ಅಡುಗೆ ಕೋಣೆಯಲ್ಲಿ ಸುಮಾರು 10 ವರ್ಷ ಮೇಲ್ಪಟ್ಟ ಬೃಹತ್ ನಾಗರಹಾವು ಕಾಣಿಸಿಕೊಂಡಿದೆ . ಕೂಡಲೇ ಮನೆಯವರು ಉರಗ ತಜ್ಞ ಸಂಗಮೇಶ ಅವರಿಗೆ ಕರೆ ಮಾಡಿದ್ದಾರೆ . ರಜಾಕ್ ಅವರ ಮನವಿಗೆ ಸ್ಪಂದಿಸಿದ ಸ್ನೇಕ್ ಸಂಗಮೇಶ ಮಧ್ಯರಾತ್ರಿ ತಿರ್ಲಾಪುರದಲ್ಲಿರುವ ರಜಾಕ್ …
Read More »ಉಣಕಲ್ ಕೆರೆಯಲ್ಲಿ ಮಹಿಳೆ ಶವ : ಕೊಲೆಯೋ ಆತ್ಮಹತ್ಯೆಯೋ ?
ಹುಬ್ಬಳ್ಳಿ : ನಗರದ ಪ್ರವಾಸಿ ತಾಣಗಳಲ್ಲಿ ಒಂದಾಗಿರುವ ಉಣಕಲ್ ಕೆರೆಯಲ್ಲಿ ಅಪರಿಚಿತ ಮಹಿಳೆಯ ಶವ ಈಗಷ್ಟೇ ಪತ್ತೆಯಾಗಿದೆ . ಶುಕ್ರವಾರ ಉಣಕಲ್ ಕೆರೆಯಲ್ಲಿ ಮೀನು ಹಿಡಿಯಲು ತೆರಳಿದ್ದ ಸ್ಥಳೀಯರು , ಮಹಿಳೆಯ ಶವವನ್ನು ನೋಡಿ ವಿದ್ಯಾನಗರ ಠಾಣೆಯ ಪೊಲೀಸರಿಗೆ ಮಾಹಿತಿಯನ್ನು ನೀಡಿದ್ದಾರೆ . ಕೂಡಲೇ ಸ್ಥಳಕ್ಕೆ ಆಗಮಿಸಿದ ವಿದ್ಯಾನಗರ ಠಾಣೆಯ ಪೊಲೀಸರು ಮಹಿಳೆಯ ಶವವನ್ನು ಕೆರೆಯಿಂದ ತೆಗೆದಿದ್ದು ಸುಮಾರು 30 ರಿಂದ 40 ವರ್ಷದ ವಯಸ್ಸಿನ ಮಹಿಳೆ ಎಂದು ಅಂದಾಜಿಸಲಾಗಿದ್ದು …
Read More »ಮುಸ್ಲಿಂ ಸಂಘಟನೆಗಳು ಬ್ಯಾನ್ ಆಗಬೇಕು: ಬೆಲ್ಲದ
ಧಾರವಾಡ: ರಾಜ್ಯದಲ್ಲಿ ಎಸ್ಡಿಪಿಐ, ಪಿಎಫ್ಐ ಸೇರಿದಂತೆ ಇತರ ಸಂಘಟನೆಗಳು ಬ್ಯಾನ್ ಆಗಬೇಕು ಎಂಬ ವಿಚಾರಕ್ಕೆ ನನ್ನ ಬೆಂಬಲವೂ ಇದೆ ಎಂದು ಶಾಸಕ ಅರವಿಂದ ಬೆಲ್ಲದ ಹೇಳಿದರು. ಧಾರವಾಡದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇವಲ ಸಂಘಟನೆಗಳು ಮಾತ್ರ ಬ್ಯಾನ್ ಆದರೆ ಸಾಲದು ಸಂಘಟನೆ ಹಾಗೂ ಸಂಘಟನೆಯಲ್ಲಿರುವವರ ಮೇಲೂ ಕ್ರಮ ಆಗಬೇಕು. ಒಂದು ಸಂಘಟನೆ ಬ್ಯಾನ್ ಆದರೆ ಇನ್ನೊಂದು ಸಂಘಟನೆಯಲ್ಲಿ ಬಂದು ಸೇರಿಕೊಳ್ಳುತ್ತಾರೆ. ಹೀಗಾಗಿ ಸಂಘಟನೆಯಲ್ಲಿರುವವರ ಮೇಲೂ ಕ್ರಮ ಆಗಬೇಕು ಎಂದು ಬೆಲ್ಲದ …
Read More »ರಸ್ತೆ ಅಪಘಾತದಲ್ಲಿ ವೈದ್ಯ ಸಾವು
ಕೊಪ್ಪಳ: ಇಲ್ಲಿನ ರಾಷ್ಟ್ರೀಯ ಹೆದ್ದಾರಿ ಬೈಪಾಸ್ನ ಮಂಗಳಪುರ ಬಳಿ ಗುರುವಾರ ನಡೆದ ಅಪಘಾತದಲ್ಲಿ ತಾಲ್ಲೂಕಿನ ಬೆಟಗೇರಿ ಗ್ರಾಮದ ಆರ್ಎಂಪಿ ವೈದ್ಯ ಕಲಿಗಣನಾಥ (65) ಮೃತಪಟ್ಟಿದ್ದಾರೆ. ದ್ವಿಚಕ್ರ ವಾಹನಕ್ಕೆ ಕಾರ್ ಡಿಕ್ಕಿ ಹೊಡೆದ ಪರಿಣಾಮ ಘಟನೆ ನಡೆದಿದ್ದು, ದ್ವಿಚಕ್ರ ವಾಹನ ನಜ್ಜುಗುಜ್ಜಾಗಿದೆ. ಡಿಕ್ಕಿ ಹೊಡೆದ ರಭಸಕ್ಕೆ ರಸ್ತೆ ಮೇಲೆಲ್ಲ ದಿನಬಳಕೆ ವಸ್ತುಗಳು ಚೆಲ್ಲಾಪಿಲ್ಲಿಯಾಗಿ ಬಿದ್ದಿದ್ದವು. ಕೊಪ್ಪಳ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Read More »ದಕ್ಷಿಣ ಕನ್ನಡ ಜಿಲ್ಲೆಗೆ ಮುತಾಲಿಕ್ ಪ್ರವೇಶ ನಿಷೇಧ : ಡಿಸಿ ಆದೇಶ ಹೊರಡಿಕೆ
ಮಂಗಳೂರು : ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಘಟಕ ವ್ಯಾಪ್ತಿಯ ಬಂಟ್ವಾಳ, ಬೆಳ್ತಂಗಡಿ, ಪುತ್ತೂರು, ಕಡಬ ಮತ್ತು ಸುಳ್ಯ ತಾಲ್ಲೂಕುಗಳಿಗೆ ಶ್ರೀರಾಮ ಸೇನಾ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಪ್ರವೇಶಕ್ಕೆ ನಿಷೇಧ ವಿಧಿಸಿ, ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಆದೇಶ ಹೊರಡಿಸಿದ್ದಾರೆ. ಜಿಲ್ಲೆಯ ಪ್ರಸ್ತುತ ವಿದ್ಯಮಾನಗಳನ್ನು ಪರಿಗಣಿಸಿ, ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಹಾಗೂ ಕಾನೂನು ಸುವ್ಯವಸ್ಥೆಯನ್ನು ಕಾಪಾಡಲು ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳುವುದು ಅಗತ್ಯವಾಗಿದೆ. ಈ ಹಿನ್ನೆಲೆಯಲ್ಲಿ ಪ್ರಮೋದ್ ಮುತಾಲಿಕ್ ಜಿಲ್ಲಾ …
Read More »ಪ್ರವೀಣ್ ಮನೆಗೆ ಸಿಎಂ ಭೇಟಿ : 25 ಲಕ್ಷ ರೂ. ಪರಿಹಾರ ಚೆಕ್ ವಿತರಣೆ
ಮಂಗಳೂರು: ದುಷ್ಕರ್ಮಿಗಳಿಂದ ಹತ್ಯೆಯಾದ ದಕ್ಷಿಣ ಕನ್ನಡ ಜಿಲ್ಲೆಯ ಬಿಜೆಪಿ ಯುವ ಮೋರ್ಚಾ ಮುಖಂಡ ಪ್ರವೀಣ್ ನೆಟ್ಟಾರು ಅವರ ಮನೆಗೆ ಭೇಟಿ ನೀಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ಕುಟುಂಬಕ್ಕೆ ಸಾಂತ್ವಾನ ಹೇಳಿ, 25 ಲಕ್ಷ ರೂಪಾಯಿ ಪರಿಹಾರದ ಚೆಕ್ ವಿತರಿಸಿದರು. ಬಿಜೆಪಿ ಮುಖಂಡನ ಹತ್ಯೆ ಪ್ರಕರಣ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದು, ಇಂದು ಬಸವರಾಜ ಬೊಮ್ಮಾಯಿ ಹಾಗೂ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಸುಳ್ಯ ತಾಲೂಕಿನ ನೆಟ್ಟೂರು ಗ್ರಾಮಕ್ಕೆ ಭೇಟಿ …
Read More »ಬಿಜೆಪಿ ಶಾಸಕ ಕುಮಾರಸ್ವಾಮಿ ವಿರುದ್ಧ ಗರಂ ಆದ ಸಿಎಂ
ಮಂಗಳವಾರ ರಾತ್ರಿ ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಬಳಿಕ ಹಿಂದೂ ಸಂಘಟನೆಗಳ ಪರ ಕಾರ್ಯಕರ್ತರಲ್ಲದೆ ಬಿಜೆಪಿಯ ಕೆಲ ಶಾಸಕರುಗಳು ಸಹ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದರು. ಅಲ್ಲದೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು ಸಾಮೂಹಿಕ ರಾಜೀನಾಮೆ ಸಲ್ಲಿಸಿದ್ದು, ಮೂಡಿಗೆರೆ ಕ್ಷೇತ್ರದ ಬಿಜೆಪಿ ಶಾಸಕ ಕುಮಾರಸ್ವಾಮಿ ಸಾಮಾಜಿಕ ಜಾಲತಾಣ ಟ್ವಿಟ್ಟರ್ ನಲ್ಲಿ, ‘ನಮ್ಮ ಸರ್ಕಾರ ಇದ್ದರೂ ನಿನ್ನನ್ನು ಉಳಿಸಿಕೊಳ್ಳಲು ಆಗಲಿಲ್ಲ.ಸಾರಿ ಪ್ರವೀಣ್’ ಎಂದು ಟ್ವೀಟ್ …
Read More »ಶವ ಸಂಸ್ಕಾರಕ್ಕೆ ಪರದಾಡುವ ಗ್ರಾಮಸ್ಥರಿಗೆ ಇಲ್ಲಿದೆ ಮಹತ್ವದ ಮಾಹಿತಿ
ಬೆಂಗಳೂರು: ಶವ ಸಂಸ್ಕಾರಕ್ಕೆ ಸ್ಮಶಾನ ಜಾಗ ಇಲ್ಲದ ಗ್ರಾಮಗಳು ಮತ್ತು ಪಟ್ಟಣ ಪ್ರದೇಶಗಳಿಗೆ ಅಗತ್ಯ ಜಮೀನು ಒದಗಿಸಿರುವ ಬಗ್ಗೆ ರಾಜ್ಯದ ಎಲ್ಲಾ 31 ಜಿಲ್ಲೆಗಳ ಸಮಗ್ರ ಮಾಹಿತಿಯನ್ನು ರಾಜ್ಯ ಸರ್ಕಾರ ಹೈಕೋರ್ಟ್ಗೆ ಒದಗಿಸಿದೆ. ಈ ಕುರಿತು ಬೆಂಗಳೂರು ನಿವಾಸಿ ಮಹಮ್ಮದ್ ಇಕ್ಬಾಲ್ ಎಂಬುವರು ಸಲ್ಲಿಸಿರುವ ಸಿವಿಲ್ ನ್ಯಾಯಾಂಗ ನಿಂದನೆ ಅರ್ಜಿಯು ಹಿರಿಯ ನ್ಯಾಯಮೂರ್ತಿ ಬಿ. ವೀರಪ್ಪ ಹಾಗೂ ನ್ಯಾ.ಕೆ.ಎಸ್. ಹೇಮಲೇಖಾ ಅವರಿದ್ದ ವಿಭಾಗೀಯ ನ್ಯಾಯಪೀಠದ ಮುಂದೆ ಗುರುವಾರ ವಿಚಾರಣೆ ಬಂದಿತ್ತು. …
Read More »ಫಾಜಿಲ್ ಹತ್ಯೆಗೆ ಸಿಎಂ ಬೊಮ್ಮಾಯಿ ನೇರ ಹೊಣೆ : ಮುನೀರ್ ಕಾಟಿಪಳ್ಳ
ಮಂಗಳೂರು: ಮುಖ್ಯಮಂತ್ರಿ ಭೇಟಿಯ ಬೆನ್ನಲ್ಲೇ ಸುರತ್ಕಲ್ನಲ್ಲಿ ನಡೆದ ಫಾಜಿಲ್ ಹತ್ಯೆಗೆ ನೇರ ಹೊಣೆ ಮುಖ್ಯಮಂತ್ರಿ ಬೊಮ್ಮಾಯಿ. ಅವರು ಇಂದು ದಕ್ಷಿಣ ಕನ್ನಡ ಜಿಲ್ಲಾ ಭೇಟಿಯ ಸಂದರ್ಭ ತೋರಿದ ಸಾರ್ವಜನಿಕ ಹೊಣೆಗೇಡಿತನವೇ ಕೊಲೆಗಡುಕರಿಗೆ ಧೈರ್ಯ ನೀಡಿದೆ ಎಂದು ಡಿವೈಎಫ್ಐ ರಾಜ್ತ ಘಟಕದ ಅಧ್ಯಕ್ಷ ಮುನೀರ್ ಕಾಟಿಪಳ್ಳ ಆರೋಪಿಸಿದ್ದಾರೆ. ಜಿಲ್ಲೆಯಲ್ಲಿ ನಡೆಯುತ್ತಿರುವ ಅಮಾಯಕರ ಸರಣಿ ಕೊಲೆಗಳಿಗೆ ಬೊಮ್ಮಾಯಿ ಸರ್ಕಾರವೇ ಕಾರಣ. ನಿರ್ಲಜ್ಜ ಕೋಮುವಾದಿ ಆಡಳಿತದ ಕರ್ನಾಟಕ ಮಾದರಿಯೊಂದನ್ನು ಬೊಮ್ಮಾಯಿ ನಿರ್ಮಿಸಿ ಬಿಟ್ಟರು. ಅವರಿಗೆ …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





