Breaking News

BigTv News

ಯುವಕನ ಬರ್ಬರವಾಗಿ ಹತ್ಯೆ : ಶಾಲೆ-ಕಾಲೇಜುಗಳಿಗೆ ರಜೆ

ಮಂಗಳೂರು : ಸುರತ್ಕಲ್ ನಲ್ಲಿ ಯುವಕನೊಬ್ಬನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಹಿನ್ನೆಲೆಯಲ್ಲಿ ಸುರತ್ಕಲ್ ವ್ಯಾಪ್ತಿಯಲ್ಲಿ ಇಂದು ಶಾಲೆ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಸುರತ್ಕಲ್ ನ ಮಂಗಳಪೇಟೆ ನಿವಾಸಿ ಫಾಜಿಲ್ ಎಂಬ ಯುವಕನನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಹತ್ಯೆ ಮಾಡಲಾಗಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಇಂದು ನಾಲ್ಕು ಕಡೆ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಸುರತ್ಕಲ್, ಪೆಣಂಬೂರು, ಬಜ್ಪೆ, ಮುಲ್ಕಿಯಲ್ಲಿ ಇಂದು ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.

Read More »

ರಾಜ್ಯದ ಜನತೆಗೆ ಭರ್ಜರಿ ಸಿಹಿಸುದ್ದಿ ಕೊಟ್ಟ ಸಿಎಂ

ಬೆಂಗಳೂರು : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಮ್ಮ ನೇತೃತ್ವದ ಸರ್ಕಾರ 1 ವರ್ಷದ ಅಧಿಕಾರವಧಿ ಪೂರ್ಣಗೊಳಿಸಿದ ಹಿನ್ನೆಲೆಯಲ್ಲಿ ರಾಜ್ಯದ ಜನತೆಗೆ ಭರ್ಜರಿ ಸಿಹಿಸುದ್ದಿ ನೀಡಿದ್ದು, ಹಲವು ಯೋಜನೆಗಳನ್ನು ಘೋಷಣೆ ಮಾಡಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿಎಂ ಬೊಮ್ಮಾಯಿ, ರೈತರ ಮಕ್ಕಳಿಗೆ ಆರ್ಥಿಕ ನೆರವು ಒದಗಿಸುತ್ತಿರುವ ವಿದ್ಯಾನಿಧಿ ಯೋಜನೆ, ನೇಕಾರ, ಟ್ಯಾಕ್ಸಿ ಚಾಲಕರ ಮತ್ತು ಮೀನುಗಾರರ ಮಕ್ಕಳಿಗೂ ವಿಸ್ತರಣೆ ಮಾಡಲಾಗಿದೆ.ಎಸ್ ಸಿ/ಎಸ್ ಟಿ ಯುವಕರಿಗೆ ಬಾಬು ಜಗಜೀವನ್ ರಾಂ ಹೆಸರಿನಲ್ಲಿ ಉದ್ಯೋಗ ಕೈಗೊಳ್ಳಲು …

Read More »

ಇಂದಿನಿಂದ ಎರಡು ದಿನ ಮತ್ತೆ ಭಾರೀ ಮಳೆಯಾಗುವ ಸಾಧ್ಯತೆ

ಬೆಂಗಳೂರು : ಕರಾವಳಿ, ಮಲೆನಾಡು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದಿನಿಂದ ಎರಡು ದಿನ ಮತ್ತೆ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಜುಲೈ 29, 30 ರಂದು ಕರಾವಳಿ, ಮಲೆನಾಡು, ಉತ್ತರ ಮತ್ತು ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಇಂದು 12 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ನಾಳೆ ಕರಾವಳಿಯ ಎಲ್ಲಾ ಜಿಲ್ಲೆಗಳಿಗೆ ಹಾಗೂ ಚಿಕ್ಕಮಗಳೂರು, ಚಿತ್ರದುರ್ಗ, …

Read More »

ಪ್ರವೀಣ್‌ ಹತ್ಯೆ ಪ್ರಕರಣ : ಇಬ್ಬರು ಆರೋಪಿಗಳು ಬಂಧನ

ಮಂಗಳೂರು; ಹಿಂದೂ ಸಂಘಟನೆ ಮುಖಂಡ ಪ್ರವೀಣ್‌ ಹತ್ಯೆ ಪ್ರಕರಣದ ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಕಾಸರಗೋಡಿನಲ್ಲಿ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದ್ದು, ವಿಟ್ಲ ಪೊಲೀಸ್‌ ಠಾಣೆಗೆ ಅವರನ್ನು ಕರೆತರಲಾಗಿದೆ.ಶೀಘ್ರದಲ್ಲೇ ಅವರನ್ನು ಕೋರ್ಟ್‌ಗೆ ಹಾಜರುಪಡಿಸಲಾಗುತ್ತದೆ ಎಂದು ಪೊಲೀಸರು ತಿಳಿಸಿದ್ದಾರೆ. ಮೊಹಮದ್‌ ಶಫೀಕ್‌, ಜಾಕೀರ್‌ ಸವಣೂರು ಎಂಬುವವರೇ ಬಂಧಕ್ಕೊಳಗಾಗಿರುವವರು. ಕಾಸರಗೋಡಿನಲ್ಲಿ ಈ ಇಬ್ಬರನ್ನು ಬಂಧಿಸಲಾಗಿದ ಎಂದು ದಕ್ಷಿಣ ಕನ್ನಡ ಎಸ್‌ಪಿ ರಿಷಿಕೇಶ್‌ ಹೇಳಿದ್ದಾರೆ. ಈ ಇಬ್ಬರೇ ಮಾಸ್ಟರ್‌ ಮೈಂಡ್‌ಗಳು ಎನ್ನಲಾಗಿದ್ದು, ಇವರ ನಿರ್ದೇಶನದ ಮೇರೆಗೆ …

Read More »

ರೈಲ್ವೇ ನಿಲ್ದಾಣದಲ್ಲಿ ಮಲಗಿದ ಸ್ಥಿತಿಯಲ್ಲೇ ವೃದ್ಧ ಸಾವು

ಹುಬ್ಬಳ್ಳಿ : ರೈಲ್ವೇ ನಿಲ್ದಾಣದಲ್ಲಿ ವೃದ್ಧರೊಬ್ಬರು ಮಲಗಿದ ಸ್ಥಿತಿಯಲ್ಲಿಯೇ ಸಾವನ್ನಪ್ಪಿದ ಘಟನೆ ಗುರುವಾರ ಹುಬ್ಬಳ್ಳಿಯ ರೈಲ್ವೇ ನಿಲ್ದಾಣದಲ್ಲಿ ನಡೆದಿದೆ . ಸುಮಾರು 70 ರಿಂದ 75 ವರ್ಷದ ವೃದ್ಧರೊಬ್ಬರು ರೈಲ್ವೇ ನಿಲ್ದಾಣದ ಪ್ಲಾಟ್ ಫಾರ್ಮ್ 4 ರಲ್ಲಿ ಮಲಗಿದ ಸ್ಥಿತಿಯಲ್ಲಿಯೇ ಸಾವನ್ನಪ್ಪಿದ್ದಾರೆ.ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ರೈಲ್ವೇ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ ಶವವನ್ನು ಹುಬ್ಬಳ್ಳಿಯ ಕಿಮ್ಸ್ ಶವಾಗಾರಕ್ಕೆ ರವಾನಿಸಿ ಮೃತಪಟ್ಟ ವ್ಯಕ್ತಿಯ ಬಗ್ಗೆ ಮಾಹಿತಿಯನ್ನು ಕಲೆ ಹಾಕುತ್ತಿದ್ದಾರೆ.ಈ ಸಂಬಂಧ …

Read More »

ಹಿಂದೂ ಕಾರ್ಯಕರ್ತ ಕೊಲೆ ಹಿನ್ನಲೆ ಹುಬ್ಬಳ್ಳಿಯಲ್ಲಿ ಶ್ರದ್ಧಾಂಜಲಿ ಸಲ್ಲಿಕೆ

ಹುಬ್ಬಳ್ಳಿ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹಿಂದೂ ಕಾರ್ಯಕರ್ತ ಪ್ರವೀಣ ನೆಟ್ಟಾರು ಕೊಲೆ ಹಿನ್ನಲೆ ಅವರಿಗೆ ಹಿಂದೂಸ್ತಾನ ಜನತಾ ಪಾರ್ಟಿ ವತಿಯಿಂದ ಹುಬ್ಬಳ್ಳಿಯ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಈ ವೇಳೆ ಮಾತನಾಡಿದ ರಾಘವೇಂದ್ರ ಕಠಾರೆ ಹಿಂದುತ್ವ ಬಂದತಹ ಸಂಧರ್ಭದಲ್ಲಿ ಹಿಂದೂಗಳಿಗೆ ರಕ್ಷಣೆ ನೀಡುವಲ್ಲಿ ಬಿಜೆಪಿ ಸರ್ಕಾರ ವಿಫಲವಾಗಿದೆ. ಗೃಹ ಸಚಿವರಾದ ಆರಗ ಜ್ಞಾನೇಂದ್ರ ಅವರು ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡಬೇಕು ಎಂದು ಆಗ್ರಹಿಸಿದರು. ಸಿದ್ದು ರಾಯನಾಳ,ಮಂಜು ಎಂಟರವಿ,ವಿಜಯ ಮಾಮರಡಿ,ಸಂತೋಷ …

Read More »

ಸರ್ಕಾರದ ಗದ್ದುಗೆಯಲ್ಲಿ ಕುಳಿತುಕೊಳ್ಳಲು ಬಿಜೆಪಿಗರು ನಾಲಾಯಕರು: ಮುತಾಲಿಕ್ ಕಿಡಿ

ಹುಬ್ಬಳ್ಳಿ: ರಾಜ್ಯದಲ್ಲಿ ಬಿಜೆಪಿ ಸರ್ಕಾರ ಸಂಪೂರ್ಣ ವಿಫಲವಾಗಿದೆ. ಸರ್ಕಾರದ ಗದ್ದುಗೆಯಲ್ಲಿ ಕುಳಿತುಕೊಳ್ಳಲು ಬಿಜೆಪಿಯವರು ನಾಲಾಯಕ ಆಗಿದ್ದೀರಿ. ಹಿಂದೂಗಳ‌ ರಕ್ಷಣೆಗಾಗಿ ಪರ್ಯಾಯ ರಾಜಕೀಯ ಶಕ್ತಿ ಬೇಕಾಗಿದೆ ಎಂದು ಶ್ರೀರಾಮ ಸೇನೆಯ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಬಿಜೆಪಿ ಸರ್ಕಾರದ ವಿರುದ್ಧ ಹರಿಹಾಯ್ದರು. ನಗರದಲ್ಲಿಂದು ಸುದ್ಧಿಗೋಷ್ಟಿ ನಡೆಸಿ ಮಾತನಾಡಿದ ಅವರು, ಸುಳ್ಯದಲ್ಲಿ ಹಿಂದೂ ಕಾರ್ಯಕರ್ತನ ಹತ್ಯೆಯಾಗಿದ್ದು ಖಂಡನೀಯ. ಅಧಿಕಾರಕ್ಕೆ ಬರಲು ಹಿಂದೂಗಳು ಬೇಕು. ಆದರೆ ಅವರಿಗೆ ರಕ್ಷಣೆ ಕೊಡುವಲ್ಲಿ ಸಂಪೂರ್ಣ ವಿಫಲರಾಗಿದ್ದೀರಿ.‌ ರಾಜ್ಯದಲ್ಲಿ ಕಾನೂನು …

Read More »

ಸ್ತ್ರೀ ಶಕ್ತಿ ಸಂಘಟನೆಗೆ ಸದಾ ನನ್ನ ಬೆಂಬಲ ಸಿದ್ದ: ಶಾಸಕಿ ಕುಸುಮಾವತಿ

ಹುಬ್ಬಳ್ಳಿ: ಮಹಿಳೆಯರ ಸಬಲೀಕರಣದ ದೃಷ್ಟಿಯಿಂದ ಮಹಿಳಾ ಅಭಿರುದ್ದಿ ಇಲಾಖೆ ಅಡಿ ಅಮೃತ ಸ್ತ್ರೀ ಶಕ್ತಿ ಸಂಘದ ಸದಸ್ಯರಿಗೆ ನೀಡುತ್ತಿರುವ ಬಡ್ಡಿ ರಹಿತ ಸಾಲ ಯೋಜನೆ ದೇಶಕ್ಕೆ ಮಾದರಿಯಾಗಿದೆ ಎಂದು ಶಾಸಕಿ ಕುಸುಮಾವತಿ ಚ ಶಿವಳ್ಳಿ ಹೇಳಿದರು. ನೂಲ್ವಿ ಗ್ರಾಮದ ರೇಣುಕಾಚಾರ್ಯ ವಿದ್ಯಾಲಯದ ಸಭಾ ಭವನದಲ್ಲಿ ಬುಧವಾರ ಏರ್ಪಡಿಸಿದ್ದ ಸಾಲ ಸೌಲಭ್ಯದ ಚೆಕ್ ವಿತರಣಾ ಸಮಾರಂಭದಲ್ಲಿ ಸ್ತ್ರೀ ಶಕ್ತಿ ಸಂಘಗಳಿಗೆ ರೂ.50 ಲಕ್ಷದ ಮೊತ್ತದ ಚೆಕ್‌ ವಿತರಿಸಿ ಮಾತನಾಡಿ, ಈ ಮೊತ್ತವನ್ನು …

Read More »

ವಿಕ್ರಾಂತ ರೋಣ ಅದ್ದೂರಿಯಾಗಿ ಸ್ವಾಗತ: ಮುಗಿಲು ಮುಟ್ಟಿದ ಕಿಚ್ಚನ ಅಭಿಮಾನಿಗಳ ಸಂಭ್ರಮ

ಹುಬ್ಬಳ್ಳಿ: ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅಭಿನಯದ ಬಹು ನಿರೀಕ್ಷಿತ ಚಿತ್ರ ವಿಕ್ರಾಂತ ರೋಣ ರಾಜ್ಯಾದ್ಯಂತ ಬಿಡುಗಡೆಯಾಗಿದ್ದು, ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿ ಅಭಿಮಾನಿಗಳು ವಿಶೇಷವಾಗಿ ಸ್ವಾಗತ ಮಾಡುವ ಮೂಲಕ ಚಿತ್ರಕ್ಕೆ ಶುಭಾಶಯ ಕೋರಿದರು. ಹುಬ್ಬಳ್ಳಿಯ ಹೃದಯ ಭಾಗದಲ್ಲಿರುವ ಅಪ್ಸರಾ ಚಿತ್ರಮಂದಿರದಲ್ಲಿ ಬೆಳ್ಳಂಬೆಳಿಗ್ಗೆ ಆಗಮಿಸಿದ ಕಿಚ್ಚನ ಅಭಿಮಾನಿಗಳು ಸುದೀಪ್ ಬ್ಯಾನರ್ ಗೆ ಕ್ಷೀರಾಭೀಷೇಕ ಮಾಡುವ ಮೂಲಕ ಹಾಗೂ ಪಟಾಕಿ ಸಿಡಿಸಿ ಸಂಭ್ರಮಿಸುವ ಮೂಲಕ ಚಿತ್ರವನ್ನು ಅದ್ದೂರಿಯಾಗಿ ಸ್ವಾಗತಿಸಿದ್ದಾರೆ. ಹಾಗಿದ್ದರೇ ಇಲ್ಲಿದೆ ನೋಡಿ ವಾಣಿಜ್ಯನಗರಿ …

Read More »

ಸಿದ್ದರಾಮೋತ್ಸವಕ್ಕೆ ಭಾರಿ ಸಿದ್ಧತೆ

ದಾವಣಗೆರೆ : ಮಾಜಿ ಸಿಎಂ ಸಿದ್ದರಾಮಯ್ಯ ಅವರ ಅಮೃತ ಮಹೋತ್ಸವಕ್ಕೆ ಬೆಣ್ಣೆ ನಗರಿಯಲ್ಲಿ ಭರ್ಜರಿ ಸಿದ್ಧತೆ ನಡೆಯುತ್ತಿದೆ. ದಾವಣಗೆರೆ ಹೊರಭಾಗದ 50 ಎಕರೆ ಜಾಗದಲ್ಲಿ ಬೃಹತ್ ವೇದಿಕೆ ನಿರ್ಮಾಣ ಮಾಡಲಾಗುತ್ತಿದೆ. ಸಧ್ಯ ವೇದಿಕೆಯ ಶೇ.50 ರಷ್ಟು ನಿರ್ಮಾಣ ಕಾರ್ಯ ಪೂರ್ಣವಾಗಿದೆ. ಇಂದು ಅಮೃತ ಮಹೋತ್ಸವ ಸಮಿತಿ ನಾಯಕರಾದ ಮಾಜಿ ಸಚಿವರಾದ ಎಚ್ ಸಿ ಮಹದೇವಪ್ಪ, ಎಚ್ ಎಂ ರೇವಣ್ಣ, ಬಿಎಲ್ ಶಂಕರ್, ಶಾಸಕ ಬೈರತಿ ಸುರೇಶ್ ಹಾಗೂ ಸ್ಥಳೀಯ ಮುಖಂಡರು …

Read More »