ಧಾರವಾಡ:– ಶ್ರೀ ಅಮೋಘ ಸಿದ್ದೇಶ್ವರ ಕ್ರಿಯೇಷನ್ಸ್ ಹಾಗೂ ಕರ್ನಾಟಕ ಸಾವಿತ್ರಿಬಾಯಿ ಫುಲೆ ಶಿಕ್ಷಕಿಯರ ಸಂಘ (ರಿ)ಇವುಗಳ ಸಹಯೋಗದಲ್ಲಿ ನಾಳೆ ದಿ.:26 ರಂದು ಬೆಳಿಗ್ಗೆ 8:30 ಗಂಟೆಗೆ ಶ್ರೀನಿವಾಸ ಟಾಕೀಸ್ ನಲ್ಲಿ ಸಾವಿತ್ರಿಬಾಯಿ ಫುಲೆ’ ಚಲನಚಿತ್ರ ಪ್ರದರ್ಶನ ನಡೆಯಲಿದೆ. ಶಾಸಕರಾದ ಅರವಿಂದ ಬೆಲ್ಲದ ಚಲನಚಿತ್ರ ಬಿಡುಗಡೆ ಕಾರ್ಯಕ್ರಮ ದಲ್ಲಿ ಪಾಲ್ಗೊಳ್ಳುವರು. ಈ ಚಿತ್ರವು ಮಾತೆ ಸಾವಿತ್ರಿ ಬಾಯಿ ಫುಲೆ ರವರ ಜೀವನ ಚರಿತ್ರೆಯನ್ನ ಆಧರಿಸಿದ್ದಾಗಿದ್ದು ಎಲ್ಲಾ ನಾಡಿನ ಹೆಣ್ಣುಮಕ್ಕಳು ಕಡ್ಡಾಯವಾಗಿ ನೋಡಲೇಬೇಕಾದ …
Read More »ಕಾಂಗ್ರೆಸ್ ನಾಯಕರ ವಿರುದ್ದ ಕಾನೂನು ಸಮರ ಸಾರಿದ ಸ್ಮೃತಿ ಇರಾನಿ
ನವದೆಹಲಿ: ಕೇಂದ್ರ ಸಚಿವೆ ಸ್ಮೃತಿ ಇರಾನಿ ಕಾಂಗ್ರೆಸ್ ನಾಯಕರ ವಿರುದ್ದ ಕಾನೂನು ಸಮರ ಸಾರಿದ್ದಾರೆ. ಸ್ಮೃತಿ ಇರಾನಿ ಪುತ್ರಿ ಜೋಯಿಸ್ ಇರಾನಿ ಗೋವಾದಲ್ಲಿ ಸತ್ತವರ ಹೆಸರಲ್ಲಿ ಲೈಸೆನ್ಸ್ ಪಡೆದು, ಅಕ್ರಮವಾಗಿ ಬಾರ್ ನಡೆಸುತ್ತಿದ್ದಾರೆ ಅಂತ ಕಾಂಗ್ರೆಸ್ ನಾಯಕರು ಆರೋಪಿಸಿದ್ದರು. ಈ ಆರೋಪ ಸಂಬಂಧ ಕಾಂಗ್ರೆಸ್ ಪಕ್ಷದ ನಾಯಕರಾದ ಪವನ್ ಖೇರಾ, ಜೈರಾಮ್ ರಮೇಶ್, ನೆಟ್ಟಾ ಡಿಸೋಜಾ ಅವರಿಗೆ ಲೀಗಲ್ ನೋಟಿಸ್ ಕಳುಹಿಸಿದ್ದಾರೆ. ಲಿಖಿತವಾಗಿಯೇ ಬೇಷರತ್ ಕ್ಷಮೆಯಾಚಿಸಬೇಕೆಂದು ಈ ನೋಟಿಸ್ ಮೂಲಕ …
Read More »ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಭಾರಿ ಹೆಚ್ಚಳ
ನವದೆಹಲಿ: ಭಾರತದಲ್ಲಿ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಭಾರಿ ಹೆಚ್ಚಳ ಕಂಡುಬರುತ್ತಿದ್ದು, ಕೊರೊನಾ ನಾಲ್ಕನೇ ಅಲೆ ಬಗ್ಗೆ ಆತಂಕ ಮೂಡಿದೆ. ದೇಶದಲ್ಲಿ 16,866 ಹೊಸ ಪ್ರಕರಣಗಳು ಪತ್ತೆಯಾಗಿವೆ. 41ಮಂದಿ ಮೃತಪಟ್ಟಿದ್ದಾರೆ. ಬಹುತೇಕರು ಕೊರೊನಾ ಲಸಿಕೆಯ ಎರಡೂ ಡೋಸ್ಗಳನ್ನು ಪಡೆದಿದ್ದರೆ ಇನ್ನೂ ಕೆಲವರು ಬೂಸ್ಟರ್ ಡೋಸ್ಗಳನ್ನು ಪಡೆದಿದ್ದಾರೆ. ಸಕ್ರಿಯ ಪ್ರಕರಣಗಳು 150877 ಇದ್ದು ಪಾಸಿಟಿವಿಟಿ ದರ ಶೇ.7.03ರಷ್ಟಿದೆ. ದೇಶದಲ್ಲಿ ಒಂದೇ ದಿನದಲ್ಲಿ 16,82,390ಮಂದಿ ಕೊರೊನಾ ಲಸಿಕೆ ನೀಡಲಾಗಿದೆ. ಇದುವರೆಗೂ ಒಟ್ಟು 2,02,17,66,615 ಮಂದಿಗೆ …
Read More »ಡಿಕೆ ಶಿ ಗೆ ಸೆಡ್ಡು ಹೊಡೆದ ಜಮೀರ್ ಅಹ್ಮದ್ ಖಾನ್
ಬೆಂಗಳೂರು: ಯಾರೋ ನನ್ನ ಬಗ್ಗೆ ಇಲ್ಲದ ವದಂತಿ ಹಬ್ಬಿಸಿ, ಬಾಯಿಗೆ ಬಂದಂತೆ ಅಬ್ಬರಿಸಿ ಬೊಬ್ಬಿರಿದು, ನನ್ನ ಬಾಯಿ ಮುಚ್ಚಿಸಬಹುದು ಎಂದುಕೊಂಡಿದ್ದರೆ, ಅದು ಸಾಧ್ಯವಿಲ್ಲ. ನನ್ನ ಬಾಯಿ ಮುಚ್ಚೋದು ನಾನು ಸತ್ತ ಮೇಲೆಯೇ ಎಂಬುದಾಗಿ ಶಾಸಕ ಜಮೀರ್ ಅಹ್ಮದ್ ಖಾನ್, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಗೆ ಸೆಡ್ಡು ಹೊಡೆದಿದ್ದಾರೆ. ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ನನ್ನ ಹೇಳಿಕೆಯನ್ನು ತಿರುಚಲಾಗಿದೆ, ಒಕ್ಕಲಿಗರ ಬಗ್ಗೆ ನಾನು ಎಲ್ಲಿಯೂ ತಪ್ಪು ಮಾತನಾಡಿಲ್ಲ, ಒಕ್ಕಲಿಗ ಸಮುದಾಯದ …
Read More »ಪ್ರಸಾದ್ ಅಬ್ಬಯ್ಯ ವಿರುದ್ಧ ಜಮೀರ್ ಅಹ್ಮದ್ ಅಸಮಾಧಾನ ವ್ಯಕ್ತ
ಹುಬ್ಬಳ್ಳಿ: ಸಿದ್ದರಾಮೋತ್ಸವ ಪೂರ್ವಭಾವಿ ಸಭೆಗೆ ಗೈರಾದ ಶಾಸಕ ಪ್ರಸಾದ್ ಅಬ್ಬಯ್ಯ ವಿರುದ್ಧ ಜಮೀರ್ ಅಹ್ಮದ್ ಖಾನ್ ಬಹಿರಂಗವಾಗಿಯೇ ಅಸಮಾಧಾನ ಹೊರ ಹಾಕಿದರು. ಹುಬ್ಬಳ್ಳಿಯ ಕಚ್ಚಿ ಗಾರ್ಡನ್ನಲ್ಲಿ ನಡೆದ ಸಿದ್ದರಾಮೋತ್ಸವದ ಪೂರ್ವಭಾವಿ ಸಭೆಯ ಭಾಷಣ ವೇಳೆ ಮಾತನಾಡಿದ ಅವರು, ಪ್ರಸಾದ್ ಅಬ್ಬಯ್ಯ ಮಗನಿಗೆ ಜ್ವರ ಬಂದಿದೆ ಅಂತ ಹೇಳಿ ಸಭೆಗೆ ಬಂದಿಲ್ಲ. ಜ್ವರ ಮಗನಿಗೆ ಬಂದಿದೆಯಾ ಅಥವಾ ಪ್ರಸಾದ್ ಅಬ್ಬಯ್ಯಗೆ ಬಂದಿದೆಯಾ ಎಂದು ಸಭೆಯಲ್ಲಿ ಬಹಿರಂಗವಾಗಿ ಕೇಳಿದರು. ಅಬ್ಬಯ್ಯ ಯಾವತ್ತಾದರೂ ನಮ್ಮ …
Read More »ಕಾನ್ಸ್ಟೇಬಲ್ ಅನಿಲ್ ಮುಳಿಕ್ ನಿಧನ : ಮುಗಿಲು ಮುಟ್ಟಿದ ತಾಯಿಯ ಆಕ್ರಂದನ
ಬಾಗಲಕೋಟೆ : ಚಿತ್ತೂರು ಅಪಘಾತದಲ್ಲಿ ಸಾವಿಗೀಡಾದ ಕಾನ್ಸ್ಟೇಬಲ್ ಅನಿಲ್ ಮುಳಿಕ್ ಮನೆಯಲ್ಲಿ ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿದೆ. ಮಗನನ್ನ ಕಳೆದುಕೊಂಡು ತಂದೆ-ತಾಯಿ ಗೋಳಾಡ್ತಿದ್ದಾರೆ.ಬಾಗಲಕೋಟೆ ಜಿಲ್ಲೆ ಜಮಖಂಡಿ ತಾಲೂಕಿನ ಚಿಕ್ಕಲಕಿ ಗ್ರಾಮದ ಅನಿಲ್ ಕಳೆದ ವಾರವಷ್ಟೇ ಊರಿಗೆ ಬಂದಿದ್ರು. ಕೆಲಸದ ಮೇಲೆ ಬಾಗಲಕೋಟೆಗೆ ಹೋಗಿದ್ದ ಅನಿಲ್ ಸ್ವಲ್ಪ ಬಿಡುವು ಮಾಡಿಕೊಂಡು ತಂದೆ, ತಾಯಿ, ತಮ್ಮನನ್ನು ಭೇಟಿಯಾಗಿ ಮಾತಾಡಿಸಿ ಬಂದಿದ್ರು. ಬಡ ಕುಟುಂಬದಲ್ಲಿ ಜನಿಸಿದ್ದ ಅನಿಲ್ 2019ರ ಏಪ್ರಿಲ್ ತಿಂಗಳಿನಲ್ಲಿ ಪೊಲೀಸ್ ನೌಕರಿಗೆ ಸೇರಿದ್ರು. …
Read More »ಬಸ್ ಗಳು ಮುಖಾಮುಖಿ ಡಿಕ್ಕಿ : 8 ಜನ ಸಾವು
ಉತ್ತರ ಪ್ರದೇಶದ : ಪೂರ್ವಾಂಚಲ ಎಕ್ಸ್ ಪ್ರೆಸ್ ವೇಯಲ್ಲಿ ಡಬಲ್ ಡೆಕ್ಕರ್ ಬಸ್ ಗಳು ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಎಂಟು ಮಂದಿ ಮೃತಪಟ್ಟಿದ್ದು, ಸುಮಾರು 20 ಮಂದಿ ಗಾಯಗೊಂಡಿದ್ದಾರೆ. ಮೂವರ ಸ್ಥಿತಿ ಚಿಂತಾಜನಕವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಉತ್ತರ ಪ್ರದೇಶದ ಪೂರ್ವಾಂಚಲ ಎಕ್ಸ್ ಪ್ರೆಸ್ ವೇಯಲ್ಲಿ ಡಬಲ್ ಡೆಕ್ಕರ್ ಬಸ್ ಗಳು ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಎಂಟು ಮಂದಿ ಮೃತಪಟ್ಟಿದ್ದು, ಸುಮಾರು 20 ಮಂದಿ ಗಾಯಗೊಂಡಿದ್ದಾರೆ. ಮೂವರ …
Read More »ಶಂಕಿತ ಉಗ್ರಗಾಮಿ ಬೆಂಗಳೂರಿನಲ್ಲಿ ಅರೆಸ್ಟ್
ಬೆಂಗಳೂರು: ರಾಜಧಾನಿಯಲ್ಲಿ ನೆಲೆಸಿದ್ದ ಶಂಕಿತ ಉಗ್ರಗಾಮಿಯನ್ನು ಬೆಂಗಳೂರಿನ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಅಸ್ಸಾಂ ಮೂಲದ ಅಖ್ತರ್ ಹುಸೇನ್ ಲಷ್ಕರ್ ಬಂಧಿತ ಆರೋಪಿ. ಖಚಿತ ಮಾಹಿತಿ ಮೇರೆಗೆ ಭಾನುವಾರ ರಾತ್ರಿ 8 ಗಂಟೆ ಸುಮಾರಿಗೆ ಸಿಸಿಬಿಯ 30 ಅಧಿಕಾರಿಗಳ ತಂಡ ತಿಲಕ್ ನಗರದ ಮನೆ ಮೇಲೆ ದಾಳಿ ಮಾಡಿದೆ.ಫುಡ್ ಡೆಲಿವರಿ ಮಾಡುತ್ತಿದ್ದ ಹುಡುಗನ ಮನೆಯಲ್ಲಿಯೇ ತಂಗಿದ್ದ ಉಗ್ರನನ್ನು ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಲಾಗಿದೆ. ಈ ಸಂಬಂಧ ತಿಲಕ್ ನಗರ ಪೊಲೀಸ್ ಠಾಣೆಯಲ್ಲಿ …
Read More »ಹವಾಮಾನ ಇಲಾಖೆಯಿಂದ ಮಹತ್ವದ ಮುನ್ಸೂಚನೆ
ಇಂದು ರಾಜ್ಯದ ಕೆಲವು ಭಾಗಗಳಲ್ಲಿ ಒಣ ಹವೆ ಇರಲಿದ್ದು, ಮಲೆನಾಡು, ದಕ್ಷಿಣ ಒಳನಾಡು ಪ್ರದೇಶಗಳಲ್ಲಿ ಮೋಡ ಕವಿದ ವಾತಾವರಣದ ಜೊತೆಗೆ ತುಂತುರು ಮಳೆಯಾಗಲಿದೆ. ಬೆಂಗಳೂರು, ಚಿಕ್ಕಬಳ್ಳಾಪುರ, ರಾಮನಗರ, ತುಮಕೂರು, ದಾವಣಗೆರೆ, ಮೈಸೂರು ಭಾಗದಲ್ಲಿ ಮಳೆಯ ಸಿಂಚನ ಆಗಲಿದೆ. ಕರಾವಳಿ ಮತ್ತು ಉತ್ತರ ಒಳನಾಡು ಜಿಲ್ಲೆಯಲ್ಲಿ ಇಂದು ಮತ್ತು ನಾಳೆ ಗುಡುಗು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಯಚೂರು ಮತ್ತು ಬಳ್ಳಾರಿಯಲ್ಲಿ ಬಿಸಿಲು ಪ್ರಖರವಾಗಲಿದೆ. ಮಳೆ ಪ್ರಮಾಣ …
Read More »ಕಾಂಗ್ರೆಸ್ ಗೆ ಗುಡ್ ಬೈ ಹೇಳಿದ ಯಶವಂತ್ ಸಿನ್ಹಾ
ನವದೆಹಲಿ: ಇತ್ತೀಚೆಗಷ್ಟೇ ರಾಷ್ಟ್ರಪತಿ ಚುನಾವಣೆಯಲ್ಲಿ ಸೋಲನ್ನು ಅನುಭವಿಸಿದ್ದ ಯಶವಂತ್ ಸಿನ್ಹಾ ಅವರು ತೃಣಮೂಲ ಕಾಂಗ್ರೆಸ್ ಗುಡ್ ಬೈ ಹೇಳಿದ್ದಾರೆ ಎನ್ನಲಾಗಿದೆ.ಈ ವಿಷಯವನ್ನು ಸ್ವತಃ ಸಿಎಂ ಮಮತಾ ಬ್ಯಾನರ್ಜೀ ಹಂಚಿಕೊಂಡಿದ್ದಾರೆ. “ಫಲಿತಾಂಶ ಪ್ರಕಟವಾದ ನಂತರ ನಾನು ಈ ಬಗ್ಗೆ ಯೋಚಿಸಿದೆ. ಯಾವುದೇ ರಾಜಕೀಯ ಪಕ್ಷವನ್ನು ಸೇರದಿರಲು ನಿರ್ಧರಿಸಿದೆ.ರಾಜಕೀಯ ಪಕ್ಷವನ್ನು ಸೇರದೆ ಜನರೊಂದಿಗೆ ಇರುತ್ತೇನೆ” ಎಂದು ಹೇಳಿದರು. ಯಶವಂತ್ ಸಿನ್ಹಾ ಅವರು ತಾವು ಸ್ಥಾಪಿಸಿದ ರಾಷ್ಟ್ರೀಯ ಮಂಚ್ನಲ್ಲಿ ಮತ್ತೆ ಸಕ್ರಿಯವಾಗಿ ತೊಡಗಿಸಿಕೊಳ್ಳಲಿದ್ದಾರೆ ಎಂದು …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





