Breaking News

BigTv News

ಕಾಂಗ್ರೆಸ್ ನಾಯಕರಲ್ಲಿ ಯಾವುದೇ ಬಿರುಕಿಲ್ಲ : ಡಿಕೆಶಿ

ಹುಬ್ಬಳ್ಳಿ: ಕಾಂಗ್ರೆಸ್ ನಾಯಕರಲ್ಲಿ ಯಾವುದೇ ಬಿರುಕಿಲ್ಲ. ಬಿರುಕು ಇರೋದು ಮಾಧ್ಯಮಗಳ ವರದಿಯಲ್ಲಿ ಮಾತ್ರ. ನಾವ್ಯಾರೂ ಸಿಎಂ ಹುದ್ದೆಗಾಗಿ ಕಚ್ಚಾಡುತ್ತಿಲ್ಲ. ಕಾಂಗ್ರೆಸ್ ನಾಯಕರು ಒಗ್ಗಟ್ಟಾಗಿಯೇ ಇದ್ದೇವೆ ಎಂದು ಡಿ.ಕೆ.ಶಿವಕುಮಾರ್ ತಿಳಿಸಿದರು. ನಾಲ್ಕು ತಲೆಮಾರಿಗೆ ಆಗುವಷ್ಟು ಆಸ್ತಿ ಮಾಡಿಕೊಂಡಿದ್ದಾರೆಂಬ ಮಾಜಿ ಸ್ಪೀಕರ್ ಕೆ ಆರ್ ರಮೇಶ್​ ಕುಮಾರ್ ಹೇಳಿಕೆಯನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಸಮರ್ಥಿಸಿಕೊಂಡಿದ್ದಾರೆ. ರಮೇಶ್ ಕುಮಾರ್ ಹೇಳಿಕೆಗೆ ಬೇರೆ ಅರ್ಥ ಕಲ್ಪಿಸೋದು ಬೇಡ. ರಮೇಶ್​ ಕುಮಾರ್ ಹೇಳಿಕೆಯನ್ನು ತಿರುಚಲಾಗಿದೆ.

Read More »

ಯಡಿಯೂರಪ್ಪ ಅವರಿಂದಲೇ ಬಿಜೆಪಿ ಅಧಿಕಾರಕ್ಕೆ ಬಂದಿದ್ದು; ನಿವೃತ್ತಿ ಘೋಷಣೆ ಬೇಸರದ ಸಂಗತಿ!

ಹುಬ್ಬಳ್ಳಿ:- ಮಾಜಿ ಸಿಎಂ ಬಿಎಸ್ ವೈ ರಾಜಕೀಯದಿಂದ ದಿಢೀರ್ ನಿವೃತ್ತಿ ಘೋಷಣೆ ಮಾಡಿರುವ ಹಿನ್ನೆಲೆ ಕೆಪಿಸಿಸಿ ಅಧ್ಯಕ್ಷ ಡಿಕೆಶಿವುಕುಮಾರ್ ಮಾತಾನಾಡಿಅವರಿಗೆ ಇನ್ನು ರಾಜಕಾರಣ ಮಾಡೊ ಶಕ್ತಿ ಇದೆಅವರಿಂದ ರಾಜ್ಯದಲ್ಲಿ ಬಿಜೆಪಿಗೆ 104 ಸ್ಥಾನ ಬಂದಿತ್ತು ಏಕಾಏಕಿ ಈಗ ಅವರು ನಿವೃತ್ತಿಯಾಗಿದ್ದು ನನಗೆ ಬಹಳ ಬೇಸರವಾಗಿದೆ ಎಂದು ಕೆಪಿಸಿಸಿ ಡಿಕೆಶಿವುಕುಮಾರ್ ಹೇಳಿದರು. ನಗರದ ಬೇಂಗೇರಿ ಖಾದಿ ಉದ್ಯೋಗ್ರಾಮಕ್ಕೆ ಭೇಟಿ ನೀಡಿ ನಂತರ ಮಾತಾನಾಡಿ ಬಿಎಸ್ ಯಡಿಯೂರಪ್ಪ ಅವರು ಆಪರೇಷನ್ ಕಮಲ ಮಾಡಿ …

Read More »

ಚರಕ ದೇಶದ ಆಸ್ತಿ, ಗಾಂಧೀಜಿ ದೇಶಕ್ಕೆ ಬಳುವಳಿಯಾಗಿ ಕೊಟ್ಟಿದ್ದಾರೆ : ಡಿಕೆಶಿ

ಹುಬ್ಬಳ್ಳಿ: ಚರಕ ದೇಶದ ಆಸ್ತಿ, ಗಾಂಧೀಜಿ ದೇಶಕ್ಕೆ ಬಳುವಳಿಯಾಗಿ ಕೊಟ್ಟಿದ್ದಾರೆ. ಅದನ್ನು ಉಳಿಸಿಕೊಂಡು ಹೋಗುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದರು. ಹುಬ್ಬಳ್ಳಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿ ಸರ್ಕಾರ ರಾಷ್ಟ್ರಧ್ವಜವನ್ನು ಪಾಲಿಸ್ಟರ್ ಬಟ್ಟೆಗಳಿಂದ ಮಾಡಬಹುದು ಎಂದು ಅನುಮತಿ ನೀಡಿದೆ. ಇದು ದೇಶಕ್ಕೆ ಅವಮಾನ. ಪ್ರತಿ ಮನೆಯಲ್ಲಿ ರಾಷ್ಟ್ರ ಬಾಹುಟ ಹಾಕುವುದನ್ನು ನಾವು ಸ್ವಾಗತಿಸುತ್ತೇವೆ. ಆದರೆ ಧ್ವಜ ತಯಾರಿಕೆ ವಿಷಯದಲ್ಲಿ ಕಾನೂನು ವಿರೋಧಿಸಿ ನಡೆಯುತ್ತಿರುವುದನ್ನು ಕಾಂಗ್ರೆಸ್ …

Read More »

ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ಪ್ರತಿಭಟನಾ ಮೆರವಣಿಗೆ

ಹುಬ್ಬಳ್ಳಿ: ಕೇಂದ್ರ ಸರ್ಕಾರವು ಜಾರಿ ನಿರ್ದೇಶನಾಲಯ ಮತ್ತು ಆದಾಯ ತೆರಿಗೆ ಸಂಸ್ಥೆಗಳನ್ನು ದುರುಪಯೋಗಪಡಿಸಿಕೊಂಡು ಕಾಂಗ್ರೆಸ್ ನಾಯಕರಾದ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಅವರಿಗೆ ಕಿರುಕುಳ ನೀಡುತ್ತಿದೆ ಎಂದು ಆರೋಪಿಸಿ, ಧಾರವಾಡ ಜಿಲ್ಲಾ ಕಾಂಗ್ರೆಸ್ ವತಿಯಿಂದ ಹುಬ್ಬಳ್ಳಿಯಲ್ಲಿ ಶುಕ್ರವಾರ ಡಾ.ಬಿ.ಆರ್. ಅಂಬೇಡ್ಕರ್ ವೃತ್ತದಿಂಎ ಚನ್ನಮ್ಮ ವೃತ್ತದವರೆಗೆ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಯಿತು.ಕೆಪಿಸಿಸಿ ಅಧ್ಯಕ್ಷ ಡಿ.ಕೆ.‌ ಶಿವಕುಮಾರ್ ಅವರು ಸ್ಟೇಷನ್ ರಸ್ತೆಯಲ್ಲಿರುವ ಡಾ.ಬಿ.ಆರ್. ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡುವ ಮೂಲಕ ಚನ್ನಮ್ಮ …

Read More »

ಪ್ರಾಥಮಿಕ ಶಾಲೆಯಯಲ್ಲಿ ಸಸಿ ನೆಡುವ ಕಾರ್ಯಕ್ರಮ

ಧಾರವಾಡ: ರೋಟರಿ ಕ್ಲಬ್ ಧಾರವಾಡ ಹೆರಿಟೇಜ್ ರೋಟರಿ ಕಮುನಿಟಿ ಕಾರ್ಡ್ಸ್ ಫ್ರೆಂಡ್ಸ್ ಗೋಲ್ಡ್ , ಅಸೋಸಿಯೇಷನ್ ನವಲೂರ್ , ಮಯೂರ್ ಫೌಂಡೇಶನ್ ಹಾಗೂ ಬ್ಯಾಂಕ್‌ ಆಫ್ ಬರೋಡ ಸಹಯೋಗದೊಂದಿಗೆ ನವಲೂರ್ ಹರಿಜನ ಕೇರಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ಸಸಿ ನೆಡುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದಲ್ಲಿ ರೋಟರಿ ಕ್ಲಬ್ ಧಾರವಾಡ ಹೆರಿಟೇಜ್ ಪರವಾಗಿ ಗವರ್ನರ್ ಸೀನಿಯರ್ ರೆಪ್ರಸೆಂಟೇಟಿವ್ ಡಾ.ಸತೀಶ್ ಇರಕಲ್ , ಅಸಿಸೆಂಟ್ ಗವರ್ನರ್ ಶ್ರೀಮತಿ ರೇಣುಕಾ ಸಾಳಂಕೆ …

Read More »

ಜವರಾಯನ ಅಟ್ಟಹಾಸಕ್ಕೆ ಕುಟುಂಬದ ಆಧಾರ ಸ್ಥಂಭ ಗಳು ಬಲಿ

ಕಾರವಾರ: ಉಡುಪಿಯ ಶಿರೂರು ಬಳಿ ನಡೆದ ಭೀಕರ ಅಪಘಾತದಲ್ಲಿ ಆಂಬುಲೆನ್ಸ್ ಪಲ್ಟಿಯಾಗಿ ಸಾವನ್ನಪ್ಪಿದ್ದ ದಂಪತಿ ಸೇರಿ ನಾಲ್ವರ ಮೃತದೇಹಗಳನ್ನು ಹೊನ್ನಾವರದ ಹಾಡಗೇರಿಯಲ್ಲಿ  ಅಂತ್ಯ ಸಂಸ್ಕಾರ ನಡೆಸಲಾಯಿತು. ಆದರೆ, ಜವರಾಯನ ಅಟ್ಟಹಾಸಕ್ಕೆ ದುಡಿದು ತಿನ್ನುವ ಜೀವಗಳು ಬಾರದ ಲೋಕಕ್ಕೆ ತೆರಳಿದ್ದು, ಮೃತ ದಂಪತಿಯ ಮಕ್ಕಳು ಅನಾಥರಾದರೇ, ಮತ್ತಿಬ್ಬರ ಮಕ್ಕಳುಗಳು ತಂದೆಯನ್ನು ಕಳೆದುಕೊಂಡು ಕಣ್ಣೀರಿಡುತ್ತಿರುವ ದೃಶ್ಯಗಳು ನೆರದಿದ್ದವರ ಕಣ್ಣೀರ ಕಡಲಲ್ಲಿ ಮುಳುಗಿಸಿದೆ. ಉಡುಪಿ ಜಿಲ್ಲೆಯ ಬೈಂದೂರು ತಾಲ್ಲೂಕಿನ ಶಿರೂರು ಚೆಕ್ ಪೋಸ್ಟ್ ಬಳಿ …

Read More »

ಉಡುಪಿಯಲ್ಲಿ ಹೆಚ್ಚಿದ ಕೋವಿಡ್‌ ಪಾಸಿಟಿವ್‌ ಪ್ರಕರಣ

ಉಡುಪಿ/ಮಂಗಳೂರು: ಉಡುಪಿ ಜಿಲ್ಲೆಯಲ್ಲಿ ಕೋವಿಡ್‌ ಪಾಸಿಟಿವ್‌ ಪ್ರಮಾಣ ಒಂದೇ ಸಲಕ್ಕೆ ಹೆಚ್ಚಾಗಿದ್ದು ಗುರುವಾರ 14 ಮಂದಿಗೆ ಸೋಂಕು ದೃಢಪಟ್ಟಿದೆ. 480 ಮಂದಿಯನ್ನು ತಪಾಸಣೆಗೆ ಒಳಪಡಿಸಲಾಗಿದೆ. ನಾಲ್ವರು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.32 ಪ್ರಕರಣಗಳು ಸಕ್ರಿಯವಾಗಿವೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗುರುವಾರ 9 ಮಂದಿಗೆ ಕೋವಿಡ್‌ ಪ್ರಕರಣ ದೃಢಪಟ್ಟಿದೆ. 16 ಮಂದಿ ಗುಣಮುಖರಾಗಿದ್ದಾರೆ. 63 ಸಕ್ರಿಯ ಪ್ರಕರಣಗಳಿವೆ. ಶೇ. 1.06 ಪಾಸಿಟಿವಿಟಿ ದರ ದಾಖಲಾಗಿದೆ. ಲಸಿಕೆ: ಉಡುಪಿಯಲ್ಲಿ 17 ಮಂದಿ ಮೊದಲ ಬಾರಿಗೆ, 21 …

Read More »

ನಿನ್ನೆ 1552 ಹೊಸ ಕೊರೋನಾ ಪ್ರಕರಣಗಳು ಪತ್ತೆ

ಬೆಂಗಳೂರು : ರಾಜ್ಯದಲ್ಲಿ ಐದು ತಿಂಗಳ ಬಳಿಕ ಕೊರೋನಾ ಸೋಂಕು ಪ್ರಕರಣಗಳು ಒಂದೂವರೆ ಸಾವಿರದಷ್ಟು ವರದಿಯಾಗಿವೆ. ಇದೇ ವೇಳೆ ಸಕ್ರಿಯ ಸೋಂಕು ಪ್ರಕರಣಗಳು ಎಂಟು ಸಾವಿರ ಗಡಿ ದಾಟಿವೆ. ಗುರುವಾರ 1552 ಹೊಸ ಪ್ರಕರಣಗಳು ಪತ್ತೆಯಾಗಿದ್ದು, 1384 ಮಂದಿ ಗುಣಮುಖರಾಗಿದ್ದಾರೆ. ರಾಯಚೂರಿನಲ್ಲಿ 80 ವರ್ಷದ ವೃದ್ಧರೊಬ್ಬರು ಸಾವಿಗೀಡಾಗಿದ್ದಾರೆ. ಸದ್ಯ 8,033 ಸೋಂಕಿತರು ಆಸ್ಪತ್ರೆ/ಮನೆಯಲ್ಲಿ ಚಿಕಿತ್ಸೆ, ಆರೈಕೆಯಲ್ಲಿದ್ದಾರೆ. 33 ಸಾವಿರ ಸೋಂಕು ಪರೀಕ್ಷೆಗಳು ನಡೆದಿದ್ದು, ಪಾಸಿಟಿವಿಟಿ ದರ ಶೇ 4.6 ರಷ್ಟು …

Read More »

ಸಿದ್ದರಾಮಯ್ಯ ಹಾಗೂ ನನ್ನನ್ನು ನೆನಪಿಸಿಕೊಳ್ಳದಿದ್ದರೆ ಬಿಜೆಪಿಯವರಿಗೆ ನಿದ್ದೆ ಬರುವುದಿಲ್ಲ : ಡಿಕೆಶಿ

ಬೆಂಗಳೂರು: ಸಿದ್ದರಾಮಯ್ಯ ಹಾಗೂ ನನ್ನನ್ನು ನೆನಪಿಸಿಕೊಳ್ಳದಿದ್ದರೆ ಬಿಜೆಪಿಯವರಿಗೆ ನಿದ್ದೆ ಬರುವುದಿಲ್ಲ. ಒಡೆದು ಹೋಳಾಗಲು ಕಾಂಗ್ರೆಸ್‌ ಪಕ್ಷ ಕುಂಬಳಕಾಯಿಯೂ ಅಲ್ಲ, ಮಡಿಕೆಯೂ ಅಲ್ಲ. ಬಿಜೆಪಿಯವರು ಏನೇ ಮಾಡಿದರೂ ನಮ್ಮಲ್ಲಿ ಒಡಕು ಮೂಡಿಸಲು ಸಾಧ್ಯವಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ತಿರುಗೇಟು ನೀಡಿದರು. ಇದೇ ವೇಳೆ, ಬಿಜೆಪಿಯಲ್ಲೇ ಆಂತರಿಕ ಭಿನ್ನಾಭಿಪ್ರಾಯ ಹೆಚ್ಚಾಗುತ್ತಿದೆ. ಬಿಜೆಪಿ ಸರ್ಕಾರವೇ ಮೈತ್ರಿ ಸರ್ಕಾರ ಎಂಬಂತಾಗಿದೆ. ಮುಖ್ಯಮಂತ್ರಿಗಳನ್ನು ಹೊರತುಪಡಿಸಿ ಅನೇಕ ಸಚಿವರು ಕಾಂಗ್ರೆಸ್‌ ಹಾಗೂ ಜೆಡಿಎಸ್‌ನಿಂದ ಹೋದವರು. ಆದ್ದರಿಂದ …

Read More »

ಹುಟ್ಟುಹಬ್ಬವನ್ನು ಅರ್ಥಪೂರ್ಣವಾಗಿ ಆಚರಿಸಿಕೊಂಡ ಸಮಾಜ ಸೇವಕ

ಚಿಕ್ಕಮಗಳೂರು: ಜಿಲ್ಲೆಯ ತರೀಕೆರೆಯ ಸಮಾಜ ಸೇವಕ ಹೆಚ್.ಎಂ. ಗೋಪಿಕೃಷ್ಣ ತಮ್ಮ ಹುಟ್ಟುಹಬ್ಬವನ್ನು ಅರ್ಥಪೂರ್ಣವಾಗಿ ಆಚರಿಸಿಕೊಂಡರು. ತನ್ನ 48ನೇ ವರ್ಷದ ಹುಟ್ಟುಹಬ್ಬವನ್ನು ಗೋಪಿಕೃಷ್ಣ, ತರೀಕೆರೆ ಕ್ಷೇತ್ರದ ಜನರ ಉಪಯೋಗಕ್ಕಾಗಿ ಹೈಟೆಕ್ ಆಂಬ್ಯುಲೆನ್ಸ್ ಉಚಿತವಾಗಿ ನೀಡಿದರು. ಸರ್ಕಾರಿ ಶಾಲೆಯಲ್ಲಿ ಓದುತ್ತಿರುವ 20 ಸಾವಿರ ವಿದ್ಯಾರ್ಥಿಗಳಿಗೂ ನೋಟ್ ಬುಕ್ ಕಿಟ್, 500 ಮಂದಿ ಬೀದಿ ಬದಿ ವ್ಯಾಪಾರಿಗಳಿಗೆ ಛತ್ರಿ, ಆಟೋ ಚಾಲಕರಿಗೆ ಸಮವಸ್ತ್ರ ವಿತರಣೆ ಮಾಡಿದರು. ಜನಸಾಮಾನ್ಯರ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಕೊರೋನ ವೇಳೆಯಲ್ಲೂ ಗೋಪಿಕೃಷ್ಣ …

Read More »