Breaking News

BigTv News

ದಾವಣಗೆರೆ: ಮನೆಗಳ್ಳತನ ಪ್ರಕರಣದ ಆರೋಪಿಯಿಂದ ₹ 6 ಲಕ್ಷ ಮೌಲ್ಯದ ಸ್ವತ್ತು ವಶ

ದಾವಣಗೆರೆ ವಿದ್ಯಾನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಮನೆಗಳ್ಳತನ ಪ್ರಕರಣವನ್ನು ಭೇದಿಸಿರುವ ಪೊಲೀಸರು, ಮಧ್ಯಪ್ರದೇಶದ ಖಂಡ್ವಾ ಜಿಲ್ಲೆಯ ಜೀತ್ ಸಿಂಗ್ ಟಾಂಕ್ ಎಂಬ ಆರೋಪಿಯನ್ನು ಬಂಧಿಸಿದ್ದಾರೆ. ಬಂಧಿತನಿಂದ ಸುಮಾರು ₹6 ಲಕ್ಷ ಮೌಲ್ಯದ 2 ಕೆ.ಜಿ. 900 ಗ್ರಾಂ ಬೆಳ್ಳಿ ಸಾಮಗ್ರಿ ಹಾಗೂ ಕೃತ್ಯಕ್ಕೆ ಬಳಸಿದ್ದ ಕಾರನ್ನು ಜಪ್ತಿ ಮಾಡಿದ್ದಾರೆ. ಜೂನ್ 14ರಂದು ಮನೆಯ ಹಿಂಬಾಗಿಲನ್ನು ಕಬ್ಬಿಣದ ಆಯುಧದಿಂದ ಮುರಿದು, ಮಲಗುವ ಕೊಠಡಿಯಲ್ಲಿ ಇಟ್ಟಿದ್ದ ಬೆಳ್ಳಿ ಆಭರಣಗಳನ್ನು ಕಳವು ಮಾಡಲಾಗಿತ್ತು. …

Read More »

ನಗರದಲ್ಲಿ ಆಂಧ್ರ ವಿದ್ಯಾರ್ಥಿಯ ಹತ್ಯೆ – ಬೈಕ್ ಸಹಿತ ಜೀವಂತ ದಹನ!

ಆನೇಕಲ್: ಕೆಲಸ ಹುಡುಕಿಕೊಂಡು ಬೆಂಗಳೂರಿಗೆ ಬಂದಿದ್ದ ಆಂಧ್ರಪ್ರದೇಶ ಮೂಲದ 25 ವರ್ಷದ ಡಿಪ್ಲೊಮಾ ವಿದ್ಯಾರ್ಥಿ ವಂಶೀ ಕೃಷ್ಣ ಅವರನ್ನು ದುಷ್ಕರ್ಮಿಗಳು ಬೈಕ್ ಸಮೇತ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಸರ್ಜಾಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಉದ್ಯೋಗದ ಭರವಸೆಯೊಂದಿಗೆ ಸ್ನೇಹಿತನ ಕರೆಗೆ ಬೆಂಗಳೂರಿಗೆ ಬಂದಿದ್ದ ವಂಶೀ ಕೃಷ್ಣ, ಸ್ನೇಹಿತನ ಮೊಬೈಲ್ ಸ್ವಿಚ್ ಆಫ್ ಆಗಿದ್ದ ಹಿನ್ನೆಲೆಯಲ್ಲಿ ಮತ್ತೊಬ್ಬ ಸ್ನೇಹಿತನಿಗೆ ಕೊನೆಯ ಬಾರಿ ಕರೆ ಮಾಡಿದ್ದರು. …

Read More »

ಬೆಂಗಳೂರು ನಡು ರಸ್ತೆಯಲ್ಲೇ ಹೊತ್ತಿ ಉರಿದ ಸಾರಿಗೆ ಬಸ್: ತಪ್ಪಿದ ಭಾರಿ ದುರಂತ!

ಬೆಂಗಳೂರು: ಜ್ಞಾನಭಾರತಿ ಮೆಟ್ರೋ ನಿಲ್ದಾಣದ ಬಳಿ ಚಲಿಸುತ್ತಿದ್ದ ಕೇರಳ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (KSRTC) ಬಸ್‌ಗೆ ಏಕಾಏಕಿ ಬೆಂಕಿ ಹೊತ್ತಿಕೊಂಡು ಸಂಪೂರ್ಣವಾಗಿ ಸುಟ್ಟುಹೋದ ಘಟನೆ ನಡೆದಿದೆ. ಇಂಜಿನ್ ಭಾಗದಲ್ಲಿ ತಾಂತ್ರಿಕ ದೋಷ ಅಥವಾ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಕಾಣಿಸಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಘಟನೆಯ ವೇಳೆ ಬಸ್‌ನಲ್ಲಿ ಇಬ್ಬರು ಪ್ರಯಾಣಿಕರು, ಚಾಲಕ ಮತ್ತು ನಿರ್ವಾಹಕರಿದ್ದು, ಚಾಲಕ ಸಮಯಪ್ರಜ್ಞೆಯಿಂದ ಬಸ್ ನಿಲ್ಲಿಸಿದ್ದರಿಂದ ಎಲ್ಲರೂ ಯಾವುದೇ ಗಾಯಗಳಿಲ್ಲದೆ ಸುರಕ್ಷಿತವಾಗಿ ಹೊರಬಂದಿದ್ದಾರೆ. ಮಾಹಿತಿ ತಿಳಿಯುತ್ತಿದ್ದಂತೆ …

Read More »

ಕ್ವಾರಿ ದುರಂತದಲ್ಲಿ 7 ಕಾರ್ಮಿಕರು ಸಾವು: ಮೂವರು ಆರೋಪಿಗಳು ಅರೆಸ್ಟ್

ಬೆಂಗಳೂರು: ದಕ್ಷಿಣ ತಾಲೂಕಿನ ಮಾದಪಟ್ಟಣ ಗ್ರಾಮದ ಕಾವೇರಿ ಕ್ವಾರಿಯಲ್ಲಿ ಬೃಹತ್ ಕಲ್ಲುಬಂಡೆ ಬಿದ್ದು 7 ಕಾರ್ಮಿಕರು ಮೃತಪಟ್ಟ ಪ್ರಕರಣದಲ್ಲಿ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರನ್ನು ಸಾಯಿ ರಾಮ್ ಕ್ರಷರ್ ಮಾಲೀಕ ಪಾಂಡುರಂಗ, ಕ್ವಾರಿ ಇನ್‌ಚಾರ್ಜ್ ಲೋಕೇಶ್ ಹಾಗೂ ಸ್ಥಳೀಯ ಇನ್‌ಚಾರ್ಜ್ ರಾಜು ಎಂದು ಗುರುತಿಸಲಾಗಿದೆ. ಕಾರ್ಮಿಕ ಗೋಪಿಕೃಷ್ಣನ್ ನೀಡಿದ ದೂರಿನ ಮೇರೆಗೆ ಭಾರತೀಯ ನ್ಯಾಯ ಸಂಹಿತೆ (BNS) ಅಡಿ ಪ್ರಕರಣ ದಾಖಲಾಗಿತ್ತು. ಘಟನೆಯಲ್ಲಿ ಏಳು ಕಾರ್ಮಿಕರು ಮೃತಪಟ್ಟಿದ್ದು, ಕಾವೇರಿ …

Read More »

ಮೈಸೂರು| ಪತಿ ಕೊಲೆ; ಪತ್ನಿ ಸೇರಿ ಆರು ಆರೋಪಿಗಳ ಬಂಧನ

ಮೈಸೂರು: ಕುವೆಂಪುನಗರದ ಹುಡ್ಕೋ ಬಡಾವಣೆಯಲ್ಲಿ ನಡೆದ ನಿತ್ಯಾನಂದ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪತ್ನಿ ಸೇರಿ ಆರು ಆರೋಪಿಗಳನ್ನು ಪೊಲೀಸರು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ನಿತ್ಯಾನಂದ ಮದ್ಯಪಾನ ಮಾಡಿ ಕಿರುಕುಳ ನೀಡುತ್ತಿದ್ದ ಹಿನ್ನೆಲೆಯಲ್ಲಿ ಪತ್ನಿ ಸುಶೀಲ, ಸಂಬಂಧಿಕರೊಂದಿಗೆ ಸೇರಿ ಕೊಲೆ ಸಂಚು ರೂಪಿಸಿದ್ದು, ಜೂನ್ 29ರ ಮಧ್ಯರಾತ್ರಿ ಕತ್ತು ಹಿಸುಕಿ ಹತ್ಯೆ ಮಾಡಿದ್ದರು. ಬಳಿಕ ಹೃದಯಾಘಾತದಿಂದ ಮೃತಪಟ್ಟಿದ್ದಾರೆ ಎಂದು ನಂಬಿಸಲು ಯತ್ನಿಸಿದ್ದರು. ಅಂತ್ಯಸಂಸ್ಕಾರದ ವೇಳೆ ಮೃತನ ಕುತ್ತಿಗೆಯಲ್ಲಿದ್ದ ಗಾಯದ ಗುರುತುಗಳನ್ನು …

Read More »

ಬೈಕಂಪಾಡಿ ಹೆದ್ದಾರಿ ದರೋಡೆ ಪ್ರಕರಣ: 16 ಆರೋಪಿಗಳ ಪೈಕಿ ಮೂವರ ಬಂಧನ

ಮಂಗಳೂರು: ಚಿನ್ನದ ವ್ಯಾಪಾರಿಯನ್ನು ಅಡ್ಡಗಟ್ಟಿ ₹23.10 ಲಕ್ಷ ಮೌಲ್ಯದ ಚಿನ್ನಾಭರಣ ದರೋಡೆ ಮಾಡಿದ ಪ್ರಕರಣದಲ್ಲಿ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಪ್ರಕರಣದಲ್ಲಿ ಒಟ್ಟು 16 ಮಂದಿ ಭಾಗಿಯಾಗಿದ್ದು, ಉಳಿದ ಆರೋಪಿಗಳಿಗಾಗಿ ಶೋಧ ಮುಂದುವರಿದಿದೆ. ಜೂನ್ 29ರಂದು ಬೈಕಂಪಾಡಿ ರಾಷ್ಟ್ರೀಯ ಹೆದ್ದಾರಿಯಲ್ಲಿ ವ್ಯಾಪಾರಿ ವಿಕಾಸ್ ಧನವಡೆ ಅವರ ಕಾರನ್ನು ಅಡ್ಡಗಟ್ಟಿದ ಆರೋಪಿಗಳು ತಲವಾರು ತೋರಿಸಿ ಬೆದರಿಸಿ, ಕುಟುಂಬದವರನ್ನು ಅಪಹರಿಸಿ ಕೆಲ ಕಿಲೋಮೀಟರ್ ದೂರದಲ್ಲಿ ಬಿಟ್ಟು 180 ಗ್ರಾಂ ಚಿನ್ನಾಭರಣ, ಕಾರು ಹಾಗೂ …

Read More »

*ಸಿಸಿಬಿ ಪೊಲೀಸರ ಕಾರ್ಯಾಚರಣೆ: ಹೆರಾಯಿನ್ ಸಾಗಿಸುತ್ತಿದ್ದ ಇಬ್ಬರ ಬಂಧನ*

ಬೆಳಗಾವಿಯ ಸಿಸಿಬಿ ವಿಭಾಗದ ಪೊಲೀಸರು ಭರ್ಜರಿ ಕಾರ್ಯಾಚರಣೆ ಮಾಡಿ ಹೆರಾಯಿನ್ ಸಾಗಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಅರೆಸ್ಟ್ ಮಾಡಿದ್ದಾರೆ. ಬೆಳಗಾವಿ ನಗರದ ಕಂಗ್ರಾಳಿ ಕೆ ಹೆಚ್ ಗ್ರಾಮದ ಗಜಾನನ ಪಾಟೀಲ್ ಹಾಗೂ ರಾಮದೇವ ಗಲ್ಲಿಯ ವಿನಾಯಕ ಖಂಡಾಳೆ ಬಂಧಿತರು ಎಂದು ಗುರುತಿಸಲಾಗಿದೆ. ಆರೋಪಿಗಳಿಬ್ಬರು ಎಪಿಎಂಸಿ ಪೊಲೀಸ್ ಠಾಣಾ ವ್ಯಾಪ್ತಿಯ ಹಣ್ಣಿನ ಮಾರುಕಟ್ಟೆಯ ಕಾಂಪ್ಲೇಕ್ಸ್ ಬಳಿ ಹೆರಾಯಿನ್ ಸಾಗಾಟ ಮಾಡುತ್ತಿದ್ದ ಸಮಯದಲ್ಲಿ ಸಿಸಿಬಿ ವಿಭಾಗದ ಪಿಐ ಮಂಜುನಾಥ ನಾಯಿಕ ಅವರ ತಂಡ …

Read More »

ಹಾವೇರಿ : ಕ್ಷುಲ್ಲಕ ಕಾರಣಕ್ಕಾಗಿ ೪ ಜನ ಮುಸಲ್ಮಾನರಿಂದ ಹಿಂದೂ ಅಂಗಡಿಕಾರನ ಕೊಲೆ!

ಹಾವೇರಿ – ಜಿಲ್ಲೆಯ ರಟ್ಟಿಹಳ್ಳಿಯಲ್ಲಿ ಕ್ಷುಲ್ಲಕ ಕಾರಣಕ್ಕಾಗಿ ಮುಸಲ್ಮಾನ್ ಯುವಕರು ಹಿಂದೂ ವ್ಯಾಪಾರಿಯೊಬ್ಬರಿಗೆ ಅಮಾನುಷವಾಗಿ ಥಳಿಸಿದ್ದಾರೆ. ಅವರ ಎದೆಗೆ ಕಲ್ಲಿನಿಂದ ಜಜ್ಜಿ ಹಾಗೂ ಗುಪ್ತಾಂಗದ ಮೇಲೆ ಹಲ್ಲೆ ನಡೆಸಿ ಕೊಲೆ ಮಾಡಿದ್ದಾರೆ. ಮೃತ ವ್ಯಾಪಾರಿಯ ಹೆಸರು ಶಿವಾಜಿರಾವ ಬಾಯರೋಜಿ (ವಯಸ್ಸು ೬೦ ವರ್ಷ) ಆಗಿದೆ. ರಸ್ತೆ ಬದಿಯಲ್ಲಿ​ಶಿವಾಜಿರಾವ್ ಅವರ ಒಂದು ಸಣ್ಣ ಅಂಗಡಿ ಇತ್ತು. ಜುಲೈ ೧ ರ ರಾತ್ರಿ ಅವರ ಮಗ ಭರತ್ ಅಂಗಡಿ ನೋಡಿಕೊಳ್ಳುತ್ತಿದ್ದನು. ಈ ಸಮಯದಲ್ಲಿ …

Read More »

ಚುಡಾಯಿಸಿದ್ದಕ್ಕೆ ಕೆನ್ನೆಗೆ ಬಾರಿಸಿದ್ದಳು ಎಂದು ಸೇಡು ತೀರಿಸಿಕೊಳ್ಳಲು ಮನೆಗೆ ನುಗ್ಗಿ ಯುವತಿಗೆ ಚಾಕು ಇರಿತ

ಚಿಕ್ಕಬಳ್ಳಾಪುರ: ಯುವತಿಯನ್ನು ಚುಡಾಯಿಸಿದ್ದಕ್ಕೆ ಸಾರ್ವಜನಿಕವಾಗಿ ಅವಮಾನಗೊಂಡಿದ್ದ ಸೇಡಿನಿಂದ ಮನೆಗೆ ನುಗ್ಗಿ ಚಾಕುವಿನಿಂದ ಹಲ್ಲೆ ನಡೆಸಿದ ಪ್ರಕರಣವನ್ನು ಚಿಂತಾಮಣಿ ನಗರ ಪೊಲೀಸರು ಭೇದಿಸಿ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರನ್ನು ಲಕ್ಷ್ಮೀ, ಮಂಜುನಾಥ ಹಾಗೂ ಜಬಿವುಲ್ಲಾ ಎಂದು ಗುರುತಿಸಲಾಗಿದೆ. ಪ್ರಮುಖ ಆರೋಪಿಗಳಾದ ಕಾರ್ತಿಕ್ ಮತ್ತು ವಿನೋದ್ ತಲೆಮರೆಸಿಕೊಂಡಿದ್ದು, ಅವರ ಬಂಧನಕ್ಕೆ ವಿಶೇಷ ತಂಡಗಳು ಶೋಧ ಕಾರ್ಯ ಮುಂದುವರಿಸಿವೆ. ಆರೋಪಿಗಳು ಯುವತಿ ಮೇಘನಾ ಅವರನ್ನು ಚುಡಾಯಿಸಿದ್ದು, ಇದನ್ನು ಪ್ರಶ್ನಿಸಿ ಮೇಘನಾ ಸಾರ್ವಜನಿಕವಾಗಿ ಆರೋಪಿಗಳ ಕೆನ್ನೆಗೆ …

Read More »

ಪೋಕ್ಸೊ ಆರೋಪಿ ಠಾಣೆಯಿಂದ ಎಸ್ಕೇಪ್ ಪ್ರಕರಣ, ಮೂವರು ಸಿಬ್ಬಂದಿ ಅಮಾನತು

ಠಾಣೆಯಿಂದ ಪೋಕ್ಸೊ ಆರೋಪಿ ಎಸ್ಕೇಪ್: ನಿರ್ಲಕ್ಷ್ಯಕ್ಕೆ ಮೂವರು ಪೊಲೀಸ್ ಸಿಬ್ಬಂದಿ ಸಸ್ಪೆಂಡ್..! ಪೊಲೀಸರ ನಿದ್ರೆಗೆ ಆರೋಪಿ ಪರಾರಿ: ಕಲಬುರಗಿಯಲ್ಲಿ ಮೂವರಿಗೆ ಅಮಾನತು ಶಿಕ್ಷೆ..! ಕಲಬುರಗಿ ಜಿಲ್ಲೆಯ ಅಫಜಲಪುರ ಪೊಲೀಸ್ ಠಾಣೆಯಿಂದ ಪೋಕ್ಸೊ ಪ್ರಕರಣದ ಆರೋಪಿ ಪರಾರಿಯಾದ ಹಿನ್ನೆಲೆಯಲ್ಲಿ ಕರ್ತವ್ಯ ಲೋಪ ಆರೋಪದಡಿ ಮೂವರು ಪೊಲೀಸ್ ಸಿಬ್ಬಂದಿಯನ್ನು ತಕ್ಷಣದಿಂದ ಅಮಾನತುಗೊಳಿಸಲಾಗಿದೆ. ಈ ಆದೇಶವನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಡ್ಡೂರು ಶ್ರೀನಿವಾಸಲು ಹೊರಡಿಸಿದ್ದಾರೆ. ಅಮಾನತುಗೊಂಡವರಲ್ಲಿ ಅಂದಿನ ಠಾಣಾಧಿಕಾರಿ ರವಿ, ಸೆಂಟ್ರಿ ಪ್ರಶಾಂತ್ ಹಾಗೂ …

Read More »