Breaking News

BigTv News

2023ಕ್ಕೆ ಕುಮಾರಸ್ವಾಮಿ ಸಿಎಂ ಆಗ್ತಾರೆ : ಸಿ.ಎಂ.ಇಬ್ರಾಹಿಂ

ರಾಮನಗರ:  ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ  ಮಾತನಾಡಿದ್ದು, ಮುಂದಿನ ಚುನಾವಣೆಯಲ್ಲಿ ಜೆಡಿಎಸ್  ಸ್ವತಂತ್ರವಾಗಿ ಅಧಿಕಾರಕ್ಕೆ ಬರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ದೇವೇಗೌಡರು  ಪ್ರಧಾನಿಗಳಾಗಿ ಕೆಂಪು ಕೋಟೆ  ಮೇಲೆ ಬಾವುಟ ಹಾರಿಸಿದರು. ಈಗ ದೇವೇಗೌಡರಿಗೆ 90 ವರ್ಷ ಆಗಿದೆ. ಆದ್ರೆ ಅವರಿಗೆ ರಾಜ್ಯದ ಚಿಂತೆ. ಕಾಂಗ್ರೆಸ್‌ನವರಿಗೆ  ಸೋನಿಯಾ ಗಾಂಧಿ ಚಿಂತೆ, ಬಿಜೆಪಿ ಅವರಿಗೆ ಮೋದಿ ಚಿಂತೆ ಎಂದು ವ್ಯಂಗ್ಯ ಮಾಡಿದರು. JDSನವರಿಗೆ ರೈತರ ಹಾಗೂ ಕನ್ನಡ ನಾಡಿನ  ಜನತೆ ಚಿಂತೆ ಎಂದು ದಳಪತಿಗಳನ್ನು …

Read More »

ಕಾಂಗ್ರೆಸ್ ನಾಯಕರಿಗೆ ಟಾಂಗ್ ಕೊಟ್ಟ ಯಡಿಯೂರಪ್ಪ

ಬೆಂಗಳೂರು: ಕಾಂಗ್ರೆಸ್ ಪಕ್ಷದಲ್ಲಿ ನಡೆಯುತ್ತಿರುವ ಮುಖ್ಯಮಂತ್ರಿ ಪಟ್ಟದ ರೇಸ್ ಗೆ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಟಾಂಗ್ ನೀಡಿದ್ದಾರೆ. ಕಾಂಗ್ರೆಸ್ ನಾಯಕರು ಕೂಸು ಹುಟ್ಟುವ ಮೊದಲೇ‌ ಕುಲಾವಿ ಹೊಲಿಸುತ್ತಿದ್ದಾರೆ ಎಂದು ವ್ಯಂಗ್ಯವಾಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಕಾಂಗ್ರೆಸ್ ನವರಿಗೆ ಒಂದು ಮಾತು ಹೇಳಲು ಇಚ್ಚೆ ಪಡುತ್ತೇನೆ. ಕಾಂಗ್ರೆಸ್ ನಾಯಕರು ಕೂಸು ಹುಟ್ಟುವ ಮೊದಲೇ‌ ಕುಲಾವಿ ಹೊಲಿಸಿದ ರೀತಿಯಲ್ಲಿ ನಾನು ಮುಖ್ಯಮಂತ್ರಿ, ನೀನು ಮುಖ್ಯಮಂತ್ರಿ ಎಂದು ಬಡಿದಾಡುತ್ತಿದ್ದಾರೆ. ಯಾವ ಕಾರಣಕ್ಕೂ ಅವರು ಮುಖ್ಯಮಂತ್ರಿಯಾಗಲು …

Read More »

ಶೀಘ್ರವೇ ಮಿನಿ ಸಚಿವ ಸಂಪುಟ ವಿಸ್ತರಣೆ : ಸಿಎಂ

ಬೆಂಗಳೂರು: ರಾಜ್ಯ ಬಿಜೆಪಿ ನೇತೃತ್ವದ ಸರ್ಕಾರದಲ್ಲಿ  ಸಚಿವ ಸಂಪುಟ ವಿಸ್ತರಣೆ ಆಗಲಿದೆ ಎಂಬುದಾಗಿ ಹೇಳಲಾಗುತ್ತಿತ್ತು. ಆದ್ರೇ ಶೀಘ್ರವೇ ಮಿನಿ ಸಚಿವ ಸಂಪುಟ ವಿಸ್ತರಣೆ ನಡೆಯಲಿದೆ ಎನ್ನಲಾಗುತ್ತಿದೆ. ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣದಲ್ಲಿ ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ  ಬಗ್ಗೆ ನ್ಯಾಯಾಲಯಕ್ಕೆ ಆತ್ಮಹತ್ಯೆ ಪ್ರಚೋಜನೆ ಸಂಬಂಧ ಯಾವುದೇ ಸಾಕ್ಷಾಯಾಧಾರಗಳಿಲ್ಲ ಎಂಬುದಾಗಿ ಉಲ್ಲೇಖಿಸಿ ಬಿ ರಿಪೋರ್ಟ್ ಸಲ್ಲಿಸಲಾಗಿದೆ. ಹೀಗಾಗಿ ಅವರಿಗೆ ಪ್ರಕರಣದಲ್ಲಿ ಕ್ಲೀನ್ ಚಿಟ್ ನೀಡಲಾಗಿದೆ. ಈ ಹಿನ್ನಲೆಯಲ್ಲಿ ಮಾಜಿ ಸಚಿವ …

Read More »

ಕುಡಿತ ಮತ್ತಿನಲ್ಲಿ ವೇಟರ್ ಗೆ ಚಾಕುವಿನಿಂದ ಇರಿದು ಕೊಲೆ

ಮೈಸೂರು : ಕುಡಿತ ಮತ್ತಿನಲ್ಲಿ ಯುವಕನೋಬ್ಬ ಬಾರ್ ವೇಟರ್ ನನ್ನೇ ಚಾಕುವಿನಿಂದ ಇರಿದು ಕೊಲೆಗೈದ ಘಟನೆ ನಾಚನಹಳ್ಳಿ ಪಾಳ್ಯದ ಮಾನಂದವಾಡಿ ರಸ್ತೆಯಲ್ಲಿರುವ ಬಾರ್‌ನಲ್ಲಿ ಬುಧವಾರ ರಾತ್ರಿ ನಡೆದಿದೆ. ಬಾರ್‌ಗೆ ಬಂದ ಗ್ರಾಹಕ ಹಾಗೂ ವೇಟರ್‌ನ ನಡುವೆ ಮಾತಿಗೆ ಮಾತು ಬೆಳೆದಿದೆ. ಗ್ರಾಹಕ ವೇಟರ್‌ ನಿಗೆ ಚಾಕುವಿನಿಂದ ಇರಿದಿದ್ದಾನೆ ಪರಿಣಾಮ ರಕ್ತಸ್ರಾವವಾಗಿ ವೇಟರ್ ಸ್ಥಳದಲ್ಲೇ ಬಿದ್ದು ಮೃತ‍ಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಘಟನೆ ಕುರಿತು ವಿದ್ಯಾರಣ್ಯಪುರಂ ಠಾಣೆಯಲ್ಲಿ ದೂರು ದಾಖಲಾಗಿದೆ.

Read More »

ಜುಲೈ 20ರಂದು ಚಾಮುಂಡೇಶ್ವರಿಯ ವರ್ಧಂತಿ

ಮೈಸೂರು: ಆಷಾಢ ಮಾಸದಲ್ಲಿ ಮೈಸೂರಿನ ನಾಡದೇವತೆ ಚಾಮುಂಡೇಶ್ವರಿ ದೇಗುಲದಲ್ಲಿ ವಿಶೇಷ ಪೂಜೆ-ಪುನಸ್ಕಾರಗಳಿಂದ ತಿಂಗಳಿಡೀ ಸಂಭ್ರಮ ಕಳೆಕಟ್ಟುತ್ತಿರುತ್ತದೆ. ಆಷಾಢ ಶುಕ್ರವಾರವಂತೂ ದೇವಿಗೆ ವಿಶೇಷ ಪೂಜೆ ಸಲ್ಲಿಸಲು ಭಕ್ತರು ತುಂಬಿತುಳುಕುತ್ತಿರುತ್ತಾರೆ. ಇಂದು ಜುಲೈ 20ರಂದು ಚಾಮುಂಡೇಶ್ವರಿಯ ವರ್ಧಂತಿ. ಮೈಸೂರಿನ ಚಾಮುಂಡಿಬೆಟ್ಟದಲ್ಲಿ ವರ್ಧಂತಿ ಸಂಭ್ರಮ, ಸಡಗರ ಮನೆ ಮಾಡಿದೆ. ತಾಯಿ ಚಾಮುಂಡೇಶ್ವರಿ ಉತ್ಸವಮೂರ್ತಿ ಮೆರವಣಿಗೆ ಕಣ್ತುಂಬಿಕೊಳ್ಳಲು ಭಕ್ತಸಾಗರ ಕಾತುರದಿಂದ ಕಾಯುತ್ತಿದೆ. ರಾಜರ ಚಿನ್ನದ ಪಲ್ಲಕ್ಕಿಗೆ ಹೂವಿನ ಅಲಂಕಾರ ಮಾಡಲಾಗಿದೆ. ದೇವಸ್ಥಾನ ಸುತ್ತ ಮೆರವಣಿಗೆ ನಡೆಯಲಿದ್ದು …

Read More »

ಹವಾಮಾನ ಇಲಾಖೆಯಿಂದ ಮಹತ್ವದ ಮುನ್ಸೂಚನೆ

ಕೆಲವು ಕಡೆ ಸಣ್ಣ ಪ್ರಮಾಣದಲ್ಲಿ ಮಳೆಯನ್ನು  ಹೊರತುಪಡಿಸಿದ್ರೆ, ಬಹುತೇಕ ಭಾಗಗಳಲ್ಲಿ ಒಣ ಹವೆ ಇರಲಿದೆ. ಬೆಳಗ್ಗೆ 10 ಗಂಟೆಯ ನಂತರ ಬಿಸಿಲು ಏರಿಕೆಯಾಗಲಿದೆ. ಮಲೆನಾಡು, ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಜಿಲ್ಲೆಗಳಲ್ಲಿಯೂ ಮಳೆಯ ಪ್ರಮಾಣ ಇಳಿಕೆಯಾಗಿದೆ. ಆದ್ರೆ ಮಹಾರಾಷ್ಟ್ರದ ಪಶ್ಚಿಮ ಘಟ್ಟಗಳಲ್ಲಿ  ಮಳೆ ಮುಂದುವರಿದಿದೆ. ಇನ್ನೂ ನದಿಗಳ  ಅಬ್ಬರ ತಗ್ಗಿದ್ದು, ಶಾಂತವಾಗಿವೆ. ಮುಳುಗಡೆಯಾಗಿದ್ದ ಕೆಳಹಂತದ ಸೇತುವೆಗಳು ಸಂಚಾರಕ್ಕೆ ಮುಕ್ತವಾಗುತ್ತಿವೆ. ರಾಜಧಾನಿ …

Read More »

ಡಿಕೆಶಿಗೆ ಪರೋಕ್ಷವಾಗಿ ಟಾಂಗ್ ನೀಡಿದ ಮಹದೇವಪ್ಪ

ಮೈಸೂರು: ‘ಯಾರ‍್ಯಾರೋ ಮುಖ್ಯಮಂತ್ರಿ ಹುದ್ದೆ ಕೇಳುತ್ತಿದ್ದಾರೆ. ಆ ಹುದ್ದೆ ಎಂದರೆ ಎಲ್ಲರಿಗೂ ಹಗುರವಾಗಿ ಹೋಗಿದೆ’ ಎಂದು ವಿಧಾನಸಭೆಯ ವಿರೋಧ ‍ಪಕ್ಷದ ನಾಯಕ ಸಿದ್ದರಾಮಯ್ಯ ಆಪ್ತರ ಬಳಗದಲ್ಲಿ ಗುರುತಿಸಿಕೊಂಡಿರುವ ಕಾಂಗ್ರೆಸ್ ಮುಖಂಡ ಡಾ.ಎಚ್‌.ಸಿ.ಮಹದೇವಪ್ಪ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಅವರಿಗೆ ಪರೋಕ್ಷವಾಗಿ ಟಾಂಗ್ ನೀಡಿದರು. ಇಲ್ಲಿ ಪತ್ರಕರ್ತರೊಂದಿಗೆ ಬುಧವಾರ ಮಾತನಾಡಿದ ಅವರು, ‘ಆ ಹುದ್ದೆಯ ಗೌರವ ಬೇರೆಯೇ ಇದೆ. ಹೋರಾಟ, ಸಾಮಾಜಿಕ ಬದ್ಧತೆ, ರಾಜಕೀಯ ಜೀವನದ ಅನುಭವ ಎಲ್ಲವೂ ಬೇಕು’ ಎಂದು ಹೇಳಿದರು. …

Read More »

ನಟ ಯಲಹಂಕ ಬಾಲಾಜಿ ನಿಧನ

ಬೆಂಗಳೂರು: ಕಿರುತೆರೆಯ ಹಲವು ಧಾರಾವಾಹಿಗಳಲ್ಲಿ ನಟಿಸಿ ಪ್ರೇಕ್ಷಕರ ಮನ ಗೆದ್ದಿದ್ದ ಹಿರಿಯ ನಟ ಯಲಹಂಕ ಬಾಲಾಜಿ ನಿಧನರಾಗಿದ್ಧಾರೆ. ನ್ಯೂಮೋನಿಯಾದಿಂದ ಬಳಲುತ್ತಿದ್ದ ಹಿರಿಯ ನಟ ಬಾಲಾಜಿ ಕೆಲ ದಿನಗಳಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಬುಧವಾರ ಕೊನೆಯುಸಿರೆಳೆದಿದ್ದಾರೆ. ಹಿರಿಯ ನಟ ಬಾಲಾಜಿ ರಾಜಕೀಯ ಕ್ಷೇತ್ರದಲ್ಲಿಯೂ ತೊಡಗಿಕೊಂಡಿದ್ದರು. ಹಿರಿಯ ಕಲಾವಿದನ ಅಗಲಿಕೆಗೆ ಸ್ಯಾಂಡಲ್​ವುಡ್ ನಟ-ನಟಿಯರು ಸಂತಾಪ ಸೂಚಿಸಿದ್ದಾರೆ.

Read More »

12 ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರ ನಾಮನಿರ್ದೇಶನ ರದ್ದು

ಬೆಂಗಳೂರು : ಇತ್ತೀಚೆಗಷ್ಟೇ ಕೆಲವು ನಿಗಮ ಮಂಡಳಿ ಅಧ್ಯಕ್ಷರ ನೇಮಕಾತಿಯನ್ನು ರದ್ದುಪಡಿಸಿದ್ದ ರಾಜ್ಯ ಸರ್ಕಾರ ಇದೀಗ 12 ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರ ನಾಮನಿರ್ದೇಶನವನ್ನು ರದ್ದುಪಡಿಸಿದೆ. ನಗರಾಭಿವೃದ್ಧಿ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಲತಾ.ಕೆ ಅವರು ಅಧಿಸೂಚನೆ ಹೊರಡಿಸಿದ್ದು, ಇಂದು ಒಟ್ಟು 12 ನಗರಾಭಿವೃದ್ಧಿ ಪ್ರಾಧಿಕಾರಗಳ ಅಧ್ಯಕ್ಷರ ನಾಮನಿರ್ದೇಶನವನ್ನು ರದ್ದುಪಡಿಸಿದ್ದಾರೆ.

Read More »

ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಸೆಲ್ಫಿ ವಿಡಿಯೋ ಮಾಡಿ ನದಿಗೆ ಹಾರಿದ ಯುವಕ

ಗದಗ: ಕೌಟುಂಬಿಕ ಸಮಸ್ಯೆ ಹಿನ್ನೆಲೆ ವಿಡಿಯೋ ಮಾಡಿ ಯುವಕನೊಬ್ಬ ತುಂಗಭದ್ರಾ ನದಿಗೆ ಹಾರಿದ ಘಟನೆ ನಡೆದಿದೆ. ಕೊರ್ಲಹಳ್ಳಿ‌ ಮತ್ತು ಮದಲಗಟ್ಟಿ ಮಧ್ಯದ ಸೇತುವೆಯಿಂದ ಯುವಕ ನದಿಗೆ ಹಾರಿದ್ದಾನೆ ಎನ್ನಲಾಗಿದೆ. ಮುಂಡರಗಿ ತಾಲೂಕಿನ ತುಂಗಭದ್ರ ನದಿಗೆ ಅಡ್ಡಲಾಗಿ ಕಟ್ಟಲಾದ ಸೇತುವೆಗೆ ಜಿಗಿದು ನಾನು ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ವಿಡಿಯೋ ಮಾಡಿ ತುಂಬಿ ಹರಿಯುತ್ತಿರುವ ನದಿಗೆ ಯುವಕ ಹಾರಿದ್ದಾನೆ ಎನ್ನಲಾಗುತ್ತಿದೆ. ವಿಡಿಯೋದಲ್ಲಿ ಟೂರ್ನಮೆಂಟ್ ನಲ್ಲಿ ಆಡಿ ಜವಾಬ್ದಾರಿ ಸಿಕ್ಕಿಲ್ಲ ಅಂತಾ ಹೇಳಿರೋ ಯುವಕ ಹೇಳಿದ್ದಾನೆ. …

Read More »