Breaking News

BigTv News

ಮಾಜಿ ಸಿಎಂ ವಿರುದ್ಧ ಅವಹೇಳನಕಾರಿ ಪೋಸ್ಟ್ : ಪ್ರಕರಣ ದಾಖಲು

ಮೈಸೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಅವಹೇಳನಕಾರಿ ಪದ ಬಳಸಿ ಪೋಸ್ಟ್ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಹುಣಸೂರು ತಾಲೂಕಿನ ಯುವ ಕಾಂಗ್ರೆಸ್ ಘಟಕದಿಂದ ಮೈಸೂರು ಜಿಲ್ಲೆ ಹುಣಸೂರು ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ. ಗೋವಿಂದ ನಾಯಕ ಎಂಬುವವರ ವಿರುದ್ಧ ದೂರು ದಾಖಲಾಗಿದೆ. ಇದೇ ನನ್ನ ಕೊನೆಯ ಚುನಾವಣೆ ಎಂದು ಸಿದ್ದರಾಮಯ್ಯ ಹೇಳಿದ್ದರು. ಅವರ ಹೇಳಿಕೆಯ ಬಗ್ಗೆ ಜಾಲತಾಣದಲ್ಲಿ ಹುಣಸೂರಿನ ಕಲ್ಕುಣಿಕೆಯ ನಿವಾಸಿ ಗೋವಿಂದ ನಾಯಕ ಕಮೆಂಟ್ ಮಾಡಿದ್ದ. ಅವಹೇಳನಕಾರಿ …

Read More »

ಇಬ್ಬರು ವಿದ್ಯಾರ್ಥಿಗಳು ಆತ್ಮಹತ್ಯೆ : ಶಿಕ್ಷಕಿ ಬಂಧನ

ಚೆನ್ನೈ: 12 ನೇ ತರಗತಿ ಓದುತ್ತಿದ್ದ ಇಬ್ಬರು ವಿದ್ಯಾರ್ಥಿಗಳ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಶಿಕ್ಷಕಿಯರನ್ನು ಬಂಧಿಸಲಾಗಿದೆ. ವಿದ್ಯಾರ್ಥಿನಿಯರು ಶಿಕ್ಷಕಿಯರ ಕಿರುಕುಳ ತಾಳಲಾರದೇ ಹಾಸ್ಟೆಲ್ ಕಟ್ಟಡದಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆಂದು ಆರೋಪಿಸಲಾಗಿದೆ. ಈ ಸಂಬಂಧ ಭಾರೀ ಪ್ರತಿಭಟನೆ ವ್ಯಕ್ತವಾಗಿದೆ. ಈ ಸಂಬಂಧ ಈಗ ಗಣಿತ ಮತ್ತು ಕೆಮಿಸ್ಟ್ರಿ ಓದಿಸುತ್ತಿದ್ದ ಇಬ್ಬರು ಶಿಕ್ಷಕಿಯರು ಮತ್ತು ಶಾಲೆಯ ಪ್ರಾಂಶುಪಾಲರು, ಕಾರ್ಯದರ್ಶಿಗಳನ್ನೂ ಬಂಧಿಸಿ ವಿಚಾರಣೆಗೊಳಪಡಿಸಲಾಗುತ್ತಿದೆ.

Read More »

ಸಂಸದರಿಗೆ ಮನವಿ ಮಾಡಿದ ಪ್ರಧಾನಿ ಮೋದಿ

ನವದೆಹಲಿ: ಸಂಸತ್ತಿನ ಮುಂಗಾರು ಅಧಿವೇಶನ ಪ್ರಾರಂಭವಾಗುವ ಮುನ್ನ, ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಅಧಿವೇಶನವನ್ನು ಫಲಪ್ರದ ಮತ್ತು ಉತ್ಪಾದಕವಾಗಿಸಲು ಮುಕ್ತ ಮನಸ್ಸಿನಿಂದ ವಿವಿಧ ವಿಷಯಗಳ ಬಗ್ಗೆ ಚರ್ಚೆ ನಡೆಸುವಂತೆ ಸಂಸದರಿಗೆ ಮನವಿ ಮಾಡಿದ್ದಾರೆ. ಅಧಿವೇಶನಕ್ಕೂ ಮುನ್ನ ಮಾತನಾಡಿದ ಮೋದಿ ಅವರು, ʻಸಂಸತ್ತಿನಲ್ಲಿ ಮುಕ್ತ ಮನಸ್ಸಿನಿಂದ ಸಂವಾದ ನಡೆಯಬೇಕು. ಅಗತ್ಯಬಿದ್ದರೆ ಚರ್ಚೆಯಾಗಬೇಕು. ಈ ಅಧಿವೇಶನವನ್ನು ಸಾಧ್ಯವಾದಷ್ಟು ಎಲ್ಲ ಸಂಸದರು ಆಲೋಚಿಸಿ ವಿಷಯಗಳನ್ನು ಚರ್ಚಿಸಬೇಕು ಎಂದು ನಾನು ಮನವಿ ಮಾಡುತ್ತೇನೆʼ ಎಂದಿದ್ದಾರೆ. …

Read More »

ಸಿದ್ದರಾಮೋತ್ಸವ ಕಾರ್ಯಕ್ರಮಕ್ಕೆ ಭರ್ಜರಿ ಸಿದ್ಧತೆ

ಬೆಂಗಳೂರು : ದಾವಣಗೆರೆಯಲ್ಲಿ ಶಾಸಕ ಶಾಮನೂರು ಶಿವಶಂಕರಪ್ಪ ಒಡೆತನದ ಜಾಗದಲ್ಲಿ ಆ. 3 ರಂದು ನಡೆಯಲಿರುವ ‘ಸಿದ್ದರಾಮಯ್ಯ 75- ಅಮೃತ ಮಹೋತ್ಸವ’ ಸಮಾವೇಶಕ್ಕೆ ಅಮೃತ ಮಹೋತ್ಸವ ಸಮಿತಿ ಭರ್ಜರಿ ಸಿದ್ಧತೆಯಲ್ಲಿ ತೊಡಗಿದೆ. ‘ಅಂದು ಬೆಳಿಗ್ಗೆ 11.30 ರಿಂದ ಮಧ್ಯಾಹ್ನ 2.30 ರವರೆಗೆ ಸಮಾವೇಶ ನಡೆಯಲಿದೆ. ಬೆಳಿಗ್ಗೆ ಸಂಗೀತ ನಿರ್ದೇಶಕ ಹಂಸಲೇಖ ಅವರಿಂದ ಸಂಗೀತ ಕಾರ್ಯಕ್ರಮ ನಡೆಯಲಿದೆ. ಮಧ್ಯಾಹ್ನ 1.30ರ ಸುಮಾರಿಗೆ ಎಐಸಿಸಿ ನಾಯಕ ರಾಹುಲ್ ಗಾಂಧಿ ಸಮಾವೇಶ ಸ್ಥಳಕ್ಕೆ ಬರಲಿದ್ದಾರೆ’ …

Read More »

ಚುನಾವಣೆ ಸೋಲು : ಹರಿನಾರಾಯಣ ಗುಪ್ತ ಸಾವು

ಇಂದೋರ್ : ಮಧ್ಯಪ್ರದೇಶ ಮೊದಲ ಹಂತದ ಸ್ಥಳೀಯ ಸಂಸ್ಥೆ ಚುನಾವಣೆ ಫಲಿತಾಂಶ ಹೊರಬಿದ್ದಿದೆ. ಬಿಜೆಪಿ ನಾಲ್ಕು ಮೇಯರ್ ಸ್ಥಾನ ಗೆದ್ದುಕೊಂಡಿದ್ದರೆ, ಆಮ್ ಆದ್ಮಿ ಪಕ್ಷ ಒಂದು ಮೇಯರ್ ಸ್ಥಾನ ಗೆದ್ದುಕೊಂಡಿದೆ. ಆದರೆ ಕಾಂಗ್ರೆಸ್ ತೀವ್ರ ಮುಖಭಂಗ ಅನುಭವಿಸಿದೆ. ಈ ಮುಖಭಂಗ ಕಾಂಗ್ರೆಸ್ ನಾಯಕ ಹರಿನಾರಾಯಣ ಗುಪ್ತ ಸಾವಿಗೆ ಕಾರಣಾಗಿದೆ. ಮುನ್ಸಿಪಲ್ ಕೌನ್ಸಿಲ್ ಚುನಾವಣೆಯಲ್ಲಿ 9ನೇ ವಾರ್ಡ್‌ನಿಂದ ಕಣಕ್ಕಿಳಿದ ಕಾಂಗ್ರೆಸ್ ನಾಯಕ ಹರಿನಾರಾಯಣ ಗುಪ್ತ ಕೇವಲ 14 ಮತಗಳ ಅಂತರದಿಂದ ಸೋಲು …

Read More »

ರಾಜ್ಯದ 8 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ

ನಿನ್ನೆಯಿಂದ ತಗ್ಗಿದ್ದ ವರುಣನ ಅಬ್ಬರ ಇಂದು ಹೆಚ್ಚಾಗುವ ಸಾಧ್ಯತೆಗಳಿವೆ. ಕರಾವಳಿ , ಮಲೆನಾಡು ಮತ್ತು ಉತ್ತರ ಕರ್ನಾಟಕದ ಕೆಲವು ಜಿಲ್ಲೆಗಳಲ್ಲಿ ಇಂದು ಮಳೆಯಾಗುವ ಸಾಧ್ಯತೆಗಳಿವೆ. ರಾಜ್ಯ ಹವಾಮಾನ ಇಲಾಖೆ ಇಂದು ಎಂಟು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಿದೆ. ಶಿವಮೊಗ್ಗ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಕೊಡಗು, ಚಿಕ್ಕಮಗಳೂರು, ಹಾಸನ ಮತ್ತು ಬೆಳಗಾವಿಯಲ್ಲಿ ಇಂದು ಯೆಲ್ಲೊ ಅಲರ್ಟ್ ಘೋಷಿಸಲಾಗಿದೆ. ಇದರ ಜೊತೆ ಉತ್ತರ ಒಳನಾಡಿನ ಕಲಬರುಗಿ ಮತ್ತು ಬೀದರ್ …

Read More »

ರಾಜ್ಯದಾದ್ಯಂತ ಲಂಚ ಮುಕ್ತ ಕರ್ನಾಟಕ್ಕೆ ಹೋರಾಟ : ರವಿಕೃಷ್ಣಾ ರೆಡ್ಡಿ

ರಾಣೆಬೆನ್ನೂರು: ‘ಕರ್ನಾಟಕವನ್ನು ಕೇಂದ್ರವಾಗಿಸಿಕೊಂಡು ಒಕ್ಕೂಟ ವ್ಯವಸ್ಥೆ ಬಲಪಡಿಸುವುದು, ಕರ್ನಾಟಕದ ಅಸ್ಮಿತೆಯ ಹಿತಾಸಕ್ತಿ ಕಾಪಾಡುವುದೇ ಕೆಆರ್‌ಎಸ್‌ ಪಕ್ಷದ ಮುಖ್ಯ ಉದ್ದೇಶ. ಅರ್ಹ ಪ್ರಾಮಾಣಿಕ, ವಿದ್ಯಾವಂತ, ಸಾಮಾನ್ಯ ವ್ಯಕ್ತಿಗಳಿಗೆ ಪಕ್ಷದ ಟಿಕೆಟ್‌ ನೀಡಲಾಗುವುದು’ ಎಂದು ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ರವಿಕೃಷ್ಣಾ ರೆಡ್ಡಿ ನುಡಿದರು. ನಗರದ ಪ್ರವಾಸಿ ಮಂದಿರದಲ್ಲಿ  ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು. ‘ರಾಜ್ಯದಾದ್ಯಂತ ಲಂಚ ಮುಕ್ತ ಕರ್ನಾಟಕ ಮಾಡಲು 2019ರಲ್ಲಿ ಕರ್ನಾಟಕರ ರಾಷ್ಟ್ರ ಸಮಿತಿ ಪಕ್ಷ ಉದಯವಾಯಿತು. …

Read More »

24 ಗಂಟೆಯಲ್ಲಿ 16,935 ಜನರಲ್ಲಿ ಸೋಂಕು ದೃಢ

ನವದೆಹಲಿ: ದೇಶಾದ್ಯಂತ ಕಳೆದ ನಾಲ್ಕು ದಿನಗಳಿಂದ ಪ್ರತಿದಿನ 20,000ಕ್ಕೂ ಹೆಚ್ಚು ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗುತ್ತಿತ್ತು. ಇಂದು ಸೋಂಕಿತರ ಪತ್ತೆ ಸಂಖ್ಯೆಯಲ್ಲಿ ಇಳಿಕೆಯಾಗಿದ್ದು, ಕಳೆದ 24 ಗಂಟೆಯಲ್ಲಿ 16,935 ಜನರಲ್ಲಿ ಹೊಸದಾಗಿ ಸೋಂಕು ದೃಢಪಟ್ಟಿದೆ. ಆದರೆ ಸೋಂಕಿತರ ಸಾವಿನ ಸಂಖ್ಯೆಯಲ್ಲಿ ಮತ್ತೆ ಏರಿಕೆಯಾಗಿದ್ದು, 24 ಗಂಟೆಯಲ್ಲಿ 51 ಜನರು ಮಹಾಮಾರಿಗೆ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಈವರೆಗೆ ಕೋವಿಡ್ ಗೆ ಸಾವನ್ನಪ್ಪಿದವರ ಸಂಖ್ಯೆ 5,25,760ಕ್ಕೆ ಏರಿಕೆಯಾಗಿದೆ. ಇನ್ನು ದೇಶದಲ್ಲಿ 1,44,264 …

Read More »

ಮರ ಬಿದ್ದ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆ

ಧಾರವಾಡ : ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಧಾರವಾಡದ ಸಿಬಿಟಿ ಬಳಿ ಮರವೊಂದು ನೆಲಕ್ಕುರುಳಿತ್ತು . ಈ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ . ರಸ್ತೆ ದಾಟುತ್ತಿದ್ದ ಕೆಲವರ ಮೇಲೆ ಈ ಮರ ಬಿದ್ದಿದ್ದು , ಅದೃಷ್ಟವಶಾತ್ ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ . ನಂತರ ಪಾಲಿಕೆ ಸಿಬ್ಬಂದಿ ಆ ಮರವನ್ನು ತೆರವುಗೊಳಿಸಿದ್ದಾರೆ .

Read More »

ಕಾಂಗ್ರೆಸ್ ಪಕ್ಷವನ್ನು ಗುರಿಯಾಗಿಸಿ ದಾಳಿ ನಡೆಯುತ್ತಿದೆ : ಡಿಕೆಶಿ

ಬೆಂಗಳೂರು: ದೇಶದಲ್ಲಿ ತನಿಖಾ ಸಂಸ್ಥೆ ಉಪಯೋಗಿಸಿಕೊಳ್ಳಲಾಗುತ್ತಿದೆ. ಕಾಂಗ್ರೆಸ್ ಪಕ್ಷವನ್ನು ಗುರಿಯಾಗಿಸಿ ದಾಳಿ ನಡೆಯುತ್ತಿದೆ. ಸಂಸತ್ ಅಧಿವೇಶನವಿದ್ದರೂ ಜು.21 ರಂದು ಇಡಿ ತನಿಖೆಗೆ ಕರೆದಿದ್ದಾರೆ. ಕಿರುಕುಳ ಕೊಡುವ ಕೆಲಸ ಮಾಡುತ್ತಿದ್ದಾರೆ. ರಾಹುಲ್ ಗಾಂಧಿ ಅವರನ್ನು 50 ಗಂಟೆ ತನಿಖೆ ಮಾಡಿದ್ದರು, ಯಾವುದೇ ಸಾಕ್ಷಿಯನ್ನು ಅಧಿಕಾರಿಗಳು ಕೊಟ್ಟಿಲ್ಲ. ಕೇಳಿದ್ದ ಪ್ರಶ್ನೆಯನ್ನೇ ಕೇಳಿ ಕಿರುಕುಳ ಕೊಟಿದ್ದಾರೆ. ಸೋನಿಯಾ ಗಾಂಧಿ ಮೇಲೆ ಸುಳ್ಳು ಕೇಸ್ ಹಾಕಿದ್ದಾರೆ. ನಮ್ಮ ನಾಯಕಿಗೆ ಧೈರ್ಯ ತುಂಬುವ ಕೆಲಸ ಮಾಡುತ್ತೇವೆ. ಹಾಗಾಗಿ …

Read More »