Breaking News

BigTv News

ರಾಜ್ಯದಲ್ಲಿ ಬೆಚ್ಚಿ ಬೀಳಿಸೋ ಘಟನೆ : ಮದ್ವೆಯಾಗೋದಾಗಿ ನಂಬಿಸಿ ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ : ಕಾಮುಕ ಉಪನ್ಯಾಸಕ ಅರೆಸ್ಟ್‌!

ಬಳ್ಳಾರಿ: ಖಾಸಗಿ ಕಾಲೇಜಿನ ಉಪನ್ಯಾಸಕನೊಬ್ಬ ಅಪ್ರಾಪ್ತ ವಿದ್ಯಾರ್ಥಿನಿಯನ್ನು ಮದುವೆಯಾಗುವುದಾಗಿ ನಂಬಿಸಿ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಬಂಧನಕ್ಕೊಳಗಾಗಿದ್ದಾನೆ. ನಗರದ ಖಾಸಗಿ ಕಾಲೇಜಿನಲ್ಲಿ ಸಸ್ಯಶಾಸ್ತ್ರ ವಿಭಾಗದ ಉಪನ್ಯಾಸಕರಾಗಿದ್ದ ರವಿಕಿರಣ್ ವಿರುದ್ಧ ವಿದ್ಯಾರ್ಥಿನಿಯ ಪೋಷಕರು ದೂರು ನೀಡಿದ್ದು, ಆರೋಪಿ ಈಗಾಗಲೇ ವಿವಾಹಿತನಾಗಿರುವ ವಿಚಾರ ಬಳಿಕ ಬೆಳಕಿಗೆ ಬಂದಿದೆ. ದೂರಿನ ಆಧಾರದ ಮೇಲೆ ಮಹಿಳಾ ಠಾಣೆ ಪೊಲೀಸರು ಪೋಕ್ಸೊ ಸೇರಿದಂತೆ ವಿವಿಧ ಸೆಕ್ಷನ್‌ಗಳಡಿ ಪ್ರಕರಣ ದಾಖಲಿಸಿ ಆರೋಪಿಯನ್ನು ಬಂಧಿಸಿದ್ದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

Read More »

ಮೇಕೆ ಮಾಂಸದಲ್ಲಿ ಎಮ್ಮೆ ಮಾಂಸ ಬೆರೆಸಿ ಹೋಟೆಲ್ ಗಳಿಗೆ ಪೂರೈಕೆ : ಆಘಾತಕಾರಿ ವಿಡಿಯೋ ವೈರಲ್

ಹೈದರಾಬಾದ್: ನಗರದ ಎರಡು ಕಡೆ ನಡೆದ ದಾಳಿಯಲ್ಲಿ ಕಲಬೆರಕೆ ಮಾಂಸ ಹಾಗೂ ರಾಸಾಯನಿಕ ಬಳಸಿ ಸಂಸ್ಕರಿಸಿದ ಕೊಳೆತ ಮೀನು ಮಾರಾಟ ಮಾಡುತ್ತಿದ್ದ ಐವರನ್ನು ಪೊಲೀಸರು ಬಂಧಿಸಿದ್ದಾರೆ. ಹಬೀಬ್‌ನಗರದಲ್ಲಿ ಮೇಕೆ ಮಾಂಸದ ಹೆಸರಲ್ಲಿ ಎಮ್ಮೆ ಮಾಂಸ ಮಾರಾಟ ಮಾಡುತ್ತಿದ್ದ ಆರೋಪಿಯೊಬ್ಬನಿಂದ 50 ಕೆಜಿ ಕಲಬೆರಕೆ ಮಾಂಸವನ್ನು ಜಪ್ತಿ ಮಾಡಿ ಪರೀಕ್ಷೆಗೆ ಕಳುಹಿಸಲಾಗಿದೆ. ಮಂಗಳಹಾಟ್‌ನಲ್ಲಿ ಕೊಳೆತ ಮೀನು ಮತ್ತು ಸೀಗಡಿಗೆ ರಾಸಾಯನಿಕ ಬಳಸಿ ಮಾರಾಟ ಮಾಡುತ್ತಿದ್ದ ನಾಲ್ವರನ್ನು ಬಂಧಿಸಿದ್ದು, 262 ಕೆಜಿ ಕೊಳೆತ …

Read More »

ಚಿಕ್ಕಬಳ್ಳಾಪುರದಲ್ಲಿ ಚುಡಾಯಿಸಿದ್ದನ್ನು ಪ್ರಶ್ನಿಸಿದ್ದಕ್ಕೆ ವಿದ್ಯಾರ್ಥಿನಿ ಮನೆ ಮೇಲೆ ಕಲ್ಲು ತೂರಾಟ, ಕತ್ತು ಕೊಯ್ಯಲು ಯತ್ನ.!

ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ನಗರದಲ್ಲಿ ವಿದ್ಯಾರ್ಥಿನಿಯನ್ನು ಚುಡಾಯಿಸಿದ್ದನ್ನು ಪ್ರಶ್ನಿಸಿದ್ದಕ್ಕೆ ಆಕ್ರೋಶಗೊಂಡ ಪುಂಡರ ಗುಂಪು ಮನೆಗೆ ನುಗ್ಗಿ ದಾಂಧಲೆ ನಡೆಸಿ, ವಿದ್ಯಾರ್ಥಿನಿ ಮೇಘನಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಿದ ಘಟನೆ ನಡೆದಿದೆ. ಮೇಘನಾ ತನ್ನ ತಂಗಿಯೊಂದಿಗೆ ಹೋಗುತ್ತಿದ್ದ ವೇಳೆ ಕೆಲ ಯುವಕರು ಚುಡಾಯಿಸಿದ್ದು, ಇದನ್ನು ಪ್ರಶ್ನಿಸಿ ಒಬ್ಬ ಯುವಕನಿಗೆ ಕಪಾಳಕ್ಕೆ ಹೊಡೆದಿದ್ದಾಳೆ ಎನ್ನಲಾಗಿದೆ. ಇದರಿಂದ ಕೆರಳಿದ ಗುಂಪು ಮೇಘನಾ ಮನೆಗೆ ತೆರಳಿ ಕಲ್ಲು ತೂರಾಟ ನಡೆಸಿ, ದಾಂಧಲೆ ಸೃಷ್ಟಿಸಿ ಆಕೆಯ ಮೇಲೆ …

Read More »

ದಾಂಪತ್ಯ ಕಲಹ ಪತ್ನಿಯಿಂದಲೇ ಪತಿಯ ಕೊಲೆ

ಮೈಸೂರು: ನಗರದ ಕುವೆಂಪುನಗರದಲ್ಲಿ ಪತಿ ನಿತ್ಯಾನಂದ (50) ಅನುಮಾನಾಸ್ಪದವಾಗಿ ಮೃತಪಟ್ಟಿದ್ದು, ಪತ್ನಿ ಸುಶೀಲಾಳನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಕುವೆಂಪುನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಭಾನುವಾರ ರಾತ್ರಿ ಮದ್ಯ ಸೇವಿಸಿ ಮನೆಗೆ ಬಂದ ನಿತ್ಯಾನಂದ ಮತ್ತು ಸುಶೀಲಾ ನಡುವೆ ಗಲಾಟೆ ನಡೆದಿತ್ತು ಎನ್ನಲಾಗಿದೆ. ಸೋಮವಾರ ಬೆಳಿಗ್ಗೆ ನಿತ್ಯಾನಂದ ಮೃತಪಟ್ಟಿರುವುದು ಬೆಳಕಿಗೆ ಬಂದಿದ್ದು, ಮೊದಲಿಗೆ ಹೃದಯಾಘಾತದಿಂದ ಸಾವು ಸಂಭವಿಸಿದೆ ಎಂದು ತಿಳಿಸಲಾಗಿತ್ತು. ಆದರೆ ಮೃತದೇಹದ ಕುತ್ತಿಗೆಯಲ್ಲಿ ಬಿಗಿದ ಗುರುತು ಕಂಡುಬಂದ …

Read More »

ಶಿಶುಪಾಲನಾ ಕೇಂದ್ರದಲ್ಲಿ ಮಕ್ಕಳಿಗೆ ಚಿತ್ರಹಿಂಸೆ ಆರೋಪ; ಐವರು ಮಹಿಳಾ ಸಿಬ್ಬಂದಿ ವಿರುದ್ಧ ಎಫ್‌ಐಆರ್‌

ಬೆಂಗಳೂರು: ನಗರದ ಖಾಸಗಿ ಶಿಶುಪಾಲನಾ ಕೇಂದ್ರದಲ್ಲಿ ಎರಡು ವರ್ಷದ ಮಕ್ಕಳಿಗೆ ಸಿಬ್ಬಂದಿ ಚಿತ್ರಹಿಂಸೆ ನೀಡಿರುವ ಆರೋಪ ಕೇಳಿಬಂದಿದ್ದು, ಎಚ್‌ಎಎಲ್ ಪೊಲೀಸ್ ಠಾಣೆಯಲ್ಲಿ ಐವರು ಮಹಿಳಾ ಸಿಬ್ಬಂದಿ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ವೈರಲ್ ಆದ ವಿಡಿಯೊಗಳ ಆಧಾರದಲ್ಲಿ ಮಕ್ಕಳ ಪೋಷಕರು ದೂರು ನೀಡಿದ್ದು, ಬಾಲಾಪರಾಧ ನ್ಯಾಯ (ಮಕ್ಕಳ ಆರೈಕೆ ಮತ್ತು ರಕ್ಷಣೆ) ಕಾಯ್ದೆಯ ವಿವಿಧ ಸೆಕ್ಷನ್‌ಗಳಡಿ ಪ್ರಕರಣ ದಾಖಲಿಸಲಾಗಿದೆ. ಶೀಘ್ರದಲ್ಲೇ ಆರೋಪಿಗಳನ್ನು ವಿಚಾರಣೆಗೆ ಒಳಪಡಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ. ದೂರಿನ ಪ್ರಕಾರ, …

Read More »

ಗೃಹಿಣಿ ಕೊಲೆ ಪ್ರಕರಣ… ಪತಿ ಸೇರಿ ನಾಲ್ವರ ಬಂಧನ

ಧಾರವಾಡ: ನವಲಗುಂದ ತಾಲೂಕಿನ ಹಣಸಿ ಗ್ರಾಮದಲ್ಲಿ ಗೃಹಿಣಿ ಪ್ರಿಯಾಂಕಾ ಕಮಲಾಕರ (29) ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪತಿ ಸೇರಿದಂತೆ ನಾಲ್ವರನ್ನು ನವಲಗುಂದ ಪೊಲೀಸರು ಬಂಧಿಸಿದ್ದಾರೆ. 2024ರಲ್ಲಿ ಬಸವರಾಜ ವಡ್ಡರ್ ಅವರನ್ನು ವಿವಾಹವಾಗಿದ್ದ ಪ್ರಿಯಾಂಕಾಗೆ ಮದುವೆಯಾದ ಬಳಿಕ ಪತಿ ಹಾಗೂ ಕುಟುಂಬಸ್ಥರು ವರದಕ್ಷಿಣೆ ವಿಚಾರವಾಗಿ ಕಿರುಕುಳ ನೀಡುತ್ತಿದ್ದರು ಎನ್ನಲಾಗಿದೆ. ಸೋಮವಾರ ರಾತ್ರಿ ಕತ್ತು ಹಿಸುಕಿ ಕೊಲೆ ಮಾಡಿರುವ ಆರೋಪ ಕೇಳಿಬಂದಿದೆ. ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ ಪೊಲೀಸರು ಬಸವರಾಜ, ರೇಣವ್ವ ವಡ್ಡರ್, …

Read More »

ದಾವಣಗೆರೆ| ಇಸ್ಪೀಟ್‌ ಜೂಜಾಟದ ಮೇಲೆ ದಾಳಿ; ₹ 10.63 ಲಕ್ಷ ನಗದು ವಶ

ದಾವಣಗೆರೆ: ಜಿಲ್ಲೆಯ ವಿವಿಧೆಡೆ ಇಸ್ಪೀಟ್ ಜೂಜಾಟದ ಅಡ್ಡೆಗಳ ಮೇಲೆ ಪೊಲೀಸರು ದಾಳಿ ನಡೆಸಿ ಒಟ್ಟು ₹10.63 ಲಕ್ಷಕ್ಕೂ ಅಧಿಕ ನಗದು ವಶಪಡಿಸಿಕೊಂಡಿದ್ದಾರೆ. ಪ್ರಮುಖವಾಗಿ ವಿದ್ಯಾನಗರ ಪೊಲೀಸ್ ಠಾಣೆ ವ್ಯಾಪ್ತಿಯ ಖಾಸಗಿ ಲಾಡ್ಜ್‌ನಲ್ಲಿ ಜೂಜಾಟದಲ್ಲಿ ತೊಡಗಿದ್ದ 11 ಮಂದಿಯಿಂದ ₹10.50 ಲಕ್ಷ ವಶಕ್ಕೆ ಪಡೆಯಲಾಗಿದೆ. ಇದೇ ವೇಳೆ ಬಿಳಿಚೋಡು ಪೊಲೀಸ್ ಠಾಣೆ ವ್ಯಾಪ್ತಿಯ ಗುತ್ತಿದುರ್ಗ ಸಮೀಪ ಜೂಜಾಟ ನಡೆಸುತ್ತಿದ್ದ 8 ಮಂದಿಯಿಂದ ₹9,150 ಹಾಗೂ ಮಾಯಕೊಂಡ ಪೊಲೀಸ್ ಠಾಣೆ ವ್ಯಾಪ್ತಿಯ ನಲ್ಕುಂದ …

Read More »

ಗುಟ್ಕಾ ಉಗಿಯಲು ಬಗ್ಗಿದ ಯುವಕನ ತಲೆಗೆ ಗುದ್ದಿದ ಟಿಪ್ಪರ್; ರಸ್ತೆಗೆ ಬಿದ್ದ ರುಂಡ, ಬಸ್ಸಿನಲ್ಲಿ ನೇತಾಡಿದ ಮುಂಡ!

ಹುಬ್ಬಳ್ಳಿ: ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಕಿಟಕಿಯಿಂದ ತಲೆ ಹೊರಹಾಕಿದ್ದ 17 ವರ್ಷದ ಐಟಿಐ ವಿದ್ಯಾರ್ಥಿಯೊಬ್ಬ ಟಿಪ್ಪರ್ ಲಾರಿಗೆ ಡಿಕ್ಕಿಯಾಗಿ ಸ್ಥಳದಲ್ಲೇ ಮೃತಪಟ್ಟಿರುವ ದಾರುಣ ಘಟನೆ ಕುಂದಗೋಳ ಪಟ್ಟಣದ ಹೊರವಲಯದಲ್ಲಿ ನಡೆದಿದೆ. ಮೃತನನ್ನು ಕುಂದಗೋಳ ತಾಲೂಕಿನ ಶಿರೂರು ಗ್ರಾಮದ ಪಕ್ಕಿರೇಶ್ ಎಂದು ಗುರುತಿಸಲಾಗಿದೆ. ಹುಬ್ಬಳ್ಳಿಯಿಂದ ಲಕ್ಷ್ಮೇಶ್ವರಕ್ಕೆ ತೆರಳುತ್ತಿದ್ದ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಬಸ್‌ನಲ್ಲಿ ಹಿಂಬದಿ ಸೀಟಿನಲ್ಲಿ ಕುಳಿತಿದ್ದ ಪಕ್ಕಿರೇಶ್, ಗುಟ್ಕಾ ಉಗುಳಲು ಕಿಟಕಿಯಿಂದ ತಲೆ ಹೊರಹಾಕಿದ್ದಾನೆ ಎನ್ನಲಾಗಿದೆ. …

Read More »

ನಕಲಿ ಔಷಧ ತಯಾರಿಕೆ ದಂಧೆ ತನಿಖೆಗೆ ಸಂಬಂಧಿಸಿ ₹3ಕೋಟಿ ಲಂಚ: ಐಪಿಎಸ್ ಅಧಿಕಾರಿ ಸೆರೆ

ನಕಲಿ ಔಷಧ ತಯಾರಿಕೆ ದಂಧೆ ತನಿಖೆಗೆ ಸಂಬಂಧಿಸಿದ ₹3 ಕೋಟಿ ಲಂಚ ಪ್ರಕರಣದಲ್ಲಿ ಐಪಿಎಸ್ ಅಧಿಕಾರಿ ದೀಪಕ್ ಗಹ್ಲಾವತ್ ಅವರನ್ನು ಸಿಬಿಐ ಬಂಧಿಸಿದೆ. ತನಿಖೆಯಲ್ಲಿ ಅನುಕೂಲ ಮಾಡಿಕೊಡುವುದಾಗಿ ಭರವಸೆ ನೀಡಿ ಪುದುಚೇರಿ ಮೂಲದ ಉದ್ಯಮಿಯಿಂದ ₹3 ಕೋಟಿ ಲಂಚಕ್ಕೆ ಬೇಡಿಕೆ ಇಟ್ಟಿದ್ದು, ₹1.5 ಕೋಟಿ ಮುಂಗಡವಾಗಿ ಕೇಳಿದ್ದರು ಎಂಬ ಆರೋಪ ಕೇಳಿಬಂದಿದೆ. ಪ್ರಕರಣ ಸಂಬಂಧ ಸಿಬಿಐ ತನಿಖೆ ಮುಂದುವರಿಸಿದ್ದು, ಗಹ್ಲಾವತ್ ವಿರುದ್ಧ ಭ್ರಷ್ಟಾಚಾರ ಆರೋಪದಡಿ ಕ್ರಮ ಕೈಗೊಳ್ಳಲಾಗಿದೆ.

Read More »

ನಕಲಿ ದಾಖಲೆ ಸೃಷ್ಟಿಸಿ ವಂಚನೆ: ಅಪರಾಧಿಗೆ ಮೂರು ವರ್ಷ ಜೈಲು ಶಿಕ್ಷೆ

ಬೀದರ್‌ನಲ್ಲಿ ನಕಲಿ ದಾಖಲೆಗಳ ಮೂಲಕ ಗೊಂಡ ಜಾತಿ ಪ್ರಮಾಣ ಪತ್ರ ಪಡೆದು ವಂಚನೆ ಎಸಗಿದ್ದ ಪ್ರಕರಣದಲ್ಲಿ ಔರಾದ್ ತಾಲೂಕಿನ ರಕ್ಷಾಳ (ಬಿ) ಗ್ರಾಮದ ವಿದ್ದೇಶಗೊಂಡ ವಿಠಲಗೊಂಡ ಬಾಳೂರೆಗೆ ನ್ಯಾಯಾಲಯ ಮೂರು ವರ್ಷ ಸಾದಾ ಜೈಲು ಶಿಕ್ಷೆ ಹಾಗೂ ದಂಡ ವಿಧಿಸಿದೆ. ಕುರುಬ ಸಮುದಾಯದವರಾಗಿದ್ದರೂ ಎಸ್‌ಟಿ ಮೀಸಲಾತಿ ಪಡೆಯಲು ಸುಳ್ಳು ದಾಖಲೆಗಳನ್ನು ಸೃಷ್ಟಿಸಿ ಗೊಂಡ ಜಾತಿ ಪ್ರಮಾಣ ಪತ್ರ ಪಡೆದಿರುವುದು ತನಿಖೆಯಲ್ಲಿ ಸಾಬೀತಾಗಿತ್ತು. ಬಳಿಕ ಜಿಲ್ಲಾಮಟ್ಟದ ಜಾತಿ ಪರಿಶೀಲನಾ ಸಮಿತಿಯು ಪ್ರಮಾಣ …

Read More »