ಧಾರವಾಡ : ರಾತ್ರಿ ಮನೆಯಿಂದ ಹೊರ ಹೋದ ವ್ಯಕ್ತಿಯೊಬ್ಬ ಇಂದು ಬೆಳಗಾಗುವಷ್ಟರಲ್ಲಿ ಚರಂಡಿಯಲ್ಲಿ ಶವವಾಗಿ ಪತ್ತೆಯಾಗಿರುವ ಘಟನೆ ಧಾರವಾಡ ತಾಲೂಕಿನ ಅಮ್ಮಿನಭಾವಿ ಗ್ರಾಮದಲ್ಲಿ ನಡೆದಿದೆ. ತಾಲೂಕಿನ ಅಮ್ಮಿನಭಾವಿ ಗ್ರಾಮದ ಮಲ್ಲಿಕಾರ್ಜುನ ಗೂಳದಕೊಪ್ಪ (45) ಎಂಬಾತನೇ ಮೃತಪಟ್ಟ ದುರ್ದೈವಿ ಎಂದು ಗುರುತಿಸಲಾಗಿದೆ. ನಿನ್ನೆ ರಾತ್ರಿ ಮನೆಯಿಂದ ಹೊರ ಹೋಗಿದ್ದ ಈತ , ಬೆಳಗಾಗುವಷ್ಟರಲ್ಲಿ ಗ್ರಾಮದ ಗ್ರಾಮ ದೇವಿ ದೇವಸ್ಥಾನ ಬಳಿಯ ಚರಂಡಿಯಲ್ಲಿ ಶವವಾಗಿ ಪತ್ತೆಯಾಗಿದ್ದಾನೆ . ಅರೆನಗ್ನ ಸ್ಥಿತಿಯಲ್ಲಿರುವ ಶವ ಕಂಡು …
Read More »ಯಡಿಯೂರಪ್ಪ ಕುಟುಂಬ ಸಮೇತ ವಿದೇಶ ಪ್ರವಾಸ
ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಕುಟುಂಬ ಸಮೇತ ವಿದೇಶ ಪ್ರವಾಸಕ್ಕೆ ತೆರಳಿದ್ದಾರೆ. ಸೋಮವಾರದಂದು ರಾಜ್ಯಕ್ಕೆ ಭೇಟಿ ನೀಡಿದ್ದ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದ ಬಳಿಕ ಪೂರ್ವನಿಯೋಜಿತ ಕಾರ್ಯಕ್ರಮದಂತೆ ಯಡಿಯೂರಪ್ಪನವರು ಲಂಡನ್ ಗೆ ತೆರಳಿದ್ದಾರೆ. ಯಡಿಯೂರಪ್ಪನವರಿಗೆ ಅವರ ಪುತ್ರ ಬಿ.ವೈ. ವಿಜಯೇಂದ್ರ ಮತ್ತು ಕುಟುಂಬದ ಇತರೆ ಸದಸ್ಯರು ಸಾಥ್ ನೀಡಿದ್ದು, ಈ ತಿಂಗಳ ಅಂತ್ಯಕ್ಕೆ ಭಾರತಕ್ಕೆ ವಾಪಸ್ಸಾಗಲಿದ್ದಾರೆ ಎಂದು ತಿಳಿದುಬಂದಿದೆ. ಯಡಿಯೂರಪ್ಪನವರು ತಮ್ಮ ಲಂಡನ್ ಪ್ರವಾಸದ ವೇಳೆ …
Read More »SSLC ಪೂರಕ. ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಮಹತ್ವದ ಮಾಹಿತಿ
ಜೂನ್ 27 ರಿಂದ ಜುಲೈ 4 ರವರಿಗೆ 10ನೇ ತರಗತಿ ಪೂರಕ ಪರೀಕ್ಷೆ ನಡೆಯಲಿದ್ದು, ವಿದ್ಯಾರ್ಥಿಗಳಿಗೆ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ, ಪರೀಕ್ಷೆ ಬರೆಯುವ ವಿದ್ಯಾರ್ಥಿಗಳ ಉಚಿತ ಪ್ರಯಾಣಕ್ಕೆ ಅವಕಾಶ ಕಲ್ಪಿಸಿದ್ದು, ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆದುಕೊಳ್ಳಬಹುದಾಗಿದೆ. ವಾಸಸ್ಥಳದಿಂದ ನಿಯೋಜಿತ ಪರೀಕ್ಷಾ ಕೇಂದ್ರಕ್ಕೆ ಹೋಗಲು ಮತ್ತು ಹಿಂದಿರುಗಲು ಅವಕಾಶವಿದ್ದು, ವಿದ್ಯಾರ್ಥಿಗಳು ಬಸ್ ನಿರ್ವಾಹಕರಿಗೆ ತಮ್ಮ ಪರೀಕ್ಷೆಯ ಪ್ರವೇಶ ಪತ್ರ ತೋರಿಸಿ ಸಾಮಾನ್ಯ ಮತ್ತು ವೇಗದೂತ ಬಸ್ಸುಗಳಲ್ಲಿ ಪ್ರಯಾಣ ಮಾಡಬಹುದಾಗಿದೆ.
Read More »ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ : ಅಜೀವ ಕಾರಾಗೃಹ ಶಿಕ್ಷೆ , ದಂಡ
ಉಡುಪಿ: ಬಾಲಕಿಯನ್ನು ಅಪಹರಿಸಿ, ಲೈಂಗಿಕ ದೌರ್ಜನ್ಯವೆಸಗಿದ ಆರೋಪ ಸಾಬೀತಾಗಿದ್ದು ಹೀಗಾಗಿ ಅಪರಾಧಿಗೆ ಉಡುಪಿ ಜಿಲ್ಲಾ ಹೆಚ್ಚುವರಿ ಮತ್ತು ಸತ್ರ ನ್ಯಾಯಾಲಯದ ಪೋಕ್ಸೋ ತ್ವರಿತ ವಿಶೇಷ ನ್ಯಾಯಾಲಯದ ನಾಯಾಧೀಶರಾದ ಶ್ರೀನಿವಾಸ ಸುವರ್ಣ ಅವರು ಅಜೀವ ಕಾರಾಗೃಹ ಶಿಕ್ಷೆ ಹಾಗೂ ದಂಡ ವಿಧಿಸಿ ತೀರ್ಪು ನೀಡಿದ್ದಾರೆ. ಪಶ್ಚಿಮ ಬಂಗಾಳ ಮೂಲದ ರಾಜೀಬ್ ಅಲಿಯಾಸ್ ಚೋಟು (20) ಶಿಕ್ಷೆಗೆ ಗುರಿಯಾದ ಆರೋಪಿ. 2018ರ ಪೆಬ್ರವರಿ ತಿಂಗಳಿನಲ್ಲಿ ಹಿರಿಯಡ್ಕ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆಯುತ್ತಿದ್ದ ರಸ್ತೆ …
Read More »ಕೇಂದ್ರ ಸಚಿವರೊಂದಿಗೆ ಅನುಚಿತವಾಗಿ ವರ್ತನೆ : ಶಾಲಾ ಶಿಕ್ಷಕ ಅಮಾನತು
ಬೀದರ್ : ರಸಗೊಬ್ಬರ ವಿಷಯಕ್ಕೆ ಸಂಬಂಧಿಸಿದಂತೆ ಕೇಂದ್ರ ರಸಾಯನಿಕ ಮತ್ತು ರಸಗೊಬ್ಬರ ಖಾತೆ ಸಚಿವ ಭಗವಂತ ಖೂಬಾ ಅವರ ಜತೆ ಮೊಬೈಲ್ ನಲ್ಲಿ ಅನುಚಿತವಾಗಿ ವರ್ತಿಸಿದ ಆರೋಪ ಹಿನ್ನಲೆ ಸರ್ಕಾರಿ ಶಾಲಾ ಶಿಕ್ಷಕನನ್ನು ಅಮಾನತ್ತುಗೊಳಿಸಿ ಡಿಡಿಪಿಐ ಗಣಪತಿ ಬಾರಾಟಕೆ ಆದೇಶ ಹೊರಡಿಸಿದ್ದಾರೆ. ಔರಾದ ತಾಲೂಕಿನ ಜೀರ್ಗಾ(ಕೆ) ಸರ್ಕಾರಿ ಶಾಲಾ ಶಿಕ್ಷಕ ಕುಶಾಲ ಪಾಟೀಲ ಅಮಾನತ್ತುಗೊಂಡ ಶಿಕ್ಷಕರ. ಜೂ. 10 ರಂದು ಪಾಟೀಲ ಅವರು ಸ್ವಗ್ರಾಮ ಹೆಡಗಾಪುರದಲ್ಲಿ ರಸಗೊಬ್ಬರ ಕೊರತೆ ಸಂಬಂಧ …
Read More »ಜೂ. 25ರ ವರೆಗೆ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಣೆ
ಬೆಂಗಳೂರು : ರಾಜ್ಯದ ಕರಾವಳಿ ಭಾಗದಲ್ಲಿ ಮುಂಗಾರು ಚುರುಕಾಗಿದೆ.ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯಲ್ಲಿ ವರುಣದೇವ ಅಬ್ಬರಿಸುತ್ತಿದ್ದಾನೆ. ಕಾರವಾರದ ರೈಲ್ವೆ ನಿಲ್ದಾಣ ರಸ್ತೆ, ಹಬ್ಬುವಾಡ, ಸೋನಾರವಾಡ, ಸಾಯಿಬಾಬಾ ಮಂದಿರ ರಸ್ತೆಗಳು ಜಲಾವೃತವಾಗಿ ಜನ ಪರದಾಡಿದ್ರು. ಮನೆಗಳಿಗೆ ನೀರು ನುಗ್ಗಿದ್ದಕ್ಕೆ ಜನಜೀವನ ಅಸ್ತವ್ಯಸ್ತಗೊಂಡಿತ್ತು. ಉತ್ತರ ಕನ್ನಡ ಜಿಲ್ಲೆಯಾದ್ಯಂತ ನಾಳೆಯು ಸಹ ವರುಣನ ರೌದ್ರಾವತಾರ ಮುಂದುವರಿಯಲಿದ್ದು, ಜೂನ್ 25ರ ವರೆಗೆ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದೆ. ಇದರೊಂದಿಗೆ ಸ್ಥಳೀಯರು, ಪ್ರವಾಸಿಗರು …
Read More »ಕೇಂದ್ರ ಸರ್ಕಾರ ದ್ವೇಷದ ರಾಜಕಾರಣ ಮಾಡುತ್ತಿದೆ : ಸಿದ್ದರಾಮಯ್ಯ ವಾಗ್ದಾಳಿ
ನವದೆಹಲಿ : ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿಚಾರಣೆ ನಡೆಸುತ್ತಿರುವ ಹಿನ್ನೆಲೆಯಲ್ಲಿ ಇಂದು ಕಾಂಗ್ರೆಸ್ ದೆಹಲಿಯಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಂಡಿದೆ. ನವದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿದ್ದರಾಮಯ್ಯ, ಇಡಿ ವಿಚಾರಣೆ ಕೇವಲ 4 ಗಂಟೆಯಲ್ಲಿ ನಡೆಯಬೇಕಾದ ವಿಚಾರಣೆ ಆದರೆ ಇಷ್ಟು ದಿನ ವಿಚಾರಣೆ ಹೆಸರಿನಲ್ಲಿ ರಾಹುಲ್ ಗಾಂಧಿ ಕಿರುಕುಳ ನೀಡುತ್ತಿದೆ. ಈ ಹಿಂದೆಯೇ ನ್ಯಾಷನಲ್ ಹೆರಾಲ್ಡ್ ಹಗರಣ ಪ್ರಕರಣ ಮುಗಿದು ಹೋಗಿದೆ. ಆದರೆ ಕೇಂದ್ರ …
Read More »ಒಂದೇ ಕುಟುಂಬದ 9 ಮಂದಿ ಆತ್ಮಹತ್ಯೆ : 13 ಜನ ಬಂಧನ
ಸಾಂಗ್ಲಿ: ಜಿಲ್ಲೆಯ ಎರಡು ಮನೆಗಳಲ್ಲಿ ಒಂದೇ ಕುಟುಂಬದ ಒಂಬತ್ತು ಮಂದಿಯ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪದ ಮೇಲೆ ಪೊಲೀಸರು 13 ಮಂದಿಯನ್ನು ಬಂಧಿಸಿದ್ದಾರೆ. ಬಂಧಿಸಲ್ಪಟ್ಟವರು ಕುಟುಂಬಕ್ಕೆ ಸಾಲ ನೀಡಿದವರಾಗಿದ್ದಾರೆ. ಮಣಿಕ್ ವಾನ್ಮೋರೆ ಮತ್ತು ಪೋಪರ್ ವಾನ್ಮೋರೆ ಸದಸ್ಯರು ತಮ್ಮ ಪತ್ನಿಯರು, ಮಕ್ಕಳು ಮತ್ತು ತಾಯಿಯೊಂದಿಗೆ ಸೋಮವಾರ ಮಹೈಸಲ್ ಪಟ್ಟಣದ ತಮ್ಮ ಮನೆಗಳಲ್ಲಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದರು.ಸಹೋದರರ ಮನೆಗಳು ಒಂದು ಕಿಮೀ ಅಂತರದಲ್ಲಿವೆ. ಮಣಿಕ್ ಮನೆಯಲ್ಲಿ ಆರು ಮಂದಿ ಮೃತಪಟ್ಟಿದ್ದರೆ,ಮೂವರು ಪೋಪಟ್ …
Read More »ಪ್ರೇಯಸಿಯ ಶವನ್ನು ಹೂತಿಟ್ಟು ಬಳಿಕ ತಾನು ಆತ್ಮಹತ್ಯೆ ಪ್ರೀಯಕರ
ಮೈಸೂರು : ವ್ಯಕ್ತಿಯೊಬ್ಬ ತನ್ನ ಪ್ರೇಯಸಿಯ ಶವನ್ನು ಹೂತಿಟ್ಟು ಬಳಿಕ ತಾನು ಆತ್ಮಹತ್ಯೆ ಮಾಡಿಕೊಂಡಿಕೊಂಡಿರುವ ಘಟನೆ ತಿ.ನರಸೀಪುರ ತಾಲ್ಲೂಕಿನ ತಲಕಾಡು ಕಾವೇರಿ ನಿಸರ್ಗಧಾಮದಲ್ಲಿ ನಡೆದಿದೆ. ಸಿದ್ದರಾಜು ಹಾಗೂ ಸುಮಿತ್ರಾ ಮೃತಪಟ್ಟವರು ಎಂದು ಗುರುತಿಸಲಾಗಿದ್ದು, ಮೃತರು ಟಿ. ನರಸೀಪುರ ತಾಲ್ಲೂಕಿನ ಎಂ.ಕೆಬ್ಬೆಹುಂಡಿ ಗ್ರಾಮದ ನಿವಾಸಿಗಳು. ಸಿದ್ದರಾಜು ನೇಣು ಬಿಗಿದುಕೊಂಡಿರುವ ಸ್ಥಳದಲ್ಲೇ ಸುಮಿತ್ರಾಳ ಶವವನ್ನು ಸಿದ್ದರಾಜು ಹೂತಿಟ್ಟಿದ್ದಾನೆ. ಕೆಲ ವರ್ಷಗಳಿಂದ ಸುಮಿತ್ರಾ ಮತ್ತು ಸಿದ್ದರಾಜು ಅಕ್ರಮ ಸಂಬಂಧ ಹೊಂದಿದ್ದರು. ಕಳೆದ ಶನಿವಾರ ಸಿದ್ದರಾಜು, …
Read More »ಅಗ್ನಿಪಥ ಪ್ರತಿಭಟನೆ : ಸಾರ್ವಜನಿಕ ಆಸ್ತಿಗೆ ಆಗಿರುವ ನಷ್ಟವನ್ನು ಪ್ರತಿಭಟನಕಾರರಿಂದಲೇ ವಸೂಲಿ
ವಾರಾಣಸಿ: ಅಗ್ನಿಪಥ ವಿರುದ್ಧದ ಪ್ರತಿಭಟನೆಯ ವೇಳೆ ಸಾರ್ವಜನಿಕ ಆಸ್ತಿಗೆ ಆಗಿರುವ ನಷ್ಟವನ್ನು ಪ್ರತಿಭಟನಕಾರರಿಂದಲೇ ವಸೂಲಿ ಮಾಡಲು ಸ್ಥಳೀಯ ಆಡಳಿತ ನಿರ್ಧರಿಸಿದೆ. ಹಿಂಸಾತ್ಮಕ ಕೃತ್ಯಗಳಲ್ಲಿ ತೊಡಗಿದ್ದವರನ್ನು ಗುರುತಿಸುವ ಪ್ರಕ್ರಿಯೆಯನ್ನು ಆರಂಭಿಸಿದೆ. ಜಿಲ್ಲಾಧಿಕಾರಿ ಕೌಶಲ್ ರಾಜ್ ಶರ್ಮಾ ಅವರು, ‘ಜೂನ್ 17ರಂದು ನಡೆದಿದ್ದ ಪ್ರತಿಭಟನೆ ವೇಳೆ 36 ಬಸ್ಗಳಿಗೆ ಬೆಂಕಿ ಹಚ್ಚಲಾಗಿತ್ತು. ಒಟ್ಟು ₹ 12.97 ಲಕ್ಷ ನಷ್ಟವಾಗಿದೆ. ಪ್ರತಿಭಟನೆಗೆ ಸಂಬಂಧಿಸಿದಂತೆ ಈವರೆಗೆ 27 ಜನರನ್ನು ಬಂಧಿಸಲಾಗಿದೆ. ಉಳಿದವರನ್ನು ಗುರುತಿಸುವ ಕಾರ್ಯ ನಡೆದಿದೆ’ …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





