Breaking News

BigTv News

ಪ್ರವಾಹ ಬಂದಿದ್ದಾಗ ಬಾರದ ಪ್ರಧಾನಿಗೆ ಈಗ ರಾಜ್ಯದ ನೆನಪಾಗಿದೆ : ಸಿದ್ದರಾಮಯ್ಯ ಲೇವಡಿ

ಬೆಂಗಳೂರು: ‘2019 ಮತ್ತು ನಂತರದ ಎರಡು ವರ್ಷ ರಾಜ್ಯದಲ್ಲಿ ಭಾರಿ ಪ್ರಮಾಣದ ಪ್ರವಾಹ ಬಂದಿದ್ದಾಗ ಬಾರದ ಪ್ರಧಾನಿ ನರೇಂದ್ರ ಮೋದಿಗೆ ಈಗ ರಾಜ್ಯದ ನೆನಪಾಗಿದೆ’ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕಸಿದ್ದರಾಮಯ್ಯ ಲೇವಡಿ ಮಾಡಿದರು. ಸುದ್ದಿಗೋಷ್ಠಿಯಲ್ಲಿ ಸೋಮವಾರ ಮಾತನಾಡಿದ ಅವರು, ‘ಮೋದಿ ಅವರಿಂದ ರಾಜ್ಯಕ್ಕೆ ಯಾವೆಲ್ಲಾ ಅನ್ಯಾಯ ಆಗಿದೆ, ಜನದ್ರೋಹ ಆಗಿದೆ ಎಂದು ಎಲ್ಲರಿಗೂ ಗೊತ್ತಿದೆ. ಇಷ್ಟೆಲ್ಲ ಅನ್ಯಾಯ ಮಾಡಿ ಮೈಸೂರಿಗೆ ಬಂದು ಯೋಗ ಮಾಡುತ್ತಿದ್ದಾರೆ’ ಎಂದರು.’ಮೈಸೂರು ಬ್ಯಾಂಕ್‌, ಕಾರ್ಪೋರೇಷನ್‌ …

Read More »

ಈಜಲು ತೆರಳಿದ್ದ ಬಾಲಕ ನೀರಿನಲ್ಲಿ ಮುಳುಗಿ ಸಾವು

ತುಮಕೂರು: ದೇವಾಲಯದ ಸಮೀಪದಲ್ಲಿರುವ ಕಲ್ಯಾಣಿಯಲ್ಲಿ ಈಜಲು ತೆರಳಿದ್ದ ಬಾಲಕ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾನೆ. ಘಟನೆ ಜಿಲ್ಲೆಯ ಕೊರಟಗೆರೆ ತಾಲೂಕಿನ ವಡ್ಡಗೆರೆ ಗ್ರಾಮದಲ್ಲಿ ನಡೆದಿದೆ. ಮೃತಪಟ್ಟ ಬಾಲಕನನ್ನು ತರುಣ್ (16 ವರ್ಷ) ಎಂದು ಗುರುತಿಸಲಾಗಿದೆ. ಚಿಕ್ಕನಾಯಕನಹಳ್ಳಿ ತಾಲೂಕು ಹುಳಿಯಾರು ಹೋಬಳಿಯ ಲಕ್ಕನಹಳ್ಳಿ ಗ್ರಾಮದ ನಾಗಣ್ಣ ಎಂಬುವರ ಮಗನಾದ ಈತ ತಾಯಿಯೊಂದಿಗೆ ದೇಗುಲಕ್ಕೆ ಬಂದಿದ್ದ. ಕಲ್ಯಾಣಿ ಸಮೀಪ ತಾಯಿ ಗಂಗೆ ಪೂಜೆಯಲ್ಲಿ ನಿರತರಾಗಿದ್ದಾಗ ಬಾಲಕ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾನೆ.‌ ವಿಷಯ ತಿಳಿದು ಸ್ಥಳಕ್ಕೆ …

Read More »

ಪ್ರಾದೇಶಿಕ ಭಾಷೆಗಳೊಂದಿಗೆ ಸಂಸ್ಕೃತಕ್ಕೂ ಉತ್ತೇಜನ ನೀಡಲಾಗುವುದು : ಪ್ರಧಾನಿ

ಮೈಸೂರು: ‘ರಾಷ್ಟ್ರೀಯ ಶಿಕ್ಷಣ ನೀತಿ (ಎನ್‌ಇಪಿ) ಅನ್ವಯ ಕನ್ನಡ, ತಮಿಳು, ತೆಲುಗು ಮೊದಲಾದ ಪ್ರಾದೇಶಿಕ ಭಾಷೆಗಳೊಂದಿಗೆ ಸಂಸ್ಕೃತಕ್ಕೂ ಉತ್ತೇಜನ ನೀಡಲಾಗುವುದು’ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು. ಇಲ್ಲಿನ ಚಾಮುಂಡಿ ಬೆಟ್ಟ ತಪ್ಪಲಿನಲ್ಲಿರುವ ಸುತ್ತೂರು ಮಠದ ಆವರಣದಲ್ಲಿ ಸೋಮವಾರ ನಡೆದ ಸಮಾರಂಭದಲ್ಲಿ ಜೆಎಸ್‌ಎಸ್ ಮಹಾವಿದ್ಯಾಪೀಠದಿಂದ ನಿರ್ಮಿಸಿರುವ ಕೆಎಸ್‌ಎಸ್ (ಕ್ಯಾತನಹಳ್ಳಿ ಸಾಹುಕಾರ್ ಸಿದ್ದಲಿಂಗಯ್ಯ) ಸಂಸ್ಕೃತ ಪಾಠಶಾಲೆ ಮತ್ತು ವಿದ್ಯಾರ್ಥಿನಿಲಯದ ನೂತನ ಕಟ್ಟಡಗಳನ್ನು ಉದ್ಘಾಟಿಸಿ, ವಿಜಯಪುರ ಜ್ಞಾನಯೋಗಾಶ್ರಮದ ಸಿದ್ದೇಶ್ವರ ಸ್ವಾಮೀಜಿ ಇಂಗ್ಲಿಷ್‌ನಲ್ಲಿ ವ್ಯಾಖ್ಯಾನಿಸಿರುವ …

Read More »

ಸಿಡಿಲಿಗೆ 17 ಮಂದಿ ಬಲಿ

ಬಿಹಾರ : ಸಿಡಿಲು, ಗುಡುಗು ಸಹಿತ ಬಾರೀ ಮಳೆಗೆ 17 ಮಂದಿ ಬಲಿಯಾಗಿರುವ ಘಟನೆ ಬಿಹಾರದ ಭಾಗಲ್ಪುರ್‌ , ವೈಶಾಲಿ, ಖಗಾರಿಯಾ, ಬಂಕಾ ಹಾಗೂ ಕತಿಹಾರ್‌ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ನಡೆದಿದೆ.ಇದೀಗ ಮೃತ ಕುಟುಂಬಕ್ಕೆ ರಾಜ್ಯ ಸರಕಾರ ತಲಾ 4 ಲಕ್ಷ ರೂಪಾಯಿ ಪರಿಹಾರ ಘೋಷಣೆ ಮಾಡಿದೆ. ಬಿಹಾರದಲ್ಲಿ ಸುರಿದ ಭಾರೀ ಮಳೆಯ ಜೊತೆಗೆ ಸಿಡಿಲ ಆರ್ಭಟಕ್ಕೆ ರಾಜ್ಯದ ಹಲವು ಜಿಲ್ಲೆಗಳು ತತ್ತರಿಸಿ ಹೋಗಿವೆ. ಭಾಗಲ್ಪುರ್ ಜಿಲ್ಲೆಯೊಂದರಲ್ಲಿಯೇ ಆರು ಮಂದಿ …

Read More »

ಇನ್ನೂ 4 ದಿನಗಳ ಕಾಲ ರಾಜ್ಯದಲ್ಲಿ ಮಳೆ ಸಾಧ್ಯತೆ

ಬೆಂಗಳೂರ: ರಾಜ್ಯದಲ್ಲಿ‌ ಸುರಿಯುತ್ತಿರುವ ಮಳೆಯಿಂದ ಹಲವು ಏರಿಯಾಗಳು ಅರ್ಧಕ್ಕರ್ಧ ಮುಳುಗಡೆಯಾದಂತಾಗಿವೆ. ಇನ್ನೂ 4 ದಿನಗಳ ಕಾಲ ಕರ್ನಾಟಕದ ಕರಾವಳಿ, ಉತ್ತರ ಒಳನಾಡು, ದಕ್ಷಿಣ ಒಳನಾಡಿನಲ್ಲಿ ಮಳೆ ಮುಂದುವರೆಯಲಿದೆ. ಈ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆಯಿಂದ ಹಳದಿ ಅಲರ್ಟ್​ ಘೋಷಿಸಲಾಗಿದೆ. ಇಂದಿನಿಂದ ಜೂನ್ 24ರವರೆಗೆ ರಾಜ್ಯಾದ್ಯಂತ ನಿರಂತರ ಮಳೆಯಾಗಲಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೆಂಗಳೂರು, ಚಾಮರಾಜನಗರ, ಬಾಗಲಕೋಟೆ, ಬೆಳಗಾವಿ, ಬೀದರ್, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೊಡಗು, ತುಮಕೂರು, ಮೈಸೂರು, ಮಂಡ್ಯ, …

Read More »

ಆಕ್ಸಿಜನ್​​ ನೀಡದ ಮೋದಿ ಈಗ ಯೋಗ ಮಾಡಲಿಕ್ಕೆ ಬರ್ತಿದ್ದಾರೆ : ಸಿದ್ದರಾಮಯ್ಯ

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ 2 ದಿನಗಳ ಕರ್ನಾಟಕ ಪ್ರವಾಸವನ್ನು ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಟೀಕಿಸಿದರು. ಕುಮಾರಕೃಪಾದ ಸರ್ಕಾರಿ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಅವರು, ಕೊರೊನಾ ಸಮಯದಲ್ಲಿ ಆಕ್ಸಿಜನ್​​ ನೀಡದ ಮೋದಿ ಈಗ ಯೋಗ ಮಾಡಲಿಕ್ಕೆ ಬರ್ತಿದ್ದಾರೆ ಎಂದು ಕಿಡಿಕಾರಿದರು. ಇವತ್ತು ಮೋದಿ ಅವರು ಅಂಬೇಡ್ಕರ್ ವಿವಿ ಕಟ್ಟಡವನ್ನು ಉದ್ಘಾಟನೆ ಮಾಡ್ತಿದ್ದಾರೆ. ಇದನ್ನ ಜಾರಿಗೆ ತಂದಿದ್ದು ಯಾರು? ನಾವು. ನಮ್ಮ ಅವಧಿಯಲ್ಲೇ ಜಮೀನು ‌ಕೊಟ್ಟು ತಂದಿದ್ದು, ಈಗ ಅದನ್ನು …

Read More »

ಪ್ರಧಾನಿಯಿಂದ ಮೈಸೂರುನಲ್ಲಿ ನಮೋ ಯೋಗ

ಮೈಸೂರು: ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಜರುಗಿದ ವಿಶ್ವ ಯೋಗ ದಿನಾಚರಣೆಯ ಸಮಾರಂಭ ಚರಿತ್ರಾರ್ಹ ಕ್ಷಣಗಳಿಗೆ ವೇದಿಕೆ ಆಯಿತು. ಮೋದಿ ನೇತೃತ್ವದಲ್ಲಿ 45 ನಿಮಿಷ ಕಾಲ ನಡೆದ ಸಾಮೂಹಿಕ ಯೋಗ ಪ್ರದರ್ಶನದಲ್ಲಿ 15 ಸಾವಿರ ಜನ ಯೋಗ ಮಾಡಿ ಗಮನ ಸೆಳೆದರು. ಮಂಗಳವಾರ ಬೆಳಗ್ಗೆ 7ರಿಂದ 7.45ರ ವರೆಗೆ ಒಟ್ಟು 19 ಆಸನಗಳು ಪ್ರದರ್ಶನಗೊಂಡವು. ಇದರಲ್ಲಿ ಮೊದಲ ಒಂದು ನಿಮಿಷ ಪ್ರಾರ್ಥನೆ, 4 ನಿಮಿಷ ಚಲನಕ್ರಿಯೆ, 25 ನಿಮಿಷ ತಾಡಾಸನ, …

Read More »

ಅಂಬೇಡ್ಕರ್ ಸ್ಕೂಲ್ ಆಫ್ ಎಕನಾಮಿಕ್ಸ್ ಕ್ಯಾಂಪಸ್ ಉದ್ಘಾಟಿಸಿದ ಪ್ರಧಾನಿ

ರಾಷ್ಟ್ರದ ಸನ್ಮಾನ್ಯ ಪ್ರಧಾನ ಮಂತ್ರಿಗಳಾದ ಶ್ರೀ ನರೇಂದ್ರ ಮೋದಿ ಅವರು ಡಾ. ಬಿ. ಆರ್. ಅಂಬೇಡ್ಕರ್ ಸ್ಕೂಲ್ ಆಫ್ ಎಕನಾಮಿಕ್ಸ್ ಕ್ಯಾಂಪಸ್ ಉದ್ಘಾಟನೆ ಮಾಡಿದರು. ಇದೇ ಸಂದರ್ಭದಲ್ಲಿ ರಾಜ್ಯದ ಘನತೆವೆತ್ತ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್, ಮುಖ್ಯಮಂತ್ರಿಗಳಾದ ಶ್ರೀ ಬಸವರಾಜ ಬೊಮ್ಮಾಯಿ, ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಶಿ ಉನ್ನತ ಶಿಕ್ಷಣ ಸಚಿವರಾದ ಶ್ರೀ ಅಶ್ವಥ್ ನಾರಾಯಣ್ , ವಸತಿ ಹಾಗೂ ಮೂಲಸೌಲಭ್ಯ ಸಚಿವರಾದ ವಿ ಸೋಮಣ್ಣ ಉನ್ನತ ಶಿಕ್ಷಣ ಪ್ರಧಾನ …

Read More »

ರಾಜ್ಯದ ಒಟ್ಟು 150 ಐಟಿಐ ಸಂಸ್ಥೆಗಳ ಲೋಕಾರ್ಪಣೆ ಮಾಡಿದ ಪ್ರಧಾನಿ

ರಾಷ್ಟ್ರದ ಸನ್ಮಾನ್ಯ ಪ್ರಧಾನ ಮಂತ್ರಿಗಳಾದ ಶ್ರೀ ನರೇಂದ್ರ ಮೋದಿ ಅವರು ಉನ್ನತೀಕರಿಸಿದ ರಾಜ್ಯದ ಒಟ್ಟು 150 ಐಟಿಐ ಸಂಸ್ಥೆಗಳ ಲೋಕಾರ್ಪಣೆ ಮಾಡಿದರು. ಇದೇ ಸಂದರ್ಭದಲ್ಲಿ ರಾಜ್ಯದ ಘನತೆವೆತ್ತ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್, ಮುಖ್ಯಮಂತ್ರಿಗಳಾದ ಶ್ರೀ ಬಸವರಾಜ ಬೊಮ್ಮಾಯಿ, ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಶಿ ಉನ್ನತ ಶಿಕ್ಷಣ ಸಚಿವರಾದ ಶ್ರೀ ಅಶ್ವಥ್ ನಾರಾಯಣ್, ತಾಂತ್ರಿಕ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳಾದ ಸೆಲ್ವಕುಮಾರ್ ಉಪಸ್ಥಿತರಿದ್ದರು.

Read More »

ಪಾಲಿಕೆ ಕಟ್ಟಡದ ಮೇಲೆ ಹತ್ತಿ ಆತಂಕ ಸೃಷ್ಟಿಸಿದ ಮಾನಸಿಕ ಅಸ್ವಸ್ಥತ!ಸ್ಥಳಕ್ಕೆ ಪೋಲಿಸರು ಭೇಟಿ

ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಆವರಣದಲ್ಲಿರುವ ಪಾಲಿಕೆ ಕಟ್ಟಡದ ಮೇಲೆ ಮಾನಸಿಕ ಅಸ್ವಸ್ಥ ವ್ಯಕ್ತಿಯೊಬ್ಬ ಹತ್ತಿ ಎಲ್ಲರಲ್ಲೂ ಆತಂಕ ಸೃಷ್ಟಿಸಿದ್ದಾನೆ. ಮೂಲತ ಆಂದ್ರಪ್ರದೇಶದ ನಿವಾಸಿಮಾನಸಿಕ ಅಸ್ವಸ್ಥತ ಎನ್ನಲಾಗಿದೆ. ಏಕಾಏಕಿ ಕಟ್ಟಡ ಹತ್ತಿ ಕುಳಿತಿದ್ದಾನೆ‌‌.ಇನ್ನೂ ಸ್ಥಳೀಯರು ಹಾಗೂ ಪಾಲಿಕೆ ಸಿಬ್ಬಂದಿ ಸೇರಿದಂತೆ ಪೋಲಿಸ್ ಸಿಬ್ಬಂದಿ ಆತನನ್ನು ಇಳಿಸಲು ಹರಸಾಹಸ ಪಡುತ್ತಿದ್ದಾರೆ.ತೆಲುಗು ಭಾಷೆ ಮಾತನಾಡುತ್ತಿರುವ ಆತ ಯಾಕೇ ಅಲ್ಲಿ ಹತ್ತಿದ್ದ ಎನ್ನುವುದು ನಿಗೂಢವಾಗಿದೆ.ಇನ್ನೂ ತೆಲುಗು ಮಾತಾನಾಡಿ ನನ್ನ ಸಾಯಸಿಬೇಡಿ ಎಂದು ಹೇಳುತ್ತಿದ್ದಾನೆ.

Read More »