ಸಿಕಂದರಾಬಾದ್(ಹೈದರಾಬಾದ್): ‘ಅಗ್ನಿಪಥ್’ ನೇಮಕಾತಿ ಯೋಜನೆಗೆ ಸಂಬಂಧಿಸಿದಂತೆ ತೆಲಂಗಾಣದ ಸಿಕಂದರಾಬಾದ್ ರೈಲು ನಿಲ್ದಾಣದಲ್ಲಿ ಶುಕ್ರವಾರ ನಡೆದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಇದಕ್ಕೆ ಕಾರಣನಾದ ಮಾಸ್ಟರ್ ಮೈಂಡ್ನನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಸಿಕಂದರಾಬಾದ್ನಲ್ಲಿ ಪ್ರತಿಭಟನಾಕಾರರು ಹಲವಾರು ರೈಲುಗಳಿಗೆ ಬೆಂಕಿ ಹಚ್ಚಿದ ಹಿಂಸಾಚಾರದ ಹಿಂದಿನ ಮಾಸ್ಟರ್ಮೈಂಡ್ನನ್ನು ಆವುಲಾ ಸುಬ್ಬಾ ರಾವ್ ಎಂದು ಗುರುತಿಸಲಾಗಿದ್ದು, ಆರೋಪಿಯನ್ನು ಬಂಧಿಸಲಾಗಿದೆ. ಜನಸಮೂಹವನ್ನು ಸಜ್ಜುಗೊಳಿಸಲು ಆರೋಪಿಯು ವಾಟ್ಸಾಪ್ ಗುಂಪುಗಳನ್ನು ರಚಿಸಿದ್ದಾನೆ. ಅಷ್ಟೇ ಅಲ್ಲದೇ, ಸಿಕಂದರಾಬಾದ್ನಲ್ಲಿ ಬೆಂಕಿ ಹಚ್ಚುವಿಕೆ ಮತ್ತು ವಿಧ್ವಂಸಕ …
Read More »ತಮ್ಮ ಹುಟ್ಟುಹಬ್ಬ ಆಚರಿಸದಂತೆ ರಾಹುಲ್ ಗಾಂಧಿ ಕರೆ
ನವದೆಹಲಿ: ಇಂದು 53ನೇ ವರ್ಷಕ್ಕೆ ಕಾಲಿಟ್ಟಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ತಮ್ಮ ಹುಟ್ಟುಹಬ್ಬ ಆಚರಿಸಿ ಸಂಭ್ರಮಿಸಿದಂತೆ ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರಿಗೆ ಕರೆ ಕೊಟ್ಟಿದ್ದಾರೆ.‘ಅಗ್ನಿಪಥ’ ಯೋಜನೆ ವಿರುದ್ಧ ದೇಶದ ಹಲವಾರು ಭಾಗಗಳಲ್ಲಿ ಯುವಕರು ಬೀದಿಗಿಳಿದು ಪ್ರತಿಭಟನೆ ನಡೆಸುತ್ತಿದ್ದಾರೆ. ಅವರ ಜೊತೆ ಕಾಂಗ್ರೆಸ್ ಕಾರ್ಯಕರ್ತರು ನಿಲ್ಲಬೇಕು ಎಂದು ಸೂಚಿಸಿದ್ದಾರೆ. “ದೇಶದಲ್ಲಿ ಸದ್ಯದ ಪರಿಸ್ಥಿತಿ ಚಿಂತಾಜನಕವಾಗಿವೆ. ಕೋಟ್ಯಂತರ ಯುವಕರು ವೇದನೆಯಲ್ಲಿದ್ದಾರೆ. ನಾವು ನೊಂದ ಯುವಕರ ಮತ್ತು ಅವರ ಕುಟುಂಬಸ್ಥರ ನೋವು ಹಂಚಿಕೊಂಡು …
Read More »ಸಜನಟನನ್ನು ಭಾಮೈದಾ ಚಾಕುವಿನಿಂದ ಇರಿದು ಬರ್ಬರ ಹತ್ಯೆ
ಸಹನಟನನ್ನು ಅವರ ಭಾಮೈದಾ ಚಾಕುವಿನಿಂದ ಇರಿದು ಕೊಂದ ಆಘಾತಕಾರಿ ಘಟನೆ ಬೆಂಗಳೂರಿನ ಪಟ್ಟಣಗೆರೆಯಲ್ಲಿ ನಡೆದಿದೆ. ಲಗೋರಿ ಚಿತ್ರದಲ್ಲಿ ನಟಿಸಿದ್ದ ಸಹನಟ ಸತೀಶ್ ವಜ್ರ (36) ಅವರನ್ನು ಭಾಮೈದ ಇರಿದು ಕೊಂದಿದ್ದಾನೆ. ಸತೀಶ್ ವಜ್ರ ಅವರ ಪತ್ನಿ ಇತ್ತೀಚೆಗಷ್ಟೇ ಆತ್ಮಹತ್ಯೆಗೆ ಶರಣಾಗಿದ್ದರು.ಈ ವಿಷಯದಲ್ಲಿ ಅವರ ಕುಟುಂಬದಲ್ಲಿ ಅಸಮಾಧಾನ ಇತ್ತು ಎನ್ನಲಾಗಿದೆ. ಸತೀಶ್ ವಜ್ರನನ್ನು ಅವರ ಮನೆಯಲ್ಲಿ ಇರಿದು ಕೊಲೆ ಮಾಡಲಾಗಿದ್ದು, ರಾಜರಾಜೇಶ್ವರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Read More »ಹವಾಮಾನ ಇಲಾಖೆ ಮಹತ್ವದ ಮುನ್ಸೂಚನೆ ಹೊರಡಿಕೆ
ಚೆನ್ನೈ : ದಿನ ಕಳೆದಂತೆ ಮುಂಗಾರು ಮಾನ್ಸೂನ್ ಹೆಚ್ಚುತ್ತಿದೆ. ಮುಂದಿನ 5 ದಿನಗಳಲ್ಲಿ ತಮಿಳುನಾಡು ಮತ್ತು ಪುದುಚೇರಿಯ ಕೆಲವು ಭಾಗಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ನೀಲಗಿರಿ, ಕೊಯಮತ್ತೂರು, ತಿರುಪುರ್, ಈರೋಡ್, ಕೃಷ್ಣಗಿರಿ, ಧರ್ಮಪುರಿ, ಸೇಲಂ, ದಿಂಡಿಗಲ್, ಥೇಣಿ, ನಾಮಕ್ಕಲ್, ಕರೂರ್, ತಿರುಚಿರಾಪಳ್ಳಿ, ಪೆರಂಬಲೂರ್, ತಿರುವಣ್ಣಾಮಲೈ, ಕಲ್ಲಕುರಿಚಿ, ತಿರುಪತ್ತೂರ್ನ ಪ್ರತ್ಯೇಕ ಸ್ಥಳಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಮಾನ ಇಲಾಖೆ …
Read More »ಮುರುಘಾ ಶರಣರನ್ನು ಭೇಟಿಯಾದ ಜೆ.ಪಿ. ನಡ್ಡಾ
ಚಿತ್ರದುರ್ಗ : ನಗರದ ಶ್ರೀ ಮುರುಘಾ ಮಠಕ್ಕe ಭಾಜಪ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರು ಭೇಟಿ ನೀಡಿ ಡಾ. ಶಿವಮೂರ್ತಿ ಮುರುಘಾ ಶರಣರನ್ನು ಭೇಟಿಯಾಗಿ ಆಶೀರ್ವಾದ ಪಡೆದರು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ರಾಜ್ಯ ಉಸ್ತುವಾರಿ ಅರುಣ್ಸಿಂಗ್, ರಾಜ್ಯ ಭಾಜಪ ಅಧ್ಯಕ್ಷ ನಳೀನ್ಕುಮಾರ್ ಕಟೀಲ್, ಕೃಷಿ ಸಚಿವ ಬಿ.ಸಿ.ಪಾಟೀಲ್, ಲಕ್ಷ್ಮಣ ಸವದಿ, ಶಾಸಕರಾದ ತಿಪ್ಪಾರೆಡ್ಡಿ, ಎಂ.ಚಂದ್ರಪ್ಪ, ಶ್ರೀಮತಿ ಪೂರ್ಣಿಮಾ ಶ್ರೀನಿವಾಸ್, ವಿಧಾನಪರಿಷತ್ ಸದಸ್ಯ ಕೆ.ಎಸ್. ನವೀನ್, ಎಸ್. ಲಿಂಗಮೂರ್ತಿ, ಶಿವಕುಮಾರ್ …
Read More »ಡಿಕೆಶಿ ವಿರುದ್ಧ ವಾಗ್ದಾಳಿ ನಡೆಸಿದ ಆರ್ ಅಶೋಕ
ತುಮಕೂರು: ಪಠ್ಯಪುಸ್ತಕ ಪರಿಷ್ಕರಣೆ ವಿರೋಧಿಸಿ ಕಾಂಗ್ರೆಸ್ ನಾಯಕರು ನಡೆಸಿದ ಪ್ರತಿಭಟನೆ ವೇಳೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಪುಸ್ತಕ ಹರಿದು ಆಕ್ರೋಶ ವ್ಯಕ್ತಪಡಿಸಿದ್ದಕ್ಕೆ ತಿರುಗೇಟು ನೀಡಿರುವ ಸಚಿವ ಆರ್.ಅಶೋಕ್, ಪುಸ್ತಕ ಹರಿದರೆ ನ್ಯೂಸ್ ಆಗ್ತಿನಿ ಅಂತ ಹಾಗೆ ಮಾಡಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ. ತುಮಕೂರಿನ ಮಾಯಸಂದ್ರದಲ್ಲಿ ಮಾತನಾಡಿದ ಸಚಿವ ಆರ್.ಅಶೋಕ್, ಡಿಕೆಶಿ ಹಿಂದೆ ಸರ್ಕಾರದಲ್ಲಿ ಮಂತ್ರಿಯಾಗಿ ಕೆಲಸ ಮಾಡಿದವರು. ಯಾರೋ ಕೊಟ್ಟ ಪುಸ್ತಕ ಓದಿ ಮಾತನಾಡುತ್ತಿದ್ದಾರೆ. ಮೊದಲು ಪುಸ್ತಕವನ್ನು ಸರಿಯಾಗಿ ಓದಲಿ. …
Read More »ಸರ್ಕಾರದ ನಿರ್ಧಾರಕ್ಕೆ ಕಿಡಿಕಾರಿದ ಡಿಕೆಶಿ
ಬೆಂಗಳೂರು: ಅಂತರಾಷ್ಟ್ರೀಯ ಯೋಗ ದಿನಾಚರಣೆ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಮೈಸೂರಿಗೆ ಆಗಮಿಸಿಲಿದ್ದಾರೆ ಎಂದು ಮೋದಿ ಪ್ರಯಾಣಿಸುವ ಮಾರ್ಗದ ಕಾಲೇಜುಗಳಿಗೆ ರಜೆ ನೀಡಿದ್ದು ಯಾಕೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಪ್ರಶ್ನಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಡಿ.ಕೆ.ಶಿವಕುಮಾರ್, ಪ್ರಧಾನಿ ಮೋದಿ ಪ್ರಯಾಣಿಸುವ ರಸ್ತೆಗಳಲ್ಲಿ ಕಾಲೇಜಿಗೆ ರಜೆ ನೀಡಲಾಗಿದೆ. ಕಾಲೇಜುಗಳಿಗೆ ಯಾಕೆ ರಜೆ ಕೊಟ್ಟಿದ್ದಾರೆ? ವಿದ್ಯಾರ್ಥಿಗಳು ಗಲಾಟೆ ಮಾಡ್ತಾರಾ? ಅವರನ್ನು ಅನುಮಾನದಿಂದ ನೋಡುತ್ತಿರುವುದಾದರೂ ಯಾಕೆ? ವಿದ್ಯಾರ್ಥಿಗಳು ಭಯೋತ್ಪಾದಕರಾ? ಎಂದು ಕಿಡಿ ಕಾರಿದ್ದಾರೆ. ಪ್ರಧಾನಿಯವರಿಗೆ …
Read More »ಫೇಲಾಗಿದ್ದಕ್ಕೆ ಆತ್ಮಹತ್ಯೆಗೆ ಶರಣಾಗಿದಕ್ಕೆ ತೀವ್ರ ದಿಗ್ಭ್ರಮೆ ಉಂಟು ಮಾಡಿದೆ : ಕುಮಾರಸ್ವಾಮಿ
ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ನಿರೀಕ್ಷಿತ ಅಂಕ ಬರದಿರುವುದಕ್ಕೆ ಮತ್ತು ಫೇಲಾಗಿದ್ದಕ್ಕೆ 8 ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿರುವುದಕ್ಕೆ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಬೇಸರ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಎಚ್ಡಿಕೆ, ‘ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ನಿರೀಕ್ಷಿತ ಅಂಕ ಬರಲಿಲ್ಲ ಅಥವಾ ಫೇಲಾದೆವು ಎನ್ನುವ ಕಾರಣಕ್ಕೆ ರಾಜ್ಯದಲ್ಲಿ 8 ವಿದ್ಯಾರ್ಥಿಗಳು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂಬ ಸುದ್ದಿ ನನಗೆ ತೀವ್ರ ದಿಗ್ಭ್ರಮೆ ಉಂಟು ಮಾಡಿದೆ’ ಎಂದು ಹೇಳಿದ್ದಾರೆ.
Read More »ಬಾಗಲಕೋಟೆ ಡಿಸಿಗೆ ಕರೆ ಮಾಡಿ ತರಾಟೆಗೆ ತೆಗೆದುಕೊಂಡ ಮಾಜಿ ಸಿಎಂ
ಬಾಗಲಕೋಟೆ: ಜೂನ್ 21 ರಂದು ಪಟ್ಟದಕಲ್ಲಿನಲ್ಲಿ ನಡೆಯುವ ಯೋಗ ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯಲ್ಲಿ ಕೇಳದೇ ಹೆಸರು ಹಾಕಿದ್ದಕ್ಕೆ ಗರಂ ಆಗಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಾಗಲಕೋಟೆ ಡಿಸಿ ಸುನೀಲಕುಮಾರ ಅವರಿಗೆ ಕರೆ ಮಾಡಿ ತರಾಟೆಗೆ ತೆಗೆದುಕೊಂಡರು. ಕರೆ ಮಾಡಿದ ಮಾಜಿ ಸಿಎಂ ಸಿದ್ದರಾಮಯ್ಯ, ನಿನಗೆ ಶಿಷ್ಟಾಚಾರ ಅಂದ್ರೆ ಏನು ಎಂಬುದು ಗೊತ್ತಿಲ್ವಾ? ನೀನು ಮೊದಲು ಶಿಷ್ಟಾಚಾರವನ್ನು ಪಾಲಿಸಬೇಕು. ಅವನ್ಯಾರೋ ಸಚಿವ ಬರ್ತಾನೆ ಅಂತಾ ನೀನು ಆಮಂತ್ರಣ ಪತ್ರಿಕೆ ಮಾಡಿ …
Read More »ಕಸವನ್ನು ಎತ್ತಿ ಸರಳತೆಗೆ ಮಾದರಿಯಾದ ಪ್ರಧಾನಿ
ನವದೆಹಲಿ : ದೆಹಲಿಯ ಪ್ರಗತಿ ಮೈದಾನದ ಸುರಂಗದ ಪರಿಶೀಲನೆಯ ವೇಳೆ ಪ್ರಧಾನಿ ನರೇಂದ್ರ ಮೋದಿ ಬರಿ ಕೈಗಳಿಂದ ಕಸವನ್ನು ಎತ್ತುವ ಮೂಲಕ ಮತ್ತೆ ಸುದ್ದಿಯಾಗಿದ್ದಾರೆ. ಬಿಜೆಪಿ ನಾಯಕರು ಮತ್ತು ಕಾರ್ಯಕರ್ತರು ಈ ವಿಡಿಯೋವನ್ನು ಹಂಚಿಕೊಂಡು ಸ್ವಚ್ಛ ಭಾರತಕ್ಕೆ ಮತ್ತೆ ಮತ್ತೆ ಪ್ರಧಾನಿ ಪ್ರೇರಣೆ ನೀಡುತ್ತಿದ್ದಾರೆ ಎಂದು ಬರೆದಿದ್ದಾರೆ. ಭಾನುವಾರ ನೂತನವಾಗಿ ಉದ್ಘಾಟನೆಗೊಂಡ ಸುರಂಗ ಮಾರ್ಗವನ್ನು ಪರಿಶೀಲಿಸುತ್ತಿದ್ದ ಮೋದಿ ಅವರು ಎಸೆದಿದ್ದ ಖಾಲಿ ಪ್ಲಾಸ್ಟಿಕ್ ನೀರಿನ ಬಾಟಲ್ ಮತ್ತು ಇತರ ಕೆಲವು …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





