ಬೆಂಗಳೂರು: ಪೊಲೀಸ್ ಕಮಿಷನರೆಟ್ ನ ವಿವಿಧ ಠಾಣೆಗಳ ವ್ಯಾಪ್ತಿಯ ಮಾದಕ ವಸ್ತು ಸೇವನೆಗೆ ಸಂಬಂಧಿಸಿದಂತೆ ಮೂರು ಮಂದಿಯನ್ನು ಜೂ.29ರಂದು ಪೊಲೀಸರು ಬಂಧಿಸಿದ್ದಾರೆ. ಬಜಾಲ್ ಕ್ರಾಸ್ ರೋಡ್ ನಿಂದ ಫೈಸಲ್ ನಗರ ಕಡೆಗೆ ಹೋಗುವ ರಸ್ತೆ ಜಂಕ್ಷನ್ ಬಳಿ ದ್ವಿತಿನ್ ನನ್ನು ಕಂಕನಾಡಿ ನಗರ ಠಾಣೆ ಪೊಲೀಸರು, ನವಭಾರತ್ ವೃತ್ತದ ಬಳಿ ಅಶೋಕನಗರ ನಿವಾಸಿ ಪ್ರಜ್ವಲ್ ಬಿ.ಅಮೀನ್ (23) ನನ್ನು ಬಂದರು ಠಾಣೆ ಪೊಲೀಸರು, ಮೂಡುಶೆಡ್ಡೆ ಆಶ್ರಯನಗರ ಖಾಲಿ ಮೈದಾನದಲ್ಲಿ ಪಿಲಿಕುಳ …
Read More »ವೇಶ್ಯಾವಾಟಿಕೆ ದಂಧೆಯಲ್ಲಿ ತೊಡಗಿದ್ದ 12 ಅಕ್ರಮ ಬಾಂಗ್ಲಾ ಪ್ರಜೆಗಳು ವಶಕ್ಕೆ
ಬೆಂಗಳೂರು: ಅಕ್ರಮವಾಗಿ ಭಾರತಕ್ಕೆ ಪ್ರವೇಶಿಸಿ ವೇಶ್ಯಾವಾಟಿಕೆ ದಂಧೆಯಲ್ಲಿ ತೊಡಗಿದ್ದ ಆರೋಪದ ಮೇಲೆ ಇಬ್ಬರು ಬಾಂಗ್ಲಾದೇಶದ ಪ್ರಜೆಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. 10 ಮಹಿಳೆಯರನ್ನು ರಕ್ಷಿಸಿ ಎಫ್ಆರ್ಆರ್ಒ ಅಧಿಕಾರಿಗಳಿಗೆ ಒಪ್ಪಿಸಿದ್ದಾರೆ. ಬಾಣಸವಾಡಿ ಹಾಗೂ ಹೆಣ್ಣೂರು ವ್ಯಾಪ್ತಿಯಲ್ಲಿ ನಡೆದ ದಾಳಿಯಲ್ಲಿ ಆರೋಪಿಗಳಿಂದ ಬಾಂಗ್ಲಾದೇಶದ ಗುರುತಿನ ದಾಖಲೆಗಳು ಪತ್ತೆಯಾಗಿವೆ. ಮಧ್ಯವರ್ತಿಗಳ ಮೂಲಕ ಮಹಿಳೆಯರನ್ನು ಕರೆತಂದು ಜಾಲತಾಣಗಳ ಮೂಲಕ ವೇಶ್ಯಾವಾಟಿಕೆ ನಡೆಸಲಾಗುತ್ತಿತ್ತು ಎಂದು ಪೊಲೀಸರು ತಿಳಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿದಿದೆ.
Read More »ಮಲೆನಾಡು & ಕರಾವಳಿ ಕಾಡುಗಳಲ್ಲಿ ಬಾಂಬ್ ತಯಾರಿಕೆ? ಪೊಲೀಸರಿಗೆ ಮಹತ್ತರ ಸುಳಿವು!
ತುಮಕೂರು ಕಾರು ಸ್ಫೋಟ ಪ್ರಕರಣದ ತನಿಖೆ ವೇಳೆ ಮಲೆನಾಡು ಮತ್ತು ಕರಾವಳಿ ಭಾಗದಲ್ಲಿ ಅಕ್ರಮ ಬಾಂಬ್ ಹಾಗೂ ಬಂದೂಕು ತಯಾರಿಕಾ ಜಾಲ ಸಕ್ರಿಯವಾಗಿರುವ ಮಾಹಿತಿ ಪೊಲೀಸರಿಗೆ ಲಭ್ಯವಾಗಿದೆ. ಈ ಸಂಬಂಧ ಉತ್ತರ ಕನ್ನಡ ಜಿಲ್ಲೆಯಲ್ಲಿ 60ಕ್ಕೂ ಹೆಚ್ಚು ಮಂದಿಯನ್ನು ವಿಚಾರಣೆಗೆ ಒಳಪಡಿಸಲಾಗಿದೆ. ಮುಖ್ಯ ಆರೋಪಿ ನಾಗೇಂದ್ರಗೌಡನಿಗೆ ನೆರವು ನೀಡಿದ ಆರೋಪದಲ್ಲಿ ಅಂಕೋಲಾ ಮತ್ತು ಹೊನ್ನಾವರ ಮೂಲದ ಮೂವರನ್ನು ಬಂಧಿಸಿ ವಿಚಾರಣೆ ನಡೆಸಲಾಗುತ್ತಿದೆ. ಜಾಲದ ಮೂಲ ಪತ್ತೆಗೆ ಮೂರು ವಿಶೇಷ ಪೊಲೀಸ್ …
Read More »ಸೈನಿಕ ಪತಿಯಿಂದಲೇ ಪತ್ನಿಯ ಬರ್ಬರ ಕೊಲೆ ಕೇಸ್, ಹತ್ಯೆಯ ಕಥೆ ಬಿಚ್ಚಿಟ್ಟ ಎಸ್ಪಿ!
ಬೀದರ್ ಜಿಲ್ಲೆಯಲ್ಲಿ ಯುವತಿಯ ಸಾವಿನ ಪ್ರಕರಣಕ್ಕೆ ಹೊಸ ತಿರುವು ಸಿಕ್ಕಿದ್ದು, ಆರ್ಮಿ ಸಿಬ್ಬಂದಿ ಭಗವತ್ ಜ್ಞಾನೇಶ್ವರ್ ತನ್ನ ಪತ್ನಿಯನ್ನು ಕಾರಿನ ಸ್ಪ್ಯಾನರ್ನಿಂದ ಹಲ್ಲೆ ಮಾಡಿ ಕೊಂದ ಆರೋಪದಲ್ಲಿ ಬಂಧನಕ್ಕೊಳಗಾಗಿದ್ದಾನೆ. ಆರಂಭದಲ್ಲಿ ರಸ್ತೆ ಅಪಘಾತ ಎಂದು ಭಾವಿಸಲಾಗಿತ್ತು. ಆದರೆ, ಮಹಿಳೆ ಸಾವಿಗೂ ಮುನ್ನ ನೀಡಿದ ಹೇಳಿಕೆಯ ಆಧಾರದ ಮೇಲೆ ಪ್ರಕರಣವನ್ನು ಕೊಲೆ ಪ್ರಕರಣವಾಗಿ ಪರಿವರ್ತಿಸಲಾಗಿದೆ. ದಂಪತಿ ನಡುವೆ ಕೌಟುಂಬಿಕ ಕಲಹವಿತ್ತು ಎನ್ನಲಾಗಿದ್ದು, ಕೊಲೆಯ ಹಿಂದಿನ ನಿಖರ ಕಾರಣ ತಿಳಿಯಲು ಪೊಲೀಸರು ತನಿಖೆ …
Read More »ಪೆಟ್ರೋಲ್ ಬಂಕ್ ನಲ್ಲಿ ಹಣ ಕಸಿದು ಪರಾರಿ
ಬಿಡದಿ: ಪೆಟ್ರೋಲ್ ಬಂಕ್ ನಲ್ಲಿ ಕಾರಿಗೆ ಪೆಟ್ರೋಲ್ ಹಾಕಿಸಿಕೊಂಡು ಪೆಟ್ರೋಲ್ ಹಾಕಿದ ಮಹಿಳೆ ಕೈಯಲ್ಲಿದ್ದ ಹಣವನ್ನ ಕಿತ್ತು ಪರಾರಿಯಾಗಿರುವ ಘಟನೆ ಕಾಡುಮನೆ ಕ್ರಾಸ್ ಬಳಿ ನಡೆದಿದೆ.vಕಾಡುಮನೆ ಕ್ರಾಸ್ ಬಳಿಯ ಕೋಕೋ ಬಿಡದಿ ಇಂಡಿಯನ್ ಆಯಿಲ್ ಪೆಟ್ರೋಲ್ ಬಂಕ್ ನಲ್ಲಿ ಈ ಘಟನೆ ನಡೆದಿದೆ.ಸೋಮವಾರ ಸಂಜೆ 5 ಗಂಟೆ ಸುಮಾರಿಗೆ ಕೇರಳ ರಾಜ್ಯದ ನೋಂದಣಿಯ ಕೆಂಪು ಬಣ್ಣದ ಸ್ವಿಫ್ಟ್ ಕಾರು ಚಾಲಕ ಪೆಟ್ರೋಲ್ ಹಾಕಿಸಿಕೊಳ್ಳಲು ಬಂಕ್ ಗೆ ಬಂದಿದ್ದ. ಈ ವೇಳೆ …
Read More »ವರದಕ್ಷಿಣೆ ಕಿರುಕುಳಕ್ಕೆ ಮಹಿಳೆ ಆತ್ಮಹತ್ಯೆ; ಪತಿ, ಅತ್ತೆ, ಮಾವನಿಗೆ 7 ವರ್ಷ ಜೈಲು
ಬೀದರ್: ವರದಕ್ಷಿಣೆ ಕಿರುಕುಳದಿಂದ ಮಹಿಳೆ ಆತ್ಮಹತ್ಯೆ ಮಾಡಿಕೊಂಡ ಪ್ರಕರಣದಲ್ಲಿ ಪತಿ, ಅತ್ತೆ ಮತ್ತು ಮಾವನಿಗೆ ತಲಾ 7 ವರ್ಷ ಸಾದಾ ಜೈಲು ಶಿಕ್ಷೆ ವಿಧಿಸಿ ಬೀದರ್ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ತೀರ್ಪು ನೀಡಿದೆ. ಜೊತೆಗೆ ಐಪಿಸಿ 306ರಡಿ 5 ವರ್ಷ ಜೈಲು ಹಾಗೂ ತಲಾ ₹10 ಸಾವಿರ ದಂಡವೂ ವಿಧಿಸಲಾಗಿದೆ. ಭಾಲ್ಕಿ ತಾಲೂಕಿನ ಕಳಸದಾಳ ಗ್ರಾಮದ ಸುಮಯ್ಯ ಅವರು 2024ರ ಏಪ್ರಿಲ್ನಲ್ಲಿ ನೇಣು ಬಿಗಿದು ಮೃತಪಟ್ಟಿದ್ದರು. ಮದುವೆಯಾದ …
Read More »ಬೆಂಗಳೂರಲ್ಲಿ ಮತ್ತೊಂದು ಭೀಕರ ಅಗ್ನಿ ಅವಘಡ: ಹೊತ್ತಿ ಉರಿದ ಅಪಾರ್ಟ್ಮೆಂಟ್!
ಬೆಂಗಳೂರು: ರಾಜಧಾನಿಯ ಹೃದಯಭಾಗದಲ್ಲಿರುವ ಅಶೋಕನಗರದ ಅಪಾರ್ಟ್ಮೆಂಟ್ ಫ್ಲ್ಯಾಟ್ ಒಂದರಲ್ಲಿ ಮಂಗಳವಾರ ಆಕಸ್ಮಿಕ ಅಗ್ನಿ ಅವಘಡ ಸಂಭವಿಸಿದೆ. ಇಲ್ಲಿನ ಪ್ರಸಿದ್ಧ ಗರುಡಾ ಮಾಲ್ ಸಮೀಪದಲ್ಲೇ ಇರುವ ಅಪಾರ್ಟ್ಮೆಂಟ್ನಲ್ಲಿ ಈ ಘಟನೆ ನಡೆದಿದ್ದು, ಸ್ಥಳೀಯರಲ್ಲಿ ಕೆಲಕಾಲ ಭೀತಿ ಆವರಿಸಿತ್ತು. ಅಪಾರ್ಟ್ಮೆಂಟ್ನ ಫ್ಲ್ಯಾಟ್ ಒಂದರಿಂದ ಏಕಾಏಕಿ ದಟ್ಟವಾದ ಹೊಗೆ ಮತ್ತು ಬೆಂಕಿ ಕಾಣಿಸಿಕೊಂಡಿದೆ. ಅದೃಷ್ಟವಶಾತ್, ಬೆಂಕಿ ವ್ಯಾಪಿಸುತ್ತಿದ್ದಂತೆ ಮುನ್ನೆಚ್ಚರಿಕೆ ವಹಿಸಿ ನಿವಾಸಿಗಳು ತಕ್ಷಣವೇ ಹೊರಗೆ ಓಡಿ ಬಂದಿದ್ದಾರೆ. ಹೀಗಾಗಿ ಯಾವುದೇ ರೀತಿಯ ಪ್ರಾಣಾಪಾಯ ಅಥವಾ …
Read More »ಬಿಸಿಯೂಟ ತಯಾರಿಸುವಾಗ ಸಿಲಿಂಡರ್ ಸೋರಿಕೆಯಾಗಿ ಬೆಂಕಿ ಅವಘಡ: ಕಡತಿ ಶಾಲೆಯಲ್ಲಿ ಆತಂಕ
ವಿಜಯನಗರ: ರಾಜ್ಯದಲ್ಲಿ ಇಂದು ಸಾಲು ಸಾಲು ಬೆಂಕಿ ಅವಘಡ ಸಂಭವಿಸಿರುವ ವರದಿಯಾಗಿದೆ. ಶಾಲೆಯಲ್ಲಿ ಬಿಸಿಯೂಟ ತಯಾರಿಸುವಾಗ ಸಿಲಿಂದರ್ ಸೋರಿಕೆಯಾಗಿ ಅಡುಗೆ ಕೊಟ್ಟಡಿಯಲ್ಲಿ ಬೆಂಕಿ ಅವಘಡ ಸಂಭವಿಸಿರುವ ಘಟನೆ ವಿಜಯನಗರ ಜಿಲ್ಲೆಯಲ್ಲಿ ನಡೆದಿದೆ. ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲೂಕಿನ ಕಡತಿ ಪ್ರಾಥಮಿಕ ಶಾಲೆಯಲ್ಲಿ ಈ ಘಟನೆ ನಡೆದಿದ್ದು, ವಿದ್ಯಾರ್ಥಿಗಳು, ಶಿಕ್ಷಕರು ಆತಂಕಕ್ಕೀಡಾಗಿದ್ದಾರೆ. ಸಿಲಿಂಡರ್ ಸೋರಿಕೆಯಾಗಿ ಏಕಾಏಕಿ ಬೆಂಕಿ ಹೊತ್ತಿಕೊಂಡಿದೆ. ವಿದ್ಯಾರ್ಥಿಗಳು, ಶಿಕ್ಷಕರು ಶಾಲೆಯಿಂದ ಹೊರಗೋಡಿ ಬಂದು ರಕ್ಷಿಸಿಕೊಂಡಿದ್ದಾರೆ. ಘಟನಾ ಸ್ಥಳಕ್ಕೆ ಅಗ್ನಿಶಾಮಕ …
Read More »ಕಾರ ಹುಣ್ಣಿಮೆಯಂದೇ ಕರಾಳ ಕೃತ್ಯ – ಮಸೀದಿಯ ಮುಂದೆ ಪಟಾಕಿ ಸಿಡಿಸಿದ್ದಕ್ಕೆ ರೈತರ ಕೈ ಕಡಿದ ದುಷ್ಕರ್ಮಿಗಳು!
ಹಾವೇರಿ: ಹಾನಗಲ್ ತಾಲೂಕಿನ ನರೇಗಲ್ ಗ್ರಾಮದಲ್ಲಿ ಹೋರಿ ಬೆದರಿಸುವ ಸ್ಪರ್ಧೆ ವೇಳೆ ನಡೆದ ಗಲಾಟೆ ಹಿಂಸಾಚಾರಕ್ಕೆ ತಿರುಗಿ, ದುಷ್ಕರ್ಮಿಗಳ ದಾಳಿಯಲ್ಲಿ ಇಬ್ಬರು ರೈತರ ಕೈ ಕಡಿಯಲ್ಪಟ್ಟಿದ್ದು, ಎಂಟಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಗಾಯಾಳುಗಳಲ್ಲಿ ಮೂವರ ಸ್ಥಿತಿ ಗಂಭೀರವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಮಸೀದಿ ಮುಂಭಾಗದಲ್ಲಿ ಪಟಾಕಿ ಸಿಡಿಸಿದ ವಿಚಾರಕ್ಕೆ ಎರಡು ಗುಂಪುಗಳ ನಡುವೆ ವಾಗ್ವಾದ ಆರಂಭವಾಗಿ, ಬಳಿಕ ಮಾರಕಾಸ್ತ್ರಗಳಿಂದ ದಾಳಿ ನಡೆದಿರುವುದಾಗಿ ಪ್ರಾಥಮಿಕ ಮಾಹಿತಿ ತಿಳಿಸಿದೆ. ಘಟನೆಯಿಂದ ಗ್ರಾಮದಲ್ಲಿ ಉದ್ವಿಗ್ನ ವಾತಾವರಣ …
Read More »ಹೋಮ್ ಸ್ಟೇಯಲ್ಲಿ ಯುವತಿ ಅನುಮಾನಾಸ್ಪದ ಸಾವು, ಪೋಷಕರಿಂದ ಲವ್ ಜಿಹಾದ್
ಚಿಕ್ಕಬಳ್ಳಾಪುರ: ಮುದ್ದೇನಹಳ್ಳಿ ಸಮೀಪದ ಹೋಂಸ್ಟೇಯೊಂದರಲ್ಲಿ ಬೆಂಗಳೂರು ಮೂಲದ ಸಾಯಿ ಸುರಭಿ ಅನುಮಾನಾಸ್ಪದವಾಗಿ ಮೃತಪಟ್ಟಿದ್ದು, ಆಕೆಯ ಪ್ರಿಯಕರ ಎನ್ನಲಾದ ಕೇರಳ ಮೂಲದ ಸಂಜೀತ್ ಅಲಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆ. ಸ್ಥಳದಲ್ಲಿ ಮಾತ್ರೆಗಳು ಹಾಗೂ ಡೈರಿ ಪತ್ತೆಯಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಮೃತೆಯ ತಾಯಿ ಗೀತಾ ಅವರು ಇದು ಕೊಲೆ ಎಂದು ಆರೋಪಿಸಿ, ಈ ಹಿಂದೆ ನೀಡಿದ್ದ ದೂರಿನ ಮೇಲೆ ಕ್ರಮ ಕೈಗೊಂಡಿದ್ದರೆ ಮಗಳು ಬದುಕಿರುತ್ತಿದ್ದಳು ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಆದರೆ ಪೊಲೀಸರು …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





