ಬೆಂಗಳೂರು : ನಾಯಿ ಮತ್ತು ಮನುಷ್ಯ ಪ್ರೀತಿಯನ್ನು ಅನಾವರಣಗೊಳಿರುವ 777 ಚಾರ್ಲಿ ಕನ್ನಡ ಚಲನ ಚಿತ್ರವನ್ನು ವೀಕ್ಷಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ‘ತಮ್ಮ ಮನೆಯಲ್ಲಿದ್ದ ಪ್ರೀತಿಯ ನಾಯಿ ‘ ಸನ್ನಿ’ ಯನ್ನು ನೆನಪಿಸಿಕೊಂಡು ಭಾವುಕರಾದರು. ಮನುಷ್ಯ ಮತ್ತು ನಾಯಿಯ ನಡುವಿನ ಪ್ರೀತಿ, ಯಾವುದೇ ಕಟ್ಟುಪಾಡಿಲ್ಲದ ಪ್ರೀತಿಗೆ ಉತ್ತಮ ಉದಾಹರಣೆ. ಅತ್ಯಂತ ಪರಿಶುದ್ಧ ಪ್ರೀತಿ ಇದು ಎಂದು ಮುಖ್ಯಮಂತ್ರಿಗಳು ಗದ್ಗದಿತರಾಗಿ ನುಡಿದರು. ನಾಯಕನಟ ರಕ್ಷಿತ ಶೆಟ್ಟಿ ಮನೋಜ್ಞ ವಾಗಿ ನಟಿಸಿದ್ದಾರೆ ಎಂದು …
Read More »ನೂತನ ಲೋಕಾಯುಕ್ತರನ್ನಾಗಿ ನ್ಯಾ. ಭೀಮನಗೌಡ ಸಂಗನಗೌಡ ಪಾಟೀಲ್ ಆಯ್ಕೆ
ಬೆಂಗಳೂರು: ಹಾಲಿ ಉಪ ಉಪಲೋಕಾಯುಕ್ತ ನ್ಯಾಯಮೂರ್ತಿ ಭೀಮನಗೌಡ ಸಂಗನಗೌಡ ಪಾಟೀಲ್ ಅವರನ್ನು ರಾಜ್ಯದ ನೂತನ ಲೋಕಾಯುಕ್ತರನ್ನಾಗಿ ನೇಮಕ ಮಾಡಲಾಗಿದೆ.ಈ ಬಗ್ಗೆ ರಾಜ್ಯಪಾಲ ಥಾವರಚಂದ್ ಗೆಹ್ಲೋಟ್ ಮಂಗಳವಾರ ಆದೇಶ ಹೊರಡಿಸಿದ್ದಾರೆ. ಲೋಕಾಯುಕ್ತರಾಗಿದ್ದ ನ್ಯಾ. ಪಿ.ವಿಶ್ವನಾಥ್ ಶೆಟ್ಟಿ 2022ರ ಜನವರಿ 27ರಂದು ನಿವೃತ್ತರಾಗಿದ್ದರು. ಅಂದಿನಿಂದ ಸುಮಾರು 5 ತಿಂಗಳುಗಳ ಕಾಲ ಈ ಹುದ್ದೆ ಖಾಲಿ ಇತ್ತು. ಇದೀಗ ಈ ಹುದ್ದೆಗೆ 2019ರ ನವೆಂಬರ್ನಿಂದ ಉಪ ಲೋಕಾಯುಕ್ತರಾಗಿ ಕಾರ್ಯನಿರ್ವಹಿಸುತ್ತಿದ್ದ ಬಿ.ಎಸ್.ಪಾಟೀಲ್ರನ್ನು ನೇಮಕ ಮಾಡಲಾಗಿದೆ.
Read More »ಪರೋಕ್ಷವಾಗಿ ಪ್ರಧಾನಿಗೆ ಟಾಂಗ್ ಕೊಟ್ಟ ವರುಣ್ ಗಾಂಧಿ
ದೇಶದಲ್ಲಿ 1 ಕೋಟಿ ಹುದ್ದೆಗಳು ಖಾಲಿ ಇವೆ ಎಂದು ಬಿಜೆಪಿ ಸಂಸದ ವರುಣ್ ಗಾಂಧಿ ಹೇಳಿಕೆ ನೀಡುವ ಮೂಲಕ ಪ್ರಧಾನಿ ನರೇಂದ್ರ ಮೋದಿ 18 ತಿಂಗಳಲ್ಲಿ 10 ಲಕ್ಷ ಹುದ್ದೆ ನೇಮಕಾತಿ ಸೂಚನೆಗೆ ಪರೋಕ್ಷವಾಗಿ ಟಾಂಗ್ ನೀಡಿದ್ದಾರೆ. ಮಂಗಳವಾರ ಬೆಳಿಗ್ಗೆ ಪ್ರಧಾನಿ ಟ್ವೀಟ್ ಮಾಡಿ 10 ಲಕ್ಷ ಹುದ್ದೆ ಸೃಷ್ಟಿಗೆ ಆದೇಶ ನೀಡಲಾಗಿದೆ ಎಂದು ಹೇಳಿಕೊಂಡಿದ್ದರು. ಕಳೆದ ಕೆಲವು ಸಮಯದಿಂದ ತಮ್ಮದೇ ಪಕ್ಷದ ನೀತಿಗಳನ್ನು ಬಹಿರಂಗವಾಗಿ ಖಂಡಿಸುತ್ತಿರುವ ಸಂಸದ ವರುಣ್ …
Read More »ಮಮತಾ ಬ್ಯಾನರ್ಜಿ ಸಭೆಯಲ್ಲಿ ಮಾಜಿ ಸಿಎಂ ಭಾಗಿ
ಬೆಂಗಳೂರು ; ರಾಷ್ಟ್ರಪತಿ ಚುನಾವಣೆಯಲ್ಲಿ ವಿರೋಧ ಪಕ್ಷಗಳ ತಂತ್ರಗಳ ಕುರಿತು ಚರ್ಚಿಸಲು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸಭೆ ಕರೆದಿದ್ದಾರೆ.ಕರ್ನಾಟಕದ ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಗುರುವಾರ ನವದೆಹಲಿಯಲ್ಲಿ ಮಮತಾ ಬ್ಯಾನರ್ಜಿ ವಿರೋಧ ಪಕ್ಷಗಳ ಸಭೆ ಕರೆದಿದ್ದಾರೆ. ಮಾಜಿ ಪ್ರಧಾನಿ ಎಚ್. ಡಿ. ದೇವೇಗೌಡರು ಸಭೆಯಲ್ಲಿ ಉಪಸ್ಥಿತರಿರಲಿದ್ದಾರೆ. ಗುರುವಾರ ಬೆಳಗ್ಗೆ ಎಚ್. ಡಿ. ಕುಮಾರಸ್ವಾಮಿ ನವದೆಹಲಿಗೆ ತೆರಳಲಿದ್ದಾರೆ.
Read More »ಚಾಮುಲ್ ಚುನಾವಣೆ : ಅತ್ರಂತ ಫಲಿತಾಂಶ
ಚಾಮರಾಜನಗರ: ಜಿಲ್ಲಾ ಹಾಲು ಉತ್ಪಾದಕರ ಸಹಕಾರ ಸಂಘಗಳ ಒಕ್ಕೂಟ (ಚಾಮುಲ್)ದ 9 ನಿರ್ದೇಶಕ ಸ್ಥಾನಗಳಿಗೆ ಮಂಗಳವಾರ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತ ನಾಲ್ವರು, ಬಿಜೆಪಿ ಬೆಂಬಲಿತ ಇಬ್ಬರು, ಪಕ್ಷೇತರ ಇಬ್ಬರು ಹಾಗೂ ಜೆಡಿಎಸ್ ಬೆಂಬಲಿತ ಓರ್ವರು ಗೆಲುವು ಸಾಧಿಸಿದ್ದಾರೆ. ಕಾಂಗ್ರೆಸ್ ನಿಂದ ನಿಕಟಪೂರ್ವ ಅಧ್ಯಕ್ಷ ಎಚ್.ಎಸ್ ನಂಜುಂಡಪ್ರಸಾದ್, ಹಾಲಿ ನಿರ್ದೇಶಕ ಎಂ. ನಂಜುಂಡಸ್ವಾಮಿ, ಶಾಹುಲ್ ಅಹಮದ್(ತೌರಿಕ್), ಶಾಸಕ ಪುಟ್ಟರಂಗಶೆಟ್ಟರ ಪುತ್ರಿ ಶೀಲಾ ಪುಟ್ಟರಂಗಶೆಟ್ಟಿ, ಬಿಜೆಪಿಯಿಂದ ಎಚ್.ಎಸ್. ಬಸವರಾಜು, ವೈ.ಸಿ. ನಾಗೇಂದ್ರ, …
Read More »ಹುಬ್ಬಳ್ಳಿಯಲ್ಲಿ ಅಣ್ಣ ತಮ್ಮಂದಿರಿಗೆ ಚಾಕು ಇರಿದ ದುಷ್ಕರ್ಮಿಗಳು
ಹುಬ್ಬಳ್ಳಿ : ಅಣ್ಣ ತಮ್ಮಂದಿರಿಗೆ ಚಾಕು ಇರಿತವಾದ ಘಟನೆ ಹಳೆ ಹುಬ್ಬಳ್ಳಿ ಠಾಣೆ ವ್ಯಾಪ್ತಿಯ ಆನಂದ ನಗರದಲ್ಲಿ ಜರುಗಿದೆ. ಜೈಲಾನಿ ಹಾಗೂ ಜಾವಿದ್ ಎನ್ನುವ ಯುವಕರಿಗೆ ಚಾಕು ಇರಿತವಾಗಿದೆ. ತೀವ್ರ ಗಾಯಗೊಂಡಿರುವ ಇಬ್ಬರು ವ್ಯಕ್ತಿಗಳು ಕಿಮ್ಸ್ ಆಸ್ಪತ್ರೆಗೆ ಕುಟುಂಬಸ್ಥರು ಸಾಗಿಸಿದ್ದು, ದಾಖಲಿಸಲಾಗಿದೆ. ಕುಳಿತ ವ್ಯಕ್ತಿಗಳಿಗೆ ಚಾಕು ಇರಿದಿದ್ದಾರೆ ಎಂದು ಕುಟುಂಬಸ್ಥರು ಹೇಳುತ್ತಿದ್ದಾರೆ. ಸ್ಥಳಕ್ಕೆ ಹಳೆ ಹುಬ್ಬಳ್ಳಿ ಪೊಲೀಸರು ದೌಡಾಯಿಸಿದ್ದಾರೆ.
Read More »ಪೊಲೀಸ್ ಇನ್ಸ್ಪೆಕ್ಟರ್ ಮಹಾಂತೇಶ ಹೊಳಿ ಮೇಲೆ ಕ್ರಮಕ್ಕೆ ಆಗ್ರಹಿಸಿ ಧರಣಿ
BIG TV NEWS Subscribe like share
Read More »ಉಣಕಲ್ ಕೆರೆಯಲ್ಲಿ ಈಜುವ ಹೋದ ವ್ಯಕ್ತಿ ಸಾವು ರಕ್ಷಣಾ ಕಾರ್ಯ ಮುಂದುವರಿಕೆ
BIG TV NEWS Subscribe like share
Read More »ಕೊರೋನಾ ಪ್ರಕರಣ ಏರಿಕೆ : 2 ಶಾಲೆಗಳಿಗೆ ರಜೆ ಘೋಷಣೆ
ಬೆಂಗಳೂರು : ಕೊರೋನಾ ಸೊಂಕಿನ ಪ್ರಕರಣಗಳು ಹೆಚ್ಚಳವಾಗುತ್ತಿದೆ, ಅದರಲ್ಲೂ ನಗರದ ಎರಡು ಖಾಸಗಿ ಶಾಲೆಯ ಮಕ್ಕಳಿಗೆ ಸೋಂಕು ತಗುಲಿರುವುದು ಆತಂಕಕ್ಕೆ ಕಾರಣವಾಗಿದೆ. ದಾಸರಹಳ್ಳಿಯ ಎರಡು ಖಾಸಗಿ ಶಾಲೆಗಳ ಮಕ್ಕಳಿಗೆ ಕೊರೋನಾ ವಕ್ಕರಿಸಿದೆ. 4 ಮತ್ತು 5 ತರಗತಿಯ ಒಟ್ಟು 21 ಮಕ್ಕಳಿಗೆ 6ನೇ ತರಗತಿಯ 10 ಮಕ್ಕಳಿಗೆ ಕೊರೊನಾ ಕಾಣಿಸಿಕೊಂಡಿದೆ. 31 ವಿದ್ಯಾರ್ಥಿಗಳಿಗೆ ಪಾಸಿಟಿವ್ ಎರಡು ಶಾಲೆಗ ಶಿಕ್ಷಕರನ್ನು ಕೊರೊನಾ ಟೆಸ್ಟ್ಗೆ ಒಳಪಡಿಸಲಾಗಿದೆ. ಈ ಹಿನ್ನೆಲೆಯಲ್ಲಿ ಆ ಶಾಲೆಗಳಿಗೆ ರಜೆ …
Read More »ತಮಿಳುನಾಡು ಸಿಎಂ ಪ್ರಧಾನಿಗೆ ಬರೆದಿರುವ ಪತ್ರಕ್ಕೆ ಬೊಮ್ಮಾಯಿ ತಿರುಗೇಟು
ಬೆಂಗಳೂರು- ಮೇಕೆದಾಟು ಕುಡಿಯುವ ನದಿನೀರು ಯೋಜನೆ ಸಂಬಂಧ ಇದೇ 17ರಂದು ಕರೆದಿರುವ ಸಭೆಯನ್ನು ನಡೆಸದಂತೆ ತಮಿಳುನಾಡು ಸಿಎಂ ಪ್ರಧಾನಿಗೆ ಬರೆದಿರುವ ಪತ್ರಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿರುಗೇಟು ನೀಡಿದ್ದಾರೆ. ಇದು ಒಕ್ಕೂಟ ವ್ಯವಸ್ಥೆಯ ಮೇಲೆ ತಮಿಳುನಾಡು ಸರ್ಕಾರ ದಬ್ಬಾಳಿಕೆ ನಡೆಸಲು ಹೊರಟಿದೆ. ನಮ್ಮ ಪಾಲಿನ ನೀರನ್ನು ಬಳಸಿಕೊಂಡರೆ ಇವರಿಗೇನು? ಸಮಸ್ಯೆ ಎಂದು ಖಾರವಾಗಿ ಪ್ರಶ್ನಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಅವರು ಪ್ರಧಾನಿ ನರೇಂದ್ರಮೋದಿಗೆ ಮೇಕೆದಾಟು ಯೋಜನೆ …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





