Breaking News

BigTv News

ವಸತಿ ರಹಿತರಿಗೆ ಸಿಎಂ ಬಸವರಾಜ ಬೊಮ್ಮಾಯಿ ಭರ್ಜರಿ ಸಿಹಿಸುದ್ದಿ

ಬೆಂಗಳೂರು : ನಗರ ಪ್ರದೇಶದ ವಸತಿ ರಹಿತರಿಗೆ ಸಿಎಂ ಬಸವರಾಜ ಬೊಮ್ಮಾಯಿ ಭರ್ಜರಿ ಸಿಹಿಸುದ್ದಿ ನೀಡಿದ್ದು, ನಗರ ಪ್ರದೇಶದಲ್ಲಿ 1 ಲಕ್ಷ ಮನೆಗಳನ್ನು ನಿರ್ಮಿಸಲು ರಾಜ್ಯ ಸರ್ಕಾರ ವಿಶೇಷ ಒತ್ತು ನೀಡಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಮನೆಗಳ ನಿರ್ಮಾಣ ಕಾಮಗಾರಿ ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಮಾತನಾಡಿದ ಸಿಎಂ ಬೊಮ್ಮಾಯಿ, ರಾಜ್ಯ ಸರ್ಕಾರವು 52 ಸಾವಿರ ಮನೆಗಳ ನಿರ್ಮಾಣ ಕಾರ್ಯವನ್ನು ಪೂರ್ತಿ ಮಾಡಿದ್ದು, ಇನ್ನೂ 50 ಸಾವಿರ ಮನೆಗಳಿಗೆ ಕಾರ್ಯಾದೇಶ …

Read More »

ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ 4 ದಿನ ಭಾರೀ ಮಳೆ

ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ 4 ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿಯಲ್ಲಿ ಮುಂದಿನ 48 ಗಂಟೆ ಗುಡುಗು ಮಿಂಚು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇರುವುದರಿಂದ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.

Read More »

ಹೊರಟ್ಟಿ ಭಾವಚಿತ್ರದ ಬ್ಯಾಡ್ಜ್ ಧರಿಸಿ ಬಂದ ಶಿಕ್ಷಕ : ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ

ಹುಬ್ಬಳ್ಳಿ: ಶಿಕ್ಷಕರೊಬ್ಬರು ಬಿಜೆಪಿ ಅಭ್ಯರ್ಥಿ ಬಸವರಾಜ ಹೊರಟ್ಟಿ ಅವರ ಭಾವಚಿತ್ರದ ಬ್ಯಾಡ್ಜ್ ಧರಿಸಿ, ಇಲ್ಲಿನ‌ ದೇಶಪಾಂಡೆ ನಗರದ ಎನ್‌.ಆರ್. ದೇಸಾಯಿ ರೋಟರಿ ಶಾಲೆಯ ಮತಗಟ್ಟೆಗೆ ಭೇಟಿ ನೀಡುವ ಮೂಲಕ, ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿದರು. ಈ ಪೈಕಿ, ನಗರದ ಸಿದ್ದರಾಮೇಶ್ವರ ಪ್ರೌಢಶಾಲೆಯ ಶಶಿಧರ ಗಾಜಿ ಅವರು ಬ್ಯಾಡ್ಜ್ ಧರಿಸಿದ್ದರು. ಈ ಕುರಿತು, ಕಾಂಗ್ರೆಸ್ ಕಾರ್ಯಕರ್ತರು ಆಕ್ಷೇಪ ವ್ಯಕ್ತಪಡಿಸಿದರು. ಚುನಾವಣಾ ಅಧಿಕಾರಿಗಳು ಮತಗಟ್ಟೆಗಳ ಬಳಿ ನೀತಿ ಸಂಹಿತೆ ಉಲ್ಲಂಘನೆಯಾಗದಂತೆ ನೋಡಿಕೊಳ್ಳಬೇಕು. ಈ …

Read More »

ಕಿಮ್ಸ್ ಆಸ್ಪತ್ರೆಯ ವಸತಿ ಗೃಹ ದಲ್ಲಿ ಸರಣಿ ಕಳ್ಳತನ

ಹುಬ್ಬಳ್ಳಿ : ಕಿಮ್ಸ್ ಆಸ್ಪತ್ರೆಯ ನಾಲ್ಕು ಮನೆಗಳಲ್ಲಿ ಸರಣಿ ಕಳ್ಳತನ ವಾದ ಘಟನೆ ನಗರದಲ್ಲಿ ನಡೆದಿದೆ. ಚಿನ್ನಾಭರಣ ನಗದು ಸೇರಿ ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳನ್ನು ಖದೀಮರು ದೋಚಿದ್ದಾರೆ. ಬೀಗ ಹಾಕಿರುವ ಮನೆಗಳನ್ನೇ ಟಾರ್ಗೆಟ್ ಮಾಡಿ, ಬೀಗ ಮುರಿದು ಒಳನುಗ್ಗಿ ನಾಲ್ವರು ಕಳ್ಳರಿಂದ ಈ ಕೃತ್ಯ ನಡೆದಿದೆ. ಕಳ್ಳರು ವಸತಿ ಗೃಹದಲ್ಲಿ ನುಗ್ಗಿ ಮನೆಗಳನ್ನು ಚೆಕ್ ಮಾಡ್ತಿರೊ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಎರಡು ತಿಂಗಳ ಹಿಂದೆಯೂ ಇದೇ ವಸತಿ …

Read More »

ಬಸವರಾಜ್ ಹೊರಟ್ಟಿ ಗೆಲ್ಲಿಸುವಂತೆ ಮನವಿ ಮಾಡಿದ ನಿಂಬಣ್ಣವರ

ಕಲಘಟಗಿ : ಶಿಕ್ಷಕರ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಬಸವರಾಜ್ ಹೊರಟ್ಟಿ ಅವರಿಗೆ ಶಿಕ್ಷಕ ಮತದಾರರು ತಮ್ಮ ಅಮೂಲ್ಯವಾದ ಮತವನ್ನು ನೀಡಿ ಗೆಲ್ಲಿಸಬೇಕೆಂದು ಕಲಘಟಗಿ ಕ್ಷೇತ್ರದ ಶಾಸಕ ನಿಂಬಣ್ಣವರ ಅವರು ಮನವಿ ಮಾಡಿದ್ದಾರೆ .42 ವರ್ಷಗಳಿಂದ ನಿರಂತರವಾಗಿ ಬಸವರಾಜ್ ಹೊರಟ್ಟಿ ಅವರು ಶಿಕ್ಷಕರ ಪರ ಕೆಲಸ ಮಾಡಿದ್ದಾರೆ ಅವರಿಗೆ ಈಗ ಮತ್ತೊಂದು ಜಾನ್ ಸಿಕ್ಕಿದ್ದು ಅವರನ್ನು ಗೆಲ್ಲಿಸುವಂತೆ ಮಾಡುತ್ತೇನೆ ಎಂದು ಪ್ರಕಟಣೆ ಮೂಲಕ ತಿಳಿಸಿದ್ದಾರೆ .

Read More »

ಧಾರವಾಡದ ತಹಶೀಲ್ದಾರ ಕಚೇರಿಯಲ್ಲಿ ಸಾಲಿನಲ್ಲಿ ನಿಂತ ಶಿಕ್ಷಕರು

ಧಾರವಾಡ : ಪಶ್ಚಿಮ ಶಿಕ್ಷಕರ ಕ್ಷೇತ್ರಕ್ಕೆ ನಡೆಯುತ್ತಿರುವ ಚುನಾವಣೆಗೆ ಇಂದು ಮತದಾನ ಆರಂಭಗೊಂಡಿದೆ . ಬೆಳಿಗ್ಗೆ 8 ಗಂಟೆಗೆ ಮತದಾನ ಆರಂಭಗೊಂಡಿದ್ದು , ಶಿಕ್ಷಕ ಮತದಾರರ ಮತ ಹಾಕಲು ಆಗಮಿಸುತ್ತಿದ್ದಾರೆ. ಧಾರವಾಡದ ತಹಶೀಲ್ದಾರ ಕಚೇರಿಯಲ್ಲಿ ತೆರೆಯಲಾಗಿರುವ ಮತಗಟ್ಟೆಗೆ ಆಗಮಿಸುತ್ತಿರುವ ಶಿಕ್ಷಕರು ಸರತಿ ಸಾಲಿನಲ್ಲಿ ನಿಂತು ಮತದಾನ ಮಾಡುತ್ತಿದ್ದಾರೆ .

Read More »

ಮತದಾನ ಕೇಂದ್ರಕ್ಕೆ ಹೊರಟ್ಟಿ ಭೇಟಿ

ಹುಬ್ಬಳ್ಳಿ :ಪಶ್ಚಿಮ ಶಿಕ್ಷಕರ ಮತಕ್ಷೇತ್ರದ ಚುನಾವಣೆಯ ಮತದಾನ ಹಿನ್ನೆಲೆ ಎನ್ ಆರ್ ದೇಸಾಯಿ ರೊಟರಿ ಸ್ಕೂಲ್ ನಲ್ಲಿ ಮತದಾನ ಕೇಂದ್ರಕ್ಕೆ ಬಿಜೆಪಿ ಅಭ್ಯರ್ಥಿ ಬಸವರಾಜ ಹೊರಟ್ಟಿ ಭೇಟಿ ನೀಡಿದ್ದಾರೆ. ಮತಗಟ್ಟೆ ಭೇಟಿಯ ಬಳಿಕ ಬಿಜೆಪಿ ಅಭ್ಯರ್ಥಿ ಹೊರಟ್ಟಿ ಸುದ್ದಿಗಾರರೊಂದಿಗೆ ಮಾತನಾಡಿ, ಮತದಾನದ ಒಟ್ಟು ಮತಗಳಲ್ಲಿ 70 % ಮತಗಳಿಂದ ಗೆಲುತ್ತೆವೆ.ಎಲ್ಲಾ ಕಡೆ ಓಡಾಡಿದಿನಿ, ಮೊದಲು ಲೀಡರ್ಸ್ ಓಟ್ ಹಾಕ್ತಾಯಿದ್ದಾರೆ.ಎಲ್ಲಾ ಕಡೆ ಎರಡೆರಡು ಟೀಮ್ ಮಾಡಿದಿವಿ ಎಲ್ಲರಿಗೂ ಹತ್ತ ಗಂಟೆಯ ಒಳಗೆ …

Read More »

ಸಾಲುಗಟ್ಟಿ ಮತಚಲಾವಣೆಗೆ ನಿಂತ ಶಿಕ್ಷಕರು : ಪೊಲೀಸ್ ಬಿಗಿ ಭದ್ರತೆ‌

ಹುಬ್ಬಳ್ಳಿ : ಪಶ್ಚಿಮ ಶಿಕ್ಷಕರ ಪರಿಷತ್ ಚುನಾವಣೆ ಮತದಾನ ಸರಿಯಾಗಿ 8 ಗಂಟೆಗೆ ಪ್ರಕ್ರಿಯೆ ಆರಂಭವಾಗಿದೆ. ಹುಬ್ಬಳ್ಳಿಯ ಎನ್.ಆರ್. ಬೊಮ್ಮಾಯಿ ದೇಸಾಯಿ ರೋಟರಿ ಶಾಲೆಯಲ್ಲಿನ ಮತಗಟ್ಟೆಯಲ್ಲಿ ಮತ ಚಲಾವಣೆಗೆ ಸಾಲುಗಟ್ಟಿ ಶಿಕ್ಷಕ ನಿಂತಿದ್ದಾರೆ. ಸಾಯಂಕಾಲ 5 ಗಂಟೆಯ ವರೆಗೆ ಮತ ಚಲಾಯಿಸಲು ಅವಕಾಶ ನೀಡಲಾಗಿದೆ. ಪಶ್ಚಿಮ ಶಿಕ್ಷಕರ ಮತಕ್ಷೇತ್ರ ನಾಲ್ಕು ಜಿಲ್ಲೆಗಳ ವ್ಯಾಪ್ತಿ ಹೊಂದಿದೆ. ಧಾರವಾಡ, ಹಾವೇರಿ, ಗದಗ, ಉತ್ತರ ಕನ್ನಡ ಜಿಲ್ಲೆಗಳನ್ನೊಳಗೊಂಡಿದೆ. ಮತ ಚಲಾವಣೆ 17,973 ಮಾಡಲಿದ್ದಾರೆ. ಇವರಲ್ಲಿ …

Read More »

ನೂಪುರ್ ಶರ್ಮಾ ಪ್ರಕರಣ : 3 ಜನ ಬಂಧನ

ಬೆಳಗಾವಿ: ಬಿಜೆಪಿ ಮಾಜಿ ರಾಷ್ಟ್ರೀಯ ವಕ್ತಾರೆ ನೂಪುರ್ ಶರ್ಮಾ ಅವರನ್ನು ಬಂಧಿಸುವಂತೆ ಆಗ್ರಹಿಸಿ ಅವರ ಪ್ರತಿಕೃತಿಯನ್ನು ಗಲ್ಲಿಗೇರಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಗಡಿ ಜಿಲ್ಲೆ ಬೆಳಗಾವಿ ಪೊಲೀಸರು ಮೂವರನ್ನು ಬಂಧಿಸಿದ್ದಾರೆ. ಪ್ರಕರಣದ ಮೂವರು ಆರೋಪಿಗಳಾದ ಮೊಹಮ್ಮದ್ ಶೋಯಬ್, ಅಮನ್ ಮೊಕಾಶಿ, ಅರ್ಬಾಜ್ ಮೊಕಾಶಿಯನ್ನು ಬೆಳಗಾವಿ ಮಾರ್ಕೆಟ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ಪ್ರವಾದಿ ಮೊಹಮ್ಮದ್ ಪೈಗಂಬರ್ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದ ನೂಪುರ್ ಶರ್ಮಾ ಅವರನ್ನು ಬಂಧಿಸುವಂತೆ ಆಗ್ರಹಿಸಿ ಶುಕ್ರವಾರ …

Read More »

ಹಾಸ್ಟೆಲ್ ನಲ್ಲಿ ವಿದ್ಯಾರ್ಥಿ ನೇಣು ಬಿಗಿದುಕೊಂಡು ಆತ್ಮಹತ್ಯೆ

ಉಳ್ಳಾಲ: ವಿದ್ಯಾರ್ಥಿಯೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾದ ಘಟನೆ ತಲಪಾಡಿ ಕೆ.ಸಿ.ರೋಡ್ ಬಳಿ ಇರುವ ಶಾರದ ವಿದ್ಯಾನಿಕೇತನ ಶಾಲೆಯ ಹಾಸ್ಟೆಲ್ ನಲ್ಲಿ ನಡೆದಿದೆ. 9ನೇ ತರಗತಿಯ ವಿದ್ಯಾರ್ಥಿ ಪೂರ್ವಾಜ್ (14) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ ಎಂದು ತಿಳಿದುಬಂದಿದೆ. ಪೂರ್ವಾಜ್ ಬೆಂಗಳೂರಿನ ಹೊಸಕೋಟೆ ಮೂಲದವನಾಗಿದ್ದು, ಶನಿವಾರ ಆತನ ತಾಯಿಯ ಹುಟ್ಟುಹಬ್ಬ ಇತ್ತು. ಈ ವೇಳೆ ತಾಯಿಗೆ ಶುಭ ಹಾರೈಸಲು ಹಾಸ್ಟೆಲ್ ಸಿಬ್ಬಂದಿಯೊಂದಿಗೆ ಫೋನ್‌ ಕೇಳಿದ್ದು, ಸಿಬ್ಬಂದಿ ಫೋನ್ ಕರೆ ಮಾಡಲು …

Read More »