Breaking News

BigTv News

ಸಾಲುಗಟ್ಟಿ ಮತಚಲಾವಣೆಗೆ ನಿಂತ ಶಿಕ್ಷಕರು : ಪೊಲೀಸ್ ಬಿಗಿ ಭದ್ರತೆ‌

ಹುಬ್ಬಳ್ಳಿ : ಪಶ್ಚಿಮ ಶಿಕ್ಷಕರ ಪರಿಷತ್ ಚುನಾವಣೆ ಮತದಾನ ಸರಿಯಾಗಿ 8 ಗಂಟೆಗೆ ಪ್ರಕ್ರಿಯೆ ಆರಂಭವಾಗಿದೆ. ಹುಬ್ಬಳ್ಳಿಯ ಎನ್.ಆರ್. ಬೊಮ್ಮಾಯಿ ದೇಸಾಯಿ ರೋಟರಿ ಶಾಲೆಯಲ್ಲಿನ ಮತಗಟ್ಟೆಯಲ್ಲಿ ಮತ ಚಲಾವಣೆಗೆ ಸಾಲುಗಟ್ಟಿ ಶಿಕ್ಷಕ ನಿಂತಿದ್ದಾರೆ. ಸಾಯಂಕಾಲ 5 ಗಂಟೆಯ ವರೆಗೆ ಮತ ಚಲಾಯಿಸಲು ಅವಕಾಶ ನೀಡಲಾಗಿದೆ. ಪಶ್ಚಿಮ ಶಿಕ್ಷಕರ ಮತಕ್ಷೇತ್ರ ನಾಲ್ಕು ಜಿಲ್ಲೆಗಳ ವ್ಯಾಪ್ತಿ ಹೊಂದಿದೆ. ಧಾರವಾಡ, ಹಾವೇರಿ, ಗದಗ, ಉತ್ತರ ಕನ್ನಡ ಜಿಲ್ಲೆಗಳನ್ನೊಳಗೊಂಡಿದೆ. ಮತ ಚಲಾವಣೆ 17,973 ಮಾಡಲಿದ್ದಾರೆ. ಇವರಲ್ಲಿ …

Read More »

ನೂಪುರ್ ಶರ್ಮಾ ಪ್ರಕರಣ : 3 ಜನ ಬಂಧನ

ಬೆಳಗಾವಿ: ಬಿಜೆಪಿ ಮಾಜಿ ರಾಷ್ಟ್ರೀಯ ವಕ್ತಾರೆ ನೂಪುರ್ ಶರ್ಮಾ ಅವರನ್ನು ಬಂಧಿಸುವಂತೆ ಆಗ್ರಹಿಸಿ ಅವರ ಪ್ರತಿಕೃತಿಯನ್ನು ಗಲ್ಲಿಗೇರಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಗಡಿ ಜಿಲ್ಲೆ ಬೆಳಗಾವಿ ಪೊಲೀಸರು ಮೂವರನ್ನು ಬಂಧಿಸಿದ್ದಾರೆ. ಪ್ರಕರಣದ ಮೂವರು ಆರೋಪಿಗಳಾದ ಮೊಹಮ್ಮದ್ ಶೋಯಬ್, ಅಮನ್ ಮೊಕಾಶಿ, ಅರ್ಬಾಜ್ ಮೊಕಾಶಿಯನ್ನು ಬೆಳಗಾವಿ ಮಾರ್ಕೆಟ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ಪ್ರವಾದಿ ಮೊಹಮ್ಮದ್ ಪೈಗಂಬರ್ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದ ನೂಪುರ್ ಶರ್ಮಾ ಅವರನ್ನು ಬಂಧಿಸುವಂತೆ ಆಗ್ರಹಿಸಿ ಶುಕ್ರವಾರ …

Read More »

ಹಾಸ್ಟೆಲ್ ನಲ್ಲಿ ವಿದ್ಯಾರ್ಥಿ ನೇಣು ಬಿಗಿದುಕೊಂಡು ಆತ್ಮಹತ್ಯೆ

ಉಳ್ಳಾಲ: ವಿದ್ಯಾರ್ಥಿಯೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾದ ಘಟನೆ ತಲಪಾಡಿ ಕೆ.ಸಿ.ರೋಡ್ ಬಳಿ ಇರುವ ಶಾರದ ವಿದ್ಯಾನಿಕೇತನ ಶಾಲೆಯ ಹಾಸ್ಟೆಲ್ ನಲ್ಲಿ ನಡೆದಿದೆ. 9ನೇ ತರಗತಿಯ ವಿದ್ಯಾರ್ಥಿ ಪೂರ್ವಾಜ್ (14) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ ಎಂದು ತಿಳಿದುಬಂದಿದೆ. ಪೂರ್ವಾಜ್ ಬೆಂಗಳೂರಿನ ಹೊಸಕೋಟೆ ಮೂಲದವನಾಗಿದ್ದು, ಶನಿವಾರ ಆತನ ತಾಯಿಯ ಹುಟ್ಟುಹಬ್ಬ ಇತ್ತು. ಈ ವೇಳೆ ತಾಯಿಗೆ ಶುಭ ಹಾರೈಸಲು ಹಾಸ್ಟೆಲ್ ಸಿಬ್ಬಂದಿಯೊಂದಿಗೆ ಫೋನ್‌ ಕೇಳಿದ್ದು, ಸಿಬ್ಬಂದಿ ಫೋನ್ ಕರೆ ಮಾಡಲು …

Read More »

ಆಸ್ಪತ್ರೆಗೆ ದಾಖಲಾದ ಸೋನಿಯಾ ಗಾಂಧಿ

ನವದೆಹಲಿ: ಇತ್ತೀಚೆಗೆ ಕೋವಿಡ್ ಸೋಂಕಿಗೆ ತುತ್ತಾಗಿದ್ದ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ಅವರ ಆರೋಗ್ಯದಲ್ಲಿ ಭಾನುವಾರ ಏರುಪೇರಾಗಿದ್ದು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ,ಕಾಂಗ್ರೆಸ್ ಮೂಲಗಳ ಪ್ರಕಾರ ಸೋನಿಯಾ ಗಾಂಧಿ ಅವರನ್ನು ದೆಹಲಿಯ ಗಂಗಾರಾಮ್ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ. ಈ ಕುರಿತು ಮಾಹಿತಿ ನೀಡಿರುವ ಕಾಂಗ್ರೆಸ್ ವಕ್ತಾರ ರಂದೀಪ್ ಸುರ್ಜೇವಾಲಾ ಅವರು, ಸೋನಿಯಾ ಗಾಂಧಿ ಅವರು ಕೋವಿಡ್ ಸಂಬಂಧಿ ಅನಾರೋಗ್ಯದಿಂದ ಬಳಲುತ್ತಿದ್ದಾರೆ. ಆದರೆ ಭಯ ಪಡುವ ಅಗತ್ಯವಿಲ್ಲ.. ಅವರ ಆರೋಗ್ಯ …

Read More »

ವಿಧಾನ ಪರಿಷತ್ ಪಶ್ಚಿಮ ಶಿಕ್ಷಕರ ಕ್ಷೇತ್ರದ ಚುನಾವಣೆಗೆ ಸಕಲ ಸಿದ್ಧತೆ- ಮತಕೇಂದ್ರಗಳಿಗೆ ಡಿಸಿ ಭೇಟಿ

ಹುಬ್ಬಳ್ಳಿ; ಭಾರೀ ಕದನ ಕುತೂಹಲಕ್ಕೆ ಕಾರಣವಾಗಿರುವ ಕರ್ನಾಟಕ ವಿಧಾನ ಪರಿಷತ್ತಿನ ಪಶ್ಚಿಮ ಶಿಕ್ಷಕರ ಕ್ಷೇತ್ರದ ಚುನಾವಣೆಗೆ ನಾಳೆ ಜೂನ್ 13 ರಂದು ಮತದಾನ ನಡೆಯಲಿದ್ದು . ಮತದಾನಕ್ಕೆ ಸಕಲ ಸಿದ್ಧತೆ ಪೂರ್ಣಗೊಂಡಿದೆ‌. ನಗರದ ವಿವಿಧ ಮತಕೇಂದ್ರಗಳಿಗೆ ಪೂರ್ವ ತಯಾರಿ ಕುರಿತು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಭೇಟಿ ಪರಿಶೀಲನೆ ಮಾಡಿದರು. ಈ ಕುರಿತು ಡಿಟೇಲ್ಸ್ ಇದೆ ನೋಡಿ. ಹುಬ್ಬಳ್ಳಿ ಧಾರವಾಡ ಸೇರಿದಂತೆ ಜಿಲ್ಲೆಯಲ್ಲಿ 21 ಮತಗಟ್ಟೆಗಳನ್ನು ಸ್ಥಾಪಿಸಲಾಗಿದ್ದು ಜಿಲ್ಲೆಯಲ್ಲಿ 6445 ಒಟ್ಟು …

Read More »

ಒಂದೇ ದಿನದಲ್ಲಿ 777 ಚಾರ್ಲಿ ಕಲೆಕ್ಷನ್ ಎಷ್ಟು ಗೊತ್ತಾ?

777 ಚಾರ್ಲಿ ಸಿನಿಮಾ ನಿನ್ನೆ ಬಿಡುಗಡೆಯಾಗಿ ಒಳ್ಳೆಯ ಪ್ರತಿಕ್ರಿಯೆ ಪಡೆಯುತ್ತಿದೆ. ನಾಯಿ ಹಾಗೂ ಮನುಷ್ಯನ ನಡುವಿನ ಸಂಬಂಧವನ್ನು ಅದ್ಭುತವಾಗಿ ಚಿತ್ರಿಸಿರುವ ಈ ಸಿನಿಮಾ ಎಲ್ಲರನ್ನು ಭಾವುಕಗೊಳಿಸಿದೆ.6 ಕೋಟಿಗಿಂತ ಹೆಚ್ಚು ಕಲೆಕ್ಷನ್ ಮಾಡಿದಿಯಂತೆ ಸಿನಿಮಾ ಎನ್ನಲಾಗಿದೆ.‌ ವಿಶ್ವದಾದ್ಯಂತ 777 ಚಾರ್ಲಿ’ ಸಿನಿಮಾ ಮೊದಲ ದಿನವೇ ಸರಿ ಸುಮಾರು 6-10 ಕೋಟಿ ರೂಪಾಯಿ ಗಳಿಕೆ ಮಾಡಿದೆ ಎಂದು ಬಾಕ್ಸ್ ಆಫೀಸ್​ ಕಲೆಕ್ಷನ್ ವರದಿ ಮಾಡಿದೆ. ಆದರೆ ಈ ಬಗ್ಗೆ ಚಿತ್ರತಂಡ ಯಾವುದೇ ಮಾಹಿತಿ …

Read More »

15 ಸಾವಿರ ಶಿಕ್ಷಕರನ್ನು ಶೀಘ್ರವೇ ಭರ್ತಿ ಮಾಡಲಾಗುವುದು : ಬೊಮ್ಮಾಯಿ

ಬೆಳಗಾವಿ: :  15 ಸಾವಿರ ಶಿಕ್ಷಕರನ್ನು ಶೀಘ್ರವೇ ಭರ್ತಿ ಮಾಡಲಾಗುವುದು. ಕಾಲೇಜಿನಲ್ಲಿ 6 ಸಾವಿರ ಸ್ಮಾರ್ಟ್‌ ಕ್ಲಾಸ್‌ಗಳನ್ನು ಆರಂಭಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ನಗರದಲ್ಲಿ ನಡೆದ ವಾಯವ್ಯ ಮತ ಕ್ಷೇತ್ರದ ಬಿಜೆಪಿ ಅಭ್ಯರ್ಥಿಗಳ ಪ್ರಚಾರ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಮೊದಲ ಬಾರಿಗೆ ಒಂದೇ ವರ್ಷದಲ್ಲಿ ಏಳು ಸಾವಿರ ಶಾಲಾ ಕೊಠಡಿಗಳನ್ನು ಗ್ರಾಮೀಣ ಭಾಗದಲ್ಲಿ ಕಟ್ಟಲು ಅನುದಾನ ನೀಡಿ, ಇದೇ ವರ್ಷದಲ್ಲಿ ಪೂರ್ತಿಗೊಳಿಸಲು ಸೂಚಿಸ ಲಾಗಿದೆ.ಏಳು ಸರಕಾರಿ ಎಂಜಿನಿಯರಿಂಗ್‌ …

Read More »

ಅಡ್ಡಮತದಾನ ನಡೆಸಿದ ಇಬ್ಬರು ಶಾಸಕರನ್ನು ಪಕ್ಷದಿಂದ‌ ಹೊರ ಹಾಕಲಾಗುವುದು : ಇಬ್ರಾಹಿಂ

ಬೆಂಗಳೂರು: ರಾಜ್ಯಸಭಾ ಚುನಾವಣೆಯಲ್ಲಿ ಡೀಲ್, ಡೀಲ್, ಡೀಲ್, ಕಾಂಗ್ರೆಸ್ ಡೀಲ್ ಎಂದು ವ್ಯಂಗ್ಯವಾಡಿರುವ ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ, ಅಡ್ಡಮತದಾನ ನಡೆಸಿದ ಇಬ್ಬರು ಶಾಸಕರನ್ನು ಪಕ್ಷದಿಂದ‌ ಹೊರ ಹಾಕಲಾಗುವುದು ಎಂದು‌ ಹೇಳಿದ್ದಾರೆ. ಸುದ್ದಿಗಾರರ ಜತೆ‌ ಮಾತನಾಡಿದ ಅವರು, ಅಡ್ಡ ಮತದಾನ ಮಾಡಿದ ಶಾಸಕರನ್ನು ಹೊರ ಹಾಕುತ್ತೇವೆ. ಇವರನ್ನು ಉಚ್ಛಾಟಿಸಲು ತೀರ್ಮಾನಿಸಲಾಗಿದೆ ಎಂದು ಹೇಳಿದರು.ರಾಜ್ಯಸಭಾ ಚುನಾವಣೆಗೆ ಮನ್ಸೂರ್ ಅಲಿಖಾನ್ ಅವರನ್ನು ನಿಲ್ಲಿಸಿ ಕಾಂಗ್ರೆಸ್ ಸಾಧಿಸಿದ್ದೇನು? ಅಲ್ಪಸಂಖ್ಯಾತರನ್ನು ಸೋಲಿಸುವುದಕ್ಕೆ ಚುನಾವಣೆಗೆ ನಿಲ್ಲಿಸಿದ್ದಿರಾ? ಸಿದ್ದರಾಮಯ್ಯ ಈಗ …

Read More »

ಪಿಎಸ್​ಐ ಅಕ್ರಮ : ಮತ್ತೋರ್ವ ಆರೋಪಿ ಬಂಧನ

ಕಲಬುರಗಿ: ರಾಜ್ಯಾದ್ಯಂತ ಭಾರೀ ಸಂಚಲನ ಮೂಡಿಸಿದ್ದ ಪಿಎಸ್​ಐ ಅಕ್ರಮ ನೇಮಕಾತಿ ಪ್ರಕರಣದ ಮತ್ತೋರ್ವ ಆರೋಪಿಯನ್ನು ಸಿಐಡಿ ಪೊಲೀಸರು ಬಂಧಿಸಿದ್ದಾರೆ. ಪೊಲೀಸ್ ಕಾನ್ಸ್​​ಸ್ಟೇಬಲ್ ಇಸ್ಮಾಯಿಲ್ ಜಮಾದಾರ್ ಬಂಧಿತ ಆರೋಪಿ.ಇಸ್ಮಾಯಿಲ್, ಪ್ರಕರಣದ ಪ್ರಮುಖ ಆರೋಪಿ ಆರ್​.ಡಿ ಪಾಟೀಲ್​ ಸಹಾಯ ಪಡೆದು ಬ್ಲೂಟೂತ್​ ಬಳಸಿ ಪರೀಕ್ಷೆ ಬರೆದಿರುವ ಆರೋಪ ಕೇಳಿಬಂದಿದೆ.ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ನಾಪತ್ತೆಯಾಗಿದ್ದ ಆರೋಪಿಯನ್ನು ಸತತ ತನಿಖೆ ನಡೆಸಿ ಸಿಐಡಿ ಪೊಲೀಸರು ಬಂಧಿಸಿದ್ದು, ವಿಚಾರಣೆ ಮುಂದುವರಿಸಿದ್ದಾರೆ.

Read More »

ವರ್ಕೌಟ್ ಗೆ ಹೋಗಿದ್ದ ಮಗ ಶವವಾಗಿ ಮನೆಗೆ ಬಂದ

ಮಧುರೈ: ಜಿಮ್ ನಲ್ಲಿ ವರ್ಕೌಟ್ ಮಾಡಿದ ಬಳಿಕ ಯುವಕನೊಬ್ಬ ಕುಸಿದುಬಿದ್ದಿದ್ದು, ಕೂಡಲೇ ಆತನನ್ನು ಸ್ನೇಹಿತರು ಆಸ್ಪತ್ರೆಗೆ ಕರೆದೊಯ್ದರು. ಆದರೆ ಆಸ್ಪತ್ರೆಗೆ ತಲುವಷ್ಟರಲ್ಲಾಗಲೇ ಆತ ಮೃತಪಟ್ಟಿದ್ದಾನೆ. ಈ ಘಟನೆ ತಮಿಳುನಾಡಿನ ಮಧುರೈ ಪಾಲಂಗಂಟಂ ನಲ್ಲಿ ನಡೆದಿದೆ. 27 ವರ್ಷದ ಶ್ರೀ ವಿಷ್ಣು ಮೃತ ಯುವಕ. ಜೂನ್4ರಂದು ಈ ಘಟನೆ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಮೃತ ಶ್ರೀವಿಷ್ಣು ರಾತ್ರಿ 8.30 ರ ವರೆಗೆ ಕೆಲಸ ಮಾಡಿ 9 ಗಂಟೆ ಸುಮಾರಿಗೆ ಜಿಮ್ …

Read More »