ವಿಜಯನಗರ: ರಾಜ್ಯದಲ್ಲಿ ಇಂದು ಸಾಲು ಸಾಲು ಬೆಂಕಿ ಅವಘಡ ಸಂಭವಿಸಿರುವ ವರದಿಯಾಗಿದೆ. ಶಾಲೆಯಲ್ಲಿ ಬಿಸಿಯೂಟ ತಯಾರಿಸುವಾಗ ಸಿಲಿಂದರ್ ಸೋರಿಕೆಯಾಗಿ ಅಡುಗೆ ಕೊಟ್ಟಡಿಯಲ್ಲಿ ಬೆಂಕಿ ಅವಘಡ ಸಂಭವಿಸಿರುವ ಘಟನೆ ವಿಜಯನಗರ ಜಿಲ್ಲೆಯಲ್ಲಿ ನಡೆದಿದೆ. ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲೂಕಿನ ಕಡತಿ ಪ್ರಾಥಮಿಕ ಶಾಲೆಯಲ್ಲಿ ಈ ಘಟನೆ ನಡೆದಿದ್ದು, ವಿದ್ಯಾರ್ಥಿಗಳು, ಶಿಕ್ಷಕರು ಆತಂಕಕ್ಕೀಡಾಗಿದ್ದಾರೆ. ಸಿಲಿಂಡರ್ ಸೋರಿಕೆಯಾಗಿ ಏಕಾಏಕಿ ಬೆಂಕಿ ಹೊತ್ತಿಕೊಂಡಿದೆ. ವಿದ್ಯಾರ್ಥಿಗಳು, ಶಿಕ್ಷಕರು ಶಾಲೆಯಿಂದ ಹೊರಗೋಡಿ ಬಂದು ರಕ್ಷಿಸಿಕೊಂಡಿದ್ದಾರೆ. ಘಟನಾ ಸ್ಥಳಕ್ಕೆ ಅಗ್ನಿಶಾಮಕ …
Read More »ಕಾರ ಹುಣ್ಣಿಮೆಯಂದೇ ಕರಾಳ ಕೃತ್ಯ – ಮಸೀದಿಯ ಮುಂದೆ ಪಟಾಕಿ ಸಿಡಿಸಿದ್ದಕ್ಕೆ ರೈತರ ಕೈ ಕಡಿದ ದುಷ್ಕರ್ಮಿಗಳು!
ಹಾವೇರಿ: ಹಾನಗಲ್ ತಾಲೂಕಿನ ನರೇಗಲ್ ಗ್ರಾಮದಲ್ಲಿ ಹೋರಿ ಬೆದರಿಸುವ ಸ್ಪರ್ಧೆ ವೇಳೆ ನಡೆದ ಗಲಾಟೆ ಹಿಂಸಾಚಾರಕ್ಕೆ ತಿರುಗಿ, ದುಷ್ಕರ್ಮಿಗಳ ದಾಳಿಯಲ್ಲಿ ಇಬ್ಬರು ರೈತರ ಕೈ ಕಡಿಯಲ್ಪಟ್ಟಿದ್ದು, ಎಂಟಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಗಾಯಾಳುಗಳಲ್ಲಿ ಮೂವರ ಸ್ಥಿತಿ ಗಂಭೀರವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಮಸೀದಿ ಮುಂಭಾಗದಲ್ಲಿ ಪಟಾಕಿ ಸಿಡಿಸಿದ ವಿಚಾರಕ್ಕೆ ಎರಡು ಗುಂಪುಗಳ ನಡುವೆ ವಾಗ್ವಾದ ಆರಂಭವಾಗಿ, ಬಳಿಕ ಮಾರಕಾಸ್ತ್ರಗಳಿಂದ ದಾಳಿ ನಡೆದಿರುವುದಾಗಿ ಪ್ರಾಥಮಿಕ ಮಾಹಿತಿ ತಿಳಿಸಿದೆ. ಘಟನೆಯಿಂದ ಗ್ರಾಮದಲ್ಲಿ ಉದ್ವಿಗ್ನ ವಾತಾವರಣ …
Read More »ಹೋಮ್ ಸ್ಟೇಯಲ್ಲಿ ಯುವತಿ ಅನುಮಾನಾಸ್ಪದ ಸಾವು, ಪೋಷಕರಿಂದ ಲವ್ ಜಿಹಾದ್
ಚಿಕ್ಕಬಳ್ಳಾಪುರ: ಮುದ್ದೇನಹಳ್ಳಿ ಸಮೀಪದ ಹೋಂಸ್ಟೇಯೊಂದರಲ್ಲಿ ಬೆಂಗಳೂರು ಮೂಲದ ಸಾಯಿ ಸುರಭಿ ಅನುಮಾನಾಸ್ಪದವಾಗಿ ಮೃತಪಟ್ಟಿದ್ದು, ಆಕೆಯ ಪ್ರಿಯಕರ ಎನ್ನಲಾದ ಕೇರಳ ಮೂಲದ ಸಂಜೀತ್ ಅಲಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆ. ಸ್ಥಳದಲ್ಲಿ ಮಾತ್ರೆಗಳು ಹಾಗೂ ಡೈರಿ ಪತ್ತೆಯಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಮೃತೆಯ ತಾಯಿ ಗೀತಾ ಅವರು ಇದು ಕೊಲೆ ಎಂದು ಆರೋಪಿಸಿ, ಈ ಹಿಂದೆ ನೀಡಿದ್ದ ದೂರಿನ ಮೇಲೆ ಕ್ರಮ ಕೈಗೊಂಡಿದ್ದರೆ ಮಗಳು ಬದುಕಿರುತ್ತಿದ್ದಳು ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಆದರೆ ಪೊಲೀಸರು …
Read More »ಶಿವಮೊಗ್ಗ: ಯೂನಿಯನ್ ಬ್ಯಾಂಕ್ನಲ್ಲಿ ಅಗ್ನಿ ಅವಘಡ; ಕಂಪ್ಯೂಟರ್, ದಾಖಲೆಗಳು ಭಸ್ಮ!
ಶಿವಮೊಗ್ಗ: ನಗರದ ಹೃದಯಭಾಗವಾದ ಬಿ.ಹೆಚ್. ರಸ್ತೆಯಲ್ಲಿರುವ ಯೂನಿಯನ್ ಬ್ಯಾಂಕ್ ಶಾಖೆಯಲ್ಲಿ ತಡರಾತ್ರಿ ಅಗ್ನಿ ಅವಘಡ ಸಂಭವಿಸಿದೆ. ಬೆಂಕಿಯ ಜ್ವಾಲೆಗೆ ಬ್ಯಾಂಕ್ನಲ್ಲಿದ್ದ ಕಂಪ್ಯೂಟರ್ಗಳು, ಪೀಠೋಪಕರಣಗಳು ಹಾಗೂ ಪ್ರಮುಖ ದಾಖಲೆಗಳು ಸುಟ್ಟು ಕರಕಲಾಗಿವೆ. ಮುಂಜಾನೆ ಬ್ಯಾಂಕ್ ಸಿಬ್ಬಂದಿ ಕಚೇರಿ ಬಾಗಿಲು ತೆರೆದಾಗ ಈ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ತಡರಾತ್ರಿ ಯಾರೂ ಇಲ್ಲದ ಸಮಯದಲ್ಲಿ ಈ ದುರಂತ ಸಂಭವಿಸಿರುವುದರಿಂದ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಪ್ರಾಥಮಿಕ ತನಿಖೆಯ ಪ್ರಕಾರ, ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಉಂಟಾಗಿ …
Read More »ವಿಧಾನಸೌಧ ಎದುರಲ್ಲೇ ನೇಪಾಳಿ ಗ್ಯಾಂಗ್ ಪುಂಡಾಟಿಕೆ – ಭೀಕರ ಹೊಡೆದಾಟ!
ಬೆಂಗಳೂರು ವಿಧಾನಸೌಧದ ಎದುರು ಫುಟ್ಪಾತ್ನಲ್ಲಿ ಎರಡು ಗುಂಪುಗಳ ನಡುವೆ ನಡೆದ ಜಗಳ ಸಾರ್ವಜನಿಕರ ಆತಂಕಕ್ಕೆ ಕಾರಣವಾಗಿದೆ. ಮೊಬೈಲ್ನಲ್ಲಿ ಫೋಟೋ ತೆಗೆಯುವ ವಿಚಾರಕ್ಕೆ ಆರಂಭವಾದ ವಾಗ್ವಾದ ಹೊಡೆದಾಟಕ್ಕೆ ತಿರುಗಿದೆ. ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಸ್ಥಿತಿಯನ್ನು ನಿಯಂತ್ರಿಸಿದ್ದಾರೆ. ವಿಧಾನಸೌಧದಂತಹ ಭದ್ರತಾ ವಲಯದಲ್ಲೇ ಈ ಘಟನೆ ನಡೆದಿರುವುದು ಗಮನ ಸೆಳೆದಿದೆ. ಈ ಸಂಬಂಧ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸಾರ್ವಜನಿಕ ಸ್ಥಳದಲ್ಲಿ ಗಲಾಟೆ ನಡೆಸಿದ ಆರೋಪದಡಿ ನಾಲ್ವರನ್ನು ಬಂಧಿಸಿ …
Read More »ಪಕ್ಕದ ಮನೆ ಯುವತಿಯೊಡನೆ ಅಫೇರ್ – ಪ್ರಶ್ನಿಸಿದ್ದಕ್ಕೆ ಪತ್ನಿಯ ಕಗ್ಗೊಲೆ!
ಬೀದರ್ ಜಿಲ್ಲೆಯ ಭಾಲ್ಕಿ ತಾಲೂಕಿನ ಹೊನ್ನಿಕೇರಿ ಗ್ರಾಮದ 26 ವರ್ಷದ ಸಂಜನಾ ಅವರನ್ನು ಪತಿ ಭಗವತ್ ಜ್ಞಾನೇಶ್ವರ ಕೊಲೆ ಮಾಡಿರುವ ಆರೋಪ ಕೇಳಿಬಂದಿದೆ. ಅನೈತಿಕ ಸಂಬಂಧ ಪ್ರಶ್ನಿಸಿದ್ದೇ ಘಟನೆಗೆ ಕಾರಣ ಎನ್ನಲಾಗಿದೆ. ಪತ್ನಿಯನ್ನು ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಕಬ್ಬಿಣದ ರಾಡ್ನಿಂದ ಹಲ್ಲೆ ನಡೆಸಲಾಗಿದೆ. ಗಂಭೀರವಾಗಿ ಗಾಯಗೊಂಡಿದ್ದ ಸಂಜನಾ ಅವರನ್ನು ಸೊಲ್ಲಾಪುರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಸಂಜನಾ ಮೃತಪಟ್ಟಿದ್ದಾರೆ. ಈ ಸಂಬಂಧ ಧನ್ನೂರಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, …
Read More »ದಾವಣಗೆರೆ ಜಿಲ್ಲಾಸ್ಪತ್ರೆಯಲ್ಲಿ ಆಕ್ಸಿಜನ್ ಸಿಲಿಂಡರ್ ಸ್ಫೋಟ: ಆಪರೇಷನ್ ಥಿಯೇಟರ್ ನಲ್ಲಿ ಬೆಂಕಿ
ದಾವಣಗೆರೆಯ ಚಿಗಟೇರಿ ಜಿಲ್ಲಾಸ್ಪತ್ರೆಯಲ್ಲಿ ಆಕ್ಸಿಜನ್ ಸಿಲಿಂಡರ್ ಸ್ಫೋಟಗೊಂಡು ಆಪರೇಷನ್ ಥಿಯೇಟರ್ನಲ್ಲಿ ಬೆಂಕಿ ಅವಘಡ ಸಂಭವಿಸಿದೆ. ಸ್ಫೋಟದ ಬಳಿಕ ದಟ್ಟ ಹೊಗೆ ಆವರಿಸಿಕೊಂಡು ಆಸ್ಪತ್ರೆಯಲ್ಲಿ ಆತಂಕದ ವಾತಾವರಣ ನಿರ್ಮಾಣವಾಯಿತು. ಬೆಂಕಿಯಿಂದ ಆಪರೇಷನ್ ಥಿಯೇಟರ್ ಸಂಪೂರ್ಣ ಸುಟ್ಟು ಕರಕಲಾಗಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಮಾಹಿತಿ ತಿಳಿದ ತಕ್ಷಣ ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿಯನ್ನು ನಿಯಂತ್ರಣಕ್ಕೆ ತರುವ ಕಾರ್ಯಾಚರಣೆ ನಡೆಸಿದರು. ಘಟನೆಯ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆ ಅಧಿಕಾರಿಗಳು ಜಿಲ್ಲಾಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ …
Read More »ಆಸ್ತಿ ವಿಚಾರಕ್ಕೆ ಕಿರಿಕ್ – ತಮ್ಮನನ್ನೇ ಹತ್ಯೆಗೈದ ಅಣ್ಣಯ್ಯ!
ಬೆಳಗಾವಿ: ಜಮೀನು ಮಾರಾಟದ ವಿಚಾರವಾಗಿ ಉಂಟಾದ ಜಗಳ ವಿಕೋಪಕ್ಕೆ ತಿರುಗಿ ಅಣ್ಣನೇ ಸ್ವಂತ ತಮ್ಮನನ್ನು ಕಲ್ಲಿನಿಂದ ಜಜ್ಜಿ, ಕುತ್ತಿಗೆ ಹಿಸುಕಿ ಕೊಲೆ ಮಾಡಿದ ಘಟನೆ ಜಿಲ್ಲೆಯ ಹುಕ್ಕೇರಿ ತಾಲೂಕಿನ ಘೋಡಗೇರಿ ಗ್ರಾಮದಲ್ಲಿ ನಡೆದಿದೆ. ಮೃತರನ್ನು ರಾಜು ರುದ್ರಪ್ಪಗೋಳ (45) ಎಂದು ಗುರುತಿಸಲಾಗಿದ್ದು, ಕೊಲೆ ಆರೋಪದಡಿ ಅಣ್ಣ ಸಂಜು ರುದ್ರಪ್ಪಗೋಳ (49) ವಿರುದ್ಧ ಪ್ರಕರಣ ದಾಖಲಾಗಿದೆ. ಮೂರು ಎಕರೆ ಜಮೀನು ಮಾರಾಟದ ವಿಚಾರವೇ ಕೊಲೆಗೆ ಕಾರಣ ಎನ್ನಲಾಗಿದೆ. ಪ್ರಕರಣ ಸಂಬಂಧ ತನಿಖೆ …
Read More »ಎಂಡಿಎಂಎ ಸಾಗಿಸುತ್ತಿದ್ದವನ ಬಂಧನ
ಕುಂಬಳೆ: ನಾರಾಯಣ ಮಂಗಲ ಎಂಬಲ್ಲಿ ಮೊಬೈಲ್ ಕವರ್ ನಲ್ಲಿ ಮಾದಕ ವಸ್ತು ಎಂಡಿಎಂಎ ಅಡಗಿಸಿಟ್ಟು ಓಡಾಡುತ್ತಿದ್ದ ಕೊಯಿಪಾಡಿ ನಿವಾಸಿ ಕೆ.ಬಿನೇಶ್ (29) ಎಂಬವನನ್ನು ರವಿವಾರ ತಡರಾತ್ರಿ ಪೊಲೀಸರು ಬಂಧಿಸಿದ್ದಾರೆ. ತಡ ರಾತ್ರಿ ಸುಮಾರು 1 ಗಂಟೆಗೆ ಕೊಯಿಪ್ಪಾಡಿ ನಾರಾಯಣಮಂಗಲಂ ರಸ್ತೆಯಲ್ಲಿ ಅನುಮಾನಾಸ್ಪದ ರೀತಿಯಲ್ಲಿ ಮೋಟಾರ್ ಸೈಕಲ್ನಲ್ಲಿ ಕುಳಿತಿದ್ದ ಬಿನೀಶ್ ಕೆ. ಬಳಿ ಕುಂಬಳೆ ಪೊಲೀಸರು ಬಂದಾಗ ಪೊಲೀಸರನ್ನು ಕಂಡು ಬೈಕ್ ನಲ್ಲಿ ಪರಾರಿಯಾಗಲು ಪ್ರಯತ್ನಿಸಿದಾಗ ತಡೆದು ಪರಿಶೀಲನೆ ನಡೆಸಿದಾಗ ಆತನ …
Read More »ಚಾ.ನಗರ, ಮಂಗಳೂರು, ಹಾವೇರಿ ಕೋರ್ಟ್ಗೆ ಬಾಂಬ್ ಬೆದರಿಕೆ ಮೇಲ್
ಚಾಮರಾಜನಗರ/ಮಂಗಳೂರು/ಹಾವೇರಿ: ರಾಜ್ಯದ ಚಾಮರಾಜನಗರ, ಮಂಗಳೂರು ಹಾಗೂ ಹಾವೇರಿ ನ್ಯಾಯಾಲಯಗಳಿಗೆ ಸೋಮವಾರ ಮತ್ತೆ ಬಾಂಬ್ ಬೆದರಿಕೆ ಇ-ಮೇಲ್ ಬಂದ ಹಿನ್ನೆಲೆಯಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಬೆದರಿಕೆ ಸಂದೇಶದ ಬಳಿಕ ಪೊಲೀಸರು, ಬಾಂಬ್ ನಿಷ್ಕ್ರಿಯ ದಳ ಹಾಗೂ ಶ್ವಾನದಳದ ಸಿಬ್ಬಂದಿ ನ್ಯಾಯಾಲಯಗಳ ಆವರಣದಲ್ಲಿ ತಪಾಸಣೆ ನಡೆಸಿದರು. ಚಾಮರಾಜನಗರ ನ್ಯಾಯಾಲಯಕ್ಕೆ ವಾರದ ಅಂತರದಲ್ಲಿ ಇದು ಮೂರನೇ ಬಾರಿ ಬೆದರಿಕೆ ಇ-ಮೇಲ್ ಬಂದಿದೆ. ಮಂಗಳೂರು ಹಾಗೂ ಹಾವೇರಿ ನ್ಯಾಯಾಲಯಗಳಲ್ಲೂ ಶೋಧ ನಡೆಸಿದ ಬಳಿಕ ಯಾವುದೇ ಸ್ಫೋಟಕ …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





