ಮೈಸೂರು: ಪ್ರತಾಪ್ ಸಿಂಹ ಒಬ್ಬ ಅಯೋಗ್ಯ, ವಕೀಲ ವೃತ್ತಿ ಬಗ್ಗೆ ಅವನಿಗೇನು ಗೊತ್ತು ಎಂದು ವಿಧಾನ ಪರಿಷತ್ ಸದಸ್ಯ ಹೆಚ್. ವಿಶ್ವನಾಥ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ನಾವೆಲ್ಲರೂ ಒಟ್ಟಿಗೆ ಲಾ ಪ್ರಾಕ್ಟೀಸ್ ಮಾಡಿದ್ದೇವೆ.ಅವನಿಗೇನಾಗಿದೆ ಬಾಯಿಗೆ ಬಂದಂಗೆ ಮಾತನಾಡುತ್ತಾನೆ. ಮಹಾರಾಜರನ್ನು ಬಿಟ್ಟರೇ ನಾನೇ ಹೆಚ್ಚು ಕೆಲಸ ಮಾಡಿದ್ದೇನೆ ಎಂದು ಕೊಚ್ಚಿಕೊಳ್ಳುತ್ತಾನೆ. ಈ ಎಂಪಿ ಕಾಲದಲ್ಲಿ ಏನೂ ಕೆಲಸವಾಗಿಲ್ಲ ಎಂದು ಆರೋಪಿಸಿದರು. 2014ರ ಚುನಾವಣೆಯಲ್ಲಿ ಸಿದ್ದರಾಮಯ್ಯ ಪ್ರಾಮಾಣಿಕವಾಗಿ …
Read More »ಸಿದ್ದರಾಮಯ್ಯ ಅವರ ಘನತೆಗೆ ತಕ್ಕಂತೆ ವರ್ತಿಸಬೇಕು :: ಶೆಟ್ಟರ್ ಟೀಕೆ
ಹುಬ್ಬಳ್ಳಿ: ಸಿದ್ದರಾಮಯ್ಯ ಮಾಜಿ ಮುಖ್ಯಮಂತ್ರಿಗಳು. ಅವರ ಘನತೆಗೆ ತಕ್ಕಂತೆ ವರ್ತಿಸಬೇಕು. ಅದು ಬಿಟ್ಟು ಪುಂಡ, ಪೋಕರಿಗಳ ಸಾಮಾನ್ಯ ಕಾರ್ಯಕರ್ತರಂತೆ ಮಾತನಾಡುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಟೀಕಿಸಿದರು. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಅತ್ಯಂತ ಕೆಳಮಟ್ಟದ ಹೇಳಿಕೆ ನೀಡುತ್ತಿದ್ದಾರೆ. ಐದು ವರ್ಷ ಮುಖ್ಯಮಂತ್ರಿ ಆಗಿದ್ದವರ ಸಂಸ್ಕೃತಿ ಇದಲ್ಲ. ಚಡ್ಡಿ ಹಾಕಿರುವ ಆರ್ಎಸ್ಎಸ್ ಕಾರ್ಯಕರ್ತರಿಂದಲೇ ದೇಶ ಒಗ್ಗಟ್ಟಾಗಿದೆ, ದೇಶ ಉಳಿದಿದೆ. ಅವರು ಆರ್ಎಸ್ಎಸ್ ಬಗ್ಗೆ ಮಾತನಾಡಿ ಅಲ್ಪಸಂಖ್ಯಾತರ ಮತ ಪಡೆಯಬಹುದು …
Read More »ಈದ್ಗಾ ಮೈದಾನ ವಿವಾದ ಬಿಗ್ ಟ್ವಿಸ್ಟ್
ಬೆಂಗಳೂರು: ನಗರದ ಚಾಮರಾಜಪೇಟೆಯಲ್ಲಿರುವಂತ ಈದ್ಗಾ ಮೈದಾನ ವಿವಾದ, ಈಗ ತಾರಕಕ್ಕೇರುತ್ತಿದೆ. ಈ ಸ್ಥಳ ಸಾರ್ವಜನಿಕರಿಗೆ ಸೇರಿದ್ದು, ಹಿಂದೂಗಳಿಗೂ ವಿವಿಧ ಆಚರಣೆಗೆ ಅವಕಾಶ ನೀಡುವಂತೆ ಹಿಂದೂ ಸಂಘಟನೆಗಳು ಕೋರಿಕೊಂಡ ನಂತ್ರ, ಮತ್ತಷ್ಟು ವಿವಾದ ಸ್ಪೋಟಗೊಂಡಿದೆ.ಈ ಬೆನ್ನಲ್ಲೇ ಈದ್ಗಾ ಮೈದಾನ ಬಿಬಿಎಂಪಿ ಆಸ್ತಿ ಎಂದಿತ್ತು. ಇದೀಗ ಈದ್ಗಾ ಮೈದಾನ ಬಿಬಿಎಂಪಿ ಆಸ್ತಿಯಲ್ಲ, ವಕ್ಫ್ ಬೋರ್ಡ್ ದು ಎಂಬುದಾಗಿ ಹೇಳಿದೆ. ಈ ಕುರಿತಂತೆ ಮಾತನಾಡಿರುವಂತ ವಕ್ಫ್ ಬೋರ್ಡ್ ಅಧ್ಯಕ್ಷ ಶಫಿ ಅಸದಿ ಅವರು, ಈದ್ಗಾ …
Read More »ಜೂ. 11 ರವರೆಗೆ ಕರ್ನಾಟಕ, ಕೇರಳದಲ್ಲಿ ಭಾರೀ ಮಳೆ ಸಾಧ್ಯತೆ
ಬೆಂಗಳೂರು : ಪಶ್ಚಿಮ ಮಾರುತಗಳ ಪರಿಣಾಮದಿಂದಾಗಿ ದಕ್ಷಿಣ ಭಾರತದಲ್ಲಿ ಮುಂದಿನ ಐದು ದಿನಗಳ ಕಾಲ ಭಾರೀ ಮಳೆ ಸುರಿಯುವ ಸಾಧ್ಯತೆಯಿದೆ. ಅದ್ರಲ್ಲೂ ಜೂನ್ 11 ರವರೆಗೆ ಕರ್ನಾಟಕ ಮತ್ತು ಕೇರಳದಲ್ಲಿ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ. ಕರ್ನಾಟಕ, ಕೇರಳ, ತಮಿಳುನಾಡು ಸೇರಿದಂತೆ ದಕ್ಷಿಣ ಭಾರತದ ಕೆಲವು ರಾಜ್ಯಗಳಲ್ಲಿ ಮಳೆ ಕೆಲವು ದಿನಗಳಿಂದಲೂ ಬಿಡುವು ಪಡೆದಿದೆ. ಆದರೆ ಕರ್ನಾಟಕದ ಕರಾವಳಿ ಭಾಗದಲ್ಲಿ ಇಂದು ಉತ್ತಮ ಮಳೆ …
Read More »ಕೊರೋನಾದಿಂದ ಗುಣಮುಖರಾದ ಡಾ. ಕೆ .ಸುಧಾಕರ್
ಬೆಂಗಳೂರು: “ನನ್ನ ಕೋವಿಡ್ RT-PCR ವರದಿ ನೆಗೆಟಿವ್ ಬಂದಿದ್ದು, ನಾನು ಇಂದಿನಿಂದ ಮೊದಲಿನಂತೆ ಸಕ್ರಿಯವಾಗಿ ಕೆಲಸಕಾರ್ಯಗಳಲ್ಲಿ ತೊಡಗಿಸಿಕೊಳ್ಳಲಿದ್ದೇನೆ. ನಿಮ್ಮ ಪ್ರೀತಿ, ಹಾರೈಕೆಗಳಿಗೆ ನಾನು ಚಿರಋಣಿ,” ಆರೋಗ್ಯ ಮತ್ತು ಶಿಕ್ಷಣ ಸಚಿವ ಡಾ ಕೆ ಸುಧಾಕರ್ ಟ್ವೀಟ್ ಮಾಡಿದ್ದಾರೆ. ಕಳೆದ ಐದು ದಿನಗಳ ಹಿಂದೆಯಷ್ಟೇ ಅವರಲ್ಲಿ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ಪರೀಕ್ಷೆಯಲ್ಲಿ ಖಾತ್ರಿಯಾಗಿತ್ತು. ಈ ಕುರಿತು ಟ್ವೀಟ್ ಮೂಲಕ ಮಾಹಿತಿ ನೀಡಿದ್ದ ಅವರು, ಇಂದು ನೆಗೆಟಿವ್ ವರದಿ ಬಂದಿರುವ ಬಗ್ಗೆಯೂ …
Read More »ನಾನಿನ್ನು 10 ವರ್ಷ ರಾಜ್ಯದಾದ್ಯಂತ ಓಡಾಡಿ ಪಕ್ಷ ಸಂಘಟನೆ ಮಾಡುತ್ತೇನೆ : ಬಿಎಸ್ವೈ
ವಿಧಾನ ಪರಿಷತ್ ಚುನಾವಣೆ, ರಾಜ್ಯಸಭಾ ಚುನಾವಣೆ ಹೀಗೆ ಎಲ್ಲಾ ಸಂದರ್ಭದಲ್ಲೂ ಬಿಜೆಪಿಯನ್ನು ಕಟ್ಟಿ ಬೆಳೆಸಿದ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರನ್ನು ಕಡೆಗಣಿಸಲಾಗಿದೆ ಎಂಬ ಮಾತು ಕೇಳಿಬಂದಿತ್ತು. ಅದರಲ್ಲೂ ಬಿ.ವೈ.ವಿಜಯೇಂದ್ರ ಗೆ ವಿಧಾನ ಪರಿಷತ್ ಸ್ಥಾನ ನೀಡದೇ ಇದ್ದಾಗಲೂ ಬಿಎಸ್ವೈ ಕಡೆಗಣನೆ ಆಗ್ತಿದೆ ಎಂದೇ ಅರ್ಥೈಸಲಾಗ್ತಿತ್ತು. ಆದರೆ ಈಗ ಸಂದೇಹಗಳಿಗೆಲ್ಲ ಬಿಎಸ್ವೈ ಉತ್ತರ ನೀಡಿದ್ದು, ನನಗೆ ವಯಸ್ಸಾಗಿದೆ ಎಂಬ ಚಿಂತೆ ಪಕ್ಷದ ಕಾರ್ಯಕರ್ತರಿಗೆ ,ಮುಖಂಡರಿಗೆ ಬೇಡ ನಾನಿನ್ನು 10 ವರ್ಷ ರಾಜ್ಯದಾದ್ಯಂತ …
Read More »ಛಲವಾದಿ ನಾರಾಯಣ ಸ್ವಾಮಿ ಅವರ ವಿರುದ್ಧ ಕಿಡಿಕಾರಿದ ಸಿದ್ದರಾಮಯ್ಯ
ಬೆಂಗಳೂರು: ಬಿಜೆಪಿ ಕಾರ್ಯಕರ್ತರು ಸಂಗ್ರಹಿಸಿದ್ದ ಚಡ್ಡಿಗಳನ್ನು ಹೊತ್ತು ತಮ್ಮ ಮನೆಯತ್ತ ಮೆರವಣಿಗೆಯಲ್ಲಿ ಸಾಗಿದ ವಿಧಾನ ಪರಿಷತ್ ಸದಸ್ಯ ಛಲವಾದಿ ನಾರಾಯಣ ಸ್ವಾಮಿ ಅವರ ವಿರುದ್ಧ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಕಿಡಿಕಾರಿದ್ದಾರೆ. ಕೇವಲ ರಾಜಕೀಯ ಜಿದ್ದಾಜಿದ್ದಿಗಾಗಿ ಯಾರ್ಯಾರದೋ ಹಳೆಚಡ್ಡಿ ಹೊತ್ತುಕೊಳ್ಳಲೂ ಸಿದ್ಧರಾದ ನಿಮ್ಮ ಗುಲಾಮಿ ಮನಸ್ಥಿತಿಗೆ ನನ್ನ ಧಿಕ್ಕಾರ ಎಂದು ಗುಡುಗಿದ್ದಾರೆ. ಆರ್ಎಸ್ಎಸ್ ಅನ್ನು ‘ಆರ್ಯರ ಆರ್ಎಸ್ಎಸ್’ ಎಂದು ಉಲ್ಲೇಖಿಸಿ ಸರಣಿ ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ‘ನಿಮ್ಮ ಸಂಘದ …
Read More »ಹಿರಿಯ ನಾಗರಿಕರ ಕುರಿತು ಆಡಳಿತಾ ಸುಧಾರಣೆ ಇಲಾಖೆ ಮಹತ್ವದ ನಿಯಮ ಹೊರಡಿಕೆ
ಬೆಂಗಳೂರು: ಹಿರಿಯ ನಾಗರಿಕರು ಸರ್ಕಾರಿ ಕಚೇರಿಗಳಿಗೆ ತಮ್ಮ ಕೆಲಸದ ನಿಮಿತ್ತ ಭೇಟಿ ನೀಡಿದಾಗ ಅವರೊಂದಿಗೆ ಗೌರವದಿಂದ ವರ್ತಿಸದೇ ಇದ್ದರೆ, ಶಿಸ್ತು ಕ್ರಮ ಜರುಗಿಸಲಾಗುವುದು ಎಂದು ಸಿಬ್ಬಂದಿ ಹಾಗೂ ಆಡಳಿತಾ ಸುಧಾರಣೆ ಇಲಾಖೆ ಎಚ್ಚರಿಕೆ ನೀಡಿದೆ. ಹಿರಿಯ ನಾಗರಿಕರು ಸರ್ಕಾರಿ ಕಚೇರಿಗಳಿಗೆ ಕೆಲಸದ ನಿಮಿತ್ತ ಬಂದಾಗ ಆಸನದ ವ್ಯವಸ್ಥೆ ಮಾಡುವಂತೆ ಹಾಗೂ ಅವರುಗಳ ಮನವಿ/ ಕೋರಿಕೆಗಳನ್ನು ಆದ್ಯತೆಯ ಮೇಲೆ ಪರಿಗಣಿಸಿ, ಇಲಾಖೆಗಳು ಕೈಗೊಂಡಿರುವ ಕ್ರಮಗಳ ಮಾಹಿತಿಯನ್ನು ಹಿರಿಯ ನಾಗರಿಕರಿಗೆ ತಲುಪಿಸುವ ವ್ಯವಸ್ಥೆಯನ್ನು …
Read More »ಕೊರೋನಾ ಪರೀಕ್ಷೆ ಹೆಚ್ಚಳದಿಂದಾಗಿ ಹೊಸ ಪ್ರಕರಣಗಳು ಏರಿಕೆ
ಬೆಂಗಳೂರು: ‘ರಾಜ್ಯದಲ್ಲಿ ಕೊರೋನಾ ಸೋಂಕಿನ ಮತ್ತೊಂದು ಅಲೆಯ ಯಾವುದೇ ಲಕ್ಷಣಗಳೂ ಕಂಡುಬಂದಿಲ್ಲ. ಸೋಂಕು ಕೂಡ ತಟಸ್ಥವಾಗಿದ್ದು, ಪರೀಕ್ಷೆ ಹೆಚ್ಚಳದಿಂದಾಗಿ ಹೊಸ ಪ್ರಕರಣಗಳು ತುಸು ಹೆಚ್ಚಾಗಿವೆ. ಕೇಂದ್ರ ಸರ್ಕಾರದ ಸೂಚನೆ ಮೇರೆಗೆ ಒಂದಿಷ್ಟುಮುಂಜಾಗ್ರತಾ ಕ್ರಮ ಕೈಗೊಳ್ಳಲಾಗುತ್ತಿದ್ದು, ಸಾರ್ವಜನಿಕರು ಆತಂಕಪಡಬೇಕಿಲ್ಲ. ರಾಜ್ಯದಲ್ಲಿ ಶಾಲಾ-ಕಾಲೇಜುಗಳು ಆರಂಭವಾಗಿದ್ದು, ವರ್ಕ್ಫ್ರಂ ಹೋಂ ನೀತಿಯಿಂದ ಹೊರಬಂದು ಐಟಿ ಕಂಪನಿಗಳು ಕಚೇರಿ ಕೆಲಸ ಆರಂಭಿಸಿವೆ. ಕಳೆದ ಒಂದು ವಾರದಿಂದ ಕೊರೋನಾ ಹೊಸ ಪ್ರಕರಣಗಳು ಒಂದಿಷ್ಟುಹೆಚ್ಚಳವಾಗಿರುವುದು ಹಾಗೂ ಇದರ ಬೆನ್ನಲ್ಲೇ ಆರೋಗ್ಯ …
Read More »ಭಾರತೀಯ ಹವಾಮಾನ ಇಲಾಖೆಯಿಂದ ಮಹತ್ವದ ಮುನ್ಸೂಚನೆ
ನವದೆಹಲಿ: ಭಾರತದ ಈಶಾನ್ಯ ಭಾಗದಲ್ಲಿ ನೈರುತ್ಯ ಮುಂಗಾರು ವೇಗ ಪಡೆದುಕೊಂಡಿದೆ. ಮುಂದಿನ ಐದು ದಿನಗಳಲ್ಲಿ ಈಶಾನ್ಯ ಭಾರತ, ಪಶ್ಚಿಮ ಬಂಗಾಳ ಮತ್ತು ಸಿಕ್ಕಿಂನಲ್ಲಿ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಂಗಾಳ ಕೊಲ್ಲಿಯಿಂದ ಈಶಾನ್ಯ ಭಾರತದವರೆಗೆ ಕಡಿಮೆ ಉಷ್ಣವಲಯದ ಮಟ್ಟಗಳಲ್ಲಿ ಬಲವಾದ ನೈಋತ್ಯ ಮಾರುತಗಳ ಪ್ರಭಾವದ ಕಾರಣದಿಂದ, ಮುಂಬರುವ ಕೆಲವು ದಿನಗಳಲ್ಲಿ ಅರುಣಾಚಲ ಪ್ರದೇಶ, ಅಸ್ಸಾಂ, ಮೇಘಾಲಯ, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ, ತ್ರಿಪುರಾ, ಪಶ್ಚಿಮ ಬಂಗಾಳ …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





