ಬೆಳಗಾವಿ: ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ನಡುವಿನ ಒಳಜಗಳದಿಂದಾಗಿ ಕಾಂಗ್ರೆಸ್ ನಿರ್ನಾಮ ಆಗುತ್ತದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿಕೆ ನೀಡಿದ್ದರು. ಈ ಹೇಳಿಕೆಗೆ ಕಾಂಗ್ರೆಸ್ ನಾಯಕಿ ಲಕ್ಷ್ಮಿ ಹೆಬ್ಬಾಳ್ಕರ್ ತಿರುಗೇಟು ನೀಡಿದ್ದಾರೆ. ನಗರದಲ್ಲಿ ಮಾಧ್ಯಮದವರ ಎದುರು ಈ ಬಗ್ಗೆ ಪ್ರತಿಕ್ರಿಸಿದ ಹೆಬ್ಬಾಳ್ಕರ್, ‘ಸಿದ್ದರಾಮಯ್ಯ ಮತ್ತು ಶಿವಕುಮಾರ್ ವಿಚಾರ ಬಿಡಿ. ಯಡಿಯೂರಪ್ಪ ಹಾಗೂ ಅವರ ಕುಟುಂಬವನ್ನ ನಡೆಸಿಕೊಳ್ಳುವ ರೀತಿಯನ್ನ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಸಾಹೇಬ್ರು …
Read More »ಆಮ್ ಆದ್ಮಿ ಪಾರ್ಟಿ ಅಧಿಕೃತವಾಗಿ ಸೇರ್ಪಡೆಯಾದ ಮುಖ್ಯಮಂತ್ರಿ ಚಂದ್ರು
ಬೆಂಗಳೂರು: ಖ್ಯಾತ ನಟ, ಮಾಜಿ ವಿಧಾನ ಪರಿಷತ್ ಸದಸ್ಯ ಮುಖ್ಯಮಂತ್ರಿ ಚಂದ್ರುರವರು ಆಮ್ ಆದ್ಮಿ ಪಾರ್ಟಿ ಅಧಿಕೃತವಾಗಿ ಮಂಗಳವಾರ ಸೇರ್ಪಡೆಯಾದರು. ಬೆಂಗಳೂರಿನ ಹೋಟೆಲ್ ಪರಾಗ್ನಲ್ಲಿ ನಡೆದ ಸಮಾರಂಭದಲ್ಲಿ ಮುಖ್ಯಮಂತ್ರಿ ಚಂದ್ರುರವರನ್ನು ಎಎಪಿ ರಾಜ್ಯಾಧ್ಯಕ್ಷ ಪೃಥ್ವಿ ರೆಡ್ಡಿ ಪಕ್ಷಕ್ಕೆ ಬರಮಾಡಿಕೊಂಡರು. ಆ ಬಳಿಕ ಮಾತನಾಡಿದ ಪೃಥ್ವಿ ರೆಡ್ಡಿ ‘ಮುಖ್ಯಮಂತ್ರಿ ಚಂದ್ರುರವರು ನಾಡು, ನುಡಿ, ಜಲಕ್ಕಾಗಿ ಸಾಕಷ್ಟು ಕೆಲಸ ಮಾಡಿದ್ದಾರೆ. ಇವುಗಳ ರಕ್ಷಣೆಯು ನಮ್ಮ ಪಕ್ಷದ ಮೂಲ ಸಿದ್ಧಾಂತ ಕೂಡ ಆಗಿದೆ. ಭಾರತವು …
Read More »ಹೊರಟ್ಟಿ ಪರ ಶೆಟ್ಟರ್ ಹುಬ್ಬಳ್ಳಿಯಲ್ಲಿ ಬಿರುಸಿನ ಪ್ರಚಾರ
ಹುಬ್ಬಳ್ಳಿ : ಹುಬ್ಬಳ್ಳಿ – ಪಶ್ಚಿಮ ಶಿಕ್ಷಕರ ಕ್ಷೇತ್ರದಲ್ಲಿ ಬಿಜೆಪಿಯಿಂದ ಬಿರುಸಿನ ಪ್ರಚಾರ ಮಾಡಲಾಗುತ್ತಿದೆ. ಬಿಜೆಪಿ ಅಭ್ಯರ್ಥಿ ಬಸವರಾಜ ಹೊರಟ್ಟಿ ಪರ ಜಗದೀಶ್ಶೆಟ್ಟರ್ ಪ್ರಚಾರ ಮಾಡುತ್ತೀದ್ದಾರೆ. ನಗರದ ಕಾನ್ವೆಂಟ್ ಶಾಲೆ ಫಾತಿಮಾ ಸ್ಕೂಲ್ ಹಾಗೂ ಚಿನ್ಮಯ ವಿದ್ಯಾಲಯದಲ್ಲಿ ಮತ ಹಾಕುವಂತೆ ಶಿಕ್ಷಕರಲ್ಲಿ ಶೆಟ್ಟರ್ ಮನವಿ ಮಾಡಿದ್ದಾರೆ. ಪರಿಷತ್ ಚುನಾವಣೆಯಲ್ಲಿ ಬಸವರಾಜ ಹೊರಟ್ಟಿ ದಕ್ಷಿಣ ಭಾರತದಲ್ಲಿಯೇ ದಾಖಲೆ ಮಾಡಿದ್ದಾರೆ.ಈ ಬಾರಿ ಅತ್ಯಧಿಕ ಮತಗಳ ಅಂತರದಿಂದ ಗೆಲ್ಲಿಸಿ ಶಿಕ್ಷಕರ ಶ್ರೇಯೋಭಿವೃದ್ಧಿಗೆ ಶ್ರಮಿಸಲು ಮತ್ತೊಮ್ಮೆ …
Read More »ಸಿದ್ಧರಾಮಯ್ಯ ಹೇಳಿಕೆಗೆ ಹುಬ್ಬಳ್ಳಿಯಲ್ಲಿ ಮಾಜಿ ಸಿಎಂ ಅಸಮಾಧಾನ ವ್ಯಕ್ತ
ಹುಬ್ಬಳ್ಳಿ : ಆರ್ ಎಸ್ ಎಸ್ ಚಡ್ಡಿ ಕುರಿತ ಸಿದ್ಧರಾಮಯ್ಯ ಹೇಳಿಕೆಗೆ ಹುಬ್ಬಳ್ಳಿಯಲ್ಲಿ ಮಾಜಿ ಸಿಎಂ ಜಗದೀಶ ಶೆಟ್ಟರ್ ಅಸಮಾಧಾನ ವ್ಯಕ್ತಪಡಿಸಿದರು. ಸಿದ್ದರಾಮಯ್ಯ ಒಬ್ಬ ಮಾಜಿ ಸಿಎಂ ರಂತೆ ವರ್ತನೆ ಮಾಡ್ತಿಲ್ಲ. ಪುಂಡ, ಪೋಕರಿಗಳ ರೀತಿ, ಸಾಮಾನ್ಯ ಕಾರ್ಯಕರ್ತರಂತೆ ಮಾತನಾಡುತ್ತಿದ್ದಾರೆ. ಅವರು ಅತ್ಯಂತ ಕೆಳಮಟ್ಟದ ಹೇಳಿಕೆ ನೀಡುತ್ತಿದ್ದಾರೆ. ಐದು ವರ್ಷ ಸಿಎಂ ಆಗಿದ್ದವರ ಸಂಸ್ಕೃತಿ ಇದಲ್ಲ.ಚಡ್ಡಿ ಹಾಕಿದ ಆರ್ ಎಸ್ ಎಸ್ ಕಾರ್ಯಕರ್ತರಿಂದಲೇ ದೇಶ ಒಗ್ಗಾಟ್ಟಾಗಿದೆ, ದೇಶ ಉಳಿದಿದೆ ಅವರು …
Read More »ಡಾ.ಬಿ.ಆರ್. ಅಂಬೇಡ್ಕರ್ ಅವರ ಅಧ್ಯಾಯ ಮರು ಮುದ್ರಣ
ಬೆಂಗಳೂರು : ರೋಹಿತ್ ಚಕ್ರತೀರ್ಥ ಸಮಿತಿಯು ಪಠ್ಯ ಪರಿಷ್ಕರಣೆ ವೇಳೆ ಕೈ ಬಿಟ್ಟಿದ್ದ ಡಾ.ಬಿ.ಆರ್. ಅಂಬೇಡ್ಕರ್ ಸಂವಿಧಾನ ಶಿಲ್ಪಿ ಬಿರುದನ್ನು ಮತ್ತೆ ಸೇರಿಸಿ 9 ನೇ ತರಗತಿ ಸಮಾಜ ವಿಜ್ಞಾನ ನಮ್ಮ ಸಂವಿಧಾನ ಅಧ್ಯಾಯವನ್ನು ಪ್ರತ್ಯೇಕವಾಗಿ ಮುದ್ರಿಸಿ ಶಾಲೆಗಳಿಗೆ ಪೂರೈಸಲು ಶಿಕ್ಷಣ ಇಲಾಖೆ ಮುಂದಾಗಿದೆ. 9 ನೇ ತರಗತಿಯ ನಮ್ಮ ಸಂವಿಧಾನ ಅಧ್ಯಾಯದಲ್ಲಿ ಡಾ.ಬಿ.ಆರ್. ಅಂಬೇಡ್ಕರ್ ಅವರಿಗಿದ್ದ ಸಂವಿಧಾನ ಶಿಲ್ಪಿ ಬಿರುದನ್ನು ಕೈಬಿಡಲಾಗಿತ್ತು. ಈ ಹಿನ್ನೆಲೆಯಲ್ಲಿ ಸಾರ್ವಜನಿಕ ವಲಯದಲ್ಲಿ ತೀವ್ರ …
Read More »ಸಿದ್ದುಗೆ ಗೊತ್ತಿರೋದು ಚಡ್ಡಿ ಮಾತ್ರ, ಚಡ್ಡಿ ಸುಡ್ತೀವಿ ಅಂತಿದಾರೆ : ಛಲವಾದಿ ನಾರಾಯಣಸ್ವಾಮಿ ಕಿಡಿ
ಬೆಂಗಳೂರು : ಸಿದ್ದರಾಮಯ್ಯ ವಿರುದ್ಧ MLC ಛಲವಾದಿ ನಾರಾಯಣಸ್ವಾಮಿ ಕಿಡಿ ಕಾರಿದ್ದು, ಸಿದ್ದರಾಮಯ್ಯ ಅವ್ರಿಗೆ ರಾಜಕೀಯ ತಿಕ್ಕಲು ಜಾಸ್ತಿ ಆಗಿದೆ.. ರಾಜಕೀಯ ತಿಕ್ಕಲುತನಕ್ಕೆ ಸದ್ಯಕ್ಕೆ ಯಾವುದೇ ಚಿಕಿತ್ಸೆ ಇಲ್ಲ ಎಂದು ಹೇಳಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ MLC ಛಲವಾದಿ ನಾರಾಯಣಸ್ವಾಮಿ, ಸಿದ್ದರಾಮಯ್ಯ ಅವ್ರಿಗೆ ಆರ್ಥಿಕ ಲೆಕ್ಕಾಚಾರ ಗೊತ್ತಿಲ್ಲ, ಸಿದ್ದುಗೆ ಗೊತ್ತಿರೋದು ಚಡ್ಡಿ ಮಾತ್ರ, ಚಡ್ಡಿ ಸುಡ್ತೀವಿ ಅಂತಿದಾರೆ.ಚಾಮುಂಡೇಶ್ವರಿ ಕ್ಷೇತ್ರದ ಜನ ಅವರ ಲುಂಗಿ, ಚಡ್ಡಿ ಕಿತ್ತು ಕಳಿಸಿದ್ರು, ಆದ್ರೂ ಸಿದ್ದರಾಮಯ್ಯ …
Read More »ಹಿರಿಯ ಕಾಂಗ್ರೆಸ್ ನಾಯಕ ಸಾಧು ಸಿಂಗ್ ಬಂಧನ
ಅಮೃತಸರ – ಭ್ರಷ್ಟಾಚಾರ ಪ್ರಕರಣದಲ್ಲಿ ಹಿರಿಯ ಕಾಂಗ್ರೆಸ್ ನಾಯಕ ಮತ್ತು ಮಾಜಿ ಸಚಿವ ಸಾಧು ಸಿಂಗ್ ಧರಮ್ಸೋಟ್ ಅವರನ್ನು ಇಂದು ಬಂಧಿಸಲಾಗಿದೆ. ಕ್ಯಾಪ್ಟನ್ ಅಮರಿಂದರ್ ಸಿಂಗ್ ಅವರ ಕಾಂಗ್ರೇಸ್ ಸರ್ಕಾರದ ಸಂಪುಟದಲ್ಲಿ ಅರಣ್ಯ ಮತ್ತು ಸಮಾಜ ಕಲ್ಯಾಣ ಇಲಾಖೆ ಸಚಿವರಾಗಿ ಸೇವೆ ಸಲ್ಲಿಸಿದ್ದ ಸಾಧು ಸಿಂಗ್ ಧರಮ್ಸೋಟ್ ಅವರನ್ನು ಇಂದು ಮುಂಜಾನೆ ವಿಜಿಲೆನ್ಸ್ ಬ್ಯೂರೋ ಅಧಿಕಾರಿಗಳು ಬಂಧಿಸಿದ್ದಾರೆ. ಇವರೊಂದಿಗೆ ಇವರಿಗೆ ಸಹಾಯಕರಾಗಿ ಕೆಲಸ ಮಾಡುತ್ತಿದ್ದ ಸ್ಥಳೀಯ ಪತ್ರಕರ್ತ ಕಮಲ್ಜಿತ್ ಸಿಂಗ್ …
Read More »3-4 ವಾರಗಳಲ್ಲಿ ಕೋವಿಡ್ ನಾಲ್ಕನೇ ಅಲೆ ಆರಂಭವಾಗುವ ಸಾಧ್ಯತೆ
ಬೆಂಗಳೂರು: ರಾಜ್ಯದಲ್ಲಿ ಕಳೆದೊಂದು ವಾರದಿಂದ ಮಹಾಮಾರಿ ಕೊರೊನಾ ವೈರಸ್ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ ಎರಡು ಸಾವಿರ ಗಡಿ ದಾಟಿದೆ. ಈ ಬೆಳವಣಿಗೆಯು ಜನರಲ್ಲಿ ಆತಂಕ ಹೆಚ್ಚಾಗುವಂತೆ ಮಾಡಿದೆ. ಈ ನಡುವಲ್ಲೇ ಆರೋಗ್ಯ ಇಲಾಖೆಯ ಆಯುಕ್ತ ಡಿ ರಂದೀಪ್ ಅವರು ಮುಂದಿನ 3-4 ವಾರಗಳಲ್ಲಿ ಕೋವಿಡ್ ನಾಲ್ಕನೇ ಅಲೆ ಆರಂಭವಾಗುವ ಸಾಧ್ಯತೆಗಳಿವೆ ಎಂದು ಹೇಳಿದ್ದಾರೆ. ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಅವರು ಮಾತನಾಡಿ, ಜೂನ್ ಮತ್ತು ಜುಲೈ ತಿಂಗಳು …
Read More »ಮಾಜಿ ಸಿಎಂ , ಸಿದ್ದರಾಮಯ್ಯ ಭೇಟಿ : ರಾಜಕೀಯದಲ್ಲಿ ರೋಚಕ ಕುತೂಹಲ
ಬೆಂಗಳೂರು: ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಲಾಂಜ್ ನಲ್ಲಿ ಮಾಜಿ ಸಿಎಂ ಯಡಿಯೂರಪ್ಪ ಹಾಗೂ ವಿಪಕ್ಷ ನಾಯಕ ಸಿದ್ದರಾಮಯ್ಯ ಮಾತುಕತೆ ನಡೆಸಿರುವುದು ತೀವ್ರ ಕುತೂಹಲಕ್ಕೆ ಕಾರಣವಾಗಿದೆ. ಬೆಳಗಾವಿಗೆ ತೆರಳುವ ಸಂದರ್ಭದಲ್ಲಿ ಇಬ್ಬರು ನಾಯಕರು ಲಾಂಜ್ ನಲ್ಲಿ ಭೇಟಿ ಮಾಡಿದರು. ಇದೊಂದು ಸೌಹಾರ್ದ ಭೇಟಿ ಎಂದು ಉಭಯ ನಾಯಕರ ಕಚೇರಿ ಮೂಲಗಳು ಹೇಳಿವೆ. ರಾಜ್ಯಸಭಾ ಚುನಾವಣೆಯಲ್ಲಿ ನಾಲ್ಕನೇ ಅಭ್ಯರ್ಥಿಯ ಗೆಲುವಿಗಾಗಿ ಕಾಂಗ್ರೆಸ್ ಮತ್ತು ಬಿಜೆಪಿ ತೀವ್ರ ಕಸರತ್ತು ಆರಂಭಿಸಿರುವ ವೇಳೆ ಉಭಯ ನಾಯಕರ …
Read More »ಭಾರತದ 5 ರಾಜ್ಯಗಳಲ್ಲಿ ಕೋವಿಡ್ ವೈರಸ್ ಸೋಂಕಿನ ಆರ್ಭಟ
ನವದೆಹಲಿ : ಮಹಾರಾಷ್ಟ್ರ, ತಮಿಳುನಾಡು ಮತ್ತು ಕರ್ನಾಟಕ ಸೇರಿದಂತೆ ಭಾರತದ 5 ರಾಜ್ಯಗಳಲ್ಲಿ ಕೋವಿಡ್ ವೈರಸ್ ಸೋಂಕಿನ ಆರ್ಭಟ ಹೆಚ್ಚಾಗಿದ್ದು, ನಾಲ್ಕನೇ ಅಲೆಯ ಭೀತಿ ಎದುರಾಗಿದೆ. ಕಳೆದ ವಾರ ಭಾರತದಲ್ಲಿ ಸುಮಾರು 25,000 ಪ್ರಕರಣಗಳನ್ನು ದಾಖಲಾಗಿತ್ತು. ಇದು ಕಳೆದ 3 ತಿಂಗಳಲ್ಲಿ ದಾಖಲಾದ ಅತೀ ಹೆಚ್ಚು ಕೋವಿಡ್ ಪ್ರಕರಣವಾಗಿದೆ. ಅಲ್ಲದೇ ಪಾಸಿಟಿವಿಟಿ ದರ ಕೂಡ ಏರಿಕೆಯನ್ನು ಕಂಡಿದ್ದು ಸದ್ಯ ದೇಶದಲ್ಲಿ ಪಾಸಿಟಿವಿಟಿ ದರ 1.62 ಕ್ಕೆ ಏರಿಕೆ ಕಂಡಿದೆ. ಅದ್ರಲ್ಲೂ …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





