ಅಮೃತಸರ – ಭ್ರಷ್ಟಾಚಾರ ಪ್ರಕರಣದಲ್ಲಿ ಹಿರಿಯ ಕಾಂಗ್ರೆಸ್ ನಾಯಕ ಮತ್ತು ಮಾಜಿ ಸಚಿವ ಸಾಧು ಸಿಂಗ್ ಧರಮ್ಸೋಟ್ ಅವರನ್ನು ಇಂದು ಬಂಧಿಸಲಾಗಿದೆ. ಕ್ಯಾಪ್ಟನ್ ಅಮರಿಂದರ್ ಸಿಂಗ್ ಅವರ ಕಾಂಗ್ರೇಸ್ ಸರ್ಕಾರದ ಸಂಪುಟದಲ್ಲಿ ಅರಣ್ಯ ಮತ್ತು ಸಮಾಜ ಕಲ್ಯಾಣ ಇಲಾಖೆ ಸಚಿವರಾಗಿ ಸೇವೆ ಸಲ್ಲಿಸಿದ್ದ ಸಾಧು ಸಿಂಗ್ ಧರಮ್ಸೋಟ್ ಅವರನ್ನು ಇಂದು ಮುಂಜಾನೆ ವಿಜಿಲೆನ್ಸ್ ಬ್ಯೂರೋ ಅಧಿಕಾರಿಗಳು ಬಂಧಿಸಿದ್ದಾರೆ. ಇವರೊಂದಿಗೆ ಇವರಿಗೆ ಸಹಾಯಕರಾಗಿ ಕೆಲಸ ಮಾಡುತ್ತಿದ್ದ ಸ್ಥಳೀಯ ಪತ್ರಕರ್ತ ಕಮಲ್ಜಿತ್ ಸಿಂಗ್ …
Read More »3-4 ವಾರಗಳಲ್ಲಿ ಕೋವಿಡ್ ನಾಲ್ಕನೇ ಅಲೆ ಆರಂಭವಾಗುವ ಸಾಧ್ಯತೆ
ಬೆಂಗಳೂರು: ರಾಜ್ಯದಲ್ಲಿ ಕಳೆದೊಂದು ವಾರದಿಂದ ಮಹಾಮಾರಿ ಕೊರೊನಾ ವೈರಸ್ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ ಎರಡು ಸಾವಿರ ಗಡಿ ದಾಟಿದೆ. ಈ ಬೆಳವಣಿಗೆಯು ಜನರಲ್ಲಿ ಆತಂಕ ಹೆಚ್ಚಾಗುವಂತೆ ಮಾಡಿದೆ. ಈ ನಡುವಲ್ಲೇ ಆರೋಗ್ಯ ಇಲಾಖೆಯ ಆಯುಕ್ತ ಡಿ ರಂದೀಪ್ ಅವರು ಮುಂದಿನ 3-4 ವಾರಗಳಲ್ಲಿ ಕೋವಿಡ್ ನಾಲ್ಕನೇ ಅಲೆ ಆರಂಭವಾಗುವ ಸಾಧ್ಯತೆಗಳಿವೆ ಎಂದು ಹೇಳಿದ್ದಾರೆ. ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಅವರು ಮಾತನಾಡಿ, ಜೂನ್ ಮತ್ತು ಜುಲೈ ತಿಂಗಳು …
Read More »ಮಾಜಿ ಸಿಎಂ , ಸಿದ್ದರಾಮಯ್ಯ ಭೇಟಿ : ರಾಜಕೀಯದಲ್ಲಿ ರೋಚಕ ಕುತೂಹಲ
ಬೆಂಗಳೂರು: ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಲಾಂಜ್ ನಲ್ಲಿ ಮಾಜಿ ಸಿಎಂ ಯಡಿಯೂರಪ್ಪ ಹಾಗೂ ವಿಪಕ್ಷ ನಾಯಕ ಸಿದ್ದರಾಮಯ್ಯ ಮಾತುಕತೆ ನಡೆಸಿರುವುದು ತೀವ್ರ ಕುತೂಹಲಕ್ಕೆ ಕಾರಣವಾಗಿದೆ. ಬೆಳಗಾವಿಗೆ ತೆರಳುವ ಸಂದರ್ಭದಲ್ಲಿ ಇಬ್ಬರು ನಾಯಕರು ಲಾಂಜ್ ನಲ್ಲಿ ಭೇಟಿ ಮಾಡಿದರು. ಇದೊಂದು ಸೌಹಾರ್ದ ಭೇಟಿ ಎಂದು ಉಭಯ ನಾಯಕರ ಕಚೇರಿ ಮೂಲಗಳು ಹೇಳಿವೆ. ರಾಜ್ಯಸಭಾ ಚುನಾವಣೆಯಲ್ಲಿ ನಾಲ್ಕನೇ ಅಭ್ಯರ್ಥಿಯ ಗೆಲುವಿಗಾಗಿ ಕಾಂಗ್ರೆಸ್ ಮತ್ತು ಬಿಜೆಪಿ ತೀವ್ರ ಕಸರತ್ತು ಆರಂಭಿಸಿರುವ ವೇಳೆ ಉಭಯ ನಾಯಕರ …
Read More »ಭಾರತದ 5 ರಾಜ್ಯಗಳಲ್ಲಿ ಕೋವಿಡ್ ವೈರಸ್ ಸೋಂಕಿನ ಆರ್ಭಟ
ನವದೆಹಲಿ : ಮಹಾರಾಷ್ಟ್ರ, ತಮಿಳುನಾಡು ಮತ್ತು ಕರ್ನಾಟಕ ಸೇರಿದಂತೆ ಭಾರತದ 5 ರಾಜ್ಯಗಳಲ್ಲಿ ಕೋವಿಡ್ ವೈರಸ್ ಸೋಂಕಿನ ಆರ್ಭಟ ಹೆಚ್ಚಾಗಿದ್ದು, ನಾಲ್ಕನೇ ಅಲೆಯ ಭೀತಿ ಎದುರಾಗಿದೆ. ಕಳೆದ ವಾರ ಭಾರತದಲ್ಲಿ ಸುಮಾರು 25,000 ಪ್ರಕರಣಗಳನ್ನು ದಾಖಲಾಗಿತ್ತು. ಇದು ಕಳೆದ 3 ತಿಂಗಳಲ್ಲಿ ದಾಖಲಾದ ಅತೀ ಹೆಚ್ಚು ಕೋವಿಡ್ ಪ್ರಕರಣವಾಗಿದೆ. ಅಲ್ಲದೇ ಪಾಸಿಟಿವಿಟಿ ದರ ಕೂಡ ಏರಿಕೆಯನ್ನು ಕಂಡಿದ್ದು ಸದ್ಯ ದೇಶದಲ್ಲಿ ಪಾಸಿಟಿವಿಟಿ ದರ 1.62 ಕ್ಕೆ ಏರಿಕೆ ಕಂಡಿದೆ. ಅದ್ರಲ್ಲೂ …
Read More »ರಾಜ್ಯ ಸರ್ಕಾರದಿಂದ ಜನತೆಗೆ ಮತ್ತೊಂದು ಸಿಹಿಸುದ್ದಿ
ಬೆಂಗಳೂರು : ರಾಜ್ಯ ಸರ್ಕಾರವು ಜನತೆಗೆ ಮತ್ತೊಂದು ಸಿಹಿಸುದ್ದಿ ನೀಡಿದ್ದು, ರಾಜ್ಯದ ನಾಲ್ಕು ಜಿಲ್ಲೆಗಳಲ್ಲಿ ಪ್ರಾಯೋಗಿಕವಾಗಿ ಸಂಚಾರಿ ಆಸ್ಪತ್ರೆಯನ್ನು ಆರಂಭಿಸಲಾಗಿದ್ದು, ಶೀಘ್ರವೇ ಎಲ್ಲಾ ಜಿಲ್ಲೆಗಳಿಗೂ ವಿಸ್ತರಿಸಲಾಗುವುದು ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಬೆಂಗಳೂರಿನ ವಿಧಾನಸೌಧದ ಮುಂಭಾಗದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ರೋಟರಿ ಬೆಂಗಳೂರು ಹೈಗ್ರೌಂಡ್ಸ್ ಸಹಯೋಗದೊಂದಿಗೆ ಇನ್ಫೋಸಿಸ್ ಫೌಂಡೇಶನ್ ಕೊಡ ಮಾಡಿರುವ ಸಂಚಾರಿ ಪ್ರಯೋಗಾಲಯಗಳನ್ನು ಲೋಕಾರ್ಪಣೆ ಮಾಡಿ ಮಾತನಾಡಿದ ಸಿಎಂ ಬೊಮ್ಮಾಯಿ, ಬಜೆಟ್ ನಲ್ಲಿ ಘೋಷಣೆ …
Read More »ಇಲಾಖಾ ತನಿಖಾ ವಿಚಾರಣೆ ವೇಳೆ ಸುಳ್ಳು ಹೇಳಿಕೆ ಆರೋಪ : 5 ಪೊಲೀಸ್ ಕಾನ್ಸ್ಟೇಬಲ್ ಅಮಾನತು
ವಿಜಯನಗರ: ಅಮಾನತಾದ ಪೊಲೀಸ್ ಕಾನ್ಸ್ಟೇಬಲ್ಗೆ ಸಹಕಾರಿಯಾಗುವಂತೆ ಇಲಾಖಾ ತನಿಖಾ ವಿಚಾರಣೆ ವೇಳೆ ಸುಳ್ಳು ಹೇಳಿದ್ದ ಐವರು ಪೊಲೀಸ್ ಕಾನ್ಸ್ಟೇಬಲ್ಗಳನ್ನು ಅಮಾನತುಗೊಳಿಸಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಅರುಣ್ ಕೆ ಆದೇಶ ಹೊರಡಿಸಿದ್ದಾರೆ. ಕೊಟ್ಟೂರು ಪೊಲೀಸ್ ಠಾಣೆಯ ಕಾನ್ಸ್ಟೇಬಲ್ಗಳಾದ ಕವಿತಾ ಬಾಯಿ, ತಿಪ್ಪಣ್ಣ, ಹೆಚ್ ಬಸವರಾಜ್, ಪತ್ರಿ ಕುಮಾರ್ ಹಾಗೂ ಬಸವರಾಜ ಅಮಾನತುಗೊಂಡವರು. ಅಕ್ರಮ ಮರಳು ಸಾಗಣೆ ಮಾಡುವವರ ಮೇಲೆ ನಿಗಾ ವಹಿಸುವಂತೆ ಸೂಚನೆ ನೀಡಿದರೂ ಪಾಲನೆ ಮಾಡಿಲ್ಲ ಹಾಗೂ ವರ್ಗಾವಣೆ ಮಾಡಿಸುತ್ತೇನೆ …
Read More »ಕೋವಿಡ್ ವಾರಿಯರ್ ಗಳಾಗಿ ಕರ್ತವ್ಯ ನಿರ್ವಹಿಸಿ ಮೃತಪಟ್ಟಿರುವ ಪರಿಹಾರ ಬಿಡುಗಡೆ
ಬೆಂಗಳೂರು : ರಾಜ್ಯದ ಸರ್ಕಾರಿ ಪ್ರೌಢಶಾಲೆಗಳಲ್ಲಿ ಕೋವಿಡ್ ವಾರಿಯರ್ ಗಳಾಗಿ ಕರ್ತವ್ಯ ನಿರ್ವಹಿಸಿ ಮೃತಪಟ್ಟಿರುವ ಸರ್ಕಾರಿ ನೌಕರರಿಗೆ ಶಿಕ್ಷಣ ಇಲಾಖೆ ಪರಿಹಾರ ಬಿಡುಗಡೆ ಮಾಡಿದೆ. ಕೊರೊನಾ ವಾರಿಯರ್ ಗಳಾಗಿ ಕರ್ತವ್ಯ ನಿರ್ವಹಿಸಿ ಮೃತಪಟ್ಟಿರುವ ಸರ್ಕಾರಿ ನೌಕರರಿಗೆ ಪರಿಹಾರ ನೀಡಲು 6.9 ಕೋಟಿ ರೂ. ಬಿಡುಗಡೆ ಮಾಡಿ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ.
Read More »ರಾಜ್ಯದಲ್ಲಿ ಮತ್ತೆ ಕೊರೊನಾ ವೈರಸ್ ಅಬ್ಬರ ಶುರು.
ಬೆಂಗಳೂರು: ಕಳೆದೊಂದು ವಾರದಿಂದ ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 2 ಸಾವಿರ ಗಡಿ ದಾಟಿದೆ. ಕೊರೊನಾ ಸೋಂಕಿನ ಪ್ರಕರಣಗಳು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಕೊರೊನಾ ನಾಲ್ಕನೇ ಭೀತಿ ಎದುರಾಗಿದೆ. ಮುಂದಿನ 2-3 ವಾರಗಳು ನಿರ್ಣಾಯಕವಾಗಿದ್ದು, ಕೋವಿಡ್ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ತಜ್ಞರು ಎಚ್ಚರಿಕೆ ನೀಡಿದ್ದಾರೆ.ರಾಜ್ಯದಲ್ಲಿ ಕಳೆದ 10 ದಿನಗಳಲ್ಲಿ 1,927 ಸೋಂಕು ಪ್ರಕರಣಗಳು ವರದಿಯಾಗಿದ್ದು, ದಿನದ ಸೋಂಕು ಪ್ರಮಾಣ ದರ ಶೇ. 1ಕ್ಕಿಂತ ಹೆಚ್ಚಿದೆ. ಈ ಅವಧಿಯಲ್ಲಿ …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





