ಧಾರವಾಡ : ಜಿಲ್ಲೆಯಲ್ಲಿ ರಸಗೊಬ್ಬರಕ್ಕಾಗಿ ರೈತರು ಪರದಾಡುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ದಿನೇ ದಿನೇ ರಸಗೊಬ್ಬರಕ್ಕಾಗಿ ಅಲೆದಾಡುತ್ತಿರುವ ಅನ್ನದಾತರು ಕಂಗಾಲಾಗಿ ಧಾರವಾಡದಲ್ಲಿರುವ ಶಾಸಕ ಅರವಿಂದ ಬೆಲ್ಲದ ಅವರ ಮನೆಗೆ ಮುತ್ತಿಗೆ ಹಾಕಿ ಆಕ್ರೋಶ ಹೊರ ಹಾಕಿದ್ದಾರೆ. ಧಾರವಾಡ ಜಿಲ್ಲೆಯಲ್ಲಿ ರಸಗೊಬ್ಬರಕ್ಕಾಗಿ ಹಾಹಾಕಾರ ಉಂಟಾಗಿದೆ. ಸೊಸೈಟಿ ಹಾಗೂ ರೈತ ಸಂಪರ್ಕ ಕೇಂದ್ರಗಳಲ್ಲಿ ರಸಗೊಬ್ಬರವೇ ಸಿಗುತ್ತಿಲ್ಲ. ಕೃಷಿ ಇಲಾಖೆ ಅಧಿಕಾರಿಗಳು ಬರೀ ಹಾರಿಕೆ ಉತ್ತರ ಕೊಡುತ್ತಿದ್ದಾರೆ. ಸದ್ಯ ಬಿತ್ತನೆ ಕಾರ್ಯ ಆರಂಭವಾಗಿದ್ದು, ಬಿತ್ತನೆಗೆ ಪೂರಕವಾದ …
Read More »ಎನ್ ಸಿ ಸಿ ಕೆಡೆಟ್ಗಳಿಂದ ವಿಶ್ವ ತಂಬಾಕು ರಹಿತ ದಿನ ಆಚರಣೆ
ಧಾರವಾಡ: ಎನ್ ಸಿ ಸಿ ಕೆಡೆಟ್ಗಳಿಂದ ಧಾರವಾಡ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಆವರಣದಲ್ಲಿ ವಿಶ್ವ ತಂಬಾಕು ರಹಿತ ದಿನ ಆಚರಣೆ ಹಾಗೂ ಜಾಗೃತಿ ಮೂಡಿಸುವ ಕಾರ್ಯಕ್ರಮ ಆಯೋಜನೆ ಮಾಡಲಾಗಿತ್ತು. ಎನ್ಸಿಸಿ ಕೆಡೆಟ್ಗಳು ಸಾಮಾಜಿಕ ಜವಾಬ್ದಾರಿ ಮತ್ತು ಸಮುದಾಯ ಅಭಿವೃದ್ಧಿ ಕಾರ್ಯಕ್ರಮದ ಭಾಗವಾಗಿ ಅನೇಕ ಚಟುವಟಿಕೆಗಳನ್ನು ನಡೆಸುತ್ತಿದ್ದಾರೆ ಅದರಂತೆ ಈ ಕಾರ್ಯಕ್ರಮ ಆಯೋಜನೆ ಮಾಡಲಾಗಿತ್ತು. ಕಾರ್ಯಕ್ರಮದಲ್ಲಿ ಧಾರವಾಡದ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಡಾ.ಬಿ.ಪಿ.ಮಠದ ಭಾಗವಹಿಸಿ ವಿದ್ಯಾರ್ಥಿಗಳು ದುಶ್ಚಟಗಳಿಂದ …
Read More »ಭಾರೀ ಪೊಲೀಸ್ ಭದ್ರತೆಯಲ್ಲಿ ಅನಿಧಿಕೃತ ಕಟ್ಟಡ ತೆರವು ಕಾರ್ಯಾಚರಣೆ
ಹುಬ್ಬಳ್ಳಿ; ಹಳೆ ಹುಬ್ಬಳ್ಳಿಯ ಹೆಗ್ಗೇರಿ ಕಾಲೋನಿಯಲ್ಲಿ ಅನಿಧಿಕೃತ ಕಟ್ಟಡ ತೆರವು ಕಾರ್ಯಾಚರಣೆ ಬುಧವಾರ ಪೊಲೀಸ್ ಭದ್ರತೆಯಲ್ಲಿ ನಡೆಸಲಾಯಿತು. ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ ಅಧಿಕಾರಿಗಳು ಡೆಮಾಲಿಷನ್ ಕಾರ್ಯವನ್ನು ಕಾರ್ಯಾಚರಣೆ ನೇತೃತ್ವದಲ್ಲಿ ನಡೆಸಲಾಗಿದ್ದು, ಬೆಳಿಗ್ಗೆಯಿಂದಲೇ ಸಾಕಷ್ಟು ವಿರೋಧವಾಗಿತ್ತು. ಪೊಲೀಸ್ ಅಧಿಕಾರಿಗಳು, ಸಿಬ್ಬಂದಿ ಬಂದೋಬಸ್ತ್ ನೀಡಿದ್ದು ಈಗಾಗಲೇ ಅತಿಕ್ರಮಣ ಮಾಡಿಕೊಂಡ ಕುರಿತು ಎಚ್ಚರಿಕೆ ನೋಟಿಸ್ ಸಹ ಜಾರಿ ಮಾಡಲಾಗಿತ್ತು.ಈ ನಡುವೆಮನೆಯ ಮಾಲಿಕರುಗಳು ನಮ್ಮ ವಸ್ತುಗಳನ್ನು ತೆಗೆಯಲು ಅವಕಾಶವನ್ನು ನೀಡಬೇಕು ಎಂದು ಮನವಿ ಮಾಡಿಕೊಳ್ಳುತ್ತಿದ್ದು …
Read More »ಖ್ಯಾತ ಬಾಲಿವುಡ್ ಗಾಯಕ ಕೃಷ್ಣಕುಮಾರ್ ಕುನ್ನತ್ ನಿಧನ
ಕೋಲ್ಕತ್ತಾ: ಖ್ಯಾತ ಬಾಲಿವುಡ್ ಗಾಯಕ, ಕೆಕೆ ಎಂದೇ ಹೆಸರಾಗಿದ್ದ ಕೃಷ್ಣಕುಮಾರ್ ಕುನ್ನತ್ ಅವರು ಕೋಲ್ಕತ್ತಾದಲ್ಲಿ ನಡೆದ ಸಂಗೀತ ಕಾರ್ಯಕ್ರಮದ ನಂತರ ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ. 53 ವರ್ಷದ ಗಾಯಕ ಕೋಲ್ಕತ್ತಾದ ನಜ್ರುಲ್ ಮಂಚಾ ಆಡಿಟೋರಿಯಂನಲ್ಲಿ ಸಂಗೀತ ಕಚೇರಿ ನಡೆಸಿದ ನಂತರ ತಾವು ತಂಗಿದ್ದ ಹೋಟೆಲ್ ಗೆ ತೆರಳುತ್ತಿದ್ದಾಗ ಮೆಟ್ಟಿಲ ಮೇಲೆ ಕುಸಿದು ಬಿದ್ದು ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Read More »ನೂತನ ಮೇಯರ್ ಗೆ ದೇವಾಂಗ ಸಮಾಜದಿಂದ ಸನ್ಮಾನ
ಹುಬ್ಬಳ್ಳಿ: ಹು.ಧಾ.ಮಹಾನಗರ ಪಾಲಿಕೆಯ ಮಹಾಪೌರರಾಗಿ ಆಯ್ಕೆಯಾದ ಈರೇಶ ಅಂಚಟಗೇರಿ ಅವರನ್ನು ಹುಬ್ಬಳ್ಳಿ ದೇವಾಂಗ ಸಮಾಜದ ಕೇಂದ್ರೀಯ ಸಮಿತಿಯಿಂದ ಸನ್ಮಾನಿಸಲಾಯಿತು. ಸಮಿತಿ ಗೌರವಾಧ್ಯಕ್ಷ ಕೆ.ಜಿ.ಬ್ಯಾಕೋಡಿ ಅಧ್ಯಕ್ಷ ನಾಗೇಶ್ ಬಾಫಿ , ಕಾರ್ಯದರ್ಶಿ ವೀರಣ್ಣ ನಿಂಬರಗಿ , ಶಿವಶಂಕರ ಬಿಜ್ಜಲ , ಮುಕುಂದಗೌಡ್ರು ಗುಗ್ರಿ ಅಶೋಕ್ ಬೀಳಗಿ , ವಿನಾಯಕ ಪೊಶೆಟ್ಟಿ , ಮಂಜುನಾಥ ವಡಕಣ್ಣವರ , ಶಂಕರ ಘಾರ್ಗಿ ಹಾಗೂ ಸಮಾಜದ ಇತರ ಮುಖಂಡರು ಇದ್ದರು .
Read More »ರೈತ ಮುಖಂಡ ರಾಕೇಶ್ ಟಿಕಾಯತ್ ಮೇಲೆ ಹಲ್ಲೆ ಮಾಡಿದ್ದು ಖಂಡನೀಯ
ರೈತ ಮುಖಂಡ ರಾಕೇಶ್ ಟಿಕಾಯತ್ ಮೇಲೆ ಹಲ್ಲೆ ಮಾಡಿದ್ದು ಖಂಡನೀಯವಾಗಿದ್ದು , ಸೂಕ್ತ ಭದ್ರತೆ ನೀಡುವುದರಲ್ಲಿ ವಿಫಲವಾದ ರಾಜ್ಯ ಸರ್ಕಾರವೇ ಘಟನೆಗೆ ಕಾರಣ ಎಂದು ಮಾಜಿ ಸಚಿವ ಸಂತೋಷ ಲಾಡ್ ಹೇಳಿದ್ದಾರೆ . ರಾಷ್ಟ್ರಮಟ್ಟದ ರೈತ ನಾಯಕ ರಾಕೇಶ್ ಟಿಕಾಯತ್ರವರು ಬೆಂಗಳೂರಿಗೆ ಆಗಮಿಸಿದ ಸಂದರ್ಭದಲ್ಲಿ ರಾಜ್ಯ ಸರ್ಕಾರವು ಸೂಕ್ತ ಭದ್ರತೆ ಒದಗಿಸಬೇಕಿತ್ತು . ಆದರೆ ರಾಜ್ಯ ಸರ್ಕಾರ ತೋರಿದ ನಿರ್ಲಕ್ಷದಿಂದಾಗಿ ಅಹಿತಕರ ಘಟನೆ ನಡೆದಿದೆ . ಸರ್ಕಾರ ತನಿಖೆ ಮಾಡಬೇಕು …
Read More »ಬಡ ಮಕ್ಕಳಿಗೆ ನೋಟ್ ಬುಕ್ ವಿತರಣೆ
ಹುಬ್ಬಳ್ಳಿ: ವಿನೋಬಾ ನಗರದಲ್ಲಿರುವ ಜನತಾ ಸೇವಾ ಟ್ರಸ್ಟ್ ವತಿಯಿಂದ ಬಡ ಮಕ್ಕಳಿಗೆ ನೋಟ್ ಬುಕ್ , ಪೆನ್ನು , ಪೆನ್ಸಿಲ್ ವಿತರಿಸಲಾಯಿತು . ಈ ಸಂದರ್ಭದಲ್ಲಿ 58 ನೇ ವಾರ್ಡಿನ ಪಾಲಿಕೆಯ ಸದಸ್ಯೆ ಶ್ರೀಮತಿ ಶೃತಿ ಸಂತೋಷ್ ಚಲವಾದಿ , ಚಂದ್ರಕಾಂತ ಯಾದವ್ , ಇಬ್ರಾಹಿಂ ಹೊಸಪೇಟೆ , ಯುವ ಮುಖಂಡ ಸಂತೋಷ್ ಚಲವಾದಿ , ಡೇವಿಡನ್ , ವೆಂಕಟ್ , ಶ್ರೀನಿವಾಸ್ , ವಿಷ್ಣು , ಗುಂಡು ಇನ್ನೂ …
Read More »ಡಿವೈಡರ್ ಗೆ ಡಿಕ್ಕಿ : ಅದೃಷ್ಟವಶಾತ್ ಪ್ರಣಾಪಾಯದಿಂದ ಪಾರು
ಹುಬ್ಬಳ್ಳಿ : ರಾಷ್ಟ್ರೀಯ ಹೆದ್ದಾರಿ ಹುಬ್ಬಳ್ಳಿ ಗದಗ ಮಾರ್ಗ ಮಧ್ಯೆ ಬರುವ ನಲವಡಿ ಟೋಲ್ ನಾಕಾ ಬಳಿ ನಿನ್ನೆ ಸಂಜೆ ಅಪಘಾತ ಸಂಭವಿಸಿದೆ. ರಾಯಚೂರಿನಿಂದ ಧಾರವಾಡಕ್ಕೆ ತೆರಳುತ್ತಿದ್ದ ಖಾಸಗಿ ಬಸ್ ರಾಂಗ್ ರೂಟನಲ್ಲಿ ಬಂದು ಡಿವೈಡರ್ ಗೆ ಡಿಕ್ಕಿಯಾಗಿದೆ . ಇನ್ನು ಈ ಅವಘಾತಕ್ಕೆ ಚಾಲಕನ ಅಜಾಗ್ರತೆಯೇ ಕಾರಣ ಎಂದು ಸ್ಥಳೀಯರು ತಿಳಿಸಿದ್ದಾರೆ ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ . ಈ ಘಟನೆ ಕುರಿತು ಸಾರ್ವಜನಿಕರು ಪೊಲೀಸ್ ಠಾಣೆಗೆ ಕರೆ …
Read More »ಕಾಂಗ್ರೆಸ್ ಹಾಗೂ ಬಿಜೆಪಿ ನಡುವೆ ಒಳ ಒಪ್ಪಂದವಾಗಿದೆ : ಇಬ್ರಾಹಿಂ
ಬೆಂಗಳೂರು: ರಾಜ್ಯಸಭೆ ಚುನಾವಣೆ ಬೆನ್ನಲ್ಲೇ ಬಿಜೆಪಿ, ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷಗಳು ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ್ದು, ಈ ನಡುವೆ ಕಾಂಗ್ರೆಸ್ ಹಾಗೂ ಬಿಜೆಪಿ ನಡುವೆ ಒಳ ಒಪ್ಪಂದವಾಗಿದೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ ಹೊಸ ಬಾಂಬ್ ಸಿಡಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿ.ಎಂ.ಇಬ್ರಾಹಿಂ, ಸ್ಥಳೀಯ ನಾಯಕರಿಂದ ಕೊನೇ ಕ್ಷಣದಲ್ಲಿ ಗೇಮ್ ಚೇಂಜ್ ಆಗಿದೆ. ಇದು ಮುಸ್ಲಿಂ ಸಮುದಾಯಕ್ಕೆ ಮಾಡಿರುವ ಅಪಮಾನ ಎಂದರು.
Read More »ರಾಜ್ಯದಲ್ಲಿಂದು 197 ಮಂದಿಗೆ ಸೋಂಕು ದೃಢ
ಬೆಂಗಳೂರು: ರಾಜ್ಯದಲ್ಲಿಂದು 17,716 ಮಂದಿಗೆ ಕೊರೊನಾ ಪರೀಕ್ಷೆ ನಡೆಸಲಾಗಿದ್ದು, ಇದರಲ್ಲಿ 197 ಮಂದಿಗೆ ಸೋಂಕು ದೃಢಪಟ್ಟಿದೆ. ಈ ಮೂಲಕ ಸೋಂಕಿತರ ಸಂಖ್ಯೆ 39,52,102 ಕ್ಕೆ ಏರಿಕೆ ಆಗಿದೆ. ಪಾಸಿಟಿವ್ ದರವೂ 1.11% ಕ್ಕೆ ಏರಿಕೆ ಕಂಡಿದೆ. ಇತ್ತ 273 ಸೋಂಕಿತರು ಗುಣಮುಖರಾಗಿದ್ದು, ಇಲ್ಲಿಯತನಕ ಒಟ್ಟು 39,09,966 ಮಂದಿ ಡಿಸ್ಚಾರ್ಜ್ ಆಗಿದ್ದಾರೆ. ಸೋಂಕಿಗೆ ಓರ್ವರು ಮೃತಪಟ್ಟಿದ್ದು, ಸಾವಿನ ಸಂಖ್ಯೆ 40,065 ರಷ್ಟಿದೆ. ಸದ್ಯ ಸಕ್ರಿಯ ಪ್ರಕರಣಗಳ ಸಂಖ್ಯೆ 2,029 ರಷ್ಟಿದೆ. ವಿಮಾನ …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





