Breaking News

BigTv News

ಬಾಡ ಕ್ರಾಸ್ ಬಳಿ ಅಪಘಾತ : ಸಾವಿನ ಸಂಖ್ಯೆ 11ಕ್ಕೆ ಏರಿಕೆ

ಧಾರವಾಡ : ತಾಲೂಕಿನ ಬಾಡ ಗ್ರಾಮದ ಬಳಿ ನಡೆದ ಕ್ರೂಸರ್ ವಾಹನ ಅಪಘಾತ ಪ್ರಕರಣದಲ್ಲಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದ ಮತ್ತೋರ್ವ ಬಾಲಕಿ ಸಾವನ್ನಪ್ಪಿದ್ದಾಳೆ . ಈ ಮೂಲಕ ಸಾವಿನ ಸಂಖ್ಯೆ 11 ಕ್ಕೇರಿದೆ ಐದು ವರ್ಷದ ಆರಾಧ್ಯ ಹುತಮಲ್ಲನ್ನವರ ಮೃತಪಟ್ಟ ಬಾಲಕಿ . ಕಳೆದ 6 ದಿನಗಳಿಂದ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಈಕೆಗೆ ಚಿಕಿತ್ಸೆ ನೀಡಲಾಗುತ್ತಿತ್ತುಮೇ 20 ರಂದು ಬಾಡ ಬಳಿ ನಡೆದ ಭೀಕರ ಅಪಘಾತದಲ್ಲಿ …

Read More »

ಹಾಡುಹಗಲೆ ಕಳ್ಳತನ ಮಾಡುತ್ತೀದ ಕುಖ್ಯಾತ ಕಳ್ಳರು ಬಂಧನ

ಹುಬ್ಬಳ್ಳಿ : ನಗರದಲ್ಲಿ ಬೆಳ್ಳಗಿನ ಜಾವ ಮನೆ ಕಳ್ಳತನ ಮಾಡುತ್ತಿದ್ದ ಇಬ್ಬರು ಕುಖ್ಯಾತ ಕಳ್ಳರನ್ನು ಹಳೇ ಹುಬ್ಬಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ . ಆರೋಪಿತರಿಂದ 5,64,000 ರೂ . ಮೌಲ್ಯದ 104 ಗ್ರಾಂ ಚಿನ್ನಾಭರಣ , 180 ಗ್ರಾಂ ಬೆಳ್ಳಿ ಹಾಗೂ ಒಂದು ಬೈಕ್ ವಶಪಡಿಸಿಕೊಂಡಿದ್ದಾರೆ . ಮೇ .9 ರಂದು ಸಂತೋಷ ನಗರದಲ್ಲಿ ಮನೆಯೊಂದರಲ್ಲಿ ಕಳ್ಳತನ ನಡೆದಿತ್ತು . ಈ ಕುರಿತು ತನಿಖೆ ಆರಂಭಿಸಿದ ಹಳೇ ಹುಬ್ಬಳ್ಳಿ ಠಾಣೆ …

Read More »

ಬೆಣಕಟ್ಟಿ ಗ್ರಾಮಕ್ಕೆ ಅಮೃತ ದೇಸಾಯಿ ಭೇಟಿ : ಕುಟುಂಬಸ್ಥರಿಗೆ ಸಾಂತ್ವನ

ಧಾರವಾಡ: ಬಾಡ ಗ್ರಾಮದ ಬಳಿ ನಡೆದ ಅಪಘಾತದಲ್ಲಿ ಮೃತರಾದ ಗೋವನಕೊಪ್ಪ , ನಿಗದಿ ಹಾಗು ಬೆಣಕಟ್ಟಿ ಗ್ರಾಮಸ್ಥರ ಮನೆಗೆ ಶಾಸಕ ಅಮೃತ ದೇಸಾಯಿ ಭೇಟಿ ಮಾಡಿ ಅವರ ಕುಟುಂಬಕ್ಕೆ ಸಾಂತ್ವನ ಹೇಳಿದರು . ಈಗಾಗಲೇ ಅಪಘಾತದಲ್ಲಿ ಮೃತರಾದವರ ಕುಟುಂಬಕ್ಕೆ ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಶಿ ಅವರ ಮನವಿ ಮೇರೆಗೆ ಹಾಗೂ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಅವರ ಸರಕಾರದಿಂದ ತಲಾ 5 ಲಕ್ಷ ಪರಿಹಾರ ಕೂಡ ಘೋಷಣೆಯಾಗಿದ್ದು , ಚಿಕಿತ್ಸೆ ಪಡೆಯುತ್ತಿರುವ …

Read More »

ಶ್ರೀ ಉಳವಿ ಚನ್ನಬಸವೇಶ್ವರ ದೇವಸ್ಥಾನಕ್ಕೆ ಅಮೃತ ದೇಸಾಯಿ ಭೇಟಿ

ಧಾರವಾಡ : ನಗರದ ಶ್ರೀ ಉಳವಿ ಚನ್ನಬಸವೇಶ್ವರ ದೇವಸ್ಥಾನಕ್ಕೆ ಕೇಂದ್ರ ಸಚಿವ ಹಾಗೂ ಶಾಸಕ ಅಮೃತ ದೇಸಾಯಿ ಭೇಟಿ ನೀಡಿ , ದೇವಸ್ಥಾನದ ಮುಂದಿನ ಜೀರ್ಣೋದ್ಧಾರ ಕಾರ್ಯದ ಬಗ್ಗೆ ಚರ್ಚಿಸಿದರು. ಈ ಸಂದರ್ಭದಲ್ಲಿ ಶಾಸಕರಾದ ಅರವಿಂದ ಬೆಲ್ಲದ್ ಮತ್ತು ಅಮೃತ ದೇಸಾಯಿ ಹಾಗೂ ದೇವಾಲಯದ ಮಂಡಳಿಯ ಪ್ರಮುಖರು ಉಪಸ್ಥಿತರಿದ್ದರು .

Read More »

ಅಮೀನುದ್ದೀನ ದರ್ಗಾದ ಉರುಸು ಕಾರ್ಯಕ್ರಮದಲ್ಲಿ ಶಾಸಕಿ ಭಾಗಿ

ಕುಂದಗೋಳ: ತಾಲೂಕಿನ ಸಂಶಿ ಗ್ರಾಮದ ಖಾಜಾ ಅಮೀನುದ್ದೀನ ದರ್ಗಾದ ಉರುಸು ಕಾರ್ಯಕ್ರಮದಲ್ಲಿ ಶಾಸಕಿ ಕುಸುಮಾ ಶಿವಳ್ಳಿ ಭಾಗಿಯಾಗಿ ದೇವರ ಆಶೀರ್ವಾದ ಪಡೆದುಕೊಂಡರು . ನಂತರ ಗ್ರಾಮದ ಅಭಿವೃದ್ಧಿ ಮಾಡಲು ಗ್ರಾಮಸ್ಥರು ಮನವಿ ಮಾಡಿಕೊಂಡರು . ಈ ಸಂದರ್ಭದಲ್ಲಿ ವಿವಿಧ ಮಠಾಧೀಶರು ಮೌಲ್ವಿಗಳು ಸೇರಿದಂತೆ ಗ್ರಾಪಂ ಅಧ್ಯಕ್ಷರು ಉಪಾಧ್ಯಕ್ಷರು ಸದಸ್ಯರು ಸೇರಿದಂತೆ ವಿವಿಧ ಪಕ್ಷಗಳ ಮುಖಂಡರು ಗ್ರಾಮದ ಗುರುಹಿರಿಯರು ಭಾಗವಹಿಸಿದ್ದರು .

Read More »

ಡಾ | ಬಿ . ಆರ್.ಅಂಬೇಡ್ಕರ್ಪುತ್ಥಳಿಗೆ ಮಾಲಾರ್ಪಣೆ ಮಾಡಿದ ಶಾಸಕ

ಧಾರವಾಡ: ವಿಶ್ವಗುರು ಶ್ರೀ ಬಸವಣ್ಣನವರು , ಸಂವಿಧಾನ ಶಿಲ್ಪಿ ಡಾ | ಬಿ . ಆರ್.ಅಂಬೇಡ್ಕರ್ ಹಾಗೂ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತರಾದ ದಿ.ದ.ರಾ.ಬೇಂದ್ರೆ ಅವರ ಪುತ್ಥಳಿಗೆ ಮಾಲಾರ್ಪಣೆ ಮಾಡಿ ಬೃಹತ್ ಸಮಾವೇಶ , ಮೆರವಣಿಗೆಯಲ್ಲಿ ಶಾಸಕ ಅರವಿಂದ್ ಬೆಲ್ಲದ್ ಪಾಲ್ಗೊಂಡರು . ಈ ಸಂದರ್ಭದಲ್ಲಿ , ಕೇಂದ್ರ ಸಚಿವರಾದ ಶ್ರೀ ಪ್ರಹ್ಲಾದ ಜೋಶಿ , ಮಾಜಿ ಮುಖ್ಯಮಂತ್ರಿಗಳಾದ ಶ್ರೀ ಜಗದೀಶ್ ಶೆಟ್ಟರ್ , ಸಚಿವರಾದ ಶ್ರೀ ಹಾಲಪ್ಪ ಆಚಾರ್ , …

Read More »

ಕಾಲೇಜಿಗೆ ಸೇರಲು ಹೊರಟ್ಟಿದ ಹುಡುಗಿ ಸ್ಮಶಾನ ಸೇರಿದಳು : ವಿಧಿ ಆಟ

ಬೆಂಗಳೂರು: ಖಾಸಗಿ ಸ್ಕೂಲ್​ ಬಸ್​ ಮತ್ತು ಬೈಕ್​ ನಡುವೆ ನಗರದ ಬನಶಂಕರಿಯಲ್ಲಿ ಗುರುವಾರ ಭೀಕರ ಅಪಘಾತ ಸಂಭವಿಸಿದ್ದು, 16 ವರ್ಷದ ಬಾಲಕಿ ಸ್ಥಳದಲ್ಲೇ ಮೃತಪಟ್ಟಿದ್ದಾಳೆ. ಹಾರೋಹಳ್ಳಿಯ ಕೀರ್ತನ ಮೃತ ದುರ್ದೈವಿ. ಇತ್ತೀಚಿಗೆ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಪಾಸ್​ ಆಗಿದ್ದ ಕೀರ್ತನ ಮತ್ತು ಹರ್ಷಿತಾ ಇಬ್ಬರೂ ಕನಕಪುರ ರಸ್ತೆಯ ನೆಟ್ಟಿಗೆರೆ ಬಳಿಯ ಅಕ್ಕನ ಮನೆಗೆ ಬುಧವಾರ ತೆರಳಿದ್ದರು. ಗುರುವಾರ ಬೆಳಗ್ಗೆ ನಾಗರಬಾವಿಯ ಸರ್ಕಾರಿ ಕಾಲೇಜಿಗೆ ಸೇರಲೆಂದು ಸ್ನೇಹಿತ ದರ್ಶನ್​ನ ಬೈಕ್​ನಲ್ಲಿ ತ್ರಿಬಲ್​ ರೈಡಿಂಗ್​ನಲ್ಲಿ …

Read More »

ಮೇ .27ರಂದು ವಿಧಾನಸೌಧದಲ್ಲಿ ಕೆಲಸಗಳು ಸ್ಥಗಿತ

ಬೆಂಗಳೂರು: ಕರ್ನಾಟಕ ಸರ್ಕಾರದ ಸಚಿವಾಲಯದ ನೌಕರರ ಸಂಘ ಮೇ 27ರಂದು ಸಚಿವಾಲಯ ಬಂದ್‌ಗೆ ಕರೆ ನೀಡಿದೆ. ಇದರಿಂದಾಗಿ ಒಂದು ದಿನದ ಮಟ್ಟಿಗೆ ವಿಧಾನಸೌಧದಲ್ಲಿ ಕೆಲಸಗಳು ಸ್ಥಗಿತಗೊಳ್ಳುವ ನಿರೀಕ್ಷೆ ಇದೆ. ಸಚಿವಾಲಯದ 542 ಕಿರಿಯ ಸಹಾಯಕ ಹುದ್ದೆಗಳನ್ನು ಕಡಿತಗೊಳಿಸುವ ಪ್ರಸ್ತಾವನೆ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಮೇ 27ರ ಶುಕ್ರವಾರ ಸಚಿವಾಲಯ ಬಂದ್‌ಗೆ ಕರೆ ನೀಡಲಾಗಿದೆ. ಕರ್ನಾಟಕ ಸರ್ಕಾರದ ಸಚಿವಾಲಯದ ನೌಕರರ ಸಂಘದ ಅಧ್ಯಕ್ಷ ಪಿ. ಗುರುಸ್ವಾಮಿ ಈ ಕುರಿತು …

Read More »

ಶಿಕ್ಷಕರ ಸಮಸ್ಯೆಗೆ ಸ್ಪಂದಿಸದ ಹೊರಟ್ಟಿ ಬಿಜೆಪಿಗೆ ಆಗಮನ : ಮೋಹನ ಲಿಂಬಿಕಾಯಿ

ಹುಬ್ಬಳ್ಳಿ: ಮಾಜಿ ಸಭಾಪತಿ ಬಸವರಾಜ ಹೊರಟ್ಟಿ ಅವರು ಕಳೆದ ಏಳು ಬಾರಿ ಗೆದ್ದರೂ ಶಿಕ್ಷಕರ ಸಮಸ್ಯೆಗಳಿಗೆ ಸ್ಪಂದಿಸಿಲ್ಲ. ಹೀಗಾಗಿಯೇ ಅವರು ಬಿಜೆಪಿಗೆ ಬಂದಿದ್ದಾರೆ. ಇದನ್ನು ಈ ಹಿಂದೆ ನೂರು ಬಾರಿ ಹೇಳಿದ್ದೇನೆ. ಈಗಲೂ ಹೇಳುತ್ತೇನೆ. ನನ್ನ ಹೇಳಿಕೆಗೆ ನಾನು ಈಗಲೂ ಬದ್ಧನಾಗಿರುತ್ತೇನೆ ಎಂದು ವಿಧಾನಪರಿಷತ್ತು ಮಾಜಿ ಸದಸ್ಯ ಹಾಗೂ ಬಿಜೆಪಿ ಟಿಕೆಟ್ ವಂಚಿತರಾಗಿರುವ ಮೋಹನ ಲಿಂಬಿಕಾಯಿ ಅವರು ಮಾಧ್ಯಮಗಳ ಮುಂದೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿ, ಬಸವರಾಜ ಹೊರಟ್ಟಿ ಅವರನ್ನು …

Read More »

ಬಿಜೆಪಿ ವಿರುದ್ಧ ಗಂಭೀರ ಆರೋಪ ಮಾಡಿದ ಡಿಕೆಶಿ

ಬೆಂಗಳೂರು: ಬಿಜೆಪಿಗೆ ಸೇರುವಂತೆ ನನ್ನ ಮೇಲೆ ಒತ್ತಡ ಹೇರಲಾಗುತ್ತಿದೆ. ಬಿಜೆಪಿಗೆ ಸೇರಲು ಒಪ್ಪದಿದ್ದಾಗ ನನ್ನ ವಿರುದ್ಧ ಸಂಚು ರೂಪಿಸಲಾಗುತ್ತಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಬಿಜೆಪಿ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ. ಟ್ವೀಟ್ ಮೂಲಕ ಈ ಬಗ್ಗೆ ಅವರು ಆರೋಪಿಸಿದ್ದು, ಸರ್ಕಾರಿ ಸಂಸ್ಥೆಗಳಿಂದ ನನ್ನ ವಿರುದ್ಧ ಪ್ರಕರಣ ದಾಖಲಿಸಲಾಗುತ್ತಿದೆ. ನನ್ನನ್ನು ಹೆದರಿಸುವುದು ಅಷ್ಟು ಸುಲಭವಲ್ಲ. ಬಿಜೆಪಿಯ 40 ಪರ್ಸೆಂಟ್ ಕಮಿಷನ್ ಸರ್ಕಾರದಿಂದ ಜನ ಬೇಸತ್ತಿದ್ದಾರೆ. ಈ ರಾಜಕೀಯ ಸೇಡಿಗೆ …

Read More »