ಹಾಸನ: ಪಿಎಸ್ಐ ನೇಮಕಾತಿ ಹಗರಣದ ಪ್ರಕರಣ ದಿನಕ್ಕೊಂದು ಸ್ವರೂಪ ಪಡೆದುಕೊಳ್ತಿದೆ. ಇದೀಗ ಆರೋಪಿಯ ಅಣ್ಣನೊಬ್ಬ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಹಾಸನದ ಹೊಳೆನರಸೀಪುರ ತಾಲ್ಲೂಕಿನ ಗುಂಜೇವು ಗ್ರಾಮದ ಮನುಕುಮಾರ್ ಎಂಬಾತ ಪಿಎಸ್ಐ ಪರೀಕ್ಷೆ ಬರೆದು 50 ನೇ ರ್ಯಾಂಕ್ ಪಡೆದು ಆಯ್ಕೆಯಾಗಿದ್ದ, ಅಕ್ರಮ ಬೆಳಕಿಗೆ ಬರುತ್ತಿದ್ದಂತೆ ಪಿಎಸ್ಐ ಅಭ್ಯರ್ಥಿಗಳನ್ನು ವಿಚಾರಣೆ ನಡೆಸಿದ್ದ ಸಿಐಡಿ ಪೊಲೀಸರು ಕೆಲವರನ್ನು ಬಂಧನ ಮಾಡಿದ್ದರು. ಈ ಹಂತದಲ್ಲಿ ಸಿಐಡಿ ಅಧಿಕಾರಿಗಳು ಅಭ್ಯರ್ಥಿ ಮನುಕುಮಾರ್ನನ್ನ ಬಂಧಿಸಿದ್ದರು. …
Read More »ಟ್ರ್ಯಾಕ್ಟರ್ ಪಲ್ಟಿ: ವ್ಯಕ್ತಿ ಸಾವು
ದಾವಣಗೆರೆ : ನಗರದ ಹಳೇ ಕುಂದುವಾಡದಲ್ಲಿ ಟ್ರ್ಯಾಕ್ಟರ್ ಕೆಳಗೆ ಸಿಲುಕಿ ಹೊರಬರಲಾಗದೇ ಒದ್ದಾಡಿ ವ್ಯಕ್ತಿ ಪ್ರಾಣ ಬಿಟ್ಟಿದ್ದಾರೆ. ದೊಡ್ಡಸೋಮಣ್ಣರ ಜಯ್ಯಪ್ಪ(45) ಸಾವನ್ನಪ್ಪಿದ ವ್ಯಕ್ತಿ. ಮೇವು ಕಟಾವ್ ಮಾಡಿ ತರುವಾಗ ಟ್ರ್ಯಾಕ್ಟರ್ ಪಲ್ಟಿಯಾಗಿದೆ. ಕೊನೆಗೆ ಗ್ರಾಮಸ್ಥರು ಜೆಸಿಬಿಯಿಂದ ಟ್ರ್ಯಾಕ್ಟರ್ ಮೇಲೆತ್ತಿ ಶವ ಹೊರಕ್ಕೆ ತೆಗೆದಿದ್ದಾರೆ. ಸ್ಥಳಕ್ಕೆ ವಿದ್ಯಾನಗರ ಪೊಲೀಸ್ ಠಾಣೆ, ದಕ್ಷಿಣ ಸಂಚಾರಿ ಪೊಲೀಸ್ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
Read More »ಈಜಲು ಹೋಗಿ ಕರುಳಕುಡಿ ನೀರುಪಾಲು
ಶಿವಮೊಗ್ಗ : ಜಿಲ್ಲೆ ಭದ್ರಾವತಿ ತಾಲೂಕಿನ ಅಗರದಳ್ಳಿ ಬಳಿಯ ಭದ್ರಾ ಕಾಲುವೆಯಲ್ಲಿ ಈಜಲು ಹೋಗಿ ಅಕ್ಕ, ತಂಗಿ ನೀರುಪಾಲು ಆಗಿದ್ದಾರೆ. ಅಕ್ಕ ಚಂದು(15), ತಂಗಿ ಹರ್ಷಾ(11) ಮೃತರು. ಶವಗಳಿಗಾಗಿ ಅಗ್ನಿಶಾಮಕ ಸಿಬ್ಬಂದಿಯಿಂದ ಶೋಧ ಕಾರ್ಯ ನಡೆಯುತ್ತಿದೆ. ಹೊಳೆಹೊನ್ನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
Read More »ಬೈಕ್ನಲ್ಲಿ ಹಿಂಬದಿ ಕುಳಿತಿದ್ದ ಮಹಿಳೆ ಸಾವು
ಬಾಗಲಕೋಟೆ : ತಾಲೂಕಿನ ದೇವಲಾಪುರ ಕ್ರಾಸ್ ಬಳಿ ಅಪರಿಚಿತ ವಾಹನ ಡಿಕ್ಕಿಯಾಗಿ ಬೈಕ್ನಲ್ಲಿ ಹಿಂಬದಿ ಕುಳಿತಿದ್ದ ಮುದಕವ್ವ ಮುತ್ತಗಿ(37) ಎಂಬುವವರು ಮೃತಪಟ್ಟಿದ್ದಾರೆ. ಬಾಗಲಕೋಟೆ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
Read More »ಬೆಳ್ಳಂ ಬೆಳಿಗ್ಗೆ ಬೆಂಗಳೂರುನಲ್ಲಿ ವರುಣನ ಆರ್ಭಟ
ಬೆಂಗಳೂರು: ಅಸನಿ ಚಂಡಮಾರುತದ ಪ್ರಭಾವದಿಂದಾಗಿ ಉದ್ಯಾನನಗರಿಯಲ್ಲಿ ಬೆಳ್ಳಂ ಬೆಳಿಗ್ಗೆ ಅಲ್ಲಲ್ಲಿ ಜೋರು ಮಳೆಯಾಗುತ್ತಿದೆ. ಕಳೆದ ಮೂರು ದಿನಗಳಿಂದ ಇದ್ದ ಮಂಜು ಮುಸುಕಿದ ವಾತಾವರಣ ಇಂದು ಕೂಡ ಮುಂದುವರೆದಿದೆ. ಮೆಜೆಸ್ಟಿಕ್, ರಾಜಾಜಿನಗರ, ಮಲ್ಲೇಶ್ಚರ ಸೇರಿದಂತೆ ಹಲವೆಡೆ ಜೋರು ಮಳೆಯಾಗಿದೆ. ಇನ್ನೂ 24 ಗಂಟೆ ಆಸನಿ ಚಂಡಮಾರುತದ ಪ್ರಭಾವ ಬೆಂಗಳೂರು ನಗರ ಹಾಗೂ ರಾಜ್ಯದ ಹಲವೆಡೆ ಇರಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಅಲ್ಲದೇ, ಕಳೆದ 22 ವರ್ಷಗಳಲ್ಲೇ ಮೇ ತಿಂಗಳಲ್ಲಿ ಅತ್ಯಂತ …
Read More »ಯಾವುದೇ ಕಾರ್ಯಕ್ರಮವಾಗಲಿ ರಾಷ್ಟ್ರೀಯ ನಾಯಕರ ಫೋಟೋಗಳನ್ನು ಹಾಕುತ್ತಾರೆ :ಕರಡಿ ಸಂಗಣ್ಣ
ಕೊಪ್ಪಳ: ಪ್ರಧಾನಿ ನರೇಂದ್ರ ಮೋದಿಯವರ ನಾಯಕತ್ವದ ಬಗ್ಗೆ ಮಾತನಾಡಿರುವ ಬಿಜೆಪಿ ಸಂಸದ ಕರಡಿ ಸಂಗಣ್ಣ ಅವರ ನಾಯಕತ್ವ ನಂಬಿಕೊಂಡರೆ ಚುನಾವಣೆ ಗೆದ್ದಂಗೆ ಎಂದು ವ್ಯಂಗ್ಯವಾಡಿದ್ದಾರೆ. ಬಿಜೆಪಿ ಜಿಲ್ಲಾ ಕಾರ್ಯಕಾರಿಣಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಯಾವುದೇ ಕಾರ್ಯಕ್ರಮವಾಗಲಿ ರಾಷ್ಟ್ರೀಯ ನಾಯಕರ ಫೋಟೋಗಳನ್ನು ಹಾಕುತ್ತಾರೆ. ಎಲ್ಲಿಯೇ ನಡೆದರೂ ಅವರ ಫೋಟೋಗಳಿರುತ್ತವೆ. ಇದನ್ನು ಯಾರು ಹೇಳಿದ್ದಾರೋ ಏನೋ ಗೊತ್ತಿಲ್ಲ. ಹಾಕಿಕೊಳ್ಳಲಿ ಅದರಲ್ಲಿ ತಪ್ಪೇನು ಇಲ್ಲ. ಆದರೆ ಅದಕ್ಕೆಂದು ಒಂದು ನೀತಿ, ನಿಯಮ ಇರುತ್ತೆ ಅಲ್ಲವಾ. …
Read More »ಹರ್ಷ ಹತ್ಯೆ ಪ್ರಕರಣ : ನ್ಯಾಯಾಂಗ ಬಂಧನದ 190 ದಿನಕ್ಕೆ ವಿಸ್ತರಣೆ
ಬೆಂಗಳೂರು : ಶಿವಮೊಗ್ಗದ ಬಜರಂಗದಳ ಕಾರ್ಯಕರ್ತ ಹರ್ಷ ಹತ್ಯೆ ಪ್ರಕರಣ ಸಂಬಂಧ ಬಂಧಿಸಲಾಗಿರುವ ಹತ್ತು ಆರೋಪಿಗಳ ನ್ಯಾಯಾಂಗ ಬಂಧನದ ಅವಧಿಯನ್ನು 190 ದಿನಕ್ಕೆ ವಿಸ್ತರಣೆ ಮಾಡಲಾಗಿದೆ. ಆರೋಪಿಗಳನ್ನು ಇನ್ನೂ ಹೆಚ್ಚಿನ ತನಿಖೆಗೆ ಒಳಪಡಿಸುವ ಅಗತ್ಯವಿರುವುದರಿಂದ ಅವರ ನ್ಯಾಯಾಂಗ ಬಂಧನ ಅವಧಿಯನ್ನು 90 ದಿನಗಳಿಂದ 190 ದಿನಗಳಿಗೆ ಹೆಚ್ಚಿಸಬೇಕೆಂದು ರಾಷ್ಟ್ರೀಯ ತನಿಖಾ ದಳದ (ಎನ್ಐಎ) ಮಾಡಿದ ಮನವಿಯನ್ನು ವಿಶೇಷ ಕೋರ್ಟ್ ಪುರಸ್ಕರಿಸಿದೆ.
Read More »ಪದವಿ ಪಾಸಾದ ವಿದ್ಯಾರ್ಥಿಗಳಿಗೆ ಗುಡ್ನ್ಯೂಸ್
ಬೆಂಗಳೂರು: ಡಿಗ್ರಿ ಪಾಸಾದವರಿಗೆ ಗುಡ್ನ್ಯೂಸ್ ಸಿಕ್ಕಿದ್ದು, ಕರ್ನಾಟಕ ಬ್ಯಾಂಕ್ ಕ್ಲರ್ಕ್ ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ ಮಾಡಲಾಗಿದೆ. ದೇಶಾದ್ಯಂತ ತನ್ನ ಶಾಖೆಗಳು / ಕಚೇರಿಗಳಿಗಾಗಿ ಭರ್ತಿ ಪ್ರಕ್ರಿಯೆ ನಡೆಯುತ್ತಿದೆ. ಆಸಕ್ತರು ಅಧಿಕೃತ ವೆಬ್ಸೈಟ್ karnatakabank.com ನಲ್ಲಿ ಅರ್ಜಿ ಸಲ್ಲಿಸಬಹುದು.
Read More »ರಾಜ್ಯದ ಸಚಿವ ಸಂಪುಟದ ಕುರಿತು ಮಹತ್ವದ ತಿರುವು ನೀಡಿದ ಸಿಎಂ
ನವದೆಹಲಿ:ರಾಜ್ಯದ ಸಚಿವ ಸಂಪುಟದ ಕುರಿತು ಕೇಂದ್ರ ಗೃಹ ಸಚಿವ ಅಮಿತ ಶಾ ಅವರ ಜತೆ ಸಮಾಲೋಚನೆ ನಡೆಸಲಾಗಿದೆ. ಸಂಪುಟ ವಿಸ್ತರಣೆ ವಿಚಾರಕ್ಕೆ ಸಂಬಂಧಿಸಿದಂತೆ ಯಾವಾಗ ಎನೂ ಬೇಕಾದರೂ ಆಗಬಹುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ನವದೆಹಲಿಯಲ್ಲಿ ಅಮಿತ ಶಾ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ ಬೊಮ್ಮಾಐಇ, ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರನ್ನು ಭೇಟಿಯಾಗಿ ರಾಜಕೀಯ ಸ್ಥಿತಿಗತಿಗಳು, ಸಚಿವ ಸಂಪುಟದ …
Read More »ನೀರಿನ ಸಮಸ್ಯೆ ಪರಿಹರಿಸಿದಿದ್ದರೆ ಮುಂದಿನ ದಿನದಲ್ಲಿ ನೀರಿನ ಹಾಹಾಕಾರ ಎದುರಿಸಬೇಕಾಗುತ್ತದೆ : ಮಾಜಿ ಪ್ರಧಾನಿ
ಬೆಂಗಳೂರು: ಸ್ವಾತಂತ್ರ್ಯ ಪಡೆದು ಇಷ್ಟು ವರ್ಷಗಳಾದರೂ ನದಿ ನೀರು ಹಂಚಿಕೆ ವಿಚಾರದಲ್ಲಿ ಕೇಂದ್ರದ ನಿರ್ಲಕ್ಷ್ಯ ಧೋರಣೆಯಿಂದಾಗಿ ರಾಜ್ಯಕ್ಕೆ ಅನ್ಯಾಯವಾಗುತ್ತಿದ್ದು, ಸಮಸ್ಯೆ ಪರಿಹರಿಸಿ ಕೊಳ್ಳದಿದ್ದರೆ ಮುಂದಿನ ದಿನದಲ್ಲಿ ನೀರಿನ ಹಾಹಾಕಾರ ಎದುರಿಸಬೇಕಾಗುತ್ತದೆ ಎಂದು ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಕಳವಳ ವ್ಯಕ್ತಪಡಿಸಿದ್ದಾರೆ. ಬಸವನಗುಡಿ ವಿಧಾನಸಭಾ ಕ್ಷೇತ್ರದಲ್ಲಿ ಆಯೋಜಿಸಿದ ಜನತಾ ಜಲಧಾರೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕೇಂದ್ರದ ನಿರ್ಲಕ್ಷ್ಯ ಧೋರಣೆಯಿಂದಾಗಿ ನಮ್ಮ ನೀರು ನಾವು ಪಡೆಯಲು ಆಗಲಿಲ್ಲ. ಭವಿಷ್ಯದಲ್ಲಿ ನೀರು ಪೂರೈಕೆ ಬಹಳ ಕಷ್ಟವಾಗಲಿದೆ. …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





