Breaking News

BigTv News

ರಾಜ್ಯದಲ್ಲೊಂದು ಬೆಚ್ಚಿ ಬೀಳಿಸೋ ಘಟನೆ: ಕಾರಿನಲ್ಲಿ ನಾಡಬಾಂಬ್ ಸ್ಫೋಟಿಸಿಕೊಂಡು ಯುವಕ ಆತ್ಮಹತ್ಯೆ

ತುಮಕೂರು: ಜಿಲ್ಲೆಯ ಶಿರಾ ತಾಲ್ಲೂಕಿನ ಕಳ್ಳಂಬೆಳ್ಳ ಬಳಿ ರಾಷ್ಟ್ರೀಯ ಹೆದ್ದಾರಿ-48ರಲ್ಲಿ ಚಲಿಸುತ್ತಿದ್ದ ಕಾರಿನೊಳಗೆ ನಾಡಬಾಂಬ್ ಸ್ಫೋಟಗೊಂಡು ನಾಗೇಂದ್ರ ಎಂಬ ಯುವಕ ಮೃತಪಟ್ಟಿದ್ದಾನೆ. ಪ್ರಾಥಮಿಕ ಮಾಹಿತಿ ಪ್ರಕಾರ, ಆತ ಬೆಂಗಳೂರಿನಿಂದ ಯುವತಿಯನ್ನು ಬಲವಂತವಾಗಿ ಕರೆತಂದಿದ್ದ ವೇಳೆ ಇಬ್ಬರ ನಡುವೆ ಜಗಳ ನಡೆದಿದೆ. ಜಗಳದ ವೇಳೆ ನಾಗೇಂದ್ರ ಯುವತಿಗೆ ಚಾಕುವಿನಿಂದ ಇರಿದಿದ್ದು, ಪ್ರಾಣಭಯದಿಂದ ಆಕೆ ಕಾರಿನಿಂದ ಜಿಗಿದು ತಪ್ಪಿಸಿಕೊಂಡಿದ್ದಾಳೆ. ಬಳಿಕ ಚಾಲಕ ಕೆಳಗಿಳಿದ ತಕ್ಷಣ ಕಾರಿನ ಡೋರ್‌ಗಳನ್ನು ಲಾಕ್ ಮಾಡಿಕೊಂಡ ನಾಗೇಂದ್ರ, ಕಾರಿನೊಳಗೇ …

Read More »

ಹಾಸನ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಇ-ಮೇಲ್

ಹಾಸನ: ನಗರದ ಚನ್ನಪಟ್ಟಣ ಬಡಾವಣೆಯ ನೂತನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಇ-ಮೇಲ್ ಬಂದ ಹಿನ್ನೆಲೆಯಲ್ಲಿ ಶನಿವಾರ ಆತಂಕದ ವಾತಾವರಣ ನಿರ್ಮಾಣವಾಗಿದೆ. ಬೆದರಿಕೆ ಇ-ಮೇಲ್ ಆಧರಿಸಿ ಬಾಂಬ್ ನಿಷ್ಕ್ರಿಯ ದಳದಿಂದ ನ್ಯಾಯಾಲಯ ಆವರಣದಲ್ಲಿ ಪರಿಶೀಲನೆ ನಡೆಸಲಾಗಿದೆ. ಇ-ಮೇಲ್‌ನಲ್ಲಿ ನ್ಯಾಯಾಲಯದ ದಾಖಲೆ ಕೊಠಡಿಗಳು ಹಾಗೂ ಇ-ಸೇವೆ ಕೇಂದ್ರಗಳಲ್ಲಿ ಬಾಂಬ್ ಇರಿಸಲಾಗಿದೆ ಎಂದು ಉಲ್ಲೇಖಿಸಿ, ಮಧ್ಯಾಹ್ನ ಸ್ಫೋಟಗೊಳ್ಳಲಿದೆ ಎಂದು ಬೆದರಿಕೆ ಹಾಕಲಾಗಿತ್ತು. ನ್ಯಾಯಾಧೀಶರನ್ನು ಸ್ಥಳಾಂತರಿಸುವಂತೆಯೂ ಸೂಚನೆ ನೀಡಲಾಗಿತ್ತು. ಈ ಸಂಬಂಧ …

Read More »

ಕಲಬುರಗಿ, ರಾಯಚೂರಿನಲ್ಲಿ ಕೃತಕ ಶೇಂದಿ ದಂಧೆ: 1,500 ಕೆಜಿ ಮರಣಾಂತಿಕ ಕೆಮಿಕಲ್ ಸೀಜ್ ಮಾಡಿದ ಅಬಕಾರಿ ಇಲಾಖೆ

ಹುಬ್ಬಳ್ಳಿ: ಕಲ್ಯಾಣ ಕರ್ನಾಟಕ ಸೇರಿ ರಾಜ್ಯದಲ್ಲಿ ವಿಷಕಾರಿ ನಕಲಿ ಕಳ್ಳಿನ ದಂಧೆ ವಿರುದ್ಧ ಅಬಕಾರಿ ಇಲಾಖೆ ಭಾರಿ ಕಾರ್ಯಾಚರಣೆ ನಡೆಸಿದ್ದು, ಕಳೆದ ಮೂರು ವರ್ಷಗಳಲ್ಲಿ 1,500 ಕೆಜಿ ಕ್ಲೋರಲ್ ಹೈಡ್ರೇಟ್ ರಾಸಾಯನಿಕ ಪುಡಿ ವಶಪಡಿಸಿಕೊಂಡಿದೆ. ಈ ಪ್ರಕರಣಗಳಿಗೆ ಸಂಬಂಧಿಸಿದಂತೆ 771 ಮಂದಿಯನ್ನು ಬಂಧಿಸಲಾಗಿದೆ. ರಾಯಚೂರು ಜಿಲ್ಲೆಯಲ್ಲೇ 1,033 ಕೆಜಿ ಕ್ಲೋರಲ್ ಹೈಡ್ರೇಟ್ ಹಾಗೂ 16,905 ಲೀಟರ್ ಕೃತಕ ಕಳ್ಳು ಜಪ್ತಿ ಮಾಡಲಾಗಿದೆ. ಕಡಿಮೆ ಬೆಲೆ ಮತ್ತು ಹೆಚ್ಚು ಅಮಲಿನ ಕಾರಣ …

Read More »

ಬೆಂಗಳೂರು: ಶೆಡ್‌ ಒಂದರಲ್ಲಿ ಇಟ್ಟಿದ್ದ ಬರೋಬ್ಬರಿ 3 ಕೋಟಿ ನಗದು ಹಣ ಪತ್ತೆ! ಹಣದ ಮೂಟೆ ನೋಡಿ ಪೊಲೀಸರೇ ಶಾಕ್

ಬೆಂಗಳೂರು: ನಗರದ ಕುರುಬರಹಳ್ಳಿಯ ಶೆಡ್‌ ಒಂದರ ಮೇಲೆ ದಾಳಿ ನಡೆಸಿದ ಮಹಾಲಕ್ಷ್ಮೀ ಲೇಔಟ್ ಪೊಲೀಸರು ದಾಖಲೆಗಳಿಲ್ಲದ ₹2.98 ಕೋಟಿ ನಗದು ವಶಪಡಿಸಿಕೊಂಡಿದ್ದಾರೆ. ನಾಲ್ಕು ಬ್ಯಾಗ್‌ಗಳಲ್ಲಿ ಕಂತೆ ಕಂತೆ ನೋಟುಗಳನ್ನು ಅಡಗಿಸಿಡಲಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ನಾಗರಾಜ್ ಹಾಗೂ ವೆಂಕಟೇಶ್ ಎಂಬುವವರನ್ನು ಬಂಧಿಸಲಾಗಿದೆ. ಜೂನ್‌ 2ರಂದು ಖಚಿತ ಮಾಹಿತಿಯ ಮೇರೆಗೆ ‘ಶೇಷಾದ್ರಿ ಇಂಡಸ್ಟ್ರೀಸ್’ ಶೆಡ್‌ಗೆ ದಾಳಿ ನಡೆಸಿದ ವೇಳೆ ಭಾರಿ ಪ್ರಮಾಣದ ನಗದು ಪತ್ತೆಯಾಯಿತು. ಹಿರಿಯ ಅಧಿಕಾರಿಗಳ ಸಮ್ಮುಖದಲ್ಲಿ ರಾತ್ರಿ ಪೂರ್ತಿ ನೋಟು …

Read More »

ಮಂತ್ರಾಲಯಕ್ಕೆ ತೆರಳುತ್ತಿದ್ದವರ ಕಾರು ಭೀಕರ ಅಪಘಾತ; ನಾಲ್ವರು ದುರ್ಮರಣ

ಕೊಪ್ಪಳ: ಮಂತ್ರಾಲಯಕ್ಕೆ ತೀರ್ಥಯಾತ್ರೆಗೆ ತೆರಳುತ್ತಿದ್ದ ಕುಟುಂಬದ ಪ್ರಯಾಣ ದುರಂತದಲ್ಲಿ ಅಂತ್ಯಗೊಂಡಿದ್ದು, ಕುಕನೂರು ತಾಲೂಕಿನ ಭಾನಾಪೂರ ಸಮೀಪ ರಾಷ್ಟ್ರೀಯ ಹೆದ್ದಾರಿ-63ರಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ನಾಲ್ಕು ಮಕ್ಕಳು ಸೇರಿದಂತೆ ಆರು ಮಂದಿ ಗಾಯಗೊಂಡಿದ್ದು, ಇಬ್ಬರ ಸ್ಥಿತಿ ಗಂಭೀರವಾಗಿದೆ. ಎದುರು ದಿಕ್ಕಿನಿಂದ ಬಂದ ಭಾರೀ ವಾಹನ ಡಿವೈಡರ್ ದಾಟಿ ಓಮ್ನಿ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ವಾಹನ ಸಂಪೂರ್ಣ ನಜ್ಜುಗುಜ್ಜಾಗಿದೆ. ಕೆಂಚಮ್ಮ ಬಾಳೆಕಾಯಿ (35), ಅಮೃತಾ ಕೋಟ್ಯಾಳ್ …

Read More »

ಹೋಟೆಲ್ ನಲ್ಲಿ ಪುಂಡರ ಅಟ್ಟಹಾಸ – ದೂರು ನೀಡಿದ ಮಾಲಿಕನ ಮೇಲೆ ಪೊಲೀಸ್ ದಬ್ಬಾಳಿಕೆ!

ಬೆಂಗಳೂರು: ಕೆಂಗೇರಿಯ ರಾಜರತ್ನ ಹೋಟೆಲ್‌ನಲ್ಲಿ ತಡರಾತ್ರಿ ಹೋಟೆಲ್ ಬಂದ್ ಆದ ಬಳಿಕ ನುಗ್ಗಿದ ಕಿಡಿಗೇಡಿಗಳು ಊಟ ಕೇಳಿದ್ದು, ನಿರಾಕರಿಸಿದ ಹಿನ್ನೆಲೆ ಸಿಬ್ಬಂದಿಗೆ ಬೆದರಿಕೆ ಹಾಕಿ ದಾಂಧಲೆ ನಡೆಸಿದ್ದಾರೆ. ಹೋಟೆಲ್ ಮಾಲೀಕ ಮಧುಕಿರಣ್ 112ಕ್ಕೆ ಕರೆ ಮಾಡಿದ ಬಳಿಕ ಹೊಯ್ಸಳ ಪೊಲೀಸರು ಸ್ಥಳಕ್ಕೆ ಬಂದು ಕೆಲವರನ್ನು ವಶಕ್ಕೆ ಪಡೆದಿದ್ದರು. ಆದರೆ, ದೂರು ನೀಡುವ ಸಂಬಂಧ ಕೆಂಗೇರಿ ಇನ್ಸ್‌ಪೆಕ್ಟರ್‌ಗೆ ಕರೆ ಮಾಡಿದಾಗ ಅವಾಚ್ಯವಾಗಿ ಮಾತನಾಡಿರುವ ಆಡಿಯೋ ವೈರಲ್ ಆಗಿದೆ. ಸ್ಥಳೀಯ ಪೊಲೀಸರು ಸರಿಯಾಗಿ …

Read More »

ರಕ್ತ ಹೆಪ್ಪುಗಟ್ಟುವಂತೆ ವಿದ್ಯಾರ್ಥಿ ಮೇಲೆ ಶಿಕ್ಷಕನಿಂದ ಹಲ್ಲೆ: ಆಸ್ಪತ್ರೆಗೆ ದಾಖಲು

ಶಿವಮೊಗ್ಗ: ವಿದ್ಯಾರ್ಥಿ ಮೇಲೆ ಶಿಕ್ಷಕ ಹಲ್ಲೆ ನಡೆಸಿದ ಘಟನೆ ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲೂಕಿನ ಆನವೇರಿ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ನಡೆದಿದೆ.9ನೇ ತರಗತಿ ವಿದ್ಯಾರ್ಥಿ ಸುಮಂತ್ ಮೇಲೆ ಶಿಕ್ಷಕ ಹಲ್ಲೆ ಮಾಡಿದ್ದಾನೆ. ಪೇಪರ್ ಅನ್ನು ಕಸದ ಬುಟ್ಟಿಗೆ ಎಸೆಯುವಾಗ ವಿದ್ಯಾರ್ಥಿನಿಗೆ ತಾಗಿತ್ತು.ಹುಡುಗರು ತೊಂದರೆ ಕೊಡುತ್ತಿದ್ದಾರೆ ಎಂದು ವಿದ್ಯಾರ್ಥಿನಿ ಕಂಪ್ಯೂಟರ್ ಶಿಕ್ಷಕನ ಬಳಿ ದೂರು ನೀಡಿದ್ದರು. ವಿದ್ಯಾರ್ಥಿ ಸುಮಂತನಿಗೆ ಶಿಕ್ಷಕ ಥಳಿಸಿದ್ದಾನೆ. ಸುಮಂತ್ ತೀವ್ರವಾಗಿ ಗಾಯಗೊಂಡು ರಕ್ತ ಹೆಪ್ಪುಗಟ್ಟಿ ಜ್ವರ …

Read More »

ಕೊಪ್ಪಳದಲ್ಲಿ ಭೀಕರ ರಸ್ತೆ ದುರಂತ..! 3 ಸಾವು, 6 ಮಂದಿಗೆ ಗಂಭೀರ ಗಾಯ

ಕೊಪ್ಪಳ: ಜಿಲ್ಲೆಯ ಕುಕನೂರು ತಾಲೂಕಿನ ಭಾನಾಪೂರ ಸಮೀಪದ ರಾಷ್ಟ್ರೀಯ ಹೆದ್ದಾರಿ-63ರಲ್ಲಿ ಇಂದು ಮುಂಜಾನೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದು, ಆರು ಮಂದಿ ಗಾಯಗೊಂಡಿದ್ದಾರೆ. ಗಾಯಾಳುಗಳಲ್ಲಿ ಇಬ್ಬರ ಸ್ಥಿತಿ ಗಂಭೀರವಾಗಿದೆ. ಹಾವೇರಿ ಜಿಲ್ಲೆಯ ರಟ್ಟಿಹಳ್ಳಿ ತಾಲೂಕಿನ ಕಬ್ಬಾರ್ ಗ್ರಾಮದ ನಿವಾಸಿಗಳು ಓಮಿನಿ ವಾಹನದಲ್ಲಿ ಮಂತ್ರಾಲಯಕ್ಕೆ ತೆರಳುತ್ತಿದ್ದ ವೇಳೆ, ನಿಯಂತ್ರಣ ತಪ್ಪಿದ ಅಶೋಕ್ ಲೇಲ್ಯಾಂಡ್ ವಾಹನ ಡಿವೈಡರ್ ದಾಟಿ ಎದುರಿನಿಂದ ಬರುತ್ತಿದ್ದ ಓಮಿನಿಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ …

Read More »

ಸುಟ್ಟ ಸ್ಥಿತಿಯಲ್ಲಿ ಯುವತಿಯ ಕಳೇಬರ ಪತ್ತೆ

ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ಬೈಪಾಸ್ ರಸ್ತೆಯ ಜವನಗಹಳ್ಳಿ ಗುಡ್ಡದ ಬಳಿ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಸುಟ್ಟಿರುವ ಸ್ಥಿತಿಯಲ್ಲಿ ಯುವತಿಯೊಬ್ಬಳ ಮೃತದೇಹ ಬುಧವಾರ ರಾತ್ರಿ ಪತ್ತೆಯಾಗಿದೆ. ಸರಕು ಸಾಗಣೆ ಲಾರಿ ಚಾಲಕ ರಸ್ತೆ ಬದಿಗೆ ತೆರಳಿದ್ದ ವೇಳೆ ಮೊಬೈಲ್ ಟಾರ್ಚ್ ಬೆಳಕಿನಲ್ಲಿ ಮೃತದೇಹ ಕಂಡುಬಂದಿದ್ದು, ತಕ್ಷಣ 112ಕ್ಕೆ ಕರೆ ಮಾಡಿ ಪೊಲೀಸರಿಗೆ ಮಾಹಿತಿ ನೀಡಿದ್ದಾನೆ. ಮಾಹಿತಿ ಮೇರೆಗೆ ಬೆಳಕವಾಡಿ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಘಟನೆ …

Read More »

ಬೆಂಗಳೂರು: ನಕಲಿ ಚಿನ್ನ ನೀಡಿ ₹23 ಲಕ್ಷ ದೋಚಿದ್ದ ಆರೋಪಿ ಸೆರೆ

ಬೆಂಗಳೂರು: ಜಮೀನಿನಲ್ಲಿ ಕೊಳವೆಬಾವಿ ಕೊರೆಸುವ ವೇಳೆ 1.5 ಕೆ.ಜಿ. ಚಿನ್ನ ಸಿಕ್ಕಿದೆ ಎಂದು ನಂಬಿಸಿ ನಕಲಿ ಚಿನ್ನ ನೀಡಿ ₹23 ಲಕ್ಷ ವಂಚಿಸಿದ್ದ ಪ್ರಕರಣದಲ್ಲಿ ಬಳ್ಳಾರಿಯ ಹನುಮಂತಪ್ಪ (41)ನನ್ನು ತಿಲಕ್‌ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಆರೋಪಿಯಿಂದ ₹19.93 ಲಕ್ಷ ನಗದು ಜಪ್ತಿ ಮಾಡಲಾಗಿದೆ. ಕಾರು ಡೀಲರ್ ಶಿಶಿರ್‌ಗೆ ಆರೋಪಿ ಚಿನ್ನದ ಫೋಟೊಗಳನ್ನು ಕಳುಹಿಸಿ ನಂಬಿಕೆ ಮೂಡಿಸಿದ್ದ. ಬಳಿಕ 2 ಗ್ರಾಂ ಅಸಲಿ ಚಿನ್ನ ತೋರಿಸಿ ವಿಶ್ವಾಸ ಗಳಿಸಿದ ನಂತರ, 1.5 …

Read More »