ಬೆಳಗಾವಿ/ಧಾರವಾಡ: ಕಬ್ಬಿಗೆ ನ್ಯಾಯಯುತ ಬೆಲೆ ನಿಗದಿಪಡಿಸುವಂತೆ ಆಗ್ರಹಿಸಿ ರೈತರು ಕರೆ ನೀಡಿರುವ ಕರ್ನಾಟಕ ಬಂದ್ಗೆ ಉತ್ತರ ಕರ್ನಾಟಕದಾದ್ಯಂತ ವ್ಯಾಪಕ ಬೆಂಬಲ ವ್ಯಕ್ತವಾಗಿದೆ. ಬೆಳಗಾವಿಯ ಚಿಕ್ಕೋಡಿ ಹಾಗೂ ಅಥಣಿ ತಾಲೂಕುಗಳಲ್ಲಿ ಜನಜೀವನ ಅಸ್ತವ್ಯಸ್ತಗೊಂಡಿದೆ. ಚಿಕ್ಕೋಡಿ-ಮಹಾಲಿಂಗಪುರ ರಸ್ತೆಯಲ್ಲೇ ರೈತರು ಉಪಹಾರ ತಯಾರಿಸಿ ವಿನೂತನ ಪ್ರತಿಭಟನೆ ನಡೆಸಿದರು. ಹಲವೆಡೆ ರಸ್ತೆ ತಡೆ ನಡೆಸಿದ್ದರಿಂದ ಬಸ್ ಸಂಚಾರ ಸ್ಥಗಿತಗೊಂಡಿದ್ದು, ಅಂಗಡಿ ಮುಂಗಟ್ಟುಗಳು ಬಂದ್ ಆಗಿವೆ. ಹೋರಾಟ ತೀವ್ರಗೊಳ್ಳುವ ಹಿನ್ನೆಲೆಯಲ್ಲಿ ಧಾರವಾಡ ಜಿಲ್ಲೆಯಾದ್ಯಂತ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಕಬ್ಬು …
Read More »ಬೆಂಗಳೂರಲ್ಲಿ ಡೈನಾಮೈಟ್ ಎಂಬ ಸ್ಪೋಟಕ ವಸ್ತು ಪತ್ತೆ : ಸ್ಥಳಕ್ಕೆ ಪೊಲೀಸರು ದೌಡು!
ಬೆಂಗಳೂರು: ಜ್ಞಾನಭಾರತಿ ಪೊಲೀಸ್ ಠಾಣಾ ವ್ಯಾಪ್ತಿಯ ಸೋಣೆನಹಳ್ಳಿ ಸರ್ಕಲ್ ಬಳಿಯ ಖಾಲಿ ಜಾಗದಲ್ಲಿ ಅನುಮಾನಾಸ್ಪದ ಸ್ಫೋಟಕ ಮಾದರಿಯ ವಸ್ತು ಪತ್ತೆಯಾಗಿದ್ದು, ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸ್ಥಳೀಯರು ನೀಡಿದ ಮಾಹಿತಿಯ ಮೇರೆಗೆ ಸ್ಥಳಕ್ಕೆ ಧಾವಿಸಿದ ಪೊಲೀಸರು ಪರಿಶೀಲನೆ ನಡೆಸಿದ್ದು, ಪತ್ತೆಯಾದ ವಸ್ತು ಡೈನಾಮೈಟ್ ಮಾದರಿಯ ಸ್ಫೋಟಕವಾಗಿರಬಹುದು ಎಂದು ಶಂಕಿಸಿದ್ದಾರೆ. ಪೊಲೀಸರು ಸ್ಥಳವನ್ನು ಸುತ್ತುವರಿದು ಸುರಕ್ಷತಾ ಕ್ರಮ ಕೈಗೊಂಡಿದ್ದು, ಹೆಚ್ಚಿನ ಪರಿಶೀಲನೆಗಾಗಿ ಬಾಂಬ್ ಪತ್ತೆ ಮತ್ತು ನಿಷ್ಕ್ರಿಯ ದಳ ಹಾಗೂ ಶ್ವಾನ ದಳಕ್ಕೆ …
Read More »ಅಕ್ರಮ ಕೊಜೆ ಮಣ್ಣು ಸಾಗಾಟದ ಟಿಪ್ಪರ್ ಢಿಕ್ಕಿ, ವಿದ್ಯಾರ್ಥಿಗಳು ಗಂಭೀರ : ಅಜಿತ್ ಶೆಟ್ಟಿ ಯಾಳಹಕ್ಲು ಸೇರಿ 3 ಮಂದಿ ಅರೆಸ್ಟ್
ಉಡುಪಿ: ಕುಂದಾಪುರ ತಾಲೂಕಿನ ಬಳ್ಕೂರಿನಲ್ಲಿ ಅಕ್ಟೋಬರ್ 30ರಂದು ಎರಡು ಟಿಪ್ಪರ್ಗಳ ನಡುವೆ ಸಂಭವಿಸಿದ ಅಪಘಾತದಲ್ಲಿ ಸ್ಕೂಟರ್ನಲ್ಲಿ ಕಾಲೇಜಿಗೆ ತೆರಳುತ್ತಿದ್ದ ಇಬ್ಬರು ವಿದ್ಯಾರ್ಥಿಗಳು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳಾದ ಮೊಹಮ್ಮದ್ ಶಯಾನ್ ಮತ್ತು ಮೊಹಮ್ಮದ್ ರಯಾನ್ ಅವರನ್ನು ಮಣಿಪಾಲದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಅತಿವೇಗದ ಟಿಪ್ಪರ್ ಮತ್ತೊಂದು ಟಿಪ್ಪರ್ಗೆ ಡಿಕ್ಕಿ ಹೊಡೆದು ಬಳಿಕ ಸ್ಕೂಟರ್ಗೆ ಗುದ್ದಿದೆ ಎನ್ನಲಾಗಿದೆ. ಪರವಾನಗಿ ಇಲ್ಲದೆ ಕೋಜೆ ಮಣ್ಣು ಸಾಗಿಸುತ್ತಿದ್ದ ಆರೋಪದಡಿ ಟಿಪ್ಪರ್ ಚಾಲಕರಾದ ನಾಗರಾಜ, ರತ್ವೀಜ್ ಹಾಗೂ …
Read More »ಅತ್ಯಾಚಾರ ಎಸಗಿದವರ ಕಿಡ್ನ್ಯಾಪ್: ಸಂತ್ರಸ್ತೆ ಸೇರಿ 11 ಸೆರೆ
ಬೆಂಗಳೂರು: ಮಾರತ್ತಹಳ್ಳಿಯಲ್ಲಿ ಸ್ನೇಹಿತನ ಪ್ರೇಯಸಿ ಮೇಲೆ ಅತ್ಯಾಚಾರ ಎಸಗಿದ ಆರೋಪದ ಹಿನ್ನೆಲೆಯಲ್ಲಿ ಟೆಕಿ ಮಹೇಂದ್ರ ಹಾಗೂ ಆತನ ಸ್ನೇಹಿತ ತರುಣ್ನನ್ನು ಅಪಹರಿಸಿ ಹಲ್ಲೆ ನಡೆಸಿದ ಪ್ರಕರಣದಲ್ಲಿ ಸಂತ್ರಸ್ತೆ ಸೇರಿದಂತೆ 11 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ಅಕ್ಟೋಬರ್ 28ರಂದು ಐದು ಬೈಕ್ಗಳಲ್ಲಿ ಬಂದ ಆರೋಪಿಗಳು ಇಬ್ಬರನ್ನು ಅಪಹರಿಸಿದ್ದರು. ಮಹೇಂದ್ರನ ತಂದೆ ನೀಡಿದ ದೂರಿನ ಮೇರೆಗೆ ಕಾರ್ಯಾಚರಣೆ ನಡೆಸಿದ ಪೊಲೀಸರು ಆರು ಗಂಟೆಯಲ್ಲೇ ಆರೋಪಿಗಳನ್ನು ಬಂಧಿಸಿದ್ದಾರೆ. ವಿಚಾರಣೆ ವೇಳೆ ಅತ್ಯಾಚಾರ ಪ್ರಕರಣ ಬೆಳಕಿಗೆ …
Read More »ಮನೆ ಮುಂದೆ ನಿಲ್ಲಿಸಿದ ಕಾರ್ ಕದ್ದೊಯ್ದ ಕಳ್ಳರು-
ದಾವಣಗೆರೆ: ನಗರದ ಭೂಮಿಕಾ ನಗರದಲ್ಲಿ ಮನೆ ಮುಂದೆ ನಿಲ್ಲಿಸಿದ್ದ ಇನೋವಾ ಕಾರನ್ನು ನವೆಂಬರ್ 12ರಂದು ಬೆಳಿಗ್ಗೆ 5 ಗಂಟೆ ಸುಮಾರಿಗೆ ಕಳ್ಳರು ಕದ್ದೊಯ್ದಿದ್ದಾರೆ. ಎಸ್ಎಸ್ ಆಸ್ಪತ್ರೆ ರಸ್ತೆಯ ಆಯುರ್ವೇದ ವೈದ್ಯ ಡಾ. ಜಗದೀಶ್ ಅವರ ಮನೆ ಮುಂದೆ ಘಟನೆ ನಡೆದಿದ್ದು, ಕಳ್ಳತನದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಕಳೆದ ಎರಡು ತಿಂಗಳಲ್ಲಿ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಐದು ಕಾರುಗಳು ಕಳ್ಳತನವಾಗಿದ್ದು, ಈ ಸಂಬಂಧ ಕೆಟಿಜೆ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Read More »ಬೆಂಗಳೂರಲ್ಲಿ ನಕಲಿ ಡೇಟಿಂಗ್ ಬಲೆ, 20 ಲಕ್ಷ ರೂ. ಮೌಲ್ಯದ ಚಿನ್ನ ಲೂಟಿ
ಬೆಂಗಳೂರು: ಚಂದ್ರಾ ಲೇಔಟ್ನಲ್ಲಿ ಡೇಟಿಂಗ್ ಆಯಪ್ ಮೂಲಕ ಪರಿಚಯವಾದ ವ್ಯಕ್ತಿಯನ್ನು ಮನೆಗೆ ಕರೆಸಿಕೊಂಡ ಯುವಕನಿಗೆ ಚಾಕು ತೋರಿಸಿ ಬೆದರಿಸಿ, 226 ಗ್ರಾಂ ಚಿನ್ನಾಭರಣ ದೋಚಲಾಗಿದೆ. ಮನೆ ಮಾಲೀಕರು ಊರಿಗೆ ತೆರಳಿದ್ದ ವೇಳೆ ಸ್ನೇಹಿತನನ್ನು ಭೇಟಿಯಾಗಲು ಬಂದ ಇಬ್ಬರು ಟ್ರಾನ್ಸ್ಜೆಂಡರ್ಗಳು ಸುಮಾರು ₹20 ಲಕ್ಷ ಮೌಲ್ಯದ ಚಿನ್ನಾಭರಣ ದೋಚಿ ಪರಾರಿಯಾಗಿದ್ದಾರೆ ಎನ್ನಲಾಗಿದೆ. ಮನೆ ಮಾಲೀಕರ ದೂರಿನ ಮೇರೆಗೆ ಪೊಲೀಸರು ನಜಿಯಾ ಮತ್ತು ಸೈಯದ್ ಮೋಹ್ಸಿನ್ ಎಂಬ ಇಬ್ಬರು ಆರೋಪಿಗಳನ್ನು ಬಂಧಿಸಿ ತನಿಖೆ …
Read More »ಹಾಸನಾಂಬ ದೇವಾಲಯದಲ್ಲಿ ಅಕ್ರಮ ಪ್ರವೇಶಕ್ಕೆ ಸಾಥ್: ಕರ್ತವ್ಯ ಲೋಪವೆಸಗಿದ SDA ಅಮಾನತು
ಹಾಸನ: ತನ್ನ ಗುರುತಿನ ಚೀಟಿಯನ್ನು ಅನ್ಯ ವ್ಯಕ್ತಿಗಳಿಗೆ ನೀಡಿ ಹಾಸನಾಂಬ ದೇವಸ್ಥಾನಕ್ಕೆ ಅನಧಿಕೃತ ಪ್ರವೇಶ ಕಲ್ಪಿಸಿದ ಆರೋಪದ ಮೇಲೆ ತಾಲೂಕು ಕಚೇರಿಯ ದ್ವಿತೀಯ ದರ್ಜೆ ಸಹಾಯಕ ಉದಯ್ ನಾಗರಾಜ್ ಅವರನ್ನು ಜಿಲ್ಲಾಧಿಕಾರಿ ಕೆ.ಎಸ್. ಲತಾಕುಮಾರಿ ಅಮಾನತುಗೊಳಿಸಿ ಆದೇಶಿಸಿದ್ದಾರೆ. ಹಾಸನಾಂಬ ಹಾಗೂ ಸಿದ್ದೇಶ್ವರಸ್ವಾಮಿ ಜಾತ್ರಾ ಮಹೋತ್ಸವದ ವೇಳೆ ಕರ್ತವ್ಯ ಲೋಪ ಎಸಗಿದ ಆರೋಪದ ಹಿನ್ನೆಲೆಯಲ್ಲಿ ತಕ್ಷಣದಿಂದಲೇ ಅಮಾನತು ಆದೇಶ ಜಾರಿಗೊಳಿಸಲಾಗಿದೆ. ಇತ್ತ ಜಾತ್ರೆಗೆ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಎಸ್ಪಿ …
Read More »ವಿದ್ಯಾರ್ಥಿನಿಯರಿಗೆ ಅಸಭ್ಯ ಮೆಸೇಜ್, ಕಾಮುಕ ಉಪನ್ಯಾಸಕನಿಗೆ ಬಿತ್ತು ಧರ್ಮದೇಟು!
ಮಂಡ್ಯ: ನಾಗಮಂಗಲ–ಮಂಡ್ಯ ರಸ್ತೆಯಲ್ಲಿರುವ ಪದವಿ ಕಾಲೇಜಿನ ಉಪನ್ಯಾಸಕ ಗಂಗೂ, ವಿದ್ಯಾರ್ಥಿನಿಯರ ಮೊಬೈಲ್ ಸಂಖ್ಯೆ ಪಡೆದು ವಾಟ್ಸಾಪ್ನಲ್ಲಿ ‘ಐ ಲವ್ ಯು’, ‘ಐ ಲೈಕ್ ಯು’ ಎಂದು ನಿರಂತರ ಸಂದೇಶ ಕಳುಹಿಸಿ ಮಾನಸಿಕ ಕಿರುಕುಳ ನೀಡುತ್ತಿದ್ದ ಆರೋಪ ಕೇಳಿಬಂದಿದೆ. ಉಪನ್ಯಾಸಕನ ವರ್ತನೆಯಿಂದ ಆಕ್ರೋಶಗೊಂಡ ವಿದ್ಯಾರ್ಥಿನಿಯರು ಸ್ಟಾಫ್ ರೂಂಗೆ ನುಗ್ಗಿ ಆತನನ್ನು ತರಾಟೆಗೆ ತೆಗೆದುಕೊಂಡು ಥಳಿಸಿದ್ದಾರೆ. ಈ ವೇಳೆ ಉಪನ್ಯಾಸಕ ವಿದ್ಯಾರ್ಥಿನಿಯರ ಕಾಲಿಗೆ ಬಿದ್ದು ಕ್ಷಮೆಯಾಚಿಸಿದ್ದು, ಅವರಿಂದ ತಪ್ಪಿಸಿಕೊಳ್ಳಲು ಬೀರುಗಳ ಸಂದಿಯಲ್ಲಿ ಅಡಗಿಕೊಂಡಿದ್ದಾನೆ …
Read More »ಟಗರು ಕಾಳಗದ ವೇಳೆ ಜಗಳ: ಚಾಕು ಇರಿತ
ಹೊಳೆಹೊನ್ನೂರು: ಸಮೀಪದ ಆನವೇರಿಯಲ್ಲಿ ಬುಧವಾರ ಟಗರು ಕಾಳಗ ವೀಕ್ಷಿಸಲು ಬಂದಿದ್ದ ಯುವಕರ ನಡುವೆ ಕ್ಷುಲ್ಲಕ ಕಾರಣಕ್ಕೆ ಜಗಳ ನಡೆದು, ಸುನೀಲ್ (22) ಎಂಬ ಯುವಕನಿಗೆ ಚಾಕುವಿನಿಂದ ಇರಿದ ಘಟನೆ ನಡೆದಿದೆ. ಕಾರಿನಲ್ಲಿ ತೆರಳುತ್ತಿದ್ದ ವೇಳೆ ರಸ್ತೆಬದಿ ಕುಳಿತಿದ್ದ ಯುವಕರ ಮೇಲೆ ಮಣ್ಣು ಸಿಡಿದಿದ್ದರಿಂದ ಜಗಳ ಆರಂಭವಾಗಿದೆ. ಬಳಿಕ ಶಿವಮೊಗ್ಗದಿಂದ ಬಂದಿದ್ದ 8-10 ಜನರ ಗುಂಪು ಟೀ ಅಂಗಡಿ ಬಳಿ ಸುನೀಲ್ ಮೇಲೆ ಹಲ್ಲೆ ನಡೆಸಿ ಹೊಟ್ಟೆಗೆ ಚಾಕುವಿನಿಂದ ಇರಿದಿದೆ. ಜಗಳ …
Read More »ಜಮೀನು ದಾಖಲೆ ಸರಿಪಡಿಸುವ ನೆಪ: ಯುವತಿಯ ಮಾನಭಂಗಕ್ಕೆ ಯತ್ನ: ಕೇಸು
ಪುತ್ತೂರು: ಜಮೀನಿನ ದಾಖಲೆಗಳನ್ನು ಸರಿಪಡಿಸಿಕೊಡುವುದಾಗಿ ನಂಬಿಸಿ ಕಡಬದ ಯುವತಿಯೊಬ್ಬಳನ್ನು ಮನೆಗೆ ಕರೆದುಕೊಂಡು ಹೋಗಿ ಮಾನಭಂಗಕ್ಕೆ ಯತ್ನಿಸಿದ ಆರೋಪದಡಿ ನೆಲ್ಲಿಗುಂಡಿ ನಿವಾಸಿ ಜಯರಾಮ ವಿರುದ್ಧ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆ.23ರಂದು ಯುವತಿಯನ್ನು ಪುತ್ತೂರಿಗೆ ಕರೆಸಿಕೊಂಡ ಆರೋಪಿ, ಯಾರೂ ಇಲ್ಲದ ಮನೆಗೆ ಕರೆದೊಯ್ದು ಮಾನಭಂಗಕ್ಕೆ ಯತ್ನಿಸಿದ್ದಾನೆ ಎನ್ನಲಾಗಿದೆ. ಯುವತಿ ತಪ್ಪಿಸಿಕೊಂಡು ಬಂದಾಗ, ಘಟನೆ ಬಗ್ಗೆ ಯಾರಿಗಾದರೂ ತಿಳಿಸಿದರೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದಾನೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ. ಬಳಿಕವೂ ಆರೋಪಿ …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





