ಬೆಂಗಳೂರಿನಲ್ಲಿ ಸಾರ್ವಜನಿಕರನ್ನು ಬೆದರಿಸಿ ಹಣ ಹಾಗೂ ಮೊಬೈಲ್ ಸುಲಿಗೆ ಮಾಡುತ್ತಿದ್ದ ಇಬ್ಬರನ್ನು ಸಂಪಿಗೆಹಳ್ಳಿ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಮೊಹಮ್ಮದ್ ನಯಿಂ (20) ಮತ್ತು ಸೈಯದ್ ವಸೀಂ (26) ಎಂದು ಗುರುತಿಸಲಾಗಿದೆ. ಅಮೃತಹಳ್ಳಿಯ ಕೃಷ್ಣಸ್ವಾಮಿ (70) ಅವರಿಗೆ ಚಾಕು ತೋರಿಸಿ ನಗದು ಕಸಿದುಕೊಂಡು ಆರೋಪಿಗಳು ಪರಾರಿಯಾಗಿದ್ದರು. ದೂರಿನ ಮೇರೆಗೆ ತನಿಖೆ ನಡೆಸಿದ ಪೊಲೀಸರು ಸಿಸಿಟಿವಿ ದೃಶ್ಯಾವಳಿ ಆಧರಿಸಿ ಆರೋಪಿಗಳನ್ನು ಪತ್ತೆಹಚ್ಚಿದ್ದಾರೆ. ಡಿಜೆ ಹಳ್ಳಿ ಮಸೀದಿ ಬಳಿ ಗಸ್ತಿನ ವೇಳೆ ಇಬ್ಬರನ್ನು ವಶಕ್ಕೆ …
Read More »ಪೊಲೀಸ್ ಠಾಣೆಯಲ್ಲಿ ವೃದ್ಧ ಸಾ*ವು: ಎಎಸ್ಐ ವಿರುದ್ಧ ಕುಟುಂಬಸ್ಥರಿಂದ ಹಲ್ಲೆ ಆರೋಪ
ಯಾದಗಿರಿ ಜಿಲ್ಲೆಯ ಹುಣಸಗಿ ತಾಲೂಕಿನ ಕರಿಕಲ್ ಗ್ರಾಮದ 70 ವರ್ಷದ ರಾಜೇಸಾಬ್ ವಾಲಿಕಾರ್ ಅವರು ಪೊಲೀಸ್ ಕಸ್ಟಡಿಯಲ್ಲಿ ನಿಗೂಢವಾಗಿ ಮೃತಪಟ್ಟಿರುವ ಘಟನೆ ಬೆಳಕಿಗೆ ಬಂದಿದೆ. ಭೂಮಿ ವಿವಾದಕ್ಕೆ ಸಂಬಂಧಿಸಿದಂತೆ ವಿಚಾರಣೆಗೆಂದು ಅವರನ್ನು ನಾರಾಯಣಪುರ ಪೊಲೀಸ್ ಠಾಣೆಗೆ ಕರೆತರಲಾಗಿತ್ತು. ವಿಚಾರಣೆ ವೇಳೆ ಕರ್ತವ್ಯದಲ್ಲಿದ್ದ ಎಎಸ್ಐ ಸಂಗಪ್ಪ ಅವರು ರಾಜೇಸಾಬ್ ಅವರಿಗೆ ದೈಹಿಕ ಹಿಂಸೆ ನೀಡಿದ್ದಾರೆ ಎಂದು ಮೃತರ ಕುಟುಂಬಸ್ಥರು ಗಂಭೀರ ಆರೋಪ ಮಾಡಿದ್ದಾರೆ. ಪೊಲೀಸರ ಹಲ್ಲೆಯಿಂದಲೇ ಅವರು ಠಾಣೆಯಲ್ಲೇ ಪ್ರಜ್ಞೆ ತಪ್ಪಿ …
Read More »ಅಶ್ಲೀಲ ಚಿತ್ರಗಳನ್ನು ವೀಕ್ಷಿಸಿ 9 ತಿಂಗಳ ಮಗುವನ್ನು ಅತ್ಯಾಚಾರ ಮಾಡಿದ 12 ವರ್ಷದ ಬಾಲಕ!
ಉತ್ತರ ಪ್ರದೇಶದ ಗೋರಖ್ಪುರದಲ್ಲಿ ತಾಯಿಯ ಪಕ್ಕದಲ್ಲಿ ಮಲಗಿದ್ದ 9 ತಿಂಗಳ ಹೆಣ್ಣು ಮಗುವನ್ನು ಕರೆದೊಯ್ದು ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ 12 ವರ್ಷದ ಬಾಲಕನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮಗು ಕಾಣೆಯಾದ ಬಳಿಕ ಕುಟುಂಬಸ್ಥರು ಹುಡುಕಾಟ ನಡೆಸಿದ್ದು, ಮನೆ ಸಮೀಪದ ಹೊಲದಲ್ಲಿ ಗಂಭೀರ ಸ್ಥಿತಿಯಲ್ಲಿ ಪತ್ತೆಯಾಗಿದೆ. ತಕ್ಷಣ ಆಸ್ಪತ್ರೆಗೆ ದಾಖಲಿಸಲಾಗಿದ್ದು, ವೈದ್ಯಕೀಯ ಪರೀಕ್ಷೆಯಲ್ಲಿ ದೌರ್ಜನ್ಯ ನಡೆದಿರುವುದು ದೃಢಪಟ್ಟಿದೆ. ವಿಚಾರಣೆ ವೇಳೆ ಬಾಲಕ ತಪ್ಪೊಪ್ಪಿಕೊಂಡಿದ್ದು, ಪ್ರಕರಣದ ಕುರಿತು ಪೊಲೀಸರು ಮುಂದಿನ …
Read More »ಮಗು ಅಕ್ರಮ ಮಾರಾಟ ಪ್ರಕರಣ: ಉಡುಪಿಯಲ್ಲಿ ವೈದ್ಯ ಸಹಿತ ಇಬ್ಬರ ಬಂಧನ
ಉಡುಪಿ ಜಿಲ್ಲೆಯಲ್ಲಿ ಒಂದು ತಿಂಗಳ ಹೆಣ್ಣು ಮಗುವನ್ನು ಅಕ್ರಮವಾಗಿ ಮಾರಾಟ ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ಕಾಮತ್ ನರ್ಸಿಂಗ್ ಹೋಮ್ನ ವೈದ್ಯ ಡಾ. ಕೆ. ಸುರೇಂದ್ರ ಕಾಮತ್ ಹಾಗೂ ಎಸ್. ಪ್ರಕಾಶ್ ಎಂಬವರನ್ನು ಪೊಲೀಸರು ಬಂಧಿಸಿದ್ದಾರೆ. ಮಕ್ಕಳಿಲ್ಲದ ದಂಪತಿಗೆ ಆಸ್ಪತ್ರೆ ಮೂಲಕ ಹೆಣ್ಣು ಮಗುವನ್ನು ನೀಡಲಾಗಿದ್ದು, ಮಗುವಿನ ಜನನ ಪ್ರಮಾಣ ಪತ್ರ ಸೇರಿದಂತೆ ನಕಲಿ ದಾಖಲೆಗಳನ್ನು ಸೃಷ್ಟಿಸಲಾಗಿದೆ ಎಂಬ ಆರೋಪ ಕೇಳಿಬಂದಿದೆ. ಪ್ರಕರಣ ಸಂಬಂಧ ಉಡುಪಿ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ …
Read More »ಲಕ್ನೋದ ಕೋಚಿಂಗ್ ಸೆಂಟರ್ನಲ್ಲಿ ಭೀಕರ ಅಗ್ನಿ ದುರಂತ: 14 ವಿದ್ಯಾರ್ಥಿಗಳು ಸಜೀವ ದಹನ
ಉತ್ತರ ಪ್ರದೇಶದ ರಾಜಧಾನಿ ಲಕ್ನೋದ ಅಲಿಗಂಜ್ ಪ್ರದೇಶದಲ್ಲಿರುವ ಮೂರು ಮಹಡಿಯ ವಾಣಿಜ್ಯ ಕಟ್ಟಡದಲ್ಲಿ ಸಂಭವಿಸಿದ ಭೀಕರ ಅಗ್ನಿ ಅವಘಡದಲ್ಲಿ ಕನಿಷ್ಠ 14 ವಿದ್ಯಾರ್ಥಿಗಳು ಮೃತಪಟ್ಟಿದ್ದು, ಹಲವರು ಗಾಯಗೊಂಡಿದ್ದಾರೆ. ಕಟ್ಟಡದಲ್ಲಿ ಕೋಚಿಂಗ್ ಸೆಂಟರ್, ಲೈಬ್ರರಿ ಹಾಗೂ ಇತರೆ ಸಂಸ್ಥೆಗಳು ಕಾರ್ಯನಿರ್ವಹಿಸುತ್ತಿದ್ದವು. ದಿಢೀರ್ ಕಾಣಿಸಿಕೊಂಡ ಬೆಂಕಿಯಿಂದ ವಿದ್ಯಾರ್ಥಿಗಳು ಪ್ರಾಣ ಉಳಿಸಿಕೊಳ್ಳಲು ಕಟ್ಟಡದಿಂದ ಜಿಗಿದ ಪರಿಣಾಮ ಹಲವರಿಗೆ ಗಂಭೀರ ಗಾಯಗಳಾಗಿವೆ. ಅಗ್ನಿಶಾಮಕ ದಳ, ಎನ್ಡಿಆರ್ಎಫ್ ಹಾಗೂ ಎಸ್ಡಿಆರ್ಎಫ್ ತಂಡಗಳು ಜಂಟಿಯಾಗಿ ರಕ್ಷಣಾ ಕಾರ್ಯಾಚರಣೆ ನಡೆಸಿವೆ. …
Read More »ಹಣವಂತರಿಗೆ ಗಾಳ ಹಾಕ್ತಿದ್ದ ಕಿರುತೆರೆ ನಟಿ ಅರೆಸ್ಟ್; ಆಭರಣ ಬಿಡಿಸೋ ನೆಪದಲ್ಲಿ ಲಕ್ಷ ಲಕ್ಷ ವಂಚಿಸುತ್ತಿದ್ದ ‘ಕಿಲಾಡಿ’ ವನಿತಾ
ಬೆಂಗಳೂರು: ಕಿರುತೆರೆ ನಟಿ ಎಂದು ಪರಿಚಯಿಸಿಕೊಂಡು ಸಾಮಾಜಿಕ ಜಾಲತಾಣಗಳ ಮೂಲಕ ಹಣವಂತರನ್ನು ವಂಚಿಸುತ್ತಿದ್ದ ಆರೋಪದ ಮೇಲೆ ನಟಿ ವನಿತಾಳನ್ನು ಮಹಾಲಕ್ಷ್ಮಿ ಲೇಔಟ್ ಪೊಲೀಸರು ಬಂಧಿಸಿದ್ದಾರೆ. ಆರೋಪಿತೆ ಸ್ನೇಹ ಬೆಳೆಸಿ, ಚಿನ್ನದ ಆಭರಣಗಳನ್ನು ಬಿಡಿಸಿಕೊಳ್ಳಲು ಹಣ ಬೇಕೆಂದು ನಂಬಿಸಿ ಸಾಲ ಪಡೆದು ಬಳಿಕ ಸಂಪರ್ಕ ಕಡಿತಗೊಳಿಸುತ್ತಿದ್ದಳು ಎನ್ನಲಾಗಿದೆ. ಯುವಕನೊಬ್ಬರಿಂದ 1 ಲಕ್ಷ ರೂ. ಪಡೆದು ವಂಚಿಸಿರುವ ಪ್ರಕರಣ ಬೆಳಕಿಗೆ ಬಂದಿದ್ದು, ಈಕೆಯ ವಿರುದ್ಧ ನಗರದ ಇತರೆ ಠಾಣೆಗಳಲ್ಲಿಯೂ ದೂರುಗಳು ದಾಖಲಾಗಿವೆ. ಪೊಲೀಸರು …
Read More »ಪೊಲೀಸರ ಮೇಲೆ ಕೈಮಾಡಿದ್ದ ರೌಡಿ ಮಚ್ ಮಂಜ ಕೊನೆಗೂ ಅರೆಸ್ಟ್!
ಉತ್ತರ ಕನ್ನಡ ಜಿಲ್ಲೆಯ ಹಳಿಯಾಳದಲ್ಲಿ ಪೊಲೀಸರ ಮೇಲೆಯೇ ಹಲ್ಲೆ ನಡೆಸಿ ಪರಾರಿಯಾಗಿದ್ದ ಮಾಜಿ ರೌಡಿ ಶೀಟರ್ ಮಚ್ ಮಂಜನನ್ನು ಪೊಲೀಸರು ಬಂಧಿಸಿದ್ದಾರೆ. ಕಳೆದ ಒಂದು ವಾರದಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಮಹಾರಾಷ್ಟ್ರದ ಸಾಂಗ್ಲಿ ಜಿಲ್ಲೆಯ ತಾಸಗಾಂವದಲ್ಲಿ ವಿಶೇಷ ಪೊಲೀಸ್ ತಂಡ ಸೆರೆಹಿಡಿದಿದೆ. ಕಳೆದ ಭಾನುವಾರ ಹಳಿಯಾಳದ ಮೌರ್ಯ ಬಾರ್ ಆಂಡ್ ರೆಸ್ಟೋರೆಂಟ್ ಬಳಿ ಕುಡಿದ ಅಮಲಿನಲ್ಲಿದ್ದ ಮಚ್ ಮಂಜ, ಹೆಂಡತಿಯ ವಿಚ್ಛೇದನಕ್ಕೆ ಪೊಲೀಸರೇ ಕಾರಣ ಎಂದು ಆರೋಪಿಸಿ ಪೊಲೀಸ್ ಸಿಬ್ಬಂದಿಯ ಮೇಲೆ …
Read More »ಉಡುಪಿ ಜಿಲ್ಲಾ ನ್ಯಾಯಾಲಯಕ್ಕೆ ಇಮೇಲ್ ಮೂಲಕ ಬಾಂಬ್ ಬೆದರಿಕೆ
ಉಡುಪಿ ಜಿಲ್ಲಾ ನ್ಯಾಯಾಲಯಕ್ಕೆ ಇಮೇಲ್ ಮೂಲಕ ಬಾಂಬ್ ಬೆದರಿಕೆ ಸಂದೇಶ ಬಂದ ನಿಟ್ಟಿನಲ್ಲಿ ಪೊಲೀಸರು, ಶ್ವಾನ ದಳ ಹಾಗೂ ಬಾಂಬ್ ನಿಷ್ಕ್ರಿಯ ದಳದವರು ಸೋಮವಾರ ಪರಿಶೀಲನೆ ನಡೆಸಿದರು. ನ್ಯಾಯಾಲಯದ ಆವರಣ ಹಾಗೂ ಕಟ್ಟಡದ ವಿವಿಧ ಭಾಗಗಳಲ್ಲಿ ಪರಿಶೀಲನೆ ನಡೆದಿದೆ.ಸ್ಥಳದಲ್ಲಿ ಪೊಲೀಸ್ ಬಂದೋಬಸ್ತ್ ಹೆಚ್ಚಿಸಲಾಗಿದೆ. ಉಡುಪಿ ಡಿವೈಎಸ್ಪಿ ಬೆಳ್ಳಿಯಪ್ಪ, ನಗರ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಮಹೇಶ್ ಪ್ರಸಾದ್ ನೇತೃತ್ವದಲ್ಲಿ ಶೋಧ ಕಾರ್ಯ ನಡೆದಿದೆ.
Read More »ಡೆತ್ ನೋಟ್ ಬರೆದಿಟ್ಟು ಅಪ್ಪ, ಅಮ್ಮ, ಮಗಳು ಆತ್ಮಹತ್ಯೆ! ಮದುವೆ ನಿಶ್ಚಯವಾಗಿದ್ದ ಕುಟುಂಬದಲ್ಲಿ ಆಗಿದ್ದೇನು?
ಮೈಸೂರು ತಾಲೂಕಿನ ಕೆಂಪಯ್ಯನ ಹುಂಡಿ ಗ್ರಾಮದಲ್ಲಿ ಒಂದೇ ಕುಟುಂಬದ ಮೂವರು ಮೃತಪಟ್ಟಿರುವ ದುರ್ಘಟನೆ ನಡೆದಿದೆ. ಶಿವಣ್ಣ, ಅವರ ಪತ್ನಿ ನಾಗರತ್ನ ಹಾಗೂ ಮಗಳು ರಕ್ಷಿತಾ ಮನೆಯಲ್ಲೇ ವಿಷ ಸೇವಿಸಿ ಮೃತಪಟ್ಟಿದ್ದಾರೆ. ಘಟನೆ ಸ್ಥಳದಲ್ಲಿ ಡೆತ್ನೋಟ್ ಪತ್ತೆಯಾಗಿದ್ದು, ಸಾವಿಗೆ ಕಾರಣಗಳ ಬಗ್ಗೆ ಮಾಹಿತಿ ದೊರೆತಿದೆ. ಮೃತ ರಕ್ಷಿತಾಳ ಮದುವೆ ನಿಶ್ಚಯವಾಗಿದ್ದ ಸಂದರ್ಭದಲ್ಲಿ ಉಲ್ಲಾಸ್ ಗೌಡ ಎಂಬಾತ ಮೊಬೈಲ್ ಸಂದೇಶಗಳು ಹಾಗೂ ಫೋಟೋಗಳನ್ನು ಇಟ್ಟುಕೊಂಡು ಕಿರುಕುಳ ನೀಡುತ್ತಿದ್ದನೆಂದು ಆರೋಪಿಸಲಾಗಿದೆ. ಅಲ್ಲದೆ ಆ ಮಾಹಿತಿಯನ್ನು …
Read More »ಗದಗದಲ್ಲಿ ಬಡ್ಡಿ ಬಕಾಸುರರ ಅಟ್ಟಹಾಸ: 17 ಲಕ್ಷ ರೂ. ಸಾಲ ಕೊಟ್ಟು ರೈತನ 5 ಎಕರೆ ಜಮೀನು ನುಂಗಿದ ರೌಡಿಶೀಟರ್ ಗ್ಯಾಂಗ್
ಗದಗ ಜಿಲ್ಲೆಯ ಬೆಳಹೋಡ ಗ್ರಾಮದಲ್ಲಿ ಅಕ್ರಮ ಬಡ್ಡಿ ದಂಧೆಯ ಗಂಭೀರ ಪ್ರಕರಣ ಬೆಳಕಿಗೆ ಬಂದಿದೆ. ರೈತ ಮಹ್ಮದ್ ರಫೀಕ್ ಮತ್ತು ಅವರ ಸಹೋದರರು 17 ಲಕ್ಷ ರೂ. ಸಾಲ ಪಡೆದಿದ್ದು, ಅದೇ ನೆಪದಲ್ಲಿ ಕೋಟ್ಯಂತರ ಮೌಲ್ಯದ 5 ಎಕರೆ ಕೃಷಿ ಭೂಮಿಯನ್ನು ದಂಧೆಕೋರರು ವಂಚನೆಯ ಮೂಲಕ ತಮ್ಮದಾಗಿಸಿಕೊಂಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಆರೋಪಿಗಳು ಮುಂಗಡ ಬಡ್ಡಿ ಹೆಸರಿನಲ್ಲಿ 5 ಲಕ್ಷ ರೂ. ಕಡಿತಗೊಳಿಸಿ, ರೈತನ ಕೈಗೆ ಕೇವಲ 12 ಲಕ್ಷ …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





