Breaking News

BigTv News

ಜಾತಿನಿಂದನೆ ಕಿರುಕುಳ; 10 ಲಕ್ಷಕ್ಕೆ ಬೇಡಿಕೆ ಹಣ್ಣಿನ ವ್ಯಾಪಾರಿ ಆತ್ಮಹತ್ಯೆ

ಬೆಂಗಳೂರು-ವಿನಾಕಾರಣ ನನ್ನ ಮೇಲೆ ಜಾತಿನಿಂದನೆ ದೂರು ನೀಡಲಾಗಿದೆ. ಅಲ್ಲದೇ ಮಹಿಳೆಯೊಬ್ಬರು 10 ಲಕ್ಷಕ್ಕೆ ಬೇಡಿಕೆಯಿಟ್ಟು ಕಿರುಕುಳ ನೀಡುತ್ತಿದ್ದಾರೆಂದು ಆರೋಪಿಸಿ ಹಣ್ಣಿನ ವ್ಯಾಪಾರಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕಾಡುಗೋಡಿ ಪೊಲೀಸ್‌‍ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಚನ್ನಸಂದ್ರದ ಎಕೆಜಿ ಬಡಾವಣೆ ನಿವಾಸಿ ಪಾಪಣ್ಣ (40) ಆತಹತ್ಯೆ ಮಾಡಿಕೊಂಡಿರುವ ಹಣ್ಣಿನ ವ್ಯಾಪಾರಿ. 2021 ರಲ್ಲಿ ಇದೇ ಬಡಾವಣೆಯ ನಿವಾಸಿಯೊಬ್ಬರು ಪಾಪಣ್ಣ ಅವರ ಮೇಲೆ ಅಟ್ರಾಸಿಟಿ ಕೇಸ್‌‍ (ಜಾತಿನಿಂದನೆ ಪ್ರಕರಣ) ನೀಡಿದ್ದರು. ವಿನಾಕಾರಣ ಸುಳ್ಳು ದೂರು …

Read More »

ಪತ್ನಿಯೊಡನೆ ಅಕ್ರಮ ಸಂಬಂಧ – ಪ್ರಿಯಕರನ ಚಟ್ಟಕಟ್ಟಿದ ಪತಿರಾಯ

ಬೆಳಗಾವಿ ಜಿಲ್ಲೆಯ ಸಂಕೇಶ್ವರ ಪಟ್ಟಣದಲ್ಲಿ ಬಾಬು ಭೂಸಗೋಳ (35) ಎಂಬ ವ್ಯಕ್ತಿಯನ್ನು ಕಲ್ಲಿನಿಂದ ಜಜ್ಜಿ ಹಾಗೂ ಚಾಕುವಿನಿಂದ ಇರಿದು ಭೀಕರವಾಗಿ ಹತ್ಯೆ ಮಾಡಲಾಗಿದೆ. ಪತ್ನಿಯೊಂದಿಗೆ ಅನೈತಿಕ ಸಂಬಂಧ ಹೊಂದಿದ್ದ ಶಂಕೆ ಹಾಗೂ ರಸ್ತೆ ವಿವಾದವೇ ಕೊಲೆಗೆ ಕಾರಣವಾಗಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ. ಘಟನೆ ನಡೆದ ಕೆಲವೇ ಗಂಟೆಗಳಲ್ಲಿ ಪೊಲೀಸರು ಕಾರ್ಯಾಚರಣೆ ನಡೆಸಿ ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಈ ಸಂಬಂಧ ಸಂಕೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More »

ನವಲಗುಂದದಲ್ಲಿ ಯುವಕನಿಗೆ ಚಾಕು ಇರಿತ, ಕಿಮ್ಸ್‌ ಆಸ್ಪತ್ರೆಗೆ ದಾಖಲು

ನವಲಗುಂದ: ಸ್ಥಳೀಯ ಶೆಟ್ಟರ ಕೆರೆ ಬಳಿ ಶನಿವಾರ ಮಧ್ಯಾಹ್ನ ಆಕಾಶ ವಡ್ಡರ ಎಂಬ ಯುವಕನಿಗೆ ಅಪರಿಚಿತ ವ್ಯಕ್ತಿಯೊಬ್ಬರು ಚಾಕುವಿನಿಂದ ಇರಿದು, ಪರಾರಿಯಾಗಿದ್ದಾರೆ. ಸ್ಥಳಕ್ಕೆ ಆಗಮಿಸಿದ ಪೊಲೀಸರು, ಸಾರ್ವಜನಿಕರ ನೆರವಿನೊಂದಿಗೆ ಆಕಾಶ ಅವರನ್ನು ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. ಪ್ರಥಮ ಚಿಕಿತ್ಸೆ ನೀಡಿದ ನಂತರ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ಕಳುಹಿಸಿಕೊಡಲಾಗಿದೆ. ‘ಕೃತ್ಯಕ್ಕೆ ಕಾರಣ ತಿಳಿದುಬಂದಿಲ್ಲ. ಪ್ರಕರಣ ದಾಖಲು ಮಾಡಿಕೊಳ್ಳಲಾಗಿದೆ. ಚಾಕು ಇರಿದ ಆರೋಪಿಯ ಪತ್ತೆಗಾಗಿ ಕ್ರಮಕೈಗೊಂಡಿದ್ದೇವೆ’ ಎಂದು …

Read More »

ಕುಂಬಳೆ: ಪುತ್ರ ಚಲಾಯಿಸಿದ ಸ್ಕೂಟರ್‌ನಿಂದ ಬಿದ್ದು ತಾಯಿ ಸಾವು

ಕುಂಬಳೆ: ಪುತ್ರ ಚಲಾಯಿಸುತ್ತಿದ್ದ ಸ್ಕೂಟರ್‌ನಿಂದ ರಸ್ತೆಗೆಸೆಯಲ್ಪಟ್ಟು ತಾಯಿ ಸಾವಿಗೀಡಾದ ಘಟನೆ ಸಂಭವಿಸಿದೆ. ಕುಂಬಳೆ ಸುನಾಮಿ ಕಾಲನಿಯ ಮೊಯ್ದೀನ್‌ ಕುಂಞಿ ಅವರ ಪತ್ನಿ ಹಾತಿಕ (48) ಸಾವಿಗೀಡಾದವರು. ಸ್ಕೂಟರ್‌ ಚಲಾಯಿಸಿದ ಪುತ್ರ ಮುಬಾರಕ್‌ (19) ಸಣ್ಣಪುಟ್ಟ ಗಾಯಗೊಂಡಿದ್ದಾರೆ. ಜೂ.19 ರಂದು ರಾತ್ರಿ ಕುಂಬಳೆ ರಾಷ್ಟ್ರೀಯ ಹೆದ್ದಾರಿಯ ದೇವಿನಗರದ ಸರ್ವಿಸ್‌ ರಸ್ತೆಯಲ್ಲಿ ಅಪಘಾತ ಸಂಭವಿಸಿದೆ. ಗಂಭೀರ ಗಾಯಗೊಂಡ ಹಾತಿಕ ಅವರನ್ನು ಆಸ್ಪತ್ರೆಗೆ ತಲುಪಿಸಿದರೂ ರಕ್ಷಿಸಲು ಸಾಧ್ಯವಾಗಲಿಲ್ಲ. ಕುಂಬಳೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Read More »

ಬೀದರ್ ತಾಲ್ಲೂಕಿನಲ್ಲಿ ಬಾಲ್ಯ ವಿವಾಹ; ವರ ಸೇರಿ 13 ಮಂದಿ ವಿರುದ್ಧ ಪ್ರಕರಣ ದಾಖಲು

ಬೀದರ್ ತಾಲ್ಲೂಕಿನ ಗ್ರಾಮವೊಂದರಲ್ಲಿ ನಡೆದ ಬಾಲ್ಯ ವಿವಾಹಕ್ಕೆ ಸಂಬಂಧಿಸಿದಂತೆ ವರ ಸೇರಿ 13 ಮಂದಿ ವಿರುದ್ಧ ಪ್ರಕರಣ ದಾಖಲಾಗಿದೆ. ವರ, ವರನ ಪಾಲಕರು, ಬಾಲಕಿ ಪಾಲಕರು, ಕಲ್ಯಾಣ ಮಂಟಪ ಮಾಲೀಕ, ಟೆಂಟ್ ಹೌಸ್ ಮಾಲೀಕ, ಛಾಯಾಗ್ರಾಹಕ ಹಾಗೂ ಇತರರ ವಿರುದ್ಧ ಜನವಾಡ ಠಾಣೆ ಪೊಲೀಸರು ಶುಕ್ರವಾರ ಪ್ರಕರಣ ದಾಖಲಿಸಿಕೊಂಡಿದ್ದಾರೆ. ತಾಲ್ಲೂಕಿನ ಗ್ರಾಮವೊಂದರ ಮಂದಿರದಲ್ಲಿ ಗುರುವಾರ 16 ವರ್ಷದ ಬಾಲಕಿಯ ವಿವಾಹ ನಡೆಯುತ್ತಿದ್ದ ಬಗ್ಗೆ ಮಾಹಿತಿ ಬಂದಿತ್ತು. ಸ್ಥಳಕ್ಕೆ ಭೇಟಿ ನೀಡಿದಾಗ …

Read More »

ಸ್ನ್ಯಾಪ್‌ಚಾಟ್ ಪರಿಚಯ ಬೆಳೆಸಿ ವಿವಾಹಿತೆ ಮೇಲೆ ಅತ್ಯಾಚಾರ; ಆರೋಪಿ ಬಂಧನ

ಸ್ನ್ಯಾಪ್‌ಚಾಟ್ ಮೂಲಕ ಪರಿಚಯ ಬೆಳೆಸಿಕೊಂಡಿದ್ದ ವಿವಾಹಿತೆಯನ್ನು ಲಾಡ್ಜ್‌ಗೆ ಕರೆದೊಯ್ದು ಅತ್ಯಾಚಾರ ಎಸಗಿದ ಆರೋಪದ ಮೇಲೆ ಅಮೃತಹಳ್ಳಿ ಪೊಲೀಸರು ಯುವಕನನ್ನು ಬಂಧಿಸಿದ್ದಾರೆ. ಬಂಧಿತನನ್ನು ಯಶಸ್ ಎಂದು ಗುರುತಿಸಲಾಗಿದ್ದು, ಕೌಟುಂಬಿಕ ಕಲಹದಿಂದ ಪತಿಯಿಂದ ದೂರವಿದ್ದ ಮಹಿಳೆಯೊಂದಿಗೆ ಸಾಮಾಜಿಕ ಜಾಲತಾಣದಲ್ಲಿ ಆತ್ಮೀಯತೆ ಬೆಳೆಸಿಕೊಂಡಿದ್ದ ಎನ್ನಲಾಗಿದೆ. ಮಹಿಳೆಯ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಯನ್ನು ಬಂಧಿಸಿದ್ದು, ಪ್ರಕರಣದ ಕುರಿತು ಹೆಚ್ಚಿನ ತನಿಖೆ ಮುಂದುವರಿದಿದೆ.

Read More »

ದಾವಣಗೆರೆಯಲ್ಲಿ 40 ನಕಲಿ ವೈದ್ಯರು ಪತ್ತೆ!

ದಾವಣಗೆರೆ ಜಿಲ್ಲೆಯಲ್ಲಿ ನಕಲಿ ವೈದ್ಯರ ವ್ಯವಹಾರಕ್ಕೆ ಕಡಿವಾಣ ಹಾಕಲು ಜಿಲ್ಲಾ ಮಟ್ಟದ ಕಾರ್ಯಪಡೆ ಸಮಿತಿಯು ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಉಪವಿಭಾಗಾಧಿಕಾರಿ ಸಂತೋಷ್ ಕುಮಾರ್ ಸೂಚಿಸಿದ್ದಾರೆ. ಜಿಲ್ಲಾ ಕ್ರಿಯಾ ಸಮಿತಿಯ ಸಭೆಯಲ್ಲಿ ಮಾತನಾಡಿದ ಅವರು, ನಿಯಮ ಉಲ್ಲಂಘಿಸುವ ನಕಲಿ ವೈದ್ಯರಿಗೆ ₹25 ಸಾವಿರದಿಂದ ₹1 ಲಕ್ಷದವರೆಗೆ ದಂಡ ಹಾಗೂ 3 ವರ್ಷಗಳವರೆಗೆ ಜೈಲು ಶಿಕ್ಷೆ ವಿಧಿಸುವ ಅವಕಾಶವಿದೆ ಎಂದು ತಿಳಿಸಿದ್ದಾರೆ. ಇತ್ತೀಚೆಗೆ ಜಿಲ್ಲೆಯಲ್ಲಿ 40 ನಕಲಿ ವೈದ್ಯರು ಪತ್ತೆಯಾಗಿರುವ …

Read More »

ಯುವತಿ ಮುಂದೆ ಹೊಟ್ಟೆಗೆ ಚಾಕು ಚುಚ್ಚಿಕೊಂಡ ಯುವಕ

ಆನೇಕಲ್ ತಾಲೂಕಿನ ಸೂರ್ಯನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರೇಮ ವೈಫಲ್ಯದಿಂದ ಮನನೊಂದ ಯುವಕನೊಬ್ಬ ಪ್ರೇಯಸಿ ಎದುರೇ ಚಾಕುವಿನಿಂದ ಹೊಟ್ಟೆಗೆ ಇರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ. ಗಾಯಗೊಂಡ ಯುವಕನನ್ನು ಚಿದಂಬರ ಮಲ್ಲಪ್ಪ ಮರಮ್ಮಣ್ಣನವರ ಎಂದು ಗುರುತಿಸಲಾಗಿದೆ. ಪ್ರೇಯಸಿಯೊಂದಿಗೆ ಉಂಟಾದ ಭಿನ್ನಾಭಿಪ್ರಾಯದ ಹಿನ್ನೆಲೆ ಆಕೆಯನ್ನು ಭೇಟಿಯಾಗಲು ಪಿಜಿ ಬಳಿ ತೆರಳಿದ್ದ ವೇಳೆ ಇಬ್ಬರ ನಡುವೆ ವಾಗ್ವಾದ ನಡೆದಿದೆ. ಈ ಸಂದರ್ಭದಲ್ಲಿ ಭಾವೋದ್ವೇಗಕ್ಕೆ ಒಳಗಾದ ಯುವಕ ತನ್ನ ಹೊಟ್ಟೆಗೆ ತಾನೇ ಚಾಕುವಿನಿಂದ ಇರಿದುಕೊಂಡಿದ್ದಾನೆ. …

Read More »

ಭೂ ತೆರಿಗೆ ಪಾವತಿಗೆ ಬಂದ ವ್ಯಕ್ತಿಯಿಂದ 5 ಸಾವಿರ ರೂಪಾಯಿ ಲಂಚ ಪಡೆಯುತ್ತಿದ್ದ ನೌಕರನ ಬಂಧನ

ಉಪ್ಪಳ: ಭೂ ತೆರಿಗೆಯನ್ನು ಸಮಿತಿಯ ಹೆಸರಿಗೆ ಬದಲಾಯಿಸುವ ಪ್ರಕ್ರಿಯೆಗೆ ಸಂಬಂಧಿಸಿದಂತೆ ₹5 ಸಾವಿರ ಲಂಚ ಪಡೆಯುತ್ತಿದ್ದ ಉಪ್ಪಳ ಗ್ರೂಪ್ ವಿಲೇಜ್ ಆಫೀಸ್‌ನ ನೌಕರ ಕೆ. ಶಿವಪ್ರಸಾದ್ (42) ಅವರನ್ನು ಕಾಸರಗೋಡು ವಿಜಿಲೆನ್ಸ್ ಮತ್ತು ಭ್ರಷ್ಟಾಚಾರ ನಿಗ್ರಹ ದಳದ ಅಧಿಕಾರಿಗಳು ಬಂಧಿಸಿದ್ದಾರೆ. ಅರ್ಜಿದಾರರಿಂದ ಹಣದ ಬೇಡಿಕೆ ಇಟ್ಟಿದ್ದ ಶಿವಪ್ರಸಾದ್, ದಾಖಲೆಗಳ ಕೆಲಸವನ್ನು ಶೀಘ್ರವಾಗಿ ಮಾಡಿಕೊಡುವುದಾಗಿ ಹೇಳಿ ಲಂಚ ಕೇಳಿದ್ದ ಎನ್ನಲಾಗಿದೆ. ಈ ಬಗ್ಗೆ ದೂರು ಬಂದ ಹಿನ್ನೆಲೆಯಲ್ಲಿ ವಿಜಿಲೆನ್ಸ್ ಅಧಿಕಾರಿಗಳು ಬಲೆ …

Read More »

ಕಲಬುರಗಿ | ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಪ್ರಕರಣ: ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಿದ ನ್ಯಾಯಾಲಯ

ಕಲಬುರಗಿ: ಅಪ್ರಾಪ್ತ ಬಾಲಕಿಗೆ ಮದುವೆಯಾಗುವುದಾಗಿ ನಂಬಿಸಿ ನಿರಂತರವಾಗಿ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ಆರೋಪಿ ರಝಾಕ್ ಸಾಬಶೇಖ(20)ಗೆ ವಿಶೇಷ ಪೊಕ್ಸೊ ನ್ಯಾಯಾಲಯ ಜೀವಾವಧಿ ಶಿಕ್ಷೆ ಹಾಗೂ ₹55 ಸಾವಿರ ದಂಡ ವಿಧಿಸಿದೆ. 16 ವರ್ಷದ ಬಾಲಕಿಯನ್ನು ರಾಮನಗರದ ರೇಷ್ಮೆ ಕಾರ್ಖಾನೆಗೆ ಕರೆದೊಯ್ದು ದೌರ್ಜನ್ಯ ಎಸಗಿದ್ದ ಆರೋಪದಡಿ ಸಬ್ ಅರ್ಬನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ತನಿಖೆ ಬಳಿಕ ಆರೋಪಿ ವಿರುದ್ಧ ಆರೋಪಪಟ್ಟಿ ಸಲ್ಲಿಸಲಾಗಿತ್ತು. ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಲಯ, ನೊಂದ …

Read More »