Breaking News

BigTv News

ಶಾಲಾ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ – ಇಬ್ಬರು ಕಾಮುಕ ಶಿಕ್ಷಕರ ವಿರುದ್ಧ FIR!

ಚಿಕ್ಕಮಗಳೂರಿನ ಕಡೂರು ತಾಲೂಕಿನ ಸರ್ಕಾರಿ ಶಾಲೆಯಲ್ಲಿ ಮೂವರು ಅಪ್ರಾಪ್ತ ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ ನಡೆದಿರುವ ಆರೋಪ ಕೇಳಿಬಂದಿದೆ. ಶಿಕ್ಷಕ ನಾಗರಾಜ್ ಅಶ್ಲೀಲ ವಿಡಿಯೋ ತೋರಿಸಿ ದೌರ್ಜನ್ಯ ಎಸಗಿದ್ದಾನೆ ಎನ್ನಲಾಗಿದ್ದು, ಅವರ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ದೂರು ಬಂದರೂ ಕ್ರಮ ಕೈಗೊಳ್ಳದ ಆರೋಪದಡಿ ಮುಖ್ಯ ಶಿಕ್ಷಕ ಲೋಕೇಶ್ ವಿರುದ್ಧವೂ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

Read More »

ಕಾಫಿ ನಾಡಿನಲ್ಲಿ ಕಾಂಗ್ರೆಸ್‌‍ ಮುಖಂಡ ಲಾಂಗ್‌ ಹಿಡಿದು ಓಡಾಟ :ಕೇಸ್‌‍ ದಾಖಲು

ಚಿಕ್ಕಮಗಳೂರಿನ ಐದಳ್ಳಿ ಗ್ರಾಮದಲ್ಲಿ ಯುವ ಕಾಂಗ್ರೆಸ್ ಮುಖಂಡ ತೇಜಸ್‌ ಕ್ಷುಲ್ಲಕ ವಿಚಾರಕ್ಕೆ ಲಾಂಗ್‌ ಹಿಡಿದು ಪುಂಡಾಟ ಮೆರೆದಿರುವ ಘಟನೆ ನಡೆದಿದೆ. ಹಬ್ಬದ ಸಂದರ್ಭದಲ್ಲಿ ಬೈಕ್‌ನಲ್ಲಿ ತೆರಳುತ್ತಿದ್ದ ವ್ಯಕ್ತಿಯೊಂದಿಗೆ ವಾಗ್ವಾದ ನಡೆಸಿದ ತೇಜಸ್‌, ಕಾರಿನಿಂದ ಮಾರಕಾಸ್ತ್ರ ತೆಗೆದು ಹಲ್ಲೆಗೆ ಯತ್ನಿಸಿದ್ದಾನೆ ಎನ್ನಲಾಗಿದೆ. ಘಟನೆಯ ದೃಶ್ಯ ಮೊಬೈಲ್‌ನಲ್ಲಿ ಸೆರೆಯಾಗಿದ್ದು, ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Read More »

ಲಿಂಗೇಶ್‌ ಸೇರಿ 12 ಜನರ ಬಂಧನ

ಬಗರ್‌ ಹುಕುಂ ಭೂ ಅಕ್ರಮ ಪ್ರಕರಣದಲ್ಲಿ ಮಾಜಿ ಶಾಸಕ ಕೆ.ಎಸ್. ಲಿಂಗೇಶ್ ಸೇರಿದಂತೆ 12 ಮಂದಿಯನ್ನು ಸಿಐಡಿ ಪೊಲೀಸರು ಬಂಧಿಸಿದ್ದಾರೆ. 2016ರಿಂದ 2022ರವರೆಗೆ 1,430 ಮಂದಿಗೆ 2,750 ಎಕರೆ ಜಮೀನು ನಿಯಮಬಾಹಿರವಾಗಿ ಮಂಜೂರು ಮಾಡಲಾಗಿದೆ ಎಂದು ತನಿಖೆಯಲ್ಲಿ ಬೆಳಕಿಗೆ ಬಂದಿದೆ. ಪ್ರಕರಣದ ತನಿಖೆ ಮುಂದುವರಿದಿದ್ದು, ಬಂಧಿತರನ್ನು ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.

Read More »

ಕೋಳಿ ಅಂಕ: ಮೂವರ ಬಂಧನ

ಕುಂದಾಪುರ: ಅಂಪಾರು ಗ್ರಾಮದ ಗುಡಿಬೆಟ್ಟು ಎಂಬಲ್ಲಿ ಜೂ.18ರಂದು ಕೋಳಿ ಅಂಕಕ್ಕೆ ದಾಳಿ ನಡೆಸಿದ ಕುಂದಾಪುರ ಪೊಲೀಸರು ಮೂವರನ್ನು ಬಂಧಿಸಿದ್ದಾರೆ. ಮೊವಾಡಿಯ ನಾರಾಯಣ(48), ಉಡುಪಿ ನಿಟ್ಟೂರಿನ ಪ್ರಶಾಂತ್ (43), ನಿಟ್ಟೂರು ವಿಷ್ಣುಮೂರ್ತಿ ನಗರದ ನವರಾಜ್(51) ಬಂಧಿತ ಆರೋಪಿಗಳು. ಉಳಿದವರು ಹಾಡಿಯಲ್ಲಿ ಓಡಿ ತಪ್ಪಿಸಿಕೊಂಡಿದ್ದಾರೆ. ಬಂಧಿತರಿಂದ 1,600ರೂ. ನಗದು ವಶಪಡಿಸಿಕೊಳ್ಳಲಾಗಿದೆ. ಈ ಬಗ್ಗೆ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More »

ದೊಡ್ಡಬಳ್ಳಾಪುರದಲ್ಲಿ ಖಾಕಿ ಬೇಟೆ.. ₹30 ಲಕ್ಷ ಮೌಲ್ಯದ ಶ್ರೀಗಂಧ ಜಪ್ತಿ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ ನಡೆದಿದ್ದ ಶ್ರೀಗಂಧ ಕಳ್ಳತನ ಪ್ರಕರಣವನ್ನು ಪೊಲೀಸರು ಭೇದಿಸಿದ್ದು, ಇಬ್ಬರು ಅಂತರಜಿಲ್ಲಾ ಕಳ್ಳರನ್ನು ಬಂಧಿಸಿದ್ದಾರೆ. ಮೈಸೂರು ಮೂಲದ ವೆಂಕಟೇಶ್ (26) ಹಾಗೂ ತುಮಕೂರು ಮೂಲದ ಅರುಣ್ (34) ಬಂಧಿತ ಆರೋಪಿಗಳು. ಇವರು ಕುರುಬರಹಳ್ಳಿ ಗ್ರಾಮದಲ್ಲಿ ಬಾಡಿಗೆ ಮನೆಯಲ್ಲಿ ವಾಸವಿದ್ದು, ಸ್ಮಶಾನ ಹಾಗೂ ಸರ್ಕಾರಿ ಶಾಲೆಗಳ ಆವರಣದಲ್ಲಿದ್ದ ಗಂಧದ ಮರಗಳನ್ನು ಕಳವು ಮಾಡುತ್ತಿದ್ದರು ಎನ್ನಲಾಗಿದೆ. ಆರೋಪಿಗಳಿಂದ ₹30 ಲಕ್ಷಕ್ಕೂ ಅಧಿಕ ಮೌಲ್ಯದ 254 ಕೆ.ಜಿ. ಶ್ರೀಗಂಧ, ಪೆಟ್ರೋಲ್ …

Read More »

ಬೆಂಗಳೂರಲ್ಲಿ ‘ಮೊಬೈಲ್’ ಕಸಿದು ಪರಾರಿಯಾಗುತ್ತಿದ್ದ ಕಳ್ಳನಿಗೆ ಹೃದಯಾಘಾತ ; ಸ್ಥಳದಲ್ಲೇ ಸಾವು

ಬೆಂಗಳೂರು ನಗರದ ಕಬ್ಬನ್‌ಪೇಟೆ ಪ್ರದೇಶದಲ್ಲಿ ಮೊಬೈಲ್ ಕಸಿದುಕೊಂಡು ಪರಾರಿಯಾಗುತ್ತಿದ್ದ ಕಳ್ಳನೊಬ್ಬ ಹೃದಯಾಘಾತಕ್ಕೊಳಗಾಗಿ ಮೃತಪಟ್ಟ ಘಟನೆ ನಡೆದಿದೆ. ಮೃತನನ್ನು ಜುನೈದ್ ಎಂದು ಗುರುತಿಸಲಾಗಿದೆ. ಮೊಬೈಲ್ ಕಸಿದು ಓಡುತ್ತಿದ್ದ ಜುನೈದ್‌ನನ್ನು ಸ್ಥಳೀಯರು ಬೆನ್ನಟ್ಟಿದ ವೇಳೆ ಆತ ಏಕಾಏಕಿ ಕುಸಿದು ಬಿದ್ದಿದ್ದಾನೆ. ತಕ್ಷಣ ಆಸ್ಪತ್ರೆಗೆ ಕರೆದೊಯ್ಯಲು ಯತ್ನಿಸಿದರೂ ಅಷ್ಟರಲ್ಲೇ ಮೃತಪಟ್ಟಿದ್ದಾನೆ ಎಂದು ತಿಳಿದುಬಂದಿದೆ. ಅತಿಯಾದ ಓಟ ಹಾಗೂ ಆತಂಕದಿಂದ ಹೃದಯಾಘಾತ ಸಂಭವಿಸಿರುವ ಶಂಕೆ ವ್ಯಕ್ತವಾಗಿದ್ದು, ಮರಣೋತ್ತರ ಪರೀಕ್ಷೆಯ ವರದಿ ಬಳಿಕ ಸಾವಿನ ನಿಖರ ಕಾರಣ …

Read More »

ಜಿಲ್ಲಾ ನ್ಯಾಯಾಲಯಕ್ಕೆ ಮತ್ತೆ ಬಾಂಬ್ ಬೆದರಿಕೆ ಇ-ಮೇಲ್; ಶೋಧದ ಬಳಿಕ ಹುಸಿ ಕರೆ ಎಂದು ಸ್ಪಷ್ಟನೆ

ದಾವಣಗೆರೆ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಇಡಲಾಗಿದೆ ಎಂದು ಇ-ಮೇಲ್ ಮೂಲಕ ಬೆದರಿಕೆ ಬಂದ ಹಿನ್ನೆಲೆಯಲ್ಲಿ ಪೊಲೀಸರು, ಬಾಂಬ್ ನಿಷ್ಕ್ರಿಯ ದಳ ಹಾಗೂ ಶ್ವಾನದಳ ಸಿಬ್ಬಂದಿ ತುರ್ತು ತಪಾಸಣೆ ನಡೆಸಿದರು. ನ್ಯಾಯಾಲಯದ ಎಲ್ಲಾ ಕೊಠಡಿಗಳು, ಸಭಾಂಗಣಗಳು ಮತ್ತು ವಕೀಲರ ಭವನದಲ್ಲಿ ಶೋಧ ಕಾರ್ಯಾಚರಣೆ ನಡೆಸಿದರೂ ಯಾವುದೇ ಸ್ಫೋಟಕ ವಸ್ತು ಪತ್ತೆಯಾಗಲಿಲ್ಲ. ಬಳಿಕ ಇದು ಹುಸಿ ಬಾಂಬ್ ಬೆದರಿಕೆ ಎಂದು ಅಧಿಕಾರಿಗಳು ದೃಢಪಡಿಸಿದರು. ಪದೆಪದೆ ನ್ಯಾಯಾಲಯಗಳಿಗೆ ಇಂತಹ ಬೆದರಿಕೆ ಇ-ಮೇಲ್‌ಗಳು ಬರುತ್ತಿರುವುದರಿಂದ ಆತಂಕ …

Read More »

ಬೆಂಗಳೂರಿನಲ್ಲಿ ರಿಹ್ಯಾಬ್ ಸೆಂಟರ್ ಮಾಲೀಕನ ಬರ್ಬರ ಹತ್ಯೆ

ರಾಜ್ಯ ರಾಜಧಾನಿ ಬೆಂಗಳುರಿನಲ್ಲಿ ರಿಹ್ಯಾಬ್ ಸೆಂಟರ್ ಮಾಲೀಕನನ್ನು ರಾಡ್ ನಿಂದ ಹೊಡೆದು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಬೆಳಕಿಗೆ ಬಂದಿದೆ. ಬೆಂಗಳೂರಿನ ಚಂದ್ರಾ ಲೇಔಟ್ ನಲ್ಲಿ ಈ ಘಟನೆ ನಡೆದಿದೆ. ಶಿವಲಿಂಗಯ್ಯ (60) ಕೊಲೆಯಾದ ದುರ್ದೈವಿ. ರಿಹ್ಯಾಬ್ ಸೆಂಟರ್ ಗೆ ಚಿಕಿತ್ಸೆಗೆಂದು ಬಂದವರಿಂದಲೇ ಮಾಲೀಕನ ಹತ್ಯೆಯಾಗಿದೆ.ರಾಡ್ ನಿಂದ ಹೊಡೆದು ಹತ್ಯೆಗೈದಿರುವ ಆರೋಪಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ. ಘಟನಾ ಸ್ಥಳಕ್ಕೆ ಚಂದ್ರಾ ಲೇಔಟ್ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಆರೋಪಿಗಳ …

Read More »

ಹಿಂದೂ ಯುವತಿ ಅಪಹರಣ ಕೇಸ್​​ಗೆ ಟ್ವಿಸ್ಟ್: ಮುಸ್ಲಿಂ ಯುವಕನ ವಿರುದ್ಧ ಕೇಸ್ ಬುಕ್, ಆಗಿದ್ದೇನು?

ಭಟ್ಕಳ: ಮುಸ್ಲಿಂ ಯುವಕನೊಬ್ಬ ಹಿಂದೂ ಯುವತಿಯನ್ನು ಅಪಹರಿಸಿ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂಬ ಆರೋಪದಡಿ ಭಟ್ಕಳ ಗ್ರಾಮೀಣ ಠಾಣೆ ಪೊಲೀಸರು ಶಾಹೀದ್ ಎಂಬಾತನನ್ನು ಬಂಧಿಸಿದ್ದಾರೆ. ಸೂಪರ್ ಮಾರ್ಕೆಟ್‌ನಲ್ಲಿ ಕೆಲಸ ಮಾಡುತ್ತಿದ್ದ ಯುವತಿಯನ್ನು ಕಾರಿನಲ್ಲಿ ಕರೆದುಕೊಂಡು ಹೋಗಿದ್ದ ವೇಳೆ ಹಿಂದೂ ಕಾರ್ಯಕರ್ತರು ಇಬ್ಬರನ್ನೂ ಪತ್ತೆಹಚ್ಚಿ ಪೊಲೀಸರಿಗೆ ಒಪ್ಪಿಸಿದ್ದರು. ಬಳಿಕ ಯುವಕ ತನ್ನ ಮೇಲೆ ಹಲ್ಲೆ ನಡೆದಿದೆ ಎಂದು ದೂರು ನೀಡಿದ್ದರಿಂದ ಕೆಲ ಕಾರ್ಯಕರ್ತರ ವಿರುದ್ಧವೂ ಪ್ರಕರಣ ದಾಖಲಾಗಿತ್ತು. ನಂತರ ಯುವತಿ ನೀಡಿದ …

Read More »

ಸಿಐಡಿ ಇನ್ಸ್ ಪೆಕ್ಟರ್ ನಿಂದಲೇ ದರೋಡೆ: ಬರೋಬ್ಬರಿ 20 ಲಕ್ಷ ದೋಚಿ ಪರಾರಿಯಾದ ಗ್ಯಾಂಗ್: ರಕ್ಷಕರೇ ಭಕ್ಷಕರಾದ ಕಥೆ

ಬೆಂಗಳೂರು: ಮಡಿವಾಳದ ಖಾಸಗಿ ಹೋಟೆಲ್‌ನಲ್ಲಿ ತಂಗಿದ್ದ ಕೇರಳ ಮೂಲದ ಉದ್ಯಮಿಗಳನ್ನು ಬೆದರಿಸಿ ₹20 ಲಕ್ಷ ದರೋಡೆ ಮಾಡಿದ ಪ್ರಕರಣದಲ್ಲಿ ಸಿಐಡಿ ಇನ್ಸ್‌ಪೆಕ್ಟರ್ ಮಹೇಶ್ ಕನಕಗಿರಿ ಹೆಸರು ಕೇಳಿಬಂದಿದೆ. ಇನ್ಸ್‌ಪೆಕ್ಟರ್ ಸೇರಿದಂತೆ ಕೆಲವರು ಪೊಲೀಸರ ಸೋಗಿನಲ್ಲಿ ಹೋಟೆಲ್ ಕೊಠಡಿಗೆ ನುಗ್ಗಿ, ಉದ್ಯಮಿಗಳಿಂದ ಹಣ ಕಸಿದುಕೊಂಡು ಪೊಲೀಸ್ ಜೀಪಿನಲ್ಲಿ ಪರಾರಿಯಾಗಿದ್ದಾರೆ ಎಂದು ಆರೋಪಿಸಲಾಗಿದೆ. ದೂರಿನ ಮೇರೆಗೆ ತನಿಖೆ ನಡೆಸಿದ ಮಡಿವಾಳ ಪೊಲೀಸರು ಕುಪೇಂದ್ರ ಎಂಬಾತನನ್ನು ಬಂಧಿಸಿದ್ದು, ವಿಚಾರಣೆ ವೇಳೆ ಪ್ರಕರಣದ ಪ್ರಮುಖ ಮಾಹಿತಿ …

Read More »