Breaking News

BigTv News

ಕೆಲಸಕ್ಕೆಂದು ಬಂದ ಯುವಕನಿಂದ ಯುವತಿ ಅಪಹರಣ; ಲವ್ ಜಿಹಾದ್ ಶಂಕೆ

ಹಿರೇಕೆರೂರ: ತಾಲೂಕಿನ ಮಡ್ಲೂರು ಗ್ರಾಮದಲ್ಲಿ ಮನೆ ಕೆಲಸಕ್ಕೆಂದು ಬಂದಿದ್ದ ಮುಸ್ಲಿಂ ಯುವಕನೊಬ್ಬ ಅದೇ ಮನೆಯ ಹಿಂದೂ ಯುವತಿಯೊಬ್ಬಳನ್ನು ಪುಸಲಾಯಿಸಿ ಕರೆದುಕೊಂಡು ಹೋಗಿದ್ದು, ಲವ್ ಜಿಹಾದ್ ಶಂಕೆ ವ್ಯಕ್ತವಾಗಿದೆ. ಹಾವೇರಿ ತಾಲೂಕಿನ ಕಬ್ಬೂರ ಗ್ರಾಮದ ಮಲ್ಲಿಕರೇಹಾನ ಚಮನಸಾಬ ಹಮ್ಮಗಿ ಯುವತಿಯನ್ನು ಕರೆದುಕೊಂಡು ಯುವಕ ಎನ್ನಲಾಗಿದೆ. ಈ ಕುರಿತು ಯುವತಿಯ ಸಹೋದರ ಪೊಲೀಸರಿಗೆ ದೂರು ನೀಡಿದ್ದು, ಈತ ಮನೆ ಕೆಲಸಕ್ಕೆಂದು ಬಂದಿದ್ದ. ನನ್ನ ಸಹೋದರಿ ತಿಳವಳ್ಳಿಗೆ ಕೆಲಸಕ್ಕೆಂದು ಹೋದಾಗ ಆಕೆಯನ್ನು ಪುಸಲಾಯಿಸಿ ಕರೆದುಕೊಂಡು …

Read More »

ಬೆಳಗಾವಿ: ಕಸದ ರಾಶಿಯಲ್ಲಿ 59 ಗುಂಡುಗಳು ಪತ್ತೆ! ತನಿಖೆ ವೇಳೆ ಶಾಕಿಂಗ್ ಮಾಹಿತಿ ಬಯಲು!

ಬೆಳಗಾವಿ ನಗರದ ಉದ್ಯಮಭಾಗ ಕೈಗಾರಿಕಾ ಪ್ರದೇಶದಲ್ಲಿ ಕಸ ವಿಂಗಡಣೆ ಮಾಡುತ್ತಿದ್ದ ಪೌರಕಾರ್ಮಿಕರಿಗೆ ಕಸದ ರಾಶಿಯಲ್ಲಿ 59 ಬಳಕೆಯಾದ ಗುಂಡುಗಳು ಪತ್ತೆಯಾಗಿದ್ದು, ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಯಿತು. ತಕ್ಷಣವೇ ಪೊಲೀಸರಿಗೆ ಮಾಹಿತಿ ನೀಡಲಾಗಿದ್ದು, ಸ್ಥಳಕ್ಕೆ ಆಗಮಿಸಿದ ಪೊಲೀಸರು ಗುಂಡುಗಳನ್ನು ವಶಕ್ಕೆ ಪಡೆದು ತನಿಖೆ ಆರಂಭಿಸಿದರು. ಪ್ರಾಥಮಿಕ ತನಿಖೆಯಲ್ಲಿ ಈ ಗುಂಡುಗಳು ವಿಜಯಪುರ ಮೂಲದ ಮಾಜಿ ಸೈನಿಕನಿಗೆ ಸೇರಿದ್ದವು ಎಂಬ ಮಾಹಿತಿ ಬೆಳಕಿಗೆ ಬಂದಿದೆ. ಸಂಬಂಧಿಕರ ಮಕ್ಕಳಿಗೆ ತೋರಿಸಲು ಅವುಗಳನ್ನು ಬೆಳಗಾವಿಯ ಮನೆಯೊಂದಕ್ಕೆ …

Read More »

ಗಾಂಜಾ ಮಾರಾಟ ಮಾಡುತ್ತಿದ್ದ ಮೂವರ ಬಂಧನ

ಸಿದ್ದಾಪುರ: ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ ಮೂವರನ್ನು ಪೊಲೀಸರು ಬಂಧಿಸಿದ್ದಾರೆ.ಗೂಡುಗದ್ದೆ ಗ್ರಾಮದ ಧನುಷ್ (23), ಕರಡಿಗೋಡು ಗ್ರಾಮದ ಗೌತಮ್ (19), ನೆಲ್ಯಹುದಿಕೇರಿ ಗ್ರಾಮದ ಅನ್ಸಾದ್ (23) ಬಂಧಿತರು. ಸಿದ್ದಾಪುರ ಪೊಲೀಸ್ ಠಾಣೆ ವ್ಯಾಪ್ತಿಯ ನೆಲ್ಯಹುದಿಕೇರಿ ಗ್ರಾಮದ ಕಾವೇರಿ ನದಿಯ ಹಳೆ ಸೇತುವೆಯಿಂದ ಕುಂಬಾರಗುಂಡಿಗೆ ತೆರಳುವ ರಸ್ತೆಯಲ್ಲಿ ಮಂಗಳವಾರ ಬೆಳಗ್ಗೆ ಸುಮಾರು 10.30 ಗಂಟೆಗೆ ಆರೋಪಿಗಳು ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿರುವ ಬಗ್ಗೆ ಖಚಿತ ಮಾಹಿತಿ ದೊರೆತ ಹಿನ್ನೆಲೆಯಲ್ಲಿ ಸಿದ್ದಾಪುರ ಠಾಣೆ …

Read More »

ಗಾಂಜಾ ಮಾರಾಟಗಾರರಿಬ್ಬರ ಬಂಧನ

ಮುಳಬಾಗಿಲು: ನಗರದ ಅಂಜನಾದ್ರಿ ಬೆಟ್ಟದ ತಪ್ಪಿಲಿನಲ್ಲಿ ಸೋಮವಾರ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿಗಳಿಬ್ಬರನ್ನು ನಗರ ಪೊಲೀಸರು ಬಂಧಿಸಿ, ಮಾಲು ವಶಪಡಿಸಿಕೊಂಡಿದ್ದಾರೆ. ಮುಳಬಾಗಿಲಿನ ಕುರುಬರಪೇಟೆ ಮತಿನ್​ ಖಾನ್​ (41), ಶ್ರೀನಿವಾಸಪುರದ ನೂರ್​ ಪಾಷಾ (31) ಬಂಧಿತರು. ಮತಿನ್​ಖಾನ್​ ಶ್ರೀನಿವಾಸಪುರದ ನೂರ್​ ಪಾಷಾಗೆ 1 ಕೆಜಿ 300ಗ್ರಾಂ ಗಾಂಜಾ ಮಾರಾಟ ಮಾಡುತ್ತಿದ್ದ ವೇಳೆ ದಾಳಿ ನಡೆಸಿದ ಪೊಲೀಸರು ಇಬ್ಬರನ್ನು ಬಂಧಿಸಿ, 1 ಕೆಜಿ 300 ಗ್ರಾಂ ಗಾಂಜಾ ವಶಕ್ಕೆ ಪಡೆದುಕೊಂಡಿದ್ದಾರೆ. ಇತ್ತೀಚಿಗೆ ನೆರೆಯ …

Read More »

ರಾಜ್ಯದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ: ಅಪ್ರಾಪ್ತ ಸಹೋದರಿಯರ ಮೇಲೆ ಅತ್ಯಾಚಾರ: ಕಾಮುಕ ಅರೆಸ್ಟ್

ರಾಯಚೂರು: ಅಪ್ರಾಪ್ತ ಅಕ್ಕ-ತಂಗಿಯರಿಬ್ಬರ ಮೇಲೆ ಕಾಮುಕನೊಬ್ಬ ಅಟ್ಟಹಾಸ ಮೆರೆದಿದ್ದು, ಅತ್ಯಾಚಾರವೆಸಗಿರುವ ಘಟನೆ ರಾಅಯಚೂರು ಜಿಲ್ಲೆಯ ಸಿಂಧನೂರು ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.8 ಹಾಗೂ 9 ವರ್ಷದ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಲಾಗಿದೆ.ಬಾಲಕಿಯರ ಕುಟುಂಬಕ್ಕೆ ಪರಿಚಯಸ್ಥ ವ್ಯಕ್ತಿಯಿಂದಲೇ ಈ ಕೃತ್ಯ ನಡೆದಿದೆ. ಕಾರ್ಖಾನೆಯೊಂದರಲ್ಲಿ ಕೆಲಸ ಮಾಡುತ್ತಿರುವ 30 ವರ್ಷದ ಆರೋಪಿ ಇಬ್ಬರು ಸಹೋದರಿಯರ ಮೇಲೆ ಶೆಡ್ ನಲ್ಲಿ ಅತ್ಯಾಚಾರವೆಸಗಿದ್ದಾನೆ. ಪ್ರಕರಣ ಸಂಬಂಧ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಬಂಧಿತನನ್ನು ಬಾಬಾ …

Read More »

: ವಿಜಯಪುರದಲ್ಲಿ ಭೀಕರ ಅಪಘಾತ; ಟೈರ್​​ ಬ್ಲಾಸ್ಟ್​​ ಆಗಿ ಬಸ್​​ಗೆ ಗುದ್ದಿದ ಟಿಪ್ಪರ್​​, ಮೂವರು ಸಾವು

ವಿಜಯಪುರ ಜಿಲ್ಲೆಯ ಚಡಚಣ ತಾಲೂಕಿನ ಲೋಣಿ ಕ್ರಾಸ್ ಬಳಿ ಟಿಪ್ಪರ್ ಮತ್ತು ಕೆಎಸ್‌ಆರ್‌ಟಿಸಿ ಬಸ್ ನಡುವೆ ಭೀಕರ ಅಪಘಾತ ಸಂಭವಿಸಿ ಮೂವರು ಮೃತಪಟ್ಟಿದ್ದಾರೆ. ಘಟನೆಯಲ್ಲಿ 10ಕ್ಕೂ ಹೆಚ್ಚು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಟಿಪ್ಪರ್‌ನ ಟೈರ್ ಬ್ಲಾಸ್ಟ್ ಆದ ಪರಿಣಾಮ ವಾಹನ ನಿಯಂತ್ರಣ ತಪ್ಪಿ ಬಸ್‌ಗೆ ಡಿಕ್ಕಿ ಹೊಡೆದಿದೆ ಎಂದು ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದೆ. ಅಪಘಾತದಲ್ಲಿ ಟಿಪ್ಪರ್ ಚಾಲಕ ಅಶೋಕ್ ಉಟಗಿ, ಅವರ ಪತ್ನಿ ರಾಧಾಬಾಯಿ ಹಾಗೂ …

Read More »

ಮಾಜಿ ಸೈನಿಕನ ಮರ್ಡರ್‌ಗೆ ಬಿಗ್‌ ಟ್ವಿಸ್ಟ್: ಪತ್ನಿ ಸುಮಾಳ ಅಸಲಿಯತ್ತು ಬಯಲು: FSL ವರದಿಯನ್ನೇ ತಿರುಚಿದ ದುಷ್ಕರ್ಮಿಗಳು

ಬೆಳಗಾವಿ ಜಿಲ್ಲೆಯಲ್ಲಿ ₹2 ಕೋಟಿ ವಿಮೆ ಹಣ ಪಡೆಯುವ ಉದ್ದೇಶದಿಂದ ಪತಿಯನ್ನು ಕೊಲೆ ಮಾಡಿರುವ ಭೀಕರ ಪ್ರಕರಣ ಬೆಳಕಿಗೆ ಬಂದಿದೆ. ಹುಕ್ಕೇರಿ ತಾಲೂಕಿನ ಘೋಡಗೇರಿ ಗ್ರಾಮದ ಸಂದೀಪ್ ಮಂಜರಗಿ (35) ಅವರನ್ನು ಪತ್ನಿ ಸುಮಾ ಹಾಗೂ ಆಕೆಯ ಪ್ರಿಯಕರ ಪುಂಡಲೀಕ ಡೊಂಗರ್ ಸೇರಿ ಆಸ್ಪತ್ರೆಯಲ್ಲೇ ವಿಷ ನೀಡಿ ಹತ್ಯೆ ಮಾಡಿರುವ ಆರೋಪ ಕೇಳಿಬಂದಿದೆ. ರಸ್ತೆ ಅಪಘಾತದ ಬಳಿಕ ಚಿಕಿತ್ಸೆ ಪಡೆಯುತ್ತಿದ್ದ ಸಂದೀಪ್‌ಗೆ ಸಲೈನ್ ಮೂಲಕ ವಿಷ ನೀಡಲಾಗಿದ್ದು, ಸಾವನ್ನು ಹೃದಯಾಘಾತ …

Read More »

ಬೆಳ್ಳಂಬೆಳಗ್ಗೆ ಭ್ರಷ್ಟ ಅಧಿಕಾರಿಗಳಿಗೆ ಬಿಸಿ ಮುಟ್ಟಿಸಿದ ಲೋಕಾಯುಕ್ತ – ರಾಜ್ಯದ ಹಲವು ಜಿಲ್ಲೆಗಳಲ್ಲಿ ಮೆಗಾ ರೇಡ್‌!

ಬೆಂಗಳೂರು : ದಾವಣಗೆರೆ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭ್ರಷ್ಟಾಚಾರ ಆರೋಪದ ಹಿನ್ನೆಲೆ ಲೋಕಾಯುಕ್ತ ಅಧಿಕಾರಿಗಳು ಇಂದು ಬೆಳ್ಳಂಬೆಳಗ್ಗೆ ಏಕಕಾಲಕ್ಕೆ ಬೃಹತ್ ದಾಳಿ ನಡೆಸಿದ್ದಾರೆ. ದಾವಣಗೆರೆಯಲ್ಲಿ ಮೂವರು ಅಧಿಕಾರಿಗಳ ಮನೆ, ಕಚೇರಿ ಹಾಗೂ ಫಾರ್ಮ್ ಹೌಸ್‌ಗಳ ಮೇಲೆ 12 ತಂಡಗಳು ಏಕಕಾಲಕ್ಕೆ ದಾಳಿ ನಡೆಸಿದ್ದು, ಮಹತ್ವದ ದಾಖಲೆಗಳು ಹಾಗೂ ಆಸ್ತಿ-ಪಾಸ್ತಿ ಸಂಬಂಧಿತ ಮಾಹಿತಿಗಳನ್ನು ಪರಿಶೀಲಿಸಲಾಗಿದೆ.ದಾವಣಗೆರೆಯಲ್ಲಿ ಬಯಲು ಸೀಮೆ ಅಭಿವೃದ್ಧಿ ಮಂಡಳಿ ಕಾರ್ಯದರ್ಶಿ ಕೃಷ್ಣ ನಾಯ್ಕ್, NWKRTC ಮುಖ್ಯ ಮೆಕ್ಯಾನಿಕಲ್ ಇಂಜಿನಿಯರ್ …

Read More »

ಕೋಳಿ ಅಂಕಕ್ಕೆ ದಾಳಿ: ಮೂವರ ಸೆರೆ

ವಿಟ್ಲ: ಸಾಲೆತ್ತೂರು ಗ್ರಾಮದ ಸಾರ್ವಜನಿಕ ಗುಡ್ಡ ಜಾಗದಲ್ಲಿ ಹಣವನ್ನು ಪಣವಾಗಿಟ್ಟು ಕೋಳಿ ಅಂಕ ಜೂಜಾಟವನ್ನು ಆಡುತ್ತಿರುವ ವಿಚಾರ ತಿಳಿದ ವಿಟ್ಲ ಠಾಣಾ ಪೊಲೀಸ್ ಉಪನಿರೀಕ್ಷಕ ರಾಮಕೃಷ್ಣ ಅವರ ತಂಡ ದಾಳಿ ಮಾಡಿದ್ದು ಬೋಳಿಯಾರ್ ನಿವಾಸಿ ಲತೇಶ್ ಕುಮಾರ್ (37), ಮಂಚಿ ನಿವಾಸಿ ಸುರೇಶ್ ನಾಯ್ಕ್ ಕೆ.(63), ವಿಟ್ಲಪಡ್ನೂರು ನಿವಾಸಿ ದಯಾನಂದ (40) ಎಂಬವರನ್ನು ವಶಕ್ಕೆ ಪಡೆದು ಜೂಜಾಟಕ್ಕೆ ಬಳಸಿದ ರೂ 1,550 ನಗದು, 3 ಅಂಕದ ಕೋಳಿಗಳು ಹಾಗೂ ಇತರ …

Read More »

ಕಟ್ಟಿ ಹಾಕಿ ಲೈಂಗಿಕ ಕಿರುಕುಳ: ಕೇಸು

ಕಾಸರಗೋಡು: ಯುವತಿಯನ್ನು ವಸತಿ ಗೃಹಕ್ಕೆ ಕರೆದೊಯ್ದು ಕಟ್ಟಿ ಹಾಕಿ ಲೈಂಗಿಕ ಕಿರುಕುಳ ನೀಡಿದ ಆರೋಪದಡಿ ಯುವಕನ ವಿರುದ್ಧ ಕಾಸರಗೋಡು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ನಗರ ಸಮೀಪದ ಪಂಚಾಯತ್‌ ವ್ಯಾಪ್ತಿಯ ಯುವತಿಯೊಬ್ಬಳು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಾಗಿದ್ದು, ಆರೋಪಿಯು ಆಕೆಯನ್ನು ವಸತಿ ಗೃಹಕ್ಕೆ ಕರೆದೊಯ್ದು ಅಲ್ಲಿ ಕಟ್ಟಿ ಹಾಕಿ ಕಿರುಕುಳ ನೀಡಿದ್ದಾನೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಘಟನೆ ಬಳಿಕ ಯುವತಿ ಪೊಲೀಸರನ್ನು ಸಂಪರ್ಕಿಸಿ ದೂರು ನೀಡಿದ್ದಾಳೆ. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ …

Read More »