ಹಳಿಯಾಳ: ಮದ್ಯದ ಅಮಲಿನಲ್ಲಿ ಸಾರ್ವಜನಿಕ ಸ್ಥಳದಲ್ಲಿ ಗಲಾಟೆ ಮಾಡುತ್ತಿದ್ದ ರೌಡಿ ಶೀಟರ್ ಒಬ್ಬ, ಪರಿಸ್ಥಿತಿ ನಿಯಂತ್ರಿಸಲು ಬಂದ ಪೊಲೀಸರ ಮೇಲೆಯೇ ಹಲ್ಲೆ ನಡೆಸಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಹಳಿಯಾಳದಲ್ಲಿ ನಡೆದಿದೆ. ಆರೋಪಿ ಮಚ್ ಮಂಜ ಮೌರ್ಯ ಹೋಟೆಲ್ ಎದುರು ಸಾರ್ವಜನಿಕರಿಗೆ ತೊಂದರೆ ನೀಡುತ್ತಿದ್ದು, ಸ್ಥಳೀಯರೊಂದಿಗೆ ಜಗಳವಾಡಿ ಹಲ್ಲೆ ನಡೆಸಿದ್ದಾನೆ ಎನ್ನಲಾಗಿದೆ. ಮಾಹಿತಿ ತಿಳಿದು ಸ್ಥಳಕ್ಕಾಗಮಿಸಿದ ಪೊಲೀಸರ ಮಾತಿಗೂ ಕಿವಿಗೊಡದೆ ಉದ್ಧಟತನ ಪ್ರದರ್ಶಿಸಿದ್ದಾನೆ. ಕರ್ತವ್ಯದಲ್ಲಿದ್ದ ಪೊಲೀಸ್ ಸಿಬ್ಬಂದಿ ಮೇಲೆಯೂ ಹಲ್ಲೆ …
Read More »ರಹಸ್ಯ ಮದುವೆ: ಯುವತಿಯನ್ನು ಕೊಂದು ಆತ್ಮಹತ್ಯೆ ನಾಟಕವಾಡಿದ ಆಟೋ ಚಾಲಕ!
ಬೆಂಗಳೂರು: ರಹಸ್ಯವಾಗಿ ಮದುವೆಯಾಗಿದ್ದ ಪತ್ನಿಯ ನಿಶ್ಚಿತಾರ್ಥ ನಡೆಯಲಿದೆಯೆಂಬ ಮಾಹಿತಿ ತಿಳಿದ ಬಳಿಕ ಆಕೆಯನ್ನು ಕೊಲೆ ಮಾಡಿದ ಆರೋಪದಲ್ಲಿ ಆಟೋ ಚಾಲಕನನ್ನು ಬ್ಯಾಡರಹಳ್ಳಿ ಪೊಲೀಸರು ಬಂಧಿಸಿದ್ದಾರೆ. ಮೃತೆಯನ್ನು ಭವಾನಿ ಎಸ್. (33) ಎಂದು ಗುರುತಿಸಲಾಗಿದ್ದು, ಖಾಸಗಿ ಮೊಬೈಲ್ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದರು. ಆರೋಪಿ ಚಂದ್ರಶೇಖರ್ ಮತ್ತು ಭವಾನಿ ಒಂದು ವರ್ಷದ ಹಿಂದೆ ಕುಟುಂಬದವರಿಗೆ ತಿಳಿಯದಂತೆ ಮದುವೆಯಾಗಿದ್ದರು ಎನ್ನಲಾಗಿದೆ. ಇತ್ತೀಚೆಗೆ ಭವಾನಿಗೆ ಮತ್ತೊಂದು ಮದುವೆ ನಿಶ್ಚಯವಾಗುತ್ತಿದ್ದ ವಿಚಾರ ತಿಳಿದು ಕೋಪಗೊಂಡ ಚಂದ್ರಶೇಖರ್, ಆಕೆಯನ್ನು …
Read More »ತನ್ನದೇ ಇಲಾಖೆಯ ನಿವೃತ್ತ ನೌಕರನಿಂದ ಲಂಚ ಸ್ವೀಕಾರ !; ಹಣ ಪಡೆಯುವಾಗ ಲೋಕಾ ಬಲೆಗೆ ಬಿದ್ದ ಸಹಕಾರ ಕಚೇರಿಯ ಅಕ್ಕಮ್ಮ
ಹಾವೇರಿ: ಇತ್ತೀಚೆಗೆ ನಿವೃತ್ತಿ ಹೊಂದಿದ ತನ್ನದೇ ಇಲಾಖೆಯ, ತನ್ನದೇ ಕಚೇರಿಯ ನಿವೃತ್ತ ನೌಕರನ ಗುಂಪು ವಿಮೆ ಮೊತ್ತದ ಬಿಲ್ ಮಾಡಿಕೊಡಲು ಕಚೇರಿಯಲ್ಲಿ ಸೋಮವಾರ 3,000 ರೂ. ಲಂಚ ಸ್ವೀಕರಿಸುತ್ತಿದ್ದ ಸಹಕಾರ ಸಂಘಗಳ ಉಪನಿಬಂಧಕರ ಕಚೇರಿ ದ್ವಿತೀಯ ದರ್ಜೆ ಸಹಾಯಕಿ ಅಕ್ಕಮ್ಮ ಎನ್.ಬಿದರೇರ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಇಲ್ಲಿನ ಜಿಲ್ಲಾಡಳಿತ ಭವನದ ಸಹಕಾರ ಸಂಘಗಳ ಉಪನಿಬಂಧಕರ ಕಚೇರಿಯ ಪ್ರಥಮ ದರ್ಜೆ ಸಹಾಯಕ ಮಹದೇವ ಹನುಮಂತಪ್ಪ ಜೇಕಿನಕಟ್ಟಿ ಮೇ 31ರಂದು ಸೇವೆಯಿಂದ …
Read More »ವಿಮಾ ಹಣಕ್ಕಾಗಿ ಪತಿಯ ಹತ್ಯೆ: ಪತ್ನಿ ಸಹಿತ 9 ಆರೋಪಿಗಳ ಬಂಧನ
ಬೆಳಗಾವಿ ಜಿಲ್ಲೆಯ ಘೋಡಗೇರಿ ಗ್ರಾಮದ ಮಾಜಿ ಸೈನಿಕ ಸಂದೀಪ್ ಮಂಜರಗಿ ಹತ್ಯೆ ಪ್ರಕರಣವನ್ನು ಪೊಲೀಸರು ಭೇದಿಸಿದ್ದಾರೆ. 2 ಕೋಟಿ ರೂ. ವಿಮಾ ಹಣ ಪಡೆಯುವ ಉದ್ದೇಶದಿಂದ ಪತ್ನಿ ಹಾಗೂ ಆಕೆಯ ಪ್ರಿಯಕರ ಸೇರಿ ಕೊಲೆ ನಡೆಸಿರುವ ಆರೋಪ ಕೇಳಿಬಂದಿದೆ. ಅಪಘಾತದ ಬಳಿಕ ಆಸ್ಪತ್ರೆಗೆ ದಾಖಲಾಗಿದ್ದ ಸಂದೀಪ್ ಅವರಿಗೆ ವಿಷ ನೀಡಿ ಹತ್ಯೆ ಮಾಡಲಾಗಿದ್ದು, ಬಳಿಕ ಹೃದಯಾಘಾತದಿಂದ ಮೃತಪಟ್ಟಿದ್ದಾರೆ ಎಂದು ಬಿಂಬಿಸಲು ಯತ್ನಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಪತ್ನಿ …
Read More »ಉಡುಪಿ ನಗರದಲ್ಲಿ ಚಾಕು ಬೀಸಿ ಬಾಲಕಿಯ ರಂಪಾಟ!
ಉಡುಪಿಯ ಬನ್ನಂಜೆ ಸರ್ಕಾರಿ ಬಸ್ ನಿಲ್ದಾಣದಲ್ಲಿ ಮಾನಸಿಕ ಖಿನ್ನತೆಗೆ ಒಳಗಾಗಿದ್ದ 17 ವರ್ಷದ ಬಾಲಕಿಯನ್ನು ರಕ್ಷಿಸಲು ಮುಂದಾದ ಸಮಾಜ ಸೇವಕ ವಿಶು ಶೆಟ್ಟಿ ಅಂಬಲಪಾಡಿ ಮೇಲೆ ಚಾಕು ಹಿಡಿದು ದಾಳಿ ನಡೆಸಿದ ಘಟನೆ ಸೋಮವಾರ ನಡೆದಿದೆ. ವಿಶು ಶೆಟ್ಟಿ ಯಾವುದೇ ಗಾಯಗಳಾಗದೇ ಅಪಾಯದಿಂದ ಪಾರಾಗಿದ್ದಾರೆ. ಉತ್ತರ ಕನ್ನಡ ಮೂಲದ ಬಾಲಕಿ ಮನೆಯಿಂದ ಹೊರಟು ಉಡುಪಿಗೆ ಬಂದಿದ್ದಳು. ಮಾಹಿತಿ ಪಡೆದ ವಿಶು ಶೆಟ್ಟಿ, ಪೊಲೀಸರು ಹಾಗೂ ಮಕ್ಕಳ ರಕ್ಷಣಾ ಇಲಾಖೆಯ ಸಿಬ್ಬಂದಿಯ …
Read More »ಮೈಸೂರು ರೆಸ್ಟೋ ಪಬ್ನಲ್ಲಿ ಸಿಲಿಂಡರ್ ಬ್ಲಾಸ್ಟ್, ಮೈ ಪೂರ್ತಿ ಸುಟ್ಟ ಗಾಯದಿಂದ ಆಸ್ಪತ್ರೆ ಸೇರಿದ ಸ್ಯಾಂಡಲ್ವುಡ್ ಹಿರೋ!
ಮೈಸೂರಿನ ದಟ್ಟಗಳ್ಳಿ ಸಮೀಪ ನಟ ಪ್ರೀತಂ ಪುಮೀತ್ ಮಾಲೀಕತ್ವದ ‘ಫಾಕ್ಸ್ ಡೆನ್’ ರೆಸ್ಟೋ ಪಬ್ನಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಭೀಕರ ಅಗ್ನಿ ಅವಘಡ ಸಂಭವಿಸಿದೆ. ಘಟನೆಯಲ್ಲಿ ಇಬ್ಬರು ಮೃತಪಟ್ಟಿದ್ದು, ನಟ ಪ್ರೀತಂ ಸೇರಿದಂತೆ ಐವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಕಿಚನ್ ಭಾಗದಲ್ಲಿ ಸಂಭವಿಸಿದ ಸಿಲಿಂಡರ್ ಸ್ಫೋಟದಿಂದ ಕ್ಷಣಾರ್ಧದಲ್ಲಿ ಪಬ್ಗೆ ಬೆಂಕಿ ವ್ಯಾಪಿಸಿದೆ. ಬೆಂಕಿಯ ಕೆನ್ನಾಲಿಗೆಗೆ ಸಿಲುಕಿ ಸಾಹಿನ್ (26) ಮತ್ತು ಪ್ರಕಾಶ್ (24) ಮೃತಪಟ್ಟಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. …
Read More »ನಿಂತಿದ್ದ ಲಾರಿಗೆ ಕಾರು ಡಿಕ್ಕಿ – ನಿವೃತ್ತ ಉಪನ್ಯಾಸಕ ಸಾವು, ಐವರಿಗೆ ಗಾಯ
ರಾಯಚೂರು: ರಸ್ತೆಬದಿ ನಿಂತಿದ್ದ ಲಾರಿಗೆ ಹಿಂದಿನಿಂದ ಕಾರು ಡಿಕ್ಕಿ ಹೊಡೆದ ಪರಿಣಾಮ ನಿವೃತ್ತ ಉಪನ್ಯಾಸಕ ಸಾವನ್ನಪ್ಪಿದ್ದು, ಐವರು ಗಂಭೀರ ಗಾಯಗೊಂಡಿರುವ ಘಟನೆ ರಾಯಚೂರು ಗಡಿ ತೆಲಂಗಾಣದ ಗುಡೆಬಲ್ಲೂರು ಗ್ರಾಮದ ಬಳಿ ನಡೆದಿದೆ. ಟೈಯರ್ ರೋಡ್ನಲ್ಲಿ ಅಪಘಾತ ಸಂಭವಿಸಿದ್ದು, ರಾಯಚೂರಿನ ನಿವೃತ್ತ ಉಪನ್ಯಾಸಕ ಶೇಖರಪ್ಪ ಗೌಡ (70) ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ. ಯಾದಗಿರಿಯಲ್ಲಿನ ಮನೆ ದೇವರು ಕಾಳಬೆಳಗುಂದಿ ಬನದೇಶ್ವರ ದೇವಾಲಯಕ್ಕೆ ತೆರಳಿದ್ದ ಕುಟುಂಬ ವಾಪಸ್ ರಾಯಚೂರಿಗೆ ಮರಳುವಾಗ ಅಪಘಾತ ನಡೆದಿದೆ. ಅಪಘಾತದಲ್ಲಿ ಶೇಖರಪ್ಪ …
Read More »13 ವರ್ಷದ ಬಾಲಕಿಯನ್ನು ಕಾರ್ನಲ್ಲಿ ಕಿಡ್ನ್ಯಾಪ್ ಮಾಡಿ ಗ್ಯಾಂಗ್ ರೇಪ್! ಬೆಚ್ಚಿ ಬಿದ್ದ ಪೊಲೀಸರು
ಬಿಹಾರದ ಭೋಜ್ಪುರ ಜಿಲ್ಲೆಯಲ್ಲಿ 13 ವರ್ಷದ 7ನೇ ತರಗತಿ ವಿದ್ಯಾರ್ಥಿನಿಯನ್ನು ಅಪಹರಿಸಿ ಸಾಮೂಹಿಕ ಅತ್ಯಾಚಾರ ಎಸಗಿದ ಆಘಾತಕಾರಿ ಘಟನೆ ನಡೆದಿದೆ. ಮಾರುಕಟ್ಟೆಯಿಂದ ಮನೆಗೆ ಮರಳಲು ಆಟೋಗಾಗಿ ಕಾಯುತ್ತಿದ್ದ ಬಾಲಕಿಯನ್ನು ನಾಲ್ವರು ಯುವಕರು ಎಸ್ಯುವಿಯಲ್ಲಿ ಕರೆದೊಯ್ದು ಕಾಡು ಪ್ರದೇಶದಲ್ಲಿ ಕೃತ್ಯ ಎಸಗಿದ್ದಾರೆ ಎಂದು ಆರೋಪಿಸಲಾಗಿದೆ. ಕೃತ್ಯದ ಬಳಿಕ ಪ್ರಜ್ಞೆ ತಪ್ಪಿದ್ದ ಬಾಲಕಿ ಮನೆ ತಲುಪಿ ಕುಟುಂಬಸ್ಥರಿಗೆ ವಿಷಯ ತಿಳಿಸಿದ್ದು, ಅವರ ದೂರಿನ ಮೇರೆಗೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಸಂತ್ರಸ್ತೆಯನ್ನು ಆಸ್ಪತ್ರೆಗೆ ದಾಖಲಿಸಿ …
Read More »ದಾವಣಗೆರೆಯಲ್ಲಿ ಭೀಕರ ಅಗ್ನಿ ದುರಂತ; ಒಂದರ ಬೆನ್ನಲ್ಲೇ 18 ಸಿಲಿಂಡರ್ ಸ್ಫೋಟ, ಇಬ್ಬರಿಗೆ ಗಂಭೀರ ಗಾಯ!
ದಾವಣಗೆರೆ ತಾಲೂಕಿನ ಹೆಚ್. ಕಲ್ಪನಹಳ್ಳಿ ಗ್ರಾಮದ ಹೊರವಲಯದಲ್ಲಿರುವ ಗೋದಾಮೊಂದರಲ್ಲಿ ಭಾನುವಾರ ಭಾರೀ ಅಗ್ನಿ ಅವಘಡ ಸಂಭವಿಸಿ, 18ಕ್ಕೂ ಹೆಚ್ಚು ಗ್ಯಾಸ್ ಸಿಲಿಂಡರ್ಗಳು ಸರಣಿ ಸ್ಫೋಟಗೊಂಡಿವೆ. ಸ್ಫೋಟದ ತೀವ್ರತೆಗೆ ಸಿಲಿಂಡರ್ಗಳು ನೂರಾರು ಅಡಿ ಎತ್ತರಕ್ಕೆ ಚಿಮ್ಮಿದ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ. ಅವಘಡದಲ್ಲಿ ಅನಿಲ್ ಸೇರಿದಂತೆ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಗೋದಾಮು ಜನವಸತಿ ಪ್ರದೇಶದಿಂದ ದೂರದ ಅಡಿಕೆ ತೋಟದಲ್ಲಿದ್ದ ಕಾರಣ ದೊಡ್ಡ ಪ್ರಮಾಣದ …
Read More »ಪಿಕಪ್ ವಾಹನ ಪಲ್ಟಿ- ಅಕ್ರಮ ಜಾನುವಾರು ಸಾಗಾಟ ಬಯಲು
ಸುಬ್ರಹ್ಮಣ್ಯದಲ್ಲಿ ಪಿಕಪ್ ವಾಹನ ಪಲ್ಟಿಯಾದ ಪರಿಣಾಮ ಅಕ್ರಮ ಜಾನುವಾರು ಸಾಗಣೆ ಪ್ರಕರಣ ಬೆಳಕಿಗೆ ಬಂದಿದೆ. ಅರಕಲಗೂಡು ನಿವಾಸಿಗಳಾದ ಚಂದ್ರಶೇಖರ್ ಮತ್ತು ಮೋಹನ್ ವಿರುದ್ಧ ಪ್ರಕರಣ ದಾಖಲಾಗಿದೆ. ಜೂನ್ 13ರ ರಾತ್ರಿ ಎರಡು ಹೋರಿಗಳನ್ನು ಪಿಕಪ್ ವಾಹನದಲ್ಲಿ ಸಾಗಿಸುತ್ತಿದ್ದ ವೇಳೆ ಕುಲ್ಕುಂದ ಸಮೀಪ ತಿರುವಿನಲ್ಲಿ ಚಾಲಕ ಹಠಾತ್ ಬ್ರೇಕ್ ಹಾಕಿದ ಪರಿಣಾಮ ವಾಹನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಈ ವೇಳೆ ಹೋರಿಗಳ ಕಾಲುಗಳನ್ನು ಕಟ್ಟಿ ಸಾಗಿಸಲಾಗುತ್ತಿದ್ದ ವಿಚಾರ ಬಹಿರಂಗವಾಗಿದೆ. ಘಟನೆ ಸಂಬಂಧ …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





