Breaking News

BigTv News

ದೆಹಲಿಯ ಮತ್ತೊಂದು ರೆಸ್ಟೋರೆಂಟ್‌ನಲ್ಲಿ ಭಾರೀ ಬೆಂಕಿ; ಏಕಾಏಕಿ ಸ್ಫೋಟಗೊಂಡ ಮೂರು ಸಿಲಿಂಡರ್‌ಗಳು

ದೆಹಲಿಯ ಕಲ್ಕಾಜಿ ಪ್ರದೇಶದಲ್ಲಿರುವ ಪಂಜಾಬಿ ತಡ್ಕಾ ರೆಸ್ಟೋರೆಂಟ್‌ನಲ್ಲಿ ಭಾನುವಾರ ಮುಂಜಾನೆ ಭಾರೀ ಬೆಂಕಿ ಅವಘಡ ಸಂಭವಿಸಿದ್ದು, ಮೂರು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗಳು ಸ್ಫೋಟಗೊಂಡ ಪರಿಣಾಮ ಸಂಪೂರ್ಣ ಕಟ್ಟಡ ಬೆಂಕಿಗೆ ಆಹುತಿಯಾಗಿದೆ. ಗೋವಿಂದಪುರಿ ಫ್ಲೈಓವರ್ ಸಮೀಪ ಬೆಳಗ್ಗೆ 4.45ರ ಸುಮಾರಿಗೆ ಕಾಣಿಸಿಕೊಂಡ ಬೆಂಕಿ ನೆಲಮಾಳಿಗೆಯಿಂದ ಮೂರನೇ ಮಹಡಿ ಹಾಗೂ ಟೆರೇಸ್ ಮೇಲಿನ ತಾತ್ಕಾಲಿಕ ನಿರ್ಮಾಣಗಳವರೆಗೆ ವ್ಯಾಪಿಸಿತು. ಮಾಹಿತಿ ತಿಳಿದ ತಕ್ಷಣ ಅಗ್ನಿಶಾಮಕ ದಳದ ಆರು ವಾಹನಗಳು ಸ್ಥಳಕ್ಕೆ ಧಾವಿಸಿ ಬೆಂಕಿಯನ್ನು ನಿಯಂತ್ರಣಕ್ಕೆ …

Read More »

ಹೂಡಿಕೆ ನೆಪದಲ್ಲಿ ವ್ಯಕ್ತಿಗೆ 55.88 ಲಕ್ಷ ರೂ. ವಂಚನೆ

ಬೆಂಗಳೂರಿನಲ್ಲಿ ಹೂಡಿಕೆ ಮೇಲೆ ಅಧಿಕ ಲಾಭ ನೀಡುವುದಾಗಿ ನಂಬಿಸಿದ ಸೈಬರ್‌ ಕಳ್ಳರು ವ್ಯಕ್ತಿಯೊಬ್ಬರಿಗೆ 55.88 ಲಕ್ಷ ರೂ. ವಂಚಿಸಿರುವ ಘಟನೆ ನಡೆದಿದೆ. ಮಹದೇವಪುರ ಸಮೀಪದ ನಾರಾಯಣಪುರ ನಿವಾಸಿ ಪಿ.ಕೆ. ಪಟೇಲ್‌ ವಂಚನೆಗೆ ಒಳಗಾದವರು. ವಾಟ್ಸ್‌ಆಯಪ್‌ ಗ್ರೂಪ್‌ಗೆ ಸೇರಿಸಿ ಟ್ರೇಡಿಂಗ್‌ ಮತ್ತು ಹೂಡಿಕೆ ಕುರಿತು ನಂಬಿಕೆ ಮೂಡಿಸಿದ ಆರೋಪಿಗಳು, ಆ್ಯಪ್‌ ಡೌನ್‌ಲೋಡ್‌ ಮಾಡಿಸಿ ಆರಂಭದಲ್ಲಿ ಹೂಡಿಕೆ ಮಾಡಲು ಪ್ರೇರೇಪಿಸಿದ್ದಾರೆ. ಬಳಿಕ ವಿವಿಧ ಬ್ಯಾಂಕ್‌ ಖಾತೆಗಳಿಗೆ ಒಟ್ಟು 55.88 ಲಕ್ಷ ರೂ. ವರ್ಗಾವಣೆ …

Read More »

ಧಾರವಾಡ ಜೈಲಿನಲ್ಲಿ ಕೈದಿಗಳಿಂದ ಗೂಂಡಾಗಿರಿ – ವಾರ್ಡನ್ ಮೇಲೆ ಮಾರಣಾಂತಿಕ ಹಲ್ಲೆ!

ಧಾರವಾಡ ಕೇಂದ್ರ ಕಾರಾಗೃಹದಲ್ಲಿ ವಿಚಾರಾಧೀನ ಕೈದಿಗಳು ಜೈಲು ವಾರ್ಡನ್ ಮೇಲೆ ಹಲ್ಲೆ ನಡೆಸಿದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಜೈಲಿನ ಆವರಣದಲ್ಲಿ ಮುಕ್ತವಾಗಿ ಓಡಾಡಲು ಅವಕಾಶ ನೀಡದ ಹಿನ್ನೆಲೆಯಲ್ಲಿ ಕೈದಿಗಳು ಸಿಬ್ಬಂದಿಯೊಂದಿಗೆ ವಾಗ್ವಾದ ನಡೆಸಿ ಹಲ್ಲೆ ನಡೆಸಿದ್ದಾರೆ. ಶಿವಮೊಗ್ಗದ ಹರ್ಷಾ ಕೊಲೆ ಪ್ರಕರಣದ ಆರೋಪಿಗಳಾದ ರಿಹಾನ್, ಕಾಶಿಫ್ ಹಾಗೂ ಡ್ರಗ್ಸ್ ಪ್ರಕರಣದ ಆರೋಪಿ ಫೈಜಲ್ ಜೈಲು ಸೆಲ್‌ನಿಂದ ಹೊರಬಂದು ವಾರ್ಡನ್ ಕಿರಣ್ ಘೋರ್ಪಡೆ ಮೇಲೆ ಲಾಠಿಯಿಂದ ಹಲ್ಲೆ ನಡೆಸಿದ್ದಾರೆ. ಘಟನೆಯಲ್ಲಿ …

Read More »

ಮನೆಗೆ ನುಗ್ಗಿ ಮಹಿಳೆಯರ ಮೇಲೆ ಹಲ್ಲೆ

ಚಿಂತಾಮಣಿ ತಾಲೂಕಿನ ಸಂತೇಕಲ್ಲಹಳ್ಳಿಯಲ್ಲಿ ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಮಹಿಳೆ ಹಾಗೂ ಆಕೆಯ ತಾಯಿ ಮೇಲೆ ಹಲ್ಲೆ ನಡೆಸಿ ಜೀವ ಬೆದರಿಕೆ ಹಾಕಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಲಾವಣ್ಯ (32) ಮತ್ತು ಅವರ ತಾಯಿ ವೆಂಕಟರತ್ನಮ್ಮ ಗಾಯಗೊಂಡಿದ್ದು, ಚಿಂತಾಮಣಿ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದಾರೆ. ಈ ಸಂಬಂಧ ರಾಣಿ, ನೀಲಜಾ, ನಿತಿನ್ ರಾಜ್, ಶಶಿಕಲಾ ಹಾಗೂ ಪ್ರಿಯಾಂಕಾ ವಿರುದ್ಧ ಚಿಂತಾಮಣಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ವಿಚ್ಛೇದನ ಪ್ರಕರಣದ …

Read More »

ನರಸಿಂಹ ಕೊಲೆ ಪ್ರಕರಣದ ಆರೋಪಿ ಕಾಲಿಗೆ ಪೊಲೀಸರ ಗುಂಡೇಟು

ಶಿವಮೊಗ್ಗದಲ್ಲಿ ರೌಡಿಶೀಟರ್ ನರಸಿಂಹ ಕೊಲೆ ಪ್ರಕರಣದ ಆರೋಪಿ ಮಧುಗೆ ಪೊಲೀಸರು ಗುಂಡೇಟು ಹೊಡೆದ ಘಟನೆ ನಡೆದಿದೆ. ಆರೋಪಿಯನ್ನು ಮಹಜರಿಗೆ ಕರೆದೊಯ್ಯುವ ವೇಳೆ ಆತ ಪೊಲೀಸ್ ಸಿಬ್ಬಂದಿ ಅಂಜನಪ್ಪ ಮೇಲೆ ಹಲ್ಲೆ ನಡೆಸಿದ್ದಾನೆ ಎನ್ನಲಾಗಿದೆ. ಇನ್ಸ್‌ಪೆಕ್ಟರ್ ಹರೀಶ್ ಪಟೇಲ್ ಎಚ್ಚರಿಕೆ ನೀಡಿದರೂ ಹಾಗೂ ಏರ್ ಫೈರ್ ಮಾಡಿದರೂ ಮಧು ಶಾಂತವಾಗದ ಹಿನ್ನೆಲೆಯಲ್ಲಿ ಆತನ ಕಾಲಿಗೆ ಗುಂಡು ಹಾರಿಸಲಾಗಿದೆ. ಗಾಯಗೊಂಡ ಮಧು ಹಾಗೂ ಪೊಲೀಸ್ ಸಿಬ್ಬಂದಿಯನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. …

Read More »

ಲವ್ ಜಿಹಾದ್’ ಪ್ರಕರಣ ಮುಚ್ಚಿಹಾಕಲು ಯತ್ನಿಸಿದ ಪೊಲೀಸ್ ಇನ್ಸ್‌ಪೆಕ್ಟರ್ ಅಮಾನತು!

ಧಾರವಾಡ ತಾಲೂಕಿನ ಗರಗ ಗ್ರಾಮದಲ್ಲಿ ಅಪ್ರಾಪ್ತ ಬಾಲಕಿಯ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ತವ್ಯ ಲೋಪದ ಆರೋಪದ ಮೇಲೆ ಗರಗ ಪೊಲೀಸ್ ಇನ್ಸ್‌ಪೆಕ್ಟರ್ ಶಿವಯೋಗಿ ಲೋಹಾರ್ ಅವರನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಗುಂಜನ್ ಆರ್ಯ ಅಮಾನತುಗೊಳಿಸಿದ್ದಾರೆ. ಪ್ರಕರಣದಲ್ಲಿ ಸೂಕ್ತ ಕ್ರಮ ಕೈಗೊಳ್ಳದೆ ಮುಚ್ಚಿಹಾಕಲು ಯತ್ನಿಸಿದ್ದರೆಂಬ ಆರೋಪ ಕೇಳಿಬಂದಿತ್ತು. ಈ ಪ್ರಕರಣವನ್ನು ‘ಲವ್ ಜಿಹಾದ್’ ಎಂದು ಆರೋಪಿಸಿ ಬಜರಂಗದಳ, ವಿಶ್ವ ಹಿಂದೂ ಪರಿಷತ್ ಹಾಗೂ ಶ್ರೀರಾಮಸೇನೆ ಸೇರಿದಂತೆ ವಿವಿಧ ಹಿಂದೂ ಸಂಘಟನೆಗಳು ಜೂನ್ …

Read More »

ಬಳ್ಳಾರಿಯಲ್ಲಿ ವಿವಾಹಿತ ಮಹಿಳೆಗೆ ಅಶ್ಲೀಲ ಮೆಸೇಜ್ ಮಾಡಿದಕ್ಕೆ, ಕುತ್ತಿಗೆಗೆ ಹಗ್ಗ ಬಿಗಿದು ಯುವಕನ ಹತ್ಯೆ!

ವಿವಾಹಿತ ಮಹಿಳೆಗೆ ಅಶ್ಲೀಲ ಸಂದೇಶ ಕಳುಹಿಸಿ ಕಿರುಕುಳ ನೀಡುತ್ತಿದ್ದ ಯುವಕನನ್ನು ಮಹಿಳೆ, ಆಕೆಯ ಪತಿ ಹಾಗೂ ಸಹೋದರ ಸೇರಿ ಕೊಲೆ ಮಾಡಿರುವ ಘಟನೆ ಬೆಳಕಿಗೆ ಬಂದಿದೆ. ಬಸವನಗೌಡನ್ ಕೊಲೆಯಾದ ಯುವಕನಾಗಿದ್ದು, ಶ್ವೇತಾ, ಆಕೆಯ ಪತಿ ದೊಡ್ಡ ಬಸವನಗೌಡ ಹಾಗೂ ಸಹೋದರ ವಿಜಯ್ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಎರಡು ವರ್ಷಗಳ ಹಿಂದೆ ನಡೆದ ಮದುವೆ ಕಾರ್ಯಕ್ರಮದಲ್ಲಿ ಶ್ವೇತಾಗೆ ಪರಿಚಯವಾಗಿದ್ದ ಬಸವನಗೌಡನ್, ಬಳಿಕ ನಿರಂತರವಾಗಿ ಅಶ್ಲೀಲ ಸಂದೇಶ ಕಳುಹಿಸಿ ಕಿರುಕುಳ ನೀಡುತ್ತಿದ್ದ ಎನ್ನಲಾಗಿದೆ. …

Read More »

ಕುಡಿದ ಮತ್ತಿನಲ್ಲಿ ಹಲ್ಲೆ: ಮುಳಬಾಗಿಲು ವ್ಯಕ್ತಿ ಸೆರೆ, ಇತರರಿಗಾಗಿ ಬಲೆ

ಕುಡಿದ ಅಮಲಿನಲ್ಲಿ ಬಾರ್ ಕ್ಯಾಷಿಯರ್ ಮೇಲೆ ಹಲ್ಲೆ ನಡೆಸಿ, ಕಾರಿನ ಗಾಜುಗಳನ್ನು ಒಡೆದು ಹಾಕಿದ ಆರೋಪದ ಮೇರೆಗೆ ಹೇಮಂತ್ (30) ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಈ ಕುರಿತು ನಂಗಲಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬಾರ್‌ನಲ್ಲಿ ಮದ್ಯಪಾನ ಮಾಡುತ್ತಿದ್ದ ಹೇಮಂತ್, ಪಕ್ಕದಲ್ಲಿದ್ದ ವ್ಯಕ್ತಿಯೊಂದಿಗೆ ಜಗಳವಾಡಿ ಹಲ್ಲೆ ನಡೆಸಿದ್ದಾನೆ. ಮಧ್ಯ ಪ್ರವೇಶಿಸಿದ ಕ್ಯಾಷಿಯರ್ ದೇವರಾಜ್ ಮೇಲೂ ಹಲ್ಲೆ ಮಾಡಿ, ಅವರ ಕಾರಿನ ಗಾಜುಗಳನ್ನು ಬಿಯರ್ ಬಾಟಲಿಯಿಂದ ಪುಡಿ ಮಾಡಿದ್ದಾನೆ ಎಂದು ಪೊಲೀಸರು …

Read More »

ಮದುವೆ ವಿಚಾರಕ್ಕೆ ಜಗಳ – ಪ್ರಿಯತಮನಿಂದ ಪ್ರೇಯಸಿಯ ಭೀಕರ ಹತ್ಯೆ!

ಬೆಂಗಳೂರಿನ ಬೆಳ್ಳಂದೂರಿನಲ್ಲಿ ಪ್ರೇಮ ಸಂಬಂಧ ದುರಂತ ಅಂತ್ಯ ಕಂಡಿದ್ದು, ಪ್ರಿಯಕರನೇ ತನ್ನ ಪ್ರೇಯಸಿಯನ್ನು ಚಾಕುವಿನಿಂದ ಇರಿದು ಹತ್ಯೆ ಮಾಡಿದ ಘಟನೆ ಮುಂಜಾನೆ ನಡೆದಿದೆ. ಸಿಕ್ಕಿಂ ಮೂಲದ ಐಪಿ ಹಂಗ್ಮಾ (22) ಮೃತ ಯುವತಿಯಾಗಿದ್ದು, ಫುರ್ಬಾ ಲೇಪ್ಸಾ ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇಬ್ಬರೂ ಪರಸ್ಪರ ಪ್ರೀತಿಸುತ್ತಿದ್ದು, ಮದುವೆ ವಿಚಾರವಾಗಿ ಅವರ ನಡುವೆ ಮಾತುಕತೆ ನಡೆಯುತ್ತಿತ್ತು. ಆದರೆ ಈಗಲೇ ಮದುವೆಯಾಗಲು ಯುವತಿ ನಿರಾಕರಿಸಿದ್ದರಿಂದ ಹಾಗೂ ಆಕೆಗೆ ಬೇರೆ ಸಂಬಂಧ ಇರಬಹುದೆಂಬ ಅನುಮಾನದಿಂದ …

Read More »

ಬೆಳಗಾವಿಯಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದ ಮಹಿಳೆಯ ಬಂಧನ: ತೆಲಂಗಾಣ ಮೂಲದ ಯುವತಿಯ ರಕ್ಷಣೆ

ಬೆಳಗಾವಿಯ ಟಿಳಕವಾಡಿ ಪೊಲೀಸ್ ಠಾಣಾ ವ್ಯಾಪ್ತಿಯ ಅಪಾರ್ಟ್‌ಮೆಂಟ್‌ವೊಂದರಲ್ಲಿ ವೇಶ್ಯಾವಾಟಿಕೆ ನಡೆಯುತ್ತಿದೆ ಎಂಬ ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿ, ಆರೋಪಿಯನ್ನು ಬಂಧಿಸಿ ಯುವತಿಯನ್ನು ರಕ್ಷಿಸಿದ್ದಾರೆ. ಆಯೇಶಾ ಶಬ್ಬಿರ್ ಶೇಖ್ ಅಲಿಯಾಸ್ ರೇಷ್ಮಾ ಅಂಕಲೆವಾಲೆ (31) ಬಂಧಿತ ಆರೋಪಿ. ತೆಲಂಗಾಣ ಮೂಲದ ಯುವತಿಯನ್ನು ಮನೆಯಲ್ಲಿ ಇರಿಸಿಕೊಂಡು, ಗಿರಾಕಿಗಳನ್ನು ಕರೆಸಿ ಅನೈತಿಕ ಚಟುವಟಿಕೆ ನಡೆಸುತ್ತಿದ್ದಳು ಎಂದು ಆರೋಪಿಸಲಾಗಿದೆ. ಸಿಪಿಐ ಪರಶುರಾಮ ಪೂಜೇರಿ ನೇತೃತ್ವದ ವಿಶೇಷ ತಂಡ ಕಾರ್ಯಾಚರಣೆ ನಡೆಸಿ ಯುವತಿಯನ್ನು ರಕ್ಷಿಸಿದ್ದು, …

Read More »