ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯಲ್ಲಿ ಮಹಿಳಾ ಸಿಬ್ಬಂದಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಡಿ ಔಷಧ ಉಗ್ರಾಣ ವಿಭಾಗದ ಮುಖ್ಯಸ್ಥ ಚಂದ್ರಶೇಖರ್ ವಿರುದ್ಧ ಪ್ರಕರಣ ದಾಖಲಾಗಿದೆ. ಕಿರುಕುಳ ಹಾಗೂ ಬೆದರಿಕೆಯಿಂದ ಬೇಸತ್ತ ಮಹಿಳೆ ಕೆಲಸಕ್ಕೆ ರಾಜೀನಾಮೆ ನೀಡಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಸಂತ್ರಸ್ತೆಯ ದೂರಿನ ಪ್ರಕಾರ, ಆರೋಪಿ ನಿರಂತರವಾಗಿ ಲೈಂಗಿಕ ಕಿರುಕುಳ ನೀಡುತ್ತಿದ್ದು, ವಿಷಯ ಬಹಿರಂಗಪಡಿಸಿದರೆ ಕೆಲಸದಿಂದ ವಜಾಗೊಳಿಸುವುದಾಗಿ ಬೆದರಿಕೆ ಹಾಕಿದ್ದ ಎನ್ನಲಾಗಿದೆ. ಇದರಿಂದ ಮಾನಸಿಕವಾಗಿ ನೊಂದ ಮಹಿಳೆ ಕೊನೆಗೆ …
Read More »ಹೆದ್ದಾರಿಯಲ್ಲಿ ವ್ಹೀಲಿಂಗ್: ಬೈಕ್ ವಶ, ಎಫ್ ಐಆರ್ ದಾಖಲು
ಶಿವಮೊಗ್ಗ – ಭದ್ರಾವತಿ ಮಾರ್ಗದ ಮಲವಗೊಪ್ಪದಲ್ಲಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಬೈಕ್ ವ್ಹೀಲಿಂಗ್ ಮಾಡುತ್ತಿದ್ದ ಯುವಕನ ಮೇಲೆ ಪೊಲೀಸರು ಎಫ್ಐಆರ್ ದಾಖಲಿಸಿ ಬೈಕ್ ವಶಪಡಿಸಿಕೊಂಡಿದ್ದಾರೆ. ಜೂ.12ರಂದು ಪೂರ್ವ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯ ಶಿವಮೊಗ್ಗ ನಗರದ ಮಲವಗೊಪ್ಪದ NH-69 ರಸ್ತೆಯಲ್ಲಿ KA-14-HE0823 ಸಂಖ್ಯೆಯ ಬೈಕ್ ವಾಹನದಲ್ಲಿ ವ್ಹೀಲಿಂಗ್ ಮಾಡುತ್ತಿದ್ದ ಬಗ್ಗೆ ಸಾರ್ವಜನಿಕರಿಂದ ದೂರು ಬಂದಿತ್ತು. ದೂರಿನ ಆಧಾರದ ಮೇಲೆ ಬೈಕ್ವಾಹನವನ್ನು ವಶಪಡಿಸಿಕೊಂಡು ಸವಾರನ ವಿರುದ್ಧ ಭಾರತೀಯ ನ್ಯಾಯ ಸಂಹಿತೆ (BNS) ಕಲಂ …
Read More »ಮಾದಕ ದ್ರವ್ಯ ಸೇವನೆ, ಮಾರಾಟ ಪ್ರಕರಣ: ಆರೋಪಿ ಬಂಧನ
ಮಣಿಪಾಲ: ಮಾದಕ ದ್ರವ್ಯ ಸೇವನೆ, ಮಾರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ 80 ಬಡಗಬೆಟ್ಟು ಗ್ರಾಮದ ರಾಜೀವನಗರ ಎರಡನೇ ಕ್ರಾಸ್ ನಿವಾಸಿ ಜಗದೀಶ ಪೂಜಾರಿ (33) ಎಂಬಾತನನ್ನು ಜೂ.12ರಂದು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿ ವಿರುದ್ಧ ಮಣಿಪಾಲ ಮತ್ತು ಸೆನ್ ಅಪರಾಧ ಪೊಲೀಸ್ ಠಾಣೆಗಳಲ್ಲಿ ಮಾದಕ ದ್ರವ್ಯ ಸಾಗಾಟ ಹಾಗೂ ಮಾರಾಟಕ್ಕೆ ಸಂಬಂಧಿಸಿ ಒಟ್ಟು 3 ಪ್ರಕರಣ ಹಾಗೂ ಮಾದಕ ದ್ರವ್ಯ ಸೇವನೆಗೆ ಸಂಬಂಧಿಸಿ 2 ಪ್ರಕರಣ ದಾಖಲಾಗಿವೆ. ಸಾಗಾಟ ಮತ್ತು ಮಾರಾಟಕ್ಕೆ …
Read More »10 ದಿನದಲ್ಲಿ ಪೂಜೆ ಮಾಡಿಸದಿದ್ರೆ ಸೋದರನ ಸಾವು: ಬೆಂಗಳೂರಿನ ಮಹಿಳಾ ಟೆಕ್ಕಿಗೆ ವಂಚನೆ
ಬೆಂಗಳೂರು ವೈಟ್ಫೀಲ್ಡ್ನಲ್ಲಿ ಪೂಜೆಯ ನೆಪದಲ್ಲಿ ಸುಮಾರು ₹7 ಲಕ್ಷ ಮೌಲ್ಯದ ಚಿನ್ನಾಭರಣ ದೋಚಿದ ಆರೋಪದಡಿ ನವೀದಾ ಸುಲ್ತಾನ ಮತ್ತು ಪರ್ವೇಜ್ ವಿರುದ್ಧ ಪ್ರಕರಣ ದಾಖಲಾಗಿದೆ. ದೂರುದಾರ ಮೋಯಿನ್ ಪಾಷಾ ಅವರ ಸಹೋದರನಿಗೆ ಗಂಡಾಂತರವಿದೆ ಎಂದು ನಂಬಿಸಿ, ಪೂಜೆಯ ವೇಳೆ 35 ಗ್ರಾಂ ಚಿನ್ನಾಭರಣವನ್ನು ಪೆಟ್ಟಿಗೆಯಲ್ಲಿ ಇಡಲು ಆರೋಪಿಗಳು ಸೂಚಿಸಿದ್ದರು. ಬಳಿಕ ಪೆಟ್ಟಿಗೆಯನ್ನು ಪರಿಶೀಲಿಸಿದಾಗ ಚಿನ್ನಾಭರಣ ನಾಪತ್ತೆಯಾಗಿರುವುದು ಗೊತ್ತಾಗಿದ್ದು, ಆರೋಪಿಗಳ ವಿರುದ್ಧ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
Read More »ಸ್ವರ್ಣೕೊದ್ಯಮಿಯನ್ನು ಅಡ್ಡಗಟ್ಟಿ ನಗ-ನಗದು ದರೋಡೆ: ಬಂಧನ
ಕುಂಬಳೆ: ಪಯ್ಯನ್ನೂರು ಎಡಾಟ್ನಲ್ಲಿ ಮಹಾರಾಷ್ಟ್ರ ನಿವಾಸಿ ಸ್ವರ್ಣೕೊದ್ಯಮಿಯ ಕಾರನ್ನು ಅಡ್ಡಗಟ್ಟಿ 55 ಲಕ್ಷ ರೂ. ನಗದು ಸಹಿತ ಚಿನ್ನಾಭರಣ ದರೋಡೆಗೈದ ಪ್ರಕರಣಕ್ಕೆ ಸಂಬಂಧಿಸಿ ಕಣ್ಣೂರು ಅಂಜಾಪೀಡಿಗ ನಿವಾಸಿ ಸನು ಯಾನೆ ಸಂತೋಷ್ನನ್ನು ಉಪ್ಪಳದಿಂದ ಪೊಲೀಸರು ಬಂಧಿಸಿದ್ದಾರೆ. ಆಕ್ರಮಣಕ್ಕೆ ಬಳಸಿದ ಕಾರನ್ನು ಪೊಲೀಸರು ಪತ್ತೆಹಚ್ಚಿ ವಶಪಡಿಸಿಕೊಂಡಿದ್ದಾರೆ. ಈ ತಂಡ ಬಾಡಿಗೆಗೆ ಪಡೆದಿದ್ದ ಇನ್ನೊಂದು ಕಾರನ್ನು ಕಣ್ಣೂರಿನ ಚೋಕ್ಲಿಯಲ್ಲಿ ಪತ್ತೆಹಚ್ಚಲಾಗಿದೆ. ಪಯ್ಯನ್ನೂರು ಡಿವೈಎಸ್ಪಿ ನೇತೃತ್ವದಲ್ಲಿ ತನಿಖೆ ನಡೆಯುತ್ತಿದೆ.
Read More »ಹಳೆ ಹುಬ್ಬಳ್ಳಿ ಸುಭಾಷ್ ನಗರದಲ್ಲಿ ಅನ್ನೋನ್ ಬಾಡಿ ಪತ್ತೆ..! ಗುರುತು ಸಿಕ್ಕಿಲ್ಲ – ಸಾರ್ವಜನಿಕರ ಸಹಕಾರಕ್ಕೆ ಪೊಲೀಸರ ಮನವಿ..
ಹುಬ್ಬಳ್ಳಿ: ಹಳೆ ಹುಬ್ಬಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ಸುಭಾಷ್ ನಗರದಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆಯಾಗಿರುವ ಘಟನೆ ಬೆಳಕಿಗೆ ಬಂದಿದೆ. ಮೃತ ವ್ಯಕ್ತಿಯ ಗುರುತು ಇನ್ನೂ ಪತ್ತೆಯಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.. ಮೃತ ವ್ಯಕ್ತಿಯನ್ನು ಯಾರಾದರೂ ನೋಡಿದ್ದರೆ ಅಥವಾ ಅವರ ಪರಿಚಯ ಇರುವವರು ಇದ್ದರೆ, ತಕ್ಷಣ ಹಳೆ ಹುಬ್ಬಳ್ಳಿ ಪೊಲೀಸ್ ಠಾಣೆಯನ್ನು ಸಂಪರ್ಕಿಸುವಂತೆ ಪೊಲೀಸರು ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ… ಈ ವ್ಯಕ್ತಿಯ ಬಗ್ಗೆ ಯಾವುದೇ ಮಾಹಿತಿ ಇದ್ದರೆ ಅಥವಾ ಕುಟುಂಬದವರ …
Read More »ಸಾಲ ಕೇಳಲು ಬಂದ ವೃದ್ಧೆ ಕೊಲೆ, ಇಬ್ಬರು ಆರೋಪಿಗಳ ಬಂಧನ
ಶ್ರೀನಿವಾಸಪುರ ತಾಲ್ಲೂಕಿನ ಲಕ್ಷ್ಮಿಪುರ ಗ್ರಾಮದ 75 ವರ್ಷದ ರೆಡ್ಡಮ್ಮ ಅವರನ್ನು ಸಾಲದ ಹಣ ಹಿಂದಿರುಗಿಸುವುದಾಗಿ ಕರೆಸಿ ಕೊಲೆ ಮಾಡಿರುವ ಘಟನೆ ಬೆಳಕಿಗೆ ಬಂದಿದೆ. ಆರೋಪಿಗಳು ಮೃತದೇಹವನ್ನು ಚಿಂತಾಮಣಿ ತಾಲ್ಲೂಕಿನ ಕೆಂಚಾರಪಲ್ಲಿ ಅರಣ್ಯ ಪ್ರದೇಶದಲ್ಲಿ ಬಿಸಾಡಿದ್ದರು. ಮೇ 26ರಂದು ಸಾಲದ ಹಣ ವಾಪಸ್ ಪಡೆಯಲು ತೆರಳಿದ್ದ ರೆಡ್ಡಮ್ಮ ಮನೆಗೆ ಮರಳದ ಹಿನ್ನೆಲೆಯಲ್ಲಿ ಅವರ ಪುತ್ರ ಜೂನ್ 1ರಂದು ರಾಯಲ್ಪಾಡ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ತನಿಖೆ ವೇಳೆ ಸಾಲ ಪಡೆದಿದ್ದವರ ಮೇಲೆಯೇ …
Read More »ಕಾಸರಗೋಡು| ಬಾಲಕಿಗೆ ಲೈಂಗಿಕ ದೌರ್ಜನ್ಯ ಆರೋಪ; ಮಹಿಳೆಯ ವಿರುದ್ಧ ಪೋಕ್ಸೊ ಪ್ರಕರಣ ದಾಖಲು
ಕೇರಳದ ಕಣ್ಣೂರು ಜಿಲ್ಲೆಯ ಪುಳಿಪ್ಪರಂಬದಲ್ಲಿ 16 ವರ್ಷದ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ 25 ವರ್ಷದ ಸ್ನೇಹ ಮೆರ್ಲಿನ್ ವಿರುದ್ಧ ಮೇಲ್ಪರಂಬ ಪೊಲೀಸ್ ಠಾಣೆಯಲ್ಲಿ ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಆರೋಪಿ ಬಾಲಕಿಯ ತಾಯಿಯ ಸ್ನೇಹಿತೆಯಾಗಿದ್ದು, ಮನೆಗೆ ಭೇಟಿ ನೀಡಿದ್ದ ವೇಳೆ ಘಟನೆ ನಡೆದಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಬಾಲಕಿ ಮನೆಯಲ್ಲಿ ಮಲಗಿದ್ದ ಸಂದರ್ಭ ಆರೋಪಿ ಲೈಂಗಿಕ ದೌರ್ಜನ್ಯ ಎಸಗಿದ್ದಾಳೆ ಎನ್ನಲಾಗಿದೆ. ಘಟನೆಯ ಬಳಿಕ ಭಯ ಮತ್ತು ಮಾನಸಿಕ …
Read More »ರೌಡಿಶೀಟರ್ ಹತ್ಯೆ ಮಾಡಿದ್ದ ಐವರು ಪೊಲೀಸರಿಗೆ ಶರಣು
ಶಿವಮೊಗ್ಗ ನಗರದ ಗಾಂಧಿಬಜಾರ್ನ ಕರಿದೇವರ ಕೇರಿಯಲ್ಲಿ ನಡೆದ ರೌಡಿಶೀಟರ್ ನರಸಿಂಹ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಆರೋಪಿಗಳು ಕೋಟೆ ಠಾಣೆ ಪೊಲೀಸರಿಗೆ ಶರಣಾಗಿದ್ದಾರೆ. ಅಂಬು ಅಲಿಯಾಸ್ ಅನಿಲ್, ಮಧು, ರವಿ, ಕತ್ತೆ ಕಾರ್ತಿಕ್ ಹಾಗೂ ಶಬರೀಶ್ ಶರಣಾದ ಆರೋಪಿಗಳಾಗಿದ್ದು, ಅವರನ್ನು ವಶಕ್ಕೆ ಪಡೆದ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ. ಪ್ರಕರಣದ ಗಂಭೀರತೆಯನ್ನು ಪರಿಗಣಿಸಿ ಹೆಚ್ಚುವರಿ ಪೊಲೀಸ್ ಅಧೀಕ್ಷಕ ಎ.ಜಿ. ಕಾರಿಯಪ್ಪ ನೇತೃತ್ವದಲ್ಲಿ ವಿಶೇಷ ತಂಡ ರಚಿಸಲಾಗಿತ್ತು. ಶುಕ್ರವಾರ ಸಂಜೆ …
Read More »ನಕ್ಸಲ್ ಫಂಡಿಂಗ್ ಆರೋಪ: 7 ಜನರ ವಿರುದ್ಧ ಎಫ್ಐಆರ್
ಭಾರತದಲ್ಲಿ ನಕ್ಸಲ್ ಚಟುವಟಿಕೆಗಳಿಗೆ ವಿದೇಶದಿಂದ ಅಕ್ರಮ ಹಣಕಾಸು ನೆರವು ನೀಡಿದ ಆರೋಪದಡಿ ಅಮೆರಿಕಾ ಮೂಲದ ಸಂಸ್ಥೆ ಸೇರಿದಂತೆ ಕರ್ನಾಟಕದ ನಾಲ್ವರು ಸೇರಿ ಏಳು ಜನರ ವಿರುದ್ಧ ಬೆಂಗಳೂರಿನ ಕೊತ್ತನೂರು ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಇಡಿ ನೀಡಿದ ದೂರಿನ ಮೇರೆಗೆ ಯುಎಪಿಎ ಹಾಗೂ ಬಿಎನ್ಎಸ್ ಕಾಯ್ದೆಯಡಿ ಒಳಸಂಚು, ವಂಚನೆ ಮತ್ತು ಸುಳ್ಳು ದಾಖಲೆ ಸೃಷ್ಟಿಸಿದ ಆರೋಪಗಳನ್ನು ದಾಖಲಿಸಲಾಗಿದೆ. ತನಿಖೆಯಲ್ಲಿ 95 ಕೋಟಿ ರೂಪಾಯಿಗೂ ಅಧಿಕ ವಿದೇಶಿ ಹಣದ ಅಕ್ರಮ ಬಳಕೆ …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





