Breaking News

BigTv News

ಸೀಟ್‌ ಬೆಲ್ಟ್ ಧರಿಸದ ಕಾರಣಕ್ಕೆ ಪೊಲೀಸರಿಂದ ಕಾರಿನ ಗಾಜು ಪುಡಿ ಪುಡಿ

ಕೋಲಾರ ಜಿಲ್ಲೆಯ ಮುಳಬಾಗಿಲು ಬಳಿ ಸೀಟ್‌ ಬೆಲ್ಟ್ ಧರಿಸದ ಕಾರಣ ಕಾರನ್ನು ತಡೆದ ವೇಳೆ ಚಾಲಕ ಮತ್ತು ಪೊಲೀಸರ ನಡುವೆ ವಾಗ್ವಾದ ನಡೆದಿದೆ. ಕಾರಿನ ಚಕ್ರ ಕಾನ್‌ಸ್ಟೆಬಲ್ ಕಾಲಿನ ಮೇಲೆ ಹತ್ತಿಸಿದ ಆರೋಪದ ಹಿನ್ನೆಲೆ, ಆಕ್ರೋಶಗೊಂಡ ಕಾನ್‌ಸ್ಟೆಬಲ್ ಲಾಠಿಯಿಂದ ಕಾರಿನ ಎರಡೂ ಬದಿಯ ಗಾಜುಗಳನ್ನು ಪುಡಿ ಮಾಡಿದ್ದಾರೆ. ದಂಡ ಪಾವತಿಸುವ ವಿಚಾರದಲ್ಲಿ ಉಂಟಾದ ಗೊಂದಲದಿಂದ ಘಟನೆ ಮತ್ತಷ್ಟು ತೀವ್ರಗೊಂಡಿದ್ದು, ಕಾರು ಚಾಲಕ ನ್ಯಾಯ ಸಿಗುವವರೆಗೂ ವಾಹನವನ್ನು ಹೆದ್ದಾರಿಗೆ ಅಡ್ಡಲಾಗಿ ನಿಲ್ಲಿಸಿದ್ದಾನೆ. …

Read More »

ರಾಯಚೂರಲ್ಲಿ ಆರ್‌ಟಿಒ ಸಿಬ್ಬಂದಿ ಗೂಂಡಾಗಿರಿ: 500 ರೂ. ಲಂಚ ಪಡೆಯುತ್ತಿದ್ದ ವಿಡಿಯೋ ಮಾಡಿದ್ದಕ್ಕೆ ಚಾಲಕನಿಗೆ ಧರ್ಮದೇಟು

ರಾಯಚೂರಿನ ಸಿರವಾರ ಬಳಿ ಆರ್‌ಟಿಒ ಸಿಬ್ಬಂದಿ ಲಾರಿಯನ್ನು ತಡೆದು, ದಾಖಲೆಗಳು ಸರಿಯಾಗಿದ್ದರೂ ₹500 ಲಂಚಕ್ಕೆ ಬೇಡಿಕೆ ಇಟ್ಟಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಲಂಚ ಪಡೆಯುವ ದೃಶ್ಯವನ್ನು ಚಿತ್ರೀಕರಿಸಲು ಯತ್ನಿಸಿದ ಚಾಲಕನ ಮೇಲೆ ಸಿಬ್ಬಂದಿ ಹಲ್ಲೆ ನಡೆಸಿ, ಮೊಬೈಲ್ ಹಾಗೂ ಲಾರಿ ಕೀಯನ್ನು ಕಸಿದುಕೊಂಡು ಪರಾರಿಯಾಗಿದ್ದಾರೆ ಎನ್ನಲಾಗಿದೆ. ಕೀ ಕಸಿದುಕೊಂಡ ಪರಿಣಾಮ ಲಾರಿ ಸೇತುವೆಯ ಮೇಲೆ ಅಡ್ಡವಾಗಿ ನಿಂತು ಸಂಚಾರಕ್ಕೆ ಅಡ್ಡಿಯಾಯಿತು. ಇದರಿಂದ ಲಿಂಗಸುಗೂರು–ರಾಯಚೂರು ರಸ್ತೆಯಲ್ಲಿ ಸುಮಾರು 3 ಗಂಟೆಗಳ ಕಾಲ …

Read More »

ಬಳ್ಳಾರಿ : ಟೋಲ್‌ಪ್ಲಾಜಾ ಬಳಿ ಲಾರಿಗಳ ಅಪಘಾತ, ಚಾಲಕ ಸಜೀವ ದಹನ

ಬಳ್ಳಾರಿ: ಆಂಧ್ರಪ್ರದೇಶದ ಜಾಜರಕಲ್ ಟೋಲ್‌ ಪ್ಲಾಜಾ ಬಳಿ ಎರಡು ಲಾರಿಗಳ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಲಾರಿ ಚಾಲಕ ಸಜೀವ ದಹನಗೊಂಡ ಘಟನೆ ಇಂದು ಬೆಳಗ್ಗೆ ನಡೆದಿದೆ. ಮೃತ ಚಾಲಕನನ್ನು ದೀಕ್ಷಿತ್ ಎಂದು ಗುರುತಿಸಲಾಗಿದೆ. ಮುಂದೆ ಸಾಗುತ್ತಿದ್ದ 12 ಚಕ್ರದ ಲಾರಿಗೆ ಹಿಂದಿನಿಂದ ಅತಿ ವೇಗವಾಗಿ ಬಂದ ಮತ್ತೊಂದು ಲಾರಿ ಡಿಕ್ಕಿ ಹೊಡೆದ ಪರಿಣಾಮ ಎರಡೂ ವಾಹನಗಳಿಗೆ ಬೆಂಕಿ ಹೊತ್ತಿಕೊಂಡಿದೆ. ಕ್ಯಾಬಿನ್‌ನಲ್ಲಿ ಸಿಲುಕಿದ್ದ ಚಾಲಕ ದೀಕ್ಷಿತ್ ಬೆಂಕಿಯಿಂದ ಹೊರಬರಲಾಗದೆ ಮೃತಪಟ್ಟಿದ್ದಾರೆ. …

Read More »

ಬೆಂಗಳೂರು | ಮನೆಗೆ ನುಗ್ಗಿ ಚಿನ್ನಾಭರಣ ಕಳ್ಳತನ: ಆರೋಪಿ ಸೆರೆ

ಬೆಂಗಳೂರು: ಎಚ್‌ಬಿಆರ್ ಲೇಔಟ್‌ನ ಮನೆಯಲ್ಲಿ ಬಾಲ್ಕನಿಯ ಮೂಲಕ ನುಗ್ಗಿ ಚಿನ್ನಾಭರಣ ಕಳ್ಳತನ ಮಾಡಿದ್ದ ಆರೋಪಿಯನ್ನು ಕೆ.ಜಿ ಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಟ್ಯಾನರಿ ಮುಖ್ಯರಸ್ತೆ ನಿವಾಸಿ ಮುದಾಸೀರ್ (25) ಬಂಧಿತನಾಗಿದ್ದು, ಆತನಿಂದ 34 ಗ್ರಾಂ ಚಿನ್ನದ ಆಭರಣ ಹಾಗೂ 172 ಗ್ರಾಂ ಬೆಳ್ಳಿಯ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಮೇ 29ರಂದು ಮನೆಯ ಎರಡನೇ ಮಹಡಿಯ ಬಾಲ್ಕನಿ ಬಾಗಿಲು ತೆರೆದಿದ್ದ ವೇಳೆ ಒಳನುಗ್ಗಿದ್ದ ಆರೋಪಿ, ಕಪಾಟಿನಲ್ಲಿದ್ದ ಆಭರಣಗಳನ್ನು ಕದ್ದೊಯ್ದಿದ್ದ. ಈ ಸಂಬಂಧ ಮನೆ …

Read More »

ಜೂಜಾಟ ಆಡುತ್ತಿದ್ದ 8 ಮಂದಿಯ ಬಂಧನ!

ಚಿಂತಾಮಣಿ: ಮಿಂಚಲಹಳ್ಳಿ ಗ್ರಾಮದ ಸರ್ಕಾರಿ ಕೆರೆ ಅಂಗಳದಲ್ಲಿ ಇಸ್ಪೀಟು ಜೂಜಾಟದಲ್ಲಿ ತೊಡಗಿದ್ದ 8 ಮಂದಿಯನ್ನು ಕೆಂಚಾರ್ಲಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ ₹25,560 ನಗದು ಹಾಗೂ 52 ಇಸ್ಪೀಟ್ ಎಲೆಗಳನ್ನು ವಶಪಡಿಸಿಕೊಳ್ಳಲಾಗಿದೆ. ಜೂಜಾಟ ನಡೆಯುತ್ತಿರುವ ಬಗ್ಗೆ ಖಚಿತ ಮಾಹಿತಿ ಮೇರೆಗೆ ಸಬ್ ಇನ್‌ಸ್ಪೆಕ್ಟರ್ ಶ್ಯಾಮಲ ನೇತೃತ್ವದ ಪೊಲೀಸ್ ತಂಡ ದಾಳಿ ನಡೆಸಿದೆ. ಈ ವೇಳೆ ಅಂದರ್-ಬಾಹರ್ ಆಡುತ್ತಿದ್ದವರು ಪೊಲೀಸರನ್ನು ಕಂಡು ಪರಾರಿಯಾಗಲು ಯತ್ನಿಸಿದರೂ, ಪೊಲೀಸರು ಸುತ್ತುವರಿದು ಬಂಧಿಸಿದ್ದಾರೆ. ಬಂಧಿತರು ಕೆಂಚಾರ್ಲಹಳ್ಳಿ …

Read More »

ಬೆಳ್ತಂಗಡಿ| ವಿವಾಹಿತ ಮಹಿಳೆಯ ಅತ್ಯಾಚಾರ ಪ್ರಕರಣ; ಅಂಚೆ ವಿತರಕ ಸುರೇಶ್ ಬಂಧನ

ಬೆಳ್ತಂಗಡಿ: ವಿವಾಹಿತ ಮಹಿಳೆಯ ಮೇಲೆ ಅತ್ಯಾಚಾರ ಎಸಗಿದ ಆರೋಪದಡಿ ಗ್ರಾಮೀಣ ಅಂಚೆ ವಿತರಕನನ್ನು ಧರ್ಮಸ್ಥಳ ಪೊಲೀಸರು ಬಂಧಿಸಿದ್ದಾರೆ. ಬೆಳ್ತಂಗಡಿ ತಾಲೂಕಿನ ಕಳೆಂಜ ಗ್ರಾಮದ ಕುತ್ತೋಡಿ ನಿವಾಸಿ ಹಾಗೂ ಅರಸಿಮಕ್ಕಿ ಗ್ರಾಮೀಣ ಅಂಚೆ ವಿತರಕ ಸುರೇಶ್ (35) ಬಂಧಿತ ಆರೋಪಿ. 2023ರ ಡಿಸೆಂಬರ್‌ನಲ್ಲಿ ನಡೆದಿದ್ದ ಘಟನೆಗೆ ಸಂಬಂಧಿಸಿ ಸಂತ್ರಸ್ತೆ ಜೂನ್ 7ರಂದು ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ದೂರಿನ ಆಧಾರದಲ್ಲಿ ತನಿಖೆ ನಡೆಸಿದ ಪೊಲೀಸರು ಜೂನ್ 8ರ ರಾತ್ರಿ ಆರೋಪಿಯನ್ನು …

Read More »

ಜಮೀನು ಸರ್ವೆ ಸ್ಕೆಚ್‌ಗೆ 20 ಸಾವಿರ ಲಂಚಕ್ಕೆ ಬೇಡಿಕೆ: ಲೋಕಾಯುಕ್ತ ಬಲೆಗೆ ಬಿದ್ದ ಮಹಿಳಾ ಸರ್ವೇಯರ್!

ಚಿಕ್ಕಮಗಳೂರು: ಜಮೀನಿನ ಸರ್ವೆ ಸ್ಕೆಚ್ ಮಾಡಿಕೊಡಲು ರೈತನಿಂದ ಲಂಚ ಪಡೆಯುತ್ತಿದ್ದ ಮಹಿಳಾ ಸರ್ವೇಯರ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಮೂಡಿಗೆರೆ ಎಡಿಎಲ್ಆರ್ ಕಚೇರಿಯ ಸರ್ವೇಯರ್ ಸುಮಾ ಅವರು ರೈತ ಮಂಜುನಾಥ್ ಅವರಿಂದ ₹20 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟಿದ್ದು, ಮೊದಲ ಕಂತಿನ ₹15 ಸಾವಿರ ಸ್ವೀಕರಿಸುತ್ತಿದ್ದ ವೇಳೆ ಅಧಿಕಾರಿಗಳು ಬಂಧಿಸಿದ್ದಾರೆ. ರೈತ ಮಂಜುನಾಥ್ ಲೋಕಾಯುಕ್ತರಿಗೆ ದೂರು ನೀಡಿದ ಹಿನ್ನೆಲೆ ಡಿವೈಎಸ್‌ಪಿ ತಿರುಮಲೇಶ್ ನೇತೃತ್ವದಲ್ಲಿ ಬಲೆ ಬೀಸಲಾಗಿತ್ತು. ಕಚೇರಿಯಲ್ಲೇ ಲಂಚದ ಹಣ ಪಡೆಯುವಾಗ …

Read More »

ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಅಕ್ರಮ ಚಿನ್ನ ಸಾಗಣೆ ಪತ್ತೆ : ಆರೋಪಿ ಅರೆಸ್ಟ್!

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಬಳಿ ಇರುವ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಕ್ರಮ ಚಿನ್ನ ಸಾಗಣೆ ಪತ್ತೆಯಾಗಿದೆ. ದುಬೈನಿಂದ ಬಂದಿದ್ದ ಪ್ರಯಾಣಿಕನ ಬಳಿ 899.50 ಗ್ರಾಂ ಚಿನ್ನ ಪತ್ತೆಯಾಗಿದೆ. 1.337 ಕೋಟಿ ಮೌಲ್ಯದ 899.50 ಗ್ರಾಂ ಚಿನ್ನ ಜಪ್ತಿ ಮಾಡಲಾಗಿದೆ.4 ಕ್ಯಾಪ್ಸುಲ್ ಗಳಲ್ಲಿ ಚಿನ್ನದ ಪೇಸ್ಟ್ ಅಡಗಿಸಿ ತಂದಿದ್ದ ಪ್ರಯಾಣಿಕ ಅನುಮಾನಸ್ಪದ ವರ್ತನೆ ಹಿನ್ನಲೆ ಕಸ್ಟಮ್ಸ್ ಅಧಿಕಾರಿಗಳಿಂದ ತಪಾಸಣೆ ನಡೆಸಿದರು. ಈ ವೇಳೆ 899.50 ಗ್ರಾಂ 24 ಕ್ಯಾರಾಟ್ …

Read More »

ಬಸವಾಪಟ್ಟಣ ಗ್ಯಾಂಗ್ ರೇಪ್ ಕೇಸ್.. ದಾವಣಗೆರೆ SP ಗೆ ಮಹಿಳಾ ಆಯೋಗ ಪತ್ರ

ದಾವಣಗೆರೆ: ಚನ್ನಗಿರಿ ತಾಲ್ಲೂಕಿನ ಬಸವಾಪಟ್ಟಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 41 ವರ್ಷದ ಮಹಿಳೆಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣವನ್ನು ರಾಜ್ಯ ಮಹಿಳಾ ಆಯೋಗ ಗಂಭೀರವಾಗಿ ಪರಿಗಣಿಸಿದ್ದು, ಸಮಗ್ರ ತನಿಖೆಗೆ ಸೂಚಿಸಿದೆ. ಜೂನ್ 3ರಂದು ಸಹಾಯ ಮಾಡುವ ನೆಪದಲ್ಲಿ ಮಹಿಳೆಗೆ ತಂಪು ಪಾನೀಯ ನೀಡಿ ಪ್ರಜ್ಞೆ ತಪ್ಪಿಸಿ, ಸಮೀಪದ ಜಮೀನಿಗೆ ಕರೆದೊಯ್ದು ಅತ್ಯಾಚಾರ ಎಸಗಿರುವ ಆರೋಪ ಕೇಳಿಬಂದಿದೆ. ಆರೋಪಿಗಳು ಘಟನೆಯ ವಿಡಿಯೋ ಹಾಗೂ ಫೋಟೋಗಳನ್ನು ಚಿತ್ರೀಕರಿಸಿ ಬಳಿಕ ಹರಿಬಿಟ್ಟಿದ್ದರಿಂದ ಪ್ರಕರಣ …

Read More »

ಒಡಹುಟ್ಟಿದ ತಮ್ಮನನ್ನೇ ದೊಣ್ಣೆಯಿಂದ ಹೊಡೆದು ಕೊಂದ ಅಣ್ಣ!

ಆನಂದಪುರ: ಬ್ಯಾಂಕ್ ಸಾಲದ ನೋಟಿಸ್ ವಿಚಾರವಾಗಿ ಉಂಟಾದ ದ್ವೇಷದ ಹಿನ್ನೆಲೆಯಲ್ಲಿ ಅಣ್ಣನೇ ತಮ್ಮನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ ಕೊಲೆ ಮಾಡಿದ ಘಟನೆ ಶಿವಮೊಗ್ಗ ಜಿಲ್ಲೆಯ ಮಾದರಸನಕೊಪ್ಪ ಗ್ರಾಮದಲ್ಲಿ ನಡೆದಿದೆ. ಮೇ 23ರಂದು ನಡೆದ ಹಲ್ಲೆಯಲ್ಲಿ ತೀವ್ರವಾಗಿ ಗಾಯಗೊಂಡಿದ್ದ ರಾಘವೇಂದ್ರ (39) ಚಿಕಿತ್ಸೆ ಫಲಿಸದೆ ಜೂನ್ 9ರಂದು ಮೃತಪಟ್ಟಿದ್ದಾರೆ. ಅಣ್ಣ ಮಹೇಶ್ (49) ದೊಣ್ಣೆಯಿಂದ ಹಲ್ಲೆ ನಡೆಸಿದ್ದಾನೆ ಎಂದು ಆರೋಪಿಸಲಾಗಿದೆ. ಪ್ರಕರಣ ಸಂಬಂಧ ಆನಂದಪುರ ಪೊಲೀಸ್ ಠಾಣೆಯಲ್ಲಿ ಕೊಲೆ ಪ್ರಕರಣ …

Read More »