ಚಿಕ್ಕಬಳ್ಳಾಪುರ: ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ಸಿನಲ್ಲಿ ಮಹಿಳೆಯೊಬ್ಬರು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ. ನಿರ್ಮಲಾ(24) ಆತ್ಮಹತ್ಯೆಗೆ ಯತ್ನಿಸಿದ ಮಹಿಳೆ. ಚಿಕ್ಕಬಳ್ಳಾಪುರದ ಹಾಲಗಾನಹಳ್ಳಿ ಗ್ರಾಮದ ನಿವಾಸಿಯಾಗಿರುವ ನಿರ್ಮಲಾ ದೇವನಹಳ್ಳಿ ಬಸ್ ನಿಲ್ದಾಣದಲ್ಲಿ ಬಸ್ ಹತ್ತಿದ್ದರು.ಬಸ್ನಲ್ಲಿ ಕುಳಿತುಕೊಳ್ಳುತ್ತಿದ್ದಂತೆ ವಿಷ ಸೇವಿಸಿದ್ದಾರೆ. ಈ ವೇಳೆ 48 ಮಂದಿ ಪ್ರಯಾಣಿಕರಿದ್ದ ಬಸ್ ಸಮೇತ ಚಾಲಕ ಹಾಗೂ ಕಂಡಕ್ಟರ್ ಖಾಸಗಿ ಆಸ್ಪತ್ರೆಗೆ ತೆರಳಿ ಸಮಯ ಪ್ರಜ್ಞೆ ಮೆರೆದಿದ್ದಾರೆ. ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ಡಿಪೋಗೆ ಸೇರಿದ …
Read More »ಕೋಟೇಶ್ವರ : ಗೂಡ್ಸ್ ಲಾರಿ – ಬೈಕ್ ಢಿಕ್ಕಿ ; ಸವಾರ ಸಾವು
ಕುಂದಾಪುರ: ರಾಷ್ಟ್ರೀಯ ಹೆದ್ದಾರಿ 66ರ ಕೋಟೇಶ್ವರ ಅಂಡರ್ಪಾಸ್ನಲ್ಲಿ ಬೈಕ್ ಹಾಗೂ 10 ಚಕ್ರದ ಗೂಡ್ಸ್ ಲಾರಿ ನಡುವೆ ಸಂಭವಿಸಿದ ಮುಖಾಮುಖಿ ಡಿಕ್ಕಿಯಲ್ಲಿ ಬೈಕ್ ಸವಾರ ಪ್ರದೀಪ್ ಪೂಜಾರಿ (35) ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಸೋಮವಾರ ಸಂಜೆ ಈ ದುರ್ಘಟನೆ ನಡೆದಿದೆ. ಪ್ರದೀಪ್ ಪೂಜಾರಿ ಕೋಟೇಶ್ವರದ ಮಾರ್ಕೋಡಿ ನಿವಾಸಿಯಾಗಿದ್ದು, ಗಾರೆ ಮೇಸ್ತ್ರಿಯಾಗಿ ಕೆಲಸ ಮಾಡುತ್ತಿದ್ದರು. ಘಟನಾ ಸ್ಥಳಕ್ಕೆ ಕುಂದಾಪುರ ಸಂಚಾರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಾಗಿದೆ. ಕೋಟೇಶ್ವರ …
Read More »ಹೊಸಕೋಟೆ-ಕೋಲಾರ ಹೆದ್ದಾರಿಯಲ್ಲಿ ಬಸ್-ಕಂಟೈನರ್ ಡಿಕ್ಕಿ; ತಪ್ಪಿದ ಭಾರಿ ಅನಾಹುತ
ಹೊಸಕೋಟೆ ಮತ್ತು ಕೋಲಾರ ರಾಷ್ಟ್ರೀಯ ಹೆದ್ದಾರಿ-75ರಲ್ಲಿ ಏಕಾಏಕಿ ಯೂಟರ್ನ್ ತೆಗೆದುಕೊಳ್ಳುತ್ತಿದ್ದ ಕಂಟೈನರ್ಗೆ ಕೋಲಾರದಿಂದ ಬೆಂಗಳೂರಿಗೆ ಹೋಗುತ್ತಿದ್ದ ಕೆಎಸ್ಆರ್ಟಿಸಿ ಬಸ್ ಡಿಕ್ಕಿ ಹೊಡೆದಿದ್ದು, ಬಸ್ನಲ್ಲಿದ್ದ ಆರು ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯವಾಗಿದೆ.ಕಂಟೈನರ್ ಯೂಟರ್ನ್ ತೆಗೆದುಕೊಂಡಿದ್ದನ್ನು ಗಮನಿಸಿದ ಬಸ್ ಚಾಲಕ ಸಮಯ ಪ್ರಜ್ಞೆಯಿಂದ ವೇಗ ನಿಯಂತ್ರಿಸಿದ್ದರಿಂದ ಅವಘಡ ತಪ್ಪಿದೆ. ಕಂಟೈನರ್ ಚಾಲಕ ಮತ್ತು ಕ್ಲೀನರ್ ವಾಹನವನ್ನು ಸ್ಥಳದಲ್ಲೇ ಬಿಟ್ಟು ಪರಾರಿಯಾಗಿದ್ದರು. ಬಸ್ನಲ್ಲಿದ್ದ 70ಕ್ಕೂ ಅಪಾಯದಿಂದ ಪಾರಾಗಿದ್ದಾರೆ. ಗಾಯಗೊಂಡ ಆರು ಮಂದಿಯನ್ನು ಹೊಸಕೋಟೆಯ ಎಂವಿಜೆ ಆಸ್ಪತ್ರೆಗೆ …
Read More »ಆಂಧ್ರಪ್ರದೇಶ | ವಿಶಾಖಪಟ್ಟಣಂ ಉಕ್ಕು ಸ್ಥಾವರದಲ್ಲಿ ಬೆಂಕಿ: 8 ಮಂದಿ ಸಾವು
ಆಂಧ್ರ ಪ್ರದೇಶದ ಅನಕಪಲ್ಲೆ ಜಿಲ್ಲೆಯ ವಿಶಾಖಪಟ್ಟಣಂ ಉಕ್ಕಿನ ಸ್ಥಾವರದಲ್ಲಿ (ವಿಎಸ್ಪಿ) ಸೋಮವಾರ ಸಂಜೆ ಬೆಂಕಿ ಅವಘಡ ಸಂಭವಿಸಿದೆ. ಘಟನೆಯಲ್ಲಿ 8 ಮಂದಿ ಕಾರ್ಮಿಕರು ಮೃತಪಟ್ಟಿರುವ ಸಾಧ್ಯತೆ ಇದೆ ಎನ್ನಲಾಗಿದೆ. ಉಕ್ಕನ್ನು ಕರಗಿಸುವ ಘಟಕದಲ್ಲಿನ ಉಷ್ಣ ನಿರೋಧಕ ಕೊಳಗದಿಂದ ದ್ರವ ರೂಪದ ಲೋಹ ಸೋರಿಕೆಯಾಗಿರುವ ಪರಿಣಾಮ ಬೆಂಕಿ ಅವಘಡ ಸಂಭವಿಸಿದೆ ಎನ್ನಲಾಗಿದೆ. ಘಟನೆ ನಡೆದಾಗ 20 ಮಂದಿ ಕಾರ್ಮಿಕರು ಸ್ಥಳದಲ್ಲಿದ್ದರು. ಈ ಪೈಕಿ ಹಲವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, 8 ಮಂದಿ ಮೃತಪಟ್ಟಿರುವ …
Read More »ವಿಶಾಖಪಟ್ಟಣದ ಉಕ್ಕು ಸ್ಥಾವರ ದುರಂತ: ಮೃತ ಕಾರ್ಮಿಕರ ಕುಟುಂಬಕ್ಕೆ 25 ಲಕ್ಷ ರೂ. ಪರಿಹಾರ
ವಿಶಾಖಪಟ್ಟಣಂನ ಉಕ್ಕು ಸ್ಥಾವರದಲ್ಲಿ ಭಾರೀ ಪ್ರಮಾಣದ ಕರಗಿದ ಲೋಹ ಹರಿದು ಎಂಟು ಮಂದಿ ಮೃತಪಟ್ಟಿದ್ದಾರೆ. ಮೃತರ ಕುಟುಂಬಕ್ಕೆ ಇದೀಗ 25 ಲಕ್ಷ ರೂ. ಪರಿಹಾರ ಘೋಷಣೆ ಮಾಡಲಾಗಿದೆ. ನಿನ್ನೆ ವಿಶಾಖಪಟ್ಟಣದ ಉಕ್ಕು ಸ್ಥಾವರಗಳಲ್ಲಿ ಟನ್ಗಳಷ್ಟು ಕರಗಿದ ಲೋಹವಿದ್ದ ದೊಡ್ಡ ಬಕೆಟ್ ಉರುಳಿ ಬಿದ್ದಿದೆ. ಇದರಿಂದಾಗಿ ದೊಡ್ಡ ಪ್ರಮಾಣದ ಬೆಂಕಿ ಹೊತ್ತಿದೆ. ಈ ಬೆಂಕಿಯಿಂದ ಎಂದು ಮಂದಿ ಮೃತಪಟ್ಟಿದ್ದು, ಇವರ ಕುಟುಂಬಕ್ಕೆ ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ …
Read More »ಕರ್ತವ್ಯ ಲೋಪ: ಹೂವಿನಹಡಗಲಿ ಹಾಸ್ಟೆಲ್ ವಾರ್ಡನ್ ಅಮಾನತು
ಹೂವಿನಹಡಗಲಿ ಪಟ್ಟಣದ ಸರ್ಕಾರಿ ಅಲ್ಪಸಂಖ್ಯಾತರ ಮೆಟ್ರಿಕ್ ನಂತರದ ಬಾಲಕರ ವಿದ್ಯಾರ್ಥಿ ನಿಲಯದ ವಾರ್ಡನ್ ಮಂಜುಳಾ ತಂಬ್ರಹಳ್ಳಿ ಅವರನ್ನು ಕರ್ತವ್ಯ ಲೋಪದ ಆರೋಪದ ಮೇರೆಗೆ ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ನೊಂಗ್ಜಾಯ್ ಮೊಹಮ್ಮದ್ ಅಲಿ ಅಕ್ರಂ ಷಾ ಸೇವೆಯಿಂದ ಅಮಾನತುಗೊಳಿಸಿ ಆದೇಶಿಸಿದ್ದಾರೆ. ಮಂಜುಳಾ ಅವರು ವಿದ್ಯಾರ್ಥಿ ನಿಲಯದಿಂದ ಅಕ್ರಮವಾಗಿ ಅಕ್ಕಿ ಸಾಗಣೆ ಮಾಡುತ್ತಿದ್ದಾರೆ ಎಂದು ಕೆ.ಆರ್.ಎಸ್. ಪಕ್ಷದ ಪದಾಧಿಕಾರಿಗಳು ನೀಡಿದ ಮೌಖಿಕ ದೂರಿನ ಮೇರೆಗೆ ಹಡಗಲಿ ತಾಲ್ಲೂಕು ಪಂಚಾಯತಿ ಆಡಳಿತಾಧಿಕಾರಿಗಳು …
Read More »ಬಳ್ಳಾರಿಯಲ್ಲಿ ಯುವಕನ ಭೀಕರ ಹತ್ಯೆ: ಶವಕ್ಕೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ದುಷ್ಕರ್ಮಿಗಳು!
ಬಳ್ಳಾರಿ: ಯುವಕನನ್ನು ಹತ್ಯೆಗೈದು ಸಾಕ್ಷ್ಯ ನಾಶ ಮಾಡಲು ಮೃತದೇಹವನ್ನು 13 ಕಿ.ಮೀ ದೂರ ಸಾಗಿಸಿ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಘಟನೆ ತಾಲೂಕಿನ ಎಲ್ಎಲ್ಸಿ ಕಾಲುವೆ ಬಳಿ ಬೆಳಕಿಗೆ ಬಂದಿದೆ. ಅನಂತಪುರ ಜಿಲ್ಲೆಯ ಬೊಲ್ಲನಗುಡ್ಡಂ ನಿವಾಸಿ ಬಸವನಗೌಡ (27) ಮೃತ ಯುವಕ ಎಂದು ಗುರುತಿಸಲಾಗಿದೆ. ದುಷ್ಕರ್ಮಿಗಳು ಪೂರ್ವಯೋಜಿತವಾಗಿ ಕೃತ್ಯ ಎಸಗಿದ್ದರೂ, ಶನಿವಾರ ಸುರಿದ ಮಳೆಯಿಂದ ಬೆಂಕಿ ನಂದಿಹೋಗಿ ಮೃತದೇಹ ಅರ್ಧ ಸುಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದೆ. ಪ್ರೀತಿ-ಪ್ರೇಮ ವಿಚಾರಕ್ಕೆ ಸಂಬಂಧಿಸಿದಂತೆ ಹತ್ಯೆ …
Read More »ಬೆಂಗಳೂರು | ಸೂಪರ್ ಮಾರ್ಕೆಟ್ಗೆ ನುಗ್ಗಿ ದರೋಡೆಗೆ ಯತ್ನ: ಮೂವರ ಸೆರೆ
ಬೆಂಗಳೂರು: ಸೂಪರ್ ಮಾರ್ಕೆಟ್ಗೆ ನುಗ್ಗಿ ದರೋಡೆಗೆ ಯತ್ನಿಸಿದ್ದ ಮೂವರು ಆರೋಪಿಗಳನ್ನು ಪುಟ್ಟೇನಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಸೈಯದ್ ಆಸೀಫ್ (22), ಸೈಯದ್ ಸಲೀಂ (26) ಹಾಗೂ ಸಿದ್ದಿಕ್ ಪಾಷಾ (23) ಬಂಧಿತರು. ಜೂನ್ 6ರಂದು ಅರಕೆರೆಯ ‘ಎ ಡೈಲಿ ನೀಡ್ಸ್ ಸೂಪರ್ ಮಾರ್ಕೆಟ್’ಗೆ ಗ್ರಾಹಕರ ಸೋಗಿನಲ್ಲಿ ಬಂದ ಆರೋಪಿಗಳು ಕ್ಯಾಶ್ ಕೌಂಟರ್ನಲ್ಲಿದ್ದ ಹಣ ದೋಚಲು ಯತ್ನಿಸಿದ್ದಾರೆ. ಇದನ್ನು ತಡೆದ ಕ್ಯಾಶಿಯರ್ ಮೇಲೆ ಹಲ್ಲೆ ನಡೆಸಿ ಹಣ, ಚಾಕೊಲೇಟ್ ಹಾಗೂ ಪರ್ಫ್ಯೂಮ್ …
Read More »ವೃದ್ಧೆಯಿಂದ ₹98.40 ಲಕ್ಷ ದೋಚಿದ ವಂಚಕರು
ಬೆಂಗಳೂರು: ವೃದ್ಧೆಯನ್ನು ‘ಡಿಜಿಟಲ್ ಅರೆಸ್ಟ್’ ಮಾಡುವುದಾಗಿ ಬೆದರಿಸಿ ಸೈಬರ್ ವಂಚಕರು ₹98.40 ಲಕ್ಷ ದೋಚಿರುವ ಘಟನೆ ಬೆಳಕಿಗೆ ಬಂದಿದೆ. ಈ ಸಂಬಂಧ ಆಗ್ನೇಯ ವಿಭಾಗದ ಸೈಬರ್ ಅಪರಾಧ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ. ಬೊಮ್ಮನಹಳ್ಳಿ ನಿವಾಸಿ ಸ್ವರ್ಣಲತಾ ಅವರು ವಂಚನೆಗೆ ಒಳಗಾದವರು. ಮಾರ್ಚ್ 18ರಂದು ಕರೆ ಮಾಡಿದ್ದ ಆರೋಪಿಯೊಬ್ಬ ತಾನು ದೆಹಲಿ ಪೊಲೀಸ್ ಇಲಾಖೆಯ ಡಿಸಿಪಿ ಭೀಷಮ್ ಸಿಂಗ್ ಎಂದು ಪರಿಚಯಿಸಿಕೊಂಡು, ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ …
Read More »ಪೇಂಟ್ ಹೊಡೆಯುವ ನೆಪದಲ್ಲಿ ಬಂದವರು ಕೇವಲ 5 ನಿಮಿಷದ ಗ್ಯಾಪ್ನಲ್ಲಿ 25 ಲಕ್ಷ ರೂ. ಮೌಲ್ಯದ ಚಿನ್ನಾಭರಣದೊಂದಿಗೆ ಎಸ್ಕೇಪ್
ಬೆಂಗಳೂರು ಉತ್ತರ ತಾಲೂಕಿನ ರಾಮಾಂಜನೇಯ ಬಡಾವಣೆಯಲ್ಲಿ ಮನೆಗೆ ಬಣ್ಣ ಬಳಿಯುವ ನೆಪದಲ್ಲಿ ಬಂದ ಪೇಂಟರ್ಗಳು ಸುಮಾರು ₹25 ಲಕ್ಷ ಮೌಲ್ಯದ ಚಿನ್ನಾಭರಣ ಕಳವು ಮಾಡಿ ಪರಾರಿಯಾಗಿರುವ ಘಟನೆ ನಡೆದಿದೆ. ನಿತ್ಯಾ ಮತ್ತು ಚಂದ್ರಶೇಖರ್ ದಂಪತಿಗಳ ಮನೆಯಲ್ಲಿ ಈ ಕಳ್ಳತನ ನಡೆದಿದ್ದು, 254 ಗ್ರಾಂ ತೂಕದ ಚಿನ್ನಾಭರಣಗಳು ಕಳವಾಗಿವೆ. ಮನೆಗೆ ಪೇಂಟಿಂಗ್ ಕೆಲಸಕ್ಕೆ ಬಂದ ಲಿಂಗರಾಜು ಹಾಗೂ ಆತನ ಸಹಚರರು, ಮಾಲೀಕರ ವಿಶ್ವಾಸ ಗಳಿಸಿ ಕೆಲಸ ಮಾಡುತ್ತಿದ್ದರು. ಈ ವೇಳೆ ಬೆಡ್ರೂಮ್ನಲ್ಲಿ …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





