ಮುಂಬೈ ವಿಮಾನ ನಿಲ್ದಾಣದಲ್ಲಿ ನಡೆದ ಭಾರಿ ಚಿನ್ನ ಕಳ್ಳಸಾಗಣೆ ಪ್ರಕರಣವನ್ನು ಭೇದಿಸಿರುವ ಡಿಆರ್ಐ ಅಧಿಕಾರಿಗಳು, ಬಿಜೆಪಿ ಮುಖಂಡ ಸೇರಿದಂತೆ ಏಳು ಮಂದಿಯನ್ನು ಬಂಧಿಸಿದ್ದಾರೆ. ಆರೋಪಿಗಳಿಂದ ಮೇಣದಲ್ಲಿ ಮಿಶ್ರಣ ಮಾಡಿದ್ದ ಚಿನ್ನದ ಪುಡಿಯನ್ನು ವಶಪಡಿಸಿಕೊಳ್ಳಲಾಗಿದ್ದು, ಅದರ ಮೌಲ್ಯ ಸುಮಾರು ₹5 ಕೋಟಿ ಎಂದು ಅಂದಾಜಿಸಲಾಗಿದೆ. ಖಚಿತ ಮಾಹಿತಿಯ ಮೇರೆಗೆ ವಿಮಾನ ನಿಲ್ದಾಣದ ಸಮೀಪದ ಹೋಟೆಲ್ ಮೇಲೆ ನಿಗಾ ಇಟ್ಟಿದ್ದ ಅಧಿಕಾರಿಗಳು, ಚಿನ್ನ ಸಾಗಾಟದ ವೇಳೆ ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರಲ್ಲಿ ವಿಮಾನ ನಿಲ್ದಾಣ …
Read More »ಬೆಂಗಳೂರು | ನಕಲಿ ಅಂಕಪಟ್ಟಿ ಸೃಷ್ಟಿಸುವ ಜಾಲ ಪತ್ತೆ: ತನಿಖೆ ಚುರುಕು
ಬೆಂಗಳೂರು ನಗರದಲ್ಲಿ ನಕಲಿ ಅಂಕಪಟ್ಟಿ ಸೃಷ್ಟಿಸಿ ಮಾರಾಟ ಮಾಡುತ್ತಿದ್ದ ಮತ್ತೊಂದು ಬೃಹತ್ ಜಾಲವನ್ನು ಸಿಸಿಬಿ ವಿಶೇಷ ವಿಚಾರಣಾ ದಳ ಪತ್ತೆಹಚ್ಚಿದೆ. ಕೋರಮಂಗಲದ ಡಿಜಿಟಲ್ ಎಜುಕೇಷನ್ ಸಂಸ್ಥೆಯ ಮಾಲೀಕ ರಾಜಾ ರೆಡ್ಡಿ ಹಾಗೂ ಸಹಚರ ಆರ್ಯನ್ ವಿರುದ್ಧ ಪ್ರಕರಣ ದಾಖಲಾಗಿದ್ದು, ಆರೋಪಿಗಳ ಬಂಧನಕ್ಕೆ ಪೊಲೀಸರು ಶೋಧ ನಡೆಸುತ್ತಿದ್ದಾರೆ. ಆರೋಪಿಗಳು ಕಾಲೇಜು ವ್ಯಾಸಂಗ ಮಾಡದ ಅಭ್ಯರ್ಥಿಗಳಿಂದ ₹30 ಸಾವಿರದಿಂದ ₹50 ಸಾವಿರದವರೆಗೆ ಹಣ ಪಡೆದು ನಕಲಿ ಎಸ್ಎಸ್ಎಲ್ಸಿ, ಪಿಯು ಹಾಗೂ ಪದವಿ ಅಂಕಪಟ್ಟಿಗಳನ್ನು …
Read More »ಕಾಯಿಪಲ್ಲೆ ಖರೀದಿ ನೆಪದಲ್ಲಿ ಬಂಡಾರ ಎರಚಿ ಹಣವನ್ನು ದೋಚಿದ ಸಾಧುವೇಷದ ಕದೀಮರು
ರಾಯಚೂರು ಜಿಲ್ಲೆಯ ಮಸ್ಕಿ ಪಟ್ಟಣದಲ್ಲಿ ತರಕಾರಿ ಖರೀದಿಸುವ ನೆಪದಲ್ಲಿ ಬಂದ ಐವರ ಗ್ಯಾಂಗ್ ತರಕಾರಿ ಅಂಗಡಿ ಮಾಲೀಕನ ಗಮನ ಬೇರೆಡೆ ಸೆಳೆದು 1 ಲಕ್ಷ ರೂ. ನಗದು ದೋಚಿ ಪರಾರಿಯಾಗಿದೆ. ಭಾನುವಾರ ಸಂತೆ ವೇಳೆ ನಡೆದ ಈ ಘಟನೆ ಸ್ಥಳೀಯ ವ್ಯಾಪಾರಿಗಳಲ್ಲಿ ಆತಂಕ ಮೂಡಿಸಿದೆ. ಲಕ್ಷ್ಮೀ ವೆಂಕಟೇಶ್ವರ ತರಕಾರಿ ಮಳಿಗೆಯ ಮಾಲೀಕ ಮೌನೇಶ್ ಅವರೊಂದಿಗೆ ವ್ಯಾಪಾರದ ಮಾತುಗಳನ್ನಾಡಿದ ಆರೋಪಿಗಳು, ಒಂದು ರೂಪಾಯಿ ನಾಣ್ಯವನ್ನು ಕೆಳಗೆ ಬಿಸಾಕಿ ಅದನ್ನು ಎತ್ತಲು ಬಗ್ಗಿದ …
Read More »ಬೆಂಗಳೂರು: ಹಲ್ಲೆ ನಡೆಸಿ ಆಭರಣ ದೋಚಿದ್ದ ಆರೋಪಿ ಸೆರೆ
ಕೊಡಗು ಜಿಲ್ಲೆ ಸೋಮವಾರಪೇಟೆ ತಾಲೂಕಿನ ಚೌಡ್ಲು ಗ್ರಾಮದ ಹೋಂಸ್ಟೇ ನಲ್ಲಿ ಮೈಸೂರಿನ ಯುವತಿ ಅನುಮಾನಾಸ್ಪದವಾಗಿ ಮೃತಪಟ್ಟಿದ್ದಾರೆ. ಗ್ಯಾಸ್ ಗೀಸರ್ ನಿಂದ ವಿಷಾನಿಲ ಸೋರಿಕೆಯಾಗಿ ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ. ವಿನುತಾ(27) ಮೃತಪಟ್ಟವರು ಎಂದು ಗುರುತಿಸಲಾಗಿದೆ. ಮೈಸೂರಿನ ಯರಗನಹಳ್ಳಿಯ ಪಾಪಣ್ಣ ಬಡಾವಣೆ ನಿವಾಸಿಯಾಗಿರುವ ಜಗನ್ನಾಥ ಮತ್ತು ರೇಣುಕಾ ದಂಪತಿಯ ಪುತ್ರಿ ವಿನುತಾ ಸೇರಿದಂತೆ 14 ಜನರ ತಂಡ ಕೊಡಗು ಜಿಲ್ಲಾ ಪ್ರವಾಸಕ್ಕೆ ಬಂದಿದ್ದಾಗ ಘಟನೆ ನಡೆದಿದೆ. ಬೆಳಗ್ಗೆ ಸ್ನಾನಕ್ಕೆ ತೆರಳಿದ್ದಾಗ ವಿನುತಾ ಕುಸಿದು …
Read More »ಬೆಂಗಳೂರು: ಹಲ್ಲೆ ನಡೆಸಿ ಆಭರಣ ದೋಚಿದ್ದ ಆರೋಪಿ ಸೆರೆ
ಬೆಂಗಳೂರು: ಮನೆಗೆ ನುಗ್ಗಿ ಗೃಹಿಣಿಯ ಮೇಲೆ ಹಲ್ಲೆ ನಡೆಸಿ ಚಿನ್ನದ ಸರ ಹಾಗೂ ಮೊಬೈಲ್ ದೋಚಿ ಪರಾರಿಯಾಗಿದ್ದ ಆರೋಪಿಯನ್ನು ಹೆಬ್ಬಾಳ ಠಾಣೆ ಪೊಲೀಸರು ಬಂಧಿಸಿದ್ದಾರೆ. ನಾಗೇನಹಳ್ಳಿಯ ಅಸ್ಲಂ ಪಾಷಾ ಬಂಧಿತನಾಗಿದ್ದು, ಆತನಿಂದ ₹6.70 ಲಕ್ಷ ಮೌಲ್ಯದ ಚಿನ್ನಾಭರಣ, ಮೊಬೈಲ್ ಹಾಗೂ ದ್ವಿಚಕ್ರ ವಾಹನವನ್ನು ವಶಪಡಿಸಿಕೊಳ್ಳಲಾಗಿದೆ. ಸಿಐಎಲ್ ಲೇಔಟ್ ನಿವಾಸಿ ಜಯಶ್ರೀ ಅವರ ಮನೆಗೆ ನುಗ್ಗಿ ಕೃತ್ಯ ಎಸಗಿದ್ದ ಎನ್ನಲಾಗಿದೆ. ಮನೆಯ ಸುತ್ತಮುತ್ತಲಿನ ಸಿಸಿಟಿವಿ ದೃಶ್ಯಾವಳಿಗಳ ಆಧಾರದಲ್ಲಿ ಆರೋಪಿಯನ್ನು ಪತ್ತೆ ಹಚ್ಚಿ …
Read More »ಅಪ್ರಾಪ್ತೆ ಮೇಲೆ ಅತ್ಯಾಚಾರ: ಅಪರಾಧಿಗೆ 3 ವರ್ಷ ಜೈಲು ಶಿಕ್ಷೆ ಪ್ರಕಟ
ದಾವಣಗೆರೆಯಲ್ಲಿ ಅಪ್ರಾಪ್ತ ಬಾಲಕಿಯನ್ನು ಮದುವೆಯಾಗುವುದಾಗಿ ನಂಬಿಸಿ ಲೈಂಗಿಕ ದೌರ್ಜನ್ಯ ಎಸಗಿದ್ದ ಆರೋಪಿಗೆ 1ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ 3 ವರ್ಷ ಜೈಲು ಶಿಕ್ಷೆ ಹಾಗೂ ₹15 ಸಾವಿರ ದಂಡ ವಿಧಿಸಿದೆ. 2023ರಲ್ಲಿ ಬಾಲಕಿಯನ್ನು ಪುಸಲಾಯಿಸಿ ಬಳ್ಳಾರಿ ಜಿಲ್ಲೆಯ ಕುಡಿತಿನಿಗೆ ಕರೆದೊಯ್ದು ದೌರ್ಜನ್ಯ ಎಸಗಿದ್ದ ಪ್ರಕರಣದಲ್ಲಿ ವಿರೂಪಾಕ್ಷಿ ಅಪರಾಧಿ ಎಂದು ನ್ಯಾಯಾಲಯ ತೀರ್ಪು ನೀಡಿದೆ. ಬಿಳಿಚೋಡು ಠಾಣೆ ಪೊಲೀಸರು ತನಿಖೆ ನಡೆಸಿ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದು, ಆರೋಪ ಸಾಬೀತಾದ …
Read More »ಅಯ್ಯೋ ಪಾಪ ಅಂದಿದ್ದೇ ತಪ್ಪಾಯ್ತು: ಎಂಬಿಬಿಎಸ್ ವಿದ್ಯಾರ್ಥಿನಿ ಸ್ನೇಹಿತೆಯ ಸೋಗಿನಲ್ಲಿ ಒಂದು ಲಕ್ಷ ರೂ. ವಂಚನೆ!
ವಿದೇಶದಲ್ಲಿ ಎಂಬಿಬಿಎಸ್ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿನಿಯ ಕಾಲೇಜು ಶುಲ್ಕ ಪಾವತಿಸುವ ತುರ್ತು ಪರಿಸ್ಥಿತಿಯನ್ನು ಬಳಸಿಕೊಂಡು ಸೈಬರ್ ವಂಚಕರು ಬೆಂಗಳೂರಿನ ಕುಟುಂಬವೊಂದಕ್ಕೆ ₹1 ಲಕ್ಷ ವಂಚನೆ ಮಾಡಿದ್ದಾರೆ. ವಿದ್ಯಾರ್ಥಿನಿಯ ಸ್ನೇಹಿತೆ ಎಂದು ಪರಿಚಯಿಸಿಕೊಂಡ ಮಹಿಳೆ, ವಿದೇಶಿ ವಿನಿಮಯ ಶುಲ್ಕವಿಲ್ಲದೆ ಹಣ ತಲುಪಿಸುವುದಾಗಿ ನಂಬಿಸಿ ತನ್ನ ಪರಿಚಿತರ ಖಾತೆಗೆ ಹಣ ಜಮಾ ಮಾಡಿಸಿಕೊಂಡಿದ್ದಾಳೆ. ಹಣ ವರ್ಗಾವಣೆಯಾದ ಬಳಿಕ ಆಕೆ ಸಂಪರ್ಕ ಕಡಿತಗೊಳಿಸಿ ನಾಪತ್ತೆಯಾಗಿದ್ದಾಳೆ. ವಂಚನೆ ಅರಿತ ಬಳಿಕ ಕುಟುಂಬಸ್ಥರು ಪೊಲೀಸರಿಗೆ ದೂರು ನೀಡಿದ್ದು, …
Read More »ಬಳ್ಳಾರಿಯಲ್ಲಿ ಬೆತ್ತಲೆ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆ : ಅತ್ಯಾಚಾರವೆಸಗಿ ಕೊಲೆ ಮಾಡಿರೋ ಶಂಕೆ!
ಬಳ್ಳಾರಿಯ ಅಂದ್ರಾಳ ಹಳ್ಳದಲ್ಲಿ ಬ್ಯಾಂಕ್ ಉದ್ಯೋಗಿ ಅನಿಷ ಫಾತಿಮಾ (38) ಅವರ ಮೃತದೇಹ ನಿಗೂಢವಾಗಿ ಪತ್ತೆಯಾಗಿದ್ದು, ಪ್ರಕರಣ ಜಿಲ್ಲೆಯಲ್ಲಿ ಆತಂಕ ಸೃಷ್ಟಿಸಿದೆ. ಸಹೋದ್ಯೋಗಿಗಳೊಂದಿಗೆ ಪಾರ್ಟಿಯಲ್ಲಿ ಭಾಗವಹಿಸಿದ್ದ ಅವರು ರಾತ್ರಿ ಪತಿಗೆ ಕರೆ ಮಾಡಿದ ಬಳಿಕ ಸಂಪರ್ಕಕ್ಕೆ ಸಿಕ್ಕಿರಲಿಲ್ಲ. ಮರುದಿನ ಬೆಳಗ್ಗೆ ಅವರ ಶವ ಅಂದ್ರಾಳ ಹಳ್ಳದ ಸಮೀಪ ಪತ್ತೆಯಾಗಿದ್ದು, ಸಾವಿನ ಬಗ್ಗೆ ಹಲವು ಅನುಮಾನಗಳು ವ್ಯಕ್ತವಾಗಿವೆ. ಘಟನೆಯಿಂದ ಕುಟುಂಬಸ್ಥರು ಮತ್ತು ಸಹೋದ್ಯೋಗಿಗಳು ಆಘಾತಕ್ಕೊಳಗಾಗಿದ್ದಾರೆ. ಎಪಿಎಂಸಿ ಠಾಣೆ ಪೊಲೀಸರು, ಶ್ವಾನದಳ ಹಾಗೂ …
Read More »ಅಂಗನವಾಡಿಯಿಂದ ಗರ್ಭಿಣಿಗೆ ನೀಡಿದ್ದ ಪೌಷ್ಟಿಕ ಆಹಾರದ ಪ್ಯಾಕೆಟ್ ನಲ್ಲಿ ಸತ್ತ ಹಾವಿನ ಮರಿ ಪತ್ತೆ
ಭೋಪಾಲ್: ಅಂಗನವಾಡಿ ಕೇಂದ್ರದಲ್ಲಿ ಗರ್ಭಿಣಿಗೆ ನೀಡಿದ್ದ ಪೌಷ್ಟಿಕ ಆಹಾರದ ಪ್ಯಾಕೆಟ್ ನಲ್ಲಿ ಸತ್ತ ಹಾವಿನ ಮರಿ ಪತ್ತೆಯಾಗಿರುವ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ. ಇಲ್ಲಿನ ಪಾಂಡುರ್ಣ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ. ಕಾರ್ಘಾಟ್ ಕಮಠಿ ಗ್ರಾಮದ ಗರ್ಭಿಣಿ ವಚಲಾ ಬಾಯಿ ಧುರ್ವೆ ಅವರಿಗೆ ಅಂಗನವಾಡಿ ಕೇಂದ್ರದಿಂದ ಪೌಷ್ಟಿಕ ಆಹಾರದ ಲಡ್ಡುಗಳ ಪ್ಯಾಕೆಟ್ ನೀಡಲಾಗಿತ್ತು. ಅದರಲ್ಲಿ ಸತ್ತ ಹಾವಿನ ಮರಿ ಪತ್ತೆಯಾಗಿದೆ. ಮನೆಗೆ ತೆಗೆದುಕೊಂಡು ಹೋಗಿ ಪ್ಯಾಕೆಟ್ ತೆರೆದಾಗ ಅದರೊಳಗೆ ಇದ್ದ ಸತ್ತ …
Read More »ಲಂಚ ಪಡೆಯುವಾಗಲೇ ಎಎಸ್ಐ, ಲೇಡಿ ಕಾನ್ಸ್ಟೇಬಲ್ ಲಾಕ್! ಪೋಕ್ಸೋ ಕೇಸ್ ಡೀಲ್ ವೇಳೆ ತಗ್ಲಾಕೊಂಡಿದ್ದು ಹೇಗೆ?
ಕಲಬುರಗಿಯಲ್ಲಿ ಪೋಕ್ಸೊ ಪ್ರಕರಣದಲ್ಲಿ ಸಹಾಯ ಮಾಡುವುದಾಗಿ ಹೇಳಿ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಸ್ಟೇಷನ್ ಬಜಾರ್ ಪೊಲೀಸ್ ಠಾಣೆಯ ಎಎಸ್ಐ ಶಿವಶರಣಪ್ಪ ಹಾಗೂ ಮಹಿಳಾ ಹೆಡ್ ಕಾನ್ಸ್ಟೇಬಲ್ ಜ್ಯೋತಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ದೂರುದಾರರಿಂದ ಮೊದಲು ₹1,000 ಪಡೆದು, ಬಳಿಕ ₹10,000 ಲಂಚ ನೀಡುವಂತೆ ಒತ್ತಾಯಿಸಿದ ಆರೋಪದ ಮೇರೆಗೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಹಣ ಸ್ವೀಕರಿಸುವ ವೇಳೆ ಇಬ್ಬರನ್ನೂ ರೆಡ್ಹ್ಯಾಂಡ್ ಆಗಿ ಬಂಧಿಸಿದ್ದಾರೆ. ಲೋಕಾಯುಕ್ತ ಎಸ್ಪಿ ಸಿದ್ದರಾಜು ಮಾರ್ಗದರ್ಶನದಲ್ಲಿ ನಡೆದ …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





