ಬೆಂಗಳೂರಿನ ವೈಟ್ಫೀಲ್ಡ್ನಲ್ಲಿ ಮುಂಜಾನೆ ಟೀ ಕುಡಿಯಲು ಹೊರಟಿದ್ದ ಕಾಲೇಜು ವಿದ್ಯಾರ್ಥಿನಿಯನ್ನು ಬಲವಂತವಾಗಿ ಎತ್ತಿಕೊಂಡು ಹೋಗಿ ಅತ್ಯಾಚಾರಕ್ಕೆ ಯತ್ನಿಸಿದ ಘಟನೆ ನಡೆದಿದೆ. ಯುವತಿಯ ಕಿರುಚಾಟ ಕೇಳಿ ಸ್ಥಳೀಯರು ಧಾವಿಸಿದಾಗ ಆರೋಪಿ ಸ್ಥಳದಿಂದ ಪರಾರಿಯಾಗಿದ್ದಾನೆ. ಬಳಿಕ ವಿದ್ಯಾರ್ಥಿನಿ ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಂಡ ವೈಟ್ಫೀಲ್ಡ್ ಪೊಲೀಸರು ತನಿಖೆ ನಡೆಸಿ ಕೆಲವೇ ಗಂಟೆಗಳಲ್ಲಿ ಸೈಬುಲ್ ಎಂಬ ಆರೋಪಿಯನ್ನು ಬಂಧಿಸಿದ್ದಾರೆ. ಪ್ರಾಥಮಿಕ ತನಿಖೆಯಲ್ಲಿ ಆರೋಪಿ ರಸ್ತೆ ಬದಿಯಲ್ಲಿ ಕಸ ಮತ್ತು ಕಬ್ಬಿಣದ ವಸ್ತುಗಳನ್ನು ಆಯುವ …
Read More »ಬೆಂಗಳೂರಲ್ಲಿ ಘೋರ ದುರಂತ ; ಚಲಿಸುತ್ತಿದ್ದ ರೈಲು ಹತ್ತಲು ಹೋಗಿ ಜಾರಿಬಿದ್ದು ಯುವಕ ಸಾವು.!
ಬೆಂಗಳೂರು ಜ್ಞಾನಭಾರತಿ ರೈಲು ನಿಲ್ದಾಣದಲ್ಲಿ ಚಲಿಸುತ್ತಿದ್ದ ರೈಲು ಹತ್ತಲು ಯತ್ನಿಸಿದ ವ್ಯಕ್ತಿಯೊಬ್ಬರು ಕಾಲು ಜಾರಿ ಬಿದ್ದು ಮೃತಪಟ್ಟಿರುವ ದುರ್ಘಟನೆ ನಡೆದಿದೆ. ಮೃತರನ್ನು ರಾಮನಗರ ಜಿಲ್ಲೆಯ ಕೂಟಗಲ್ ಗ್ರಾಮದ ಹರೀಶ್ ಎಂದು ಗುರುತಿಸಲಾಗಿದೆ. ಮೆಜೆಸ್ಟಿಕ್ನಿಂದ ಮೈಸೂರಿಗೆ ತೆರಳುತ್ತಿದ್ದ ಬೆಂಗಳೂರು–ಮೈಸೂರು ಪ್ಯಾಸೆಂಜರ್ ರೈಲು ನಿಧಾನವಾಗಿ ಚಲಿಸುತ್ತಿದ್ದ ವೇಳೆ ಹರೀಶ್ ರೈಲು ಹತ್ತಲು ಪ್ರಯತ್ನಿಸಿದ್ದು, ಈ ವೇಳೆ ಕಾಲು ಜಾರಿ ರೈಲಿನ ಚಕ್ರದ ಅಡಿಗೆ ಸಿಲುಕಿದ್ದಾರೆ. ಪ್ರಯಾಣಿಕರು ತಕ್ಷಣ ಚೈನ್ ಎಳೆದು ರೈಲು ನಿಲ್ಲಿಸಿದರೂ …
Read More »ಚಾಮರಾಜನಗರ : ಆಟೋ ಮಗುಚಿ ಇಬ್ಬರು ಮೃತ್ಯು
ಆಟೋ ಮಗುಚಿ ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿದ ಘಟನೆ ಕೊಳ್ಳೇಗಾಲ ತಾಲೂಕಿನ ನರಿಪುರ-ಮಧುವನಹಳ್ಳಿ ಬೈಪಾಸ್ ಮುಖ್ಯರಸ್ತೆಯಲ್ಲಿ ಶುಕ್ರವಾರ ಬೆಳಿಗ್ಗೆ ನಡೆದಿದೆ. ಮೃತ ವ್ಯಕ್ತಿಯನ್ನು ಬೆಂಗಳೂರು ರಾಜಗೋಪಾಲನಗರ ನಿವಾಸಿ ಮನೋಜ್ ಎಂದು ಗುರುತಿಸಲಾಗಿದೆ.ಇನ್ನೊಬ್ಬನ ಹೆಸರು ತಿಳಿಯಬೇಕಿದೆ. ಲಕ್ಷ್ಮಿಕಾಂತ್ ಎಂಬ ವ್ಯಕ್ತಿಗೆ ಸಣ್ಣಪುಟ್ಟ ಗಾಯಗಳಾಗಿದೆ ಎಂದು ತಿಳಿದು ಬಂದಿದೆ. ಕೊಳ್ಳೇಗಾಲ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ನರಿಪುರ-ಮಧುವನಹಳ್ಳಿ ಬೈಪಾಸ್ ಮುಖ್ಯ ರಸ್ತೆಯಲ್ಲಿರುವ ಮಧುವನಹಳ್ಳಿ ಪ್ರದೀಪ್ ಎಂಬುವವರ ಜಮೀನಿನ ಹತ್ತಿರ ಘಟನೆ ನಡೆದಿದೆ. ಅಪಘಾತದ ವಿಷಯ …
Read More »ಚಾಮರಾಜನಗರದಲ್ಲಿ ಉಡ ಮಾರಾಟ, ಸಾಗಾಣಿಕೆಗೆ ಯತ್ನಿಸಿದ ಇಬ್ಬರ ಬಂಧನ
ಕೊಳ್ಳೇಗಾಲದ ಸತ್ತೇಗಾಲ ಹ್ಯಾಂಡ್ ಪೋಸ್ಟ್ ಸಮೀಪದ ಕಾವೇರಿ ನದಿ ದಡದಲ್ಲಿ ಜೀವಂತ ಉಡವನ್ನು ಅಕ್ರಮವಾಗಿ ಸಾಗಿಸಿ ಮಾರಾಟ ಮಾಡಲು ಯತ್ನಿಸುತ್ತಿದ್ದ ಇಬ್ಬರನ್ನು ಸಿಐಡಿ ಅರಣ್ಯ ಘಟಕದ ಅಧಿಕಾರಿಗಳು ಬಂಧಿಸಿದ್ದಾರೆ. ಬಂಧಿತರು ಮೈಸೂರು ಜಿಲ್ಲೆಯ ಹುಣಸೂರು ಮೂಲದ ಮುಕ್ತಾರ್ ಪಾಶ (45) ಮತ್ತು ರಫೀ (44) ಎಂದು ಗುರುತಿಸಲಾಗಿದೆ. ಆರೋಪಿಗಳಿಂದ ಜೀವಂತ ಉಡ ಹಾಗೂ ಕಬ್ಬಿಣದ ಪಂಜರವನ್ನು ವಶಪಡಿಸಿಕೊಳ್ಳಲಾಗಿದೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಅಧಿಕಾರಿಗಳು ಮುಂದಿನ ಕಾನೂನು ಕ್ರಮ ಕೈಗೊಂಡಿದ್ದು, …
Read More »ಎಸ್ಪಿ ಹೆಸರಲ್ಲೇ ಹಣ ಎತ್ತಿದ ಭೂಪ, ಲಕ್ಷ್ಮಣ ನಿಂಬರಗಿ ಬಿಚ್ಚಿಟ್ಟ ಶಾಕಿಂಗ್ ನ್ಯೂಸ್
ವಿಜಯಪುರ: ಇಲ್ಲೊಬ್ಬ ಭೂಪ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹೆಸರಿನಲ್ಲಿಯೇ ನೌಕರಿ ಆಮಿಷವೊಡ್ಡಿ ವಂಚನೆಗೈದಿದ್ದಾನೆ !ಹೌದು, ವಿಜಯಪುರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ ಹೆಸರಲ್ಲಿ ನಕಲಿ ಫೇಸ್ಬುಕ್ ಖಾತೆ ಸೃಷ್ಠಿಸಿ ಸಾರ್ವಜನಿಕರಿಗೆ ವಂಚನೆಗೈದಿರುವ ಕುತೂಹಲಕಾರಿ ಪ್ರಕರಣ ಬೆಳಕಿಗೆ ಬಂದಿದೆ. 2025ರಲ್ಲಿಯೇ ಈ ಕುರಿತು ಎಫ್ಐಆರ್ ದಾಖಲಾಗಿದ್ದು, ಇದೀಗ ಪೊಲೀಸರು ವಂಚಕನನ್ನು ಹೆಡೆಮುರಿ ಕಟ್ಟಿ ತಂದಿದ್ದಾರೆ. ಅಂದಹಾಗೆ ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ದುರದುಂಡಿ ಗ್ರಾಮದ ಹಣಮಂತ ಭಜಂತ್ರಿ ಎಂಬಾತನೇ ಆ …
Read More »ಅಕ್ರಮ ಸಂಬಂಧ ಶಂಕೆ : ವ್ಯಕ್ತಿಗೆ ಚಾಕು ಇರಿದು ಕೊಲೆ
ಬೆಂಗಳೂರು ನಗರದ ಜೆ.ಜೆ.ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಚಾಕು ಇರಿತ ಪ್ರಕರಣದಲ್ಲಿ 45 ವರ್ಷದ ಅಕ್ರಂಪಾಷ ಹತ್ಯೆಯಾಗಿದ್ದಾರೆ. ಜೂನ್ 3ರ ತಡರಾತ್ರಿ ಕಾರ್ಯಕ್ರಮ ಮುಗಿಸಿ ಮನೆಗೆ ತೆರಳುತ್ತಿದ್ದ ವೇಳೆ ಟಿಪ್ಪು ಚೌಕ್ ಸಮುದಾಯ ಭವನದ ಬಳಿ ಆರೋಪಿಗಳು ಅವರ ದ್ವಿಚಕ್ರ ವಾಹನವನ್ನು ಅಡ್ಡಗಟ್ಟಿ ಚಾಕುವಿನಿಂದ ಹಲ್ಲೆ ನಡೆಸಿದ್ದಾರೆ. ಗಂಭೀರವಾಗಿ ಗಾಯಗೊಂಡ ಅಕ್ರಂಪಾಷ ಅವರನ್ನು ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗಮಧ್ಯೆ ಮೃತಪಟ್ಟಿದ್ದಾರೆ. ಮಹಿಳೆಯೊಬ್ಬರೊಂದಿಗೆ ಅಕ್ರಮ ಸಂಬಂಧ ಹೊಂದಿದ್ದ ಶಂಕೆಯೇ ಕೊಲೆಗೆ ಕಾರಣವಾಗಿರಬಹುದು …
Read More »ನರ್ಸಿಂಗ್ ಹೋಂನಲ್ಲಿ ಅಗ್ನಿ ಅವಘಡ : 12 ಮಂದಿ ಮೃತ್ಯು
ಪಶ್ಚಿಮ ಶ್ರೀಲಂಕಾದ ಬಟಗೋಡ ಎಂಬಲ್ಲಿ ಬುಧವಾರ ತಡರಾತ್ರಿ ನರ್ಸಿಂಗ್ ಹೋಂನಲ್ಲಿ ಸಂಭವಿಸಿದ ಭೀಕರ ಅಗ್ನಿ ದುರಂತದಲ್ಲಿ 12 ಮಂದಿ ಮೃತಪಟ್ಟಿದ್ದು, ಇತರ 7 ಮಂದಿ ಗಾಯಗೊಂಡಿದ್ದಾರೆ. ನರ್ಸಿಂಗ್ ಹೋಂನಿಂದ 51 ಮಂದಿಯನ್ನು ರಕ್ಷಿಸಲಾಗಿದ್ದು ಮ್ಯಾನೇಜರನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ಗುರುವಾರ ಹೇಳಿದ್ದಾರೆ. ಅಂಗೂರುವಟೋಟ ನಗರದಲ್ಲಿರುವ `ಮೌಪಿಯ ಸೇವಾನ ಎಲ್ಡರ್ಸ್ ಹೋಮ್’ನಲ್ಲಿ ಬೆಂಕಿ ದುರಂತ ಸಂಭವಿಸಿದೆ. ನರ್ಸಿಂಗ್ ಹೋಂ ಇರುವ ಕಟ್ಟಡದಲ್ಲೇ ಮಾನಸಿಕ ಅಸ್ವಸ್ಥ ಯುವಜನರ ಆರೈಕೆ ಕೇಂದ್ರವೂ ಇದ್ದು ಎರಡೂ …
Read More »ತುಮಕೂರಿನಲ್ಲಿ ಇನ್ನೋವಾ-ಓಮ್ನಿ ಮುಖಾಮುಖಿ ಡಿಕ್ಕಿ: ಟೆಕ್ಕಿ ರವಿ ಕುಟುಂಬದ ಮೂವರು ಸ್ಥಳದಲ್ಲೇ ದುರ್ಮರಣ!
ತುಮಕೂರು ಜಿಲ್ಲೆಯ ಕೆಂಕೆರೆ ಬಳಿ ಎರಡು ಕಾರುಗಳ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಒಂದೇ ಕುಟುಂಬದ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಆಂಧ್ರಪ್ರದೇಶದ ಆದೋನಿ ಮೂಲದ ಸಾಫ್ಟ್ವೇರ್ ಇಂಜಿನಿಯರ್ ರವಿ ಅವರ ತಂದೆ, ತಾಯಿ ಹಾಗೂ ಪತ್ನಿ ದುರ್ಮರಣಕ್ಕೀಡಾಗಿದ್ದಾರೆ. ಹಿರಿಯೂರು ಮಾರ್ಗವಾಗಿ ಹುಳಿಯಾರು ಕಡೆಗೆ ಬರುತ್ತಿದ್ದ ಇನೋವಾ ಕಾರಿಗೆ ಎದುರಿನಿಂದ ಬಂದ ಓಮ್ನಿ ಕಾರು ಡಿಕ್ಕಿ ಹೊಡೆದ ಪರಿಣಾಮ ಕಾರು ಪಲ್ಟಿಯಾಗಿದೆ. ಅಪಘಾತದಲ್ಲಿ ಇಬ್ಬರು ಮಕ್ಕಳು ಸೇರಿದಂತೆ ಮೂವರಿಗೆ ಗಂಭೀರ …
Read More »ರಾಜ್ಯದಲ್ಲಿ ಘೋರ ದುರಂತ : ಕಾರಿನಲ್ಲಿ ಉಸಿರುಗುಟ್ಟಿ ಮೂರು ವರ್ಷದ ಮಗು ಸಾವು!
ಕಲಬುರ್ಗಿ ಜಿಲ್ಲೆಯ ಶಹಬಾದ್ ತಾಲೂಕಿನ ತೊನಸನಹಳ್ಳಿ ಗ್ರಾಮದಲ್ಲಿ ಹೃದಯವಿದ್ರಾವಕ ಘಟನೆ ನಡೆದಿದ್ದು, ಕಾರಿನೊಳಗೆ ಆಟವಾಡಲು ಹೋದ ಮೂರು ವರ್ಷದ ಬಾಲಕ ಉಸಿರುಗಟ್ಟಿ ಸಾವನ್ನಪ್ಪಿದ್ದಾನೆ. ಮೃತ ಮಗುವನ್ನು ಬಸವಪ್ರಭು (3) ಎಂದು ಗುರುತಿಸಲಾಗಿದೆ. ಪೋಷಕರು ಶಾಲೆಯ ಬಳಿ ಕಾರು ನಿಲ್ಲಿಸಿ ತೆರಳಿದ್ದ ವೇಳೆ, ಬಾಲಕ ಕಾರಿನೊಳಗೆ ಹೋಗಿದ್ದಾನೆ. ಈ ವೇಳೆ ಕಾರಿನ ಬಾಗಿಲುಗಳು ಸ್ವಯಂಚಾಲಿತವಾಗಿ ಲಾಕ್ ಆಗಿದ್ದು, ಒಳಗೆ ಸಿಲುಕಿದ ಮಗುವಿಗೆ ಹೊರಬರಲು ಸಾಧ್ಯವಾಗಿಲ್ಲ. ಬಿಸಿಲಿನ ಬೇಗೆ ಮತ್ತು ಗಾಳಿಯ ಕೊರತೆಯಿಂದ …
Read More »ಬೆಂಗಳೂರಲ್ಲಿ ನಡುರಸ್ತೆಯಲ್ಲೇ ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯಕ್ಕೆ ಯತ್ನಿಸಿದ ಕಾಮುಕನ ಸೆರೆ
ಬೆಳಗಿನ ಜಾವ ರಸ್ತೆಯಲ್ಲಿ ನಡೆದು ಹೋಗುತ್ತಿದ್ದ ವಿದ್ಯಾರ್ಥಿನಿಯನ್ನು ಹಿಂಬಾಲಿಸಿಕೊಂಡು ಹೋದ ಕಾಮುಕ ಲೈಂಗಿಕ ದೌರ್ಜನ್ಯಕ್ಕೆ ಯತ್ನಿಸಿರುವ ಘಟನೆ ವೈಟ್ಫೀಲ್ಡ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಕೃತ್ಯವೆಸಗಿ ಪರಾರಿಯಾಗಿದ್ದ ಪಶ್ಚಿಮ ಬಂಗಾಳ ಮೂಲದ ಸೈಫಲ್ ಮಂಡಲ್ (27) ಬಂಧಿತ ಆರೋಪಿ. ಈತ ಚಿಂದಿ ಆಯುವ ವ್ಯಕ್ತಿ ಎಂದು ಗೊತ್ತಾಗಿದೆ. ಕೇರಳಂ ಮೂಲದ ವಿದ್ಯಾರ್ಥಿನಿ ನಗರದ ಕಾಲೇಜೊಂದರಲ್ಲಿ ಪದವಿ ವ್ಯಾಸಂಗ ಮಾಡುತ್ತಿದ್ದು, ಪಟ್ಟಂದೂರು ಅಗ್ರಹಾರದ ಪಿಜಿಯೊಂದರಲ್ಲಿ ನೆಲೆಸಿದ್ದಾರೆ. ಮೊನ್ನೆ ಬೆಳಗಿನ ಜಾವ 3.30 …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





