ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಶಿರೂರು ಸಂಕದಗುಂಡಿ ಹೊಳೆಯಲ್ಲಿ ಸ್ನಾನಕ್ಕೆ ಇಳಿದಿದ್ದ ಹಾವೇರಿ ಮೂಲದ 16 ವರ್ಷದ ವಿದ್ಯಾರ್ಥಿ ಆಯುಷ್ ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ದುರ್ಘಟನೆ ನಡೆದಿದೆ. ಆಯುಷ್ ಕುಟುಂಬ ಸದಸ್ಯರೊಂದಿಗೆ ಮುರುಡೇಶ್ವರ ಹಾಗೂ ಕನ್ಯಾಕುಮಾರಿ ಪ್ರವಾಸಕ್ಕೆ ಬಂದಿದ್ದನು. ಮುರುಡೇಶ್ವರ ಪ್ರವಾಸ ಮುಗಿಸಿ ಶಿರೂರು ಸಂಕದಗುಂಡಿ ಹೊಳೆಯ ಬಳಿ ವಿಶ್ರಾಂತಿಗಾಗಿ ತಂಗಿದ್ದ ವೇಳೆ ಕುಟುಂಬದವರು ಊಟದ ಸಿದ್ಧತೆಯಲ್ಲಿ ನಿರತರಾಗಿದ್ದರು. ಈ ವೇಳೆ ಆಯುಷ್ ಮತ್ತೊಬ್ಬ ಬಾಲಕನೊಂದಿಗೆ ಹೊಳೆಗೆ ಸ್ನಾನಕ್ಕೆ ತೆರಳಿದ್ದಾನೆ. …
Read More »ಮಣಿಪಾಲ: ಗೂಂಡಾ ಕಾಯ್ದೆಯಡಿ ರೌಡಿ ಶೀಟರ್ ಗಣೇಶ್ ಬಂಧನ
ಮಣಿಪಾಲ ಪೊಲೀಸ್ ಠಾಣಾ ವ್ಯಾಪ್ತಿಯ ರೌಡಿ ಶೀಟರ್, 80 ಬಡಗಬೆಟ್ಟು ಗ್ರಾಮದ ನೇತಾಜಿನಗರ ನಿವಾಸಿ ಗಣೇಶ್(32) ಎಂಬಾತನನ್ನು ಗೂಂಡಾ ಕಾಯ್ದೆಯಡಿ ಪೊಲೀಸರು ಬಂಧಿಸಿದ್ದಾರೆ. ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ ಹರಿರಾಂ ಶಂಕರ್ ನೀಡಿದ ವರದಿಯ ಮೇರೆಗೆ ಜಿಲ್ಲಾ ದಂಡಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ.ಆರೋಪಿ ಗಣೇಶ್ನನ್ನು ಗೂಂಡಾ ಕಾಯ್ದೆಯಡಿ ಬಂಧಿಸಲು ಜೂ.1ರಂದು ಆದೇಶ ಹೊರಡಿಸಿದ್ದಾರೆ. ಗಣೇಶ್ ವಿರುದ್ಧ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಕೊಲೆಯತ್ನ, ಹಲ್ಲೆ, ಅಕ್ರಮ ಕೂಟ, ಮಹಿಳೆಯರ ಮೇಲೆ …
Read More »ಅನೈತಿಕ ಸಂಬಂಧ ಶಂಕೆ: ಪತ್ನಿಯನ್ನು ಕೊಂದು ಪೊಲೀಸ್ ಠಾಣೆಯಲ್ಲಿ ಶರಣಾದ ಗಂಡ
ಅನೈತಿಕ ಸಂಬಂಧದ ಅನುಮಾನ ಹಿನ್ನೆಲೆ ವ್ಯಕ್ತಿಯೊಬ್ಬ ತನ್ನ ಪತ್ನಿಯನ್ನು ಮಚ್ಚಿನಿಂದ ಕೊಲೆ ಮಾಡಿದ ಘಟನೆ ರಾಮನಗರ ತಾಲ್ಲೂಕಿನ ದಾಸರಹಳ್ಳಿ ಗ್ರಾಮದಲ್ಲಿ ಭಾನುವಾರ ನಡೆದಿದೆ. ನಾಗಮ್ಮ (42) ಮೃತಪಟ್ಟವರು. ಆರೋಪಿ ಕಣಿ ಮಾದಯ್ಯ (52) ಕೃತ್ಯದ ಬಳಿಕ ಪೊಲೀಸರಿಗೆ ಶರಣಾಗಿದ್ದಾನೆ. ದಂಪತಿ ನಡುವೆ ಈ ವಿಚಾರವಾಗಿ ಆಗಾಗ ಜಗಳ ನಡೆಯುತ್ತಿತ್ತು. ಇದೇ ಕಾರಣಕ್ಕೆ ಇಬ್ಬರೂ ಪ್ರತ್ಯೇಕವಾಗಿ ವಾಸಿಸುತ್ತಿದ್ದರು. ಭಾನುವಾರ ಬೆಳಿಗ್ಗೆ ಮಾತಿನ ಚಕಮಕಿ ನಡೆದ ವೇಳೆ ಕೋಪಗೊಂಡ ಮಾದಯ್ಯ, ಮನೆಯಲ್ಲಿದ್ದ ಮಚ್ಚಿನಿಂದ …
Read More »ಪಾನ್ಬೀಡಾ ಅಂಗಡಿಯಲ್ಲಿ ಗಾಂಜಾ ಮಾರಾಟ ಆರೋಪ : ದಂಪತಿ ಬಂಧನ
ಕುಷ್ಟಗಿ: ತಾಲೂಕಿನ ಕಡೆಕೊಪ್ಪ ಬ್ರಿಡ್ಜ್ ಸಮೀಪದ ಪಾನ್ಬೀಡಾ ಅಂಗಡಿಯಲ್ಲಿ ಅಕ್ರಮವಾಗಿ ಗಾಂಜಾ ಸಂಗ್ರಹಿಸಿ ಮಾರಾಟ ಮಾಡುತ್ತಿದ್ದ ಆರೋಪದಡಿ ದಂಪತಿಯನ್ನು ಕುಷ್ಟಗಿ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಉತ್ತರ ಪ್ರದೇಶ ಮೂಲದ ದಿಲ್ವಾಘಸಿಂಗ್ ಮೇಹರ್ ಸಿಂಗ್ (55) ಹಾಗೂ ಅವರ ಪತ್ನಿ ರವೀಂದ್ರಕೌರ್ (51) ಎಂದು ಗುರುತಿಸಲಾಗಿದೆ.ಇವರು ಪ್ರಸ್ತುತ ಕಡೆಕೊಪ್ಪ ಕ್ರಾಸ್ ಸಮೀಪ ವಾಸವಾಗಿದ್ದರು. ಗಾಂಜಾ ಮಾರಾಟದ ಬಗ್ಗೆ ಖಚಿತ ಮಾಹಿತಿ ಮೇರೆಗೆ ಜಿಲ್ಲಾ ಪೊಲೀಸ್ ಅಧೀಕ್ಷಕ ರಾಮ್ ಎಲ್. ಅರಸಿದ್ದಿ, ಹೆಚ್ಚುವರಿ …
Read More »ಚಡಚಣದಲ್ಲಿ ಆರು ಮಂದಿಯ ಭೀಕರ ಕೊಲೆ ಪ್ರಕರಣ; 12 ಆರೋಪಿಗಳ ಬಂಧನ
ವಿಜಯಪುರ : ತೀವ್ರ ಸಂಚಲನ ಮೂಡಿಸಿರುವ ಚಡಚಣ ತಾಲ್ಲೂಕಿನ ಗೋವಿಂದಪುರ ಗ್ರಾಮದ 6 ಮಂದಿಯ ಭೀಕರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಇಲಾಖೆ ಕಾರ್ಯಾಚರಣೆ ನಡೆಸಿದ್ದು, ಇದುವರೆಗೆ ಒಟ್ಟು 12 ಜನ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (ಎಸ್ಪಿ) ಲಕ್ಷ್ಮಣ ಬಿ.ನಿಂಬರಗಿ ತಿಳಿಸಿದ್ದಾರೆ.ಪ್ರಕರಣದ ತನಿಖೆಯನ್ನು ಚುರುಕುಗೊಳಿಸಿರುವ ಪೊಲೀಸರು, ವಿವಿಧೆಡೆ ದಾಳಿ ನಡೆಸಿ ಪ್ರಮುಖ ಆರೋಪಿಗಳು ಸೇರಿದಂತೆ ಒಟ್ಟು 12 ಜನರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತರೆಲ್ಲರನ್ನೂ ಇಂದು ಇಂಡಿ …
Read More »ತಂದೆ ನೀರಿನಲ್ಲಿ ಮುಳುಗುತ್ತಿದ್ದರೆ, ಅಸಹಾಯಕನಾಗಿ ವಿಡಿಯೋ ಮಾಡುತ್ತಿದ್ದ ಮಗ! ಭೀಕರ ದೃಶ್ಯ ವೈರಲ್
ಕಲಬುರ್ಗಿ : ಮಗನ ಕಣ್ಣೆದುರೇ ತಂದೆಯೊಬ್ಬರು ನದಿಯಲ್ಲಿ ಮುಳುಗಿ ಸಾವನ್ನಪ್ಪಿರುವ ಭೀಕರ ಹಾಗೂ ಆಘಾತಕಾರಿ ಘಟನೆಯೊಂದು ಕಲಬುರ್ಗಿ ಜಿಲ್ಲೆಯ ಜೇವರ್ಗಿ ತಾಲೂಕಿನ ಕಟ್ಟಿ ಸಂಗಾವಿ ಗ್ರಾಮದಲ್ಲಿ ವರದಿಯಾಗಿದೆ. ಕಲಬುರ್ಗಿ ಜಿಲ್ಲೆಯ ಜೇವರ್ಗಿ ತಾಲೂಕಿನ ಕಟ್ಟಿ ಸಂಗಾವಿ ಗ್ರಾಮದ ಬಳಿ ಹರಿಯುವ ಭೀಮಾ ನದಿಯಲ್ಲಿ ಘಟನೆ ನಡೆದಿದೆ. ವಿಜಯ್ ರಾಜು ಎಂಬುವವರು ತಮ್ಮ ಎಮ್ಮೆಯನ್ನು ವಾಪಸ್ ಕರೆತರುವ ಸಲುವಾಗಿ ನದಿಗೆ ಇಳಿದಿದ್ದರು. ನದಿ ದಾಟಲು ಯತ್ನಿಸಿದ ವಿಜಯ್ ರಾಜು ಅವರಿಗೆ ಈಜಲು …
Read More »ಕಾಲೇಜು ವಿದ್ಯಾರ್ಥಿಗಳೇ ಈಕೆಯ ಟಾರ್ಗೆಟ್: ಡ್ರಗ್ಸ್ ಮಾರಾಟ ಮಾಡುತ್ತಿದ್ದ ವಿದೇಶಿ ಮಹಿಳೆ ಅರೆಸ್ಟ್
ಬೆಂಗಳೂನಲ್ಲಿ ಡ್ರಗ್ಸ್ ಮಾರಾಟ ಮಾಡುತ್ತಿದ್ದ ವಿದೇಶಿ ಮಹಿಳೆಯನ್ನು ಬೆಂಗಳೂರು ನಗರ ಜಿಲ್ಲೆ ಆನೇಕಲ್ ಪೊಲೀಸರು ಬಂಧಿಸಿದ್ದಾರೆ. ನೈಜೀರಿಯಾ ಮೂಲದ ಬ್ಲೆಸಿಂಗ್ ಒಪುಟಾ (34) ಬಂಧಿತ ಮಹಿಳೆ. ಬಂಧಿತಳಿಂದ 18 ಲಕ್ಷ ಮೌಲ್ಯದ 180 ಗ್ರಾಂ ಗಾಂಜಾ ವಶಕ್ಕೆ ಪಡೆಯಲಾಗಿದೆ. ಖಚಿತ ಮಾಹಿತಿ ಮೇರೆಗೆ ಆನೇಕಲ್ ಪೊಲೀಸರು ಕಾರ್ಯಾಚರಣೆ ನಡೆಸಿ ಮಹಿಳೆಯನ್ನು ಬಂಧಿಸಿದ್ದಾರೆ. ಕಾಲೇಜು ವಿದ್ಯಾರ್ಥಿಗಳನ್ನು ಟಾರ್ಗೆಟ್ ಮಾಡಿ ಅಲೈನ್ಸ್ ಕಾಲೇಜು ಬಳಿ ಈಕೆ ಕೊಕೇನ್ ಮಾರಾಟ ಮಾಡುತ್ತಿದ್ದಳು. ಈ ಬಗ್ಗೆ …
Read More »ಮಂಗಳೂರು | ತೋಟದಲ್ಲಿ ಗೋ ವಧೆ: ಪ್ರಕರಣ
ತೋಟದಲ್ಲಿ ಗೋವುಗಳನ್ನು ಕಡಿದು ಮಾಂಸ ಮಾಡುತ್ತಿದ್ದ ಕೆ.ಅಬ್ದುಲ್ ರಫೀಕ್, ಅದ್ರಾಮ ಮಂತೂರು ಮತ್ತು ಅಬ್ದುಲ್ ಖಾದರ್ ಪಣೆಮಜಲು ಎಂಬುವವರ ವಿರುದ್ಧ ಬೆಳ್ಳಾರೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಕಡಬ ಸವಣೂರು ಗ್ರಾಮದ ಮಾಂತೂರು ಮುಂಡತ್ತಡ್ಕದಲ್ಲಿ ಗೋವಧೆ ನಡೆಯುತ್ತಿದ್ದ ಕುರಿತು ಮೇ 29ರಂದು ಮಾಹಿತಿ ಲಭಿಸಿತ್ತು. ಉಪನಿರೀಕ್ಷಕ ಸಂತೋಷ್ ಬಿ.ಪಿ ಮತ್ತು ಸಿಬ್ಬಂದಿ ಸ್ಥಳಕ್ಕೆ ಹೋದಾಗ ಜಾನುವಾರನ್ನು ಕಡಿದು ಹಾಕಿದ್ದು ಕಂಡುಬಂದಿದೆ. ವಿಚಾರಿಸಿದಾಗ ಪರವಾನಗಿ ಇಲ್ಲದೆ ಈ ಕೃತ್ಯ ಎಸಗಿರುವುದನ್ನು ಒಪ್ಪಿಕೊಂಡಿದ್ದಾರೆ. ಹೀಗಾಗಿ …
Read More »ಬೇತಮಂಗಲ | ಮಾವಿನಕಾಯಿ ತುಂಬಿದ್ದ ಟೆಂಪೊ ಪಲ್ಟಿ
ಮಾವಿನಕಾಯಿ ಲೋಡ್ ಮಾಡಿಕೊಂಡು ಹೋಗುತ್ತಿದ್ದ ಟೆಂಪೊವೊಂದು ನಿಯಂತ್ರಣ ತಪ್ಪಿ ಪಲ್ಟಿಯಾಗಿರುವ ಘಟನೆ ಬೇತಮಂಗಲ ಸಮೀಪದ ಕೊಡಿಗೇಪಲ್ಲಿ ಗ್ರಾಮದಲ್ಲಿ ನಡೆದಿದೆ.ತಾಯಲೂರು ಕಡೆಯಿಂದ ವಿ.ಕೋಟ ಕಡೆಗೆ ಮಾವಿನಕಾಯಿ ತುಂಬಿಕೊಂಡು ಟೆಂಪೊ ಹೋಗುತ್ತಿತ್ತು. ಮಾರ್ಗ ಮಧ್ಯೆ ಕೊಡಿಗೇಪಲ್ಲಿ ಗ್ರಾಮದ ಬಳಿ ಟೆಂಪೊ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಪಕ್ಕಕ್ಕೆ ಉರುಳಿ ಬಿದ್ದಿದೆ.ಟೆಂಪೊ ಪಲ್ಟಿಯಾದ ರಭಸಕ್ಕೆ ಮಾವಿನಕಾಯಿ ರಸ್ತೆಯುದ್ದಕ್ಕೂ ಚೆಲ್ಲಾಪಿಲ್ಲಿಯಾಗಿವೆ. ಅರ್ಧಕ್ಕೂ ಹೆಚ್ಚು ಮಾವಿನ ವಾಹನಗಳ ಚಕ್ರಕ್ಕೆ ಸಿಲುಕಿವೆ. ಟೆಂಪೊ ಜಖಂ ಆಗಿದ್ದು, ಅದೃಷ್ಟವಶಾತ್ ಚಾಲಕ …
Read More »ಚಲಿಸುತ್ತಿದ್ದ ಕಾರಿನಲ್ಲಿ ದಿಢೀರ್ ಬೆಂಕಿ, ಚಾಲಕ ಬಚಾವ್
ನೆಲಮಂಗಲ ರಾಷ್ಟ್ರೀಯ ಹೆದ್ದಾರಿಯಲ್ಲಿ ಚಲಿಸುತ್ತಿದ್ದ ಕಾರೊಂದರ ಇಂಜಿನ್ನಲ್ಲಿ ದಿಢೀರನೆ ತಾಂತ್ರಿಕ ದೋಷ ಕಾಣಿಸಿಕೊಂಡು ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡ ಪರಿಣಾಮ, ಕಾರು ರಸ್ತೆ ಮಧ್ಯೆಯೇ ಧಗಧಗನೆ ಹೊತ್ತಿ ಉರಿದು ಸಂಪೂರ್ಣ ಭಸ್ಮವಾಗಿರುವ ಘಟನೆ ಬೆಂಗಳೂರಿನ ನೆಲಮಂಗಲ – ಕುಣಿಗಲ್ ಮಾರ್ಗದ ಹೆದ್ದಾರಿಯ ಲಕ್ಕೇನಹಳ್ಳಿ ಬಳಿ ನಡೆದಿದೆ . ಚಾಲಕನ ಸಮಯಪ್ರಜ್ಞೆಯಿಂದಾಗಿ ಪ್ರಾಣಾಪಾಯ ತಪ್ಪಿದೆ.ಕಾರು ಬೆಂಗಳೂರಿನಿಂದ ಮಂಗಳೂರು ಕಡೆಗೆ ಚಲಿಸುತ್ತಿದ್ದ ವೇಳೆ ಈ ದುರ್ಘಟನೆ ನಡೆದಿದೆ ಎನ್ನಲಾಗಿದೆ. ಕಾರು ಲಕ್ಕೇನಹಳ್ಳಿ ಸಮೀಪ ಬರುತ್ತಿದ್ದಂತೆ …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





