ಬೆಂಗಳೂರು: ಹಣಕ್ಕಾಗಿ ಅಪಹರಣ ಹಾಗೂ ಕ್ರಿಮಿನಲ್ ಸಂಚು ರೂಪಿಸಿದ ಅಪರಾಧಕ್ಕಾಗಿ ಬೆಂಗಳೂರಿನ ನ್ಯಾಯಾಲಯವೊಂದು ತಮಿಳುನಾಡು ಮೂಲದ ಶಂಕರ್ ಆರ್ಮುಗಮ್ ಎಂಬಾತನಿಗೆ ಜೀವಾವಧಿ ಶಿಕ್ಷೆ ವಿಧಿಸಿತ್ತು. ಅದರಂತೆ ಈತ ಪರಪ್ಪನ ಅಗ್ರಹಾರದ ಕೇಂದ್ರ ಕಾರಾಗೃಹದಲ್ಲಿ ಶಿಕ್ಷೆ ಅನುಭವಿಸುತ್ತಿದ್ದ. ಆದರೆ, ಜೈಲಿನಿಂದ ಹೇಗಾದರೂ ಮಾಡಿ ತಪ್ಪಿಸಿಕೊಳ್ಳಲು ಸಿನಿಮೀಯ ಶೈಲಿಯ ಮಾಸ್ಟರ್ ಪ್ಲಾನ್ ಮಾಡಿದ್ದ ಈ ಚಾಣಾಕ್ಷ ಖೈದಿ, ಸುಪ್ರೀಂ ಕೋರ್ಟ್ ಹೆಸರಿನಲ್ಲೇ ಬಿಡುಗಡೆಯ ನಕಲಿ ಆದೇಶ ಪತ್ರ ಮತ್ತು ಮುದ್ರೆಯನ್ನು ಸೃಷ್ಟಿಸಿದ್ದ. ಇದನ್ನು …
Read More »ಸಾಲಗಾರನಿಗೆ ಹೆದರಿಸಲು ತಂದಿದ್ದ ಲಾಂಗ್ಗೆ ಬಲಿಯಾದ ನಿರಪರಾಧಿ ಯುವಕ! ಮೂವರು ಅರೆಸ್ಟ್
ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಕೆ. ಹೊನ್ನಲಗೆರೆಯಲ್ಲಿ ನಡೆದ ಯುವಕನ ಬರ್ಬರ ಹತ್ಯೆ ಪ್ರಕರಣವನ್ನು ಪೊಲೀಸರು ಭೇದಿಸಿ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಅಜ್ಜಹಳ್ಳಿ ಗ್ರಾಮದ ನಿಶಾಂತ್, ಕಾರ್ತಿಕ್ ಹಾಗೂ ಗೂಳೂರುದೊಡ್ಡಿಯ ರವಿ ಬಂಧಿತ ಆರೋಪಿಗಳಾಗಿದ್ದಾರೆ. ಸಾಲದ ವಿಚಾರಕ್ಕೆ ಅಶೋಕ್ ಎಂಬಾತನನ್ನು ಬೆದರಿಸಲು ಬಂದಿದ್ದ ಆರೋಪಿಗಳು ಬಾರ್ನಲ್ಲಿ ಮದ್ಯಪಾನ ಮಾಡುತ್ತಿದ್ದ ವೇಳೆ ಸುನೀಲ್ ಜೊತೆ ಕ್ಷುಲ್ಲಕ ಜಗಳಕ್ಕೆ ಇಳಿದಿದ್ದರು. ಬಳಿಕ ರಸ್ತೆ ಮಧ್ಯೆ ಲಾಂಗ್ನಿಂದ ದಾಳಿ ನಡೆಸಿ ಸುನೀಲ್ನನ್ನು ಬರ್ಬರವಾಗಿ ಹತ್ಯೆ …
Read More »ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಕುಸಿದು 7 ಜನ ಸಾವಿಗೆ ಸ್ಫೋಟಕ ಕಾರಣ ಬಹಿರಂಗ: ಗುತ್ತಿಗೆದಾರರ ವಿರುದ್ಧ FIR
ಬೆಂಗಳೂರು ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಕುಸಿತ ದುರಂತ ಪ್ರಕರಣಕ್ಕೆ ಸಂಬಂಧಿಸಿ ಕಮರ್ಷಿಯಲ್ ಸ್ಟ್ರೀಟ್ ಪೊಲೀಸ್ ಠಾಣೆಯಲ್ಲಿ ಮತ್ತೊಂದು ಎಫ್ಐಆರ್ ದಾಖಲಾಗಿದೆ. ನಿರ್ಮಾಣ ಕಾಮಗಾರಿ ಗುತ್ತಿಗೆ ಪಡೆದಿದ್ದ ಚೆನ್ನೈ ಮೂಲದ ಎಎಸ್ಆರ್ ಟ್ರೇಡರ್ಸ್ ಕಂಪನಿ ವಿರುದ್ಧ ಎಕ್ಸಿಕ್ಯೂಟಿವ್ ಇಂಜಿನಿಯರ್ ಚಂದ್ರು ದೂರು ನೀಡಿದ್ದಾರೆ. ಬೌರಿಂಗ್ ಹಾಗೂ ಲೇಡಿ ಕರ್ಝನ್ ಮೆಡಿಕಲ್ ಕಾಲೇಜಿನ ಕಟ್ಟಡ ಅವಶೇಷ ಮತ್ತು ಹೆಚ್ಚುವರಿ ತ್ಯಾಜ್ಯವನ್ನು ನಿಯಮಾನುಸಾರ ತೆರವುಗೊಳಿಸದೆ ಕಾಂಪೌಂಡ್ ಪಕ್ಕದಲ್ಲೇ ರಾಶಿ ಹಾಕಲಾಗಿತ್ತು. ತ್ಯಾಜ್ಯದ ಭಾರ ತಡೆಯಲಾಗದೆ …
Read More »ಭಟ್ಕಳ: ಕಪ್ಪೆ ಚಿಪ್ಪು ಆರಿಸಲು ಕಳಿನಟ್ಟಿ ಹೊಳೆಗೆ ಇಳಿದಿದ್ದ 8 ಜನ ಸಾವು!
ಭಟ್ಕಳ: ಚಪ್ಪೆಕಲ್ಲು ತೆಗೆಯಲು ಹೋದ 8 ಮಂದಿ ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ತಾಲ್ಲೂಕಿನ ಶಿರಾಲಿಯ ಅಳ್ವೆಕೋಡಿ ಸಮೀಪ ತಟ್ಟಿಹಕ್ಕಲ ಕಳಿನಟ್ಟಿ ಹೊಳೆಯಲ್ಲಿ ಭಾನುವಾರ ನಡೆದಿದೆ. ಪಡುಶಿರಾಲಿ ಬೆಂಗ್ರೆಯ ಲಕ್ಷ್ಮಿ ಮಹಾದೇವ ನಾಯ್ಕ (42), ಶಾರದಾಹೊಳೆಯವರಾದ ಉಮೇಶ ನಾಯ್ಕ (30), ಲಕ್ಷ್ಮಿ ನಾಯ್ಕ (30), ಲಕ್ಷ್ಮಿ ಅಣ್ಣಪ್ಪ ನಾಯ್ಕ (60), ಲಕ್ಷ್ಮಿ ಶಿವರಾಮ ನಾಯ್ಕ (49), ಜ್ಯೋತಿ ನಾಗಪ್ಪ ನಾಯ್ಕ (34), ಮಾಲತಿ ನಾಯ್ಕ (38), ಮಾಸ್ತಮ್ಮ ನಾಯ್ಕ ಮೃತರು. …
Read More »ಮೃತರನ್ನೂ ಬಿಡದ ಕಳ್ಳರು: ಮಹಿಳೆ ಮೈಮೇಲಿದ್ದ 18 ಗ್ರಾಂ ಚಿನ್ನಾಭರಣಗಳು ಕಳವು
ಉಡುಪಿ ಜಿಲ್ಲೆಯ ಕೊಲ್ಲೂರಿನಲ್ಲಿ ನಡೆದ ಭೀಕರ ರಸ್ತೆ ಅಪಘಾತದ ಬಳಿಕ ಮೃತ ಮಹಿಳೆಯ ಮೈಮೇಲಿದ್ದ ಸುಮಾರು 18 ಗ್ರಾಂ ಚಿನ್ನದ ಒಡವೆಗಳನ್ನು ಕಳ್ಳರು ಕದ್ದೊಯ್ದ ಅಮಾನವೀಯ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಮೇ 17ರಂದು ಕೇರಳ ಮೂಲದ ಪ್ರವಾಸಿಗರ ಜೀಪಿಗೆ ಮೀನು ಸಾಗಾಟ ವಾಹನ ಡಿಕ್ಕಿ ಹೊಡೆದು ಇಬ್ಬರು ಸಾವನ್ನಪ್ಪಿ, ಎಂಟು ಮಂದಿ ಗಾಯಗೊಂಡಿದ್ದರು. ಗೊಂದಲದ ಪರಿಸ್ಥಿತಿಯನ್ನು ದುರುಪಯೋಗಪಡಿಸಿಕೊಂಡು ಕಳ್ಳರು ಈ ಕೃತ್ಯ ಎಸಗಿರುವ ಶಂಕೆ ವ್ಯಕ್ತವಾಗಿದ್ದು, ಕೊಲ್ಲೂರು ಠಾಣೆಯಲ್ಲಿ …
Read More »ಮಂಗಳೂರು: ಗಸ್ತು ವೇಳೆ ಪೊಲೀಸ್ ಮೇಲೆ ಕಲ್ಲಿನಿಂದ ಹಲ್ಲೆ ನಡೆಸಿ ಪರಾರಿಯಾದ ಯುವಕರು!
ರಾತ್ರಿವೇಳೆ ಅನುಮಾನಾಸ್ಪದವಾಗಿ ತಿರುಗುವ ವಾಹನಗಳ ತಪಾಸಣೆ ನಡೆಸುತ್ತಿದ್ದ ಕಾನ್ಸ್ಟೆಬಲ್ ಮೇಲೆ ದ್ವಿಚಕ್ರ ವಾಹನದಲ್ಲಿ ಬಂದ ಯುವಕರು ಹಲ್ಲೆ ನಡೆಸಿ ಪರಾರಿಯಾಗಿದ್ದು, ಈ ದೃಶ್ಯ ಸಮೀಪದಲ್ಲಿದ್ದ ಸಿ.ಸಿ.ಟಿ.ವಿ ಕ್ಯಾಮೆರಾದಲ್ಲಿ ದಾಖಲಾಗಿದೆ. ನಗರದ ಉರ್ವ ಕೋಡಿಕಲ್ ನಾರಾಯಣಗುರು ಕೋ-ಆಪರೇಟಿವ್ ಸೊಸೈಟಿ ಬಳಿ ಇಬ್ಬರು ಪೊಲೀಸ್ ಕಾನ್ಸ್ಟೆಬಲ್ಗಳು ಭಾನುವಾರ ಮುಂಜಾಣೆ 2 ಗಂಟೆ ಸುಮಾರಿಗೆ ಕರ್ತವ್ಯ ನಿರತರಾಗಿದ್ದ ವೇಳೆ ದ್ವಿಚಕ್ರವಾಹನವೊಂದು ಅತಿವೇಗವಾಗಿ ಸಾಗಿತ್ತು. ವಾಹನ ನಿಲ್ಲಿಸುವಂತೆ ಪೊಲೀಸರು ನೀಡಿದ ಸೂಚನೆಯನ್ನು ಪಾಲಿಸದೆಯೇ ಯುವಕರು ಮುಂದಕ್ಕೆ …
Read More »ಮೋದಿ ತೆರಳುವ ರಸ್ತೆಯಲ್ಲಿ ಸ್ಪೋಟಕ ಪತ್ತೆ ಕೇಸ್ : ಪೊಲೀಸ್ ಅಧಿಕಾರಿಗಳು ಸೇರಿ 6 ಸಿಬ್ಬಂದಿ ಸಸ್ಪೆಂಡ್!
ಬೆಂಗಳೂರು ನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಭೇಟಿ ವೇಳೆ ಸಂಭವಿಸಿದ ಭದ್ರತಾ ಲೋಪ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸ್ ಇಲಾಖೆ ಕಠಿಣ ಕ್ರಮ ಕೈಗೊಂಡಿದೆ. ಪ್ರಧಾನಿ ಸಂಚರಿಸುವ ಮಾರ್ಗದಲ್ಲೇ ಸ್ಫೋಟಕ ವಸ್ತುಗಳು ಪತ್ತೆಯಾಗಿದ್ದ ಹಿನ್ನೆಲೆಯಲ್ಲಿ ಓರ್ವ ಪಿಎಸ್ಐ, ಓರ್ವ ಎಎಸ್ಐ ಸೇರಿದಂತೆ ಒಟ್ಟು ಆರು ಮಂದಿ ಪೊಲೀಸ್ ಸಿಬ್ಬಂದಿಯನ್ನು ಅಮಾನತುಗೊಳಿಸಲಾಗಿದೆ. ಪ್ರಧಾನಿ ಮೋದಿ ಇತ್ತೀಚೆಗೆ ಬೆಂಗಳೂರಿನ ಹೊರವಲಯದ ಕಾರ್ಯಕ್ರಮಕ್ಕೆ ಭೇಟಿ ನೀಡಿದ್ದ ವೇಳೆ ಬೆಂಗಳೂರು ದಕ್ಷಿಣ ತಾಲೂಕಿನ ವಡೆರಹಳ್ಳಿ ಗೇಟ್ …
Read More »ಶಿವಮೊಗ್ಗ: ಕಾರಿನಲ್ಲಿ ಕ್ರಿಕೆಟ್ ಬೆಟ್ಟಿಂಗ್ ಮಾಡುತ್ತಿದ್ದ ಐವರ ಬಂಧನ
ಕಾರಿನೊಳಗೆ ಕುಳಿತು ಮೊಬೈಲ್ ಆಯಪ್ ಮೂಲಕ ಅಕ್ರಮವಾಗಿ ಕ್ರಿಕೆಟ್ ಬೆಟ್ಟಿಂಗ್ ಆಡುತ್ತಿದ್ದ ಐವರು ಯುವಕರನ್ನು ವಿನೋಬನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಆರ್ಎಂಸಿ ಯಾರ್ಡ್ ಹತ್ತಿರ ಗುರುವಾರ ಕಾರಿನಲ್ಲಿ ಕ್ರಿಕೆಟ್ ಬೆಟ್ಟಿಂಗ್ ಆಡುತ್ತಿರುವ ಬಗ್ಗೆ ದೊರೆತ ಖಚಿತ ಮಾಹಿತಿ ಮೇರೆಗೆ ಪಿಎಸ್ಐ ಹಾಗೂ ಸಿಬ್ಬಂದಿ ದಾಳಿ ನಡೆಸಿದ್ದರು.ದಾಳಿಯ ವೇಳೆ ಐವರು ಯುವಕರು ‘ಕ್ರಿಕ್ ಲೈನ್ ಗುರು’ ಎಂಬ ಮೊಬೈಲ್ ಫೋನ್ ಅಪ್ಲಿಕೇಷನ್ ಬಳಸಿ ಆನ್ಲೈನ್ ಮೂಲಕ ಕ್ರಿಕೆಟ್ ಬೆಟ್ಟಿಂಗ್ನಲ್ಲಿ ತೊಡಗಿರುವುದು ಪತ್ತೆಯಾಗಿದೆ. …
Read More »ಪ್ರಧಾನಿ ಮೋದಿ ಸಂಚರಿಸುವ ಮಾರ್ಗದಲ್ಲಿ ಸ್ಫೋಟಕ ಪತ್ತೆ ಪ್ರಕರಣ: ಓರ್ವ ಪೊಲೀಸ್ ಅಧಿಕಾರಿ ಸೇರಿ 6 ಸಿಬ್ಬಂದಿಗಳು ಸಸ್ಪೆಂಡ್
ಬೆಂಗಳೂರು ನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಭೇಟಿ ವೇಳೆ ಸಂಚರಿಸುವ ಮಾರ್ಗದಲ್ಲಿ ಜಿಲೆಟಿನ್ ಕಡ್ಡಿಗಳು ಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿ ಓರ್ವ ಪೊಲೀಸ್ ಅಧಿಕಾರಿ ಸೇರಿದಂತೆ ಆರು ಮಂದಿ ಪೊಲೀಸ್ ಸಿಬ್ಬಂದಿಯನ್ನು ಅಮಾನತುಗೊಳಿಸಲಾಗಿದೆ. ಮೇ 10ರಂದು ಪ್ರಧಾನಿ ಮೋದಿ ನಗರದ ಹೊರವಲಯದಲ್ಲಿರುವ ಆರ್ಟ್ ಆಫ್ ಲೀವಿಂಗ್ ಕಾರ್ಯಕ್ರಮಕ್ಕೆ ಆಗಮಿಸಿದ್ದ ವೇಳೆ ಕಗ್ಗಲಿಪುರ ಸಮೀಪದ ವಡೇರಹಳ್ಳಿ ಗೇಟ್ ಬಳಿ ಸ್ಫೋಟಕ ವಸ್ತುಗಳು ಪತ್ತೆಯಾಗಿದ್ದವು. ಪ್ರಧಾನಿ ಭೇಟಿ ಹಿನ್ನೆಲೆ ಭಾರಿ ಭದ್ರತೆ ಏರ್ಪಡಿಸಲಾಗಿದ್ದರೂ, …
Read More »ಶ್ಮಶಾನದಲ್ಲಿ ಕತ್ತು ಕೊಯ್ದುಕೊಂಡು ಯುವಕ ಆತ್ಮಹತ್ಯೆ
ಬೆಂಗಳೂರು: ಯುವಕನೊಬ್ಬ ಕತ್ತು ಕೊಯ್ದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಅಶೋಕನಗರ ಠಾಣೆ ವ್ಯಾಪ್ತಿಯ ವಿಲ್ಸನ್ಗಾರ್ಡನ್ ಶ್ಮಶಾನದಲ್ಲಿ ನಡೆದಿದೆ. ವಿಲ್ಸನ್ಗಾರ್ಡನ್ ನಿವಾಸಿ ಗೌತಮ್ (29) ಆತ್ಮಹತ್ಯೆ ಮಾಡಿಕೊಂಡವ. ಮೇ 21 ರಂದು ತಡರಾತ್ರಿ ವಿಲ್ಸನ್ಗಾರ್ಡನ್ ಸ್ಮಶಾನಕ್ಕೆ ಬಂದಿರುವ ಗೌತಮ್ ಕತ್ತುಕೊಯ್ದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.ಶುಕ್ರವಾರ ಮುಂಜಾನೆ ಬೆಳಕಿಗೆ ಬಂದಿದೆ ಎಂದು ಪೊಲೀಸರು ಹೇಳಿದರು. ಗೌತಮ್ ಕೆಲ ವರ್ಷಗಳಿಂದ ಮಾನಸಿಕ ಅಸ್ವಸ್ಥನಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ. ಜತೆಗೆ ಆತನ ಪೋಷಕರು ಪುನರ್ವಸತಿ ಕೇಂದ್ರಕ್ಕೂ ದಾಖಲಿಸಿದ್ದರು. …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





