Breaking News

BigTv News

ಗಾಂಜಾ ಪೆಡ್ಲರ್‌ ಹಿಂಡಲಗಾ ಜೈಲಿಗೆ ರವಾನೆ

ಗದಗ: ಜಿಲ್ಲೆಯಲ್ಲಿ ನಿರಂತರವಾಗಿ ಗಾಂಜಾ ಸಾಗಣೆ ಮತ್ತು ಮಾರಾಟದಲ್ಲಿ ತೊಡಗಿದ್ದ ಬೆಟಗೇರಿಯ ಗಣೇಶ ನಗರದ ಮಾರುತಿ ಶೇಖಪ್ಪ ಕಾಳೆ ವಿರುದ್ಧ ಬೆಳಗಾವಿಯ ಹಿಂಡಲಗಾ ಜೈಲಿಗೆ ರವಾನಿಸಲಾಗಿದೆ. ಆರೋಪಿ ವಿರುದ್ಧ ಎನ್‌ಡಿಪಿಎಸ್‌ ಆಕ್ಟ್‌ ಅಡಿ ಪ್ರಕರಣ ದಾಖಲಿಸಿ, ಜಿಲ್ಲಾ ಪೊಲೀಸ್‌ ಇಲಾಖೆ ಕಠಿಣ ಕ್ರಮ ಕೈಗೊಂಡಿದೆ. ಆರೋಪಿ ಮಾರುತಿ ಕಾಳೆ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸಾರ್ವಜನಿಕರಿಗೆ ಗಾಂಜಾದಂತಹ ಅಪಾಯಕಾರಿ ಮಾದಕ ವಸ್ತುಗಳನ್ನು ಅಕ್ರಮವಾಗಿ ಮಾರಾಟ ಮಾಡಿ, ಲಾಭ ಗಳಿಸುವುದನ್ನು ರೂಢಿ …

Read More »

ಕುಂದಾಪುರ: ಸೇತುವೆ ಮೇಲೆ ಯುವಕರ ಮೋಜು ಮಸ್ತಿ ಗಲಾಟೆ; ನಾಲ್ವರು ಅರೆಸ್ಟ್

ಕುಂದಾಪುರದಲ್ಲಿ ಸಾರ್ವಜನಿಕ ಸ್ಥಳದಲ್ಲಿ ಗಲಾಟೆ ನಡೆಸಿ ಶಾಂತಿಗೆ ಭಂಗ ಉಂಟುಮಾಡುತ್ತಿದ್ದ ನಾಲ್ವರನ್ನು ಕುಂದಾಪುರ ಪೊಲೀಸರು ಬಂಧಿಸಿದ್ದಾರೆ. ಕುಂದಾಪುರ ಕಸಬಾ ಗ್ರಾಮದ ನವೀನ್, ಕೋಡಿ ಕಸಬಾ ಗ್ರಾಮದ ಪ್ರಶಾಂತ್, ಹಂಗಳೂರು ಗ್ರಾಮದ ವಿಘ್ನೇಶ್ ಹಾಗೂ ಗಣೇಶ್ ಬಂಧಿತ ಆರೋಪಿಗಳು. ಮಹೇಶ್, ನಿಶಾಂತ್ ಸೇರಿದಂತೆ ಇತರರು ಸ್ಥಳದಿಂದ ಪರಾರಿಯಾಗಿದ್ದು, ಅವರಿಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ. ರಾತ್ರಿ ರೌಂಡ್ಸ್ ವೇಳೆ ಚರ್ಚ್ ರೋಡ್‌ನಿಂದ ಕೋಡಿಗೆ ಸಂಪರ್ಕಿಸುವ ಸೇತುವೆ ಮೇಲೆ ಕೆಲವರು ಜೋರಾಗಿ ಜಗಳವಾಡುತ್ತಾ, ಪರಸ್ಪರ …

Read More »

ಜಾರ್ಖಂಡ್‌| ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ಆರೋಪ; ಯೋಧನ ಬಂಧನ

ಜಾರ್ಖಂಡ್‌ನ ರಾಜಧಾನಿ ರಾಂಚಿಯಲ್ಲಿ ವಿದ್ಯಾರ್ಥಿನಿಯೋರ್ವಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಸೇನೆಯ 38 ವರ್ಷದ ಯೋಧನೋರ್ವನನ್ನು ಬಂಧಿಸಲಾಗಿದೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ. 23 ವರ್ಷದ ಯುವತಿ ಕಾಲೇಜಿನಿಂದ ಮನೆಗೆ ಹಿಂದಿರುಗುತ್ತಿದ್ದಾಗ ಲಾಲ್‌ಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಶುಕ್ರವಾರ ಈ ಘಟನೆ ನಡೆದಿದೆ ಎಂದು ಅವರು ಹೇಳಿದ್ದಾರೆ. ”ಆರೋಪಿ ಯೋಧನನ್ನು ಬಂಧಿಸಿ ಜೈಲಿಗೆ ಕಳುಹಿಸಲಾಗಿದೆ. ಸಂತ್ರಸ್ತೆಯ ಹೇಳಿಕೆ ಮತ್ತು ತಾಂತ್ರಿಕೆ ಪುರಾವೆಗಳ ಆಧಾರದಲ್ಲಿ ಆರೋಪಿಯ ವಿರುದ್ಧ ಭಾರತೀಯ ನ್ಯಾಯ ಸಂಹಿತೆ …

Read More »

ಸಾರ್ವಜನಿಕ ಶಾಂತಿಭಂಗ ಆರೋಪ: ನಾಲ್ವರು ವಶಕ್ಕೆ

ಕುಂದಾಪುರ ಚರ್ಚ್ ರೋಡ್‌ನಿಂದ ಕೋಡಿಗೆ ಸಂಪರ್ಕಿಸುವ ಸೇತುವೆ ಮೇಲೆ ಪರಸ್ಪರ ಗಲಾಟೆ ಮಾಡಿ ಶಾಂತಿ ಭಂಗ ಉಂಟು ಮಾಡುತ್ತಿದ್ದ ನಾಲ್ವರನ್ನು ಕುಂದಾಪುರ ಪೊಲೀಸರು ವಶಕ್ಕೆ ಪಡೆದು ಕೊಂಡಿದ್ದಾರೆ. ಕುಂದಾಪುರದ ನವೀನ, ಕೋಡಿಯ ಪ್ರಶಾಂತ್ ಹಾಗೂ ಗಣೇಶ್, ಹಂಗಳೂರಿನ ವಿಘ್ನೇಶ್ ಎಂಬವರನ್ನು ಪೊಲೀಸರು ವಶಕ್ಕೆ ಪಡೆದು ಕೊಂಡಿದ್ದು, ಹೋವಿನಟೆಬಲ್ ಮಹೇಶ್, ನಿಶಾಂತ ಹಾಗೂ ಇತರರು ಓಡಿ ಹೋಗಿದ್ದಾರೆ.ಈ ಬಗ್ಗೆ ಕುಂದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More »

ಕಲಬುರಗಿಯಲ್ಲಿ ನೀಟ್ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿನಿ ಆತ್ಮಹತ್ಯೆ

ವೈದ್ಯಕೀಯ ಶಿಕ್ಷಣ ಪ್ರವೇಶಕ್ಕಾಗಿ ಕಲಬುರಗಿಯಲ್ಲಿ ನೀಟ್ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ಭಾಗ್ಯಶ್ರೀ(18) ಆತ್ಮಹತ್ಯೆ ಮಾಡಿಕೊಂಡವರು ಎಂದು ಹೇಳಲಾಗಿದೆ. ಕಲಬುರ್ಗಿಯ ಕೋರ್ಟ್ ವೃತ್ತದ ಬಳಿಯ ಅಪಾರ್ಟ್ ಮೆಂಟ್ ನಲ್ಲಿ ಘಟನೆ ನಡೆದಿದೆ. ನೀಟ್ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿನಿ ಭಾಗ್ಯಶ್ರೀ ವೈದ್ಯಕೀಯ ಶಿಕ್ಷಣದ ಬಗ್ಗೆ ಬಹಳ ನಿರೀಕ್ಷೆ ಹೊಂದಿದ್ದರು. ಮೇ 3ರಂದು ನೀಟ್ ಪರೀಕ್ಷೆ ಬರೆದಿದ್ದರು. ಅವರ ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಕಲಬುರಗಿ ಸ್ಟೇಷನ್ ಬಜಾರ್ ಪೊಲೀಸ್ ಠಾಣಾ …

Read More »

ವಾಕಿಂಗ್ ಹೋಗಿದ್ದ ವೃದ್ಧೆ ಸರ ದೋಚಿದ್ದ ಇಬ್ಬರು ಅರೆಸ್ಟ್

ಶಿವಮೊಗ್ಗದ ವಿನೋಬನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ವೃದ್ಧೆಯ ಸರಗಳ್ಳತನ ಪ್ರಕರಣವನ್ನು ಪೊಲೀಸರು ಭೇದಿಸಿ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರಿಂದ ₹1 ಲಕ್ಷ ಮೌಲ್ಯದ ಚಿನ್ನದ ಸರ ಹಾಗೂ ಕೃತ್ಯಕ್ಕೆ ಬಳಸಿದ್ದ ₹40 ಸಾವಿರ ಮೌಲ್ಯದ ಬೈಕ್ ವಶಕ್ಕೆ ಪಡೆಯಲಾಗಿದೆ. ಮೇ 13ರಂದು ಸೂರ್ಯ ಬಡಾವಣೆಯ 73 ವರ್ಷದ ವೃದ್ಧೆಯೊಬ್ಬರು ವಾಕಿಂಗ್‌ಗೆ ತೆರಳಿದ್ದ ವೇಳೆ ಬೈಕ್‌ನಲ್ಲಿ ಬಂದ ಇಬ್ಬರು ಅಪರಿಚಿತರು ಅವರ ಮಾಂಗಲ್ಯ ಸರ ಕಿತ್ತು ಪರಾರಿಯಾಗಿದ್ದರು. ಪ್ರಕರಣ ದಾಖಲಿಸಿಕೊಂಡ …

Read More »

ನೇಣಿಗೆ ಶರಣಾದ ಪೊಲೀಸ್ ಕಾನ್ ಸ್ಟೆಬಲ್ ಪತ್ನಿ: ವರದಕ್ಷಿಣೆ ಕಿರುಕುಳ ಆರೋಪದಡಿ ದೂರು

ಬೆಂಗಳೂರಿನ ಕೆಆರ್ ಪುರಂ ಪೊಲೀಸ್ ಕ್ವಾರ್ಟರ್ಸ್‌ನಲ್ಲಿ ಪೊಲೀಸ್ ಕಾನ್ಸ್‌ಟೆಬಲ್ ರಾಜೇಶ್ ಆರಾಧ್ಯ ಅವರ ಪತ್ನಿ ಲಕ್ಷ್ಮಿಪ್ರಿಯಾ (27) ಆತ್ಮಹತ್ಯೆ ಮಾಡಿಕೊಂಡ ದುರ್ಘಟನೆ ನಡೆದಿದೆ. ಮಂಡ್ಯ ಜಿಲ್ಲೆಯ ಮಳವಳ್ಳಿಯ ಮೂಲದ ದಂಪತಿಗೆ ಎಂಟು ತಿಂಗಳ ಮಗು ಇದೆ. ತಂದೆ-ತಾಯಿಗೆ ಗೌರವ ನೀಡುವುದಿಲ್ಲ ಎಂದು ಪತಿ ಬೈದಿದ್ದರಿಂದ ಮನನೊಂದು ಲಕ್ಷ್ಮಿಪ್ರಿಯಾ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಅಲ್ಲದೆ, ಮದುವೆಯಾದ ಬಳಿಕ ಪತಿ ಹಾಗೂ ಕುಟುಂಬ ಸದಸ್ಯರು ಮಾನಸಿಕ ಮತ್ತು ದೈಹಿಕ ಕಿರುಕುಳ ನೀಡುತ್ತಿದ್ದರು ಎಂದು …

Read More »

ಸರ್ಕಾರಿ ಕಚೇರಿಯಲ್ಲೇ ಗುಂಡು-ತುಂಡು ಪಾರ್ಟಿ, ಮೂವರು ಸಿಬ್ಬಂದಿ ಅಮಾನತು!

ರಾಯಚೂರಿನ ಲಿಂಗಸುಗೂರು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಕಚೇರಿಯಲ್ಲಿ ಮದ್ಯದ ಪಾರ್ಟಿ ನಡೆಸಿದ ಆರೋಪದ ಹಿನ್ನೆಲೆಯಲ್ಲಿ ಮೂವರು ಸರ್ಕಾರಿ ನೌಕರರನ್ನು ಅಮಾನತುಗೊಳಿಸಲಾಗಿದೆ. ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಹನುಮಪ್ಪ ಆದವಾನಿ, ಎಫ್‌ಡಿಎ ರಾಮಣ್ಣ ಪೂಜಾರಿ ಹಾಗೂ ಕಾವಲುಗಾರ ಹನುಮಂತ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ. ಸರ್ಕಾರಿ ಕಚೇರಿಯನ್ನು ವೈಯಕ್ತಿಕ ಪಾರ್ಟಿಗೆ ಬಳಸಿಕೊಂಡಿರುವುದು ಭಾರಿ ಆಕ್ರೋಶಕ್ಕೆ ಕಾರಣವಾಗಿದ್ದು, ಇಲಾಖಾ ವಿಚಾರಣೆ ಬಾಕಿಯಿರುವಂತೆ ಅಮಾನತು ಆದೇಶ ಜಾರಿಯಾಗಿದೆ.

Read More »

ಕೋಳಿ ಅಂಕ: ಇಬ್ಬರ ಬಂಧನ

ಹೆಬ್ರಿ: ನಾಲ್ಕೂರು ಗ್ರಾಮದ ಚಂದಾಲ್‌ಕಟ್ಟೆ ಗೇರು ಪ್ಲಾಂಟೇಷನ್ ಎಂಬಲ್ಲಿ ಮೇ 20ರಂದು ಕೋಳಿ ಅಂಕ ನಡೆಸುತ್ತಿದ್ದ ಇಬ್ಬರನ್ನು ಹೆಬ್ರಿ ಪೊಲೀಸರು ಬಂಧಿಸಿದ್ದಾರೆ. ಶೇಖರ ಪೂಜಾರಿ ಹಾಗೂ ಬಸವ ಕುಲಾಲ್ ಬಂಧಿತ ಆರೋಪಿಗಳು. ಪೊಲೀಸ್ ದಾಳಿ ವೇಳೆ ಕೆಲವರು ಓಡಿ ಹೋಗಿ ದ್ದಾರೆ. ಆರೋಪಿಗಳಿಂದ 2800ರೂ. ಮೌಲ್ಯದ ನಾಲ್ಕು ಕೋಳಿ ಹುಂಜ, 3 ಕೋಳಿ ಬಾಳು ಹಾಗೂ 1000ರೂ. ನಗದು ವಶಪಡಿಸಿಕೊಳ್ಳಲಾಗಿದೆ. ಈ ಬಗ್ಗೆ ಹೆಬ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More »

10 ವರ್ಷದ ಬಾಲಕಿ ಕಿಡ್ನ್ಯಾಪ್ ಮಾಡಿ ಬರ್ಬರ ಹತ್ಯೆ

ತಮಿಳುನಾಡಿನ ಕೊಯಮತ್ತೂರಿನ ಸುಲೂರು ಪ್ರದೇಶದಲ್ಲಿ 10 ವರ್ಷದ ಬಾಲಕಿಯನ್ನು ಅಪಹರಿಸಿ ಬರ್ಬರವಾಗಿ ಹತ್ಯೆ ಮಾಡಿದ ಘಟನೆ ನಡೆದಿದೆ. ಕಣ್ಣಂಪಾಳಯಂ ಸರೋವರದ ಬಳಿ ಬಾಲಕಿಯ ಶವ ಪತ್ತೆಯಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಕಾರ್ತಿಕ್ ಮತ್ತು ಮೋಹನ್ ರಾಜ್ ಎಂಬ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಬಾಲಕಿ ದಿನಸಿ ಖರೀದಿಸಲು ಹೋಗಿದ್ದ ವೇಳೆ ಅಪಹರಣ ನಡೆದಿದೆ ಎನ್ನಲಾಗಿದೆ. ಘಟನೆ ಬಳಿಕ ಕುಟುಂಬಸ್ಥರು ಹಾಗೂ ಸಾರ್ವಜನಿಕರು ನ್ಯಾಯಕ್ಕಾಗಿ ಪ್ರತಿಭಟನೆ ನಡೆಸಿದ್ದು, ರಾಜ್ಯದ ಕಾನೂನು ಸುವ್ಯವಸ್ಥೆ ಬಗ್ಗೆ ಆಕ್ರೋಶ …

Read More »