Breaking News

BigTv News

ರೌಡಿಶೀಟರ್ ವಿಲ್ಸನ್ ಗಾರ್ಡನ್ ನಾಗನಿಗೆ ಜಾಮೀನು ಮಂಜೂರು: ಬಿಡುಗಡೆ ವೇಳೆ ಸನ್ಮಾನ ಮಾಡಲು ಹೋದವರು ಪೊಲೀಸ್ ವಶಕ್ಕೆ

ಬೆಂಗಳೂರು: ರೌಡಿಶೀಟರ್ ವಿಲ್ಸನ್ ಗಾರ್ಡನ್ ನಾಗನಿಗೆ ಜಾಮೀನು ಮಂಜೂರಾಗಿರುವ ಹಿನ್ನೆಲೆಯಲ್ಲಿ ಸನ್ಮಾಅನ ಮಾಡಲು ಹೋಗಿದ್ದವರನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದಿರುವ ಘಟನೆ ನಡೆದಿದೆ.ಸಿದ್ದಾಪುರದ ಮಹೇಶ್ ಕೊಲೆ ಪ್ರಕರಣದಲ್ಲಿ ಬೆಳಗಾವಿ ಜೈಲು ಪಾಲಾಗಿರುವ ರೌಡಿಶೀಟರ್ ವಿಲ್ಸನ್ ಗಾರ್ಡನ್ ನಾಗನಿಗೆ ನಿನ್ನೆ ಸೆಷನ್ಸ್ ಕೋರ್ಟ್ ಜಾಮೀನು ಮಂಜೂರು ಮಾಡಿತ್ತು.ಈ ಹಿನ್ನೆಲೆಯಲ್ಲಿ ಇಂದು ಯುವಕರ ಗುಂಪೊಂದು ವಿಲ್ಸನ್ ಗಾರ್ಡನ್ ನಾಗ ಜೈಲಿನಿಂದ ಬಿಡುಗಡೆಯಾಗುವ ವೇಳೆ ಸನ್ಮಾನ ಮಾಡಲು ಮುಂದಾಗಿತ್ತು. ವಿಷಯ ತಿಳಿಯುತ್ತಿದ್ದಂತೆ ಅಲರ್ಟ್ ಆದ …

Read More »

ಚಿನ್ನದಂಗಡಿಗೆ ನುಗ್ಗಿ ಚಿನ್ನದ ಗಟ್ಟಿಗಳ ಕಳವು: ಮೂವರು ಸೆರೆ‌

ಬೆಂಗಳೂರು: ಜ್ಯುವೆಲ್ಲರಿ ಶಾಪ್‌ನ ಶೌಚಾಲಯದ ಕಿಟಕಿಯಿಂದ ಒಳನುಗ್ಗಿ ಚಿನ್ನಾಭರಣ ತಯಾರಿಸಲು ಸಂಗ್ರಹಿಸಿಟ್ಟಿದ್ದ 24 ಕ್ಯಾರೆಟ್‌ನ ಚಿನ್ನದ ಗಟ್ಟಿಗಳನ್ನು ಕಳವು ಮಾಡಿದ್ದ ಮೂವರು ಆರೋಪಿಗಳನ್ನು ಹಲಸೂರು ಗೇಟ್‌ ಠಾಣೆ ಪೊಲೀಸರು ಬಂಧಿಸಿದ್ದಾರೆ. ಶ್ರೀರಾಂಪುರ ನಿವಾಸಿ ಅರ್ಜುನ್‌ (28), ರಾಕಿ (26) ಮತ್ತು ನಾಗರಾಜು (26) ಬಂಧಿತರು. ಆರೋಪಿಗಳಿಂದ 12 ಲಕ್ಷ ರೂ. ಮೌಲ್ಯದ 84 ಗ್ರಾಂ ಚಿನ್ನದ ಗಟ್ಟಿಯನ್ನು ವಶಕ್ಕೆ ಪಡೆಯಲಾಗಿದೆ. ಮೇ 6 ರಂದು ಆರೋಪಿಗಳು ನಗರತ್‌ ಪೇಟೆ ಮುಖ್ಯರಸ್ತೆಯಲ್ಲಿರುವ …

Read More »

ಉತ್ತರ ಪ್ರದೇಶ: ಪೌರಕಾರ್ಮಿಕ‌ ಮಹಿಳೆಯ ಮೇಲೆ ಅತ್ಯಾಚಾರ

ಗ್ರಾಮದ ಮುಖ್ಯಸ್ಥನೊಬ್ಬ ಪೌರಕಾರ್ಮಿಕ ದಲಿತ ಮಹಿಳೆಯ ಮೇಲೆ ಅತ್ಯಾಚಾರ ಎಸಗಿದ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ‘ತನ್ನ ಪತಿಯ ನಿಧನದ ಬಳಿಕ ಅನುಕಂಪದ ಆಧಾರದಲ್ಲಿ ‍ಪೌರಕಾರ್ಮಿಕರಾಗಿ ನೇಮಕಗೊಂಡಿದ್ದ ಸಂತ್ರಸ್ತೆಯನ್ನು(40) ಆ ಗ್ರಾಮದ ಮುಖ್ಯಸ್ಥ, ವೇತನದ ಚೀಟಿಗೆ ಸಹಿ ಹಾಕುವುದಾಗಿ ಸೋಮವಾರ ತನ್ನ ಮನೆಗೆ ಕರೆಸಿಕೊಂಡಿದ್ದ’ ಎಂದು ಪೊಲೀಸರು ತಿಳಿಸಿದ್ದಾರೆ. ‘ಮನೆಗೆ ಹೋದಾಗ ಆರೋಪಿ ಬಾಗಿಲನ್ನು ಮುಚ್ಚಿ, ತನ್ನ ಕೈಗಳನ್ನು ಕಟ್ಟಿ ಹಾಕಿ ಅತ್ಯಾಚಾರ ಎಸಗಿದ್ದಾನೆ’ ಎಂದು ಸಂತ್ರಸ್ತೆ ದೂರಿನಲ್ಲಿ ತಿಳಿಸಿದ್ದಾರೆ. …

Read More »

ಮಹಿಳೆ ಸರ ದೋಚಿ ಪರಾರಿಯಾಗುತ್ತಿದ್ದಾಗಲೇ ಸಿಕ್ಕಿಬಿದ್ದ ಕಳ್ಳ

ಹಾವೇರಿ: ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದ ಮಹಿಳೆಯ 40 ಗ್ರಾಂ ಸರವನ್ನು ಕಳ್ಳತನ ಮಾಡಲಾಗಿದೆ. ಚಿನ್ನದ ಸರ ಕಸಿದು ಪರಾರಿಯಾಗುತ್ತಿದ್ದವನನ್ನು ಗ್ರಾಮಸ್ಥರು ಹಿಡಿದಿದ್ದಾರೆ.ಹಾವೇರಿ ಜಿಲ್ಲೆಯ ಹಿರೇಕೆರೂರು ತಾಲೂಕಿನ ಚನ್ನಳ್ಳಿಯ ಸಮೀಪ ಘಟನೆ ನಡೆದಿದೆ. ನಿರ್ಜನ ಪ್ರದೇಶದಲ್ಲಿ ರಸ್ತೆ ಬದಿ ನಿಂತಿದ್ದ ಸಂತೋಷ್ ಗುಡ್ಡಪ್ಪ ಹಳೆಮನೆ ಎಂಬಾತ ಸರ ಕಳವು ಮಾಡಿದ್ದಾನೆ. ರಾಧಾ ಎಂಬುವರ 40 ಗ್ರಾಂ ಚಿನ್ನದ ಸರ ಕಸಿದುಕೊಂಡು ಓಡುತ್ತಿದ್ದ ಸಂತೋಷ್ ನನ್ನು ಗ್ರಾಮಸ್ಥರು ಹಿಡಿದಿದ್ದಾರೆ. ಸಂತೋಷ್ ಹಾವೇರಿ ಜಿಲ್ಲೆಯ …

Read More »

ಒಂದೇ ದಿನ ಇಬ್ಬರ ಚಿನ್ನದ ಸರ ಕಳ್ಳತನ

ಮಳವಳ್ಳಿ: ಪಟ್ಟಣದ ಸಾರಿಗೆ ಬಸ್ ನಿಲ್ದಾಣದಲ್ಲಿ ಮಂಗಳವಾರ ಇಬ್ಬರು ಮಹಿಳಾ ಪ್ರಯಾಣಿಕರ ಚಿನ್ನದ ಸರ ಕಳ್ಳತನ ಮಾಡಲಾಗಿದೆ. ಕೊಳ್ಳೇಗಾಲ ತಾಲೂಕಿನ ಉಗನಿಯ ಗ್ರಾಮದ ಸುಂದ್ರಮ್ಮ ಹಾಗೂ ತಿ.ನರಸೀಪುರ ತಾಲೂಕಿನ ಸೇನಾಪತಿಹಳ್ಳಿ ಗ್ರಾಮದ ಜಯಮ್ಮ ಅವರ ಚಿನ್ನದ ಸರ ಕಳ್ಳತನವಾಗಿದೆ. ಸುಂದ್ರಮ್ಮ ಎಂಬುವರು ಪಟ್ಟಣದ ಹೊರವಲಯದಲ್ಲಿರುವ ಬೀರೇಶ್ವರ ದೇವಸ್ಥಾನಕ್ಕೆ ಬಂದು ಪೂಜೆ ಮುಗಿಸಿಕೊಂಡು ಸ್ವಗ್ರಾಮಕ್ಕೆ ತೆರಳಲು ಪಟ್ಟಣದ ಬಸ್ ನಿಲ್ದಾಣದಲ್ಲಿ ಬಸ್ ಹತ್ತುವ ವೇಳೆ ಪ್ರಯಾಣಿಕರ ನೂಕು ನುಗ್ಗಲಿನಲ್ಲಿ ಕಳ್ಳರು 40 …

Read More »

ಷೇರು ಮಾರುಕಟ್ಟೆ ಹೆಸರಲ್ಲಿ ವಂಚನೆ: 2 ಲಕ್ಷ ರೂ ಕಳೆದುಕೊಂಡ ಕಾರ್ಕಳದ ವ್ಯಕ್ತಿ

ಕಾರ್ಕಳ: ಆನ್‌ಲೈನ್‌ ಷೇರು ಮಾರುಕಟ್ಟೆಯಲ್ಲಿ ಹಣ ಹೂಡಿಕೆ ಮಾಡಿದರೆ ಹೆಚ್ಚಿನ ಲಾಭಾಂಶ ನೀಡುವುದಾಗಿ ನಂಬಿಸಿ ಕಾರ್ಕಳದ ವ್ಯಕ್ತಿಯೊಬ್ಬರಿಗೆ ಎರಡು ಲಕ್ಷ ರೂ. ವಂಚಿಸಿರುವ ಘಟನೆ ಬೆಳಕಿಗೆ ಬಂದಿದೆ. ಕಾರ್ಕಳದ ಗಣೇಶ್‌ ಎಂಬುವವರನ್ನು ಜ.23 ರಂದು ಸಂಪರ್ಕಿಸಿದ ಅಪರಿಚಿತ ವ್ಯಕ್ತಿಯೊಬ್ಬ, ಸ್ಟಾಕ್ ಮಾರ್ಕೆಟ್‌ನಲ್ಲಿ ಹೂಡಿಕೆ ಮಾಡುವಂತೆ ನಂಬಿಸಿದ್ದಾನೆ. ಇದನ್ನು ಸತ್ಯವೆಂದು ನಂಬಿದ ಗಣೇಶ್, ವಿವಿಧ ಹಂತಗಳಲ್ಲಿ ತಮ್ಮ ಬ್ಯಾಂಕ್ ಖಾತೆಯಿಂದ ಒಟ್ಟು 2,00,000 ರೂ. ಹಣವನ್ನು ವರ್ಗಾಯಿಸಿದ್ದರು. ಆ ಬಳಿಕ ಆರೋಪಿಯು …

Read More »

ಡ್ರಗ್ ಜಾಲಕ್ಕೆ ಬೆಚ್ಚಿದ ಬೆಂಗಳೂರು: 35 ಕೋಟಿ ರೂ ಮೌಲ್ಯದ MDMA ವಶ, ಎಂಟು ಜನ ಅರೆಸ್ಟ್

ನಗರದಲ್ಲಿ ಮತ್ತೆ ಭಾರೀ ಡ್ರಗ್ ದಂಧೆ ಬಯಲಾಗಿದ್ದು, ಎಂಡಿಎಂಎ ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಜಾಲವನ್ನು ಪೊಲೀಸರು ಭೇದಿಸಿದ್ದಾರೆ. ಈ ಪ್ರಕರಣದಲ್ಲಿ ಮೂವರು ವಿದೇಶಿ ಪ್ರಜೆಗಳು ಸೇರಿದಂತೆ ಒಟ್ಟು ಎಂಟು ಮಂದಿಯನ್ನು ಬಂಧಿಸಲಾಗಿದ್ದು, 35 ಕೋಟಿ ಮೌಲ್ಯದ 17.5 ಕೆಜಿ ಎಂಡಿಎಂಎ ವಶಪಡಿಸಿಕೊಳ್ಳಲಾಗಿದೆ. ಮೇ 11ರಂದು ಸಿಕ್ಕ ಖಚಿತ ಮಾಹಿತಿ ಆಧರಿಸಿ ಹೆಬ್ಬಾಳ ಪೊಲೀಸರು ಆನಂದನಗರ ಭಾಗದಲ್ಲಿ ದಾಳಿ ನಡೆಸಿದರು. ಈ ವೇಳೆ ಮಹಿಳೆ ಸೇರಿ ಮೂವರನ್ನು ಬಂಧಿಸಲಾಯಿತು. ಆರೋಪಿಗಳಿಂದ …

Read More »

ಚಾಮರಾಜನಗರ: ಚಿರತೆ ವಿಷಪ್ರಾಶನ ಪ್ರಕರಣ; ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

ಚಾಮರಾಜನಗರ: ಬಿಳಿಗಿರಿರಂಗನಾಥ ಹುಲಿ ಸಂರಕ್ಷಿತ ಪ್ರದೇಶ ವ್ಯಾಪ್ತಿಯ ಕೊತ್ತಲವಾಡಿ ಗ್ರಾಮದಲ್ಲಿ ಕಳೆದ ವರ್ಷ ನಡೆದಿದ್ದ ಚಿರತೆ ವಿಷಪ್ರಾಶನ ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಅರಣ್ಯಾಧಿಕಾರಿಗಳು ಬಂಧಿಸಿದ್ದಾರೆ. ಚಾಮರಾಜನಗರ ತಾಲೂಕಿನ ಕೊತ್ತಲವಾಡಿ ಗ್ರಾಮದಲ್ಲಿ ಕಳೆದ ಜುಲೈ 10ರಂದು ಚಿರತೆಯೊಂದು ವಿಷಪ್ರಾಶನದಿಂದ ಸಾವನ್ನಪ್ಪಿತ್ತು. ಪ್ರಕರಣ ದಾಖಲಿಸಿಕೊಂಡಿದ್ದ ಅರಣ್ಯ ಇಲಾಖೆ ಅಧಿಕಾರಿಗಳು ತನಿಖೆ ಮುಂದುವರಿಸಿದ್ದು, ಬುಧವಾರ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತನನ್ನು ಕೊತ್ತಲವಾಡಿ ಗ್ರಾಮದ ದೊಡ್ಡಸ್ವಾಮಿ ಬಿನ್ ಬಸಪ್ಪ ಎಂದು ಗುರುತಿಸಲಾಗಿದೆ. ಆರೋಪಿಯನ್ನು ನ್ಯಾಯಾಲಯಕ್ಕೆ …

Read More »

ಮಂಡ್ಯದಲ್ಲಿ ಭೀಕರ ಕೊಲೆ : ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಬರ್ಬರ ಹತ್ಯೆ!

ಮಂಡ್ಯದಲ್ಲಿ ಭೀಕರವಾದ ಕೊಲೆ ನಡೆದಿದ್ದು ಕೆ ಹೊನ್ನಲಗೆರೆಯಲ್ಲಿ ಮಾರ್ಕಾಸ್ತ್ರಗಳಿಂದ ಕೊಚ್ಚಿ ಯುವಕನನ್ನು ಭೀಕರವಾಗಿ ಕೊಲೆ ಮಾಡಲಾಗಿದೆ. ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಹೊನಲಗಿರಿ ಗ್ರಾಮದಲ್ಲಿ ಈ ಒಂದು ಕೊಲೆ ನಡೆದಿದೆ. ಮದ್ದೂರು ತಾಲೂಕಿನ ಚುಂಚಗನಹಳ್ಳಿ ನಿವಾಸಿ ಸುನಿಲ್ (29) ಕೊಲೆಯಾದ ಯುವಕ ಎಂದು ತಿಳಿದುಬಂದಿದೆ. ತನ್ನ ಸ್ನೇಹಿತರೊಂದಿಗೆ ಸುನಿಲ್ ಬೈಕ್ ನಲ್ಲಿ ತಿರುಳುತ್ತಿದ್ದಾಗ ಏಕಾಏಕಿ ಅಟ್ಯಾಕ್ ನಡೆಸಿದ ದುಷ್ಕರ್ಮಿಗಳು, ಬೈಕ್ ಅಡ್ಡಗಟ್ಟಿ ಮಾರಕಾಸ್ತ್ರಗಳಿಂದ ಕೊಚ್ಚಿ ಸುನೀಲನನ್ನ ಕೊಲೆ ಮಾಡಿ ದುಷ್ಕರ್ಮಿಗಳು …

Read More »

ಹಳೆ ದ್ವೇಷ: ಏಳು ಮಂದಿಯಿಂದ ಹಲ್ಲೆ

ಕುಂದಾಪುರ: ಹಳೆಯ ದ್ವೇಷದ ಹಿನ್ನೆಲೆ ಏಳು ಮಂದಿ ಸೇರಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಘಟನೆ ಕುಂಭಾಶಿಯ ಕೊರವಡಿ ಎಂಬಲ್ಲಿ ರವಿವಾರ ರಾತ್ರಿ ನಡೆದಿದೆ.ರಂಜಿತ್‌ ಹಲ್ಲೆಗೊಳಗಾದವರು. ಆರೋಪಿಗಳಾದ ವಿಕಾಸ್‌ ಪೂಜಾರಿ, ಶರತ್‌ ಪೂಜಾರಿ, ಮಹೇಂದ್ರ ಪೂಜಾರಿ, ಸುಕೇಶ್‌ ಪೂಜಾರಿ, ಅಭಿಲಾಷ್‌ ಪೂಜಾರಿ, ಮಂಜುನಾಥ ಹಾಗೂ ಸಂದೇಶ್‌ ಎಂ. ಅವರು ಸೋಡಾ ಬಾಟಲಿ ಮತ್ತು ಹೆಲ್ಮೆಟ್‌ನಿಂದ ಹಲ್ಲೆ ನಡೆಸಿದ್ದಾರೆ ಎಂದು ದೂರಲಾಗಿದೆ. ರಾಘವೇಂದ್ರ ಅವರು ನೀಡಿದ ದೂರಿನಂತೆ ಕುಂದಾಪುರ ನಗರ ಪೊಲೀಸ್ …

Read More »