ನಿವೃತ ಸೈನಿಕ ತಲೆಗೆ ಕಬ್ಬಿಣದ ರಾಡ್ ಇಂದ ಹೊಡೆದು ಭೀಕರವಾಗಿ ಕೊಲೆ ಮಾಡಿರುವ ಘಟನೆ ಕಲಬುರ್ಗಿಯ ರಾಮಮಂದಿರ ಬಳಿ ನಡೆದಿದೆ. ಕೊಲೆಯಾದ ವ್ಯಕ್ತಿಯನ್ನು ರವಿಚಂದ್ರ ಖೇಡ್ (45) ಎಂದು ತಿಳಿದುಬಂದಿದೆ. ಇಂಡಿಯನ್ ಆಯಿಲ್ ಡಿಪೋದಲ್ಲಿ ರವಿಚಂದ್ರ ಸೆಕ್ಯೂರಿಟಿ ಗಾರ್ಡ್ ಆಗಿ ಕೆಲಸ ಮಾಡುತ್ತಿದ್ದರು. ವಿವಾದಿತ ಖಾಸಗಿ ಜಾಗದಲ್ಲಿ ರವಿಚಂದ್ರವಾಗಿ ಕೊಲೆಯಾಗಿದ್ದಾರೆ. ವಿವಾದಿತ ಜಾಗದಲ್ಲಿ ಕಳೆದ ತಿಂಗಳು ಟಿನ್ ಶೆಡ್ ನಿರ್ಮಿಸಲಾಗಿತ್ತು. ಅದನ್ನು ವಿರೋಧಿ ಗುಂಪು ರಾತ್ರೋರಾತ್ರಿ ಜೆಸಿಬಿ ಇಂದ ಕೆಡವಲಾಗಿತ್ತು. …
Read More »36 ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು
ಹಾಸನ: ಶಾಂತಿಗ್ರಾಮ ಬಳಿ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಸಂಚರಿಸುತ್ತಿದ್ದ ಖಾಸಗಿ ಸ್ಲೀಪರ್ ಬಸ್ನ ಟೈರ್ ಸ್ಫೋಟಗೊಂಡು ಬೆಂಕಿ ಕಾಣಿಸಿಕೊಂಡ ಪರಿಣಾಮ ಬಸ್ ಸಂಪೂರ್ಣ ಸುಟ್ಟು ಕರಕಲಾಗಿದೆ. ಚಾಲಕನ ಸಮಯಪ್ರಜ್ಞೆಯಿಂದ 36 ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ. ಮಂಗಳೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ಬಸ್ನಲ್ಲಿ ಟೈರ್ ಸ್ಫೋಟವಾದ ಬಳಿಕ ಬೆಂಕಿ ವ್ಯಾಪಿಸಿದ್ದು, ಚಾಲಕ ತಕ್ಷಣ ಬಸ್ ನಿಲ್ಲಿಸಿ ಪ್ರಯಾಣಿಕರನ್ನು ಕೆಳಗಿಳಿಸಿದ್ದಾರೆ. ಕೆಲವೇ ನಿಮಿಷಗಳಲ್ಲಿ ಬಸ್ ಸಂಪೂರ್ಣ ಹೊತ್ತಿ ಉರಿದಿದೆ. ಘಟನೆಯಲ್ಲಿ ಪ್ರಾಣಹಾನಿ ಸಂಭವಿಸಿಲ್ಲ. ಆದರೆ …
Read More »ಮದುವೆಯಾಗುವಂತೆ ಪೀಡಿಸುತ್ತಿದ್ದ ಪ್ರೇಯಸಿಯ ಹತ್ಯೆ
ಬೆಂಗಳೂರು: ಮದುವೆಯಾಗುವಂತೆ ಒತ್ತಾಯಿಸುತ್ತಿದ್ದ ಮಹಿಳೆಯನ್ನು ಕೊಲೆ ಮಾಡಿ ಕೆರೆಯಲ್ಲಿ ಶವ ಎಸೆದ ಆರೋಪಿಯನ್ನು ಹೆಬ್ಬಗೋಡಿ ಪೊಲೀಸರು ಬಂಧಿಸಿದ್ದಾರೆ. ಅಸ್ಸಾಂ ಮೂಲದ ರತನ್ ದಾಸ್(27) ಬಂಧಿತ ಆರೋಪಿ. ಅಂಜಲಿನಾಥ್(47) ಎಂಬ ಮಹಿಳೆ ಆರೋಪಿಯನ್ನು ಮದುವೆಯಾಗುವಂತೆ ಪೀಡಿಸುತ್ತಿದ್ದಳು ಎನ್ನಲಾಗಿದೆ. ಇದರಿಂದ ಬೇಸತ್ತ ರತನ್, ಮಾತುಕತೆ ನೆಪದಲ್ಲಿ ತಿರುಪಾಳ್ಯ ಕೆರೆಯ ಬಳಿ ಕರೆಸಿ ಕತ್ತು ಹಿಸುಕಿ ಕೊಲೆ ಮಾಡಿ ಶವವನ್ನು ಕೆರೆಯಲ್ಲಿ ಎಸೆದು ಪರಾರಿಯಾಗಿದ್ದ ಎಂದು ಪೊಲೀಸರು ತಿಳಿಸಿದ್ದಾರೆ. ಮೊದಲು ಅಸಹಜ ಸಾವು ಪ್ರಕರಣ …
Read More »ಕುಡಿದ ಮತ್ತಿನಲ್ಲಿ ಸ್ನೇಹಿತರ ನಡುವೆ ಬಾರ್ ನಲ್ಲಿ ಗಲಾಟೆ – ಓರ್ವ ಸಾ*ವು!
ಬೆಂಗಳೂರು: ಯಶವಂತಪುರದಲ್ಲಿ ಕುಡಿದ ಮತ್ತಿನಲ್ಲಿ ಸ್ನೇಹಿತರ ನಡುವೆ ನಡೆದ ಜಗಳ ಕೊಲೆಯಲ್ಲಿ ಅಂತ್ಯವಾಗಿದೆ. ಕೊಪ್ಪಳ ಮೂಲದ ಶರಣಪ್ಪ(36) ಮೃತ ವ್ಯಕ್ತಿ. ಬಾರ್ನಲ್ಲಿ ಮಾತಿನ ಚಕಮಕಿ ನಡೆದ ವೇಳೆ ಆನಂದ್ ಮತ್ತು ದಕ್ಷಿಣಾಮೂರ್ತಿ ಸೇರಿ ಶರಣಪ್ಪನ ಮೇಲೆ ಹಲ್ಲೆ ನಡೆಸಿದ್ದು, ಗಂಭೀರ ಗಾಯಗಳಿಂದ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಘಟನೆ ಸಂಬಂಧ ಆರ್.ಎಂ.ಸಿ ಯಾರ್ಡ್ ಠಾಣೆ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿ ತನಿಖೆ ಮುಂದುವರಿಸಿದ್ದಾರೆ.
Read More »ಆನ್ಲೈನ್ನಲ್ಲಿ ಮಹಿಳೆಗೆ ₹9 ಲಕ್ಷ ವಂಚನೆ
ಉಡುಪಿ: ಆನ್ಲೈನ್ನಲ್ಲಿ ಬ್ಯಾಗ್ ಖರೀದಿಸಿದ ಮಹಿಳೆಗೆ ಹಣ ವಂಚನೆ ಮಾಡಿರುವ ಕುರಿತು ಸೈಬರ್ ಅಪರಾಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸಂತೆಕಟ್ಟೆಯ ಸನೀನಾ ಬಾನು ಎಂಬುವವರು ಇನ್ಸ್ಟಾಗ್ರಾಂನಲ್ಲಿ ಹ್ಯಾಂಡ್ ಬ್ಯಾಗ್ ಖರೀದಿ ಮಾಡಿದ್ದು, ಗೂಗಲ್ ಪೇ ಮುಖಾಂತರ ಹಣ ಪಾವತಿ ಮಾಡಿದ್ದರು. ಬಳಿಕ ಬೇರೆ ಬೇರೆ ಕಾರಣಗಳನ್ನು ನೀಡಿ, ಸನೀನಾ ಬಾನು ಅವರು ವರ್ಗಾವಣೆ ಮಾಡಿದ ಹಣವನ್ನು ಮರಳಿಸುವುದಾಗಿ ತಿಳಿಸಿ ಹಂತ ಹಂತವಾಗಿ ಒಟ್ಟು ₹ 9 ಲಕ್ಷ ಪಡೆದು …
Read More »ಚೌಡೇಶ್ವರಿ ರಸ್ತೆಯಲ್ಲಿ ಸ್ನೇಹಿತನಿಗೆ ಇರಿದು ಕೊಲೆ: ಆರೋಪಿ ಸೆರೆ
ಬೆಂಗಳೂರು: ಮೊಬೈಲ್ ವಿಚಾರಕ್ಕೆ ಸ್ನೇಹಿತರ ನಡುವೆ ನಡೆದ ಜಗಳ ಕೊಲೆಯಲ್ಲಿ ಅಂತ್ಯಗೊಂಡ ಘಟನೆ ಮಾರತ್ಹಳ್ಳಿ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಹುಬ್ಬಳ್ಳಿಯ ರಾಮು ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಮೇ 10ರಂದು ರಾಮು ಮತ್ತು ಪರಶುರಾಮ್ ಯಲ್ಲಪ್ಪ ಮಂಗಳಗಟ್ಟಿ(25) ನಡುವೆ ಮೊಬೈಲ್ ವಿಚಾರಕ್ಕೆ ಜಗಳವಾಗಿತ್ತು. ಮದ್ಯ ಸೇವಿಸಿ ಬಂದಿದ್ದ ರಾಮು, ಪರಶುರಾಮ್ ಅವರ ಮೊಬೈಲ್ನ್ನು ತಮಾಷೆಗೆಂದು ಬಚ್ಚಿಟ್ಟಿದ್ದ. ಬಳಿಕ ಇಬ್ಬರ ನಡುವೆ ವಾಗ್ವಾದ ನಡೆದು, ಸಿಟ್ಟಿಗೆದ್ದ ರಾಮು ಅಡುಗೆಮನೆಯ ಚಾಕುವಿನಿಂದ ಇರಿದಿದ್ದಾನೆ ಎನ್ನಲಾಗಿದೆ. …
Read More »ಹಾವೇರಿಯಲ್ಲಿ ಸಿನಿಮೀಯ ಶೈಲಿಯಲ್ಲಿ ಕಳ್ಳತನ: ತಿಜೋರಿ ಸಮೇತ ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಹಾವೇರಿ ಜಿಲ್ಲೆಯ ಹಾನಗಲ್ ತಾಲ್ಲೂಕಿನ ಚಿಕ್ಕಾಂಶಿ ಹೊಸೂರು ಗ್ರಾಮದಲ್ಲಿ ಜ್ಯುವೆಲರಿ ಅಂಗಡಿಯೊಂದರಲ್ಲಿ ಕಳ್ಳತನ ನಡೆದಿದೆ. ಸಿನಿಮೀಯ ರೀತಿಯಲ್ಲಿ ಕೇವಲ 45 ನಿಮಿಷಗಳಲ್ಲಿ ಖದೀಮರ ಗ್ಯಾಂಗ್ ಸುಮಾರು 70 ರಿಂದ 80 ಲಕ್ಷ ರೂ.ಮೌಲ್ಯದ ಚಿನ್ನಾಭರಣವನ್ನು ದೋಚಿ ಪರಾರಿಯಾಗಿದೆ. ಅಣ್ಣಪ್ಪ ಭಜಂತ್ರಿ ಎಂಬುವರಿಗೆ ಸೇರಿದ ಶಾರದಾ ಜ್ಯುವೆಲರಿ ಶಾಪ್ನಲ್ಲಿ ಈ ಕೃತ್ಯ ನಡೆದಿದೆ. ಮುಖಕ್ಕೆ ಮಾಸ್ಕ್ ಹಾಗೂ ಕೈಗೆ ಗ್ಲೌಸ್ ಧರಿಸಿ ಬಂದಿದ್ದ ಕಳ್ಳರು, ಅಂಗಡಿಯ ಬೀಗ ಮುರಿದು ಒಳನುಗ್ಗಿದ್ದಾರೆ. ಬಳಿಕ …
Read More »ಕನಕಪುರ: ಶಾಲಾ ವಾಹನಕ್ಕೆ ಕಾರು ಡಿಕ್ಕಿ
ಬೆಂಗಳೂರು ರಸ್ತೆಯ ಕುರಿಗೌಡನದೊಡ್ಡಿ ಗ್ರಾಮದಲ್ಲಿ ಶುಕ್ರವಾರ ಬೆಳಿಗ್ಗೆ ವೇಗವಾಗಿ ಚಲಿಸುತ್ತಿದ್ದ ಕಾರೊಂದು ರಸ್ತೆ ವಿಭಜಕಕ್ಕೆ ಗುದ್ದಿ, ಪಕ್ಕದ ರಸ್ತೆಯ ಎದುರುಗಡೆಯಿಂದ ಬರುತ್ತಿದ್ದ ಶಾಲಾ ವಾಹನಕ್ಕೆ ಡಿಕ್ಕಿ ಹೊಡೆದಿದೆ. ಬೆಂಗಳೂರಿನ ದೀಕ್ಷಾ ಕಾಲೇಜಿನ ಶಾಲಾ ವಾಹನ ಕನಕಪುರದಿಂದ ವಿದ್ಯಾರ್ಥಿಗಳು ಮತ್ತು ಕಾಲೇಜಿನ ಸಿಬ್ಬಂದಿಗಳನ್ನು ಕರೆದುಕೊಂಡು ಬೆಂಗಳೂರು ಕಡೆಗೆ ಹೋಗುತ್ತಿದ್ದಾಗ ಈ ಅಪಘಾತ ಸಂಭವಿಸಿದೆ. ಕನಕಪುರದ ಕಾರು ಬೆಂಗಳೂರಿನಲ್ಲಿ ಹೂವುಗಳನ್ನು ಖರೀದಿಸಿ ವಾಪಸ್ ಕನಕಪುರಕ್ಕೆ ಬರುತ್ತಿದ್ದಾಗ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದು ಪಕ್ಕದ …
Read More »ಮಂಗಳೂರು| ಮಾದಕ ವಸ್ತು ಸೇವನೆ ಪ್ರಕರಣ: 7 ಮಂದಿ ಸೆರೆ
ಮಂಗಳೂರು: ನಗರದ ವಿವಿಧ ಭಾಗಗಳಲ್ಲಿ ಮಾದಕ ವಸ್ತು ಸೇವನೆ ಮಾಡಿದ ಆರೋಪದ ಮೇರೆಗೆ 7 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ಕಂಕನಾಡಿ ನಗರ, ಕಾವೂರು, ಪಣಂಬೂರು ಹಾಗೂ ಪಾಂಡೇಶ್ವರ ಠಾಣೆ ಪೊಲೀಸರು ಪ್ರತ್ಯೇಕ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ. ಜಪ್ಪಿನಮೊಗರು ಕಡೇಕಾರ್ ನೇತ್ರಾವತಿ ಸೇತುವೆ ಕೆಳಭಾಗದಲ್ಲಿ ಮಾದಕ ವಸ್ತು ಸೇವನೆ ಮಾಡುತ್ತಿದ್ದ ಆರೋಪದಲ್ಲಿ ಮೂವರನ್ನು ಕಂಕನಾಡಿ ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಕಸಬಾ ಬೆಂಗ್ರೆಯ ವ್ಯಕ್ತಿಯೊಬ್ಬನನ್ನು ಕಾವೂರು ಪೊಲೀಸರು ವಿಚಾರಣೆ …
Read More »ಉಡುಪಿ| 6 ವರ್ಷಗಳಿಂದ ತಲೆಮರೆಸಿಕೊಂಡಿದ್ದ ರೌಡಿಶೀಟರ್ ಅಭಿಜಿತ್ ಸೆರೆ
ಕಾಪು ಪೊಲೀಸ್ ಠಾಣಾ ವ್ಯಾಪ್ತಿಯ ಪ್ರಕರಣಕ್ಕೆ ಸಂಬಂಧಿಸಿ ಆರು ವರ್ಷಗಳಿಂದ ಉಡುಪಿ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ರೌಡಿಶೀಟರ್ನ್ನು ಪೊಲೀಸರು ಬಂಧಿಸಿದ್ದಾರೆ. ರೌಡಿಶೀಟರ್ ಮುಲ್ಕಿಯ ಅಭಿಜಿತ್(34) ಬಂಧಿತ ಆರೋಪಿ. ಈತ ಆರು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದು, ಕಾರ್ಕಳ ಡಿವೈಎಸ್ಪಿ ಮತ್ತು ಕಾಪು ಪೊಲೀಸ್ ವೃತ್ತ ನಿರೀಕ್ಷಕ ಅಜ್ಮತ್ ಅಲಿ ಮಾರ್ಗದರ್ಶನದಲ್ಲಿ ಕಾಪು ಪೊಲೀಸ್ ಠಾಣಾ ಉಪನಿರೀಕ್ಷಕರಾದ ತೇಜಸ್ವಿ ಮತ್ತು ಶುಭಕರ ನೇತೃತ್ವದಲ್ಲಿ ಸಿಬ್ಬಂದಿ ಮೊಹಮ್ಮದ್ ರಫೀಕ್, ರಾಘು ಅವರು ಮೇ …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





