ಬೆಂಗಳೂರಿನ ಕಗ್ಗಲೀಪುರದಲ್ಲಿ 11 ಮತ್ತು 12 ವರ್ಷದ ಇಬ್ಬರು ಅನಾಥ ಬಾಲಕಿಯರನ್ನು ಹಣಕ್ಕಾಗಿ ಕಾಮುಕರಿಗೆ ಒಪ್ಪಿಸಿ ಲೈಂಗಿಕ ದೌರ್ಜನ್ಯಕ್ಕೆ ಪ್ರೇರೇಪಿಸಿದ ಅಮಾನವೀಯ ಘಟನೆ ಬೆಳಕಿಗೆ ಬಂದಿದೆ. ಪ್ರಕರಣಕ್ಕೆ ಸಂಬಂಧಿಸಿ ಕಿರಣ್ ಕುಮಾರ್ ನಾಯಕ್ (29) ಮತ್ತು ಆದಿತ್ಯ ಎಂ.ಕೆ. (20)ರನ್ನು ಸೈಬರ್ ಕಮಾಂಡ್ ಸೆಂಟರ್ ಪೊಲೀಸರು ಬಂಧಿಸಿದ್ದಾರೆ. ಬಾಲಕಿಯರ ತಾಯಿ-ತಂದೆ ಮೃತಪಟ್ಟ ಬಳಿಕ ಅವರು ಮಾವನ ಆಶ್ರಯದಲ್ಲಿದ್ದರು. ಆದರೆ ಮಾವನೇ ಹಣದಾಸೆಗೆ ಆರೋಪಿಗಳಿಂದ ಹಣ ಪಡೆದು ಬಾಲಕಿಯರನ್ನು ಅವರ ವಶಕ್ಕೆ …
Read More »ರ್ಯಾಗಿಂಗ್ ವಿಚಾರಕ್ಕೆ ವಿದ್ಯಾರ್ಥಿಗಳ ನಡುವೆ ಮಾರಾಮಾರಿ
ಹಾಸನ: ನಗರದ ಚಿಕ್ಕಹೊನ್ನೇನಹಳ್ಳಿಯ ಪಶು ವೈದ್ಯಕೀಯ ಕಾಲೇಜಿನ ಹಾಸ್ಟೆಲ್ನಲ್ಲಿ ವಿದ್ಯಾರ್ಥಿಗಳ ಎರಡು ಗುಂಪಿನ ನಡುವೆ ಇತ್ತೀಚೆಗೆ ರ್ಯಾಗಿಂಗ್ ವಿಚಾರಕ್ಕೆ ಮಾರಾಮಾರಿ ನಡೆದಿದೆ. ಹಾಸ್ಟೆಲ್ನ ಕಿರಿಯ ವಿದ್ಯಾರ್ಥಿಗಳಿಗೆ ಹಿರಿಯ ವಿದ್ಯಾರ್ಥಿಗಳು ರ್ಯಾಗಿಂಗ್ ಮಾಡುತ್ತಿದ್ದಾರೆ ಎನ್ನಲಾಗಿದೆ. ಇದನ್ನು ಪ್ರಶ್ನೆ ಮಾಡಿದ್ದಕ್ಕೆ ಕಿರಿಯ ವಿದ್ಯಾರ್ಥಿಗಳ ಮೇಲೆ ಹಿರಿಯ ವಿದ್ಯಾರ್ಥಿಗಳು ಹಲ್ಲೆ ನಡೆಸಿದ್ದಾರೆ. ಈ ವೇಳೆ ಹಾಸ್ಟೆಲ್ನಲ್ಲೇ ಪರಸ್ಪರ ಕೈ ಕೈ ಮಿಲಾಯಿಸಿದ್ದಾರೆ. ಗಲಾಟೆಯಲ್ಲಿ ಹಲವು ವಿದ್ಯಾರ್ಥಿಗಳಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಈ ದೃಶ್ಯಾವಳಿ ಸಿಸಿ ಟಿವಿಯಲ್ಲಿ …
Read More »ಹಾಸನದಲ್ಲಿ ಟೈರ್ ಸ್ಪೋಟಗೊಂಡು ಹೊತ್ತಿ ಉರಿದ ಖಾಸಗಿ ಬಸ್ :36 ಪ್ರಯಾಣಿಕರು ಕೂದಲೆಳೆ ಅಂತರದಲ್ಲಿ ಪಾರು!
ಹಾಸನ ಜಿಲ್ಲೆಯ ಶಾಂತಿಗ್ರಾಮ ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚರಿಸುತ್ತಿದ್ದ ಖಾಸಗಿ ಬಸ್ಸಿನ ಟೈರ್ ಸ್ಫೋಟಗೊಂಡು ಬಸ್ ಸಂಪೂರ್ಣ ಬೆಂಕಿಗಾಹುತಿಯಾಗಿದೆ. ಮಂಗಳೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ಬಸ್ಸಿನಲ್ಲಿ ಚಾಲಕ, ನಿರ್ವಾಹಕ ಸೇರಿ 36 ಪ್ರಯಾಣಿಕರು ಇದ್ದರು. ಟೈರ್ ಸ್ಫೋಟವಾದ ತಕ್ಷಣ ಇಂಜಿನ್ ಭಾಗದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಕ್ಷಣಾರ್ಧದಲ್ಲಿ ಇಡೀ ಬಸ್ಸಿಗೆ ವ್ಯಾಪಿಸಿದೆ. ಆದರೆ ಸಮಯಪ್ರಜ್ಞೆ ತೋರಿದ ಚಾಲಕ ತಕ್ಷಣ ವಾಹನವನ್ನು ರಸ್ತೆ ಬದಿಗೆ ನಿಲ್ಲಿಸಿ ಎಲ್ಲ ಪ್ರಯಾಣಿಕರನ್ನು ಸುರಕ್ಷಿತವಾಗಿ ಕೆಳಗಿಳಿಸಿದ್ದರಿಂದ ಯಾವುದೇ ಪ್ರಾಣಾಪಾಯ …
Read More »ಮಚ್ಚಿನಿಂದ ಕೊಚ್ಚಿ ದಾವಣಗೆರೆಯ ಮಾಜಿ ಗ್ರಾಮ ಪಂಚಾಯಿತಿ ಸದಸ್ಯನ ಹತ್ಯೆ
ದಾವಣಗೆರೆ ಜಿಲ್ಲೆ ಚನ್ನಗಿರಿ ತಾಲೂಕಿನ ನಲ್ಲೂರು ಕ್ಯಾಂಪ್ ಬಳಿ ಮಾಜಿ ಗ್ರಾಮ ಪಂಚಾಯಿತಿ ಸದಸ್ಯನ ಹತ್ಯೆಯಾಗಿದೆ. ತಡ ರಾತ್ರಿ ಅಪ್ಪ ಹಾಗೂ ಮಗ ಇಬ್ಬರು ಸೇರಿ 43ರ ಹರೆಯದ ಆತಾಉಲ್ಲಾ ಮೇಲೆ ದಾಳಿ ಮಾಡಿ ಹತ್ಯೆ ಮಾಡಿದ್ದಾರೆ. ಹತ್ಯೆ ಬಳಿಕ ಆರೋಪಿಗಳು ಪೊಲೀಸರಿಗೆ ಶರಣಾಗಿದ್ದಾರೆ. ಯುವತಿ ವಿಚಾರವಾಗಿ ಕೊಲೆಯಾಗಿರುವ ಶಂಕೆ ವ್ಯಕ್ತವಾಗಿದೆ. ನಲ್ಲೂರ್ ಕ್ಯಾಂಪ್ನಲ್ಲಿ ತಡರಾತ್ರಿ ಈ ಘಟನೆ ನಡೆದಿದೆ. ಆತಾಉಲ್ಲಾ ಮಾಜಿ ಗ್ರಾಮ ಪಂಚಾಯಿತಿ ಸದಸ್ಯನಾಗಿದ್ದ. ಯುವತಿ ವಿಚಾರವಾಗಿ …
Read More »ಕಾರಿನಲ್ಲಿ ಜಾನುವಾರುಗಳ ಹಿಂಸಾತ್ಮಕ ಸಾಗಾಟ; ಸಿನಿಮಾ ಶೈಲಿಯಲ್ಲಿ ಬೆನ್ನಟ್ಟಿ ಇಬ್ಬರ ಬಂಧನ
ಮೂಡಬಿದ್ರೆ: ಐಷಾರಾಮಿ ಕಾರಿನಲ್ಲಿ ಜಾನುವಾರುಗಳನ್ನು ಹಿಂಸಾತ್ಮಕವಾಗಿ ಸಾಗಿಸುತ್ತಿದ್ದ ಇಬ್ಬರು ಆರೋಪಿಗಳನ್ನು ಮೂಡಬಿದ್ರೆ ಪೊಲೀಸರು ಸಿನಿಮಾ ಶೈಲಿಯಲ್ಲಿ ಬೆನ್ನಟ್ಟಿ ಬಂಧಿಸಿದ್ದಾರೆ. ಪಡುಮಾರ್ನಾಡು ಗ್ರಾಮದ ಗುಂಡುಕಲ್ಲು ಕ್ರಾಸ್ ಬಳಿ ಈ ಕಾರ್ಯಾಚರಣೆ ನಡೆದಿದೆಮೂಡಬಿದ್ರೆ ಹಂಡೇಲು ನಿವಾಸಿ ಮಹಮ್ಮದ್ ಆರಿಫ್ ಮತ್ತು ಗಂಟಾಲಕಟ್ಟೆಯ ಇಮ್ರಾನ್ ಅಲಿಯಾಸ್ ಇಬ್ರಾಹಿಂ ಬಂಧಿತ ಆರೋಪಿಗಳು. ಇವರಿಂದ ಮಾರುತಿ ಬ್ರೀಜಾ ಕಾರನ್ನು ವಶಪಡಿಸಿಕೊಳ್ಳಲಾಗಿದೆ. ಪೊಲೀಸರು ರೌಂಡ್ಸ್ನಲ್ಲಿದ್ದಾಗ ಖಚಿತ ಮಾಹಿತಿ ಮೇರೆಗೆ ವಾಹನ ತಪಾಸಣೆ ನಡೆಸುತ್ತಿದ್ದರು. ಈ ವೇಳೆ ವೇಗವಾಗಿ ಬಂದ …
Read More »ರಾಮನಗರದಲ್ಲಿ ಅಪ್ರಾಪ್ತರ ಮೇಲಿನ ದೌರ್ಜನ್ಯ ಪ್ರಕರಣ: ಇಬ್ಬರು ಆರೋಪಿಗಳು ಬಂಧನ
ಅಪ್ರಾಪ್ತ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿ, ಅದನ್ನು ಮೊಬೈಲ್ನಲ್ಲಿ ಚಿತ್ರೀಕರಿಸಿ ಆನ್ಲೈನ್ಗೆ ಅಪ್ಲೋಡ್ ಮಾಡಿದ ಆರೋಪದ ಮೇಲೆ ಇಬ್ಬರನ್ನು ರಾಮನಗರ ಸೆನ್ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಕಗ್ಗಲಿಪುರದ ಕಿರಣ್ ಕುಮಾರ್ ಮತ್ತು ಆದಿತ್ಯ ಎಂದು ಗುರುತಿಸಲಾಗಿದೆ. ಆರೋಪಿಗಳ ವಿರುದ್ಧ ಗಂಭೀರ ಆರೋಪಗಳು ದಾಖಲಾಗಿದ್ದು, ಅವರ ಮೊಬೈಲ್ಗಳನ್ನು ಪೊಲೀಸರು ಜಪ್ತಿ ಮಾಡಿದ್ದಾರೆ. ರಾಷ್ಟ್ರೀಯ ಮಟ್ಟದ ಸೈಬರ್ ಪೋರ್ಟಲ್ ಮೂಲಕ ಬಂದ ಸುಳಿವಿನ ಆಧಾರದ ಮೇಲೆ ಸಿಐಡಿ ಮತ್ತು ಪೊಲೀಸರು ತನಿಖೆ …
Read More »ಉಡುಪಿ: ಅಕ್ರಮ ಕ್ರಿಕೆಟ್ ಬೆಟ್ಟಿಂಗ್ ದಂಧೆ; ಆರೋಪಿ ಭರತ್ ಜಯರಾಮ್ ದಾಸ ಜಿಲ್ಲೆಯಿಂದ ಗಡಿಪಾರು
ಉಡುಪಿ ಜಿಲ್ಲೆಯಲ್ಲಿ ಅಕ್ರಮವಾಗಿ ಕ್ರಿಕೆಟ್ ಬೆಟ್ಟಿಂಗ್ ದಂಧೆ ನಡೆಸುತ್ತಿದ್ದ ಆರೋಪಿಯೊಬ್ಬನನ್ನು ಜಿಲ್ಲಾ ಪೊಲೀಸ್ ಅಧೀಕ್ಷಕರು ಹಾಗೂ ವಿಶೇಷ ಕಾರ್ಯಾಂಗ ದಂಡಾಧಿಕಾರಿಗಳು ಉಡುಪಿ ಜಿಲ್ಲೆಯಿಂದ ಗಡಿಪಾರು ಮಾಡಿ ಆದೇಶ ಹೊರಡಿಸಿದ್ದಾರೆ. ಬ್ರಹ್ಮಾವರ ತಾಲೂಕಿನ ವಾರಂಬಳ್ಳಿ ಗ್ರಾಮದ ನಿವಾಸಿ ಭರತ್ ಜಯರಾಮ್ ದಾಸ (34) ಗಡಿಪಾರು ಶಿಕ್ಷೆಗೆ ಒಳಗಾದ ವ್ಯಕ್ತಿ.ಆರೋಪಿ ಭರತ್ ವಿರುದ್ಧ ಈಗಾಗಲೇ ಕೋಟ ಮತ್ತು ಕುಂದಾಪುರ ಪೊಲೀಸ್ ಠಾಣೆಗಳಲ್ಲಿ ಒಟ್ಟು ಮೂರು ಕ್ರಿಕೆಟ್ ಬೆಟ್ಟಿಂಗ್ ಪ್ರಕರಣಗಳು ದಾಖಲಾಗಿದ್ದವು. ಈ ಪೈಕಿ …
Read More »ನಕಲಿ ಸಿಗರೇಟ್ ಮಾರಾಟ
ಚಿಂತಾಮಣಿ: ನಗರದ ಮಾರುಕಟ್ಟೆಯಲ್ಲಿ ಖಾಸಗಿ ಕಂಪನಿಯ ನಕಲಿ ಸಿಗರೇಟ್ ಮಾರಾಟ ಮಾಡುತ್ತಿದ್ದ ಅಂಗಡಿಯೊಂದರ ಮೇಲೆ ಕಂಪನಿ ಬ್ರ್ಯಾಂಡ್ ಪ್ರೊಟೆಕ್ಷನ್ ಅಧಿಕಾರಿಗಳು, ಸ್ಥಳಿಯ ಪೊಲೀಸರು ಜಂಟಿ ದಾಳಿ ನಡೆಸಿ ನಕಲಿ ಸಿಗರೇಟ್ ಪ್ಯಾಕೆಟ್ಗಳನ್ನು ಮಂಗಳವಾರ ವಶಪಡಿಸಿಕೊಂಡಿದ್ದಾರೆ. ಕೆಲವು ದಿನಗಳಿಂದ ನಗರದ ಎಂಜಿ ರಸ್ತೆಯಲ್ಲಿ ಅಂಗಡಿಯಲ್ಲಿ ನಕಲಿ ಸಿಗರೇಟ್ ದಾಸ್ತಾನು ಮಾಡಿ ಮಾರಾಟ ಮಾಡುತ್ತಿರುವ ಬಗ್ಗೆ ಕಂಪನಿ ಬ್ರ್ಯಾಂಡ್ ಪ್ರೊಟೆಕ್ಷನ್ ವಿಭಾಗಕ್ಕೆ ಖಚಿತ ಮಾಹಿತಿ ಲಭಿಸಿದ ಹಿನ್ನೆಲೆ ಕಾರ್ಯಾಚರಣೆಗಿಳಿದ ವ್ಯವಸ್ಥಾಪಕರು, ಪೊಲೀಸರ ನೆರವಿನೊಂದಿಗೆ …
Read More »ಬ್ಯಾಂಕಾಕ್ನಿಂದ ಬೆಂಗಳೂರಿಗೆ 47 ವನ್ಯಜೀವಿಗಳ ಸಾಗಾಟ, ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಆರೋಪಿ
ಚಿಕ್ಕಬಳ್ಳಾಪುರ: ಬ್ಯಾಂಕಾಕ್ನಿಂದ ಅಕ್ರಮವಾಗಿ ವನ್ಯಜೀವಿಗಳನ್ನು ಸಾಗಿಸುತ್ತಿದ್ದ 47ವನ್ಯ ಜೀವಿಗಳನ್ನು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಬ್ಯಾಂಕಾಕ್ ನಿಂದ ಅಕ್ರಮವಾಗಿ ಸಾಗಾಟ ಮಾಡಲಾಗುತ್ತಿದ್ದ ಕೆಂಪು ಪಾದದ ಆಮೆಗಳು, ಆಫ್ರಿಕನ್ ಆಮೆಗಳು, ಅರ್ಜೆಂಟಿನಾ ಕಪ್ಪು-ಬಿಳಿ ತೇಗು, ಗೋಲ್ಡೀಸ್ ಮಾರ್ಮೋಸೆಟ್ ಸೇರಿದಂತೆ 47 ವನ್ಯ ಜೀವಿಗಳನ್ನ ವಶಕ್ಕೆ ಪಡೆಯಲಾಗಿದೆ. ಕಸ್ಟಮ್ಸ್ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದು ಆರೋಪಿಯನ್ನ ವನ್ಯಜೀವಿ ಸಂರಕ್ಷಣಾ ಕಾಯ್ದೆಯಡಿ ಮುಂದಿನ ಕಾನೂನು ಕ್ರಮಕ್ಕಾಗಿ ಬೆಂಗಳೂರು ಗ್ರಾಮಾಂತರ ಆರ್ಎಫ್ಇ …
Read More »ಜೂಜಾಡುತ್ತಿದ್ದ 11 ಜನರ ಬಂಧನ
ಕೊಳ್ಳೇಗಾಲ: ಪಟ್ಟಣ ವ್ಯಾಪ್ತಿಯ ಕುಣಗಳ್ಳಿ ರಸ್ತೆಯಲ್ಲಿರುವ ಶ್ರೀ ಭ್ರಮರಾಂಭ ಸಮೇತ ಶ್ರೀ ಮಲ್ಲಿಕಾರ್ಜುನ ಸ್ವಾಮಿ ದೇವಾಲಯ ಹಿಂಭಾಗ ಹೊನ್ನಹೊಳೆಗೆ ಹೋಗುವ ರಸ್ತೆಯಲ್ಲಿರುವ ಸಾರ್ವಜನಿಕ ಸ್ಥಳದಲ್ಲಿ ಅಕ್ರಮ ಜೂಜಾಟ ಪ್ರಕರಣವನ್ನು ಪೊಲೀಸರು ಭೇದಿಸಿದ್ದು 11 ಜನರ ವಿರುದ್ಧ ದೂರು ದಾಖಲಾಗಿದ್ದು. ಪಣಕ್ಕಿಟ್ಟಿದ್ದ 5.8 ಲಕ್ಷ ರೂ. ವಶಕ್ಕೆ ಪಡೆಯಲಾಗಿದೆ. ಕೊಳ್ಳೇಗಾಲ ಟೌನ್ನ ಕಿರಣ, ನಿಶಾಂತ್ ಪ್ರಭು, ಸಿದ್ದಯ್ಯನಪುರ ಗ್ರಾಮದ ರಾಜೇಂದ್ರ ಪ್ರಸಾದ್, ಮೈಸೂರಿನ ಎಚ್.ಎನ್.ಮಂಜ, ಮಂಜ, ನರಸೀಪುರದ ಉಮೇಶ್, ಕುಣಗಳ್ಳಿ ಗ್ರಾಮದ …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





