ರಾಣೆಬೆನ್ನೂರು: ಎಟಿಎಂನಲ್ಲಿ ಹಣ ಡ್ರಾ ಮಾಡಿಕೊಡುವ ನೆಪದಲ್ಲಿ ಎಟಿಎಂ ಕಾರ್ಡ್ ಬದಲಾಯಿಸಿ ವ್ಯಕ್ತಿಯೊಬ್ಬ ಖಾತೆಯಿಂದ 1.20 ಲಕ್ಷ ರೂ. ಡ್ರಾ ಮಾಡಿಕೊಂಡು ವಂಚಿಸಿರುವ ಘಟನೆ ನಗರದ ರೈಲ್ವೆ ನಿಲ್ದಾಣದ ಬಳಿ ನಡೆದಿದೆ. ತಾಲೂಕಿನ ಮೈದೂರ ಗ್ರಾಮದ ಪ್ರವಿಣ ಮಲ್ಲಪ್ಪ ಹಟ್ಟಿ (45) ಎಂಬುವರಿಗೆ ಮೋಸ ಮಾಡಿರುವುದು. ಇವರು ಎಟಿಎಂನಲ್ಲಿ ಹಣ ಡ್ರಾ ಮಾಡಿಸಿಕೊಳ್ಳುವ ಸಲುವಾಗಿ ಬಂದಾಗ ಪಕ್ಕದಲ್ಲಿ ಅಪರಿಚಿತ ವ್ಯಕ್ತಿಯೊಬ್ಬ ಹಣ ಡ್ರಾ ಮಾಡಿಕೊಡುವುದಾಗಿ ನಂಬಿಸಿ ಕಾರ್ಡ್ ತೆಗೆದುಕೊಂಡಿದ್ದಾನೆ. ನಂತರ …
Read More »ಮುದಗಲ್ | ಮರಳು ಅಕ್ರಮ ಸಾಗಣೆ: ಟಿಪ್ಪರ್ ವಶ
ಮುದಗಲ್: ನಾಗರಾಳ ಕ್ರಾಸ್ ಬಳಿ ಮರಳು ಅಕ್ರಮವಾಗಿ ಸಾಗಣೆ ಮಾಡುತ್ತಿದ್ದ ಟಿಪ್ಪರ್ ಅನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಮರಳು ಅಕ್ರಮವಾಗಿ ಸಾಗಿಸುತ್ತಿದ್ದ ಖಚಿತ ಮಾಹಿತಿಯ ಮೇರೆಗೆ ಪಿಎಸ್ಐ ವೆಂಕಟೇಶ ಅವರು ಸಿಬ್ಬಂದಿಯೊಂದಿಗೆ ದಾಳಿ ನಡೆಸಿ, ಟಿಪ್ಪರ್ ವಶ ಪಡಿಸಿಕೊಂಡಿದ್ದಾರೆ. ಚಾಲಕ ತಿಮ್ಮಣ್ಣ (23) ಹಾಗೂ ಟಿಪ್ಪರ್ ಮಾಲೀಕನ ವಿರುದ್ಧ ಸ್ಥಳೀಯ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
Read More »ಉಳ್ಳಾಲ: ಮರಳು ಅಕ್ರಮ ಸಾಗಾಟ- ವಾಹನ ಜಪ್ತಿ
ಉಳ್ಳಾಲ: ತಾಲ್ಲೂಕಿನ ಪೆರ್ಮನ್ನೂರು ಗ್ರಾಮದ ತೊಕ್ಕೊಟ್ಟು ಮೇಲ್ಸೇತುವೆ ಕೆಳಗೆ ಮಹೀಂದ್ರ ಪಿಕ್ ಆಪ್ ವಾಹನದಲ್ಲಿ ಪರವಾನಗಿ ಇಲ್ಲದೆಯೇ ಸಾಗಿಸುತ್ತಿದ್ದ ಮರಳನ್ನು ಉಳ್ಳಾಲ ಠಾಣೆಯ ಪೊಲಿಸರು ಮಂಗಳವಾರ ವಶಕ್ಕೆ ಪಡೆದಿದ್ದು, ಈ ಸಂಬಂಧ ಸೋಮೇಶ್ವರ ಗ್ರಾಮದ ಕುಂಪಲ ನಿವಾಸಿ ಅಶ್ವಿತ್ ರಾವ್ (37 ವರ್ಷ) ವಿರುದ್ಧ ಎಫ್ಐಆರ್ ದಾಖಲಿಸಿದ್ದಾರೆ. ಮರಳು ಅಕ್ರಮ ಸಾಗಣೆಗೆ ಬಳಸಿದ ಪಿಕಪ್ ವಾಹನ ಹಾಗೂ ಅದರಲ್ಲಿದ್ದ ಮರಳು ಜಪ್ತಿ ಮಾಡಲಾಗಿದೆ. ಜಪ್ತಿ ಮಾಡಿದ ಸ್ವತ್ತುಗಳ ಅಂದಾಜು ಮೌಲ್ಯ …
Read More »ಹಸುಗಳನ್ನು ಸಾಗಿಸುತ್ತಿದ್ದ ವಾಹನ ವಶ
ಶ್ರೀನಿವಾಸಪುರ: ಪಟ್ಟಣದ ಹೊರವಲಯದಲ್ಲಿ ಗೋವುಗಳನ್ನು ತುಂಬಿಕೊಂಡು ಸಾಗುತ್ತಿದ್ದ ಟಾಟಾ ಎಸ್ಸಿ ಅಡ್ಡಗಟ್ಟಿದ ಪೊಲೀಸರು ವಾಹನ ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಪಟ್ಟಣ ಹೊರವಲಯದ ಮುಳಬಾಗಿಲು ರಸ್ತೆ ಮಾರ್ಗವಾಗಿ ಬರುತ್ತಿದ್ದ ಟಾಟಾ ಎಸ್ಸಿ ವಾಹನದಲ್ಲಿ 5 ಕರು ಮತ್ತು ಎತ್ತುಗಳನ್ನು ಸಾಗಿಸಲಾಗುತ್ತಿತ್ತು. ಬಾರ್ ಸಮೀಪ ವಾಹನವನ್ನು ನಿಲ್ಲಿಸಿ ಮದ್ಯಪಾನಕ್ಕೆ ತೆರಳಿದ ಸಂದರ್ಭದಲ್ಲಿ ಸಾರ್ವಜನಿಕರ ದೂರಿನ ಮೇರೆಗೆ ಪೊಲೀಸರು ಸ್ಥಳಕ್ಕೆ ಆಗಮಿಸಿ ಚಾಲಕನ ಸಹಿತ ವಾಹನವನ್ನು ವಶಪಡಿಸಿಕೊಂಡಿದ್ದು, ತನಿಖೇ ಕೈಗೊಂಡಿದ್ದಾರೆ.
Read More »ಯುವತಿಯ ಕೊಲೆಗೆ ಯತ್ನಿಸಿ, ಸರ ಅಪರಹಣ: ಪ್ರಕರಣ ದಾಖಲು
ಮಣಿಪಾಲ: ಯುವತಿಯೊಬ್ಬಳಿಗೆ ಕಲ್ಲಿನಿಂದ ಹಲ್ಲೆ ನಡೆಸಿ ಆಕೆಯ ಚಿನ್ನದ ಸರ ಕಳವು ಮಾಡಿರುವ ಘಟನೆ ಮಣಿಪಾಲ ಶಾಂತಿನಗರ ಎಂಬಲ್ಲಿ ಮಂಗಳವಾರ ರಾತ್ರಿ ವೇಳೆ ನಡೆದಿದೆ. ಹಲ್ಲೆಗೆ ಒಳಗಾದವರನ್ನು ಅಂಕೋಲ ಮೂಲದ ಯೋಗೀತಾ(23) ಎಂದು ಗುರುತಿಸಲಾಗಿದೆ. ಯೋಗಿತಾ ತನ್ನ ಇಬ್ಬರು ಗೆಳತಿಯರೊಂದಿಗೆ ಬಾಡಿಗೆ ಮನೆಯಲ್ಲಿ ವಾಸವಾಗಿದ್ದು, ಅವರಿಬ್ಬರು ಮೇ 12ರಂದು ಸಂಜೆ ರಾತ್ರಿ ಪಾಳಿ ಕೆಲಕ್ಕೆ ಹೋಗಿದ್ದರು. ಅವರಿಬ್ಬರು ಬುಧವಾರ ಬೆಳಗ್ಗೆ ರೂಮಿಗೆ ಬಂದು ನೋಡಿದಾಗ ಯೋಗೀತಾ ಬಿದ್ದುಕೊಂಡಿರುವುದು ಕಂಡುಬಂದಿದೆ. ಅಪರಿಚಿತರು …
Read More »ಬೈಕ್ ಬಾಕ್ಸ್ ನಲ್ಲಿದ್ದ 1 ಲಕ್ಷ ಹಣ ಕದ್ದು ಪರಾರಿಯಾದ ಖದೀಮರು: ಪೊಲೀಸ್ ಠಾಣೆ ಎದುರೇ ಘಟನೆ
ಕೋಲಾರ: ಇತ್ತೀಚಿನ ದಿನಗಳಲ್ಲಿ ಕಳ್ಳತನ ಪ್ರಕರಣ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಕಳ್ಳ-ಖದೀಮರಿಗೆ ಪೊಲೀಸರೆಂದರೆ ಕಿಮ್ಚಿತ್ತೂ ಭಯ ಎಂಬುದು ಇಲ್ಲ. ಪೊಲೀಸ್ ಠಾಣೆಯ ಮುಂದೆ ನಿಲ್ಲಿಸಿದ್ದ ಬೈಕ್ ಬಾಕ್ಸ್ ನಲ್ಲಿದ್ದ ಲಕ್ಷಾಂತರ ರೂಪಾಯಿ ಹಣವನ್ನು ಕಳ್ಳರು ದೋಚಿ ಪರಾರಿಯಾಗಿರುವ ಘಟನೆ ಕೋಲಾರದಲ್ಲಿ ನಡೆದಿದೆ. ಕೋಲಾರ ಜಿಲ್ಲೆಯ ಕೆಜಿಎಫ್ ತಾಲೂಕಿನ ಬೇತಮಂಗಲದಲ್ಲಿ ಕಳ್ಳರು ಕೈಚಳಕ ತೋರಿಸಿದ್ದು, ಬೈಕ್ ಬಾಕ್ಸ್ನಲ್ಲಿದ್ದ ಒಂದು ಲಕ್ಷ ರೂಪಾಯಿ ಹಣವನ್ನು ದೋಚಿ ಪರಾರಿಯಾಗಿದ್ದಾರೆ. ಬೇತಮಂಗಲ ನ್ಯೂಟೌನ್ ನಿವಾಸಿ ರಮೇಶ್ …
Read More »ಬೆಂಗಳೂರಿನಲ್ಲಿ ಮತ್ತೊಂದು ಭೀಕರ ಬೆಂಕಿ ಅವಘಡ
ಬಿಸಿಲ ಝಳ, ತಾಪಮಾನ ಏರಿಕೆ ನಡುವೆಯೇ ರಾಜ್ಯದಲ್ಲಿ ಬೆಂಕಿ ಅವಘಡಗಳು ಹೆಚ್ಚುತ್ತಿವೆ. ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಪ್ಲಾಸ್ಟಿಕ್ ಗೋದಾಮಿನಲ್ಲಿ ಭೀಕರ ಬೆಂಕಿ ಅವಘಡ ಸಂಭವಿಸಿದೆ. ನಾಯಂಡಹಳಿ ಬಳಿಯ ಪ್ಲಾಸ್ಟಿಕ್ ಗೋದಾಮಿನಲ್ಲಿ ಏಕಾಏಕಿ ಬೆಂಕಿ ಸಂಭವಿಸಿದ್ದು, ಮುಗಿಲೆತ್ತರಕ್ಕೆ ಬೆಂಕಿಯ ಜ್ವಾಲೆ ವ್ಯಾಪಿಸಿದೆ. ಸುತ್ತಮುತ್ತಲ ಪ್ರದೇಶದವರೆಗೂ ದಟ್ಟ ಹೊಗೆ ಆವರಿಸಿದೆ. ಈ ಭಾಗದಲಿ ಎಕರೆಗಟ್ಟಲೇ ಜಾಗದಲ್ಲಿ ಭಾರಿ ಪ್ರಮಾಣದಲ್ಲಿ ಪ್ಲಾಸ್ಟಿಕ್ ಗಳನ್ನು ಸಂಗ್ರಹಿಸಿ ಇಡಲಾಗಿದ್ದು, ಇಂದು ಬೆಳಿಗ್ಗೆ ಬೆಂಕಿ ಕಾಣಿಸಿಕೊಂಡಿದೆ. ಬೆಂಕಿ ಧಗಧಗನೆ …
Read More »ಬಾಗಲಕೋಟೆ | ಎಟಿಎಂ ಕಾರ್ಡ್ ಬದಲಿಸಿ ವಂಚನೆ: ಆರೋಪಿ ಬಂಧನ
ಎಟಿಎಂ ಕಾರ್ಡ್ ಬದಲಾಯಿಸಿ ಹಣ ಲಪಟಾಯಿಸಿದ್ದ ಆರೋಪಿಯನ್ನು ಬಂಧಿಸುವಲ್ಲಿ ನವನಗರ ಠಾಣೆಯ ಪೊಲೀಸರು ಯಶಸ್ವಿಯಾಗಿದ್ದಾರೆ. ಜಮಖಂಡಿಯ ಸುಜ್ಜಿತ್ ಭಜಂತ್ರಿ ಬಂಧಿತ ಆರೋಪಿ. ಆರೋಪಿಯಿಂದ ₹60 ಸಾವಿರ ಜಪ್ತಿ ಮಾಡಲಾಗಿದೆ. ವಿದ್ಯಾಗಿರಿಯ ಎಸ್ಬಿಐ ಎಟಿಎಂ ಕೇಂದ್ರದಲ್ಲಿ ಹಣ ತೆಗೆದುಕೊಡುವುದಾಗಿ ವ್ಯಕ್ತಿಯೊಬ್ಬರಿಂದ ಎಟಿಎಂ ಪಡೆದು, ಹಣ ತೆಗೆದುಕೊಟ್ಟ ನಂತರ ಬದಲಿ ಎಟಿಎಂ ಕಾರ್ಡ್ ಅನ್ನು ಅವರಿಗೆ ನೀಡಿದ್ದನು. ನಂತರದಲ್ಲಿ ಎಟಿಎಂ ಕಾರ್ಡ್ ಬಳಸಿ ₹85 ಸಾವಿರ ಹಣ ಡ್ರಾ ಮಾಡಿದ್ದನು. ಪೊಲೀಸರು ನೋಟಿಸ್ …
Read More »ಕಲಬುರಗಿ | ಗೋವು ಅಕ್ರಮ ಸಾಗಣೆ: ವ್ಯಕ್ತಿ ಬಂಧನ
ನಗರದ ಆಳಂದ ಚೆಕ್ ಪೋಸ್ಟ್ ಸಮೀಪದ ಆಳಂದ ಕಾಲೊನಿಯಲ್ಲಿ ಅಕ್ರಮವಾಗಿ ಗೋವುಗಳನ್ನು ಸಾಗಿಸುತ್ತಿದ್ದ ವಾಹನವನ್ನು ವಶಕ್ಕೆ ಪಡೆದಿರುವ ಚೌಕ ಠಾಣೆ ಪೊಲೀಸರು, ಏಳು ಜಾನುವಾರುಗಳನ್ನು ರಕ್ಷಿಸಿದ್ದಾರೆ. ಅಲ್ಲದೇ, ವಾಹನದ ಚಾಲಕ ಮಹ್ಮದ್ ಅಲ್ಲಾವುದ್ದೀನ್ ಖುರೇಶಿ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ‘ಬಕ್ರೀದ್ ಅಂಗವಾಗಿ ಜಾನುವಾರುಗಳನ್ನು ಆಳಂದ ಸಂತೆಯಿಂದ ಕಲಬುರಗಿಗೆ ತರಲಾಗಿತ್ತು. ಇವು ಮಹ್ಮದ್ ಸಿರಾಜ್ ಮಿಜಗುರಿ ಎಂಬುವರಿಗೆ ಸೇರಿವೆ. ವಾಹನವು ಶಫೀಕ್ ಎಂಬುವರಿಗೆ ಸೇರಿದೆ’ ಎಂದು ವಾಹನದ ಚಾಲಕ ಮಹ್ಮದ್ ಅಲ್ಲಾವುದ್ದೀನ್ …
Read More »ಮಂಗಳೂರಲ್ಲಿ ಗಾಂಜಾ ಮಾರಾಟಕ್ಕೆ ಯತ್ನಿಸುತ್ತಿದ್ದ ವಿದ್ಯಾರ್ಥಿನಿ ಅರೆಸ್ಟ್ : 35ಲಕ್ಷ ರೂ. ಮೌಲ್ಯದ ಗಾಂಜಾ ವಶಕ್ಕೆ!
ಮಂಗಳೂರಲ್ಲಿ ಹೈಡ್ರೋವೀಡ್ ಗಾಂಜಾ ಮಾರಾಟಕ್ಕೆ ಯತ್ನಿಸುತ್ತಿದ್ದ ಬಿಸಿಎ ವಿದ್ಯಾರ್ಥಿನಿಯನ್ನು ಬಂಧಿಸಿ, 35ಲಕ್ಷ ರೂ. ಮೌಲ್ಯದ 1.42 ಕೆ.ಜಿ. ಗಾಂಜಾ ವಶಪಡಿಸಿಕೊಳ್ಳಲಾಗಿದೆ. ಶಿವಮೊಗ್ಗ ಜಿಲ್ಲೆಯ ಸಾಗರ ನಿವಾಸಿ, ಸದ್ಯ ಕುಂದಾಪುರ ಕಾಲೇಜೊಂದರಲ್ಲಿ ಅಂತಿಮ ವರ್ಷದ ಬಿಸಿಎ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿ ಸುಹಾನ (21) ಬಂಧಿತ ಆರೋಪಿ ಎಂದು ತಿಳಿದುಬಂದಿದೆ. ಈ ಕುರಿತು ಮಂಗಳೂರು ನಗರ ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ಮಾಹಿತಿ ನೀಡಿದ್ದು, ಮೇ 12ರಂದು ಮಾರಾಟ ಮಾಡಲೆಂದು ಸುಹಾನ …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





