ಬೆಂಗಳೂರು: ಮೊಬೈಲ್ ವಿಚಾರಕ್ಕೆ ಸ್ನೇಹಿತನಿಂದ ಹಲ್ಲೆಗೊಳಗಾದ ಯುವಕ ಸಾವನ್ನಪ್ಪಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಮೇ 10ರಂದು ಮಾರತ್ ಹಳ್ಳಿ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಸ್ನೇಹಿತ ರಾಮು ಎಂಬಾತನಿಂದ ಚಾಕು ಇರಿತಕ್ಕೊಳಗಾಗಿದ್ದ ಪರಶುರಾಮ ಎಲ್ಲಪ್ಪ ಮಂಗಳಗಟ್ಟಿ (25) ಚಿಕಿತ್ಸೆ ಫಲಿಸದೇ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾನೆ. ಹುಬ್ಬಳ್ಳಿ ಮೂಲದ ಪರಶುರಾಮ ಹಾಗೂ ರಾಮು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಹೌಸ್ ಕೀಪಿಂಗ್ ಕೆಲಸ ಮಾಡಿಕೊಂಡಿದ್ದರು. ಮಾರತ್ ಹಳ್ಳಿ ಠಾಣೆ ವ್ಯಾಪ್ತಿಯ ಚೌಡೇಶ್ವರಿ ರಸ್ತೆಯಲ್ಲಿನ ಬೆಸ್ಕಾಂ ಕಚೇರಿ …
Read More »ಹುಬ್ಬಳ್ಳಿ ಜೈನ ಮಂದಿರದಲ್ಲಿ ಸಿನಿಮೀಯ ಶೈಲಿಯಲ್ಲಿ ಕಳ್ಳತನ – 3 ಕೆಜಿ ಬೆಳ್ಳಿ, ಚಿನ್ನಾಭರಣ ದೋಚಿದ ಖದೀಮರು!
ಹುಬ್ಬಳ್ಳಿ :ಮಧ್ಯರಾತ್ರಿ ಸುಮಾರು 1 ಗಂಟೆ ವೇಳೆಗೆ ಮೂವರು ದುಷ್ಕರ್ಮಿಗಳು ಜೈನ ಮಂದಿರಕ್ಕೆ ನುಗ್ಗಿದ್ದಾರೆ. ಕೃತ್ಯ ಎಸಗುವ ಮುನ್ನ ಅವರು ದೇವಸ್ಥಾನದ ಭದ್ರತಾ ಸೈರನ್ ವ್ಯವಸ್ಥೆಯನ್ನು ಸಂಪೂರ್ಣವಾಗಿ ಬಂದ್ ಮಾಡಿದ್ದಾರೆ. ನಂತರ ಒಳನುಗ್ಗಲು ಅನುಕೂಲವಾಗುವಂತೆ ಸಿಸಿಟಿವಿ ಕ್ಯಾಮೆರಾಗಳ ಕೇಬಲ್‌ಗಳನ್ನು ಕತ್ತರಿಸಿದ್ದಾರೆ. ಈ ತಾಂತ್ರಿಕ ವ್ಯವಸ್ಥೆಗಳನ್ನು ನಿಷ್ಕ್ರಿಯಗೊಳಿಸಿದ ಬಳಿಕ ಮಂದಿರದ ಮುಖ್ಯ ಬಾಗಿಲನ್ನು ಮುರಿದು ಒಳಪ್ರವೇಶಿಸಿದ್ದಾರೆ. ಗರ್ಭಗುಡಿಯಲ್ಲಿದ್ದ ದೇವರಿಗೆ ಅಲಂಕಾರ ಮಾಡಲಾಗಿದ್ದ ಬೆಳ್ಳಿಯ ಪ್ರಭಾವಳಿ, ಮುಕುಟ ಸೇರಿದಂತೆ ಒಟ್ಟು 3 ಕೆಜಿ …
Read More »12 ಎತ್ತುಗಳ ರಕ್ಷಣೆ; ಆರೋಪಿ ಬಂಧನ
ಶಿವಮೊಗ್ಗ: ಕಸಾಯಿಖಾನೆಗೆ ಕೊಂಡೊಯ್ದು ಕಡಿಯುವ ಉದ್ದೇಶದಿಂದ ಅಕ್ರಮವಾಗಿ ತಂದು ಇಲ್ಲಿನ ಸೂಳೇಬೈಲು ಈದ್ಗಾ ನಗರದ ಬಳಿ ಕಟ್ಟಿದ್ದ 12 ಎತ್ತುಗಳನ್ನು ತುಂಗಾ ನಗರ ಠಾಣೆ ಪೊಲೀಸರು ಮಂಗಳವಾರ ರಕ್ಷಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಈದ್ಗಾ ನಗರದ ನಿವಾಸಿ, ಫಿಶ್ ಪ್ಲಾಂಟ್‌ನಲ್ಲಿ ಕೆಲಸ ಮಾಡುವ ಅಬ್ದುಲ್ ಅಜೀಜ್ (35) ಎಂಬಾತನನ್ನು ಬಂಧಿಸಿದ್ದಾರೆ. ಖಚಿತ ಮಾಹಿತಿ ಮೇರೆಗೆ ತುಂಗಾನಗರ ಠಾಣೆ ಇನ್‌ಸ್ಪೆಕ್ಟರ್ ಗುರುರಾಜ್ ಕರ್ಕಿ ನೇತೃತ್ವದಲ್ಲಿ ದಾಳಿ ನಡೆಸಿ ಆರೋಪಿಯನ್ನು ಬಂಧಿಸಿ, ನ್ಯಾಯಾಂಗ ವಶಕ್ಕೆ …
Read More »ಬಾಲಕನ ಮೇಲೆ ದೌರ್ಜನ್ಯ ಆರೋಪ: ಪಂಚಮಸಾಲಿ ಪೀಠದ ವಚನಾನಂದ ಶ್ರೀ ವಿರುದ್ಧ ಪೋಕ್ಸೋ ಪ್ರಕರಣ ದಾಖಲು
ದಾವಣಗೆರೆ: ಬಾಲಕನ ಮೇಲೆ ದೌರ್ಜನ್ಯ ಆರೋಪಕ್ಕೆ ಸಂಬಂಧಿಸಿದಂತೆ ಹರಿಹರ ಪಂಚಮಸಾಲಿ ಪೀಠದ ವಚನಾನಂದ ಶ್ರೀ ವಿರುದ್ಧ ಪೋಕ್ಸೋ ಪ್ರಕರಣ ದಾಖಲಾಗಿದೆ. ಗದಗ ಜಿಲ್ಲೆಯ ಲಕ್ಷ್ಮೇಶ್ವರ ಠಾಣೆಯಲ್ಲಿ ದಾಖಲಾಗಿದ್ದ ‘0’ ಎಫ್ ಐ ಆರ್, ಕೃತ್ಯ ನಡೆದ ಸ್ಥಳದ ವ್ಯಾಪ್ತಿ ಹಿನ್ನೆಲೆಯಲ್ಲಿ ಹರಿಹರ ಗ್ರಾಮಾಂತರ ಪೊಲೀಸ್ ಠಾಣೆಗೆ ಕೇಸ್ ವರ್ಗಾಯಿಸಲಾಗಿದೆ. ತನಿಖೆ ಆರಂಭಿಸಿರುವ ಪೊಲೀಸರು ದೂರುದಾರರ ಹೇಳಿಕೆ ಪಡೆದುಕೊಂಡಿದ್ದಾರೆ. ಮಠದ ವಸತಿ ನಿಲಯದಲ್ಲಿರುವ ಬಾಲಕನಿಂದ ಸ್ವಾಮೀಜಿ ಮಸಾಜ್ ಮಾಡಿಸಿಕೊಳ್ಳುತ್ತಿದ್ದರು ಎಂದು ಆರೋಪಿಸಿ …
Read More »ಮೂಲ್ಕಿ; 35 ಲಕ್ಷ ರೂ ಮೌಲ್ಯದ ಹೈಡ್ರೋವಿಡ್ ಗಾಂಜಾ ಸಹಿತ ವಿದ್ಯಾರ್ಥಿನಿ ಬಂಧನ
ಮಂಗಳೂರು: 35 ಲಕ್ಷ ರೂ ಮೌಲ್ಯದ ಮೌಲ್ಯದ ಸುಮಾರು 1 ಕೆಜಿ 42 ಗ್ರಾಂ ಹೈಡ್ರೋವಿಡ್ ಗಾಂಜಾ ಸಹಿತ ವಿದ್ಯಾರ್ಥಿನಿಯನ್ನು ಮೂಲ್ಕಿ ಪೊಲೀಸರು ಬಂಧಿಸಿದ್ದಾರೆ. ಮಂಗಳವಾರ (ಮೇ 12) ರಂದು ಮೂಲ್ಕಿ ರೈಲ್ವೇ ಸ್ಟೇಷನ್ ರಸ್ತೆಯಲ್ಲಿ ಹೈಡ್ರೋವಿಡ್ ಗಾಂಜಾ ಸಾಗಾಟ ಮಾಡುತ್ತಿದ್ದ ಸುಹಾನ(21)ಳನ್ನು ಬಂಧಿಸಲಾಗಿದೆ. ಬಂಧಿತೆ ಶಿವಮೊಗ್ಗದ ಸಾಗರ ತಾಲೂಕಿನ ಹುಲಿದೇವರ ಬನ ನಿವಾಸಿಯಾಗಿದ್ದು ಕುಂದಾಪುರದ ಕಾಲೇಜೊಂದರಲ್ಲಿ ಅಂತಿಮ ವರ್ಷದ ಬಿಸಿಎ ವ್ಯಾಸಂಗ ಮಾಡುತ್ತಿದ್ದಳು. 35 ಲಕ್ಷ ರೂ ಮೌಲ್ಯದ …
Read More »ಮಂಗಳೂರು: ಫಾತಿಮಾ ಬೀಚ್ ಬಳಿ ಗಾಂಜಾ ಸೇವನೆ: ಕೇಸು
ಪಣಂಬೂರು: ಫಾತಿಮಾ ಬೀಚ್ ಬಳಿ ಗಾಂಜಾ ಸೇವಿಸಿ ನಶೆಯಲ್ಲಿದ್ದ ಯುವಕನನ್ನು ಪೊಲೀಸರು ವಶಕ್ಕೆ ಪಡೆದ ಘಟನೆ ತಣ್ಣೀರುಬಾವಿಯಲ್ಲಿ ಸಂಭವಿಸಿದೆ. ಹೇಮಂತ್ (20) ಬಂಧಿತ ಯುವಕ. ಮಂಗಳೂರು ಠಾಣಾ ವ್ಯಾಪ್ತಿಯಲ್ಲಿ ಗಸ್ತು ಕರ್ತವ್ಯದಲ್ಲಿದ್ದ ಎಚ್‌ಸಿ ಇಮ್ತಿಯಾಜ್ ಮತ್ತು ಪಿಸಿ ರಾಕೇಶ್ ಅವರು ಫಾತಿಮಾ ಬೀಚ್ ಬಳಿ ಅನುಮಾನಾಸ್ಪದವಾಗಿ ಕಂಡುಬಂದ ವ್ಯಕ್ತಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದರು.ಆತ ಮಾತನಾಡಲು ತಡವರಿಸುತ್ತಿದ್ದ ಕಾರಣ ಕೂಲಂಕುಷವಾಗಿ ವಿಚಾರಿಸಿದಾಗ ಗಾಂಜಾ ಸೇವಿಸಿರುವುದಾಗಿ ಒಪ್ಪಿಕೊಂಡಿದ್ದಾನೆ. ಪ್ರಕರಣ ದಾಖಲಿಸಿಕೊಳ್ಳಲಾಗಿದೆ.
Read More »ಕಾರು ಕಳವಿಗೆ ಯತ್ನ
ಗಂಗೊಳ್ಳಿ: ಕಾರು ಕಳವು ಮಾಡಲು ಯತ್ನಿಸಿದ ಇಬ್ಬರು ಆರೋಪಿಗಳು ಸ್ಥಳದಲ್ಲಿ ಬೈಕ್ ಬಿಟ್ಟು ಪರಾರಿಯಾದ ಘಟನೆ ನಿರೋಣಿಯಲ್ಲಿ ಸೋಮವಾರ ರಾತ್ರಿ ಸಂಭವಿಸಿದೆ. ಮರವಂತೆ ಗ್ರಾಮದ ರಿತೇಶ್ ದೇವಾಡಿಗ ಅವರು ಮೇ 11ರಂದು ರಾತ್ರಿ ಶಾಮಿಯಾನ ಅನ್‌ಲೋಡ್ ಮಾಡಿಕೊಂಡು ವಾಪಸ್ಸಾಗುವ ವೇಳೆ, ‘ಶ್ರೀ ವರಾಹ ಸರ್ವಿಸ್ ಸ್ಟೇಶನ್’ ಎದುರು ನಿಲ್ಲಿಸಿದ್ದ ಕಾರನ್ನು ಇಬ್ಬರು ಕಳವು ಮಾಡಲು ಯತ್ನಿಸುತ್ತಿದ್ದರು. ಈ ವೇಳೆ ರಿತೇಶ್ ಬರುವುದನ್ನು ಕಂಡ ಅಪರಿಚಿತರು ಅವರನ್ನು ದೂಡಿ ಆರೋಪಿಗಳು ತಾವು …
Read More »ಪ್ರೀತಿಸಿದ ಯುವತಿಯ ಖಾಸಗಿ ಫೋಟೋ ಹರಿಬಿಟ್ಟ!
ಶಿವಮೊಗ್ಗ: ಕಾಲೇಜು ವಿದ್ಯಾರ್ಥಿನಿಯೊಬ್ಬಳನ್ನು ಪ್ರೀತಿಯ ಹೆಸರಿನಲ್ಲಿ ನಂಬಿಸಿ, ಆಕೆಯ ಖಾಸಗಿ ಭಾವಚಿತ್ರಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ಕಳೆದ ಮೂರು ವರ್ಷಗಳಿಂದ ಸ್ನೇಹದಲ್ಲಿದ್ದ ಯುವಕ, ಪ್ರೇಮದ ನಾಟಕವಾಡಿ ಯುವತಿಯಿಂದ ಖಾಸಗಿ ಫೋಟೋಗಳನ್ನು ಪಡೆದಿದ್ದನು. ನಂತರ ಇನ್‌ಸ್ಟಾಗ್ರಾಮ್‌ನಲ್ಲಿ ನಕಲಿ ಖಾತೆಗಳನ್ನು ಸೃಷ್ಟಿಸಿ ಆ ಫೋಟೋಗಳನ್ನು ವೈರಲ್ ಮಾಡಿದ್ದಾನೆ. ಈ ಸಂಬಂಧ ಸಂತ್ರಸ್ತೆ ನೀಡಿದ ದೂರಿನನ್ವಯ ಶಿವಮೊಗ್ಗದ ಸೆನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ. ಸದ್ಯ ಪೊಲೀಸರು …
Read More »ಬೆಚ್ಚಿಬೀಳಿಸುವ ಘಟನೆ: ಬೆಂಗಳೂರಿನಲ್ಲಿ ಎಲೆಕ್ಟ್ರಿಕ್ ಬೈಕ್ ಬ್ಯಾಟರಿ ಸ್ಫೋಟಗೊಂಡು ವೃದ್ಧ ದಾರುಣ ಸಾವು!
ಎಲೆಕ್ಟ್ರಿಕ್ ವಾಹನಗಳ ಸುರಕ್ಷತೆಯ ಬಗ್ಗೆ ಆತಂಕ ಮೂಡಿಸುವ ಮತ್ತೊಂದು ಘಟನೆ ರಾಜ್ಯ ರಾಜಧಾನಿಯಲ್ಲಿ ನಡೆದಿದೆ. ಮನೆಯೊಳಗೆ ಇ-ಬೈಕ್ ಚಾರ್ಜ್‌ಗೆ ಹಾಕಿ ಮಲಗಿದ್ದ ವೃದ್ಧರೊಬ್ಬರು ಬ್ಯಾಟರಿ ಸ್ಫೋಟಗೊಂಡ ಪರಿಣಾಮ ದಾರುಣವಾಗಿ ಸಾವನ್ನಪ್ಪಿದ್ದಾರೆ. ನಗರದ ಹಲಸೂರು ಪೊಲೀಸ್ ಠಾಣಾ ವ್ಯಾಪ್ತಿಯ ಮರ್ಸಿ ಟೌನ್ ನಿವಾಸಿ ಲೂಥ್ ನಾಥನ್ (62) ಮೃತಪಟ್ಟ ದುರ್ದೈವಿ. ಸೋಮವಾರ ರಾತ್ರಿ ನಾಥನ್ ಅವರು ತಮ್ಮ ಎಲೆಕ್ಟ್ರಿಕ್ ಬೈಕ್ ಅನ್ನು ಮನೆಯ ಹಾಲ್‌ನಲ್ಲಿ ಚಾರ್ಜ್‌ಗೆ ಹಾಕಿ ಅಲ್ಲೇ ಮಲಗಿದ್ದರು. ತಡರಾತ್ರಿ …
Read More »ಬೆಳ್ತಂಗಡಿ: ವೇಶ್ಯಾವಾಟಿಕೆ ದಂದೆ ನಡೆಸುತ್ತಿದ್ದ ಇಬ್ಬರ ಬಂಧನ
ವೇಶ್ಯಾವಾಟಿಕೆ ದಂದೆ ನಡೆಸುತ್ತಿದ್ದ ಕ್ಯಾಂಟಿನ್ ಮೇಲೆ ಬೆಳ್ತಂಗಡಿ ಪೊಲೀಸರು ದಾಳಿ ಮಾಡಿ ಸಂತ್ರಸ್ತೆಯನ್ನು ರಕ್ಷಿಸಿದ್ದು, ಮೂವರನ್ನು ವಶಕ್ಕೆ ಪಡೆದು ಇಬ್ಬರು ಪ್ರಮುಖ ಆರೋಪಿಗಳಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಬೆಳ್ತಂಗಡಿ ನಗರದ ಕೆ.ಇ.ಬಿ ರಸ್ತೆಯಲ್ಲಿರುವ ಸುಂದರ್ ಶೆಟ್ಟಿ ಮಾಲೀಕತ್ವದ ಕ್ಯಾಂಟಿನ್‌ನಲ್ಲಿ ವೇಶ್ಯಾವಾಟಿಕೆ ನಡೆಯುತ್ತಿತ್ತು. ಕ್ಯಾಂಟಿನ್ ಮಾಲೀಕ ಪಡಂಗಡಿ ಗ್ರಾಮದ ಪೊಯ್ಯೆಗುಡ್ಡೆ ನಿವಾಸಿ ಸುಂದರ್ ಶೆಟ್ಟಿ (55) ಮತ್ತು ಸ್ನೇಹಿತ ನಾವೂರು ಗ್ರಾಮದ ಉಸ್ಮಾನ್ (38) ಎಂಬುವರಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ವೇಶ್ಯಾವಟಿಕೆ …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





