Breaking News

BigTv News

ಚಿತ್ತಾಪುರದಲ್ಲಿ ರಸ್ತೆ ಕಾಮಗಾರಿ ವಿಚಾರಕ್ಕೆ ಎರಡು ಗುಂಪುಗಳ ನಡುವೆ ಮಾರಾಮಾರಿ; ಹಲವರಿಗೆ ಗಾಯ

ಕಲಬುರಗಿ: ಚಿತ್ತಾಪುರ ತಾಲೂಕಿನ ರಾಂಪುರಹಳ್ಳಿಯಲ್ಲಿ ರಸ್ತೆ ಕಾಮಗಾರಿ ವಿಚಾರವಾಗಿ ಎರಡು ಗುಂಪುಗಳ ನಡುವೆ ಮಾರಾಮಾರಿ ನಡೆದಿದ್ದು, ಹಲವರು ಗಾಯಗೊಂಡಿದ್ದಾರೆ. ರಸ್ತೆ ಕಾಮಗಾರಿ ಕುರಿತು ಆರಂಭವಾದ ವಾಗ್ವಾದ ವಿಕೋಪಕ್ಕೆ ತಿರುಗಿ, ಎರಡೂ ಗುಂಪಿನವರು ದೊಣ್ಣೆಗಳಿಂದ ಪರಸ್ಪರ ಹಲ್ಲೆ ನಡೆಸಿದ್ದಾರೆ. ಗಾಯಾಳುಗಳನ್ನು ಕಲಬುರಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆಯ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ವಾಡಿ ಪೊಲೀಸ್ ಠಾಣೆಯಲ್ಲಿ ದೂರು ಹಾಗೂ ಪ್ರತಿದೂರು ದಾಖಲಾಗಿವೆ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Read More »

ಪ್ರಿಯತಮನನ್ನು ಗಲ್ಲಿಗೇರಿಸಿ’ ಡೆತ್‌ನೋಟ್ ಬರೆದಿಟ್ಟು ಹಬ್ಬದ ದಿನವೇ ಪ್ರಾಣ ಬಿಟ್ಟ ಶಿಕ್ಷಕಿ

ಕೊಪ್ಪಳ: ಮದುವೆಗೆ ಅಡ್ಡಿಪಡಿಸುತ್ತಿದ್ದಾರೆ ಎಂದು ಆರೋಪಿಸಿ ಖಾಸಗಿ ಶಾಲಾ ಶಿಕ್ಷಕಿ ಸಂಗೀತ ಮೇಟಿ ತುಂಗಭದ್ರಾ ಜಲಾಶಯದ ಹಿನ್ನೀರಿಗೆ ಜಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಕಾತರಕಿ ಗ್ರಾಮದ ಸಂಗೀತ ಅ.19ರಂದು ಕೊಪ್ಪಳಕ್ಕೆ ಹೋಗುವುದಾಗಿ ಹೇಳಿ ತೆರಳಿದ್ದರು. ಇಂದು ಬೆಳಗ್ಗೆ ವಿಜಯನಗರ ಜಿಲ್ಲೆಯ ಗಡಿಭಾಗದಲ್ಲಿ ಅವರ ಮೃತದೇಹ ಪತ್ತೆಯಾಗಿದೆ. ಸುಮಾರು 14 ವರ್ಷಗಳಿಂದ ಸಂಬಂಧಿ ವಿಕಾಸ್‌ನನ್ನು ಪ್ರೀತಿಸುತ್ತಿದ್ದು, ಮದುವೆಗೆ ಆತನ ಸಹೋದರ ವಸಂತ್ ಹಾಗೂ ಪತ್ನಿ ರೇಣುಕಾ ಅಡ್ಡಿಪಡಿಸುತ್ತಿದ್ದಾರೆ ಎಂದು ಸಂಗೀತ …

Read More »

ಸಿದ್ದಕಟ್ಟೆಯಲ್ಲಿ ಯುವಕನಿಗೆ ಚೂರಿ ಇರಿತ ಪ್ರಕರಣ : ಒರ್ವನ ಬಂಧನ

ಬಂಟ್ವಾಳ: ಸಿದ್ದಕಟ್ಟೆ ಜಂಕ್ಷನ್‌ನಲ್ಲಿ ಯುವಕನಿಗೆ ಚೂರಿಯಿಂದ ಇರಿದು ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಟ್ವಾಳ ಗ್ರಾಮಾಂತರ ಪೊಲೀಸರು ಓರ್ವ ಆರೋಪಿಯನ್ನು ಬಂಧಿಸಿದ್ದಾರೆ. ಅಕ್ಟೋಬರ್ 18ರ ರಾತ್ರಿ ಸಂಗಬೆಟ್ಟು ನಿವಾಸಿ ಪ್ರಕಾಶ್ ಸ್ನೇಹಿತರೊಂದಿಗೆ ನಿಂತಿದ್ದ ವೇಳೆ ಆರು ಮಂದಿ ಆರೋಪಿಗಳು ಏಕಾಏಕಿ ಹಲ್ಲೆ ನಡೆಸಿದ್ದಾರೆ. ಈ ವೇಳೆ ಅಕ್ಷಿತ್ ಎಂಬಾತ ಚೂರಿಯಿಂದ ಹಲವು ಬಾರಿ ಇರಿದು ಗಾಯಗೊಳಿಸಿದ್ದಾನೆ ಎಂದು ಆರೋಪಿಸಲಾಗಿದೆ. ಗಾಯಾಳುವಿನ ಸಹೋದರ ಗಣೇಶ್ ನೀಡಿದ ದೂರಿನ ಮೇರೆಗೆ ಕಿರಣ್ ಕೆ. …

Read More »

ಎಫ್‌ಐಆರ್ ಮಾಡಿಸಿದ್ದಕ್ಕೆ ಲಾಂಗ್ ಹಿಡಿದು ಮನೆಗೆ ನುಗ್ಗಿದ ರೌಡಿಶೀಟರ್!

ನೆಲಮಂಗಲ: ಗಲಾಟೆ ಸಂಬಂಧ ಎಫ್‌ಐಆರ್ ದಾಖಲಿಸಿದ್ದಕ್ಕೆ ಆಕ್ರೋಶಗೊಂಡ ರೌಡಿಶೀಟರ್‌ವೊಬ್ಬ ಲಾಂಗ್ ಹಿಡಿದು ಮನೆಗೆ ನುಗ್ಗಿ ಕುಟುಂಬಕ್ಕೆ ಬೆದರಿಕೆ ಹಾಕಿರುವ ಘಟನೆ ತಾಲೂಕಿನ ಬೆಟ್ಟಹಳ್ಳಿ ಪಾಳ್ಯದಲ್ಲಿ ನಡೆದಿದೆ. ಯತೀಶ್ ಎಂಬಾತ ಬೈಕ್‌ನಲ್ಲಿ ಬಂದು ರಂಗಣ್ಣ ಎಂಬುವರ ಮನೆಗೆ ನುಗ್ಗಿ ದಾಂಧಲೆ ನಡೆಸಿದ್ದಾನೆ ಎನ್ನಲಾಗಿದೆ. ಪಿತ್ರಾರ್ಜಿತ ಆಸ್ತಿ ವಿಚಾರವಾಗಿ ಈ ಹಿಂದೆ ಎರಡೂ ಕಡೆಯವರ ನಡುವೆ ಗಲಾಟೆ ನಡೆದಿದ್ದು, ಅಕ್ಟೋಬರ್ 16ರಂದು ನ್ಯಾಯಾಲಯದ ಮೂಲಕ ಎಫ್‌ಐಆರ್ ದಾಖಲಿಸಲು ಅರ್ಜಿ ಸಲ್ಲಿಸಲಾಗಿತ್ತು. ಇದರಿಂದ ಆಕ್ರೋಶಗೊಂಡ …

Read More »

ಪೇಂಟ್ ಮಾಡಲು ಬಂದವನ ಜತೆ ಲವ್ವಿಡವ್ವಿ: ಗಂಡನ ಕಥೆ ಮುಗಿಸಲು ಡೀಲ್; ಬಯಲಿಗೆ ಬಂದಿದ್ದೇ ರೋಚಕ

ವಿಜಯಪುರ: ಪ್ರಿಯಕರನ ಜೊತೆ ಸೇರಿ ಪತಿಯನ್ನೇ ಅಪಘಾತದ ರೂಪದಲ್ಲಿ ಕೊಲೆ ಮಾಡಿಸಿರುವ ಆರೋಪದಡಿ ಪತ್ನಿ ಸೇರಿದಂತೆ ನಾಲ್ವರನ್ನು ವಿಜಯಪುರ ಪೊಲೀಸರು ಬಂಧಿಸಿದ್ದಾರೆ. ರಾಜಶೇಖರ್ ಕೊಲೆಯಾದ ವ್ಯಕ್ತಿಯಾಗಿದ್ದು, ಪತ್ನಿ ಅಶ್ವಿನಿ ಪ್ರಮುಖ ಆರೋಪಿಯಾಗಿದ್ದಾಳೆ. ಹೊಸ ಮನೆಯ ಪೇಂಟಿಂಗ್ ಕೆಲಸಕ್ಕೆ ಬಂದಿದ್ದ ಆನಂದ್ ಕಲ್ಲೂರನೊಂದಿಗೆ ಅಶ್ವಿನಿಗೆ ಪ್ರೇಮ ಸಂಬಂಧ ಬೆಳೆದಿತ್ತು ಎನ್ನಲಾಗಿದೆ. ಪತಿಯನ್ನು ಮುಗಿಸಲು ಸಂಚು ರೂಪಿಸಿದ್ದ ಆರೋಪಿಗಳು, ರಾಜಶೇಖರ್ ವಾಕಿಂಗ್‌ಗೆ ತೆರಳಿದ್ದ ವೇಳೆ ನಂಬರ್ ಪ್ಲೇಟ್ ಇಲ್ಲದ ಸ್ಕಾರ್ಪಿಯೋ ವಾಹನದಿಂದ ಡಿಕ್ಕಿ …

Read More »

ಪತ್ನಿಯ ಅಕ್ರಮ ಸಂಬಂಧ ಆರೋಪ: ಮನನೊಂದು ಆಟೋ ಚಾಲಕ ಆತ್ಮಹತ್ಯೆ

ಆನೇಕಲ್: ಪತ್ನಿಯ ಅಕ್ರಮ ಸಂಬಂಧದ ಆರೋಪ ಹಾಗೂ ಮಾನಸಿಕ ಕಿರುಕುಳದಿಂದ ಮನನೊಂದು ಆಟೋ ಚಾಲಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲೂಕಿನ ನೆರಿಗಾ ಗ್ರಾಮದಲ್ಲಿ ನಡೆದಿದೆ. ಮೃತರನ್ನು ಮುನಿಕೃಷ್ಣ (35) ಎಂದು ಗುರುತಿಸಲಾಗಿದೆ. ಮುನಿಕೃಷ್ಣ ಅವರಿಗೆ 10 ವರ್ಷಗಳ ಹಿಂದೆ ನಯನಾ ಎಂಬುವರೊಂದಿಗೆ ವಿವಾಹವಾಗಿದ್ದು, ದಂಪತಿಗೆ 6 ವರ್ಷದ ಮಗನಿದ್ದಾನೆ. ಪತ್ನಿಗೆ ಅದೇ ಗ್ರಾಮದ ಕ್ಯಾಬ್ ಚಾಲಕ ಕುಮಾರ್ ಎಂಬಾತನೊಂದಿಗೆ ಅಕ್ರಮ ಸಂಬಂಧವಿತ್ತು ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಈ ವಿಚಾರವಾಗಿ ದಂಪತಿ …

Read More »

ವಕೀಲನ ಹಣೆಗೆ ಗುಂಡಿಕ್ಕಿ ಕೊಂದ ಇಬ್ಬರು ಡೆಲಿವರಿ ಬಾಯ್‌ಗಳು

ಬೆಂಗಳೂರು: ಬಾಡಿಗೆ ಹಣದ ವಿಚಾರವಾಗಿ ಮನೆ ಮಾಲಿಕರಾಗಿದ್ದ ವಕೀಲ ಮಂಜುನಾಥ್ (42) ಅವರನ್ನು ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ವೈಟ್‌ಫೀಲ್ಡ್‌ನ ಪಟ್ಟಂದೂರು ಅಗ್ರಹಾರದಲ್ಲಿ ಭಾನುವಾರ ತಡರಾತ್ರಿ ನಡೆದಿದೆ. ಕಳೆದ ನಾಲ್ಕು ತಿಂಗಳಿಂದ ಬಾಡಿಗೆ ನೀಡದ ವಿಚಾರಕ್ಕೆ ಜಗಳ ನಡೆದಿತ್ತು. ಆರೋಪಿಗಳು ಬಾಡಿಗೆ ಹಣ ನೀಡುವ ನೆಪದಲ್ಲಿ ಮಂಜುನಾಥ್ ಅವರನ್ನು ಮನೆಯಿಂದ ಹೊರಗೆ ಕರೆದು, ಹಣ ಎಣಿಸುತ್ತಿದ್ದ ವೇಳೆ ಕಂಟ್ರಿಮೇಡ್ ಪಿಸ್ತೂಲ್‌ನಿಂದ ಹಣೆ ಹಾಗೂ ಎದೆಗೆ ಮೂರು ಸುತ್ತು ಗುಂಡು ಹಾರಿಸಿ …

Read More »

ಪುತ್ತೂರಿನ ಲಾಡ್ಜ್‌ನಲ್ಲಿ ಯುವಕನ ಮೇಲೆ ಹಲ್ಲೆ, ಜೀವ ಬೆದರಿಕೆ ಆರೋಪ, ಮೂವರ ವಿರುದ್ಧ ಪ್ರಕರಣ ದಾಖಲು

ಪುತ್ತೂರು: ಲಾಡ್ಜ್‌ನಲ್ಲಿ ಕೆಲಸ ಮಾಡುತ್ತಿದ್ದ ಯುವಕನ ಮೇಲೆ ಮೂವರು ಹಲ್ಲೆ ನಡೆಸಿ ಜೀವ ಬೆದರಿಕೆ ಹಾಕಿರುವ ಘಟನೆ ಪುತ್ತೂರಿನಲ್ಲಿ ನಡೆದಿದೆ. ಕೊಯಿಲ ನಿವಾಸಿ ಮಹಮ್ಮದ್ ರಿಫಾಯಿ (27) ಹಲ್ಲೆಗೊಳಗಾದ ಯುವಕ. ಅಕ್ಟೋಬರ್ 17ರಂದು ರಾತ್ರಿ ಫಾರೂಕ್, ಸೋನು ಹಾಗೂ ಇಷಾನ್ ಎಂಬುವರು ಲಾಡ್ಜ್‌ಗೆ ಬಂದು ರಿಫಾಯಿ ಅವರನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ. ರಿಫಾಯಿ ನೀಡಿದ ದೂರಿನ ಮೇರೆಗೆ ಪುತ್ತೂರು ನಗರ ಪೊಲೀಸರು ಮೂವರ ವಿರುದ್ಧ …

Read More »

ಸೋದರನ ಜೊತೆಯೇ ಪತ್ನಿಯ ಅಕ್ರಮ ಸಂಬಂಧ: ಮನನೊಂದ ಪತಿ ಆತ್ಮಹತ್ಯೆ

ಆನೇಕಲ್: ಪತ್ನಿಯ ಅನೈತಿಕ ಸಂಬಂಧದ ವಿಚಾರ ತಿಳಿದು ಮನನೊಂದ ಪತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರು ಹೊರವಲಯದ ನೆರಿಗಾ ಗ್ರಾಮದಲ್ಲಿ ನಡೆದಿದೆ. ಆಟೋ ಚಾಲಕ ಮುನಿಕೃಷ್ಣ (35) ಮೃತ ವ್ಯಕ್ತಿ. ಮುನಿಕೃಷ್ಣ ಅವರ ಪತ್ನಿ ನಯನ ಹಾಗೂ ಸಂಬಂಧಿ ಕುಮಾರ್ ನಡುವೆ ಅನೈತಿಕ ಸಂಬಂಧವಿತ್ತು ಎನ್ನಲಾಗಿದೆ. ನಯನ ಗರ್ಭದಲ್ಲಿರುವ ಮಗು ತನ್ನದೆಂದು ಕುಮಾರ್ ಸಂದೇಶ ಕಳುಹಿಸಿದ್ದಲ್ಲದೆ, ಮುನಿಕೃಷ್ಣ ಅವರನ್ನು ಪದೇಪದೇ ಅವಮಾನಿಸಿ ಕಿರುಕುಳ ನೀಡುತ್ತಿದ್ದ ಎಂಬ ಆರೋಪ ಕೇಳಿಬಂದಿದೆ. ಆತ್ಮಹತ್ಯೆಗೂ …

Read More »

ಮುತ್ತಗಿ ಕ್ರಾಸ್ ಬಳಿ ಭೀಕರ ರಸ್ತೆ ಅಪಘಾತ: ಎರಡು ವರ್ಷದ ಮಗು ಸಾವು; ಇಬ್ಬರಿಗೆ ಗಂಭೀರ ಗಾಯ

ವಿಜಯಪುರ: ರಾಷ್ಟ್ರೀಯ ಹೆದ್ದಾರಿ-50ರ ಕೊಲ್ಹಾರ ತಾಲೂಕಿನ ಮುತ್ತಗಿ ಕ್ರಾಸ್ ಬಳಿ ಕಾರು ಮತ್ತು ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಎರಡು ವರ್ಷದ ಮಗು ಮೃತಪಟ್ಟಿದೆ. ಮಸೂತಿ ಗ್ರಾಮದ ರಾವುತ ರವಿ ಹರಿಜನ (2) ಮೃತ ಮಗು. ಅಪಘಾತದಲ್ಲಿ ರೇಣುಕಾ ರವಿ ಹರಿಜನ (36) ಹಾಗೂ ಯಮನವ್ವ ಗಣಪತಿ ಚಲವಾದಿ (40) ಗಂಭೀರವಾಗಿ ಗಾಯಗೊಂಡಿದ್ದು, ವಿಜಯಪುರ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ಕೂಡಗಿ ಎನ್‌ಟಿಪಿಸಿ ಠಾಣೆಯ ಪಿಎಸ್‌ಐ ಮಲ್ಲಿಕಾರ್ಜುನ …

Read More »