ಬೆಂಗಳೂರು: ಸಿಸಿಬಿ ಹಾಗೂ ಉಪ್ಪಾರಪೇಟೆ ಪೊಲೀಸರು ಪ್ರತ್ಯೇಕ ಕಾರ್ಯಾಚರಣೆ ನಡೆಸಿ ಒಟ್ಟು ₹30 ಲಕ್ಷ ಮೌಲ್ಯದ ನಕಲಿ ಸಿಗರೇಟ್ಗಳನ್ನು ಜಪ್ತಿ ಮಾಡಿದ್ದಾರೆ. ಕೇರಳಕ್ಕೆ ಎರಡು ಟ್ರಾಲಿ ಬ್ಯಾಗ್ಗಳಲ್ಲಿ ಸಿಗರೇಟ್ ಸಾಗಿಸುತ್ತಿದ್ದ ಮಹಮದ್ ರಿಯಾಝ್ ಹಾಗೂ ಕುಮಾರನ್ ಅವರನ್ನು ಬಂಧಿಸಿ ₹20 ಲಕ್ಷ ಮೌಲ್ಯದ ಸಿಗರೇಟ್ ವಶಪಡಿಸಿಕೊಳ್ಳಲಾಗಿದೆ. ಮತ್ತೊಂದು ಪ್ರಕರಣದಲ್ಲಿ ₹10 ಲಕ್ಷ ಮೌಲ್ಯದ ನಕಲಿ ಸಿಗರೇಟ್ ಜಪ್ತಿ ಮಾಡಿ ಮಹಮದ್ ಗುಲ್ಜಾರ್ನನ್ನು ಬಂಧಿಸಲಾಗಿದೆ. ಇದರ ಹಿಂದೆ ದೊಡ್ಡ ಜಾಲವಿರುವ ಶಂಕೆ …
Read More »ಸಾಲವಾಗಿ ನೀಡಿದ್ದ ಹಣ ವಾಪಸ್ ಕೇಳಿದ್ದಕ್ಕೆ ಇರಿದು ಕೊಲೆಗೆ ಯತ್ನ: ಆರೋಪಿ ಬಂಧನ
ಬಂಟ್ವಾಳ: ಸಾಲವಾಗಿ ನೀಡಿದ್ದ ಹಣ ವಾಪಸ್ ಕೇಳಿದ ವಿಚಾರಕ್ಕೆ ವ್ಯಕ್ತಿಯೊಬ್ಬರಿಗೆ ಚೂರಿಯಿಂದ ಇರಿದು ಕೊಲೆಗೆ ಯತ್ನಿಸಿದ ಘಟನೆ ನಡೆದಿದೆ. ಗಾಯಾಳುವನ್ನು ಬಿ.ಮೂಡ ಗ್ರಾಮದ ಉದಯ್ ಎಂದು ಗುರುತಿಸಲಾಗಿದೆ. ಅ.17ರಂದು ಹಣ ನೀಡುವುದಾಗಿ ಹೇಳಿ ಉದಯ್ ಅವರನ್ನು ಪಲ್ಲಮಜಲು ಜಂಕ್ಷನ್ಗೆ ಕರೆಸಿಕೊಂಡ ಆರೋಪಿ ಅಜಿತ್ ಕುಮಾರ್ ಶೆಟ್ಟಿ (28), ಚೂರಿಯಿಂದ ಇರಿದಿದ್ದಾನೆ ಎಂದು ಆರೋಪಿಸಲಾಗಿದೆ. ತಡೆಯಲು ಬಂದ ಉದಯ್ ಸಹೋದರ ಲೋಕೇಶ್ ಅವರನ್ನೂ ಬೆನ್ನಟ್ಟಿದ್ದಾನೆ ಎನ್ನಲಾಗಿದೆ. ಗಾಯಾಳು ಉದಯ್ ಅವರನ್ನು ಹೆಚ್ಚಿನ …
Read More »ಬಾಡಿಗೆ ಕೇಳಿದ್ದಕ್ಕೆ ಮನೆ ಮಾಲೀಕನ ಹಣೆಗೆ ಗುಂಡಿಟ್ಟು ಹತ್ಯೆ! ಬೆಂಗಳೂರಲ್ಲಿ ಬೆಚ್ಚಿಬೀಳಿಸೋ ಘಟನೆ
ಬೆಂಗಳೂರು: ಮೂರು ತಿಂಗಳಿನಿಂದ ಬಾಡಿಗೆ ಹಣ ನೀಡದ ವಿಚಾರಕ್ಕೆ ಮನೆ ಮಾಲೀಕ, ವಕೀಲ ಮಂಜುನಾಥ್ ಅವರನ್ನು ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ವೈಟ್ಫೀಲ್ಡ್ನ ಪಟ್ಟಂದೂರು ಅಗ್ರಹಾರದಲ್ಲಿ ನಡೆದಿದೆ. ಭಾನುವಾರ ರಾತ್ರಿ 11:30ರ ಸುಮಾರಿಗೆ ಮನೆ ಬಾಗಿಲು ತೆರೆಯುತ್ತಿದ್ದಂತೆ ಇಬ್ಬರು ಬಾಡಿಗೆದಾರರು ಗುಂಡು ಹಾರಿಸಿ ಪರಾರಿಯಾಗಿದ್ದಾರೆ ಎನ್ನಲಾಗಿದೆ. ಹಣೆಗೆ ಗುಂಡು ತಗುಲಿ ಮಂಜುನಾಥ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತರು 50ಕ್ಕೂ ಹೆಚ್ಚು ಮನೆಗಳನ್ನು ಬಾಡಿಗೆಗೆ ನೀಡಿದ್ದರು. ಬಾಡಿಗೆ ಹಣದ ವಿವಾದದ ಜೊತೆಗೆ ಜಮೀನು …
Read More »ಬೆಂಗಳೂರಿನ ನೈಸ್ ರಸ್ತೆಯಲ್ಲಿ ಅಗ್ನಿ ಅವಘಡ: ಬಾನೆತ್ತರಕ್ಕೆ ಚಿಮ್ಮಿದ ಬೆಂಕಿ, ಪ್ರಯಾಣಿಕರ ಪರದಾಟ
ಬೆಂಗಳೂರು: ನೈಸ್ ರಸ್ತೆಯಲ್ಲಿ ಭಾನುವಾರ ಡೀಸೆಲ್ ಟ್ಯಾಂಕರ್ ಪಲ್ಟಿಯಾಗಿ ಬೆಂಕಿ ಹೊತ್ತಿಕೊಂಡಿದೆ. ಕನಕಪುರ ರಸ್ತೆ ಟೋಲ್ನಿಂದ ಅಂಜನಾಪುರ ಕಡೆಗೆ ತೆರಳುತ್ತಿದ್ದ ವೇಳೆ ಅವಘಡ ಸಂಭವಿಸಿದ್ದು, ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಲು ಹರಸಾಹಸ ಪಟ್ಟಿದ್ದಾರೆ. ಅಪಘಾತದಿಂದ ನೈಸ್ ರಸ್ತೆಯಲ್ಲಿ ವಾಹನ ಸಂಚಾರ ಸ್ಥಗಿತಗೊಂಡು ಸುಮಾರು ನಾಲ್ಕು ಕಿಲೋಮೀಟರ್ವರೆಗೆ ಟ್ರಾಫಿಕ್ ಜಾಮ್ ಉಂಟಾಗಿದೆ. ಹಬ್ಬಕ್ಕೆ ಊರಿಗೆ ತೆರಳುತ್ತಿದ್ದ ಪ್ರಯಾಣಿಕರು ಪರದಾಡಿದ್ದಾರೆ. ಸಂಚಾರ ಸುಗಮಗೊಳಿಸಲು ಪೊಲೀಸರು ಎಂ-ಸ್ಯಾಂಡ್ ಲಾರಿ ಚಾಲಕನಿಗೆ ₹50 ಸಾವಿರ ನೀಡಿ, …
Read More »ಖಾಸಗಿ ಆಸ್ಪತ್ರೆ ವಿರುದ್ಧ ದೂರು ದಾಖಲು, ಪೋಷಕರಿಂದ ಆಕ್ರೋಶ
ಖಾಸಗಿ ಮಕ್ಕಳ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿದ್ದ 2 ವರ್ಷ 8 ತಿಂಗಳ ಮಗು ಮೃತಪಟ್ಟಿದ್ದು, ವೈದ್ಯರ ನಿರ್ಲಕ್ಷ್ಯವೇ ಸಾವಿಗೆ ಕಾರಣ ಎಂದು ಪೋಷಕರು ಆರೋಪಿಸಿದ್ದಾರೆ. ಲಸಿಕೆ ನೀಡುವ ವೇಳೆ ವೈದ್ಯರು ಸೂಕ್ತ ಮುನ್ನೆಚ್ಚರಿಕೆ ವಹಿಸಿಲ್ಲ ಹಾಗೂ ಅಗತ್ಯ ಪರೀಕ್ಷೆ ನಡೆಸಿಲ್ಲ ಎಂದು ಮಗುವಿನ ಪೋಷಕರಾದ ಮಂಜುನಾಥ್ ಮತ್ತು ಶಂಕುತಲಾ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಆಸ್ಪತ್ರೆಯ ವಿರುದ್ಧ ಕಾನೂನು ಕ್ರಮ ಕೈಗೊಂಡು, ಸೂಕ್ತ ಪರಿಹಾರ ನೀಡುವಂತೆ ಪೊಲೀಸ್ ಠಾಣೆ, ತಹಶೀಲ್ದಾರ್ ಹಾಗೂ ತಾಲ್ಲೂಕು …
Read More »ಕಲಬುರಗಿ: ಶಂಕಿತ ಲಷ್ಕರ್ ಉಗ್ರ ವಶ; ಚಿನ್ನದಂಗಡಿಯಲ್ಲಿ ಕೆಲಸ ಮಾಡ್ತಿದ್ದ ಮಲೀಕ್!
ಕಲಬುರಗಿ: ಲಷ್ಕರ್-ಎ-ತೊಯ್ಬಾ ಉಗ್ರ ಸಂಘಟನೆ ಜೊತೆ ಸಂಪರ್ಕ ಹೊಂದಿದ್ದ ಆರೋಪದ ಮೇಲೆ ಪಶ್ಚಿಮ ಬಂಗಾಳ ಮೂಲದ ಅಕ್ಕಸಾಲಿಗ ಮಮ್ತಾಜ್ವುಲ್ ಮಲೀಕ್ನನ್ನು ಕೇಂದ್ರ ಗುಪ್ತಚರ ಇಲಾಖೆ ಹಾಗೂ ಸ್ಥಳೀಯ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ ವಶಕ್ಕೆ ಪಡೆದಿದ್ದಾರೆ. ಸರಾಫ್ ಬಜಾರ್ನಲ್ಲಿ ಕೆಲಸ ಮಾಡುತ್ತಿದ್ದ ಮಲೀಕ್, ಸಾಮಾಜಿಕ ಜಾಲತಾಣಗಳ ಮೂಲಕ ಉಗ್ರರ ಸಂಪರ್ಕದಲ್ಲಿದ್ದು, ಸೂಕ್ಷ್ಮ ಮಾಹಿತಿ ಹಂಚಿಕೊಂಡಿದ್ದ ಆರೋಪವಿದೆ. ಈ ಹಿಂದೆ ಬಂಧಿತನಾಗಿದ್ದ ಮೊಹಮ್ಮದ್ ಸಮೀರ್ ವಿಚಾರಣೆಯಿಂದ ದೊರೆತ ಸುಳಿವಿನ ಮೇರೆಗೆ ಈ …
Read More »ವಿಜಯಪುರ ಪೊಲೀಸರ ಭರ್ಜರಿ ಕಾರ್ಯಾಚರಣೆ | ಹೊಲದಲ್ಲಿ ಬೆಳೆದಿದ್ದ 1.1 ಕೋಟಿ ರೂ. ಮೌಲ್ಯದ ಗಾಂಜಾ ಜಪ್ತಿ; ಓರ್ವ ಆರೋಪಿ ಬಂಧನ
ವಿಜಯಪುರ: ಬಸವನ ಬಾಗೇವಾಡಿ ತಾಲೂಕಿನ ದಿಂಡವಾರ ಗ್ರಾಮದ ಹೊಲವೊಂದರಲ್ಲಿ ತೊಗರಿ ಬೆಳೆ ಮಧ್ಯೆ ಅಕ್ರಮವಾಗಿ ಬೆಳೆದಿದ್ದ 1.1 ಕೋಟಿ ರೂ. ಮೌಲ್ಯದ 200 ಕೆ.ಜಿ.ಗೂ ಅಧಿಕ ಗಾಂಜಾವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಆರೋಪಿ ಶಿವಶಂಕರ್ ಶರಣಪ್ಪ ಜೀರ್ ತನ್ನ ಜಮೀನಿನಲ್ಲಿ 500ಕ್ಕೂ ಹೆಚ್ಚು ಗಾಂಜಾ ಗಿಡಗಳನ್ನು ಬೆಳೆದಿದ್ದನು. ಖಚಿತ ಮಾಹಿತಿ ಮೇರೆಗೆ ಡಿವೈಎಸ್ಪಿ ಚಂದ್ರಕಾಂತ ನಂದರೆಡ್ಡಿ ನೇತೃತ್ವದ ತಂಡ ದಾಳಿ ನಡೆಸಿ ಆರೋಪಿಯನ್ನು ಬಂಧಿಸಿದೆ. ಕಾರ್ಯಾಚರಣೆ ನಡೆಸಿದ ಪೊಲೀಸ್ ತಂಡಕ್ಕೆ ಎಸ್ಪಿ …
Read More »ಕೆ.ಆರ್.ನಗರ ಐತಿಹಾಸಿಕ ಅರ್ಕೇಶ್ವರ ದೇಗುಲದ ಗೋಡೆ ಮೇಲೆ ಶಿಲುಬೆ, ಮಸೀದಿ ಚಿತ್ರ! ಇಬ್ಬರ ವಿರುದ್ಧ FIR
ಮೈಸೂರು: ಕೆ.ಆರ್.ನಗರ ತಾಲೂಕಿನ ಎಡತೊರೆ ಗ್ರಾಮದ ಪುರಾತನ ಅರ್ಕೇಶ್ವರ ಸ್ವಾಮಿ ದೇವಸ್ಥಾನದ ಗೋಡೆ ಮೇಲೆ ಶಿಲುಬೆ ಹಾಗೂ ಮಸೀದಿಯ ಚಿತ್ರಗಳನ್ನು ಬಿಡಿಸಿರುವುದು ವಿವಾದಕ್ಕೆ ಕಾರಣವಾಗಿದೆ. ಸ್ಥಳೀಯರ ವಿರೋಧದ ಬೆನ್ನಲ್ಲೇ ತಹಶೀಲ್ದಾರ್ ಸುರೇಂದ್ರ ಮೂರ್ತಿ ಸ್ಥಳಕ್ಕೆ ಭೇಟಿ ನೀಡಿ ಚಿತ್ರಗಳನ್ನು ತೆರವುಗೊಳಿಸಿದ್ದಾರೆ. ದೇವಾಲಯದ ಪಾರುಪತ್ತೇದಾರ್ ಆರತಿ ಹಾಗೂ ಕಲಾವಿದ ವಿನಯ್ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ. ಘಟನೆಯನ್ನು ಖಂಡಿಸಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿದ್ದಾರೆ. ಕೆ.ಆರ್.ನಗರ …
Read More »ನವರಾತ್ರಿ ಪೂಜೆ ವೇಳೆ ಗಲಾಟೆ: ಚಾಕು ಇರಿತಕ್ಕೆ ಯುವಕ ಸಾವು
ಬಾಗಲಕೋಟೆ: ಮುಧೋಳದ ವಿನಾಯಕ ನಗರದಲ್ಲಿ ನವರಾತ್ರಿ ದುರ್ಗಾದೇವಿ ಘಟಸ್ಥಾಪನೆ ಪೂಜೆ ವೇಳೆ ಜೋರಾಗಿ ಮಾತನಾಡದಂತೆ ಬುದ್ಧಿವಾದ ಹೇಳಿದ್ದಕ್ಕೆ ನಡೆದ ಗಲಾಟೆ ಕೊಲೆಯಲ್ಲಿ ಅಂತ್ಯಗೊಂಡಿದೆ. ಪೂಜೆಯ ವೇಳೆ ಶಾಂತವಾಗಿರುವಂತೆ ಸೂಚಿಸಿದ್ದ ನಿತಿನ್ ನಿಂಬಾಳ್ಕರ್ ಮೇಲೆ ಯುವಕರ ಗುಂಪು ಚಾಕುವಿನಿಂದ ಹಲ್ಲೆ ನಡೆಸಿದೆ. ಕತ್ತು ಹಾಗೂ ಪಕ್ಕೆಲುಬಿಗೆ ಇರಿತಕ್ಕೊಳಗಾದ ನಿತಿನ್ ಮೃತಪಟ್ಟಿದ್ದು, ರಕ್ಷಣೆಗೆ ಮುಂದಾದ ಚಿಕ್ಕಪ್ಪ ಸಂಜು ನಿಂಬಾಳ್ಕರ್ ಗಂಭೀರವಾಗಿ ಗಾಯಗೊಂಡಿದ್ದಾರೆ. ಪ್ರಕರಣದಲ್ಲಿ ಶ್ರೀನಿವಾಸ ಕೊರವರ ಸೇರಿದಂತೆ ಆರು ಮಂದಿ ಆರೋಪಿಗಳ ಹೆಸರು …
Read More »ಬಾಲಕನ ಹತ್ಯೆ ಪ್ರಕರಣ: ಅಪ್ರಾಪ್ತರಿಬ್ಬರ ಬಂಧನ
ಬೆಂಗಳೂರು: ವಿಭೂತಿಪುರ ಕೆರೆಯ ಬಳಿ 13 ವರ್ಷದ ಬಾಲಕನ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಅಪ್ರಾಪ್ತ ಆರೋಪಿಗಳನ್ನು ಎಚ್ಎಎಲ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ತಿಂಗಳ ಹಿಂದೆ ದ್ವಿಚಕ್ರ ವಾಹನ ಅಡ್ಡಗಟ್ಟಿದ ವಿಚಾರಕ್ಕೆ ನಡೆದ ಜಗಳದ ವೈಷಮ್ಯದಿಂದ ಅಕ್ಟೋಬರ್ 4ರಂದು ಬಾಲಕನ ಮೇಲೆ ಇಬ್ಬರು ದಾಳಿ ನಡೆಸಿದ್ದಾರೆ. ಬಳಿಕ ಮುಖದ ಮೇಲೆ ದೊಡ್ಡ ಕಲ್ಲು ಎತ್ತಿಹಾಕಿ ಹತ್ಯೆ ಮಾಡಿ ಪರಾರಿಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಮರುದಿನ ಬೆಳಗ್ಗೆ ಬಾಲಕನ ಮೃತದೇಹ ಪತ್ತೆಯಾಗಿದ್ದು, …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





