Breaking News

BigTv News

ಮಂಜೇಶ್ವರ : ಕಾರಿನಲ್ಲಿ ಎಂಡಿಎಂಎ ಸಾಗಿಸುತ್ತಿದ್ದ ಮೂವರ ಬಂಧನ

ಮಂಜೇಶ್ವರ: ಕಾರಿನಲ್ಲಿ ಸಾಗಿಸುತ್ತಿದ್ದ ಸುಮಾರು 50 ಗ್ರಾಂ ಎಂಡಿಎಮ್‌ಎ ಮಾದಕ ವಸ್ತು ಸಹಿತ ಮೂವರನ್ನು ಮಂಜೇಶ್ವರ ಠಾಣಾ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಕಾಸರಗೋಡು ಜಿಲ್ಲೆಯ ಅಲಂಪಾಡಿ ನಿವಾಸಿ ಸಿ.ಎ. ಮುಹಮ್ಮದ್ ಸಹಲ್, ಎರ್ನಾಕುಲಂ ಮೂಲದ ಅರುಣ್ ಕುಮಾರ್ ಹಾಗೂ ವಡಗರ ನಿವಾಸಿ ಎಂ.ಪಿ. ಅನೂಷ್ ಎಂದು ಗುರುತಿಸಲಾಗಿದೆ. ತಮಗೆ ಲಭಿಸಿದ ಖಚಿತ ಮಾಹಿತಿಯ ಆಧಾರದಲ್ಲಿ ಕಾರ್ಯಾಚರಣೆ ನಡೆಸಿದ ಪೊಲೀಸರು, ಮಂಜೇಶ್ವರ ಪಾವೂರು ಸಮೀಪ ಸ್ವಿಫ್ಟ್ ಕಾರನ್ನು ತಡೆದು ನಿಲ್ಲಿಸಿ ತಪಾಸಣೆ …

Read More »

ರಾತ್ರಿ ವೇಳೆ ವಿದ್ಯಾರ್ಥಿನಿಗೆ ಕರೆ ಮಾಡಿ ಬೆತ್ತಲೆ ಫೋಟೋ ಕಳುಹಿಸಲು ವಾರ್ಡನ್ ಒತ್ತಡ

ಕಲಬುರಗಿ: ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಬಿಸಿಎಂ ಹಾಸ್ಟೆಲ್ ವಾರ್ಡನ್ ವಿರುದ್ಧ ಪೋಕ್ಸೊ ಕೇಸ್ ದಾಖಲಾಗಿದೆ. ವಿದ್ಯಾರ್ಥಿನಿಗೆ ರಾತ್ರಿ ವೇಳೆ ಕರೆ ಮಾಡಿ ಬೆತ್ತಲೆ ಫೋಟೋಗಳನ್ನು ಕಳುಹಿಸುವಂತೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಕೇಳಿ ಬಂದಿದೆ. ಅಫಜಲಪುರ ಬಿಸಿಎಂ ಹಾಸ್ಟೆಲ್ ವೊಂದರ ವಾರ್ಡನ್ ಹಣಮಂತ ಬಿರಾದಾರ ವಿರುದ್ಧ ಕಲಬುರ್ಗಿಯ ಎಂ.ಬಿ. ನಗರ ಠಾಣೆಯಲ್ಲಿ ಪೋಕ್ಸೊ ಕಾಯ್ದೆಯಡಿ ಕೇಸ್ ದಾಖಲಾಗಿದೆ. ವಿದ್ಯಾರ್ಥಿನಿಗೆ ಇನ್ಸ್ಟಾಗ್ರಾಮ್ ಮೂಲಕ ಕರೆ ಮಾಡಿದ್ದ ಆರೋಪಿ …

Read More »

ಉಡುಪಿ: ಸಿಟಿ ಬಸ್ ನಿಲ್ದಾಣದ ಬಳಿಯ ವಾಣಿಜ್ಯ ಸಂಕೀರ್ಣದಲ್ಲಿ ಅಗ್ನಿ ಅವಘಡ

ಉಡುಪಿ ಎಪ್ರಿಲ್ 26: ಸಿಟಿ ಬಸ್ ನಿಲ್ದಾಣದ ಪಕ್ಕದಲ್ಲಿರುವ ವಾಣಿಜ್ಯ ಕಟ್ಟಡವೊಂದರಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಬೆಂಕಿ ಅವಘಡ ಸಂಭವಿಸಿದ್ದು, ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳು ಬೆಂಕಿಗಾಹುತಿಯಾಗಿವೆ. ಕಟ್ಟಡದ ಕೆಳಮಹಡಿಯಲ್ಲಿರುವ ಮೊಬೈಲ್ ಸೇಲ್ಸ್ ಮತ್ತು ಸರ್ವಿಸ್ ಶಾಪ್ ಹಾಗೂ ಪಕ್ಕದ ಹಾರ್ಡ್‌ವೇರ್ ಅಂಗಡಿಯಲ್ಲಿ ಮೊದಲು ಬೆಂಕಿ .ಕ್ಷಣಾರ್ಧದಲ್ಲಿ ಬೆಂಕಿ ಇಡೀ ಮಳಿಗೆಗೆ ಆವರಿಸಿಕೊಂಡಿದ್ದು, ಅಂಗಡಿಯಲ್ಲಿದ್ದ ಬೆಲೆಬಾಳುವ ಮೊಬೈಲ್ ಫೋನ್‌ಗಳು, ಬಿಡಿಭಾಗಗಳು ಮತ್ತು ಹಾರ್ಡ್‌ವೇರ್ ಪರಿಕರಗಳು ಸಂಪೂರ್ಣವಾಗಿ ಸುಟ್ಟು ಕರಕಲಾಗಿವೆ. ವಿಷಯ …

Read More »

ಮಗು ಕಳುಹಿಸು ಎಂದ ಪತಿ: ನಿರಾಕರಿಸಿದ್ದಕ್ಕೆ ಪತ್ನಿ, ಅತ್ತೆ ಕೊಂದ ಕಿರಾತಕ!

ಬಲ್ಲಿಯಾ (ಉತ್ತರ ಪ್ರದೇಶ): ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ವ್ಯಕ್ತಿಯೊಬ್ಬ ತನ್ನ ಪತ್ನಿ ಹಾಗೂ ಅತ್ತೆಯನ್ನು ಚಾಕುವಿನಿಂದ ಇರಿದು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ಉತ್ತರ ಪ್ರದೇಶದ ಬಲ್ಲಿಯಾದಲ್ಲಿ ಶನಿವಾರ ಮುಂಜಾನೆ ನಡೆದಿದೆ. ಮಗುವನ್ನು ತನ್ನೊಂದಿಗೆ ಕಳುಹಿಸಲು ನಿರಾಕರಿಸಿದ್ದೇ ಈ ಘೋರ ಕೃತ್ಯಕ್ಕೆ ಕಾರಣ ಎನ್ನಲಾಗಿದೆ. ಆರೋಪಿ ಅಮಿತ್ ಗುಪ್ತಾ ಹಾಗೂ ಪ್ರೀತಿ 2022ರಲ್ಲಿ ಪ್ರೀತಿಸಿ ವಿವಾಹವಾಗಿದ್ದರು. ಕಳೆದ ಕೆಲವು ದಿನಗಳಿಂದ ದಂಪತಿಗಳ ನಡುವೆ ಮಗುವಿನ ವಿಚಾರವಾಗಿ ಗಲಾಟೆ ನಡೆಯುತ್ತಿತ್ತು. ಇದರಿಂದ …

Read More »

ಆಟೋ ಸೈಡ್‌ಗೆ ಹಾಕಿ ಎಂದ ಸುನಿಲ್ ಸಹೋದರರ ಮೇಲೆ ಜಮೀರ್ ಸಹೋದರರಿಂದ ಮಾರಣಾಂತಿಕ ಹಲ್ಲೆ!

ಕಲಬುರಗಿ: ಕ್ಷುಲ್ಲಕ ಕಾರಣಕ್ಕೆ ಹಿಂದೂ ಸಹೋದರಿಬ್ಬರ ಮೇಲೆ ಮುಸ್ಲಿಂ ಸಹೋದರರು ಸೇರಿಕೊಂಡು ಮಾರಾಣಾಂತಿಕ ಹಲ್ಲೆ ನಡೆಸಿರುವ ಘಟನೆ ಶನಿವಾರ ಕಲಬುರಗಿ ತಾಲೂಕಿನ ಭೀಮಳ್ಳಿ ಗ್ರಾಮದಲ್ಲಿ ನಡೆದಿದೆ. ಕಾರಿನಲ್ಲಿ ತೆರಳುತ್ತಿದ್ದ ತೋಟೆಂದ್ರ ಮತ್ತು ಸುನಿಲ್ ಸಹೋದರರು, ರಸ್ತೆ ಮೇಲೆ ಅಡ್ಡಾ- ದಿಡ್ಡಿಯಾಗಿ ನಿಲ್ಲಿಸಲಾಗಿದ್ದ ಆಟೋಗಳನ್ನು ಸ್ವಲ್ಪ ಸೈಡಿಗೆ ಹಾಕಿ ಎಂದು ಹೇಳಿದ್ದಾರೆ.ಈ ವೇಳೆ ಆಟೋ ಮಾಲೀಕ ಸೈಯದ್ ಜಮೀರ್ ಹಾಗೂ ಆತನ ಸಹೋದರರಾದ ಸೈಫಾಬ್ ಒಂಟಿ, ಆರಿಫ್, ಆಸಿಫ್, ಇಮ್ರಾನ್ ನಡುವೆ …

Read More »

ಭೀಕರ ಅಪಘಾತ: ಟ್ರ್ಯಾಕ್ಟರ್ ಯೂಟರ್ನ್ ತೆಗೆದುಕೊಳ್ಳುವಾಗ ಬೈಕ್ ಗೆ ಡಿಕ್ಕಿ: ಇಬ್ಬರು ಬ್ಯಾಂಕ್ ಉದ್ಯೋಗಿಗಳು ಸಾವು

ದೊಡ್ಡಬಳ್ಳಾಪುರ: ಟ್ರ್ಯಾಕ್ಟರ್ ಯೂಟರ್ನ್ ತೆಗೆದುಕೊಳ್ಳುವ ವೇಳೆ ಬೈಕ್ ಗೆ ಡಿಕ್ಕಿಯಾಗಿ ಸಂಭವಿಸಿದ ಭೀಕರ ಅಪಘಾತದಲ್ಲಿ ಬ್ಯಾಂಕ್ ಉದ್ಯೋಗಿಗಳಿಬ್ಬರು ಸಾವನ್ನಪ್ಪಿರುವ ದಾರುಣ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ನಗರದ ಕೋರ್ಟ್ ರಸ್ತೆಯಲ್ಲಿ ನಡೆದಿದೆಹರಳುಕುಪ್ಪೆ ಗ್ರಾಮದ ಮನೋಜ್ (24) ಮೃತ ದುರ್ದೈವಿಗಳು. ಮೃತ ನಾಗೇಶ್ ಮತ್ತು ಮನೋಜ್ ಖಾಸಗಿ ಬ್ಯಾಂಕ್​​ವೊಂದರಲ್ಲಿ ಕೆಲಸ ಮಾಡುತ್ತಿದ್ದರು. ಇಬ್ಬರೂ ಒಂದೇ ರೂಮ್​​ನಲ್ಲಿ ವಾಸವಾಗಿದ್ದರು. ಇಬ್ಬರೂ ಬೈಕ್​​ನಲ್ಲಿ ಊಟಕ್ಕೆ ಹೋಗುತ್ತಿದ್ದಾಗ ಲೋಡ್ ತುಂಬಿದ್ದ ಟ್ರ್ಯಾಕ್ಟರ್​ ಡಿಕ್ಕಿಯಾಗಿದೆ. ಈ …

Read More »

ಗರುಡ ಗ್ಯಾಂಗ್‌ ಸದಸ್ಯನ ಬಂಧನ

ಉಡುಪಿ: ಗರುಡ ಗ್ಯಾಂಗ್‌ನ ಸಕ್ರಿಯ ಸದಸ್ಯ ಹಾಗೂ ಕಿರಿಮಂಜೇಶ್ವರ ಗ್ರಾಮ ನಿವಾಸಿ ಮಹಮ್ಮದ್‌ ಅಲ್ಫಾಜ್‌ (25) ಎಂಬುವವನನ್ನು ಗೂಂಡಾ ಕಾಯ್ದೆಯಡಿ ಪೊಲೀಸರು ಬಂಧಿಸಿದ್ದಾರೆ. ಈತನನ್ನು ಗೂಂಡಾ ಕಾಯ್ದೆಯಡಿ ಬಂಧಿಸಲು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ನೀಡಿರುವ ವರದಿಯ ಮೇರೆಗೆ ಜಿಲ್ಲಾಧಿಕಾರಿ ಬಂಧನ ಆದೇಶ ಹೊರಡಿಸಿದ್ದರು. ಬಂಧಿತ ಆರೋಪಿಯನ್ನು ಶಿವಮೊಗ್ಗದ ಕೇಂದ್ರ ಕಾರಾಗೃಹದಲ್ಲಿರಿಸಲು ಆದೇಶಿಸಲಾಗಿದೆ. ಈತನ ವಿರುದ್ಧ ಉಡುಪಿ ಜಿಲ್ಲೆಯ ಶಿರ್ವ, ಗಂಗೊಳ್ಳಿ, ಬೈಂದೂರು, ಉಡುಪಿ ನಗರ, ಕುಂದಾಪುರ ಗ್ರಾಮಾಂತರ, ಕುಂದಾಪುರ ನಗರ …

Read More »

*ಮಾರ್ಕೆಟ್ ಠಾಣೆ ಪೊಲೀಸರಿಂದ ಮಟಕಾ ಬುಕ್ಕಿಗಳ ಬಂಧನ*

ಬೆಳಗಾವಿ: ಸಾರ್ವಜನಿಕರ ಸ್ಥಳದಲ್ಲಿ ಸಂಖ್ಯೆಗಳ ಮೇಲೆ ಹಣ ಪಡೆದು ಮುಂಬೈ-ಮಟಕಾ ಆಟ ಆಡುತ್ತಿದ್ದಾಗ ಮಾರ್ಕೇಟ್ ಪೊಲೀಸ್ ಠಾಣೆಯ ಪೊಲೀಸರು ದಾಳಿ ಮಾಡಿ ಇಬ್ಬರನ್ನು ಬಂಧಿಸಿದ್ದಾರೆ. ಪ್ರಶಾಂತ ಭರಮಾ ಪಾಟೀಲ (29) ಹಾಗೂ ಪ್ರತೀಕ ಮೋಹನ ಜಾಧವ (35) ಬಂದಿತ ಆರೋಪಿಗಳು.‌ ಆರೋಪಿತರಿಂದ ಹಣ ಹಾಗೂ ಓಸಿ ಚೀಟಿಗಳನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ. ಆರೋಪಿಗಳು ಆಟದಿಂದ ಸಂಗ್ರಹಿಸಿದ ಹಣವನ್ನು ಇನ್ನೋರ್ವ ಆರೋಪಿ ಗಜಾನನ ಶಶಿಕಾಂತ ಗರಡ ಎಂಬಾತನಿಗೆ ನೀಡಿರುವುದು ಬೆಳಕಿಗೆ ಬಂದಿದೆ. ಮೂವರೂ …

Read More »

ಪ್ರೀತಿಯ ವಿದ್ಯಾರ್ಥಿಗಳಿಗೆ ಅಂತಿಮ ವಿದಾಯ ಹೇಳಿ ಗುಂಡು ಹೊಡೆದುಕೊಂಡು ಸಾವಿಗೆ ಶರಣಾದ ಶಿಕ್ಷಕಿ

ಮಡಿಕೇರಿ: ಶಿಕ್ಷಕಿಯೊಬ್ಬರು ಕೋವಿಯಿಂದ ಗುಂಡು ಹೊಡೆದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಮಡಿಕೇರಿ ತಾಲ್ಲೂಕಿನ ಚೇರಂಬಾಣೆ ಗ್ರಾಮದಲ್ಲಿ ವರದಿಯಾಗಿದೆ. ಪ್ರೀತಿಯ ವಿದ್ಯಾರ್ಥಿಗಳಿಗೆ ಅಂತಿಮ ವಿದಾಯ ಹೇಳಿ ಶಿಕ್ಷಕಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಸಾವಿಗೆ ಶರಣಾದ ಟೀಚರ್ ಅನ್ನು ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯ ಶಿಕ್ಷಕಿ ರೋಹಿಣಿ (51) ಎಂದು ಗುರುತಿಸಲಾಗಿದೆ. ಜೀವನದಲ್ಲಿ ಜಿಗುಪ್ಸೆಗೊಂಡು ಮನೆಯಲ್ಲಿದ್ದ ಕೋವಿಯಿಂದ ಗುಂಡು ಹೊಡೆದುಕೊಂಡು ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಸಂಬಂಧ ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ …

Read More »

ಕುಂಟಿಕಾನ ಮಾದಕವಸ್ತು ಸೇವನೆ ಮೂವರ ಬಂಧನ

ಮಂಗಳೂರು: ಕುಂಟಿಕಾನ ಬಸ್ಸು ತಂಗುದಾಣದ ಸಾರ್ವಜನಿಕ ಸ್ಥಳದಲ್ಲಿ ಮಾದಕ ವಸ್ತು ಸೇವನೆ ಮಾಡಿದ್ದ ಆರೋಪದಡಿ ಮೂವರನ್ನು ಕಾವೂರು ಠಾಣೆ ಪೊಲೀಸರು ಬಂಧಿಸಿದ್ದಾರೆ. ಯೆಯ್ಯಡಿ ಪದವು ಗುಂಡಳಿಕೆ ನಿವಾಸಿ ಅಭಿರಾಜ್ (38), ಸುಳ್ಯ ಐವರ್ನಾಡು ನಿವಾಸಿ ಎನ್.ಬಿ. ಲೋಕೇಶ್ (19), ಮೂಲ್ಕಿ ಕಾರ್ನಾಡು ನಿವಾಸಿ ಅರವಿಂದ್ (33) ಬಂಧಿತ ಆರೋಪಿಗಳು. ಪೊಲೀಸರು ಗಸ್ತಿನಲ್ಲಿದ್ದಾಗ ಮಾದಕ ವಸ್ತು ಸೇವನೆ ಮಾಡಿದಂತೆ ಕಂಡು ಬಂದ ಆರೋಪಿಗಳನ್ನು ವಿಚಾರಿಸಿದಾಗ ಆರೋಪಿಗಳು ಮಾದಕ ವಸ್ತು ಸೇವನೆ ಮಾಡಿರುವುದಾಗಿ …

Read More »