Breaking News

BigTv News

ಬೆಂಗಳೂರು ಏರ್‌ಪೋರ್ಟ್ ನಲ್ಲಿ 3.89 ಕೋಟಿ ರೂ. ಮೌಲ್ಯದ ಗಾಂಜಾ ವಶ; ಪ್ರಯಾಣಿಕನ ಬಂಧನ!

ಬೆಂಗಳೂರು: ಬ್ಯಾಂಕಾಕ್‌ನಿಂದ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ 3.89 ಕೋಟಿ ರೂ. ಮೌಲ್ಯದ ಹೈಡ್ರೋಪೋನಿಕ್ ಗಾಂಜಾ ಸಾಗಿಸುತ್ತಿದ್ದ ಪ್ರಯಾಣಿಕನನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಆರೋಪಿಯನ್ನು ಎನ್‌ಡಿಪಿಎಸ್ ಕಾಯ್ದೆಯಡಿಯಲ್ಲಿ ಬಂಧಿಸಲಾಗಿದೆ. ಬ್ಯಾಂಕಾಕ್‌ನಿಂದ ಆಗಮಿಸಿದ ಪ್ರಯಾಣಿಕನನ್ನು ತಡೆದು ಪರೀಕ್ಷಿಸಿದಾಗ ಬ್ಯಾಗೇಜ್‌ನಲ್ಲಿ ಬಚ್ಚಿಟ್ಟಿದ್ದ 11.11 ಕೆಜಿ ಹೈಡ್ರೋಪೋನಿಕ್ ಗಾಂಜಾವನ್ನು ಬೆಂಗಳೂರು ಕಸ್ಟಮ್ಸ್ ವಶಪಡಿಸಿಕೊಂಡಿದೆ. ಇದರ ಮೌಲ್ಯ ರೂ. 3.89 ಕೋಟಿ ಎಂದು ಬೆಂಗಳೂರು ಕಸ್ಟಮ್ಸ್ ಎಕ್ಸ್‌ನಲ್ಲಿ ಪೋಸ್ಟ್‌ನಲ್ಲಿ ತಿಳಿಸಿದೆ. ವ್ಯಕ್ತಿಯ ಗುರುತನ್ನು …

Read More »

ಪ್ರಿಯಕರನಿಗೆ ಬೆಂಕಿ ಹಚ್ಚಿ ಹತ್ಯೆ ಕೇಸ್: ಆಸ್ಪತ್ರೆ ಬಳಿ ಕಣ್ಣೀರು ಹಾಕ್ತಿರುವ ಕಿರಣ್ ಕುಟುಂಬ

ಬೆಂಗಳೂರು: ನಗರದಲ್ಲಿ ಹೃದಯವಿದ್ರಾವಕ ಘಟನೆ ಒಂದು ಬೆಳಕಿಗೆ ಬಂದಿದೆ. ಪ್ರಿಯತಮೆಯೇ ಪ್ರಿಯಕರನಿಗೆ ಬೆಂಕಿ ಹಚ್ಚಿ ಹತ್ಯೆ ಮಾಡಿರುವ ಆರೋಪ ಕೇಳಿಬಂದಿದೆ. ಗಂಭೀರವಾಗಿ ಗಾಯಗೊಂಡಿದ್ದ ಯುವಕ ಕಿರಣ್, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ.ಮೃತದೇಹವನ್ನು ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆಗೆ ಒಳಪಡಿಸಲಾಗಿದೆ.ಆಸ್ಪತ್ರೆ ಬಳಿ ಕಿರಣ್ ಕುಟುಂಬದವರು ಹಾಗೂ ಸಂಬಂಧಿಕರು ಕಣ್ಣೀರಿನಲ್ಲಿ ಮುಳುಗಿದ್ದಾರೆ. ಕಿರಣ್ ತನ್ನ ತಂದೆ-ತಾಯಿಗೆ ಏಕೈಕ ಮಗನಾಗಿದ್ದನು. “ಈ ರೀತಿ ಸುಟ್ಟು ಹಾಕೋದು ಎಷ್ಟು ಸರಿ? ಈಗ ನಮ್ಮ ಮಗನಿಲ್ಲದೆ ನಾವು ಹೇಗೆ …

Read More »

ಕಲಬುರಗಿ: ಕಂಪ್ಯೂಟರ್‌ ಆಪರೇಟರ್‌ ‘ಲೋಕಾ’ ಬಲೆಗೆ

ವಸತಿ ಯೋಜನೆಯಡಿ ಮಂಜೂರಾದ ಮನೆಯ ಸಹಾಯಧನ ಬಿಡುಗಡೆಗಾಗಿ ಲಂಚಕ್ಕೆ ಬೇಡಿಕೆಯಿಟ್ಟ ಗ್ರಾಮ ಪಂಚಾಯಿತಿಯ ಕಂಪ್ಯೂಟರ್ ಆಪರೇಟರ್ ಲೋಕಾಯುಕ್ತರ ಪೊಲೀಸರ ‘ಬಲೆ’ಗೆ ಬಿದ್ದಿದ್ದಾನೆ. ಜಿಲ್ಲೆಯ ಯಡ್ರಾಮಿ ತಾಲ್ಲೂಕಿನ ಮಳ್ಳಿ ಗ್ರಾಮ ಪಂಚಾಯಿತಿಯ ಬಂದೇನವಾಜ್‌ ‘ಲೋಕಾ’ ಬಲೆಗೆ ಬಿದ್ದ ಆರೋಪಿ. ‘ನನ್ನ ಅಣ್ಣನಿಗೆ ಬಸವ ವಸತಿ ಯೋಜನೆ ಅಡಿಯಲ್ಲಿ ಮನೆ ಮಂಜೂರಾಗಿತ್ತು. ಅದರ ಸಹಾಯಧನ ಮಂಜೂರಿಗೆ ಬಂದೇನವಾಜ್‌ ₹ 20 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟಿದ್ದಾನೆ. ₹10 ಸಾವಿರಕ್ಕೆ ಡೀಲ್‌ ಮುಗಿಸಿ, ₹5 …

Read More »

ಸುಳ್ಳು ಕೇಸ್ ಬೆದರಿಕೆ, ಲಂಚ ಬೇಡಿಕೆ – ಇಬ್ಬರು ಪೊಲೀಸರ ಬಂಧನ

ಬಾಗಲಕೋಟೆ ಜಿಲ್ಲೆಯ ಕೆರೂರ ಪೊಲೀಸ್ ಠಾಣೆಯಲ್ಲಿ ಲಂಚದ ಪ್ರಕರಣ ಭಾರಿ ಸದ್ದು ಮಾಡಿದೆ. ಬೆಳಗಂಟಿ ಕೆರೂರ ನಿವಾಸಿ ಮುತ್ತಪ್ಪ ನಾಯ್ಕರ ಅವರು 21/04/2026 ರಂದು ಬಾಗಲಕೋಟೆ ಲೋಕಾಯುಕ್ತ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ದೂರು ಪ್ರಕಾರ, 17/04/2026 ರಂದು ಮುತ್ತಪ್ಪ ಅವರ ಸ್ನೇಹಿತ ಶಂಕ್ರಪ್ಪ ಬೂದಿಹಾಳ ಅವರನ್ನು ಅವರ ಬೈಕ್ ನಂ: KA-29 EC-0914 ಸಮೇತ ಕೆರೂರ ಪೊಲೀಸ್ ಠಾಣೆಗೆ ಕರೆದುಕೊಂಡು ಹೋಗಿ, ಸುಳ್ಳು ಆರೋಪ ಮಾಡಿ ಕೇಸ್ ಹಾಕುವುದಾಗಿ …

Read More »

ಕೆರೂರು ಪೊಲೀಸ್‌ ಠಾಣೆ ಮೇಲೆ ಲೋಕಾಯುಕ್ತ ದಾಳಿ

ಬಾಗಲಕೋಟೆ: ಸುಳ್ಳು ಪ್ರಕರಣ ದಾಖಲಿಸಿತ್ತೇನೆ ಎಂದು ಬೆದರಿಸಿ ಲಂಚ ಕೇಳಿದ್ದ ಪ್ರಕರಣದಲ್ಲಿ ಕೆರೂರು ಪೊಲೀಸ್ ಠಾಣೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಶಂಕ್ರಪ್ಪ ಬೂದಿಹಾಳ ಎಂಬುವರನ್ನು ಠಾಣೆಗೆ ಕರೆ‌ತಂದಿದ್ದ ಪೊಲೀಸ್ ಇನ್ ಸ್ಪೆಕ್ಟರ್ ಭೀಮಪ್ಪ ರಬಕವಿ, ₹1.70 ಲಕ್ಷ ಲಂಚ‌ ನೀಡದಿದ್ದರೆ ಇಸ್ಪೀಟ್ ಅಡಿಸುತ್ತಿದ್ದೆ ಎಂದು ಪ್ರಕರಣ ದಾಖಲಿಸುವುದಾಗಿ ಬೆದರಿಸಿದ್ದರು. ₹1.70 ಲಕ್ಷ ಲಂಚ ಪಡೆಯುವಾಗ ದಾಳಿ ಮಾಡಿ ಇನ್ ಸ್ಪೆಕ್ಟರ್ ಭೀಮಪ್ಪ ರಬಕವಿ, ಕಾನ್ ಸ್ಟೆಬಲ್ ಸಂತೋಷ …

Read More »

ಹೆಣ್ಣು ಮಕ್ಕಳಿಗೆ ಸೇಫ್‌ ಅಲ್ಲ ಸಿಲಿಕಾನ್‌ ಸಿಟಿ – ಹಾಡಹಗಲೇ ನಡುರಸ್ತೆಯಲ್ಲೇ ಬೀದಿ ಕಾಮಣ್ಣರ ದರ್ಬಾರ್‌

ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಮಹಿಳೆಯರ ಸುರಕ್ಷತೆ ಎಂಬುದು ಕೇವಲ ಮಾತಿಗೆ ಸೀಮಿತವಾಗಿದೆಯೇ ಎಂಬ ಆತಂಕ ಮೂಡುವಂತಹ ಘಟನೆಯೊಂದು ನಡೆದಿದೆ. ನಗರದ ಕೋಗಿಲು ಮುಖ್ಯರಸ್ತೆಯ ಮಾರುತಿ ನಗರದಲ್ಲಿ ಹಾಡಹಗಲೇ ಯುವತಿಯರ ಮೇಲೆ ಲೈಂಗಿಕ ದೌರ್ಜನ್ಯ ನಡೆದಿದ್ದು, ಸಾರ್ವಜನಿಕರು ಬೆಚ್ಚಿಬಿದ್ದಿದ್ದಾರೆ. ಮಾರುತಿ ನಗರದ ಕೋಗಿಲು ಮುಖ್ಯರಸ್ತೆಯಲ್ಲಿ ಯುವತಿಯರಿಬ್ಬರು ನಡೆದುಕೊಂಡು ಹೋಗುತ್ತಿದ್ದಾಗ ದ್ವಿಚಕ್ರ ವಾಹನದಲ್ಲಿ ಬಂದ ಇಬ್ಬರು ಕಾಮುಕರು ಅಟ್ಟಹಾಸ ಮೆರೆದಿದ್ದಾರೆ. ಜನದಟ್ಟಣೆ ಇರುವ ಪ್ರದೇಶ ಎನ್ನದೆ ಅಸಭ್ಯವಾಗಿ ವರ್ತಿಸಿದ ದುಷ್ಕರ್ಮಿಗಳು, ಯುವತಿಯರನ್ನು ಅನುಚಿತವಾಗಿ …

Read More »

ಉದ್ಯಮಿಗೆ ನೋಟಿಸ್‌ ನೀಡಲು ಹೋಗಿದ್ದ ಪೊಲೀಸರಿಂದಲೇ ದರೋಡೆ – ಸಿಸಿಟಿವಿಯಲ್ಲಿ ಕೃತ್ಯ ಸೆರೆ!

ಇಂದೋರ್: ಚೆಕ್ ಬೌನ್ಸ್ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ವಾರೆಂಟ್ ಜಾರಿ ಮಾಡಲು ಉದ್ಯಮಿ ಗೌರವ್ ಜೈನ್ ಅವರ ಮನೆಗೆ ತೆರಳಿದ್ದ ಐವರು ಪೊಲೀಸರು, ಅಲ್ಲಿನ ಸಿಸಿಟಿವಿ ಕ್ಯಾಮೆರಾಗಳನ್ನು ಆಫ್ ಮಾಡಿ ಸುಮಾರು 20 ತೋಲ ಚಿನ್ನವನ್ನು ದೋಚಿದ್ದಾರೆ ಎಂಬ ಗಂಭೀರ ಆರೋಪ ಕೇಳಿಬಂದಿದೆ.ಈ ದೂರಿನ ಹಿನ್ನೆಲೆಯಲ್ಲಿ ಇಂದೋರ್ ಪೊಲೀಸ್ ಇಲಾಖೆಯು ಆರೋಪಿ ಐವರು ಪೊಲೀಸ್ ಸಿಬ್ಬಂದಿಯನ್ನು ತಕ್ಷಣದಿಂದ ಜಾರಿಗೆ ಬರುವಂತೆ ಅಮಾನತುಗೊಳಿಸಿದೆ. ಪೊಲೀಸರು ಕಳ್ಳರಂತೆ ಮನೆಗೆ ನುಗ್ಗಿ ದರೋಡೆ ಮಾಡಿದ್ದಾರೆ ಎಂದು …

Read More »

ಮಗನಿಂದ ತಂದೆಯ ಕೊಲೆಗೆ ಯತ್ನ, ಆರೋಪಿ ಬಂಧನ

ಬೆಳ್ತಂಗಡಿ: ಕುಡಿದ ಮತ್ತಿನಲ್ಲಿ ಮಗನೇ ತಂದೆಯನ್ನು ಕತ್ತಿಯಿಂದ ಕಡಿದು ಕೊಲೆಗೆ ಯತ್ನಿಸಿದ ಘಟನೆ ಬೆಳ್ತಂಗಡಿ ‌ತಾಲೂಕಿನ‌ ಉಜಿರೆಯಲ್ಲಿ ಎ.21ರ ಮಂಗಳವಾರ ನಡೆದಿದೆಗಾಯಗೊಂಡ ತಂದೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಆರೋಪಿ, ಮಗ ಭರತ್ (25) ನ್ನು ಪೊಲೀಸರು ಬಂಧಿಸಿದ್ದಾರೆ.ಉಜಿರೆ ಗ್ರಾಮದ ಮಣಿಕೆ ನಿವಾಸಿ, ಗಾರೆ ಕೆಲಸ ಮಾಡುತ್ತಿರುವ ನಾರಾಯಣ (52) ಹಾಗೂ ಟಿಂಬರ್ ಕೆಲಸ ಮಾಡುತ್ತಿದ್ದ ಮಗ ಭರತ್ ನಡುವೆ ಮನೆಯಲ್ಲಿ ಗಲಾಟೆ ನಡೆದಿದೆ. ಕುಡಿದ ಮತ್ತಿನಲ್ಲಿ ಇಬ್ಬರ ನಡುವೆ ಗಲಾಟೆ …

Read More »

ವಿದೇಶಿ ಮಹಿಳೆ ಮೇಲೆ ಅತ್ಯಾಚಾರದ ಆರೋಪ! ಹೋಂಸ್ಟೇ ಮಾಲೀಕ ಸೇರಿ ಇಬ್ಬರು ಅರೆಸ್ಟ್

ಕೂಡಗು, ಏಪ್ರಿಲ್ 22: ಜಿಲ್ಲೆಯಲ್ಲಿ ವಿದೇಶಿ ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ ಆರೋಪ ಕೇಳಿಬಂದಿದ್ದು, ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಪೊನ್ನಂಪೇಟೆ ತಾಲೂಕಿನ ಕುಟ್ಟ ಪೊಲೀಸ್ ಠಾಣಾ ವ್ಯಾಪ್ತಿಯ ಕುಟ್ಟ ಗ್ರಾಮದಲ್ಲಿರುವ ಖಾಸಗಿ ಹೋಂಸ್ಟೇನಲ್ಲಿ ಈ ಘಟನೆ ನಡೆದಿರುವುದಾಗಿ ತಿಳಿದುಬಂದಿದೆ.ವಿದೇಶಿ ಮಹಿಳೆ ಮೇಲೆ ಅತ್ಯಾಚಾರದ ಆರೋಪ! ಹೋಂಸ್ಟೇ ಮಾಲೀಕ ಸೇರಿ ಇಬ್ಬರು ಅರೆಸ್ಟ್ದೇವಿ ವಿಲ್ಲಾ ಎಂಬ ಹೋಂಸ್ಟೇನಲ್ಲಿ ನಡೆದ ಘಟನೆ ಅಮೆರಿಕದ ವಾಶಿಂಗ್ಟನ್ ಮೂಲದ ಮಹಿಳೆ ಏಪ್ರಿಲ್ 19ರಂದು ದೇವಿ …

Read More »

ಕಾರ್‌ಗಳ ಡಿಕ್ಕಿ: ಚಾಲಕನಿಗೆ ಗಂಭೀರ ಗಾಯ

ಶಿವಮೊಗ್ಗ: ಸಮೀಪದ ಆಯನೂರು ಬಳಿ ಕ್ರೆಟಾ ಕಾರ್ ಮತ್ತು ಒಮ್ನಿ ವಾಹನದ ನಡುವೆ ಮಂಗಳವಾರ ನಡೆದ ಮುಖಾಮುಖಿ ಡಿಕ್ಕಿಯಿಂದ ಒಮ್ನಿ ಚಾಲಕನ ಕಾಲು ತುಂಡಾಗಿದೆ. ಕ್ರೆಟಾ ಕಾರ್‌ಲ್ಲಿ ಪ್ರಯಾಣಿಸುತ್ತಿದ್ದ ನಾಲ್ವರು ಮಹಿಳೆಯರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಅಪಘಾತ ಸ್ಥಳಕ್ಕೆ ಕುಂಸಿ ಠಾಣೆ ಪೊಲೀಸರು ತೆರಳಿ ಗಾಯಾಳುಗಳನ್ನು ತಮ್ಮ ವಾಹನದಲ್ಲಿ ಕರೆದೊಯ್ದು ಆಯನೂರು ಆಸ್ಪತ್ರೆಗೆ ದಾಖಲಿಸಿದರು. ಅಪಘಾತದಿಂದಾಗಿ ಸಾಗರ ರಸ್ತೆಯಲ್ಲಿ ಕೆಲ ಸಮಯ ವಾಹನ ದಟ್ಟಣೆ ಉಂಟಾಗಿತ್ತು. ಪೊಲೀಸರು ಸ್ಥಳದಲ್ಲಿ ಸಂಚಾರ ದಟ್ಟಣೆ …

Read More »