Breaking News

BigTv News

ಕೊಡಗಿನಲ್ಲಿ ವಿದೇಶಿ ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ; ಹೋಂ ಸ್ಟೇ ಮಾಲೀಕ ಸೇರಿ ಇಬ್ಬರು ಅರೆಸ್ಟ್.!

ಕೊಡಗು ಜಿಲ್ಲೆಯ ಪೊನ್ನಂಪೇಟೆ ತಾಲ್ಲೂಕಿನ ಕುಟ್ಟ ಗ್ರಾಮದಲ್ಲಿ ವಿದೇಶಿ ಮಹಿಳೆಯೊಬ್ಬರ ಮೇಲೆ ಲೈಂಗಿಕ ದೌರ್ಜನ್ಯ ನಡೆದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಈ ಸಂಬಂಧ ಹೋಂ ಸ್ಟೇ ಮಾಲೀಕ ಸೇರಿದಂತೆ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ವಾಷಿಂಗ್ಟನ್ ಮೂಲದ ಮಹಿಳೆಯೊಬ್ಬರು ಪ್ರವಾಸಕ್ಕಾಗಿ ಕೊಡಗಿಗೆ ಆಗಮಿಸಿದ್ದರು. ಅವರು ಕುಟ್ಟ ಗ್ರಾಮದಲ್ಲಿರುವ ‘ದೇವಿ ವಿಲ್ಲಾ ಹೋಮ್ ಸ್ಟೇ’ ನಲ್ಲಿ ತಂಗಿದ್ದರು. ವರದಿಗಳ ಪ್ರಕಾರ, ಕಳೆದ ಏಪ್ರಿಲ್ 19 ರಂದು ಈ ಘಟನೆ ನಡೆದಿದೆ. ದೌರ್ಜನ್ಯಕ್ಕೆ …

Read More »

ಸ್ಕೂಟಿ ಹಿಂಬದಿಗೆ ಬಸ್‌ ಢಿಕ್ಕಿ: ಬಾಲಕಿ ಸಾವು

ಕಾಪು: ಸರ್ವಿಸ್‌ ರಸ್ತೆಯಿಂದ ರಾಷ್ಟ್ರೀಯ ಹೆದ್ದಾರಿಗೆ ಪ್ರವೇಶಿಸುತ್ತಿದ್ದ ತಡೆರಹಿತ ಬಸ್ಸೊಂದು ಕಾಪು ಸಾಯಿ ಸರ್ವಿಸ್‌ ಸ್ಟೇಶನ್‌ ಬಳಿ ಸ್ಕೂಟಿಯೊಂದಕ್ಕೆ ಹಿಂಬದಿಯಿಂದ ಢಿಕ್ಕಿಯಾದ ಪರಿಣಾಮ ತಂದೆಯೊಂದಿಗೆ ಸಹ ಸವಾರೆಯಾಗಿ ಬಂದಿದ್ದ ಬಾಲಕಿ ಸಾತ್ವಿ ಶೆಟ್ಟಿ (8) ತೀವ್ರಗಾಯಗಳೊಂದಿಗೆ ಸಾವನ್ನಪ್ಪಿದ್ದಾಳೆ. ಮೃತ ಸಾತ್ವಿ ತನ್ನ ತಂದೆ ತಾಯಿ ಹಾಗೂ ಸಹೋದರಿಯನ್ನು ಅಗಲಿದ್ದಾಳೆ. ದುಬಾಯಿಯಲ್ಲಿ ವಾಸವಿದ್ದ ಈ ಕುಟುಂಬವು ಮುಂದೆ ಊರಿನಲ್ಲಿಯೇ ನೆಲೆಸುವ ಸಿದ್ಧತೆಯಲ್ಲಿತ್ತು. ಸಾತ್ವಿಗಾಗಿ ಇಂದು ಆಕೆಯ ಹೆತ್ತವರು ಉಡುಪಿಯ ಖಾಸಗಿ ಶಾಲೆಯಲ್ಲಿ …

Read More »

ಪಶು ವೈದ್ಯಾಧಿಕಾರಿಯಿಂದ ಲಂಚ ಪಡೆಯುತ್ತಿದ್ದ ಎಸ್‌ಡಿಎ ಲೋಕಾಯುಕ್ತ ಬಲೆಗೆ

ಬೆಂಗಳೂರು: ಪಶು ವೈದ್ಯಾಧಿಕಾರಿಯೊಬ್ಬರ ಶೈಕ್ಷಣಿಕ ಪ್ರಮಾಣ ಪತ್ರಗಳ ಪರಿಶೀಲನಾ ವರದಿ ನೀಡಲು 10,000 ರೂ.ಗೆ ಬೇಡಿಕೆ ಇಟ್ಟು ಲಂಚ ಪಡೆಯುತ್ತಿದ್ದ ಎಸ್‌ಡಿಎ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಹೆಬ್ಬಾಳದ ಪಶು ವೈದ್ಯಕೀಯ ಆಯುಕ್ತರ ಕಚೇರಿಯಲ್ಲಿ ಕಾರ್ಯನಿರ್ವಹಿಸುವ ದ್ವಿತೀಯ ದರ್ಜೆ ಸಹಾಯಕನನ್ನು ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ. ಮುದಾಸಿರ್ ಅಹಮದ್ ಬಂಧಿತ ಆರೋಪಿ. ವಿಜಯಪುರದ ಪಶು ನಿರೀಕ್ಷಕ ಮಲ್ಲಿಕಾರ್ಜುನ್ ಶಂಕರ ನಿಡೋಣಿಯವರು ಶೈಕ್ಷಣಿಕ ಪ್ರಮಾಣ ಪತ್ರಗಳ ಪರಿಶೀಲನಾ ವರದಿಗಾಗಿ ಅರ್ಜಿ ಸಲ್ಲಿಸಿದ್ದು, ಅಂತಿಮ ವರದಿ …

Read More »

ಹಾಡಹಗಲೇ ಮನೆ ಬೀಗ ಒಡೆದು ಲಕ್ಷಾಂತರ ಮೌಲ್ಯದ ಚಿನ್ನಾಭರಣ, ನಗದು ಕಳ್ಳತನ!

ದೊಡ್ಡಬಳ್ಳಾಪುರ: ತಾಲೂಕಿನ ಎಸ್. ನಾಗೇನಹಳ್ಳಿ ಗ್ರಾಮದಲ್ಲಿ ಹಾಡಹಗಲೇ ಕಳ್ಳರು ಕೈಚಳಕ ತೋರಿಸಿದ್ದು (Stolen), ಮನೆಯ ಬೀಗ ಒಡೆದು ಲಕ್ಷಾಂತರ ರೂಪಾಯಿ ಬೆಲೆಬಾಳುವ ಚಿನ್ನಾಭರಣ (Gold) ಹಾಗೂ ನಗದು ದೋಚಿರುವ ಘಟನೆ ವರದಿಯಾಗಿದೆ.ಗ್ರಾಮದ ಮನೆಯೊಂದರಲ್ಲಿ ಯಾರೂ ಇಲ್ಲದ ಸಮಯವನ್ನು ಹೊಂಚು ಹಾಕಿದ್ದ ಖದೀಮರು, ಮನೆಯ ಬಾಗಿಲನ್ನು ಮುರಿದು ಒಳನುಗ್ಗಿದ್ದಾರೆ.ಮನೆಯಲ್ಲಿದ್ದ ಸುಮಾರು 10 ಗ್ರಾಂ ತೂಕದ ಚಿನ್ನದ ಚೈನ್, ತಲಾ 15 ಗ್ರಾಂ ತೂಕದ ಎರಡು ಬ್ರೇಸ್ಲೆಟ್‌ಗಳು ಮತ್ತು ನೆಕ್ಲೇಸ್ ಅನ್ನು ದೋಚಿದ್ದಾರೆ. …

Read More »

ಚಿಕನ್ ಪಾರ್ಟಿ ನೆಪದಲ್ಲಿ ಅಳಿಯನ ಬರ್ಬರ ಹತ್ಯೆ!

ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನ ದಂಡೀಪುರ ಗ್ರಾಮದಲ್ಲಿ ಅತ್ತೆಯೇ ಮಗಳ ಪ್ರಿಯಕರನ ಜೊತೆಗೂಡಿ ಅಳಿಯನ ಹತ್ಯೆಗೈದಿರುವ ಘಟನೆ ಬೆಳಕಿಗೆ ಬಂದಿದೆ.ಮೃತನನ್ನು ನರಸಿಂಹಮೂರ್ತಿ ಎಂದು ಗುರುತಿಸಲಾಗಿದೆ. ಮೂರು ವರ್ಷಗಳ ಹಿಂದೆ ಸುಜಾತಾಳನ್ನು ಮದುವೆಯಾಗಿದ್ದನು. ಬಳಿಕ ಸುಜಾತಾ ಗಾರ್ಮೆಂಟ್ಸ್ ಕೆಲಸದ ವೇಳೆ ಅಮರ್ ಎಂಬ ವ್ಯಕ್ತಿಯೊಂದಿಗೆ ಸಂಬಂಧ ಬೆಳೆದಿತ್ತು ಎನ್ನುವ ಮಾಹಿತಿ ಇದೆ.ಈ ಸಂಬಂಧವೇ ಕೊಲೆಗೆ ಕಾರಣವಾಗಿರಬಹುದು ಎಂದು ಶಂಕಿಸಲಾಗಿದೆ. ಸುಜಾತಾ ಅನಾರೋಗ್ಯದಿಂದ ಎರಡು ತಿಂಗಳ ಹಿಂದೆ ಮೃತಪಟ್ಟಿದ್ದರೂ, ಅಮರ್ ಮನೆ ಸಂಪರ್ಕ …

Read More »

ಉತ್ತರಕನ್ನಡದಲ್ಲಿ ಭೀಕರ ಅಪಘಾತ : ನಿಯಂತ್ರಣ ತಪ್ಪಿ ಮರಕ್ಕೆ ಕಾರು ಡಿಕ್ಕಿಯಾಗಿ ಸ್ಥಳದಲ್ಲೇ ಇಬ್ಬರು ಸಾವು!

ಉತ್ತರಕನ್ನಡ : ಉತ್ತರಕನ್ನಡದಲ್ಲಿ ಭೀಕರವಾದ ಅಪಘಾತ ಸಂಭವಿಸಿದ್ದು, ಅತೀ ವೇಗದ ಚಾಲನೆಯಿಂದ ಕಾರೊಂದು (Car) ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿಯಾದ ಪರಿಣಾಮ ಇಬ್ಬರು ಸಾವನ್ನಪ್ಪಿದ್ದು, ಓರ್ವ ಗಂಭೀರ ಗಾಯಗೊಂಡ ಘಟನೆ ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿ ತಾಲೂಕಿನ ಕರ್ಕಾ ಕ್ರಾಸ್‌ನ ಅಜಗಾಂವ ಬಳಿ ನಡೆದಿದೆ.ಧಾರವಾಡದ ಫಾರೂಖ್ ಸಾಬ್ ಮತ್ತು ಹಳಿಯಾಳದ ಮುದಸ್ಸಿರ್ ಇಸ್ಮಾಯಿಲ್ ಮುಲ್ಲಾ ಮೃತ ದುರ್ದೈವಿಗಳು. ಸದ್ಯ ಮೃತದೇಹಗಳನ್ನು ಹಳಿಯಾಳ ತಾಲೂಕು ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ದಾಂಡೇಲಿಯಿಂದ ಹಳಿಯಾಳಕ್ಕೆ …

Read More »

ಬೆಂಗಳೂರಿನಲ್ಲಿ ಜೀವಂತ ಗ್ರೆನೇಡ್ ಪತ್ತೆ: 7 ಮಂದಿಗೆ 7 ವರ್ಷ ಜೈಲು!

ಬೆಂಗಳೂರಿನಲ್ಲಿ ಪತ್ತೆಯಾದ ಜೀವಂತ ಗ್ರೆನೇಡ್ ಪತ್ತೆ ಪ್ರಕರಣದಲ್ಲಿ 7 ಆರೋಪಿಗಳು ದೋಷಿ ಎಂದು ತೀರ್ಪು ನೀಡಿದ ಎನ್‌ಐಎ ವಿಶೇಷ ನ್ಯಾಯಾಲಯ 7 ವರ್ಷ ಜೈಲು ಶಿಕ್ಷೆ ವಿಧಿಸಿದೆ. ನ್ಯಾಯಾಲಯ ಮಂಗಳವಾರ ತೀರ್ಪು ಪ್ರಕಟಿಸಿದ್ದು, ಆರೋಪಿಗಳಿಗೆ ತಲಾ 48 ಸಾವಿರ ರೂ. ದಂಡ ವಿಧಿಸಿದೆ.ಬೆಂಗಳೂರಿನಲ್ಲಿ 2008ರ ಮಾದರಿಯಲ್ಲಿ ಸ್ಫೋಟ ನಡೆಸಲು ಸಂಚು ರೂಪಿಸಿ ಆರ್.ಟಿ ನಗರದ ಮನೆಯಲ್ಲಿ ಜೀವಂತ ಗ್ರೆನೇಡ್, ಪಿಸ್ತೂಲ್, ಗುಂಡುಗಳನ್ನು ಸಂಗ್ರಹಿಸಿ ಇಟ್ಟುಕೊಂಡಿದ್ದರು. ಖಚಿತ ಮಾಹಿತಿ ಮೇರೆಗೆ 2023ರಲ್ಲಿ …

Read More »

ಗಾಂಜಾ ಸೇವಿಸುತ್ತಿದ್ದವರ ಬಂಧನ

ಚಿಂತಾಮಣಿ: ತಾಲೂಕಿನ ಮುರಗಮಲ್ಲಾ ಗ್ರಾಮದಲ್ಲಿ ಗಾಂಜಾ ಸೇವಿಸುತ್ತಿದ್ದ ಇಬ್ಬರು ಯುವಕರನ್ನು ಕೆಂಚಾರ್ಲಹಳ್ಳಿ ಪೊಲೀಸರು ಬಂಧಿಸಿದ್ದಾರೆ. ಖಚಿತ ಮಾಹಿತಿ ಮೆರೆಗೆ ಪೊಲೀಸರು ದಾಳಿ ನಡೆಸಿದಾಗ ಗಾಂಜಾ ಸೇವಿಸುತ್ತಿರುವುದು ಕಂಡುಬಂದಿದೆ. ಚಿಂತಾಮಣಿಯ ಶ್ರೀರಾಮ ನಗರದ ನಿವಾಸಿ ಶಹಬಾಜ್​ ಪಾಷಾ(26) ಮತ್ತು ಆಶ್ರಯ ಬಡಾವಣೆಯ (23) ಫಯಾಜ್​ ಅವರನ್ನು ಬಂಧಿಸಿ, ಗಾಂಜಾ ಮತ್ತು ಸಂಬಂಧಿಸಿದ ಉಪಕರಣಗಳನ್ನು ವಶಪಡಿಸಿಕೊಂಡಿದ್ದಾರೆ.ಆರೋಪಿಗಳು ನಗರದಲ್ಲಿ ಅಪರಿಚಿತ ವ್ಯಕ್ತಿಯಿಂದ 300 ರೂ. ನೀಡಿ ಗಾಂಜಾ ಪಡೆದು ಸೇವಿಸುತ್ತಿರುವುದಾಗಿ ವಿಚಾರಣೆಯಲ್ಲಿ ಹೇಳಿದ್ದಾರೆ. ಕೆಂಚಾರ್ಲಹಳ್ಳಿ …

Read More »

ಬೆಂಗಳೂರು ವಿಮಾನ ನಿಲ್ದಾಣದಲ್ಲಿ ₹1.15 ಕೋಟಿ ಮೌಲ್ಯದ ಹೈಡ್ರೋಪೋನಿಕ್ ಗಾಂಜಾ ವಶ

ಆಯಂಕರ್ : ಬೆಂಗಳೂರು ಕಸ್ಟಮ್ಸ್ ಅಧಿಕಾರಿಗಳು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬ್ಯಾಂಕಾಕ್ನಿಂದ ಆಗಮಿಸಿದ್ದ ಪ್ರಯಾಣಿಕನನ್ನು ತಡೆದು ಪರಿಶೀಲನೆ ನಡೆಸಿದ ವೇಳೆ ₹1.15 ಕೋಟಿ ಮೌಲ್ಯದ 3.29 ಕೆಜಿ ಹೈಡ್ರೋಪೋನಿಕ್ ಗಾಂಜಾವನ್ನು ವಶಪಡಿಸಿಕೊಂಡಿದ್ದಾರೆ.ಪ್ರಯಾಣಿಕನ ಚೆಕ್-ಇನ್ ಬ್ಯಾಗೇಜ್ ಅನ್ನು ವಿಮಾನ ನಿಲ್ದಾಣದ ಟರ್ಮಿನಲ್-2ರಲ್ಲಿ ಪರಿಶೀಲಿಸಿದಾಗ ಗಾಂಜಾವನ್ನು ಬಚ್ಚಿಟ್ಟಿರುವುದು ಪತ್ತೆಯಾಯಿತು. ಅಧಿಕಾರಿಗಳು ತಕ್ಷಣವೇ ಮಾದಕ ವಸ್ತುವನ್ನು ವಶಪಡಿಸಿಕೊಂಡು ಆರೋಪಿಯನ್ನು ಬಂಧಿಸಿದ್ದಾರೆ. ಈ ಪ್ರಕರಣದಲ್ಲಿ ಆರೋಪಿಯನ್ನು ಎನ್ಡಿಪಿಎಸ್ ಕಾಯ್ದೆ 1985 ಅಡಿಯಲ್ಲಿ ಬಂಧಿಸಲಾಗಿದೆ. ಪ್ರಕರಣದ …

Read More »

ಕೋಲಾರ: ಇಟ್ಟಿಗೆ ಫ್ಯಾಕ್ಟರಿಯಲ್ಲಿ ಜೀತಕ್ಕಿದ್ದ 10 ಕಾರ್ಮಿಕರ ರಕ್ಷಣೆ; ಬಾಲ ಕಾರ್ಮಿಕ ಪದ್ಧತಿ ವಿರುದ್ಧ ಅಧಿಕಾರಿಗಳ ಭರ್ಜರಿ ದಾಳಿ!

ಕೋಲಾರ: ಜಿಲ್ಲೆಯ ಮಾಲೂರು ತಾಲೂಕಿನ ಶಿವಾರಪಟ್ಟಣ ಬಳಿ ಇರುವ ‘ಎನ್.ಕೆ.ಎನ್’ ಇಟ್ಟಿಗೆ ಫ್ಯಾಕ್ಟರಿಯ ಮೇಲೆ ದಾಳಿ ನಡೆಸಿರುವ ಅಧಿಕಾರಿಗಳ ತಂಡ, ಜೀತಕ್ಕಿದ್ದ ಇಬ್ಬರು ಬಾಲಕರು ಸೇರಿದಂತೆ ಒಟ್ಟು 10 ಜನರನ್ನು ರಕ್ಷಿಸಿದೆ. ಕೋಲಾರ ಉಪ ವಿಭಾಗಾಧಿಕಾರಿ ಜಂಬಗಿ ರೇಣುಕಾ ಪ್ರಸಾದ್ ದಿಲೀಪ್ ಅವರ ನೇತೃತ್ವದಲ್ಲಿ ಮಂಗಳವಾರ ಸಂಜೆ ಈ ಭರ್ಜರಿ ಕಾರ್ಯಾಚರಣೆ ನಡೆದಿದೆ. ಮಾಲೀಕ ಮೊಹ್ಮದ್ ಇಬ್ರಾಹಿಂ ಖಾನ್ ಎಂಬುವವರಿಗೆ ಸೇರಿದ ಈ ಕಾರ್ಖಾನೆಯಲ್ಲಿ ಕಾರ್ಮಿಕರನ್ನು ಕಾನೂನುಬಾಹಿರವಾಗಿ ಜೀತಕ್ಕೆ ಇರಿಸಿಕೊಳ್ಳಲಾಗಿದೆ …

Read More »