ನಗರದ ವಿದ್ಯಾನಗರದಲ್ಲಿ ವೇಶ್ಯಾವಾಟಿಕೆ ಅಡ್ಡೆ ಮೇಲೆ ನಗರ ಮತ್ತು ಮಹಿಳಾ ಠಾಣೆಯ ಪೊಲೀಸರು ದಾಳಿ ನಡೆಸಿ ಇಬ್ಬರು ಆರೋಪಿಗಳನ್ನು ಇಂದು ಸಂಜೆ ಬಂಧಿಸಿದ್ದಾರೆ. ಈ ವೇಳೆ ಇಬ್ಬರು ಮಹಿಳೆಯನ್ನು ರಕ್ಷಣೆ ಮಾಡಿದ್ದಾರೆ. ಬಂಧಿತರನ್ನು ಹಸೀನಾಬಾನು ಮತ್ತು ಅಶ್ವಕ್ ಅಹಮದ್ ಎಂದು ಗುರುತಿಸಲಾಗಿದೆ. ನಗರ ಪೊಲೀಸ್ ಠಾಣೆ ವ್ಯಾಪ್ತಿಯ ವಿದ್ಯಾ ನಗರದ 5 ನೇ ಕ್ರಾಸ್ನಲ್ಲಿರುವ ತಿಮ್ಮಮ್ಮ ರವರ ಮನೆಯಲ್ಲಿ ಬಾಡಿಗೆಗೆ ವಾಸವಿರುವ ಹಸೀನಾಬಾನು ಮತ್ತು ಅಶ್ವಕ್ ಅಹಮದ್ ಎಂಬುವರು ಅಮಾಯಕ …
Read More »ಕಣ್ಣೂರು ಬಾಂಬ್ ದಾಳಿ ಪ್ರಕರಣ : 10 ಮಂದಿ ಸಿಪಿಎಂ ಕಾರ್ಯಕರ್ತರಿಗೆ 25 ವರ್ಷ ಜೈಲು ಶಿಕ್ಷೆ
ತಿಮಿರಿ ಬಾಂಬ್ ದಾಳಿ ಪ್ರಕರಣದಲ್ಲಿ ಕೇರಳದ ಕಣ್ಣೂರಿನ ತಳಿಪರಂಬ ನ್ಯಾಯಾಲಯ ಶನಿವಾರ 10 ಮಂದಿ ಸಿಪಿಎಂ ಕಾರ್ಯಕರ್ತರಿಗೆ 25 ವರ್ಷಗಳ ಕಾರಾಗೃಹ ಶಿಕ್ಷೆ ವಿಧಿಸಿದೆ. ಅಲಕೋಡೆ ಸಮೀಪದ ತಿಮಿರಿಯಲ್ಲಿ ಆರೆಸ್ಸೆಸ್, ಬಿಜೆಪಿ ಕಾರ್ಯಕರ್ತರ ಮೇಲೆ 2011ರಲ್ಲಿ ಬಾಂಬ್ ದಾಳಿ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿ ಹೆಚ್ಚುವರಿ ಜಿಲ್ಲಾ ಹಾಗೂ ಸತ್ರ ನ್ಯಾಯಾಧೀಶ ಕೆ.ಎನ್.ಪ್ರಶಾಂತ್ ಈ ತೀರ್ಪು ನೀಡಿದ್ದಾರೆ. ಎರಡನೇ ದೋಷಿ ”ಉಡುಂಬು ಬಿನು” ಎಂದು ಕರೆಯಲಾಗುವ ಟಿ.ವಿ. ಬಿನು ಸೇರಿದಂತೆ ಎಲ್ಲಾ …
Read More »TCS ನಾಸಿಕ್ ಪ್ರಕರಣ: ಆರೋಪಿ ನಿದಾ ಖಾನ್ ಪತಿ ಬಂಧನ
ಮಹಾರಾಷ್ಟ್ರದ ನಾಸಿಕ್ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್) ಶಾಖೆಯ ಸುತ್ತಲಿನ ವಿವಾದ ನಾಟಕೀಯ ತಿರುವು ಪಡೆದುಕೊಂಡಿದ್ದು, ಕಂಪನಿಗೆ ಸಂಬಂಧಿಸಿದ ಒಂಬತ್ತು ಪ್ರಕರಣಗಳ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್ಐಟಿ), ತಲೆಮರೆಸಿಕೊಂಡಿರುವ ಆರೋಪಿ ನಿದಾ ಖಾನ್ ಅವರ ಪತಿಯನ್ನು ವಶಕ್ಕೆ ಪಡೆದಿದೆ. ನಾಸಿಕ್ ಪೊಲೀಸ್ ಕಮಿಷನರ್ ರಚಿಸಿರುವ ಎಸ್ಐಟಿ, ಮುಂಬ್ರಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮೊಯಿನ್ ನಾವಿದ್ ಇಕ್ಬಾಲ್ ಖಾನ್ (27) ನನ್ನು ಬಂಧಿಸಿದೆ. ಮೊಯಿನ್ ಖಾನ್ ಬಹುರಾಷ್ಟ್ರೀಯ ಕಂಪನಿಯಲ್ಲಿ …
Read More »ಮೋಸ್ಟ್ ವಾಂಟೆಡ್ ಕ್ರಿಮಿನಲ್ನ ಕೊಂದು ಕಾರಿನಲ್ಲೇ ಸುಟ್ಟ ಆರೋಪಿಗಳು!
ಉತ್ತರ ಕನ್ನಡ: ಏಪ್ರಿಲ್ 8ರಂದು ಅರಬೈಲ್ ಘಟ್ಟದ ರಾಷ್ಟ್ರೀಯ ಹೆದ್ದಾರಿ 52ರಲ್ಲಿ ಕಾರು ಬೆಂಕಿಗಾಹುತಿಯಾದ ಘಟನೆ ಸಂಭವಿಸಿತ್ತು. ಆರಂಭದಲ್ಲಿ ಇದನ್ನು ಅಪಘಾತ ಎಂದು ಹೇಳಲಾಗಿತ್ತು. ಆದರೆ ಪ್ರಕರಣಕ್ಕೆ ಈಗ ಭಾರೀ ಟ್ವಿಸ್ಟ್ ಸಿಕ್ಕಿದ್ದು, ಇದು ಅಪಘಾತವಲ್ಲ ಕೊಲೆ ಎಂಬುದು ಪೊಲೀಸರ ತನಿಖೆಯಲ್ಲಿ ಬಹಿರಂಗವಾಗಿದೆ. 50ಕ್ಕೂ ಹೆಚ್ಚು ಪ್ರಕರಣದ ಆರೋಪಿಯಾಗಿದ್ದ ನಿತೀಶ್! ಮೃತನು ಬೆಳಗಾವಿ ಮೂಲದ ನಿತೀಶ್ ಡಾಪಳೆ ಎಂದು ಗುರುತಿಸಲಾಗಿದ್ದು, ಅವನು 50ಕ್ಕೂ ಹೆಚ್ಚು ಕ್ರಿಮಿನಲ್ ಪ್ರಕರಣಗಳಲ್ಲಿ ಬೇಕಾಗಿದ್ದ ಮೋಸ್ಟ್ …
Read More »ಪೊಲೀಸರಿಗೆ ಚಳ್ಳೆ ಹಣ್ಣು ತಿನ್ನಿಸಿ ಕಸ್ಟಡಿಯಿಂದ ಎಸ್ಕೇಪ್ ಆದ ಆರೋಪಿ!
ಬಳ್ಳಾರಿ: ಜಿಲ್ಲೆಯಲ್ಲಿ ಕೋಟ್ಯಾಂತರ ವಂಚನೆ ಪ್ರಕರಣದ ಆರೋಪಿ ಪೊಲೀಸ್ ಕಸ್ಟಡಿಯಲ್ಲಿದ್ದಾಗಲೇ ಠಾಣೆಯಿಂದ ಪರಾರಿಯಾಗಿದ್ದು, ನಂತರ 24 ಗಂಟೆಗಳೊಳಗೆ ಮತ್ತೆ ಬಂಧನಕ್ಕೊಳಗಾದ ಘಟನೆ ಸಂಚಲನ ಮೂಡಿಸಿದೆ. ಬಳ್ಳಾರಿಯ ಎಪಿಎಂಸಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಆರೋಪಿ ಸಂತೋಷ್ ಪೊಲೀಸ್ ಕಸ್ಟಡಿಯಲ್ಲಿದ್ದಾಗಲೇ ತಪ್ಪಿಸಿಕೊಂಡಿದ್ದಾನೆ. ತಡರಾತ್ರಿ ಪೊಲೀಸರು ವ್ಯಾಪಕ ಶೋಧ ಕಾರ್ಯಾಚರಣೆ ನಡೆಸಿ, ಕೊನೆಗೂ ಆರೋಪಿಯನ್ನು ಮತ್ತೆ ಬಂಧಿಸಿ ಠಾಣೆಗೆ ಕರೆತಂದಿದ್ದಾರೆ. ಸಂತೋಷ್ ವಿರುದ್ಧ ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ ಕಚೇರಿಯಲ್ಲಿ …
Read More »ಅಡುಗೆ ಮಾಡುವುದನ್ನ ಕಲಿಬೇಕಮ್ಮ: ಅತ್ತೆ ಬುದ್ಧಿ ಹೇಳಿದ್ದಕ್ಕೆ 18 ವರ್ಷದ ಯುವತಿ ಆತ್ಮಹತ್ಯೆ!
ಚಿಕ್ಕಬಳ್ಳಾಪುರ: ಇತ್ತೀಚಿನ ದಿನಗಳಲ್ಲಿ ಯುವಕ- ಯುವತಿಯರಿಗೆ ಬುದ್ಧಿವಾದ ಹೇಳುವಂತಿಲ್ಲ. ವಾರದ ಹಿಂದೆಯಷ್ಟೇ ಮೊಬೈಲ್ ನೋಡಬೇಡ ಎಂದು ಹೇಳಿದಕ್ಕೆ ಕೋಪಗೊಂಡು ಯುವತಿಯೊಬ್ಬಳು ಆತ್ಮಹತ್ಯೆ ಮಾಡಿದ್ದಳು. ಪಿಯುಸಿ ಫಲಿತಾಂಶ ಬಂದ ಸಮಯದಲ್ಲೂ ವಿದ್ಯಾರ್ಥಿನಿಯೊಬ್ಬಳು ದುಡುಕಿ ಪ್ರಾಣ ಕಳೆದುಕೊಂಡಿದ್ದಳು.ಇದೀಗ ಇಂತಹದೇ ಮತ್ತೊಂದು ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ. ಜಿಲ್ಲೆಯ ಪೆರೇಸಂದ್ರ ಗ್ರಾಮದಲ್ಲಿ 18 ವರ್ಷದ ಯುವತಿಯೊಬ್ಬಳು ಆತ್ಮಹತ್ಯೆಗೆ ಶರಣಾಗಿರುವ ದುರ್ಘಟನೆ ಸಂಭವಿಸಿದೆ. ಮನೆಯಲ್ಲಿ ಅತ್ತೆ ಅಡುಗೆ ಮಾಡುವಂತೆ ಬುದ್ಧಿವಾದ ಹೇಳಿದ್ದಕ್ಕೆ ಮನನೊಂದು ಈ ಕಠಿಣ ನಿರ್ಧಾರ …
Read More »ಸಂಕೇತ್ ಸಮಾಧಿ ಸ್ಥಳ ಒಡೆದ ಪ್ರಕರಣ; ಬಾಲಕ ವಶಕ್ಕೆ
ಶಿವಮೊಗ್ಗದ ಊರಗಡೂರಿನಲ್ಲಿ ಫೆ.24ರಂದು ಹತ್ಯೆಗೀಡಾಗಿದ್ದ ಎಸ್ಎಸ್ಎಲ್ಸಿ ವಿದ್ಯಾರ್ಥಿ ಸಂಕೇತ್ನ ಸಮಾಧಿ ಸ್ಥಳವನ್ನು ಒಡೆದು ಹಾಕಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾನೂನು ಸಂಘರ್ಷಕ್ಕೆ ಒಳಗಾದ 16 ವರ್ಷದ ಬಾಲಕನ್ನು ತುಂಗಾ ನಗರ ಠಾಣೆ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಜಗಳ ಬಿಡಿಸಲು ಹೋದ ವೇಳೆ ವಿದ್ಯಾರ್ಥಿಗಳು ನಡೆಸಿದ್ದ ಹಲ್ಲೆಯಿಂದ ಸಂಕೇತ್ ಶಾಲೆಯ ಆವರಣದಲ್ಲಿ ಮೃತಪಟ್ಟಿದ್ದ. ಸಮೀಪದ ಗುಡ್ಡೆಮರಡಿಯ ಹಿಂದೂ ರುದ್ರಭೂಮಿಯಲ್ಲಿ ಅಂತ್ಯಕ್ರಿಯೆ ನೆರವೇರಿತ್ತು. ಸಮಾಧಿ ಒಡೆದು ಹಾಕಿದ ಬಾಲಕ, ಸಂಕೇತ್ ಮೇಲೆ ಹಲ್ಲೆ ನಡೆಸಿದ್ದವರ …
Read More »ಹೈದರಾಬಾದ್ ನಲ್ಲಿ ರಸ್ತೆ ಮಧ್ಯೆಯೇ ಹೊತ್ತಿ ಉರಿದ ಬಸ್ : 18 ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು!
ನಿನ್ನೆ ತಾನೆ ಯಾದಗಿರಿಯಲ್ಲಿ ಖಾಸಗಿ ಬಸ್ಗೆ ಕಾರು ಡಿಕ್ಕಿ ಹೊಡೆದು, ಸ್ಥಳದಲ್ಲೇ ಆರು ಜನರು ಸಜೀವ ದಹನಗೊಂಡಿದ್ದ ಘಟನೆ ನಡೆದಿತ್ತು. ಇದೀಗ ಹೈದರಾಬಾದ್ ನಲ್ಲಿ ಮತ್ತೊಂದು ದುರಂತ ಸಂಭವಿಸಿದ್ದು, ನಡುರಸ್ತೆಯಲ್ಲಿಯೇ ಖಾಸಗಿ ಬಸ್ ಒಂದು ಹೊತ್ತಿ ಉರಿದಿರುವ ಘಟನೆ ನಡೆದಿದೆ. ಹೌದು ಹೈದರಾಬಾದ್ ನಲ್ಲಿ ರಸ್ತೆ ಮಧ್ಯೆ ಖಾಸಗಿ ಬಸ್ ಹೊತ್ತಿ ಉರಿದಿದೆ. ಅದೃಷ್ಟವಶಾತ್ ಬಸ್ನಲ್ಲಿ ಇದ್ದ 18 ಪ್ರಯಾಣಿಕರು ಪ್ರಾಣಪಾಯದಿಂದ ಪಾರಾಗಿದ್ದಾರೆ. ಹೈದರಾಬಾದ್ ನಿಂದ ಪಲಕಲ್ಲುಗೆ ಈ ಒಂದು …
Read More »ಚಿಕ್ಕಬಳ್ಳಾಪುರ ಒಂಟಿ ಮಹಿಳೆ ಕೊ*ಲೆ ಕೇಸ್, ಒಂದು ವರ್ಷದ ಬಳಿಕ ರಹಸ್ಯ ಭೇದಿಸಿದ ಪೊಲೀಸರು
ಒಂಟಿ ಮಹಿಳೆಯ ಆಸ್ತಿ ಆಸೆಗೆ ಚಿಕ್ಕಬಳ್ಳಾಪುರದಲ್ಲಿ ನಡೆದ ಭೀಕರ ಹತ್ಯೆಯ ರಹಸ್ಯವನ್ನು ಒಂದು ವರ್ಷದ ಸುದೀರ್ಘ ತನಿಖೆಯ ನಂತರ ಪೊಲೀಸರು ಭೇದಿಸಿದ್ದಾರೆ. ಮೃತಳನ್ನು ಪಾವಗಡ ತಾಲ್ಲೂಕಿನ ತಿಪ್ಪರಾಯನದುರ್ಗದ ನುಣಕಮ್ಮ (52) ಎಂದು ಗುರುತಿಸಲಾಗಿದ್ದು, ಈಕೆಯನ್ನು ಹತ್ಯೆಗೈದ ಆರೋಪಿಗಳಾದ ನಾಗಲಕ್ಷ್ಮಿ ಮತ್ತು ಆಕೆಯ ಪ್ರಿಯಕರ ಅಶೋಕ್ ಕುಮಾರ್ ಎಂಬುವವರನ್ನು ಬಂಧಿಸಲಾಗಿದೆ. ಕೊಲೆಯಾದ ಮಹಿಳೆ ನುಣಕಮ್ಮಳ ಮನೆಯಲ್ಲಿದ್ದ ಚಿನ್ನಾಭರಣ ಹಾಗೂ ನಗದನ್ನು ದೋಚುವ ಸಲುವಾಗಿ ಈ ಜೋಡಿ ಸಂಚು ರೂಪಿಸಿತ್ತು. ಕಳೆದ ಸೆಪ್ಟೆಂಬರ್ನಲ್ಲಿ …
Read More »ವಿಟ್ಲ: 35 ಬಾರಿ ವಾರಂಟ್ ಜಾರಿಯಾಗಿದ್ದ ಆರೋಪಿ ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಂಧನ
ಕಳೆದ ಒಂಬತ್ತು ವರ್ಷಗಳಿಂದ ವಿವಿಧ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿ, ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಕುಖ್ಯಾತ ಆರೋಪಿಯನ್ನು ವಿಟ್ಲ ಪೊಲೀಸರು ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ದಸ್ತಗಿರಿ ಮಾಡಿದ್ದಾರೆ. ಬಂಟ್ವಾಳ ತಾಲೂಕಿನ ಪೆರುವಾಯಿ ನಿವಾಸಿ ಅಬ್ಬಾಸ್ ಜಿ ಬಂಧಿತ ಆರೋಪಿ. 2015ರಲ್ಲಿ ವಿಟ್ಲ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಮಾರಣಾಂತಿಕ ಹಲ್ಲೆ, ಗಲಭೆ ಮತ್ತು ಜೀವ ಬೆದರಿಕೆ ಪ್ರಕರಣದಲ್ಲಿ (ಅ.ಕ್ರ 42/2015) ಅಬ್ಬಾಸ್ ಪ್ರಮುಖ ಆರೋಪಿಯಾಗಿದ್ದನು. ಪ್ರಕರಣದ ಬಳಿಕ ಈತ …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





